Site icon Vistara News

Road Accident: ಬೈಕ್‌ಗೆ ಲಾರಿ ಡಿಕ್ಕಿ, ಇಬ್ಬರು ಸಾವು, ಇಬ್ಬರಿಗೆ ಗಾಯ

Terrible accident between cruiser and lorry

ವಿಜಯಪುರ: ಬೈಕ್‌ಗೆ ಹಿಂಬದಿಯಿಂದ ಲಾರಿ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇಬಾಡಿ ಪಟ್ಟಣದ ಬಸ್ ಡಿಪೋ ಬಳಿ ನಡೆದಿದೆ.

ಮಂಗಳವಾರ ತಡರಾತ್ರಿ ಈ ದುರ್ಘಟನೆ ಸಂಭವಿಸಿದೆ. ಒಂದೇ ಬೈಕ್‌ನಲ್ಲಿ ನಾಲ್ವರು ಕೆಲಸ ಮುಗಿಸಿಕೊಂಡು ಮನೆಗೆ ಹೋಗುವಾಗ ಹಿಂಬದಿಯಿಂದ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದಿದೆ. ಇದರಿಂದ ಇಬ್ಬರು ಸ್ಥಳದಲ್ಲಿಯೇ ಅಸುನೀಗಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತಪಟ್ಟವರ ಹೆಸರು ತಿಳಿದುಬಂದಿಲ್ಲ. ಸ್ಥಳಕ್ಕೆ ಬಸವನಬಾಗೇಬಾಡಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಇದನ್ನೂ ಓದಿ: Road Accident: ಅಪಘಾತ ವಲಯ ಆಗುತ್ತಿದೆಯೇ ರಾಷ್ಟ್ರೀಯ ಹೆದ್ದಾರಿಗಳು; ಪ್ರಾಣ ಬಿಟ್ಟ ಇಬ್ಬರು ಚಾಲಕರು

Exit mobile version