Water Crisis: ವಿಜಯಪುರದ ಗ್ರಾಮದಲ್ಲಿ ಕುಡಿಯುವ ನೀರಿಲ್ಲವೆಂದು ಮೊಬೈಲ್‌ ಟವರ್‌ ಏರಿದ ಯುವಕ! - Vistara News

ವಿಜಯಪುರ

Water Crisis: ವಿಜಯಪುರದ ಗ್ರಾಮದಲ್ಲಿ ಕುಡಿಯುವ ನೀರಿಲ್ಲವೆಂದು ಮೊಬೈಲ್‌ ಟವರ್‌ ಏರಿದ ಯುವಕ!

Water Crisis: ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ತೆಗ್ಗಿಹಳ್ಳಿ ಗ್ರಾಮದಲ್ಲಿ ನೀರಿಗೆ ತೀವ್ರ ಸಮಸ್ಯೆಯಾಗಿದೆ. ಈ ಬಗ್ಗೆ ಗ್ರಾಮದ ಮಂದಿ ಪಿಡಿಒ ಹಾಗೂ ತಾಲೂಕು ಆಡಳಿತಕ್ಕೆ ಎಷ್ಟೇ ಮನವಿ ಕೊಟ್ಟರೂ ಗಮನ ಹರಿಸಿಲ್ಲ ಎಂಬ ಆರೋಪ ಕೇಳಿಬಂದಿದೆ. ಇದರಿಂದ ಬೇಸತ್ತ ಗ್ರಾಮದ ಯುವಕನೊಬ್ಬ ಮೊಬೈಲ್‌ ಟವರ್‌ ಏರಿ ಹುಚ್ಚಾಟ ನಡೆಸಿದ್ದಾನೆ.

VISTARANEWS.COM


on

Water crisis Youth climbs mobile tower in Vijayapura
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಿಜಯಪುರ: ರಾಜ್ಯದಲ್ಲಿ ಭೀಕರ (Drought in Karnataka) ಬರಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ನಗರ ಸೇರಿ ಹಲವಾರು ಹಳ್ಳಿಗಳಲ್ಲೂ ಈಗ ನೀರಿಗೆ ಹಾಹಾಕಾರ (Water Crisis) ಎದುರಾಗಿದೆ. ನೀರು ಪೂರೈಕೆ (Water Supply) ಮಾಡಲು ಕಷ್ಟಪಡುತ್ತಿರುವ ಸ್ಥಳೀಯ ಆಡಳಿತಗಳು ಹೈರಾಣಾಗಿವೆ. ಈ ವೇಳೆ ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದಲ್ಲಿ ಯುವಕನೊಬ್ಬ ಮೊಬೈಲ್‌ ಟವರ್‌ ಏರಿ ಹುಚ್ಚಾಟ ನಡೆಸಿದ್ದಾನೆ. ಅರೆಬೆತ್ತಲೆಯಾಗಿ ಕೂಗಾಡಿದ್ದಾನೆ. ನನ್ನ ಗ್ರಾಮಕ್ಕೆ ಕುಡಿಯುವ (Drinking Water) ನೀರಿಲ್ಲ. ಪಿಡಿಒ, ತಾಲೂಕು ಅಧಿಕಾರಿಗಳಿಗೆ ಸಮಸ್ಯೆ ಹೇಳಿದರೂ ಕ್ಯಾರೇ ಎನ್ನುತ್ತಿಲ್ಲ ಎಂದು ಆರೋಪ ಮಾಡಿದ್ದಾನೆ.

ಇಂಡಿ ಬಸವೇಶ್ವರ ಸರ್ಕಲ್‌ನಲ್ಲಿರುವ ಜಿಯೋ ಟವರ್ ಅನ್ನು ಯುವಕ ಏರಿದ್ದಾನೆ. ಇಂಡಿ ತಾಲೂಕಿನ ತೆಗ್ಗಿಹಳ್ಳಿ ಗ್ರಾಮದ ಯುವಕ ಸತೀಶ್ ಚಂದ್ರಶೇಖರ ಕಡಣಿ ಎಂಬಾತನೇ ಟವರ್‌ ಏರಿರುವುದು ಎಂದು ತಿಳಿದುಬಂದಿದೆ. 250 ಅಡಿ ಎತ್ತರದ ಟವರ್‌ನ ತುದಿಗೆ ಯುವಕ ಏರಿದ್ದಾನೆ.

ಕುಡಿಯುವ ನೀರಿಗಾಗಿ ಟವರ್ ಏರಿದ ಭೂಪ!

ಸತೀಶ್ ಚಂದ್ರಶೇಖರ ಕಡಣಿ ಬಿಎಸ್ಎನ್ಎಲ್ ಟವರ್ ಹತ್ತಿದ್ದು, ನೀರಿಗಾಗಿ ಆಗ್ರಹಿಸುತ್ತಿದ್ದಾನೆ. ಸ್ಥಳಕ್ಕೆ ಅಗ್ನಿಶಾಮಕ‌ ದಳ ಸಿಬ್ಬಂದಿ ದೌಡಾಯಿಸಿದ್ದಾರೆ. ಯುವಕನನ್ನು ಕೆಳಗೆ ಇಳಿಸಲು ಹರಸಾಹಸಪಡುತ್ತಿದ್ದಾರೆ.

ಯುವಕನ ಬೇಡಿಕೆ ಏನು?

ಗ್ರಾಮದಲ್ಲಿ ಹಲವು ದಿನಗಳಿಂದ ಕುಡಿಯುವ ನೀರಿನ ಹಾಹಾಕಾರವಿದೆ. ಹಲವು ಬಾರಿ ಪಿಡಿಒ‌ ಮತ್ತು ತಾಲೂಕು ಅಧಿಕಾರಿಗಳ ಗಮನಕ್ಕೆ ತಂದರೂ ಕ್ರಮವಹಿಸಿಲ್ಲ. ನಮ್ಮ ಗ್ರಾಮದ ನೀರಿನ ಸಮಸ್ಯೆಯನ್ನು ಬಗೆಹರಿಸಬೇಕು. ಪರಿಹರಿಸಿದರೆ ಮಾತ್ರವೇ ನಾನು ಟವರ್‌ನಿಂದ ಇಳಿಯುತ್ತೇನೆ ಎಂದು ಯುವಕ ಪಟ್ಟುಹಿಡಿದು ಕುಳಿತಿದ್ದ.

