Road Accident : ಡಿವೈಡರ್‌ಗೆ ಗುದ್ದಿದ ಕಾರು; ಸ್ಥಳದಲ್ಲೆ ಇಬ್ಬರು ಸಾವು, ಮತ್ತೊಬ್ಬ ಗಂಭೀರ - Vistara News

ವಿಜಯಪುರ

Road Accident : ಡಿವೈಡರ್‌ಗೆ ಗುದ್ದಿದ ಕಾರು; ಸ್ಥಳದಲ್ಲೆ ಇಬ್ಬರು ಸಾವು, ಮತ್ತೊಬ್ಬ ಗಂಭೀರ

Road Accident : ಪ್ರತ್ಯೇಕ ಕಡೆಗಳಲ್ಲಿ ರಸ್ತೆ ಅಪಘಾತಗಳು ಸಂಭವಿಸಿದೆ. ವಿಜಯಪುರದಲ್ಲಿ ಡಿವೈಡರ್‌ಗೆ ಕಾರು ಗುದ್ದಿ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಶಿವಮೊಗ್ಗದಲ್ಲಿ ಕಾರೊಂದು ಹಳ್ಳಕ್ಕೆ ಪಲ್ಟಿ ಹೊಡೆದಿದೆ. ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಖಾಸಗಿ ಬಸ್‌ ಕಾರಿಗೂ ಗುದ್ದಿದೆ. ತಿರುಪತಿಗೆ ತರಕಾರಿ ಸಾಗಿಸುತ್ತಿದ್ದ ಗೂಡ್ಸ್ ವಾಹನ ಪಲ್ಟಿಯಾಗಿದೆ.

VISTARANEWS.COM


on

Road Accident
ಮೃತ ದುರ್ದೈವಿಗಳು
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಿಜಯಪುರ: ವೇಗವಾಗಿ ಬಂದ ಕಾರೊಂದು ನಿಯಂತ್ರಣ ತಪ್ಪಿ ಡಿವೈಡರ್‌ಗೆ (Road Accident) ಗುದ್ದಿದೆ. ಪರಿಣಾಮ ಸ್ಥಳದಲ್ಲೆ ಇಬ್ಬರು ಮೃತಪಟ್ಟಿದ್ದಾರೆ. ಮಲ್ಲು ಡೋಲಗೊಂಡ (32), ಪರಶು ಮಿಣಜಿಗಿ(26) ಸ್ಥಳದಲ್ಲೆ ಮೃತಪಟ್ಟ ದುರ್ದೈವಿಗಳು. ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಇಂಗಳೇಶ್ವರ ಮಾರ್ಗ ಮಧ್ಯದಲ್ಲಿ ಅಪಘಾತ ನಡೆದಿದೆ.

ತಡರಾತ್ರಿ ಶಿಫ್ಟ್ ಕಾರಿನಲ್ಲಿ ಬರುವಾಗ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಐವರ ಪೈಕಿ ಮುಂದೆ ಕುಳಿತಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಮತ್ತೊಬ್ಬ ಸ್ಥಿತಿ ಗಂಭೀರವಾಗಿದೆ. ಇವರೆಲ್ಲೂ ಮೂಲತಃ ಇಂಗಳೇಶ್ವರ ಗ್ರಾಮದವರು ಎನ್ನಲಾಗಿದೆ.

ರೇವಣಸಿದ್ದ ಶೇಕಣ್ಣಿ (27) ಎಂಬುವವರ ಸ್ಥಿತಿ ಗಂಭೀರವಾಗಿದ್ದು, ವಿಜಯಪುರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಛಿದ್ರ ಛಿದ್ರಗೊಂಡಿದೆ. ಬಸವನಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣಕ್ಕೆ ದಾಖಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಶಿವಮೊಗ್ಗದಲ್ಲಿ ಹಳ್ಳಕ್ಕೆ ಪಲ್ಟಿ ಹೊಡೆದ ಕಾರು

ಶಿವಮೊಗ್ಗ ತಾಲೂಕಿನ ಆಯನೂರು ಬಳಿ ಕಾರೊಂದು ಪಲ್ಟಿ ಹೊಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು ಆಯನೂರು ಬಳಿ ಸೇತುವೆ ಪಕ್ಕದ ಹಳ್ಳಕ್ಕೆ ಪಲ್ಟಿಯಾಗಿದೆ. ಕಾರಿನಲ್ಲಿದ್ದ ಮೂವರು ಮಹಿಳೆಯರು ಮತ್ತು ಓರ್ವ ಬಾಲಕನಿಗೆ ಗಾಯವಾಗಿದ್ದು, ಶಿವಮೊಗ್ಗ ಮಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಚಿತ್ರದುರ್ಗದಿಂದ ಸಾಗರಕ್ಕೆ ತೆರಳುತ್ತಿದ್ದ ಸ್ವಿಫ್ಟ್‌ ಡಿಸೈರ್‌ ಕಾರು ಅಪಘಾತಕ್ಕೀಡಾಗಿದೆ. ಕುಂಸಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಾರನ್ನು ಮೇಲಕ್ಕೆತ್ತಿದ್ದಾರೆ.

ಇದನ್ನೂ ಓದಿ: Road Accident: ಜನ್ಮದಿನದಂದೇ ಯುವತಿಯ ಜೀವ ತೆಗೆದ ಜವರಾಯ; ಕಾರು ಚಾಲಕ ಪರಾರಿ

ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಖಾಸಗಿ ಬಸ್‌

ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್‌ವೊಂದು ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್‌ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಶಿವಮೊಗ್ಗ ತಾಲೂಕಿನ ಪಿಳ್ಳಂಗೆರೆಯಲ್ಲಿ ಗ್ರಾಮದಲ್ಲಿ ಘಟನೆ ನಡೆದಿದೆ. ಖಾಸಗಿ ಬಸ್‌ ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳುತ್ತಿದ್ದಾಗ, ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬ ಡಿಕ್ಕಿ ಹೊಡೆದ ನಂತರ ಓಮ್ನಿ ಕಾರಿಗೂ ಗುದ್ದಿದೆ. ಬಸ್‌ ಚಾಲಕನಿಗೆ ಗಂಭೀರ ಗಾಯವಾಗಿದ್ದು, ಬಸ್ಸಿನಲ್ಲಿದ್ದ ಕೆಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯದಿಂದ ಪಾರಾಗಿದ್ದಾರೆ.

ಎಲ್ಲರನ್ನೂ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನೂ ವಿದ್ಯುತ್‌ ಕಂಬಕ್ಕೆ ಬಸ್‌ ಡಿಕ್ಕಿ ಹೊಡೆಯುತ್ತಿದ್ದಂತೆ ವಿದ್ಯುತ್‌ ತಂತಿ ಬಸ್ ಮೇಲೆ ಬಿದ್ದಿದೆ. ತಂತಿಯಲ್ಲಿ ಇನ್ನೂ ವಿದ್ಯುತ್‌ ಪ್ರವಹಿಸುತ್ತಿತ್ತು. ದಾರಿಯಲ್ಲಿ ತೆರಳುತ್ತಿದ್ದ ವಾಹನ ಸವಾರು ಕೂಡಲೆ ರಕ್ಷಣೆಗೆ ಧಾವಿಸಿದ್ದಾರೆ. ವಿದ್ಯುತ್‌ ಪ್ರವಹಿಸುತ್ತಿರುವುದನ್ನು ಗಮನಿಸಿ ಕೂಡಲೆ ಮೆಸ್ಕಾಂಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದರು. ಇದರಿಂದಾಗಿ ದೊಡ್ಡದೊಂದು ಅನಾಹುತ ತಪ್ಪಿದೆ. ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ತಿರುಪತಿಗೆ ತರಕಾರಿ ಸಾಗಿಸುತ್ತಿದ್ದ ಗೂಡ್ಸ್ ವಾಹನ ಪಲ್ಟಿ

ತಿರುಪತಿಗೆ ತರಕಾರಿ ಸಾಗಿಸುತ್ತಿದ್ದ ಗೂಡ್ಸ್ ವಾಹನವೊಂದು ಪಲ್ಟಿ ಹೊಡೆದಿದೆ. ಚಿಕ್ಕಬಳ್ಳಾಪುರದಿಂದ ತಿರುಪತಿ ದೇವಸ್ಥಾನಕ್ಕೆ ತರಕಾರಿ ಸಾಗಿಸುತ್ತಿದ್ದಾಗ ಈ ಅಪಘಾತ ನಡೆದಿದೆ. ಚಿಂತಾಮಣಿ ನಗರದ ತಿಮ್ಮಸಂದ್ರ ಗ್ರಾಮದ ಬಳಿ ಅಪಘಾತ ಸಂಭವಿಸಿದ್ದು, ಗೂಡ್ಸ್ ಗಾಡಿ ಚಾಲಕ ಹಾಗು ಕ್ಲೀನರ್‌ಗೆ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನು ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಚಿಂತಾಮಣಿ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನಲ್ಲಿ ಘಟನೆ ನಡೆದಿದೆ.

