Site icon Vistara News

Physical Abuse : ಬಸ್‌ ಸ್ಟಾಪ್‌ನಲ್ಲಿ ನಿಂತಿದ್ದ ಮಹಿಳೆಗೆ ಕಣ್ಣು ಹೊಡೆದು ಚುಡಾಯಿಸಿದವನಿಗೆ ಚಪ್ಪಲಿ ಏಟು

Physical Abuse

ವಿಜಯಪುರ: ಕಣ್ಣು ಹೊಡೆದು ಚುಡಾಯಿಸಿದ ಯುವಕನಿಗೆ (Physical Abuse) ಮಹಿಳೆಯೊಬ್ಬರು ಚಪ್ಪಲಿ ಏಟು ನೀಡಿದ್ದಾರೆ. ವಿಜಯಪುರ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಘಟನೆ ನಡೆದಿದೆ.

ಬಸ್‌ಗಾಗಿ ಕಾದು ನಿಂತಿದ್ದ ಮಹಿಳೆಗೆ ಕಣ್ಣು ಹೊಡೆದು ಸನ್ನೆ ಮಾಡಿದ್ದಾನೆ. ಮೊದಮೊದಲು ಮಹಿಳೆ ಇದನ್ನೂ ನಿರ್ಲಕ್ಷ್ಯ ಮಾಡಿದ್ದಾರೆ. ಆದರೆ ಯಾವಾಗ ಅಸಭ್ಯವಾಗಿ ವರ್ತನೆ ಮಾಡಲು ಶುರು ಮಾಡಿದ್ದನ್ನೋ ಸಿಟ್ಟಿಗೆದ್ದ ಮಹಿಳೆ ಕೈಯಲ್ಲಿ ಚಪ್ಪಲಿ ಹಿಡಿದು, ಯುವಕನಿಗೆ ಹೊಡೆದಿದ್ದಾರೆ.

ಬಸ್ ನಿಲ್ದಾಣದಲ್ಲಿದ್ದ ಸಹ ಪ್ರಯಾಣಿಕರು ಇದಕ್ಕೆ ಸಾಥ್‌ ನೀಡಿದ್ದಾರೆ. ಇತ್ತ ಚಪ್ಪಲಿ ಏಟು ತಿಂದ ಕಾಮುಕ ಬಳಿಕ ಸ್ಥಳದಿಂದ ಕಾಲ್ಕಿತ್ತಿದ್ದಾನೆ. ಮಹಿಳೆ ಹಾಗೂ ಯುವಕನ ಹೆಸರು ತಿಳಿದುಬಂದಿಲ್ಲ. ಸದ್ಯ ಈ ವಿಡಿಯೊ ಎಲ್ಲೆಡೆ ಹರಿದಾಡುತ್ತಿದೆ. ಗಾಂಧಿಚೌಕ್ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Murder Case : ಅಪರಿಚಿತ ವ್ಯಕ್ತಿಯ ಬರ್ಬರ ಹತ್ಯೆ; ಕೈ-ಕಾಲು ಬಿಗಿದು, ಕಲ್ಲು ಕಟ್ಟಿ ಕೆರೆಗೆ ಎಸೆದ ಹಂತಕರು

ವಾಕಿಂಗ್‌ ಮಾಡುತ್ತಿದ್ದ ಮಹಿಳೆಯನ್ನು ತಪ್ಪಿಕೊಂಡು ಮುತ್ತು ಕೊಟ್ಟ ಕಾಮುಕ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಹೆಣ್ಣುಮಕ್ಕಳಿಗೆ ಸುರಕ್ಷತೆಯೇ ಇಲ್ಲದಂತಾಗಿದೆ. ಮನೆ ಎದುರು ತಿರುಗಾಡುತ್ತಿರುವಾಗ ಚಿನ್ನದ ಸರ ಕಿತ್ತುಕೊಂಡು ಹೋಗುವುದು, ಅವರ ಮೇಲೆ ಹಲ್ಲೆ ನಡೆಸುವುದು, ಮೊಬೈಲ್‌, ಪರ್ಸ್‌ ಎಗರಿಸುವುದು ಸೇರಿ ಹಲವು ರೀತಿಯ ಪ್ರಕರಣಗಳು ಸುದ್ದಿಯಾಗುತ್ತಲೇ ಇರುತ್ತವೆ. ಇದಕ್ಕೆ ನಿದರ್ಶನ ಎಂಬಂತೆ, ಕೋಣನಕುಂಟೆಯ (Konanakunte) ಕೃಷ್ಣಾ ನಗರದಲ್ಲಿ ಮನೆ ಬಳಿ ವಾಕಿಂಗ್‌ ಮಾಡುತ್ತಿದ್ದ ಮಹಿಳೆಯೊಬ್ಬರಿಗೆ ದುಷ್ಕರ್ಮಿಯೊಬ್ಬ ಲೈಂಗಿಕ ಕಿರುಕುಳ ನೀಡಿದ್ದಾನೆ.