ಕೆಳಗಿಳಿಸುವಲ್ಲಿ ಅಗ್ನಿಶಾಮಕದಳ ಸಿಬ್ಬಂದಿ ಯಶಸ್ವಿ

ಬೆಳಗಿನ ಜಾವ ನಾಲ್ಕು ಗಂಟೆ ಹೊತ್ತಿಗೆ ಯುವಕ ಟವರ್ ಹತ್ತಿದ್ದ ಎಂದು ತಿಳಿದು ಬಂದಿದೆ. ಅಲ್ಲದೆ, ತನ್ನ ಶರ್ಟ್‌ ತೆಗೆದು ತನ್ನ ಪ್ರತಿಭಟನೆಯನ್ನು ತೋರಿದ್ದಾನೆ. ಕೆಳಗೆ ಸೇರಿದ್ದ ಜನರು, ಕೆಳಗೆ ಬರವಂತೆ ಎಷ್ಟೇ ಮನವಿ ಮಾಡಿದರೂ ಆತ ಕೆಳಗಿಳಿಯಲು ಸುತಾರಾಂ ಇಷ್ಟಪಡುತ್ತಿಲ್ಲ. ನನಗೆ ನನ್ನೂರಿನ ಸಮಸ್ಯೆ ಬಗೆಹರಿಯಬೇಕು. ಸಂಬಂಧಪಟ್ಟವರು ಇಲ್ಲಿಗೆ ಬಂದು ಭರವಸೆ ಕೊಡಬೇಕು. ಆಗ ಮಾತ್ರ ಇಳಿಯುತ್ತೇನೆ ಎಂದು ಹೇಳಿದ್ದಾನೆ. ಈ ವೇಳೆ ಟವರ್‌ ಹತ್ತಿ ಆತನನ್ನು ಕಾಪಾಡಲು ಮುಂದಾದರೆ, ಟವರ್‌ನಿಂದ ಹಾರಿ ಬಿಡುವುದಾಗಿ ಬೆದರಿಸಿದ್ದಾನೆ. ಇದು ಉಳಿದವರ ಭಯಕ್ಕೆ ಕಾರಣವಾಗಿತ್ತು. ಕೂಡಲೇ ಸಾರ್ವಜನಿಕರು ಅಗ್ನಿಶಾಮಕ ದಳಕ್ಕೆ ಮಾಹಿತಿಯನ್ನು ನೀಡಿದ್ದಾರೆ.

ಇದನ್ನೂ ಓದಿ: Bangalore Water Crisis: ಬೆಂಗಳೂರಿನ ಜಲದಾಹ ನೀಗಿಸಲು ತ್ಯಾಜ್ಯ ನೀರಿನ ಮರುಬಳಕೆ: ಸಿದ್ದರಾಮಯ್ಯ

ಸುದ್ದಿ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ದಳದ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಬಳಿಕ ಯುವಕನ ಮನವೊಲಿಕೆಗೆ ಪ್ರಯತ್ನಪಟ್ಟಿದ್ದಾರೆ. ಆದರೆ, ಮೊದ ಮೊದಲಿಗೆ ಯುವಕ ಒಪ್ಪಲೇ ಇಲ್ಲ. ಬಳಿಕ ನಾಜಾಕಾಗಿ ಆತನನ್ನು ವಿಶ್ವಾಸಕ್ಕೆ ತೆಗೆದುಕೊಂಡಿದ್ದಾರೆ. ಬಳಿಕ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಯುವಕನನ್ನು ಕೆಳಗಿಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇಂಡಿ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಆದರೆ, ಆತನ ಗ್ರಾಮದ ನೀರಿನ ಸಮಸ್ಯೆಗೆ ಪರಿಹಾರ ಸಿಕ್ಕಿಲ್ಲ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Karnataka Weather: ಇಂದು ಬೀದರ್, ಕಲಬುರಗಿ ಸೇರಿ ಹಲವೆಡೆ ಶಾಖದ ಅಲೆ ಎಚ್ಚರಿಕೆ; ಇನ್ನೂ ಎಲ್ಲಿಯವರೆಗೆ ಈ ರಣ ಬಿಸಿಲು?

Karnataka Weather: ರಾಜ್ಯದ ಬಹುತೇಕ ಕಡೆ ಮೇ 5ರವರೆಗೆ ರಣ ಬಿಸಿಲು ಕಾಡಲಿದೆ. ಇನ್ನು ಮೇ 2 ರವರೆಗೆ ಬಿಸಿಗಾಳಿ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.

VISTARANEWS.COM


on

Karnataka Weather
Koo

ಬೆಂಗಳೂರು: ಏಪ್ರಿಲ್ 29ರಂದು ಸೋಮವಾರ ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಶಾಖದ ಅಲೆಗಳು ಹೆಚ್ಚಾಗುವ ಸಾಧ್ಯತೆ ಇದೆ. ರಾಜ್ಯದ ಬಹುತೇಕ ಕಡೆ ಇದೇ ರೀತಿಯ ಪರಿಸ್ಥಿತಿ ಮೇ 5ರವರೆಗೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಅಲ್ಲಲ್ಲಿ ಸುರಿಯುತ್ತಿದ್ದ ಮಳೆಯು, ಕಳೆದ ನಾಲ್ಕೈದು ದಿನಗಳಿಂದ ಕಣ್ಮರೆಯಾಗಿದ್ದರಿಂದ ಹಲವೆಡೆ ಗರಿಷ್ಠ ತಾಪಮಾನ ದಾಖಲಾಗುತ್ತಿದೆ. ರಾಜಧಾನಿಯಲ್ಲಿ ದಿನದಿಂದ ದಿನಕ್ಕೆ ಗರಿಷ್ಠ ತಾಪಮಾನ ದಾಖಲಾಗುತ್ತಿದ್ದು, ಭಾನುವಾರ ಸಹ 38.5 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ (Karnataka Weather) ವರದಿಯಾಗಿದೆ. ಇನ್ನು ಕಲಬುರಗಿಯಲ್ಲಿ 42.9 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ತಾಪಮಾನ ದಾಖಲಾಗಿದ್ದು, 8 ವರ್ಷಗಳ ಬಳಿಕ ಗರಿಷ್ಠ ತಾಪಮಾನಕ್ಕೆ ನಗರ ಸಾಕ್ಷಿಯಾಗುತ್ತಿದೆ.

ರಾಜ್ಯದ ಒಳನಾಡು ಜಿಲ್ಲೆಗಳಲ್ಲಿ ಮೇ 2 ರವರೆಗೆ ಬಿಸಿಗಾಳಿ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ರಾಜ್ಯದಲ್ಲಿ ಭಾನುವಾರ ಉಷ್ಣಾಂಶದಲ್ಲಿ ಸಾಮಾನ್ಯಕ್ಕಿಂತ ಏರಿಕೆ ಕಂಡುಬಂದಿದ್ದು, ದಕ್ಷಿಣ ಒಳನಾಡಿನ ಹಲವು ಕಡೆ ಮತ್ತು ಉತ್ತರ ಒಳನಾಡಿನ ಕೆಲವು ಕಡೆ 3.5ರಿಂದ 5 ಡಿ. ಸೆಲ್ಸಿಯಸ್‌ವರೆಗೆ ಉಷ್ಣಾಂಶ ಏರಿಕೆಯಾಗಿದೆ. ಇನ್ನು ಮೇ 2 ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರತೆ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ 5 ದಿನಗಳಲ್ಲಿ ರಾಜ್ಯದಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗುವ ಸಾಧ್ಯತೆ ಇದೆ.