ನಿಂತಿದ್ದ ಆಟೋಗೆ ಬಸ್‌ ಡಿಕ್ಕಿ; ಇಬ್ಬರು ಗಂಭೀರ

ನಿಂತಿದ್ದ ಆಟೋಗೆ ಬಸ್ ಡಿಕ್ಕಿ ಹೊಡೆದು ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಯಾದಗಿರಿ ಯೀಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಯಾದಗಿರಿ ತಾಲೂಕಿನ ಯರಗೋಳ ಗ್ರಾಮದ ಹೊರಭಾಗದ ಚೆಕ್ ಪೋಸ್ಟ್‌ ಹತ್ತಿರ ಅಪಘಾತ ಸಂಭವಿಸಿದೆ. ರಸ್ತೆ ಪಕ್ಕದಲ್ಲಿ ನಿಲ್ಲಿಸಿದಆಟೋಗೆ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ಗುದ್ದಿದೆ. ಕಲಬುರಗಿಯಿಂದ ಯಾದಗಿರಿ ಕಡೆ ಬರುತ್ತಿದ್ದ ಬಸ್ ಚಾಲಕನ ನಿರ್ಲಕ್ಷ್ಯದಿಂದಲೇ ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Rain : ಭಾರಿ ಮಳೆ ಎಫೆಕ್ಟ್‌-ಮಲಗಿದ್ದ‌ ವ್ಯಕ್ತಿ ಮೇಲೆ ಬಿದ್ದ ಗೋಡೆ; ಮರ ಬಿದ್ದು ಕಾರು ಜಖಂ, ಚಾಲಕ ಜಸ್ಟ್‌ ಮಿಸ್‌

Karnataka Rain : ಹಾಸನದಲ್ಲಿ ಭಾರಿ ಮಳೆಗೆ (Rain Effect) ತೆಂಗಿನ ಮರ ಧರೆಗುರುಳಿ ಕಾರು ಜಖಂಗೊಂಡರೆ, ಹಾವೇರಿಯಲ್ಲಿ ಮಲಗಿದ್ದ ವ್ಯಕ್ತಿ ಮೇಲೆ ಗೋಡೆ ಕುಸಿದಿದೆ. ನಾವುಂದ ಬಡಾಕೆರೆಯಲ್ಲಿ ನೆರೆ ಸೃಷ್ಟಿಯಾಗಿದ್ದು, ಜನರನ್ನು ಬೋಟ್‌ ಮೂಲಕ ರಕ್ಷಣೆ ಮಾಡಲಾಗಿದೆ.

VISTARANEWS.COM


on

By

Karnataka Rain
Koo

ಹಾಸನ/ಹಾವೇರಿ : ಹಾಸನದಲ್ಲಿ ಭಾರಿ ವರ್ಷಧಾರೆಗೆ (Karnataka Rain) ತೆಂಗಿನ ಮರ ಧರೆಗುರುಳಿದೆ. ಏಕಾಏಕಿ ಮಾರುತಿ ಓಮ್ನಿ ಕಾರಿನ ಮೇಲೆ‌ ಮರವು ಮುರಿದು ಬಿದ್ದಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಯಸಳೂರು ಗ್ರಾಮದಲ್ಲಿ ಘಟನೆ ನಡೆದಿದೆ. ಯಸಳೂರು ಪೊಲೀಸ್ ಠಾಣೆ ಎದುರು ಚಾಲಕ ಕಾರು ಪಾರ್ಕಿಂಗ್ ಮಾಡಿ ತೆರಳಿದ್ದರು. ಈ ವೇಳೆ ಏಕಾಏಕಿ ಯಸಳೂರು ಪೊಲೀಸ್ ಠಾಣೆ ಆವರಣದಲ್ಲಿದ್ದ ತೆಂಗಿನಮರ ಕಾರಿನ ಮೇಲೆ ಬಿದ್ದು ಜಖಂಗೊಂಡಿದೆ. ಅದೃಷ್ಟವಶಾತ್ ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಹಾವೇರಿಯಲ್ಲಿ ಮನೆಗಳ ಗೋಡೆ ಕುಸಿತ

ಹಾವೇರಿ: ಜಿಟಿ ಜಿಟಿ ಮಳೆಗೆ ಎರಡು ಮನೆಗಳ ಗೋಡೆ ಕುಸಿದಿದೆ. ಹಾವೇರಿಯ ರಟ್ಟಿಹಳ್ಳಿ ತಾಲೂಕಿನ ‌ಮೇದೂರು ಗ್ರಾಮದ ರೇಷ್ಮಾ ನ್ಯಾಮತಿ ಎಂಬುವರ ಮನೆಗೆ ಹಾನಿಯಾಗಿದೆ. ಶಿಗ್ಗಾವಿ ತಾಲೂಕಿನ ಕುನ್ನೂರು ಗ್ರಾಮದ ಮಹಾದೇವಿ ತಳವಾರ ಎಂಬುವರ ಮನೆ ಗೋಡೆ ಕುಸಿದು ಬಿದ್ದಿದೆ. ಮನೆಯಲ್ಲಿ ‌ಮಲಗಿದ್ದ ವೇಳೆ ಈ ಅವಘಡ ನಡೆದಿದೆ. ರಾಮಪ್ಪ ತಳವಾರ ಎಂಬುವರ ಮೇಲೆ ಗೋಡೆ ಕುಸಿದು ಗಾಯಗೊಂಡಿದ್ದಾದೆ. ರಾಮಪ್ಪ ಗಣೇಶನ ಮೂರ್ತಿಗಳನ್ನು ತಯಾರಿಸಿ ಜೀವನ ನಡೆಸುತ್ತಿದ್ದರು. ಮನೆ ಗೋಡೆ ಕುಸಿದ ಹಿನ್ನೆಲೆಯಲ್ಲಿ 300 ಗಣೇಶನ ಮೂರ್ತಿಗಳಿಗೆ ಹಾನಿಯಾಗಿದೆ.

ನಾವುಂದ ಬಡಾಕೆರೆಯಲ್ಲಿ ನೆರೆ; ಬೋಟ್‌ ಮೂಲಕ ರಕ್ಷಣೆ

ಉಡುಪಿ ಜಿಲ್ಲೆಯಲ್ಲಿ ಸುರಿದ ಮಳೆಯಿಂದಾಗಿ ನಾವುಂದ ಬಡಾಕೆರೆಯಲ್ಲಿ ಮತ್ತೆ ನೆರೆ ಸೃಷ್ಟಿಯಾಗಿದೆ. ಬೈಂದೂರು ತಾಲೂಕಿನ ನಾವುಂದದಲ್ಲಿ ಮಳೆಗಾಲದಲ್ಲಿ 4 ಬಾರಿ ನೆರೆ ಕಟ್ಟಿಟ್ಟ ಬುತ್ತಿಯಾಗಿದೆ. ನೆರೆಯಿಂದಾಗಿ ನೂರಾರು ಎಕರೆ ಕೃಷಿ ಭೂಮಿ ಜಲಾವೃತಗೊಂಡಿದೆ. ನಾವುಂದ ಬಡಾಕೆರೆಯಲ್ಲಿ ಹಲವಾರು ಮನೆಗಳು ಜಲಾವೃತಗೊಂಡಿದ್ದು, ದೋಣಿ ಮೂಲಕ ರಕ್ಷಣೆ ಮಾಡಲಾಗಿದೆ.

ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನಾದ್ಯಂತ ನೆರೆ ಹಾವಳಿ ಸೃಷ್ಟಿಯಾಗಿದೆ. ಸೀತಾ ನದಿ ತುಂಬಿ ಹರಿಯುತ್ತಿದ್ದು, ಕೋಟ ಬನ್ನಾಡಿ ಭಾಗದಲ್ಲಿ ನೆರೆಯಾಗಿದೆ. ಹೀಗಾಗಿ ಬನ್ನಾಡಿ, ಬೇಳೂರು, ಕೋಟ ವ್ಯಾಪ್ತಿಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಭೇಟಿ ನೀಡಿದರು. ಜತೆಗೆ ಡಿಸಿ ವಿದ್ಯಾಕುಮಾರಿ ,ಸಿಇಒ ಪ್ರತೀಕ್ ಬಾಯಲ್ ಸಾಥ್ ನೀಡಿದರು. ಶಿರಿಯಾರದಲ್ಲಿ ನೆರೆಪೀಡಿತರನ್ನು ಎತ್ತರದ ಪ್ರದೇಶಕ್ಕೆ ಶಿಫ್ಟ್ ಮಾಡಲಾಯಿತು.

