Bike Accident | ಮುದ್ದೇಬಿಹಾಳದಲ್ಲಿ ಭಾರಿ ವಾಹನ ಹರಿದು ಬೈಕ್ ಸವಾರ ಸಾವು - Vistara News

ಕ್ರೈಂ

Bike Accident | ಮುದ್ದೇಬಿಹಾಳದಲ್ಲಿ ಭಾರಿ ವಾಹನ ಹರಿದು ಬೈಕ್ ಸವಾರ ಸಾವು

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನಲ್ಲಿ ಅಪಘಾತ ನಡೆದಿದ್ದು,
ಪಿಎಸ್‌ಐ ಆರೀಫ್ ಮುಷಾಪುರಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

VISTARANEWS.COM


on

Bike accident
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಿಜಯಪುರ: ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ತಂಗಡಗಿ ಕ್ರಾಸ್ ಸಮೀಪದ ನಾಲತವಾಡ ಮುಖ್ಯ ರಸ್ತೆಯಲ್ಲಿ ಅಪರಿಚಿತ ಭಾರಿ ವಾಹನ ಹರಿದು(Bike Accident) ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬಾಗಲಕೋಟೆ ಜಿಲ್ಲೆ ಕಿರಸೂರ ಗ್ರಾಮದ ಸಂಗಪ್ಪ ಭೀಮಶೆಪ್ಪ ಈರಗಾರ (35) ಮೃತ. ಇವರು ಅಪಘಾತ ನಡೆದ ಸಮೀಪದ ಡಾಬಾವೊಂದರ ಸಿಬ್ಬಂದಿ ಎನ್ನಲಾಗಿದೆ. ಭಾರಿ ವಾಹನದ ಚಕ್ರಗಳು ಹೊಟ್ಟೆಯ ಮೇಲೆಯ ಹರಿದ ಪರಿಣಾಮ ಕರುಳು ದೇಹದಿಂದ ಹೊರಬಂದಿವೆ. ಇದೇ ರಸ್ತೆಯ ಸ್ವಲ್ಪ ದೂರದಲ್ಲಿ ಸಕ್ಕರೆ ಕಾರ್ಖಾನೆ ಇದೆ. ಅಲ್ಲಿಗೆ ಕಬ್ಬು ಸಾಗಿಸುವ ವಾಹನ ಸವಾರನ ಮೇಲೆ ಹರಿದಿರಬಹುದು ಎಂಬ ಸಂಶಯ ವ್ಯಕ್ತವಾಗಿದೆ.

ಮುದ್ದೇಬಿಹಾಳ ಪಿಎಸ್‌ಐ ಆರೀಫ್ ಮುಷಾಪುರಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಆಂಬ್ಯುಲೆನ್ಸ್ ಮೂಲಕ ಶವವನ್ನು ತಾಲೂಕು ಸರ್ಕಾರಿ ಆಸ್ಪತ್ರೆಗೆ ರವಾನಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಕ್ಕರೆ ಕಾರ್ಖಾನೆಯಲ್ಲಿ ಯಂತ್ರಕ್ಕೆ ಸಿಲುಕಿ ದಿನಗೂಲಿ ಕೆಲಸಗಾರ ಸಾವು
ವಿಜಯಪುರ: ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಯರಗಲ್ ಗ್ರಾಮದ ಬಳಿಯ ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ
ಯಂತ್ರಕ್ಕೆ ಸಿಲುಕಿ ದಿನಗೂಲಿ ಕೆಲಸಗಾರ ಮೃತಪಟ್ಟಿದ್ದಾನೆ. ಹಡಗಲಿ ಗ್ರಾಮದ ನಿವಾಸಿ ಸಿದ್ದಪ್ಪ ದೊಡಮನಿ (48) ಮೃತ. ಕಾರ್ಖಾನೆಯಲ್ಲಿ ಸೂಕ್ತ ಸುರಕ್ಷತಾ ಕ್ರಮ ಇಲ್ಲದೇ ಇರುವುದು ಘಟನೆಗೆ ಕಾರಣವೆಂದು‌ ಕೆಲಸಗಾರರು ಆರೋಪಿಸಿದ್ದು, ಮೃತ ಕೆಲಸಗಾರನ ಕುಟುಂಬಕ್ಕೆ ಸೂಕ್ತ ಪರಿಹಾರಕ್ಕೆ ಒತ್ತಾಯಿಸಿದ್ದಾರೆ.

ರಸ್ತೆ ದಾಟುವಾಗ ಕಾರು ಡಿಕ್ಕಿಯಾಗಿ ನಿವೃತ್ತ ಅಬಕಾರಿ ಅಧಿಕಾರಿ ಸಾವು
ರಾಮನಗರ: ರಸ್ತೆ ದಾಟುವಾಗ ಕಾರು ಡಿಕ್ಕಿ ಹೊಡೆದ ಪರಿಣಾಮ ನಿವೃತ್ತ ಅಬಕಾರಿ ಅಧಿಕಾರಿ ಸ್ಥಳದಲ್ಲೇ ಮೃತಪಟ್ಟಿರುವುದು ಜಿಲ್ಲೆಯ ಬಿಡದಿ ಹೋಬಳಿಯ ಕೋತಿ ಅಂಜನೇಯ ದೇವಾಲಯದ ಬಳಿ ನಡೆದಿದೆ.
ಅಂದಾನಿಗೌಡ (80) ಮೃತರು. ಆಂಜನೇಯ ದೇವಾಲಯಕ್ಕೆ ಹೋಗಿ ರಸ್ತೆ ದಾಟುವಾಗ ಡಿಕ್ಕಿ ಕಾರು ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ಬಿಡದಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬೆಂಗಳೂರಿನ ರಾಜಾಜಿನಗರದ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಬಿಡದಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Road accident | ಕಾರು ಮತ್ತು ಬಸ್‌ಗೆ ಬೈಕ್‌ ಡಿಕ್ಕಿ: ಇಬ್ಬರೂ ಸವಾರರು ಸ್ಥಳದಲ್ಲೇ ಮೃತ್ಯು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉತ್ತರ ಕನ್ನಡ

Uttara Kannada Landslide: ಭೂಕುಸಿತದ ಜಾಗದ ಬಳಿಯೇ ʼಸುನಾಮಿʼ ಎಫೆಕ್ಟ್‌; ನೀರಿನ ರಭಸಕ್ಕೆ ಕೊಚ್ಚಿಹೋದ ಮಹಿಳೆ

