Site icon Vistara News

Bike Accident | ಬೈಕ್‌ ಡಿಕ್ಕಿಯಾಗಿ ಕುರಿಗಾಯಿ ಸ್ಥಳದಲ್ಲಿಯೇ ಸಾವು; ಮುಗಿಲು ಮುಟ್ಟಿದ ಆಕ್ರಂದನ

ಬೈಕ್‌ ಅಪಘಾತ

ವಿಜಯಪುರ: ಇಲ್ಲಿನ ಮುದ್ದೇಬಿಹಾಳ ತಾಲೂಕಿನ ಕುಂಟೋಜಿ ಗ್ರಾಮದ ಬಳಿ ನೀರು ತರಲು ಹೋಗಿದ್ದ ಕುರಿಗಾಯಿಗೆ ಬೈಕ್‌ವೊಂದು ಡಿಕ್ಕಿ (Bike Accident) ಹೊಡೆದಿದೆ. ಪರಿಣಾಮ ತೀವ್ರ ರಕ್ತಸ್ರಾವವಾಗಿ ಕುರಿಗಾಯಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತ ಕುರಿಗಾಯಿ ಚಿಕ್ಕೋಡಿ ಮೂಲದ ನಿಂಗಪ್ಪ ಹಾಲಪ್ಪ ಕದ್ದಿ (50) ಎಂದು ತಿಳಿದು ಬಂದಿದೆ.

Bike Accident

ಬೈಕ್ ಸವಾರ ಕವಡಿಮಟ್ಟಿ ಗ್ರಾಮದ ಹಣಮಂತ ನಿಂಗಪ್ಪ ಮಾದರಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆ ಆಸ್ಪತ್ರೆಗೆ ರವಾನಿಸಲಾಗಿದೆ. ಇತ್ತ ಕುರಿಗಾಯಿ ಮೃತಪಟ್ಟಿದ್ದು ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Road accident | ಅಪಘಾತದಲ್ಲಿ ಹೊತ್ತಿ ಉರಿದ ಬೊಲೆರೊ, ಬೈಕ್‌ನಲ್ಲಿದ್ದ ಇಬ್ಬರ ದಾರುಣ ಮೃತ್ಯು

Exit mobile version