ಭಾರಿ ಮಳೆಗೆ ಬಾಯ್ಬಿಟ್ಟ ಭೂಮಿ!

ಭಾರಿ ಮಳೆಗೆ ಏಕಾಏಕಿ ಮನೆಯೊಂದರ ಪಕ್ಕ ಅಪಾಯಕಾರಿ ಗುಂಡಿ ನಿರ್ಮಾಣವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ರಾಜಾರಾಂಪುರ ಕಾಲನಿಯಲ್ಲಿ ಘಟನೆ ನಡೆದಿದೆ. ರಾಜಾರಾಂಪರ ಕಾಲನಿ ನಿವಾಸಿ ವಿಶೇಷ ಚೇತನ ಬಾಳಪ್ಪ ಎಂಬುವವರ ಮನೆ ಪಕ್ಕ ಸುಮಾರು ಒಂದು ಫೀಟ್ ಅಂತರದಲ್ಲೇ ಭೂಮಿ ಬಾಯ್ಬಿಟ್ಟಿದೆ. ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಸುಮಾರು 15-20ಫೀಟ್ ಆಳವಾಗದ ಸುರಂಗದ ರೀತಿಯ ಗುಂಡಿ ನಿರ್ಮಾಣವಾಗಿದೆ. ಜತೆಗೆ ಗುಂಡಿ ಒಳಗಿನ ಸುರಂಗದಿಂದ ನೀರು ಉಕ್ಕಿ ಬರುತ್ತಿದೆ. ಅಪಾಯದಂಚಿನಲ್ಲಿರುವ ಸಂಪಾಜೆ ಗ್ರಾಮದ ನಿವಾಸಿ ಬಾಳಪ್ಪ ಮನೆಯವರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗಿದೆ.

ಕೆರೆಯಂತಾದ ರೈಲ್ವೆ ಅಂಡರ್‌ ಪಾಸ್‌

ರಾಯಚೂರಲ್ಲಿ ರಾತ್ರಿಯಿಡೀ ಸುರಿದ ಮಳೆಗೆ ಅವಾಂತರ ಸೃಷ್ಟಿಯಾಗಿದೆ. ನೀರು ನಿಂತು ರೈಲ್ವೆ ಅಂಡರ್ ಪಾಸ್ ಕೆರೆಯಂತಾಗಿತ್ತು. ಕರೇಕಲ್ ಗ್ರಾಮದ ರೈಲ್ವೆ ಅಂಡರ್ ಪಾಸ್‌ನಲ್ಲಿ ನೀರು ನಿಂತಿದ್ದರಿಂದ ವಾಹನ ಸವಾರರು ಪರದಾಡಿದರು. ಇತ್ತ ವರದಾ ನದಿಯಲ್ಲಿ ನೀರಿನ ಹರಿವು ಹೆಚ್ಚಾಗುತ್ತಿದ್ದು, ಜೀವದ ಹಂಗು ತೊರೆದು ಜನರು ಬ್ರಿಜ್ಡ್ ಕಂ ಬ್ಯಾರೇಜ್ ಮೇಲೆ ವಾಹನ ಚಲಾಯಿಸುತ್ತಿದ್ದಾರೆ. ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಕಳಸೂರು ಗ್ರಾಮದ ಬ್ರಿಜ್ಡ್ ಕಂ ಬ್ಯಾರೇಜ್ ಮೇಲೆ ನೀರು ಹರಿಯುತ್ತಿದೆ. ಕಳಸೂರು ಮತ್ತು ಕೊಳೂರ ನಡುವೆ ಸಂಪರ್ಕ ಕಲ್ಪಿಸುವ ಸೇತುವೆ ಇದಾಗಿದೆ.

ಅವೈಜ್ಞಾನಿಕ ಕಾಮಗಾರಿಯಿಂದ ರಸ್ತೆ ಕುಸಿತ

ಅವೈಜ್ಞಾನಿಕ ಕಾಮಗಾರಿಯಿಂದ ಭಾರಿ ಮಳೆಗೆ ರಸ್ತೆ ಕುಸಿದಿದೆ. ನಿಂತ ಜಾಗದಲ್ಲಿಯೇ ಲಾರಿಯೊಂದು ಒಂದು ಬದಿಗೆ ಜಾರಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಸರಕು ತುಂಬಿದ್ದ ಲಾರಿ ರಸ್ತೆ ಪಕ್ಕಕ್ಕೆ ಜಾರಿದ್ದು, ತಡೆಗೋಡೆ ಇಲ್ಲದಿದ್ದರೆ ಪ್ರಪಾತಕ್ಕೆ ಉರುಳಿ ಬೀಳುವ ಸಾಧ್ಯತೆ ಇದೆ. ಅದೃಷ್ಟವಶಾತ್ ಯಾವುದೇ ಅಪಾಯವಾಗಿಲ್ಲ. ಹಾಸನ ರಾಷ್ಟ್ರೀಯ ಹೆದ್ದಾರಿ 75 ರ ಸಕಲೇಶಪುರ ತಾಲ್ಲೂಕಿನ ಬಾಳ್ಳುಪೇಟೆ ಬಳಿ ಘಟನೆ ನಡೆದಿದೆ. ಸ್ಥಳಕ್ಕೆ ಸಕಲೇಶಪುರ ಎಸಿ ಶೃತಿ ಹಾಗೂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಳೆ ಅವಾಂತರ ಮುಂದುವರಿದಿದೆ. ಭಾರಿ ಮಳೆಗೆ ಗ್ರಾಮದ ಮುಖ್ಯ ರಸ್ತೆ ನದಿಯಂತಾಗಿತ್ತು. ಚಿಕ್ಕಮಗಳೂರು ತಾಲೂಕಿನ ಬಾಸಪುರ ಗ್ರಾಮದಲ್ಲಿ ಗುಡ್ಡದಿಂದ ರಸ್ತೆಗೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಬಾಸಾಪುರ ಸೇರಿ ಹಲವು ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ತೋಟಕ್ಕೆ ನೀರು ನುಗ್ಗಿ ಕಾಫಿ ಬೆಳೆ ನಾಶವಾಗಿದೆ.

Rain Effect.. karnataka Rain Effect

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Rain Effect : ಭಾರಿ ಮಳೆಗೆ ಶಿರೂರು ಗುಡ್ಡ ಕುಸಿತ; ಮಣ್ಣಿನಡಿ ಸಿಲುಕಿದ್ದ ಮಹಿಳೆ ಮೃತದೇಹ ಪತ್ತೆ

Rain Effect : ಉತ್ತರಕನ್ನಡದಲ್ಲಿ ಭಾರಿ ಮಳೆಗೆ (Karnataka Rain Effect) ರಾಷ್ಟ್ರೀಯ ಹೆದ್ದಾರಿ 66ರ ಶಿರೂರು ಬಳಿ ಭಾರೀ ಗುಡ್ಡಕುಸಿತ (Karnataka Rain) ಉಂಟಾಗಿದ್ದು, ಮಹಿಳೆಯೊಬ್ಬರ ಮೃತದೇಹ ಪತ್ತೆಯಾಗಿದೆ.

VISTARANEWS.COM


on

By

Rain Effect
Koo

ಉತ್ತರಕನ್ನಡ: ಉತ್ತರಕನ್ನಡದಲ್ಲಿ ಭಾರಿ ಮಳೆಗೆ (Karnataka Rain Effect) ರಾಷ್ಟ್ರೀಯ ಹೆದ್ದಾರಿ 66ರ ಶಿರೂರು ಬಳಿ ಭಾರೀ ಗುಡ್ಡಕುಸಿತ (Karnataka Rain) ಉಂಟಾಗಿತ್ತು. ಧಾರಾಕಾರ ಮಳೆಯಿಂದಾಗಿ ಹೆದ್ದಾರಿ ಪಕ್ಕದ ಗುಡ್ಡ ಸಡಿಲಗೊಂಡು, ಅಂಕೋಲಾ ತಾಲೂಕಿನ ಶಿರೂರು ಬಳಿ ಅಂಗಡಿಯೊಂದರ ಮೇಲೆ ಬಿದ್ದಿತ್ತು. ಇದೀಗ ಮಣ್ಣಿನಡಿ ಸಿಲುಕಿ ಮೃತಪಟ್ಟ ಮಹಿಳೆಯೊಬ್ಬರ ಮೃತದೇಹ (Rain Effect) ಪತ್ತೆಯಾಗಿದೆ.