Uttara Kannada Landslide: ನೀರು ನುಗ್ಗಿದ ರಭಸದಿಂದ ಮೂರು ಮನೆಗಳು ನೆಲಸಮವಾಗಿವೆ. ಮನೆಯಲ್ಲಿದ್ದ ಸೀಥಿಗೌಡ (65) ಎನ್ನುವ ವೃದ್ಧೆ ನಾಪತ್ತೆಯಾಗಿದ್ದಾರೆ. 14 ಜನರಿಗೆ ಗಾಯವಾಗಿದ್ದು, ಓರ್ವ ವ್ಯಕ್ತಿಗೆ ಗಂಭೀರ ಗಾಯವಾಗಿದೆ. ಎನ್‌ಡಿಆರ್‌ಎಫ್ ಹಾಗೂ ತಾಲೂಕು ಆಡಳಿತದಿಂದ ಮಹಿಳೆಗಾಗಿ ಶೋಧಕಾರ್ಯ ಆರಂಭವಾಗಿದೆ.

VISTARANEWS.COM


on

uttara kannada landslide shirur
Koo

ಕಾರವಾರ: ಅಂಕೋಲಾ- ಶಿರೂರು ಹೆದ್ದಾರಿಯಲ್ಲಿ (Ankola Shiruru Lanslide) ಗುಡ್ಡ ಕುಸಿದ (Uttara Kannada Landslide) ಪ್ರಕರಣದಲ್ಲಿ ಇನ್ನೊಂದು ಅವಾಂತರ ಉಂಟಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಗುಡ್ಡ ಕುಸಿತದಿಂದ ಭಾರಿ ಪ್ರಮಾಣದ ಮಣ್ಣು ಗಂಗಾವಳಿ ನದಿಗೆ (Gangavali River) ಬಿದ್ದ ಪರಿಣಾಮ ನದಿ ಬದಿಯ ಉಳುವರೆ ಗ್ರಾಮಕ್ಕೂ ಡ್ಯಾಮೇಜ್ ಆಗಿದೆ. ಸುನಾಮಿ ಅಲೆಯ ರೀತಿ ಗ್ರಾಮಕ್ಕೆ ನೀರು ನುಗ್ಗಿದ್ದು, ನೀರಿನ ರಭಸಕ್ಕೆ ಮೂರು ಮನೆಗಳು ನಾಶವಾಗಿ (homes collapse) ಮಹಿಳೆಯೊಬ್ಬರು (Woman swept) ಕೊಚ್ಚಿಹೋಗಿದ್ದಾರೆ.

ನೀರು ನುಗ್ಗಿದ ರಭಸದಿಂದ ಮೂರು ಮನೆಗಳು ನೆಲಸಮವಾಗಿವೆ. ಮನೆಯಲ್ಲಿದ್ದ ಸೀಥಿಗೌಡ (65) ಎನ್ನುವ ವೃದ್ಧೆ ನಾಪತ್ತೆಯಾಗಿದ್ದಾರೆ. 14 ಜನರಿಗೆ ಗಾಯವಾಗಿದ್ದು, ಓರ್ವ ವ್ಯಕ್ತಿಗೆ ಗಂಭೀರ ಗಾಯವಾಗಿದೆ. ಎನ್‌ಡಿಆರ್‌ಎಫ್ ಹಾಗೂ ತಾಲೂಕು ಆಡಳಿತದಿಂದ ಮಹಿಳೆಗಾಗಿ ಶೋಧಕಾರ್ಯ ಆರಂಭವಾಗಿದೆ.

ಕುಮಟ ತಾಲ್ಲೂಕು ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗಿದೆ. ಉಳುವರೆ ಗ್ರಾಮದ ಗಣಪತಿ ಬೊಮ್ಮಾ ಗೌಡ, ಸಾವಿತ್ರಿ ನೀಲಾ ಗೌಡ, ದಿವ್ಯಾ ನೀಲಾ ಗೌಡ, ಆಶಾ ಮಂಗೇಶ ಗೌಡ, ಹರ್ಶಿತಾ ಗಣಪತಿ ಗೌಡ, ದಿಕ್ಷಾ ವಿನಾಯಕ ಗೌಡ, ದೀಪಾ ಹೂವಾ ಗೌಡ, ಧನ್ಯ ಹೂವಾ ಗೌಡ, ಹೂವಾ ಸೋಮಾ ಗೌಡ, ಸೋಮಾ ಅನಂತ ಗೌಡ, ಮಂಗೇಶ ಮಾಣಿ ಗೌಡ, ನೀಲಾ ಮುದ್ದು ಗೌಡ, ನಾಗೀ ಬೊಮ್ಮಾ ಗೌಡ, ತಮ್ಮಣ್ಣಿ ಅನಂತ ಗೌಡ ಗಾಯಗೊಂಡವರು.

ಸ್ಥಳಕ್ಕೆ ಅಂಕೋಲ ತಹಶೀಲ್ದಾರ್ ಅನಂತ ಶಂಕರ ಭೇಟಿ ನೀಡಿದ್ದಾರೆ. ಈಗಾಗಲೇ ನಾಲ್ಕು ಮೃತದೇಹ ಪತ್ತೆಯಾಗಿದೆ. ಇನ್ನಿಬ್ಬರಿಗಾಗಿ ಶೋಧ ನಡೆಯುತ್ತಿದೆ ಎಂದಿದ್ದಾರೆ. ಖಚಿತವಾಗಿ ಎಷ್ಟು ಜನ ಮಣ್ಣಿನಲ್ಲಿ ಸಿಲುಕಿದ್ದಾರೆ ಎಂಬ ಮಾಹಿತಿ ಇಲ್ಲ. ಎನ್‌ಡಿಆರ್‌ಎಫ್ ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿಯಿಂದ ಮೃತದೇಹ ಹುಡುಕಾಟ ನಡೆಯುತ್ತಿದೆ‌. ನೀರಿನಲ್ಲಿ ಒಬ್ಬರ ಮೃತದೇಹ ಹೋಗಿರುವ ಶಂಕೆ ಇದೆ. ಮಣ್ಣಿನಲ್ಲಿ ಒಬ್ಬರು ಸಿಲುಕಿಕೊಂಡಿದ್ದಾರೆ ಎಂದಿದ್ದಾರೆ.

