Site icon Vistara News

Honor Killing: ಮರ್ಯಾದೆಗಾಗಿ ಗರ್ಭಿಣಿಯನ್ನು ಸುಟ್ಟು ಕೊಂದ ಇಬ್ಬರಿಗೆ ಗಲ್ಲು ಶಿಕ್ಷೆ, 6 ಮಂದಿಗೆ ಜೀವಾವಧಿ‌ ಶಿಕ್ಷೆ

honour killing

ವಿಜಯಪುರ: ಮರ್ಯಾದಾ ಹತ್ಯೆ ಪ್ರಕರಣದ (Honor Killing) ಇಬ್ಬರು ಅಪರಾಧಿಗಳಿಗೆ ಗಲ್ಲು ಶಿಕ್ಷೆ ಹಾಗೂ ಇತರ 6 ಮಂದಿಗೆ ಜೀವಾವಧಿ ಶಿಕ್ಷೆ ಹಾಗೂ ದಂಡ ವಿಧಿಸಿ ವಿಜಯಪುರ ಜಿಲ್ಲಾ ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ನೀಡಿದೆ. 2017ರಲ್ಲಿ ಗರ್ಭಿಣಿಯನ್ನು ಸುಟ್ಟು ಕೊಂದಿದ್ದ ಪೋಷಕರು ಹಾಗೂ ಸಂಬಂಧಿಕರಿಗೆ ಇದೀಗ ಶಿಕ್ಷೆ ನೀಡಲಾಗಿದೆ.

ಇಬ್ರಾಹಿಂ ಸಾಬ್ ಅತ್ತಾರ, ಅಕ್ಬರಸಾಬ್ ಅತ್ತಾರ ಗಲ್ಲು ಶಿಕ್ಷೆಗೆ ಒಳಗಾದವರು. ರಮಜಾನಭೀ ಅತ್ತಾರ, ದಾವಲಭೀ ಜಮಾದಾರ್, ಅಜಮಾ ದಖನಿ, ಜಿಲಾನಿ‌ ದಖನಿ, ಅಬ್ದುಲ್ ಖಾದರ್ ದಖನಿ, ದಾವಲಭಿ ಧನ್ನೂರಗೆ ಜೀವಾವಧಿ‌ ಶಿಕ್ಷೆ ಹಾಗೂ 4.19 ಲಕ್ಷ ದಂಡ ವಿಧಿಸಲಾಗಿದೆ.

2017ರಲ್ಲಿ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಹಾಳಾಗುಂಡಕನಾಳ ಗ್ರಾಮದಲ್ಲಿ ಗರ್ಭಿಣಿಯ ಹತ್ಯೆ ಪ್ರಕರಣ ನಡೆದಿತ್ತು. ಹಾಳಗುಂಡಕನಾಳ ಗ್ರಾಮದ ಬಾನು ಬೇಗಂ ಅತ್ತಾರ್ ಹಾಗೂ ಸಾಯಬಣ್ಣ ಕೊಣ್ಣೂರ ಎಂಬುವರು 2017ರಲ್ಲಿ ಪ್ರೀತಿಸಿ ಮದುವೆಯಾಗಿದ್ದರು. ಇದು ಬಾನುಬೇಗಂ ಮನೆಯವರ ಕೆಂಗಣ್ಣಿಗೆ ಗುರಿಯಾಗಿತ್ತು. ಮದುವೆಯಾದ ಬಳಿಕ ಬೇರೆ ನಗರದಲ್ಲಿ ಬಾನು ಬೇಗಂ ಹಾಗೂ ಸಾಯಬಣ್ಣ ವಾಸವಿದ್ದರು. ಈ ವೇಳೆ ಬಾನು ಬೇಗಂ ಗರ್ಭಿಣಿಯಾದ ಕಾರಣ ಹೆರಿಗೆಗಾಗಿ ಗಂಡನ ಮನೆಗೆ ಬಂದಿದ್ದಳು. ಇದನ್ನೇ ಕಾಯುತ್ತಿದ್ದ ಆಕೆಯ ಪೋಷಕರು ಬಾನುಬೇಗಂ ಹಾಗೂ ಸಾಹೇಬಣ್ಣರನ್ನ ಕೊಲೆ ಮಾಡಲು ಮುಂದಾಗಿದ್ದರು. ಪತಿ ಮತ್ತು ಪತ್ನಿ ಮೇಲೆ ಹಲ್ಲೆ ಮಾಡುವ ವೇಳೆ ಹಲ್ಲೆಗೊಳಗಾಗಿ ಬಾನು ಬೇಗ ಮೂರ್ಚೆ ಹೋಗಿದ್ದಳು. ಮೂರ್ಚೆ ಹೋದ ಗರ್ಭಿಣಿಯ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಲಾಗಿತ್ತು.

