Site icon Vistara News

Road Accident : ಅಂಗನವಾಡಿಗೆ ಹೊರಟಿದ್ದ ಬಾಲಕನ ಬಲಿ ಪಡೆದ ಖಾಸಗಿ ಶಾಲಾ ವಾಹನ

Road Accident

ವಿಜಯಪುರ: ಅಂಗನವಾಡಿ ಬಾಲಕನ ಮೇಲೆ ಖಾಸಗಿ ಶಾಲಾ ವಾಹನ (Road Accident) ಹರಿದಿದೆ. ವಿಜಯಪುರ ಜಿಲ್ಲೆಯ ನಿಡಗುಂಡಿ ತಾ. ಅರಳದಿನ್ನಿ ಗ್ರಾಮದಲ್ಲಿ ಘಟನೆ ನಡೆದಿದೆ. ಬಸವರಾಜ್ ಮಂಜುನಾಥ ಚೋಪಡೆ (5) ಮೃತ ದುರ್ದೈವಿ.

ಬಸವರಾಜ್‌ ಅಂಗನವಾಡಿಗೆ ಹೊರಟಿದ್ದ. ರಸ್ತೆ ದಾಡುವಾಗ ಏಕಾಏಕಿ ಖಾಸಗಿ ಶಾಲಾ ವಾಹನವು ಬಾಲಕಿಗೆ ಗುದ್ದಿದೆ. ಕೆಳಗೆ ಬಿದ್ದವನ ಮೇಲೆ ಹರಿದಿದೆ. ನಿಡಗುಂದಿಯ ಬಿಎಂಎಸ್‌ (BMS) ಶಾಲೆಯ ವಾಹನ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ನಿಡಗುಂದಿ ಪೊಲೀಸರ ದೌಡಾಯಿಸಿದ್ದು, ಬಾಲಕನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಪಿಎಸ್‌ಐ ಶಿವಾನಂದ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಾಲಾ ವಾಹನವನ್ನು ವಶಕ್ಕೆ ಪಡೆಯಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ: Murder case : ರಾಮನಗರದಲ್ಲಿ ಸಂಬಂಧಿಕರಿಂದಲೇ ಯುವಕನ ಬರ್ಬರ ಹತ್ಯೆ

ಶಿವಮೊಗ್ಗದಲ್ಲಿ ಹೊತ್ತಿ ಉರಿದ ಸಾರಿಗೆ ಬಸ್

ಚಲಿಸುತ್ತಿದ್ದ ಬಸ್ಸಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ. ಅದೃಷ್ಟವಶಾತ್‌ ಭಾರಿ ಅನಾಹುತವೊಂದು ತಪ್ಪಿದೆ. ವಾಯುವ್ಯ ಕರ್ನಾಟಕ ಸಾರಿಗೆ ಬಸ್ ಕೆಲವೇ ಕ್ಷಣದಲ್ಲಿ ಹೊತ್ತಿ ಉರಿದಿದೆ. ಬಸ್ಸಿನಲ್ಲಿದ್ದ 12 ಮಂದಿ ಪ್ರಯಾಣಿಕರು ಪಾರಾಗಿದ್ದಾರೆ. ಶಿವಮೊಗ್ಗದ ಸಾಗರ ಪಟ್ಟಣದ ಜೋಗ ರಸ್ತೆಯ ಕೆಎಸ್ ಆರ್ ಟಿಸಿ ಡಿಪೋ ಬಳಿ ಘಟನೆ ನಡೆದಿದೆ. ಭಟ್ಕಳದಿಂದ ಬೆಂಗಳೂರಿಗೆ ಹೊರಟಿದ್ದ ಬಸ್ ಸುಟ್ಟಿ ಕರಕಲಾಗಿದೆ.

ನಿಂತಿದ್ದ ಟಿಪ್ಪರ್ ಲಾರಿಗೆ ಆಂಬ್ಯುಲೆನ್ಸ್ ಡಿಕ್ಕಿ

ನಿಂತಿದ್ದ ಟಿಪ್ಪರ್ ಲಾರಿಗೆ ಆಂಬ್ಯುಲೆನ್ಸ್‌ವೊಂದು ಡಿಕ್ಕಿ ಹೊಡೆದಿದ್ದು, ವ್ಯಕ್ತಿಯೊಬ್ಬ ಗಂಭೀರ ಗಾಯಗೊಂಡಿದ್ದಾರೆ. ಶಿವಮೊಗ್ಗದ ನಗರದ ಹೊರವಲಯದ ಮಲವಗೊಪ್ಪ – ನಿದಿಗೆ ಗ್ರಾಮದ ಬಳಿ ಘಟನೆ ನಡೆದಿದೆ. ಅಪಘಾತದ ರಭಸಕ್ಕೆ ಆಂಬ್ಯುಲೆನ್ಸ್‌ ಜಖಂ ಆಗಿದೆ. ಆಂಬ್ಯುಲೆನ್ಸ್‌ ಭದ್ರಾವತಿ ಕಡೆಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದಾಗ ಟಿಪ್ಪರ್‌ ಲಾರಿಗೆ ಡಿಕ್ಕಿಯಾಗಿದೆ. ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version