ತೆರವಾಗದ ಗುಡ್ಡದ ಮಣ್ಣು

ಶಿರಸಿ ತಾಲ್ಲೂಕಿನ ರಾಗಿಹೊಸಳ್ಳಿ ಬಳಿ ನಿನ್ನೆ ಗುಡ್ಡ ಜರಿದು ಅಪಾರ ಪ್ರಮಾಣದ ಮಣ್ಣು ಹೆದ್ದಾರಿಯ ಮೇಲೆ ಕೂತಿದ್ದು, ನಿನ್ನೆಯಿಂದ ಕಾರ್ಯಾಚರಣೆ ನಡೆಯುತ್ತಿದ್ದರೂ ತೆರವಾಗಿಲ್ಲ. ಇದರಿಂದ ಕುಮಟಾ- ಶಿರಸಿ ರಾಷ್ಟ್ರೀಯ ಹೆದ್ದಾರಿ 766EEಯಲ್ಲಿ ಸಂಚಾರ ಅಸ್ತವ್ಯಸ್ತವಾಗಿದೆ. ಧಾರಾಕಾರ ಮಳೆ ಹಿನ್ನೆಲೆಯಲ್ಲಿ ತೆರವು ಕಾರ್ಯಾಚರಣೆಗೆ ಹಿನ್ನಡೆಯಾಗಿದೆ. ಹೆದ್ದಾರಿಯ ಸುಮಾರು 100 ಮೀಟರ್ ವ್ಯಾಪ್ತಿಯಲ್ಲಿ ಮರ ಸಹಿತ ಗುಡ್ಡ ಕುಸಿದಿದ್ದು, ಶಿರಸಿ-ಕುಮಟಾ ಹೆದ್ದಾರಿ ನಿನ್ನೆಯಿಂದ ಬಂದ್ ಆಗಿದೆ. ರಸ್ತೆ ಅಗಲೀಕರಣ ಹಿನ್ನೆಲೆಯಲ್ಲಿ ಗುಡ್ಡ ಕೊರೆಯಲಾಗಿತ್ತು. ಜೆಸಿಬಿ ಮೂಲಕ ನಿನ್ನೆಯಿಂದ ಮಣ್ಣು ತೆರವು ನಡೆಯುತ್ತಿದ್ದು, ಇನ್ನೂ 50 ಮೀಟರ್‌ನಷ್ಟು ಮಣ್ಣು ತೆರವು ಬಾಕಿಯಿದೆ.

ಶೃಂಗೇರಿಯಲ್ಲಿ ನೆರೆ

ಚಿಕ್ಕಮಗಳೂರು: ಚಿಕ್ಕಮಗಳೂರಿನ ಕೆರೆಕಟ್ಟೆ, ಘಟ್ಟ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶೃಂಗೇರಿಯಲ್ಲಿ ತುಂಗಾ ನದಿ ಆರ್ಭಟದಿಂದ ಹರಿಯುತ್ತಿದೆ. ತುಂಗಾ ನದಿ ಅಬ್ಬರಕ್ಕೆ ಭಾರತಿ ತೀರ್ಥ ರಸ್ತೆ ಜಲಾವೃತವಾಗಿದ್ದು, ಪಟ್ಟಣದ ಗಾಂಧಿ ಮೈದಾನ ಸಂಪೂರ್ಣ ಮುಳುಗಡೆಯಾಗಿದೆ. ನದಿ ಪಾತ್ರದ ಅಂಗಡಿ ಮುಂಗಟ್ಟು, ಮನೆಗಳು ಜಲಾವೃತವಾಗಿವೆ. ಶೃಂಗೇರಿಯಲ್ಲಿ ನಿನ್ನೆಯಿಂದಲೂ ನೆರೆ ಪರಿಸ್ಥಿತಿ ತಗ್ಗಿಲ್ಲ. ಭಾರತಿ ತೀರ್ಥ ರಸ್ತೆ ಮುಳುಗಡೆ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕೆ ಕ್ರಮವಾಗಿ ವಾಹನ ಸಂಚಾರ ನಿಷೇಧಿಸಲಾಗಿದೆ.

ಇದನ್ನೂ ಓದಿ: Landslide: ಶಿರೂರಿನಲ್ಲಿ ಕುಸಿದ ಗುಡ್ಡದಡಿ 5 ಶವ ಪತ್ತೆ, ಇನ್ನುಳಿದವರಿಗೆ ಹುಡುಕಾಟ; ಗೋಕರ್ಣದಲ್ಲೂ ಭೂಕುಸಿತ

Continue Reading

ದೇಶ

Anant Ambani Wedding: ಅನಂತ್‌ ಅಂಬಾನಿ ಮದುವೆಯಲ್ಲಿ ಬಾಂಬ್‌ ಸ್ಫೋಟಕ್ಕೆ ನಡೆದಿತ್ತಾ ಸಂಚು? ಕಿಡಿಗೇಡಿ ಅರೆಸ್ಟ್‌

Anant Ambani Wedding:ಬಂಧಿತನನ್ನು ಗುಜರಾತ್‌ ಮೂಲದ ಎಂಜಿನಿಯರ್‌ ವಿರಲ್‌ ಶಾ ಎಂದು ಗುರುತಿಸಲಾಗಿದ್ದು, ಈತನನ್ನು ವಢೋದರಾದಲ್ಲಿ ಪೊಲೀಸರು ಅರೆಸ್ಟ್‌ ಮಾಡಿದ್ದಾರೆ ವಿರಲ್‌ ಶಾ, ಜು.13ರಂದು ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ವೊಂದನ್ನು ಮಾಡಿ, ಅಂಬಾನಿ ಮದುವೆಯಲ್ಲಿ ಸ್ಫೋಟಿಸಲಿದ್ದು, ನಾಳೆ ಇಡೀ ಪ್ರಪಂಚವೇ ಮೇಲೆ ಕೆಳಗೆ ಆಗಲಿದೆ. ಇದಕ್ಕಾಗಿ ನಾನು ಕಾತರದಿಂದ ಕಾಯುತ್ತಿದ್ದೇನೆ ಎಂದು ಬರೆದುಕೊಂಡಿದ್ದ.