ಶಾಖದ ಅಲೆಯ ಎಚ್ಚರಿಕೆ

ಏಪ್ರಿಲ್ 29ರಂದು ಬೀದರ್, ಕಲಬುರಗಿ, ಬಿಜಾಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಶಾಖದ ಅಲೆಗಳು ಹೆಚ್ಚಾಗುವ ಸಾಧ್ಯತೆ ಇದೆ. ರಾಜ್ಯದ ಬಹುತೇಕ ಕಡೆ ಇದೇ ರೀತಿಯ ಪರಿಸ್ಥಿತಿ ಮೇ 5ರವರೆಗೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ | Karnataka Weather : ಹುಷಾರ್‌.. ನಾಲ್ಕೈದು ದಿನ ಮತ್ತಷ್ಟು ಏರಲಿದೆ ಉರಿ ಬಿಸಿಲು; ಎಚ್ಚರ ತಪ್ಪಿದ್ರೆ ಅಪಾಯ ಗ್ಯಾರಂಟಿ

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ

ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 38°C ಮತ್ತು 23°C ಇರುವ ಸಾಧ್ಯತೆ ಇದೆ.

Continue Reading

ಕರ್ನಾಟಕ

Jatra Rathotsava: ಇಂಡಿಯ ಕಮರಿಮಠದ ಜಾತ್ರೆಯಲ್ಲಿ ರಥದ ಚಕ್ರಕ್ಕೆ ಸಿಲುಕಿ ಇಬ್ಬರು ದುರ್ಮರಣ; ಮತ್ತೊಬ್ಬ ಗಂಭೀರ

Jatra Rathotsava: ಭಾನುವಾರ ಸಂಜೆ ಗೋಧೋಳಿ ಮುಹೂರ್ತದಲ್ಲಿ ಶ್ರೀ ಸಿದ್ದಲಿಂಗ ಮಹರಾಜರ ರಥೋತ್ಸವ ನಡೆದಿದ್ದು, ಸಾವಿರಾರು ಜನರು ಭಾಗಿಯಾಗಿದ್ದರು. ಜಾತ್ರೆಯಲ್ಲಿನ ನೂಕು ನುಗ್ಗಲಿನಲ್ಲಿ ರಥದ ಚಕ್ರಕ್ಕೆ ಸಿಲುಕಿ ಇಬ್ಬರು ಮೃತಪಟ್ಟಿದ್ದಾರೆ. ತೀವ್ರವಾಗಿ ಗಾಯಗೊಂಡ ಮತ್ತೊಬ್ಬನನ್ನು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಮೃತರಿಬ್ಬರು ಲಚ್ಯಾಣ ಗ್ರಾಮದವರು ಎಂದು ತಿಳಿದುಬಂದಿದ್ದು, ಗಂಭೀರವಾಗಿ ಗಾಯಗೊಂಡ ಮತ್ತೊಬ್ಬ ಮಹಾರಾಷ್ಟ್ರದ ತಡವಾಳ ಗ್ರಾಮದ ನಿವಾಸಿಯಾಗಿದ್ದಾನೆ.

VISTARANEWS.COM


on

Jatra Rathotsava Two killed and one serious after being hit by wheel of a chariot at Indi Kamarimath
Koo

ವಿಜಯಪುರ: ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದ ಆರಾಧ್ಯ ದೈವ ಶ್ರೀ ಸಿದ್ದಲಿಂಗ ಮಹಾರಾಜರ ಕಮರಿಮಠದ ಜಾತ್ರೆಯಲ್ಲಿ (Kamarimatha Fair) ನಡೆದ ರಥೋತ್ಸವ (Jatra Rathotsava) ವೇಳೆ ರಥದ ಚಕ್ರ ಹಾಯ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬನಿಗೆ ಗಂಭೀರ ಗಾಯಗಳಾಗಿವೆ.

ಭಾನುವಾರ ಸಂಜೆ ಗೋಧೋಳಿ ಮುಹೂರ್ತದಲ್ಲಿ ಶ್ರೀ ಸಿದ್ದಲಿಂಗ ಮಹರಾಜರ ರಥೋತ್ಸವ ನಡೆದಿದ್ದು, ಸಾವಿರಾರು ಜನರು ಭಾಗಿಯಾಗಿದ್ದರು. ಜಾತ್ರೆಯಲ್ಲಿನ ನೂಕು ನುಗ್ಗಲಿನಲ್ಲಿ ರಥದ ಚಕ್ರಕ್ಕೆ ಸಿಲುಕಿ ಇಬ್ಬರು ಮೃತಪಟ್ಟಿದ್ದಾರೆ. ತೀವ್ರವಾಗಿ ಗಾಯಗೊಂಡ ಮತ್ತೊಬ್ಬನನ್ನು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ.

ಮೃತರಿಬ್ಬರು ಲಚ್ಯಾಣ ಗ್ರಾಮದವರು ಎಂದು ತಿಳಿದುಬಂದಿದ್ದು, ಗಂಭೀರವಾಗಿ ಗಾಯಗೊಂಡ ಮತ್ತೊಬ್ಬ ಮಹಾರಾಷ್ಟ್ರದ ತಡವಾಳ ಗ್ರಾಮದ ನಿವಾಸಿಯಾಗಿದ್ದಾನೆ. ಘಟನಾ ಸ್ಥಳದಲ್ಲಿ ಪೊಲೀಸರು ಬೀಡುಬಿಟ್ಟಿದ್ದಾರೆ.

Sahil Khan: ಬೆಟ್ಟಿಂಗ್​ ಅಕ್ರಮದಲ್ಲಿ ಭಾಗಿ; ನಟ ಸಾಹಿಲ್ ಖಾನ್ ಅರೆಸ್ಟ್‌

ಬೆಂಗಳೂರು: ಮಹದೇವ್ ಬೆಟ್ಟಿಂಗ್ ಆ್ಯಪ್ (Mahadev betting app case) ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ (Betting App Case) ನಟ ಮತ್ತು ಫಿಟ್‌ನೆಸ್‌ ಪ್ರಭಾವಿ ಸಾಹಿಲ್ ಖಾನ್ (Sahil Khan Arrested) ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಛತ್ತೀಸ್‌ಗಢದಲ್ಲಿ ಮುಂಬೈ ಸೈಬರ್ ಸೆಲ್‌ನ ವಿಶೇಷ ತನಿಖಾ ತಂಡ (ಎಸ್‌ಐಟಿ) ನಟನನ್ನು ಬಂಧಿಸಿದ್ದು, ಬಾಂಬೆ ಹೈಕೋರ್ಟ್‌ ಬಂಧನ ಪೂರ್ವ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.

