ವಿಜಯಪುರ: ಎತ್ತು ಬೆದರಿಸಿ ನಂತರ ತಪ್ಪಿಸಿಕೊಳ್ಳಲು ಯತ್ನಿಸುವಾಗ ಆಯಾ ತಪ್ಪಿ ಬಿದ್ದ ವ್ಯಕ್ತಿ ಗಂಭೀರ ಗಾಯಗೊಂಡಿದ್ದಾರೆ. ಕಾರ ಹುಣ್ಣಿಮೆ ಕರಿ ದಿನವೇ (Accident News) ಅವಘಡವೊಂದು ನಡೆದಿದೆ. ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಗೊಳಸಂಗಿಯ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಕಾರ ಹುಣ್ಣಿಮೆಯನ್ನು ಉತ್ತರ ಕರ್ನಾಟಕ ಭಾಗದಲ್ಲಿ ವಿಶೇಷವಾಗಿ ಆಚರಿಸಲಾಗುತ್ತದೆ. ಗೊಳಸಂಗಿ ಗ್ರಾಮ ಪಂಚಾಯತಿ ಆವರಣದಲ್ಲಿ ಕಾರ ಹುಣ್ಣಿಮೆಯ ಕರಿ ಹರಿಯುವ ವೇಳೆ ಎತ್ತುಗಳು ಓಟ ಆಯೋಜನೆ ಮಾಡಲಾಗಿತ್ತು. ಈ ವೇಳೆ ಎತ್ತು ಬೆದರಿ ತಪ್ಪಿಸಿಕೊಳ್ಳಲು ಯತ್ನಿಸುವಾಗ ಆಯಾ ತಪ್ಪಿ ಬಿದ್ದ ಪರಿಣಾಮ ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡಿದ್ದಾರೆ.
ಪ್ರಶಾಂತ ಬಸಪ್ಪ ರೂಡಗಿ (48) ಎಂಬುವವರು ತಪ್ಪಿಸಿಕೊಳ್ಳುವ ಭರದಲ್ಲಿ ಆಯತಪ್ಪಿ ಬಿದ್ದಿದ್ದಾರೆ. ಪರಿಣಾಮ ಮೂಗು ಮತ್ತು ಹಣೆಗೆ ತೀವ್ರ ಗಾಯವಾಗಿದ್ದು, ಕೂಡಲೇ ಅವರನ್ನು ವಿಜಯಪುರ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇದೇ ವೇಳೆ ಸಿದ್ದು ಅರ್ಜುನ ಸಾಳುಂಕೆ (42), ಮುದಕಪ್ಪ ದೂಡಮನಿ (55) ಎಂಬುವವರು ಕಾಲು ಜಾರಿ ಬಿದ್ದು ಸಣ್ಣಪುಟ್ಟ ಗಾಯಗೊಂಡಿದ್ದಾರೆ.
ಇದನ್ನೂ ಓದಿ: Bengaluru news : ಸೋಪಿನ ಮೇಲೆ ಕಾಲಿಟ್ಟು ಆಯತಪ್ಪಿ ಕಟ್ಟಡದ ಮೇಲಿಂದ ಹಾರಿ ಬಿದ್ದಳು; ಎದೆ ಝಲ್ ಎನಿಸುವ ದೃಶ್ಯ ಸೆರೆ
ಅಪರಿಚಿತ ವಾಹನ ಡಿಕ್ಕಿಗೆ ಸವಾರ ಸಾವು
ಬೈಕ್‌ಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಸವಾರನೊಬ್ಬ ಸ್ಥಳದಲ್ಲೇ ಅಸುನೀಗಿದ್ದಾನೆ. ವಿಜಯಪುರ ಜಿಲ್ಲೆಯ ಶಿವಣಗಿ ಸಮೀಪ ಅಪಘಾತ ನಡೆದಿದೆ. ಆಲಮೇಲ ನಿವಾಸಿ ಪರಶುರಾಮ್ ಯಂಟಮಾನ್ ಸ್ಥಳದಲ್ಲೆ ಮೃತಪಟ್ಟವರು.
ಪರಶುರಾಮ್ ಬೈಕ್‌ನಲ್ಲಿ ಬರುತ್ತಿದ್ದಾಗ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದೆ. ಅಪಘಾತ ಮಾಡಿ ಆರೋಪಿಗಳು ಪರಾರಿ ಆಗಿದೆ. ಡಿಕ್ಕಿ ರಭಸಕ್ಕೆ ಪರಶುರಾಮ್ ಕೈ ಕಟ್ ಆಗಿ ಬಿದ್ದಿದ್ದು, ತೀವ್ರ ರಕ್ತಸ್ರಾವವಾಗಿ ಮೃತಪಟ್ಟಿದ್ದಾರೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಿಟ್ ಆ್ಯಂಡ್ ರನ್ ಕೇಸ್ ದಾಖಲು ಮಾಡಲಾಗಿದೆ.
ಕರೆಂಟ್ ಶಾಕ್‌ನಿಂದ ರೈತ ಸಾವು
ಜಮೀನಿಗೆ ನೀರು ಹಾಯಿಸಲು ಹೋಗಿ ರೈತರೊಬ್ಬರು ಕರೆಂಟ್ ಶಾಕ್‌ನಿಂದ ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಜೋಡಕುರಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಜೋಡಕುರಳಿ ಗ್ರಾಮದ ರೈತ ಸರಜೇರಾವ ಗಡಕರಿ (60) ಮೃತ ದುರ್ದೈವಿ. ಜಮೀನಿಗೆ ನೀರು ಹಾಯಿಸಲು ಹೋಗಿ ವಿದ್ಯುತ್ ತಂತಿ ಸ್ಪರ್ಶದಿಂದ ಮೃತಪಟ್ಟಿದ್ದಾರೆ. ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