ವಿಜಯಪುರ: ಇಲ್ಲಿನ ಗಚ್ಚಿನಗಕಟ್ಟಿ ಕಾಲೋನಿಯಿಂದ (Vijayapura News) ಭಾನುವಾರ ಮಧ್ಯಾಹ್ನ ನಾಪತ್ತೆಯಾಗಿದ್ದ ಮೂವರು ಮಕ್ಕಳು ಶವವಾಗಿ ಪತ್ತೆಯಾಗಿದ್ದಾರೆ. ಅನುಷ್ಕಾ, ವಿಜಯ ಹಾಗೂ ಮಿಹಿರ ಮೃತ ದುರ್ದೈವಿಗಳು.
ಮನೆ ಮುಂದೆ ಆಟವಾಡುತ್ತಿದ್ದಾಗ ಕಾಲೋನಿಯಲ್ಲಿ ಒಂಟೆ ಬಂದಾಗ ಮೂವರು ಖುಷಿಯಲ್ಲಿ ಅದರ ಹಿಂದೆ ಹೋಗಿದ್ದಾರೆ. ಹೀಗೆ ಹೋದವರು ಮನೆಗೆ ವಾಪಸ್ ಆಗಿರಲಿಲ್ಲ. ಪೋಷಕರು ಸಹ ಮನೆ ಸುತ್ತಮುತ್ತ ಹುಡುಕಾಟ ನಡೆಸಿದ್ದರು. ಆದರೆ ಮಕ್ಕಳ ಸುಳಿವು ಮಾತ್ರ ಸಿಕ್ಕಿರಲಿಲ್ಲ.
ಮಕ್ಕಳು ಕಾಣಿಯಾಗಿದ್ದಕ್ಕೆ ಕಂಗಾಲಾದ ಪೋಷಕರು ಎಪಿಎಂಸಿ ಠಾಣೆ ಮೆಟ್ಟಿಲು ಹತ್ತಿದ್ದರು. ವಿಜಯಪುರದ ಎಪಿಎಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆಗಿಳಿದ ಪೊಲೀಸರು ಸಿಸಿಟಿವಿಯಲ್ಲಿ ಮಕ್ಕಳ ಚಲನವಲನ ಗಮನಿಸಿ ಹುಡುಕಾಟ ಶುರು ಮಾಡಿದ್ದರು. ಸಿಸಿಟಿವಿಯಲ್ಲಿ ಮಕ್ಕಳು ಹೋಗುವುದು ಸೆರೆಯಾಗಿತ್ತು. ಹೀಗಾಗಿ ಸಾಮಾಜಿಕ ಜಾಲತಾಣಗಳಲ್ಲಿ ಮಕ್ಕಳ ಕಾಣೆ ಕುರಿತು ಹಲವರು ಪೋಸ್ಟ್ ಮಾಡಿದ್ದರು.
ಆದರೆ ಸೋಮವಾರ ಚರಂಡಿ ಶುದ್ಧೀಕರಣ ಕೇಂದ್ರದಲ್ಲಿ ಬಿದ್ದು ಮೂವರು ಮಕ್ಕಳು ಮೃತಪಟ್ಟಿವೆ. ಸೂಕ್ತ ಭದ್ರತೆ ಇಲ್ಲದ ಕಾರಣ ನಮ್ಮ ಮಕ್ಕಳು ಬಿದ್ದು ಸಾವನಪ್ಪಿದ್ದಾರೆ ಎಂದು ಕುಟುಂಬಸ್ಥರ ಆಕ್ರೋಶ ಹೊರಹಾಕಿದ್ದಾರೆ. ಸ್ಥಳದಲ್ಲಿ ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಎಪಿಎಂಸಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೂವರು ಮಕ್ಕಳ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಇದನ್ನೂ ಓದಿ: Gold Heist Case: ಬಹುಕೋಟಿ ಚಿನ್ನ, ವಿದೇಶಿ ಕರೆನ್ಸಿ ದರೋಡೆ; ಭಾರತೀಯ ಮೂಲದ ವ್ಯಕ್ತಿ ಲಾಕ್!
Drowned in Water : ತಲಕಾಡು ಪ್ರವಾಸಕ್ಕೆ ಹೋದ ಯುವತಿ ನೀರಿನಲ್ಲಿ ಮುಳುಗಿ ಸಾವು
ಮೈಸೂರು: ನೀರಿನಲ್ಲಿ ಮುಳುಗಿ ಯುವತಿಯೊಬ್ಬಳು (Drowned in water) ಮೃತಪಟ್ಟಿದ್ದಾಳೆ. ಮೈಸೂರಿನ ತಿ.ನರಸೀಪುರ ತಾಲೂಕಿನ ತಲಕಾಡು ಗ್ರಾಮದ ಕಾವೇರಿ ನದಿಯಲ್ಲಿ ಘಟನೆ ನಡೆದಿದೆ. ಮೆಹನಾಜ್ (17) ಮೃತ ದುರ್ದೈವಿ.
ಬೆಂಗಳೂರಿನ ಬನ್ನೇರುಘಟ್ಟ ನಿವಾಸಿಯಾದ ಮೆಹನಾಜ್ ತಲಕಾಡಿಗೆ ಪ್ರವಾಸಕ್ಕೆ ಬಂದಿದ್ದ ವೇಳೆ ದುರ್ಘಟನೆ ನಡೆದಿದೆ. ಈಜು ಬಾರದೆ ಇದ್ದರೂ, ನೀರಿನಲ್ಲಿ ಆಟವಾಡುಲು ನದಿಗೆ ಇಳಿದಿದ್ದಾಳೆ. ಆದರೆ ನೀರಿನ ಸೆಳತಕ್ಕೆ ಸಿಲುಕಿ ಮೃತಪಟ್ಟಿದ್ದಾಳೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ತಲಕಾಡು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನೀರಿನಲ್ಲಿ ಮುಳುಗಿದ್ದ ಮೃತದೇಹವನ್ನು ಮೇಲೆತ್ತಿ ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಸಂಬಂಧ ತಲಕಾಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