ಉತ್ತರ ಕನ್ನಡದ ಅಂಕೋಲಾ ಗುಡ್ಡ ಕುಸಿತ ಪ್ರದೇಶಕ್ಕೆ ಕುಮಟಾ ಎಸಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಂಕೋಲಾದ ರಾಷ್ಟ್ರೀಯ ಹೆದ್ದಾರಿ 66ರ ಶಿರೂರು ಬಳಿ ಗುಡ್ಡ ಕುಸಿದಿದೆ. ಗುಡ್ಡದ ಮಣ್ಣಿನಡಿ 10ಕ್ಕೂ ಅಧಿಕ ಮಂದಿ ಸಿಲುಕಿರುವ ಶಂಕೆ ಇದ್ದು, ಒಂದೇ ಕುಟುಂಬದ ಐವರು ಸೇರಿ ಹತ್ತಕ್ಕೂ ಅಧಿಕ ಮಂದಿ ಕಣ್ಮರೆಯಾಗಿದ್ದಾರೆ ಎನ್ನಲಾಗಿದೆ. ಗುಡ್ಡ ಕುಸಿದ ರಭಸಕ್ಕೆ ನದಿಗೆ 2 ಗ್ಯಾಸ್ ಟ್ಯಾಂಕರ್‌ಗಳು ಕೊಚ್ಚಿ ಹೋಗಿದೆ. ಗುಡ್ಡದ ಕೆಳಗಿದ್ದ ಲಾರಿ, ಮತ್ತೊಂದು ಟ್ಯಾಂಕರ್‌ ಹಾಗೂ ಚಾಲಕರು ಪಾರಾಗಿದ್ದಾರೆ.

ಅಂಕೋಲಾ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರದಲ್ಲಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾಹಿತಿ ನೀಡಿದ್ದಾರೆ. ಅವಘಡದಲ್ಲಿ 7 ಮಂದಿ ಸಾವನ್ನಪ್ಪಿರಬಹುದು, ಆದರೆ ಇನ್ನೂ ಕೂಡಾ ಖಚಿತ ಮಾಹಿತಿ ಬರಬೇಕಿದೆ ಎಂದಿದ್ದಾರೆ. ಸದ್ಯ ಕಾರ್ಯಾಚರಣೆ ನಡೆಯುತ್ತಿರುವುದರಿಂದ ಎಷ್ಟು ಸಾವಾಗಿದೆ ಹೇಳುವುದು ಸಾಧ್ಯವಿಲ್ಲ. ಕಾರ್ಯಾಚರಣೆಗೆ ಅಗತ್ಯ ಸಲಕರಣೆಗಳು ಸಾಕಾಗುತ್ತಿಲ್ಲ. ಹೀಗಾಗಿ ಕುಮಟಾ ಹಾಗೂ ಅಂಕೋಲಾ ಎರಡೂ ಕಡೆಯಿಂದ ಕಾರ್ಯಾಚರಣೆಗೆ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಲು ಜಿಲ್ಲಾಧಿಕಾರಿಗೆ ಸೂಚಿಸಿದ್ದೇನೆ. ಜೆಸಿಬಿ, ಹಿಟಾಚಿ ಮತ್ತಿತರ ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗುವುದು ಎಂದರು.

ಇದನ್ನೂ ಓದಿ: Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

ಭಾರಿ ಮಳೆಗೆ ವರ್ಷದ ಹಿಂದೆ ನಿರ್ಮಿಸಿದ ಸೇತುವೆ ಕುಸಿತ

ಉಡುಪಿಯ ಕುಂದಾಪುರ ತಾಲೂಕು ಹಾಲಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭರಣಕೊಳ್ಕಿಯಲ್ಲಿ ವರ್ಷದ ಹಿಂದೆ ನಿರ್ಮಿಸಿದ ಸೇತುವೆ ಭಾರಿ ಮಳೆಗೆ ಕುಸಿದಿದೆ. ಹಾಲಾಡಿಯಿಂದ ಜೋರಾಡಿ ಮುದ್ದೂರು ಸಂಪರ್ಕ ಕಲ್ಪಿಸುವ ಸೇತುವೆ ಇದಾಗಿದೆ. ಶಾಲಾ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು ಇದೆ ಸೇತುವೆಯನ್ನೇ ಬಳಸಬೇಕಿತ್ತು. ಕಳಪೆ ಕಾಮಗಾರಿ ಹಿನ್ನೆಲೆಯಲ್ಲಿ ಸೇತುವೆ ಕುಸಿದಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಸುಮಾರು 25 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿದ್ದ ಸೇತುವೆ ವರ್ಷದ ಒಳಗೆ ನೀರುಪಾಲಾಗಿದೆ.

ಚಿಕ್ಕಮಗಳೂರಲ್ಲಿ ಮರ ಬಿದ್ದು ಮನೆಗಳು ಜಖಂ

ಪುನರ್ವಸು ಮಳೆ ಅಬ್ಬರಕ್ಕೆ ಚಿಕ್ಕಮಗಳೂರು ತತ್ತರಿಸಿ ಹೋಗಿದೆ. ಭಾರೀ ಗಾಳಿ-ಮಳೆಗೆ ಮರಗಳು ಧರೆಗುರುಳುತ್ತಿವೆ. ಮೂಡಿಗೆರೆ ತಾಲೂಕಿನ ಬಾಳೂರು ಗುಡ್ಡಟ್ಟಿ ಗ್ರಾಮದಲ್ಲಿ ಮನೆ ಮೇಲೆ ಮರ ಬಿದ್ದಿದೆ. ನವೀನ್, ಶೇಷಪ್ಪ ಎಂಬುವರಿಗೆ ಸೇರಿದ ಮನೆಗಳು ಜಖಂಗೊಂಡಿವೆ. ಮನೆಯಲ್ಲಿದ್ದ ಗೃಹ ಉಪಯೋಗಿ ವಸ್ತುಗಳು ನಾಶವಾಗಿವೆ. ಮೂಡಿಗೆರೆ ತಾಲೂಕಿನ ಕೆಳಗೂರು ಗ್ರಾಮದ ಮೂಲೆಮನೆ ಎಸ್ಟೇಟ್‌ನಲ್ಲಿ ಭಾರಿ ಗಾಳಿ, ಮಳೆಗೆ ಮನೆಯ ಮೇಲೆ ಬೃಹತ್ ಗಾತ್ರದ ಮರ ಬಿದ್ದಿತ್ತು. ಪರಿಣಾಮ ಮನೆಯಲ್ಲಿದ್ದ ಇಬ್ಬರಿಗೆ ಗಂಭೀರ ಗಾಯವಾಗಿದೆ. ಮನೆಯಲ್ಲಿದ್ದ ಪೂರ್ಣಿಮಾ, ಪ್ರಣಬ್ ಎಂಬುವವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇತ್ತ ಭಾರೀ ಮಳೆಯಿಂದ ಹೇಮಾವತಿ ನದಿ ಮೈದುಂಬಿ ಹರಿಯುತ್ತಿದೆ. ಮೂಡಿಗೆರೆ ತಾಲೂಕಿನ ಜಾವಳಿ ಗ್ರಾಮದಲ್ಲಿ ಹುಟ್ಟುವ ಹೇಮಾವತಿ ನದಿ ಗೊರೂರು ಡ್ಯಾಂ ಮೂಲಕ ಕೆ.ಆರ್.ಎಸ್. ಡ್ಯಾಂ ಸೇರಲಿದೆ.

ತುಂಗಾ ನದಿಯಲ್ಲಿ ಮುಳುಗಿದ ಮಂಟಪ

ಮಲೆನಾಡು ಭಾಗದಲ್ಲಿ ನಿರಂತರ ವರ್ಷಧಾರೆ ಹಿನ್ನೆಲೆಯಲ್ಲಿ ತುಂಗಾ ನದಿ ಉಕ್ಕಿ ಹರಿಯುತ್ತಿದ್ದು, ಮಂಟಪ ಮುಳುಗಿದೆ. ಶಿವಮೊಗ್ಗ ನಗರ ಮಧ್ಯೆ ಸಾಗುವ ತುಂಗಾ ನದಿಗೆ ತಾಗಿಕೊಂಡಿರುವ ಮಂಟಪ ಮುಳುಗಿದೆ. ಶಿವಮೊಗ್ಗ ನಗರದ ಕೋರ್ಪಲಯ್ಯನ ಛತ್ರದ ಬಳಿಯಿರುವ ಮಂಟಪ ಸಂಪೂರ್ಣವಾಗಿ ಮುಳುಗಿದೆ. ನದಿ ಪಾತ್ರದಲ್ಲಿ ಹೆಚ್ಚು ಜನರು ಓಡಾಡದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. ಎಸ್‌ಪಿ ಮಿಥುನ್ ಕುಮಾರ್ ನದಿ ಪಾತ್ರದಲ್ಲಿ ಪೊಲೀಸರ ಬೀಟ್ ವ್ಯವಸ್ಥೆ ಮಾಡಿದ್ದಾರೆ.