ಇದಕ್ಕೂ ಮೊದಲು, 2023ರ ಡಿಸೆಂಬರ್‌ನಲ್ಲಿ ಸಾಹಿಲ್ ಮತ್ತು ಇದೇ ಪ್ರಕರಣಕ್ಕೆ ಸಂಬಂಧಿಸಿದ ಇನ್ನುಳಿದ ಮೂವರನ್ನು ವಿಶೇಷ ತನಿಖಾ ತಂಡ ವಿಚಾರಣೆಗೆ ಕರೆದಿತ್ತು. ಆದರೆ, ಅವರು ಹಾಜರಾಗಲಿಲ್ಲ. ತಾವು ಕೇವಲ ಬ್ರ್ಯಾಂಡ್ ಪ್ರಮೋಟರ್‌ ಎಂದು ಹೇಳಿಕೊಂಡು ಬಂದಿದ್ದರು. ಆದರೆ, ಸಾಹಿಲ್ ಆ್ಯಪ್‌ನ ಸಹ ಮಾಲೀಕ ಎಂಬುದು ಪೊಲೀಸರಿಗೆ ತನಿಖೆಯಲ್ಲಿ ಗೊತ್ತಾಗಿದೆ. ಸಾಹಿಲ್‌ ಈ ಬೆಟ್ಟಿಂಗ್ ಆ್ಯಪ್‌ ಸಂಬಂಧಿಸಿದ ಪ್ರಚಾರದ ವಿಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಲು ತಿಂಗಳಿಗೆ 3 ಲಕ್ಷ ರೂ. ಹಣವನ್ನು ಪಡೆದುಕೊಳ್ಳುತ್ತಿದ್ದರು ಎಂದು ವರದಿಯಾಗಿದೆ. ಮಾತ್ರವಲ್ಲ 24 ತಿಂಗಳುಗಳ ಕಾಲ ಈ ಆ್ಯಪ್‌ ಜತೆಗೆ ಒಪ್ಪಂದ ಮಾಡಿಕೊಂಡಿದ್ದರು ಎಂದು ತನಿಖೆ ವೇಳೆ ಬಹಿರಂಗವಾಗಿತ್ತು.

ಇದರ ಹೊರತಾಗಿಯೂ, ಕಾನೂನುಬಾಹಿರ ಕಾರ್ಯಾಚರಣೆಯಲ್ಲಿ ನೇರವಾಗಿ ಭಾಗಿಯಾಗಿರುವುದನ್ನು ಉಲ್ಲೇಖಿಸಿ ನ್ಯಾಯಾಲಯವು ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ʻಸ್ಟೈಲ್ʼ ಮತ್ತು ʻಎಕ್ಸ್‌ಕ್ಯೂಸ್ ಮಿʼ ಸಿನಿಮಾ ಪಾತ್ರಗಳಿಗೆ ಹೆಸರುವಾಸಿಯಾದ ಸಾಹಿಲ್ ಈಗ ಫಿಟ್‌ನೆಸ್‌ನತ್ತ ಗಮನಹರಿಸಿದ್ದಾರೆ.

ಇದನ್ನೂ ಓದಿ: The Rulers: ಅಂಬೇಡ್ಕರ್ ಹೆಸರಲ್ಲಿ ಸಿನಿಮಾ ಮಾಡಿದ್ದಕ್ಕೆ` ರೌಡಿ ಶೀಟರ್ʼ ಪಟ್ಟ ಕೊಡ್ತಾ ಕಾಂಗ್ರೆಸ್ ಸರ್ಕಾರ? ನಟ ಹೇಳಿದ್ದೇನು?

2023ರಲ್ಲಿ, ಮಹದೇವ್ ಬೆಟ್ಟಿಂಗ್ ಆ್ಯಪ್ ಪ್ರಕರಣದ ವಿಚಾರಣೆ ನಡೆಸಿದ ಕ್ರೈಂ ಬ್ರ್ಯಾಂಚ್‌ ವಿಭಾಗವು ಡಿಸೆಂಬರ್ 15ರಂದು ತಮ್ಮ ಹೇಳಿಕೆಗಳನ್ನು ದಾಖಲಿಸಲು ಸಾಹಿಲ್ ಖಾನ್ ಮತ್ತು ಇತರ ಮೂವರಿಗೆ ಸಮನ್ಸ್ ನೀಡಿತ್ತು ಎಂದು ವರದಿಯಾಗಿದೆ. ಆದರೆ, ಸಾಹಿಲ್ ಖಾನ್ ತನಿಖೆಗಾಗಿ ಪೊಲೀಸರ ಮುಂದೆ ಹಾಜರಾಗಲಿಲ್ಲ. ಇದಲ್ಲದೆ ಸೋಷಿಯಲ್‌ ಮೀಡಿಯಾಗಳಲ್ಲಿ ನಿರಂತರವಾಗಿ ಪೋಸ್ಟ್‌ ಮಾಡುತ್ತಲೇ ಇರುತ್ತಿದ್ದರು. ಪೊಲೀಸರ ಸಮನ್ಸ್‌ಗಳನ್ನು ಅವರು ನಿರ್ಲಕ್ಷಿಸುತ್ತಿರುವುದನ್ನು ಕಂಡು ನೆಟ್ಟಿಗರಿಂದ ಟೀಕೆಗೆ ಗುರಿಯಾಗುತ್ತಿದ್ದರು. ವರದಿಗಳ ಪ್ರಕಾರ, ಸಾಹಿಲ್ ಖಾನ್ ಅವರು ಈ ಆ್ಯಪ್ ಪ್ರಚಾರ ಮಾಡಲು ಸೆಲೆಬ್ರಿಟಿ ಕೂಟಗಳನ್ನು ಆಯೋಜಿಸಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಏನಿದು ಮಹದೇವ್​ ಬೆಟ್ಟಿಂಗ್​ ಪ್ರಕರಣ?