ಇದನ್ನೂ ಓದಿ | Prajwal Revanna Case: ರೇವಣ್ಣ ಮೇಲೆ ಕಿಡ್ನ್ಯಾಪ್‌ ಕೇಸ್;‌ ನಿರೀಕ್ಷಣಾ ಜಾಮೀನು ಅರ್ಜಿ ಮುಂದೂಡಿಕೆ, ನಾಳೆ SIT ಮುಂದೆ ಹಾಜರ್‌?

ಘಟನೆ ವೇಳೆ ಹಲ್ಲೆಕೋರರಿಂದ ಸಾಯಬಣ್ಣನನ್ನು ರಕ್ಷಣೆ ಮಾಡಲಾಗಿತ್ತು. ಬಾನುಬೇಗಂ ತಂದೆ-ತಾಯಿ ಹಾಗೂ ಅವರ ಸಂಬಂಧಿಕರು ಈ ಕೃತ್ಯ ಎಸಗಿದ್ದರು. ಈ ಪ್ರಕರಣ ಕುರಿತು ತನಿಖೆ ನಡೆಸಿ ತಾಳಿಕೋಟೆ ಪೊಲೀಸರು ನ್ಯಾಯಾಲಯಕ್ಕೆ ತನಿಖಾ ವರದಿ ಸಲ್ಲಿಸಿದ್ದರು. ಸುಧೀರ್ಘ ವಾದ-ವಿವಾದ ಆಲಿಸಿದ ನ್ಯಾಯಾಧೀಶ ಸತೀಶ್ ಎಲ್.ಪಿ. ಅವರು ಅಪರಾಧಿಗಳಿಗೆ ಶಿಕ್ಷೆ ಪ್ರಕಟಿಸಿದ್ದಾರೆ. ಸರ್ಕಾರದ ಪರವಾಗಿ ಅಭಿಯೋಜಕ ಎಸ್.ಎಸ್. ಲೋಕೂರ ವಾದ ಮಂಡಿಸಿದ್ದರು.

ದಲಿತ ಬಾಲಕಿಯನ್ನು ಗರ್ಭಿಣಿ ಮಾಡಿ ಎಸ್ಕೇಪ್ ಆಗಿದ್ದ ಸದ್ದಾಂ ಹುಸೇನ್ ಅರೆಸ್ಟ್‌

Physical Abuse

ಹುಬ್ಬಳ್ಳಿ: ದಲಿತ ಬಾಲಕಿಯನ್ನು ಗರ್ಭಿಣಿ ಮಾಡಿ ಎಸ್ಕೇಪ್ ಆಗಿದ್ದ ಅನ್ಯಕೋಮಿ‌ನ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಬಾಲಕಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋದಾಗ ವೈದ್ಯರು ಆಘಾತಕಾರಿ ವಿಷಯ ತಿಳಿಸಿದ್ದರು. ಮಗಳು ಗರ್ಭಿಣಿಯಾದ ಸುದ್ದಿ ತಿಳಿದು ಪೋಷಕರು ಕಂಗಾಲಾಗಿದ್ದರು. ಹೀಗಾಗಿ ಆರೋಪಿ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಹಿಂದು ಸಂಘಟನೆಗಳು ಪ್ರತಿಭಟನೆ ನಡೆಸಿದ ಬೆನ್ನಲ್ಲೇ ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಸದ್ದಾಂಹುಸೇನ್ ಬಂಧಿತ ಆರೋಪಿ. ಹುಬ್ಬಳ್ಳಿ ನವನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು. ಅಪ್ರಾಪ್ತೆಯನ್ನು ಗರ್ಭಿಣಿ ಮಾಡಿದ್ದ ಯುವಕ, ಇದರ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಹೀಗಾಗಿ ಯುವಕನ ವಿರುದ್ಧ ಹಿಂದುಪರ ಸಂಘಟನೆಗಳು ಆಕ್ರೋಶ ಹೊರಹಾಕಿ, ಆರೋಪಿಯನ್ನು ಕೂಡಲೇ ಬಂಧಿಸುವಂತೆ ಶುಕ್ರವಾರ ಸಂಜೆ ನವನಗರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದರು.

Physical Abuse

ಇದನ್ನೂ ಓದಿ | Prajwal Revanna Case: ಪೆನ್‌ಡ್ರೈವ್‌ ಲೀಕ್‌ ಮಾಡಿದ್ದು ಯಾರು? ಎಸ್‌ಐಟಿಗೆ ಸಾಕ್ಷಿ ಕೊಟ್ಟ ದೇವರಾಜೇಗೌಡ!

ಸದ್ಯ ಕಿಮ್ಸ್ ಆಸ್ಪತ್ರೆಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಪ್ರಾಪ್ತೆ ಆಸ್ಪತ್ರೆಗೆ ಹೋಗಿದ್ದನ್ನು ಅರಿತ ಯುವಕ, ಆಕೆ ಕುಟುಂಬಸ್ಥರಿಗೆ ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದ. ಹೀಗಾಗಿ ಯುವಕನ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಹಿಂದು ಪರ ಸಂಘಟನೆಗಳ ಆಕ್ರೋಶ ಹೊರಹಾಕಿವೆ.

Exit mobile version