ದತ್ತ ಮಂದಿರಕ್ಕೆ ಸುತ್ತುವರಿದ ಕೃಷ್ಣೆ

ಮಹಾರಾಷ್ಟ್ರದ ಪ್ರಸಿದ್ಧ ದೇವಸ್ಥಾನ ದತ್ತ ಮಂದಿರಕ್ಕೆ ಕೃಷ್ಣೆ ನದಿ ಸುತ್ತುವರಿದಿದೆ. ಕೊಲ್ಹಾಪುರ ಜಿಲ್ಲೆಯ ಶಿಳೋಳ‌ ತಾಲೂಕಿನ‌ ನರಸಿಂಹವಾಡಿಯಲ್ಲಿರುವ ದತ್ತ ಮಂದಿರ ಜಲಾವೃತಗೊಂಡಿದೆ. ನರಸಿಂಹವಾಡಿ ಕೃಷ್ಣಾ ಹಾಗೂ ಪಂಚಗಂಗಾ ನದಿಗಳ ಸಂಗಮಸ್ಥಾನವಾಗಿದೆ. ಜಲಾವೃತವಾಗಿದ್ದರೂ ದೇವಸ್ಥಾನಕ್ಕೆ ಭಕ್ತರ ದಂಡು ಹರಿದು ಬಂಧಿದೆ. ನಡು ಮಟ್ಟದ ನೀರಲ್ಲಿಯೇ ಪ್ರದಕ್ಷಿಣೆ ಹಾಕುತ್ತಿದ್ದಾರೆ.

ಕೋಟ ಸಾಹೇಬ್ರಕಟ್ಟೆ ರಾಜ್ಯ ಹೆದ್ದಾರಿ ಸಂಪರ್ಕ ಬಂದ್

ಉಡುಪಿಯ ಕೋಟ ಸಾಹೇಬ್ರಕಟ್ಟೆ ರಾಜ್ಯ ಹೆದ್ದಾರಿ ಸಂಪರ್ಕ ಬಂದ್ ಆಗಿದೆ. ಕೋಟ ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ಬನ್ನಾಡಿಹೊಳೆ ತುಂಬಿ ಹರಿದಿದೆ. ರಾಜ್ಯ ಹೆದ್ದಾರಿ ಬನ್ನಾಡಿ ಭಾಗದಲ್ಲಿ ಪ್ರತಿ ವರ್ಷವೂ ಕಾಣಿಸಿಕೊಳ್ಳುವ ನೆರೆಹಾವಳಿಯಿಂದಾಗಿ ಸಂಚಾರ ಅಸಾಧ್ಯವಾಗಿರುವ ಹಿನ್ನೆಲೆಯಲ್ಲಿ ಹೆದ್ದಾರಿ ಬಂದ್ ಮಾಡಲಾಗಿದೆ. ಸ್ಥಳಕ್ಕೆ ಕುಂದಾಪುರ ಎಸಿ ರಶ್ಮಿ ಭೇಟಿ ನೀರಿ ಪರಿಶೀಲನೆ ನಡೆಸಿದ್ದಾರೆ. ಇತ್ತ ಕುಂದಾಪುರ ವಾರಾಹಿ ಸೌಪರ್ಣಿಕ ನದಿ ಭರ್ತಿಯಾಗಿದೆ. ಕುಂದಾಪುರದ ನದಿ ಸಾಲಿನಲ್ಲಿ ನೆರೆಯ ವಾತಾವರಣ ನಿರ್ಮಾಣವಾಗಿದೆ. ಬೇಳೂರು ದೇಲಟ್ಟು ಭಾಗದಿಂದ ಜನರ ಸ್ಥಳಾಂತರ ಮಾಡಲಾಗಿದೆ. ಕುಂದಾಪುರ ಅಗ್ನಿಶಾಮಕ ದಳದ ಕಾರ್ಯಾಚರಣೆ ನಡೆಸುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

Karnataka Rain: ಉತ್ತರ ಕನ್ನಡದಲ್ಲಿ ವಿಪರೀತ ಮಳೆಯಾಗುತ್ತಿದ್ದು, ಸಾವು-ನೋವಿಗೆ ಕಾರಣವಾಗುತ್ತಿದೆ. ಶಿರೂರಿನಲ್ಲಿ ಗುಡ್ಡ ಕುಸಿತ ಉಂಟಾಗಿದ್ದರೆ, ಇತ್ತ ಕಿನ್ನರ ಗ್ರಾಮದಲ್ಲಿ ಮನೆ ಮೇಲೆ ಗುಡ್ಡ ಬಿದ್ದು, ಗೋಡೆ ಕುಸಿದು ವೃದ್ಧರೊಬ್ಬರು ಮೃತಪಟ್ಟಿದ್ದಾರೆ.

VISTARANEWS.COM


on

By

Karnataka Rain
Koo

ಉತ್ತರಕನ್ನಡ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಕಿನ್ನರ ಗ್ರಾಮದಲ್ಲಿ ಭಾರಿ ಮಳೆಗೆ (Karnataka Rain) ಮನೆ ಮೇಲೆ ಗುಡ್ಡ ಬಿದ್ದ ಪರಿಣಾಮ ಗೋಡೆ ಕುಸಿದಿದೆ. ಮಣ್ಣಿನಡಿ ಸಿಲುಕಿದ್ದ ವ್ಯಕ್ತಿಯೊಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ತಿಕರ್ಸ್ ಗುರವ (60) ಮೃತ ದುರ್ದೈವಿ.

ಮನೆಯ ಮೇಲೆ ಏಕಾಏಕಿ ಗುಡ್ಡ ಕುಸಿದ ಪರಿಣಾಮ ಗೋಡೆಯಡಿ ಸಿಲುಕಿದ ತಿಕರ್ಸ್‌ ತಲೆಗೆ ಗಂಭೀರ ಪೆಟ್ಟಾಗಿತ್ತು. ಏಕಾಏಕಿ ಮನೆ ಗೋಡೆ ಕುಸಿದ ಪರಿಣಾಮ ಹೊರ ಬರಲು ಆಗದೆ ಮೃತಪಟ್ಟಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಸುಮಾರು 3 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಮೃತದೇಹ ಹೊರತೆಗೆದಿದ್ದಾರೆ. ಸ್ಥಳದಲ್ಲಿ ತಹಶಿಲ್ದಾರ್, ಕಾರವಾರ ಡಿವೈಎಸ್ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಶಿರೂರು ಗುಡ್ಡ ಕುಸಿತ ಸ್ಥಳಕ್ಕೆ ಅಧಿಕಾರಿಗಳು ದೌಡು

ಇನ್ನೂ ಉತ್ತರ ಕನ್ನಡದ ಅಂಕೋಲಾ ಗುಡ್ಡ ಕುಸಿತ ಪ್ರದೇಶಕ್ಕೆ ಕುಮಟಾ ಎಸಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಂಕೋಲಾದ ರಾಷ್ಟ್ರೀಯ ಹೆದ್ದಾರಿ 66ರ ಶಿರೂರು ಬಳಿ ಗುಡ್ಡ ಕುಸಿದಿದೆ. ಗುಡ್ಡದ ಮಣ್ಣಿನಡಿ 10ಕ್ಕೂ ಅಧಿಕ ಮಂದಿ ಸಿಲುಕಿರುವ ಶಂಕೆ ಇದ್ದು, ಒಂದೇ ಕುಟುಂಬದ ಐವರು ಸೇರಿ ಹತ್ತಕ್ಕೂ ಅಧಿಕ ಮಂದಿ ಕಣ್ಮರೆಯಾಗಿದ್ದಾರೆ. ಗುಡ್ಡ ಕುಸಿದ ರಭಸಕ್ಕೆ ನದಿಗೆ 2 ಗ್ಯಾಸ್ ಟ್ಯಾಂಕರ್‌ಗಳು ಕೊಚ್ಚಿ ಹೋಗಿದೆ. ಗುಡ್ಡದ ಕೆಳಗಿದ್ದ ಲಾರಿ, ಮತ್ತೊಂದು ಟ್ಯಾಂಕರ್‌ ಹಾಗೂ ಚಾಲಕರು ಪಾರಾಗಿದ್ದಾರೆ.