VISTARANEWS.COM


on

Ananth Ambani Wedding
Koo

ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಮುಕೇಶ್ ಅಂಬಾನಿ (Mukesh Ambani) ಅವರ ಕಿರಿಯ ಪುತ್ರ ಅನಂತ್ ಅಂಬಾನಿ (Anant Ambani Wedding) ಮತ್ತು ಕೈಗಾರಿಕೋದ್ಯಮಿ ವೀರೇನ್ ಮರ್ಚಂಟ್‌ ಅವರ ಪುತ್ರಿ ರಾಧಿಕಾ ಮರ್ಚಂಟ್‌ (Radhika Merchant) ಅವರ ವಿವಾಹವು ಮುಂಬೈನಲ್ಲಿ ಅದ್ಧೂರಿಯಾಗಿ ನೆರವೇರಿದೆ. ಈ ನಡುವೆ ಮದುವೆ ಸಮಾರಂಭ ನಡೆಯುವಲ್ಲಿ ಬಾಂಬ್‌ ಸ್ಫೋಟಿಸುವುದಾಗಿ(Bomb Threat) ಬೆದರಿಕೆವೊಡ್ಡಿದ್ದ ವ್ಯಕ್ತಿಯನ್ನು ಮುಂಬೈ ಕ್ರೈಂ ಬ್ರ್ಯಾಂಚ್‌ ಪೊಲೀಸರು ಅರೆಸ್ಟ್‌ ಮಾಡಿದ್ದಾರೆ.

ಇನ್ನು ಬಂಧಿತನನ್ನು ಗುಜರಾತ್‌ ಮೂಲದ ಎಂಜಿನಿಯರ್‌ ವಿರಲ್‌ ಶಾ ಎಂದು ಗುರುತಿಸಲಾಗಿದ್ದು, ಈತನನ್ನು ವಢೋದರಾದಲ್ಲಿ ಪೊಲೀಸರು ಅರೆಸ್ಟ್‌ ಮಾಡಿದ್ದಾರೆ ವಿರಲ್‌ ಶಾ, ಜು.13ರಂದು ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ವೊಂದನ್ನು ಮಾಡಿ, ಅಂಬಾನಿ ಮದುವೆಯಲ್ಲಿ ಸ್ಫೋಟಿಸಲಿದ್ದು, ನಾಳೆ ಇಡೀ ಪ್ರಪಂಚವೇ ಮೇಲೆ ಕೆಳಗೆ ಆಗಲಿದೆ. ಇದಕ್ಕಾಗಿ ನಾನು ಕಾತರದಿಂದ ಕಾಯುತ್ತಿದ್ದೇನೆ ಎಂದು ಬರೆದುಕೊಂಡಿದ್ದ.

ಇದರ ಬೆನ್ನಲ್ಲೇ ಕಾರ್ಯಕಪ್ರವೃತರಾದ ಪೊಲೀಸರು, ಸೈಬರ್‌ ಪೊಲೀಸರ ನೆರವಿನಿಂದ ವಿರಲ್‌ನನ್ನು ಪತ್ತೆ ಹಚ್ಚಿದ್ದು, ನೇರವಾಗಿ ಗುಜರಾತ್‌ಗೆ ತೆರಳಿ ಆತನ ಹೆಡೆಮುರಿ ಕಟ್ಟಿ ಮುಂಬೈಗೆ ಕರೆತಂದಿದ್ದಾರೆ. ಸದ್ಯ ಆತನ ವಿಚಾರಣೆ ಮುಂದುವರೆದಿದ್ದು, ಆತನ ಉದ್ದೇಶ ಏನೆಂಬುದರ ಬಗ್ಗೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಈ ನಡುವೆ ಈ ಸಮಾರಂಭದ ವೇಳೆ ಅನಂತ್ –ರಾಧಿಕಾ ಆರತಕ್ಷತೆಗೆ ಇಬ್ಬರು ವ್ಯಕ್ತಿಗಳು ಅಕ್ರಮವಾಗಿ ಪ್ರವೇಶಿಸಿ ಅಡ್ಡಿಯನ್ನುಂಟುಮಾಡಿದ್ದಾರೆ. ಜುಲೈ 14ರಂದು ನಡೆದ ಅಂಬಾನಿ ಕುಟುಂಬದ ಪುತ್ರ ಅನಂತ್ ಅಂಬಾನಿ ಹಾಗೂ ರಾಧಿಕಾ ಅವರ ವಿವಾಹ ಆರತಕ್ಷತೆ ಕಾರ್ಯಕ್ರಮಕ್ಕೆ ಆಹ್ವಾನವಿಲ್ಲದೆ ಪ್ರವೇಶಿಸಲು ಯತ್ನಸಿದ ಯೂಟ್ಯೂಬರ್ ಹಾಗೂ ಇನ್ನೊಬ್ಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಅವರ ಪುತ್ರ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹ ಆರತಕ್ಷತೆ ಜುಲೈ 14ರಂದು ಮುಂಬೈನ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆದಿತ್ತು. ಈ ವೇಳೆ ಕಾರ್ಯಕ್ರಮಕ್ಕೆ ಯೂಟ್ಯೂಬರ್ ವೆಂಕಟೇಶ್ ನರಸಯ್ಯ (26) ಮತ್ತು ಇನ್ನೊಬ್ಬ ವ್ಯಕ್ತಿ ಉದ್ಯಮಿ ಎಂದು ಹೇಳಿಕೊಂಡ ಲುಕಾಮ್ ಮೊಹಮ್ಮದ್ ಶಫಿ ಶೇಖ್ (28) ಆಂಧ್ರಪ್ರದೇಶದಿಂದ ಮುಂಬೈಗೆ ಬಂದಿದ್ದರು. ಇವರಿಗೆ ವಿವಾಹಕ್ಕೆ ಆಹ್ವಾನ ನೀಡದಿದ್ದರೂ ಕೂಡ ಗೇಟ್ ಕ್ರಾಸಿಂಗ್ ಮಾಡಿದ್ದಕ್ಕಾಗಿ ಪೊಲೀಸರು ಇಬ್ಬರ ವಿರುದ್ಧ ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿ ಇಬ್ಬರನ್ನು ಬಂಧಿಸಿದ್ದಾರೆ.