ಛತ್ತೀಸ್‌ಗಢದಲ್ಲಿ ವಿಧಾನಸಭೆ ಚುನಾವಣೆಗೆ (Chhattisgarh Polls) ಕೆಲವೇ ದಿನಗಳು ಬಾಕಿ ಇರುವ ಮಧ್ಯೆಯೇ ಕಾಂಗ್ರೆಸ್‌ ಸರ್ಕಾರದ ಮುಖ್ಯಮಂತ್ರಿ ಭೂಪೇಶ್‌ ಬಘೇಲ್‌ ಭಾಗಿಯಾಗಿದ್ದಾರೆ ಎನ್ನಲಾದ ಬೆಟ್ಟಿಂಗ್ ಹಗರಣವೊಂದು ಹೊರಕ್ಕೆ ಬಂದಿತ್ತು. ಮಹದೇವ್‌ ಆನ್‌ಲೈನ್‌ ಬೆಟ್ಟಿಂಗ್‌ ಆ್ಯಪ್ ಪ್ರಮೋಟರ್‌ಗಳಿಂದ (Mahadev Betting App Promoters) ಇದುವರೆಗೆ ಭೂಪೇಶ್‌ ಬಘೇಲ್‌ (Bhupel Bhaghel) ಅವರಿಗೆ ಸುಮಾರು 508 ಕೋಟಿ ರೂ. ಲಂಚ ನೀಡಲಾಗಿದೆ ಎಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು (ED) ಹೇಳಿದ್ದರು. ಚುನಾವಣೆ ಹೊತ್ತಿನಲ್ಲೇ ಇ.ಡಿ ಪ್ರಸ್ತಾಪಿಸಿದ ವಿಷಯವು ಚರ್ಚೆಗೆ ಗ್ರಾಸವಾಗಿತ್ತು.

ಅಕ್ರಮವಾಗಿ ಹಣದ ವರ್ಗಾವಣೆ ಮಾಡಿದ ಪ್ರಕರಣದಲ್ಲಿ ಇ.ಡಿ ಅಧಿಕಾರಿಗಳು ಈಗಾಗಲೇ ಮಹದೇವ್‌ ಬೆಟ್ಟಿಂಗ್‌ ಆ್ಯಪ್ ಪ್ರವರ್ತಕರನ್ನು ವಿಚಾರಣೆ ನಡೆಸುತ್ತಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಛತ್ತೀಸ್‌ಗಢದಲ್ಲಿ ಇ.ಡಿ ಅಧಿಕಾರಿಗಳು ದಾಳಿ ನಡೆಸಿ 5.39 ಕೋಟಿ ರೂಪಾಯಿಯನ್ನು ವಶಪಡಿಸಿಕೊಂಡಿತ್ತು. ಅಷ್ಟೇ ಅಲ್ಲ, 15 ಕೋಟಿ ರೂ. ಇರುವ ಬ್ಯಾಂಕ್‌ ಖಾತೆಯನ್ನೂ ಜಪ್ತಿ ಮಾಡಿತ್ತು. ಆಸಿಂ ದಾಸ್‌ ಎಂಬಾತನನ್ನು ಕೂಡ ಇ.ಡಿ ಬಂಧಿಸಿತ್ತು. ಇದರ ಬೆನ್ನಲ್ಲೇ, ಮುಖ್ಯಮಂತ್ರಿ ಭೂಪೇಶ್‌ ಬಘೇಲ್‌ ಅವರೇ ಲಂಚ ಸ್ವೀಕರಿಸಿದ್ದಾರೆ ಎಂದು ಇ.ಡಿ ತಿಳಿಸಿತ್ತು.

Continue Reading

ಮಳೆ

Karnataka Weather : ಹುಷಾರ್‌.. ನಾಲ್ಕೈದು ದಿನ ಮತ್ತಷ್ಟು ಏರಲಿದೆ ಉರಿ ಬಿಸಿಲು; ಎಚ್ಚರ ತಪ್ಪಿದ್ರೆ ಅಪಾಯ ಗ್ಯಾರಂಟಿ

Karnataka Weather Forecast : ರಾಜ್ಯಾದ್ಯಂತ ತಾಪಮಾನ ಏರಿಕೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದ್ದು, ಜನ-ಸಾಮಾನ್ಯರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದೆ. ಸಾಮಾನ್ಯಕ್ಕಿಂತ 2-3 ಡಿ.ಸೆ ಹೆಚ್ಚಾಗುವ ಮುನ್ಸೂಚನೆಯನ್ನು ನೀಡಲಾಗಿದೆ.

VISTARANEWS.COM


on

By

karnataka weather forecast
Koo

ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ರಾಜ್ಯಾದ್ಯಂತ ಒಣ ಹವೆ (Dry Weather) ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ. ಏಪ್ರಿಲ್‌ 30ರವರೆಗೆ ಹೀಟ್‌ ವೇವ್‌ (heat Wave) ಪ್ರಭಾವ ಇರಲಿದೆ.

ಪ್ರಮುಖವಾಗಿ ಉತ್ತರ ಒಳನಾಡಿ ಬೀದರ್, ಕಲಬುರಗಿ, ವಿಯಜಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಬಳ್ಳಾರಿ, ವಿಜಯನಗರ ಹಾಗೂ ದಕ್ಷಿಣ ಒಳನಾಡಿನ ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ತಾಪಮಾನ ಏರಿಕೆ ಜತೆಗೆ ಹೀಟ್‌ ವೇವ್‌ ಹೆಚ್ಚಾಗುವ ಸಾಧ್ಯತೆ ಇದೆ.

ಬಿಸಿ ಗಾಳಿ ಎಚ್ಚರಿಕೆ

ಏಪ್ರಿಲ್ 27 ರಿಂದ ಮೇ 1ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರತೆ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ 5 ದಿನಗಳಲ್ಲಿ ರಾಜ್ಯದಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್‌ ಏರಿಕೆಯಾಗುವ ಸಾಧ್ಯತೆ ಇದೆ.

ಬೆಂಗಳೂರು ನಗರದಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 37 ಮತ್ತು 23 ಡಿ.ಸೆ ಇರುವ ಸಾಧ್ಯತೆ ಇದೆ.

ಇದನ್ನೂ ಓದಿ: Murder Case : ದೊಡ್ಡವರ ಹಣಕಾಸು ವಿಷ್ಯಕ್ಕೆ 3 ವರ್ಷದ ಮಗು ಬಲಿ; ಎದೆ ಮೇಲೆ ಕಾಲಿಟ್ಟು ಕೊಂದ ಪಾಪಿ

ಸೂರ್ಯನ ತಾಪವು ಜನರನ್ನು ಹಿಂಡಿ ಹಿಪ್ಪೆ ಮಾಡುತ್ತಿದೆ. ಬೇವರಿಸುವ ಸೂರ್ಯನ ಶಾಖವು ಜನರು ಆರೋಗ್ಯದ ಮೇಲೂ ಪರಿಣಾಮ (Health Tips) ಬೀರುತ್ತಿದೆ. ಸಾರ್ವಜನಿಕರು ಏನು ಮಾಡಬೇಕು ಏನು ಮಾಡಬಾರದು ಎಂಬ ಮಾಹಿತಿ ಇಲ್ಲದೆ.

ತಾಪಮಾನದಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳೇನು?