ಮಹಿಳೆಯು ಮನೆಯ ಬಳಿ ವಾಕಿಂಗ್‌ ಮಾಡುತ್ತಿದ್ದಾಗ ದುಷ್ಕರ್ಮಿಯೊಬ್ಬ ಹತ್ತಿರ ಬಂದಿದ್ದಾನೆ. ಅವರನ್ನು ಬಲವಂತವಾಗಿ ಹಿಡಿದು ತಬ್ಬಿಕೊಂಡು, ಕಿಸ್‌ ಕೊಟ್ಟಿದ್ದಾನೆ. ದುಷ್ಕರ್ಮಿಯಿಂದ ಬಿಡಿಸಿಕೊಂಡು ಕೂಗುತ್ತ ಮಹಿಳೆ ಓಡಿದ್ದಾರೆ. ಅವರ ಹಿಂದೆಯೇ ಓಡಿ ಬಂದ ದುರುಳನು, ಮತ್ತೆ ಕಿರುಕುಳ ನೀಡಿ ಓಡಿಹೋಗಿದ್ದಾನೆ. ಈ ವಿಡಿಯೊ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಹಾಗೆಯೇ, ನಗರದಲ್ಲಿ ಹೆಣ್ಣುಮಕ್ಕಳ ಸುರಕ್ಷತೆ ಕುರಿತು ಆತಂಕ ವ್ಯಕ್ತವಾಗುತ್ತಿದೆ. ಜನ ಆಕ್ರೋಶವನ್ನೂ ವ್ಯಕ್ತಪಡಿಸುತ್ತಿದ್ದಾರೆ.

ಶುಕ್ರವಾರ (ಆಗಸ್ಟ್‌ 2) ಬೆಳಗಿನ ಜಾವ ಮಹಿಳೆಯು ಮನೆಯ ಬಳಿಯಲ್ಲೇ ವಾಕಿಂಗ್‌ ಮಾಡುವಾಗ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಮಹಿಳೆಯು ಉತ್ತರ ಭಾರತದವರಾಗಿದ್ದು, ಬೆಳಗ್ಗೆ ಕೆಲ ಹೆಣ್ಣುಮಕ್ಕಳು ಸೇರಿ ವಾಕಿಂಗ್‌ ಹೋಗುತ್ತಿದ್ದರು. ಪಕ್ಕದ ಮನೆಯವರು ಬರುವ ಕಾರಣ ಅವರು ರಸ್ತೆ ಬದಿ ಕಾಯುತ್ತಿದ್ದರು ಎಂದು ತಿಳಿದುಬಂದಿದೆ.

ವಿಡಿಯೊ ವೈರಲ್‌ ಆದ ಬಳಿಕ ಹೆಣ್ಣುಮಕ್ಕಳು ಮನೆಯಿಂದ ಹೊರಬರಲು ಕೂಡ ಭಯಪಡುವಂತಾಗಿದೆ. ಹೆಣ್ಣುಮಕ್ಕಳ ಆಭರಣ, ಮೊಬೈಲ್‌ ಸೇರಿ ಬೆಲೆ ಬಾಳುವ ವಸ್ತುಗಳನ್ನು ಕಿತ್ತುಕೊಂಡು ಹೋಗುವುದು ಸೇರಿ ಹಲವು ಕೃತ್ಯ ಎಸಗುತ್ತಿರುವ ಇಂತಹ ದುಷ್ಕರ್ಮಿಗಳನ್ನು ಪೊಲೀಸರು ನಿಯಂತ್ರಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version