ಪೊಲೀಸರ ಪ್ರಕಾರ, ವೆಂಕಟೇಶ್ ಮತ್ತು ಲುಕಮ್ ಇಬ್ಬರೂ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್‌ಗೆ ಆಗಮಿಸಿದ್ದರು. ಅನುಮಾನಗೊಂಡ ಭದ್ರತಾ ಅಧಿಕಾರಿಗಳು ಅವರನ್ನು ತಡೆದು ವಿಚಾರಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಇವರಿಬ್ಬರನ್ನು ಬಿಕೆಸಿ ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು, ಅಲ್ಲಿ ಅವರ ವಿರುದ್ಧ ಅತಿಕ್ರಮಣ ಪ್ರಕರಣ ದಾಖಲಿಸಲಾಗಿದೆ.
ನೋಟಿಸ್ ನೀಡಿದ ನಂತರ ಕಾನೂನು ಕ್ರಮ ಕೈಗೊಂಡ ಪೊಲೀಸರು ಇಬ್ಬರನ್ನು ಬಿಡುಗಡೆ ಮಾಡಿದರು ಎನ್ನಲಾಗಿದೆ.

ಅನಂತ್ ಮತ್ತು ರಾಧಿಕಾ ಅವರ ವಿವಾಹ ಆರತಕ್ಷತೆಯಲ್ಲಿ ಗೋವಿಂದಾ, ಕತ್ರಿನಾ ಕೈಫ್, ವಿಕ್ಕಿ ಕೌಶಲ್, ತಮನ್ನಾ ಭಾಟಿಯಾ, ಬಿಪಾಶಾ ಬಸು, ಕರಣ್ ಸಿಂಗ್ ಗ್ರೋವರ್, ಭಾಗ್ಯಶ್ರೀ, ರಾಜ್ ಕುಮಾರ್ ರಾವ್, ಜಾಕಿ ಶ್ರಾಫ್, ಟೈಗರ್ ಶ್ರಾಫ್, ರಾಕುಲ್ ಪ್ರೀತ್ ಸಿಂಗ್ ಸೇರಿದಂತೆ ಅನೇಕ ಸಿನಿಮಾ ನಟ ನಟಿಯರು ಭಾಗವಹಿಸಿದ್ದರು. ಅದ್ಧೂರಿ ವಿವಾಹ ಆರತಕ್ಷತೆಯ ನಂತರ, ಅಂಬಾನಿ ಕುಟುಂಬವು ಮದುವೆಯ ನಂತರ ದ ಆಚರಣೆಗಳನ್ನು ಮುಂದುವರಿಸಲು ಲಂಡನ್‌ಗೆ ತೆರಳಲಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ:Ananth Ambani Fashion: ಅನಂತ್‌ ಅಂಬಾನಿ ಬಳಿ ಇದೆ ಡೈಮಂಡ್‌ ಬ್ರೂಚ್‌ಗಳ ಕಲೆಕ್ಷನ್‌! ಇವುಗಳ ಮೌಲ್ಯ ಎಷ್ಟಿರಬಹುದು?

Continue Reading

ದೇಶ

Pooja Khedkar: ಪೂಜಾ ಖೇಡ್ಕರ್‌ ಪುಣೆ ಜಿಲ್ಲಾಧಿಕಾರಿ ವಿರುದ್ಧ ಲೈಂಗಿಕ ಕಿರುಕುಳದ ಆರೋಪ

Pooja Khedkar: ಇನ್ನು ಮಹಿಳಾ ಪೊಲೀಸ್‌ ಪೇದೆ ಪೂಜಾ ಮನೆಗೆ ಭೇಟಿ ನೀಡಿ ದೂರು ದಾಖಲಿಸಿಕೊಂಡಿದ್ದಾರೆ. ಇನ್ನು ಮನೆಗೆ ಪೊಲೀಸರು ಬಂದಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದ್ದ ಪೂಜಾ, ಸ್ವಲ್ಪ ಕೆಲಸ ಇತ್ತು. ಹಾಗಾಗಿ ಪೊಲೀಸರನ್ನು ಮನೆಗೆ ಕರೆಸಿಕೊಂಡಿದ್ದೆ ಎಂದಿದ್ದರು.

VISTARANEWS.COM


on

Pooja Khedkar
Koo

ಮುಂಬೈ: ಮಹಾರಾಷ್ಟ್ರ ಕೇಡರ್‌ನ ಐಎಎಸ್‌ ಅಧಿಕಾರಿ, ಅತಿಯಾದ ದರ್ಪ, ನಕಲಿ ದಾಖಲೆ ಸೃಷ್ಟಿಯಿಂದಲೇ ದೇಶಾದ್ಯಂತ ಗಮನ ಸೆಳೆದಿರುವ ಟ್ರೈನಿ ಅಧಿಕಾರಿ (Trainee IAS Officer) ಪೂಜಾ ಖೇಡ್ಕರ್‌ (Pooja Khedkar) ಪುಣೆ ಜಿಲ್ಲಾಧಿಕಾರಿ ಸುಹಾಸ್‌ ದಿವಾಸೆ ವಿರುದ್ಧ ಲೈಂಗಿಕ ಕಿರುಕುಳ(Sexual Harassment)ದ ಆರೋಪ ಹೊರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ತಮ್ಮನ್ನು ಪುಣೆಯಿಂದ ವಾಸಿಂಗೆ ವರ್ಗಾವಣೆ ಮಾಡಿದ್ದ ಸುಹಾಸ್‌ ತಮಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಪೂಜಾ ದೂರಿದ್ದಾರೆ. ಇನ್ನು ಮಹಿಳಾ ಪೊಲೀಸ್‌ ಪೇದೆ ಪೂಜಾ ಮನೆಗೆ ಭೇಟಿ ನೀಡಿ ದೂರು ದಾಖಲಿಸಿಕೊಂಡಿದ್ದಾರೆ. ಇನ್ನು ಮನೆಗೆ ಪೊಲೀಸರು ಬಂದಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದ್ದ ಪೂಜಾ, ಸ್ವಲ್ಪ ಕೆಲಸ ಇತ್ತು. ಹಾಗಾಗಿ ಪೊಲೀಸರನ್ನು ಮನೆಗೆ ಕರೆಸಿಕೊಂಡಿದ್ದೆ ಎಂದಿದ್ದರು. ಮಹಾರಾಷ್ಟ್ರ ಕೇಡರ್‌ನ ಐಎಎಸ್‌ ಅಧಿಕಾರಿ, ಅತಿಯಾದ ದರ್ಪ, ನಕಲಿ ದಾಖಲೆ ಸೃಷ್ಟಿಯಿಂದಲೇ ದೇಶಾದ್ಯಂತ ಗಮನ ಸೆಳೆದಿರುವ ಟ್ರೈನಿ ಅಧಿಕಾರಿ (Trainee IAS Officer) ಪೂಜಾ ಖೇಡ್ಕರ್‌ ಅವರ ಒಂದೊಂದೇ ಕಳ್ಳಾಟಗಳು ಬಯಲಾಗುತ್ತಿವೆ.