ಅಂಕೋಲಾ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರದಲ್ಲಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾಹಿತಿ ನೀಡಿದ್ದಾರೆ. ಅವಘಡದಲ್ಲಿ 7 ಮಂದಿ ಸಾವನ್ನಪ್ಪಿರಬಹುದೆಂದು ಮಾಹಿತಿ ಲಭ್ಯವಾಗಿದೆ. ಇನ್ನೂ ಕೂಡಾ ಖಚಿತ ಮಾಹಿತಿ ಬರಬೇಕಿದೆ. ಸದ್ಯ ಕಾರ್ಯಾಚರಣೆ ನಡೆಯುತ್ತಿರುವುದರಿಂದ ಎಷ್ಟು ಸಾವಾಗಿದೆ ಹೇಳುವುದು ಸಾಧ್ಯವಿಲ್ಲ. ಕಾರ್ಯಾಚರಣೆಗೆ ಅಗತ್ಯ ಸಲಕರಣೆಗಳು ಸಾಕಾಗುತ್ತಿಲ್ಲ. ಹೀಗಾಗಿ ಕುಮಟಾ ಹಾಗೂ ಅಂಕೋಲಾ ಎರಡೂ ಕಡೆಯಿಂದ ಕಾರ್ಯಾಚರಣೆಗೆ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಲು ಜಿಲ್ಲಾಧಿಕಾರಿಗೆ ಸೂಚಿಸಿದ್ದೇನೆ. ಜೆಸಿಬಿ, ಹಿಟಾಚಿ ಮತ್ತಿತರ ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗುವುದು ಎಂದರು.

ಇದನ್ನೂ ಓದಿ: Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

ಶಿವಮೊಗ್ಗದಲ್ಲಿ ಮನೆ ಮೇಲೆ ಮರ ಬಿದ್ದು ಹಾನಿ

ಶಿವಮೊಗ್ಗದಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಹೊಸನಗರ ತಾಲೂಕಿನ ಯಡೂರು ಗ್ರಾಮದಲ್ಲಿ ಮನೆಗೆ ಹಾನಿಯಾಗಿದೆ. ಮನೆ ಮೇಲೆ ಮರ ಬಿದ್ದು, ಚಾವಣಿ ಕುಸಿದು ಬಿದ್ದಿದೆ. ಜತೆಗೆ ನೀರು ನುಗ್ಗಿ, ಮನೆಯಲ್ಲಿರುವ ಗೃಹೋಪಯೋಗಿ ವಸ್ತುಗಳು ನೀರುಪಾಲಾಗಿದೆ. ನಿಂಗಮ್ಮ ಎಂಬುವರಿಗೆ ಸೇರಿದ ಮನೆಯು ಹಾನಿಯಾಗಿದ್ದು, ಸೂಕ್ತ ಪರಿಹಾರಕ್ಕೆ ಒತ್ತಾಯಿಸಿದ್ದಾರೆ.

ಹಾಸನದಲ್ಲಿ ಕರೆಂಟ್‌ ಕಟ್‌

ಹಾಸನ ಸುತ್ತಮುತ್ತ ಭಾರಿ ಮಳೆಯಾಗುತ್ತಿದ್ದು, ಹಲವೆಡೆ ಅಪಾರ ಪ್ರಮಾಣದ ಹಾನಿಯಾಗಿದೆ. ಸಕಲೇಶಪುರ ತಾಲೂಕಿನ ಮಾವಿನೂರು, ಕಾಗಿನೆರೆ ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ವಿದ್ಯುತ್ ಇಲ್ಲದೆ ಗ್ರಾಮಸ್ಥರು ಪರದಾಡುತ್ತಿದ್ದಾರೆ. ಮತ್ತೊಂದು ಕಡೆ ಸಕಲೇಶಪುರ ತಾಲೂಕಿನ ಗಡಿ ಗ್ರಾಮ ತಂಬಲಗೇರಿಯಲ್ಲಿ ಮನೆಯ ಕಾಂಪೌಂಡ್ ಕುಸಿದು ಬಿದ್ದಿದೆ. ಪುಟ್ಟೇಗೌಡ ಎಂಬುವವರ ಸೇರಿದ ಮನೆಯು ಹಾನಿಯಾಗಿದೆ. ಜತೆಗೆ ಗದ್ದೆಗಳಿಗೆ ಮಣ್ಣು ಕುಸಿದು, ಭತ್ತ ಸಸಿಗಳು ಮಣ್ಣಿನಡಿ ಸಿಲುಕಿದೆ. ತಂಬಲಗೇರಿ ಗ್ರಾಮದ ಲೋಕೇಶ್ ಹಾಗೂ ಇತರೆ ಗ್ರಾಮಸ್ಥರಿಗೆ ಸೇರಿದ ಭತ್ತದ ಗದ್ದೆಗಳು ಕೆರೆಯಂತಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಚಿಕ್ಕಮಗಳೂರು, ಹಾಸನದಲ್ಲಿ ಭಾರಿ ಮಳೆಗೆ ಮನೆಗಳು ನೆಲಸಮ

Karnataka Rain : ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಮಳೆಗೆ ಜನರು ಅಕ್ಷರಶಃ ಕಂಗಲಾಗಿದ್ದಾರೆ. ಧಾರಾಕಾರವಾಗಿ ಸುರಿಯುತ್ತಿರುವ ಮಳೆಗೆ ಮನೆಗಳು ನೆಲಸಮವಾಗಿವೆ. ಕೆಲವೆಡೆ ಸೇತುವೆಗಳು ಮುಳುಗಡೆಯಾಗಿದೆ.

VISTARANEWS.COM


on

By

karnataka rain
Koo

ಚಿಕ್ಕಮಗಳೂರು/ಹಾಸನ: ಭಾರಿ ಮಳೆಗೆ (Karnataka Rain) ವಾಸದ ಮನೆಯ ಗೋಡೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಮನೆಯಲ್ಲಿದ್ದ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ, ಕಬ್ಬಿನಗದ್ದೆ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ಕಮಲ ಎಂಬುವವರಿಗೆ ಸೇರಿದ ಮನೆ ಇದಾಗಿದ್ದು, ವಿಶೇಷ ಚೇತನ ಹಾಗೂ ಮಾತು ಬಾರದ ಕಮಲ ತಾಯಿಯೊಂದಿಗೆ ವಾಸವಿದ್ದರು. ಸದ್ಯ ಮನೆ ಕಳೆದುಕೊಂಡು ಕಮಲ ಕುಟುಂಬಸ್ಥರು ಕಂಗಲಾಗಿದ್ದಾರೆ.

ಇತ್ತ ಚಿಕ್ಕಮಗಳೂರಿನಲ್ಲೂ ಮಳೆಯ ಅವಾಂತರಕ್ಕೆ ಮನೆಯೊಂದು ಕುಸಿದು ಬಿದ್ದಿದೆ. ಮನೆಯಲ್ಲಿದ್ದ ಪೀಠೋಪಕರಣ, ದವಸ, ಧಾನ್ಯ ನಾಶವಾಗಿವೆ. ಮೂಡಿಗೆರೆ ತಾಲೂಕಿನ ಬಣಕಲ್ ಪಟ್ಟಣದಲ್ಲಿ ಘಟನೆ ನಡೆದಿದೆ. ಬಣಕಲ್‌ನ ತಾಹಿರಾ ಎಂಬವರಿಗೆ ಸೇರಿದ ಮನೆ ನೆಲಸಮವಾಗಿದೆ. ಮನೆಯಲ್ಲಿದ್ದವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಳೆಯ ಆರ್ಭಟಕ್ಕೆ ಭಾರೀ ಪ್ರಮಾಣದಲ್ಲಿ ಭೂ ಕುಸಿತ ಉಂಟಾಗಿದೆ. ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಕುಂಚೂರು ಘಾಟಿ ಬಳಿ ಘಟನೆ ನಡೆದಿದೆ. ಹೀಗಾಗಿ ಸ್ಥಳೀಯರು ರಸ್ತೆಗೆ ಕಲ್ಲು ಇಟ್ಟು ಎಚ್ಚರಿಕೆ ನೀಡಿದ್ದಾರೆ. ಭೂಮಿ ಮತ್ತಷ್ಟು ಕುಸಿದು ಬೀಳುತ್ತಿರುವ ಆತಂಕ ಎದುರಾಗಿದೆ.

karnataka Rain

ಚಿಕ್ಕಮಗಳೂರಲ್ಲಿ ರಸ್ತೆ ಅಡ್ಡಲಾಗಿ ಬಿದ್ದ ಬೃಹತ್‌ ಮರ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಆರ್ಭಟಕ್ಕೆ ರಸ್ತೆಗೆ ಅಡ್ಡಲಾಗಿ ಬೃಹತ್ ಗಾತ್ರದ ಮರಗಳು ಬಿದ್ದಿದೆ. ಬಾಳೆಹೊನ್ನೂರು ಮೆಲ್ವಾಲ್ ರಸ್ತೆಯಲ್ಲಿ ಭಾರೀ ಗಾತ್ರದ ಮರ ಬಿದ್ದು, ಹಲವೆಡೆ ವಿದ್ಯುತ್ ಕಂಬಗಳು ಧರೆಗುರುಳಿದೆ. ಕೆಲಕಾಲ ರಸ್ತೆ ಸಂಪರ್ಕ ಕಡಿತಗೊಂಡು ಸವಾರರು ಪರದಾಡಬೇಕಾಯಿತು.