ಸಾಮಾನ್ಯವಾಗಿ ದೇಹದ ಉಷ್ಣತೆಯು 36.4 ಡಿ.ಸೆ ನಿಂದ 37.2 ಡಿ.ಸೆ ಇರಲಿದೆ. ಒಳಾಂಗಣ ಹಾಗೂ ಹೊರಾಂಗಣ ಪ್ರದೇಶಗಳಲ್ಲಿ ಹೆಚ್ಚಿನ ಉಷ್ಣತೆಯಿಂದಾಗಿ ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ. ಸಾಧಾರಣದಿಂದ ತೀವ್ರ ಜ್ವರ, ಗಂಧೆಗಳು (prickly heat), ಊತಗಳು ( ಕೈ-ಕಾಲುಗಳು ಹಾಗೂ ಮೊಣಕಾಲು), ಉಷ್ಣತೆಯಿಂದ ಸೆಳೆತ (ಸ್ನಾಯುಗಳ ಸೆಳೆತ), ಪ್ರಜ್ಞೆ ತಪ್ಪುವುದು, ಸುಸ್ತಾಗುವುದು ಹಾಗೂ ಪಾಶ್ವವಾಯು ಉಂಟಾಗಲಿದೆ. ಕೆಲವೊಮ್ಮೆ ಅತಿಯಾದ ಉಷ್ಣತೆಯಿಂದಾಗಿ ಹೃದ್ರೋಗ, ಉಸಿರಾಟದ ಸಮಸ್ಯೆಗಳು ಹಾಗೂ ಕಿಡ್ನಿ ಸಮಸ್ಯೆಗಳು ಹೆಚ್ಚಾಗುತ್ತದೆ. ಅತಿಯಾದ ಬಾಯಾರಿಕೆ, ವಾಕರಿಕೆ ಅಥವಾ ವಾಂತಿಯಾಗುವುದು, ತಲೆನೋವು ಹಾಗೂ ಮೂತ್ರ ವಿಸರ್ಜನೆ ಪ್ರಮಾಣದಲ್ಲಿ ಕಡಿಮೆಯಾಗುವುದು ಹಾಗೂ ಹಳದಿ ಬಣ್ಣದ ಮೂತ್ರ, ಏರು ಗತಿಯ ಉಸಿರಾಟ ಹಾಗೂ ಹೃದಯದ ಬಡಿತ ಹೆಚ್ಚಾಗಲಿದೆ.

ಏನು ಮಾಡಬೇಕು?
-ತಕ್ಷಣವೇ ತಂಪಾದ ಸ್ಥಳಕ್ಕೆ ತೆರಳಿ ಮತ್ತು ದ್ರವಾಹಾರವನ್ನು ಸೇವಿಸಿ. ನೀರಿನ ಸೇವನೆ ಅತ್ಯುತ್ತಮ.
-ಹೆಚ್ಚು ನೀರು ಕುಡಿಯುವುದು. ಬಾಯಾರಿಕೆ ಇಲ್ಲದಿದ್ದರೂ ಆಗಾಗ ನೀರು ಸೇವಿಸಿ. ಜತೆಗೆ ನಿಂಬೆ ಹಣ್ಣಿನ ಶರಬತ್ತು, ಮಜ್ಜಿಗೆ, ಲಸ್ಸಿ ಹಾಗು ಹಣ್ಣಿನ ಜ್ಯೂಸ್‌ಗಳನ್ನು ಒಂದು ಚಿಟಿಕೆ ಉಪ್ಪಿನೊಂದಿಗೆ ಸೇವಿಸುವುದು ಉತ್ತಮ.
-ಈ ಋತುಮಾನದಲ್ಲಿ ಲಭ್ಯವಿರುವ ಹಾಗೂ ಹೆಚ್ಚು ನೀರಿನ ಅಂಶವನ್ನು ಹೊಂದಿರುವ ಹಣ್ಣು ಹಾಗೂ ತರಕಾರಿಗಳಾದ ಕಲ್ಲಂಗಡಿ, ಕರಬೂಜ, ಕಿತ್ತಳೆ, ದ್ರಾಕ್ಷಿ, ಅನಾನಸ್, ಸೌತೆಕಾಯಿ, ಲೆಟೂಸ್, ಎಳನೀರುಗಳನ್ನು ಹೆಚ್ಚಾಗಿ ಸೇವಿಸಬೇಕು.
-ತಿಳಿ ಬಣ್ಣದ, ಅಳಕವಾದ (loose fitting) ಹತ್ತಿಯ ಬಟ್ಟೆಯನ್ನು ಧರಿಸುವುದು ಉತ್ತಮ.
-ಬಿಸಿಲಿನಲ್ಲಿ ಹೊರ ಹೋಗುವ ಸಂದರ್ಭಗಳಲ್ಲಿ ಛತ್ರಿ, ಟೋಪಿ/ಹ್ಯಾಟ್, ಟವೆಲ್ ಅಥವಾ ಇನ್ನಾವುದೇ ಸಾಂಪ್ರದಾಯಿಕ ಪದ್ಧತಿಯನ್ನು ಅನುಸರಿಸಿ ಬಿಸಿಲಿನಿಂದ ರಕ್ಷಣೆ ಪಡೆಯಿರಿ.
-ಬಿಸಿಲಿನಲ್ಲಿ ನಡೆಯುವ ಸಂದರ್ಭದಲ್ಲಿ ಪಾದರಕ್ಷೆ / ಚಪ್ಪಲಿ ಅಥವಾ ಶೂಸ್‌ಗಳನ್ನು ಧರಿಸಬೇಕು.
-ಸಾಧ್ಯವಾದಷ್ಟು ಒಳಾಂಗಣದಲ್ಲಿದ್ದು, ಉತ್ತಮ ಗಾಳಿ ಬೀಸುವ ಹಾಗೂ ತಣ್ಣಗಿರುವ ಪ್ರದೇಶದಲ್ಲಿರಿ. ನೇರವಾಗಿ ಸೂರ್ಯನ ಬೆಳಕು ಹಾಗೂ ಬಿಸಿ ಗಾಳಿಯು ಮನೆಯ ಒಳಗೆ ಬರದಂತೆ ತಡೆಯಲು ಹಗಲು ಹೊತ್ತಿನಲ್ಲಿ ಕಿಟಕಿಗಳನ್ನು ಪರದೆಗಳಿಂದ ಮುಚ್ಚಿ.