ಇನ್ನು ಮಸೂರಿಯಲ್ಲಿರುವ ಲಾಲ್‌ ಬಹದ್ದೂರ್‌ ಶಾಸ್ತ್ರಿ ರಾಷ್ಟ್ರೀಯ ಆಡಳಿತ ಸೇವಾ ಅಕಾಡೆಮಿ ಖೇಡ್ಕರ್‌ ಅವರನ್ನು ತರಬೇತಿ ಶಿಬಿರಕ್ಕೆ ಕರೆದು ಅವರ ತರಬೇತಿಯನ್ನು ತಡೆ ಹಿಡಿದಿರುವ ಬಗ್ಗೆ ಆದೇಶ ಹೊರಡಿಸಲಾಗಿದೆ. ಮಹಾರಾಷ್ಟ್ರದ ರಾಜ್ಯ ಸರ್ಕಾರದ ಜಿಲ್ಲಾ ತರಬೇತಿ ಕಾರ್ಯಕ್ರಮದಿಂದ “ನಿಮ್ಮನ್ನು ತರಬೇತಿಯಿಂದ ರಿಲೀವ್‌ ಮಾಡಲಾಗಿದೆ. ಆದಷ್ಟು ಬೇಗ ಅಕಾಡೆಮಿಗೆ ಬಂದು ಸೇರಿಕೊಳ್ಳಿ” ಎಂದು ಅಕಾಡೆಮಿ ಖೇಡ್ಕರ್‌ ಅವರಿಗೆ ಹೇಳಿದೆ.

ತಮ್ಮ ಖಾಸಗಿ ಕಾರಿಗೆ ‘ಕೆಂಪು ಗೂಟ’ ಅಳವಡಿಸಿದ್ದು ಸೇರಿ ಹಲವು ರೀತಿಯಲ್ಲಿ ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡು, ವರ್ಗಾವಣೆಯ ಶಿಕ್ಷೆ ಅನುಭವಿಸುತ್ತಿರುವ ಪೂಜಾ ಖೇಡ್ಕರ್‌ ಅವರು ನಕಲಿ ಜಾತಿ ಪ್ರಮಾಣಪತ್ರ, ವಿಶೇಷ ಚೇತನ ಎಂದು ಸುಳ್ಳು ದಾಖಲೆ ಸೃಷ್ಟಿ, ವಯಸ್ಸಿನ ಕುರಿತು ಕೂಡ ಫೇಕ್‌ ಡಾಕ್ಯುಮೆಂಟ್‌ ತಯಾರಿಸಿದ ಆರೋಪಗಳನ್ನೂ ಎದುರಿಸುತ್ತಿದ್ದಾರೆ.

ನಿಯಮಿತ ಅಧಿಕಾರವನ್ನು ದುರುಪಯೋಗಪಡಿಸಿಕೊಂಡ ಆರೋಪದಲ್ಲಿ ಪುಣೆಯಿಂದ (ಅಸಿಸ್ಟಂಟ್‌ ಕಲೆಕ್ಟರ್)‌ ವಾಶಿಂಗೆ ವರ್ಗಾವಣೆಗೊಂಡಿರುವ 34 ವರ್ಷದ ಅಧಿಕಾರಿಯು, ಒಬಿಸಿ ಜಾತಿ ಪ್ರಮಾಣಪತ್ರ ಲಗತ್ತಿಸಿ ಯುಪಿಎಸ್‌ಸಿ ಪರೀಕ್ಷೆ ಬರೆದು ತೇರ್ಗಡೆ ಹೊಂದಿದ್ದಾರೆ. ಆದರೆ, ಅವರು ಒಬಿಸಿ ಜಾತಿ ಪ್ರಮಾಣಪತ್ರದ ನಕಲಿ ದಾಖಲೆ ಸೃಷ್ಟಿಸಿದ್ದಾರೆ. ಇನ್ನು ವಿಶೇಷ ಚೇತನ ಎಂಬುದಾಗಿಯೂ ಫೇಕ್‌ ಡಾಕ್ಯುಮೆಂಟ್‌ ಮಾಡಿಸಿದ್ದಾರೆ ಎಂದು ತಿಳಿದುಬಂದಿದೆ. ಆದರೆ, ಮೆಡಿಕಲ್‌ ಟೆಸ್ಟ್‌ ಪ್ರಕಾರ ಪೂಜಾ ಖೇಡ್ಕರ್‌ ಅವರು ಫಿಟ್‌ ಇದ್ದಾರೆ ಎಂದು ಹೇಳಲಾಗುತ್ತಿದೆ.‌ 2007ರಲ್ಲಿ ಅವರು ಎಂಬಿಬಿಎಸ್‌ಗೆ ಅರ್ಜಿ ಸಲ್ಲಿಸಿದಾಗ ದೈಹಿಕವಾಗಿ ಫಿಟ್‌ ಇರುವುದಾಗಿ ದಾಖಲೆ ಸಲ್ಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ವಯಸ್ಸಿನ ಕುರಿತೂ ಸುಳ್ಳು ದಾಖಲೆ

ಜಾತಿ, ವಿಶೇಷ ಚೇತನ ಪ್ರಮಾಣಪತ್ರದ ಜತೆಗೆ ಪೂಜಾ ಖೇಡ್ಕರ್‌ ಅವರು ವಯಸ್ಸಿನ ಕುರಿತು ಕೂಡ ಸುಳ್ಳು ದಾಖಲೆ ಸಲ್ಲಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. 2020ರಿಂದ 2023ರ ಅವಧಿಯಲ್ಲಿ ಅವರು ಸಲ್ಲಿಸಿದ ದಾಖಲೆಗಳ ಪ್ರಕಾರ, ಮೂರು ವರ್ಷದಲ್ಲಿ ಅವರ ವಯಸ್ಸು ದಾಖಲೆಯಲ್ಲಿ ಒಂದೇ ವರ್ಷ ಹೆಚ್ಚಾಗಿದೆ. ಯುಪಿಎಸ್‌ಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಲು ವಯಸ್ಸಿನ ಮಿತಿ ಇರುವ ಕಾರಣ ಅವರು ವಯಸ್ಸಿನ ಕುರಿತು ಕೂಡ ನಕಲಿ ದಾಖಲೆ ಸೃಷ್ಟಿಸಿದ್ದಾರೆ ಎಂದು ತಿಳಿದುಬಂದಿದೆ. ಇದು ಈಗ ಭಾರಿ ಚರ್ಚೆಗೂ ಗ್ರಾಸವಾಗಿದೆ.