ಚಿಕ್ಕಮಗಳೂರಿನ ಕುದುರೆಮುಖ ವ್ಯಾಪ್ತಿಯ ಘಟ್ಟ ಪ್ರದೇಶಗಳಲ್ಲಿ ಮಳೆ ಸುರಿಯುತ್ತಿದ್ದು, ಭದ್ರಾ ನದಿ ಅಪಾಯದ ಮಟ್ಟ ಮೀರಿದೆ. ಕಳಸ ತಾಲೂಕಿನ ಹೊರನಾಡು ಬಳಿಯ ಹೆಬ್ಬಾಳೆ ಸೇತುವೆಯಾಗಿದ್ದು, ಹೊರನಾಡು-ಕಳಸ ಸಂಪರ್ಕ ಕಡಿತಗೊಂಡಿದೆ. ಕಳೆದ ರಾತ್ರಿಯಿಂದಲೂ ಸೇತುವೆಯ ಮೇಲೆ ಭದ್ರಾ ನದಿ ಉಕ್ಕಿ ಹರಿಯುತ್ತಿದೆ. ಮುನ್ನೆಚ್ಚರಿ ಕಾರ್ಯಕ್ರಮವಾಗಿ ಸೇತುವೆಯ ಎರಡು ಕಡೆ ಬ್ಯಾರಿಕೇಡ್‌ ಹಾಕಲಾಗಿದೆ. ಹೆಬ್ಬಾಳೆ ಸೇತುವೆಯ ಮೇಲೆ ವಾಹನಗಳ ಸಂಚಾರ ನಿಷೇಧ ಮಾಡಲಾಗಿದ್ದು, ಸೇತುವೆ ಬಳಿ ಕಳಸ ಪೊಲೀಸರು ಮೊಕ್ಕಾಂ ಹೂಡಿದ್ದಾರೆ.

ಇದನ್ನೂ ಓದಿ: Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

Karnataka Rain

ಕೊಡಗಿನ ಶಾಲೆ ಮೇಲೆ ಬಿದ್ದ ಭಾರಿ ಗಾತ್ರದ ಗುಡ್ಡ

ಕೊಡಗಿನಲ್ಲಿ ಪುನರ್ವಸು ಮಳೆ ಅಬ್ಬರ ಜೋರಾಗಿದ್ದು, ಗುಡ್ಡದ ಮಣ್ಣು ಕುಸಿಯಲು ಆರಂಭವಾಗಿದೆ. ಕೊಡಗು ಜಿಲ್ಲೆ ಸಂಪಾಜೆ ಸಮೀಪ ಕೊಯನಾಡಿನಲ್ಲಿ ಸರ್ಕಾರಿ ಶಾಲಾ ಕಟ್ಟಡ ಮೇಲೆ ಭಾರಿ ಗಾತ್ರದ ಗುಡ್ಡ ಬಿದ್ದಿದೆ. ಕಳೆದ ಒಂದು ತಿಂಗಳ ಹಿಂದೆ ಕೂಡ ಮಣ್ಣು ಬಿದ್ದು ಹಾನಿಯಾಗಿತ್ತು. ಮತ್ತೆ ಗುಡ್ಡಕುಸಿತವಾಗಿ ಶಾಲಾ ಕಟ್ಟಡ ಹಿಂಭಾಗಕ್ಕೆ ಪೂರ್ತಿ ಹಾಳಾಗಿದೆ. ಭಾರಿ ಪ್ರಮಾಣದಲ್ಲಿ ಮಣ್ಣು ಬಿದ್ದು ಶಾಲಾ ಕಟ್ಟಡ ಸಂಪೂರ್ಣ ಹಾನಿಯಾಗಿದೆ. ಶಾಲೆಯಲ್ಲಿದ್ದ ದಾಖಲೆಗಳು ಪೀಟೋಪಕರಣಗಳು ಜಖಂ ಆಗಿದ್ದು, ವಿಚಾರ ತಿಳಿದು ಅಳುತ್ತಲೆ ಶಿಕ್ಷಕಿ ಶಾಲೆಗೆ ಓಡೋಡಿ ಬಂದಿದ್ದಾರೆ.

karnataka Rain

ಕುಮಟಾ-ಶಿರಸಿ ಹೆದ್ದಾರಿಯಲ್ಲಿ ಗುಡ್ಡ ಕುಸಿತ

ಉತ್ತರಕನ್ನಡ ಜಿಲ್ಲೆಯ ಕುಮಟಾ-ಶಿರಸಿ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಉಂಟಾಗಿದೆ. ತಡರಾತ್ರಿ ಗುಡ್ಡ ಕುಸಿದು ಸಂಚಾರ ಸಂಪೂರ್ಣ ಬಂದ್ ಆಗಿದೆ. ರಾಷ್ಟ್ರೀಯ ಹೆದ್ದಾರಿ 766EEಯ ರಾಗಿಹೊಸಳ್ಳಿ ಬಳಿ ಘಟನೆ ನಡೆದಿದೆ. ಜೆಸಿಬಿ ಮೂಲಕ ಮಣ್ಣು ತೆರವು ಕಾರ್ಯಾಚರಣೆ ನಡೆಯುತ್ತಿದೆ.

ಇತ್ತ ಧಾರಾಕಾರ ಮಳೆಗೆ ಹೊನ್ನಾವರ-ಬೆಂಗಳೂರು ಹೆದ್ದಾರಿಯಲ್ಲಿ ಮತ್ತೆ ಗುಡ್ಡ ಕುಸಿತ ಉಂಟಾಗಿದೆ. ಹೊನ್ನಾವರ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 206ರ ವರ್ನಕೇರಿ ಬಳಿ ಘಟನೆ ನಡೆದಿದೆ. ಹೆದ್ದಾರಿಗೆ ಬೃಹತ್ ಗಾತ್ರದ ಗುಡ್ಡದ ಮಣ್ಣು ಕುಸಿದು ಬಿದ್ದಿದೆ. ಹೀಗಾಗಿ ಹೊನ್ನಾವರ-ಗೇರುಸೊಪ್ಪ-ಸಾಗರ ಹೆದ್ದಾರಿ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಗುಡ್ಡ ಕುಸಿತದಿಂದ ರಸ್ತೆಯಲ್ಲೇ ವಾಹನಗಳು ಸಾಲುಗಟ್ಟಿ ನಿಂತಿವೆ. ಬೆಂಗಳೂರಿನಿಂದ ಹೊನ್ನಾವರದತ್ತ ಆಗಮಿಸುತ್ತಿದ್ದ ಪ್ರಯಾಣಿಕರು ಬಸ್‌ಗಳಲ್ಲೇ ಲಾಕ್ ಆಗಿದ್ದರು. ಹೊನ್ನಾವರ-ಬೆಂಗಳೂರು ಹೆದ್ದಾರಿಯಲ್ಲಿ ಇದು ನಾಲ್ಕನೇ ಬಾರಿಗೆ ಗುಡ್ಡ ಕುಸಿತ ಉಂಟಾಗಿದೆ.

ಇನ್ನೂ ಕಾರವಾರ ತಾಲೂಕಿನಲ್ಲಿ ಹಲವು ರಸ್ತೆಗಳು, ಗ್ರಾಮಗಳು ಜಲಾವೃತಗೊಂಡಿದೆ. ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆಗೆ ಅರಗಾ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 66ರ ಮೇಲೆ‌ ನೀರು ನಿಂತಿದೆ. ಹೀಗಾಗಿ ಹೆದ್ದಾರಿ ಸಂಚಾರ ಬಂದ್ ಮಾಡಲಾಗಿದ್ದು, ಗೋವಾ-ಮಂಗಳೂರು ನಡುವೆ ವಾಹನ ಸಂಚಾರ ಸ್ಥಗಿತಗೊಂಡಿದೆ. ಕಾರವಾರ ನಗರದ ಹಬ್ಬುವಾಡ ರಸ್ತೆ ಜಲಾವೃತಗೊಂಡಿದ್ದು, ಮಳೆ‌ ನೀರು ಹರಿದು ಹೋಗಲಾಗದೇ ರಸ್ತೆಯು ಹೊಳೆಯಂತಾಗಿದೆ. ಕೆಎಸ್ಆರ್‌ಟಿಸಿ ಡಿಪೋದಲ್ಲೂ ನೀರು ತುಂಬಿಕೊಂಡಿದೆ.