ಈ ಕೆಲಸವನ್ನು ಮಾಡಬಾರದು

-ಬಿಸಿಲಿನಲ್ಲಿ ಅಂದರೆ ಮಧ್ಯಾಹ್ನ 12 ಗಂಟೆಯಿಂದ 3 ಗಂಟೆಯವರೆಗೆ ಹೊರಹೋಗುವುದನ್ನು ತಪ್ಪಿಸಿ.
-ಮಧ್ಯಾಹ್ನದ ಸಮಯದಲ್ಲಿ ಶ್ರಮದಾಯಕ ಹೊರಾಂಗಣ ಚಟುವಟಿಕೆಗಳನ್ನು ಕೈಗೊಳ್ಳಬಾರದು. ಚಪ್ಪಲಿ ಧರಿಸದೆ ಹೊರಹೋಗುವ ಅಭ್ಯಾಸವನ್ನು ತಪ್ಪಿಸಿ.
-ಮಧ್ಯಾಹ್ನ ಅಡುಗೆ ಮಾಡುವುದು ತಪ್ಪಿಸಿ. ಅಡುಗೆ ಸಿದ್ಧಪಡಿಸುವ ಪ್ರದೇಶದಲ್ಲಿ ಕಿಟಕಿ ಹಾಗೂ ಬಾಗಿಲುಗಳನ್ನು ತೆರೆದಿಡಿ.
-ಮಧ್ಯಪಾನ, ಟೀ, ಕಾಫಿ ಮತ್ತು ಕಾರ್ಬೋನೇಟೆಡ್ ಪಾನೀಯಗಳು ಅಥವಾ ಹೆಚ್ಚು ಸಕ್ಕರೆ ಅಂಶವನ್ನು ಹೊಂದಿದ ಪಾನೀಯಗಳಿಂದ ದೂರವಿರಿ. ಇಂತಹ ಪಾನೀಯಗಳು ದೇಹವನ್ನು ನಿರ್ಜಲೀಕರಣಗೊಳಿಸುತ್ತವೆ ಅಥವಾ ಹೊಟ್ಟೆ ನೋವನ್ನು ಉಂಟುಮಾಡುತ್ತವೆ.
-ಹೆಚ್ಚು ಪ್ರೊಟೀನ್ ಭರಿತವಾದ ಹಾಗೂ ಹಳೆಯದಾದ ಆಹಾರ ಪದಾರ್ಥಗಳನ್ನು ಸೇವಿಸಬೇಡಿ.
-ಮಕ್ಕಳು ಅಥವಾ ಸಾಕು ಪ್ರಾಣಿಗಳನ್ನು ನಿಲುಗಡೆ ಮಾಡಿರುವ ವಾಹನಗಳಲ್ಲಿ ಬಿಡಬೇಡಿ. ವಾಹನಗಳ ಒಳಾಂಗಣದಲ್ಲಿನ ಹೆಚ್ಚಿನಾಪಮಾನವು ಅಪಾಯಕಾರಿಯಾಗಬಹುದು.
-ಕೆಲಸದ ಸ್ಥಳದಲ್ಲಿ ಕೆಲಸಗಾರರಿಗೆ ಕುಡಿಯಲು ತಣ್ಣನೆಯ ನೀರಿನ ವ್ಯವಸ್ಥೆ ಮಾಡಬೇಕು. 20 ನಿಮಿಷಗಳಿಗೊಮ್ಮೆ ಒಂದು ಗ್ಲಾಸ್‌ ಅಥವಾ ಅದಕ್ಕಿಂತ ಹೆಚ್ಚಿನ ನೀರು ಕುಡಿಬೇಕು

Heat wave

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

karnataka Weather : ದೂರ ಸರಿದ ಮಳೆ; ಬೆಂಗಳೂರಲ್ಲಿ 39ರ ಗಡಿದಾಟಲಿದೆ ಗರಿಷ್ಠ ಉಷ್ಣಾಂಶ! 15 ಜಿಲ್ಲೆಗಳಿಗೆ ಅಲರ್ಟ್‌

Temperature Warning: ಈ ವರ್ಷ ಬೆಂಗಳೂರು ತನ್ನೆಲ್ಲ ಹಳೆಯ ದಾಖಲೆಗಳನ್ನು ಮುರಿಯುತ್ತಾ ಬಂದಿದ್ದು, ಗರಿಷ್ಠ ತಾಪಮಾನವು ಮತ್ತಷ್ಟು ದುಪ್ಪಟ್ಟು ಆಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ. ಈ ನಡುವೆ 15 ಜಿಲ್ಲೆಗಳಿಗೆ ಹೀಟ್‌ ವೇವ್‌ ಅಲರ್ಟ್‌ (Heat Wave alert) ನೀಡಲಾಗಿದೆ.

VISTARANEWS.COM


on

By

karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯಾದ್ಯಂತ ಮಳೆಯು ದೂರ ಸರಿದಿದ್ದು, ಒಣಹವೆ (Karnataka Weather forecast) ಆವರಿಸಿದೆ. ರಾಜಧಾನಿ ಬೆಂಗಳೂರಲ್ಲಿ (temperature rising) ದಾಖಲೆಯ ಪ್ರಮಾಣದಲ್ಲಿ ಗರಿಷ್ಠ ಉಷ್ಣಾಂಶ ಏರಿಕೆ ಆಗುತ್ತಿದೆ. ಮಾರ್ಚ್‌ನಲ್ಲಿ ಹಳೆಯ ಎಲ್ಲ ದಾಖಲೆ ಮುರಿದಿದ್ದ ಬೆಂಗಳೂರಲ್ಲಿ ಇದೀಗ ಏಪ್ರಿಲ್‌ 28ರಂದು ಗರಿಷ್ಠ ಉಷ್ಣಾಂಶವು 39 ಡಿ.ಸೆಗೆ ಏರಿಕೆ ಆಗಲಿದೆ ಎಂದು ಹವಾಮಾನ ಇಲಾಖೆ (Bengaluru weather) ಮಾಹಿತಿ ನೀಡಿದೆ. ತಾಪಮಾನ (Bengaluru temperature) ಏರಿಕೆಯಿಂದ ಜನರು ಪರಿತಪಿಸುವಂತಾಗಿದೆ

ಕೂಲ್‌ ಸಿಟಿ (Cool city Bengaluru) ಎಂದು ಕರೆಸಿಕೊಳ್ಳುವ ಬೆಂಗಳೂರು ಹಾಟ್‌ ಸಿಟಿಯಾಗಿ (Bengaluru temperature) ಬದಲಾಗುತ್ತಿದೆ. ಬೆಂಗಳೂರಿನಲ್ಲೀಗ ದಾಖಲೆಯಲ್ಲಿ ಹೆಚ್ಚುತ್ತಿರುವ ತಾಪಮಾನದಿಂದ (Temperature Warning) ಸಿಟಿ ಜನರು ತತ್ತರಿಸಿ ಹೋಗಿದ್ದಾರೆ. ಬಿಸಿಲನಾಡು ಎಂದು ಕರೆಸಿಕೊಳ್ಳುವ ಉತ್ತರ ಒಳನಾಡಿನ ಜಿಲ್ಲೆಗಳಿಗೂ ರಾಜಧಾನಿ ಬೆಂಗಳೂರು ಅಕ್ಷರಶಃ ಸೆಡ್ಡು ಹೊಡೆಯುತ್ತಿದೆ.