27 ಸಾವಿರ ರೂ. ದಂಡ ಬಿದ್ದಿದ್ದೇಕೆ?

ಅಧಿಕಾರದ ದುರುಪಯೋಗ, ನಕಲಿ ದಾಖಲೆ ಸೃಷ್ಟಿ ಜತೆಗೆ ಸಂಚಾರ ದಟ್ಟಣೆ ನಿಯಮಗಳ ಉಲ್ಲಂಘನೆಯಲ್ಲೂ ಮುಂದಿದ್ದಾರೆ. ವಾಶಿಂ ಮಹಿಳಾ ಪೊಲೀಸರನ್ನು ತಮ್ಮ ನಿವಾಸಕ್ಕೆ ಕರೆಸಿಕೊಂಡ ಪೂಜಾ ಖೇಡ್ಕರ್‌ ಅವರು ಎರಡು ತಾಸು ಚರ್ಚಿಸಿದ್ದಾರೆ. ಯಾವ ವಿಷಯದ ಕುರಿತು ಚರ್ಚಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗದಿದ್ದರೂ, ಸಂಚಾರ ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ 27 ಸಾವಿರ ರೂ. ದಂಡ ವಿಧಿಸಲಾಗಿದ್ದು, ಅದರ ನೋಟಿಸ್‌ ನೀಡಲು ಪೊಲೀಸರು ಅವರ ಮನೆಗೆ ತೆರಳಿದ್ದರು ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: Manorathangal Trailer: ಗಮನ ಸೆಳೆದ ʼಮನೋರಥಂಗಳ್‌ʼ ಟ್ರೈಲರ್‌; 8 ನಿರ್ದೇಶಕರ 9 ಎಪಿಸೋಡ್‌ನಲ್ಲಿ ಸ್ಟಾರ್‌ಗಳ ಸಮಾಗಮ

Continue Reading

ಕರ್ನಾಟಕ

Dengue Fever: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳಲ್ಲಿ ತೀವ್ರ ಏರಿಕೆ; ಮಂಗಳವಾರ 487 ಕೇಸ್‌ ಪತ್ತೆ!

Dengue Fever: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 487 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಈ ಪೈಕಿ 128 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

VISTARANEWS.COM


on

Koo

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 487 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಈ ಪೈಕಿ 128 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಮಂದಿಗೆ ಸೋಂಕು ದೃಢಪಟ್ಟಿದ್ದು, ಸದ್ಯ ರಾಜ್ಯದಲ್ಲಿ 358 ಸಕ್ರಿಯ ಪ್ರಕರಣಗಳ ಇವೆ.

ಕಳೆದ 24 ಗಂಟೆಗಳಲ್ಲಿ 4572 ಟೆಸ್ಟ್‌ ಮಾಡಿದ್ದು, ಇದರಲ್ಲಿ 487 ಮಂದಿಗೆ ಸೋಂಕು ದೃಢಪಟ್ಟಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 283, ಬೆಂಗಳೂರು ನಗರ 5, ಬೆಂ. ಗ್ರಾಮಾಂತರ 3, ರಾಮನಗರ 1, ಕೋಲಾರ 3, ತುಮಕೂರು 18, ಚಿತ್ರದುರ್ಗ 10, ದಾವಣಗೆರೆ 12, ಶಿವಮೊಗ್ಗ 9, ವಿಜಯಪುರ 2, ಧಾರವಾಡ 17, ಹಾವೇರಿ 12, ಉತ್ತರ ಕನ್ನಡ 5, ಕಲಬುರಗಿ 12 ಬೀದರ್‌ 3, ವಿಜಯನಗರ 16, ಕೊಪ್ಪಳ 6, ಮೈಸೂರು 5, ಚಾಮರಾಜನಗರ 4, ಮಂಡ್ಯ 6, ಹಾಸನ 26, ಉಡುಪಿ 12, ಚಿಕ್ಕಮಗಳೂರು 9, ಕೊಡಗು ಜಿಲ್ಲೆಯಲ್ಲಿ 8 ಪ್ರಕರಣ ಪತ್ತೆಯಾಗಿವೆ.

ಇನ್ನು ರಾಜ್ಯದಲ್ಲಿ ಜನವರಿಯಿಂದ ಈವರೆಗೆ ಒಟ್ಟು ಡೆಂಗ್ಯೂ ಪ್ರಕರಣಗಳ ಸಂಖ್ಯೆ 10449 ವರದಿಯಾಗಿದ್ದು, 8 ಮಂದಿ ಮೃತಪಟ್ಟಿದ್ದಾರೆ. ಸದ್ಯ ಡಂಗ್ಯೂ ಮರಣ ಪ್ರಮಾಣ ಶೇ. 0.07 ಇದೆ.

ಇದನ್ನೂ ಓದಿ | Manikanta Rathod: ಅನ್ನ ಭಾಗ್ಯ ಅಕ್ಕಿ ಕಳವು ಕೇಸ್‌ನಲ್ಲಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್‌ ಬಂಧನ

ಮಹಾಮಾರಿ ಡೆಂಗ್ಯೂಗೆ ಯುವಕ ಬಲಿ

ಶಿವಮೊಗ್ಗ: ಮಹಾಮಾರಿ ಡೆಂಗ್ಯೂಗೆ ಯುವಕ ಬಲಿಯಾಗಿರುವ ಘಟನೆ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯಲ್ಲಿ ನಡೆದಿದೆ. ಇದರಿಂದ ಒಂದೇ ವಾರದಲ್ಲಿ ಇಬ್ಬರು ಡೆಂಗ್ಯೂದಿಂದ ಮೃತಪಟ್ಟಂತಾಗಿದೆ. ಹೊಸನಗರ ರಸ್ತೆಯ ನಿವಾಸಿ ಆಶಿಕ್ ರಸೂಲ್ (27) ಮೃತಪಟ್ಟ ದುರ್ದೈವಿ.