ಕಲಬುರಗಿಯಲ್ಲಿ ದೇವಸ್ಥಾನಕ್ಕೆ ಜಲದಿಗ್ಬಂಧನ

ಕಲಬುರಗಿ ಜಿಲ್ಲೆಯಲ್ಲಿ ಅಫಜಲಪುರ, ಚಿಂಚೊಳ್ಳಿ ಸೇರಿ ಹಲವೆಡೆ ಭಾರಿ ‌ಮಳೆಯಾಗುತ್ತಿದ್ದು, ದತ್ತಾತ್ರೇಯ ದೇವಸ್ಥಾನಕ್ಕೆ ನೀರು ನುಗ್ಗಿದೆ. ಅಫಜಲಪುರ ತಾಲೂಕಿನ‌ ಸುಕ್ಷೇತ್ರ ಗಣಗಾಪುರದ ಶ್ರೀ ಗುರು ದತ್ತಾತ್ರೇಯ ದೇವಸ್ಥಾನಕ್ಕೆ ಜಲದಿಗ್ಬಂಧನ ಹಾಕಲಾಗಿದೆ.

ಕೆಳ ಹಂತದ ಸೇತುವೆಗಳು ಜಲಾವೃತ

ಮಹಾರಾಷ್ಟ್ರ ಘಟ್ಟ ಪ್ರದೇಶಗಳಲ್ಲಿ ಮಳೆ ಚುರುಕಾಗಿದ್ದು, ದೂದಗಂಗಾ ನದಿಯ ನೀರಿನ ಮಟ್ಟದಲ್ಲಿ ಏರಿಕೆಯಾಗಿದೆ. ದೂದಗಂಗಾ ನದಿಗೆ ಅಡ್ಡಲಾಗಿರುವ 2 ಕೆಳ ಹಂತದ ಸೇತುವೆಗಳು ಜಲಾವೃತಗೊಂಡಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ದತ್ತವಾಡ – ಮಲ್ಲಿಕವಾಡ ಸೇತುವೆ ಹಾಗೂ ನಿಪ್ಪಾಣಿ ತಾಲೂಕಿನ ಭೋಜ – ಕಾರದಗಾ ಸೇತುವೆ ಜಲಾವೃತಗೊಂಡಿದೆ. ಕೆಳ ಹಂತದ ಸೇತುವೆ ಜಲಾವೃತ ಹಿನ್ನೆಲೆ ಪರ್ಯಾಯ ಮಾರ್ಗದ ಮೂಲಕ ಜನರು ಸಂಚಾರಿಸುತ್ತಿದ್ದಾರೆ. ನದಿಗಳ‌ ನೀರಿನ ಮಟ್ಟ ಏರಿಕೆ ಹಿನ್ನೆಲೆ ನದಿಗಳಲ್ಲಿ ಇಳಿಯದಂತೆ ಬೆಳಗಾವಿ ಜಿಲ್ಲಾಡಳಿತದಿಂದ ಎಚ್ಚರಿಕೆ ನೀಡಿದೆ.

ಅಪಾಯ ಮಟ್ಟ ಮೀರಿ ಹರಿಯುತ್ತಿರುವ ಮಾಲತಿ ನದಿ

ಪ್ರವಾಹ ರೀತಿಯಲ್ಲಿ ಮಾಲತಿ ನದಿ ಉಕ್ಕಿ ಹರಿಯುತ್ತಿದೆ. ಅಪಾಯ ಮಟ್ಟ ಮೀರಿ ರಸ್ತೆ ಮೇಲೆ ಉಕ್ಕಿ ಹರಿಯುತ್ತಿದೆ. ಶಿವಮೊಗ್ಗದ ಗುಡ್ಡಕೇರಿಯಿಂದ ಹೊನ್ನೆತಾಳು ಮಾರ್ಗವಾಗಿ ಬಿದರಗೋಡು ಸಂಪರ್ಕಿಸುವ ರಸ್ತೆ ಸ್ಥಗಿತಗೊಂಡಿದೆ. ನಾಬಳ ಬಳಿ ಮಾಲತಿ ನದಿ ಉಕ್ಕಿ ಹರಿಯುತ್ತಿರುವ ಪರಿಣಾಮ ವಾಹನ ಸಂಚಾರದಲ್ಲಿ ಮಾರ್ಗ ಬದಲಾವಣೆ ಆಗಿದೆ. ಅಕ್ಕಪಕ್ಕದ ತೋಟಕ್ಕೂ ನೀರು ನುಗ್ಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Viral News
Latest10 mins ago

Viral News: ಬಾಸ್‌ ಜತೆ ಚಕ್ಕಂದವಾಡುತ್ತಿದ್ದ ಕಿಲಾಡಿ ಪತ್ನಿ; ಡ್ರೋನ್‌ ಬಳಸಿ ಪತ್ತೆ ಹಚ್ಚಿದ ಚಾಲಾಕಿ ಗಂಡ!

Rishabh Pant
ಕ್ರಿಕೆಟ್13 mins ago

Rishabh Pant: ಸಹ ಆಟಗಾರ ಖಲೀಲ್​ ಅಹ್ಮದ್​ರನ್ನು ಸ್ವಿಮ್ಮಿಂಗ್ ಪೂಲ್‌​ಗೆ ತಳ್ಳಿ ಹಾಕಿದ ಪಂತ್​; ವಿಡಿಯೊ ವೈರಲ್​

Karnataka Rain
ಮಳೆ14 mins ago

Karnataka Rain : ಭಾರಿ ಮಳೆ ಎಫೆಕ್ಟ್‌-ಮಲಗಿದ್ದ‌ ವ್ಯಕ್ತಿ ಮೇಲೆ ಬಿದ್ದ ಗೋಡೆ; ಮರ ಬಿದ್ದು ಕಾರು ಜಖಂ, ಚಾಲಕ ಜಸ್ಟ್‌ ಮಿಸ್‌

2nd Puc Result
ಪ್ರಮುಖ ಸುದ್ದಿ19 mins ago

‌2nd PUC Exam Result: ದ್ವಿತೀಯ ಪಿಯುಸಿ ಪರೀಕ್ಷೆ- 3 ಫಲಿತಾಂಶ ಪ್ರಕಟ, 23.73% ವಿದ್ಯಾರ್ಥಿಗಳು ಪಾಸ್

Stuck in Lift
Latest25 mins ago

Stuck in Lift: ಫ್ಯಾನಿಲ್ಲ, ಲೈಟಿಲ್ಲ, ಆಹಾರವಿಲ್ಲ; 2 ದಿನ ಲಿಫ್ಟ್‌ನಲ್ಲಿ ಸಿಲುಕಿದ್ದವನ ಸ್ಥಿತಿ ಹೇಗಿರಬಹುದು ಊಹಿಸಿ!

7th Pay Commission
ಕರ್ನಾಟಕ40 mins ago

7th Pay Commission: ಸರ್ಕಾರಿ ನೌಕರರ ವೇತನ, ಪಿಂಚಣಿ 58% ಹೆಚ್ಚಳ; ಸಂಪೂರ್ಣ ಲೆಕ್ಕ ಕೊಟ್ಟ ಸಿದ್ದರಾಮಯ್ಯ

Viral Video
Latest44 mins ago

Viral Video: ಸ್ಟ್ರೆಚರ್‌ ಇಲ್ಲದ ಸರ್ಕಾರಿ ಆಸ್ಪತ್ರೆ; ಪತಿಯನ್ನು ಬೆನ್ನ ಮೇಲೆ ಹೊತ್ತು ನಡೆದ ಪತ್ನಿ! ಮನಮಿಡಿಯುವ ವಿಡಿಯೊ

7th Pay Commission
ಕರ್ನಾಟಕ54 mins ago

7th Pay Commission: ಆ.1ರಿಂದ ನೌಕರರ ವೇತನ ಹೆಚ್ಚಳ; ಸರ್ಕಾರಕ್ಕೆ ವಾರ್ಷಿಕ 20,208 ಕೋಟಿ ಹೆಚ್ಚುವರಿ ಹೊರೆ ಎಂದ ಸಿಎಂ

Sexual Abuse
Latest56 mins ago

Sexual Abuse: ಹೆಣ್ಣು ಮಕ್ಕಳಿಗೆ ಈಗ ಶಾಲೆ ಕೂಡ ಸುರಕ್ಷಿತವಲ್ಲ! ಶಾಲಾ ಶೌಚಾಲಯದಲ್ಲಿ ಬಾಲಕಿ ಮೇಲೆ ಬಾಲಕನಿಂದ ಅತ್ಯಾಚಾರ

MAX Teaser
ಸ್ಯಾಂಡಲ್ ವುಡ್1 hour ago

MAX Teaser: ಬಹುನಿರೀಕ್ಷಿತ ʼಮ್ಯಾಕ್ಸ್ʼ ಚಿತ್ರದ ಟೀಸರ್‌ ಔಟ್‌; ರೌಡಿಗಳ ಅಡ್ಡದಲ್ಲಿ ನಿಂತು ಲಾಂಗ್‌ ಬೀಸಿದ ಸುದೀಪ್‌

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ2 hours ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ4 hours ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ22 hours ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ1 day ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ1 day ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ2 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ2 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ2 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ3 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