ಮಾರ್ಚ್‌ ಬಳಿಕ ಏಪ್ರಿಲ್‌ ಮೊದಲ ವಾರದಲ್ಲೇ ಬೆಂಗಳೂರಿನಲ್ಲಿ ದಾಖಲೆಯ ಮಟ್ಟದಲ್ಲಿ ಗರಿಷ್ಠ ತಾಪಮಾನವು (Bengaluru heatwave) ದಾಖಲಾಗಿತ್ತು. ಇದೀಗ ಏಪ್ರಿಲ್‌ ಅಂತ್ಯದಲ್ಲೂ ಕಳೆದ ಕೆಲವು ದಿನಗಳಿಂದ ಬೆಂಗಳೂರಿನಲ್ಲಿ ಹಗಲಿನಲ್ಲಿ ತಾಪಮಾನ 38 ಡಿಗ್ರಿ ಸೆಲ್ಸಿಯಸ್‌ಗೆ ಏರಿಕೆ ಕಂಡಿದೆ. ಇದರಿಂದಾಗಿ ಬಿಸಿಲ ಬೇಗೆಗೆ ತೇವಾಂಶದ ಕೊರತೆಯಿಂದಾಗಿ ಒಣ ಹವೆ (Bengaluru heat) ಮುಂದುವರಿದಿದೆ. ಇಷ್ಟೊಂದು ತಾಪಮಾನದಲ್ಲಿ ಜನರು ತಿರುಗಾಡಿದರೆ ಖಂಡಿತವಾಗಿಯೂ ಅನಾರೋಗ್ಯಕ್ಕೆ ತುತ್ತಾಗಲಿದ್ದಾರೆ.

ಇದನ್ನೂ ಓದಿ: Home Remedy For Cracked Heels: ಒಡೆದ ಹಿಮ್ಮಡಿಗಳಿಗೆ ಕರ್ಪೂರದ ಎಣ್ಣೆ ಪರಿಣಾಮಕಾರಿ

ಹೀಟ್‌ ವೇವ್‌ ಶಾಕ್‌

ರಾಜ್ಯದಲ್ಲಿ ಏ.28ರಂದು ಒಣಹವೆ ಮುಂದುವರಿಯಲಿದೆ. ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಹೀಟ್‌ ವೇವ್‌ ಹೆಚ್ಚಾಗಲಿದೆ. ಹೀಗಾಗಿ ಈ 15 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದ್ದು, ಮುನ್ನೆಚ್ಚರಿಕೆಯನ್ನು ವಹಿಸುವಂತೆ ಸೂಚಿಸಲಾಗಿದೆ. ಜತೆಗೆ ಮುಂದಿನ 5 ದಿನಗಳಲ್ಲಿ ರಾಜ್ಯದಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್‌ ಏರಿಕೆಯಾಗುವ ಸಾಧ್ಯತೆ ಇದೆ.

ಇನ್ನೂ ಶುಕ್ರವಾರದಂದು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಒಣಹವೆ ಇತ್ತು. ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 42.2 ಡಿ.ಸೆ ದಾಖಲಾಗಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Chandrayaan 3
ದೇಶ15 mins ago

Chandrayaan 3: ಚಂದ್ರಯಾನ 3 ಆಗುತ್ತಿತ್ತು ಛಿದ್ರ; ಆ 4 ಸೆಕೆಂಡ್‌ಗಳಲ್ಲೇ ಮಿಷನ್‌ ಬಚಾವ್‌ ಆಗಿದ್ದು ಹೇಗೆ?

Champions Trophy 2025
ಕ್ರೀಡೆ31 mins ago

Champions Trophy 2025: ಚಾಂಪಿಯನ್ಸ್ ಟ್ರೋಫಿಗೆ ಸ್ಥಳ ನಿಗದಿಪಡಿಸಿದ ಪಾಕಿಸ್ತಾನ

Karnataka Weather
ಕರ್ನಾಟಕ1 hour ago

Karnataka Weather: ರಾಯಚೂರಿನಲ್ಲಿ ರಾಜ್ಯದಲ್ಲೇ ಗರಿಷ್ಠ ಉಷ್ಣಾಂಶ ದಾಖಲು; ಇನ್ನೂ 4 ದಿನ ಶಾಖದ ಅಲೆ ಎಚ್ಚರಿಕೆ

Lok Sabha Election
ದೇಶ1 hour ago

3ನೇ ಹಂತದಲ್ಲಿ ಕಣಕ್ಕಿಳಿದ 1,352 ಅಭ್ಯರ್ಥಿಗಳ ಪೈಕಿ 244 ಜನರ ವಿರುದ್ಧ ಕ್ರಿಮಿನಲ್‌ ಕೇಸ್!

Thomas Cup 2024
ಕ್ರೀಡೆ2 hours ago

Thomas Cup 2024: ಕ್ವಾರ್ಟರ್‌ ಫೈನಲ್​ಗೆ ಲಗ್ಗೆಯಿಟ್ಟ ಹಾಲಿ ಚಾಂಪಿಯನ್​ ಭಾರತ

Rameshwaram Cafe blast
ಕರ್ನಾಟಕ2 hours ago

Rameshwaram Cafe Blast: ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಕೇಸ್‌; ಇಬ್ಬರು ಶಂಕಿತ ಉಗ್ರರಿಗೆ 14 ದಿನ ನ್ಯಾಯಾಂಗ ಬಂಧನ

IPL 2024
ಕ್ರೀಡೆ2 hours ago

IPL 2024: ರಿಂಕು ಸಿಂಗ್​ಗೆ ಬೌಲಿಂಗ್​ ಮಾಡಿದ ಶಾರುಖ್‌ ಪುತ್ರ ಅಬ್ರಾಮ್; ವಿಡಿಯೊ ವೈರಲ್​

Narendra Modi
ದೇಶ2 hours ago

Narendra Modi: ತಾಕತ್ತಿದ್ದವರು 370ನೇ ವಿಧಿ ಜಾರಿಗೆ ತರಲಿ; ಪ್ರತಿಪಕ್ಷಗಳಿಗೆ ಮೋದಿ ಸವಾಲು!

International Labor Day-2024
ಉದ್ಯೋಗ3 hours ago

Labour Day 2024: ಮೇ 1ರ ಕಾರ್ಮಿಕ ದಿನಾಚರಣೆಯ ಹಿನ್ನೆಲೆ ಏನು? ಏನಿದರ ಸಂದೇಶ?

car crossed the divider and collided with a lorry Driver death
ತುಮಕೂರು3 hours ago

Road Accident: ಡಿವೈಡರ್ ದಾಟಿ ಲಾರಿಗೆ ಡಿಕ್ಕಿ ಹೊಡೆದ ಕಾರು; ಚಾಲಕ ಸ್ಥಳದಲ್ಲೇ ಸಾವು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

PM Narendra modi in Bagalakote and Attack on Congress
Lok Sabha Election 20249 hours ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 202410 hours ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ17 hours ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20241 day ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20241 day ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20241 day ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20241 day ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest2 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20242 days ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

ಟ್ರೆಂಡಿಂಗ್‌