ಶನಿವಾರದಿಂದ ಜ್ವರದಿಂದ ಬಳಲುತಿದ್ದ ಆಶಿಕ್ ರಸೂಲ್‌ಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಸಂಜೆ ಸಾವನ್ನಪ್ಪಿದ್ದಾನೆ. ಬಿಳಿರಕ್ತ ಕಣಗಳು ತೀವ್ರವಾಗಿ ಕ್ಷೀಣಿಸಿದ ಹಿನ್ನೆಲೆಯಲ್ಲಿ ಯುವಕ ಸಾವಿಗೀಡಾಗಿದ್ದಾನೆ. ಇತ್ತೀಚೆಗೆ ರಶ್ಮಿ ನಾಯಕ್ ಎನ್ನುವ ರಿಪ್ಪನ್‌ಪೇಟೆಯ ಬಿವಾಸು ಮಹಿಳೆ ಡೆಂಗ್ಯೂನಿಂದ ಮೃತಪಟ್ಟಿದ್ದಾರೆ.

Continue Reading
Advertisement
Vicky Kaushal Kissing Scenes of 27 Seconds deleated From Bad Newz
ಬಾಲಿವುಡ್21 mins ago

Vicky Kaushal: 27 ಸೆಕೆಂಡುಗಳ ಕಾಲ ಚುಂಬಸಿದ ವಿಕ್ಕಿ ಕೌಶಲ್ -ತೃಪ್ತಿ; ಸೆನ್ಸಾರ್‌ ಬೋರ್ಡ್‌ನಿಂದ ಬಿತ್ತು ಕತ್ತರಿ!

uttara kannada landslide shirur
ಉತ್ತರ ಕನ್ನಡ31 mins ago

Uttara Kannada Landslide: ಭೂಕುಸಿತದ ಜಾಗದ ಬಳಿಯೇ ʼಸುನಾಮಿʼ ಎಫೆಕ್ಟ್‌; ನೀರಿನ ರಭಸಕ್ಕೆ ಕೊಚ್ಚಿಹೋದ ಮಹಿಳೆ

Ajit Pawar
ರಾಜಕೀಯ33 mins ago

Ajit Pawar: ಮಹಾರಾಷ್ಟ್ರದಲ್ಲಿ ಅಜಿತ್‌ ಪವಾರ್‌ಗೆ ಶಾಕ್‌; ಎನ್‌ಸಿಪಿಗೆ ರಾಜೀನಾಮೆ ನೀಡಿದ ಆಪ್ತ

KL Rahul
ಕ್ರೀಡೆ36 mins ago

KL Rahul: ಮುಂದಿನ ವರ್ಷ ಆರ್​ಸಿಬಿ ಪರ ಆಡಲಿದ್ದಾರೆ ಕೆ.ಎಲ್​ ರಾಹುಲ್​; ಪೋಸ್ಟರ್ ವೈರಲ್

Samarjit Lankesh Monalisa Kannada Movie 20 Years Celebration Gowri Movie 2 Songs Released
ಸ್ಯಾಂಡಲ್ ವುಡ್1 hour ago

Samarjit Lankesh: ‘ಮೊನಾಲಿಸಾ’ ಚಿತ್ರಕ್ಕೆ 20 ವರ್ಷಗಳ ಸಂಭ್ರಮ: ರಿಲೀಸ್ ಆಯ್ತು ‘ಗೌರಿ’ ಚಿತ್ರದ ಹಾಡುಗಳು

gt world mall
ಪ್ರಮುಖ ಸುದ್ದಿ1 hour ago

GT World Mall: ಪಂಚೆ ಧರಿಸಿ ಬಂದ ರೈತರಿಗೆ ಪ್ರವೇಶ ನಿರಾಕರಿಸಿ ಅವಮಾನಿಸಿದ ಜಿಟಿ ವರ್ಲ್ಡ್‌ ಮಾಲ್‌

Kylian Mbappe
ಕ್ರೀಡೆ1 hour ago

Kylian Mbappe: ಬಾಲ್ಯದ ಕನಸಿನ ರಿಯಲ್‌ ಮ್ಯಾಡ್ರಿಡ್‌ ತಂಡ ಸೇರಿದ ಕೀಲಿಯನ್‌ ಎಂಬಾಪೆ

SIIMA 2024 nomination list announced kaatera
ಸ್ಯಾಂಡಲ್ ವುಡ್2 hours ago

SIIMA 2024: ಸೈಮಾ ನಾಮಿನೇಷನ್ ರೇಸ್‌ನಲ್ಲಿ ʻಕಾಟೇರʼ, ʻಸಪ್ತ ಸಾಗರದಾಚೆ ಎಲ್ಲೋ ಸೈಡ್-ಎʼ!

Chandipura Virus
ಆರೋಗ್ಯ2 hours ago

Chandipura Virus: ಡೆಂಗ್ಯೂ ಹಾವಳಿ ನಡುವೆ ಕಾಡುತ್ತಿದೆ ಚಾಂದಿಪುರ ವೈರಸ್; ಇದುವರೆಗೆ 6 ಮಕ್ಕಳು ಬಲಿ: ಏನಿದರ ಲಕ್ಷಣ?

Double-Decker Flyover
ಪ್ರಮುಖ ಸುದ್ದಿ2 hours ago

Double-Decker Flyover: ಇಂದು ಬೆಂಗಳೂರಿನ ಡಬಲ್ ಡೆಕ್ಕರ್ ಫ್ಲೈಓವರ್‌ಗೆ ಚಾಲನೆ; ದಕ್ಷಿಣ ಭಾರತದ ಪ್ರಥಮ ಮೆಟ್ರೋ ಕಂ ಮೇಲ್ಸೇತುವೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ21 hours ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ23 hours ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ2 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ2 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ2 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ3 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ3 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ3 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ3 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ4 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