ವಿಜಯಪುರ, ಕರ್ನಾಟಕ: ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಗ್ರಾಮದಲ್ಲಿ ಮತಯಂತ್ರಗಳನ್ನು (Karnataka Election Voting) ಒಡೆದು ಪುಡಿ ಪುಡಿ ಮಾಡಿದ ಘಟನೆ ಬುಧವಾರ ನಡೆದಿದೆ. ಗ್ರಾಮಸ್ಥರ ಈ ವರ್ತನೆಗೆ ನಿಖರವಾದ ಕಾರಣ ಇನ್ನೂ ಗೊತ್ತಾಗಿಲ್ಲ. ಆದರೆ, ತಪ್ಪು ಕಲ್ಪನೆಯಿಂದಾಗಿ ಗ್ರಾಮಸ್ಥರು ರೊಚ್ಚಿಗೆದ್ದು, ಈ ಕೃತ್ಯ ಎಸಗಿದ್ದಾರೆ ಎನ್ನಲಾಗುತ್ತಿದೆ(Karnataka Election 2023).
ಕರ್ನಾಟಕ ಚುನಾವಣೆಯ ಕುತೂಹಲಕರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಈ ಘಟನೆಯು ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲ್ಲೂಕಿನ ಮಸಬಿನಾಳ ಗ್ರಾಮದಲ್ಲಿ ನಡೆದಿದೆ. ಇವಿಎಂ ಮಶೀನ್ ಹಾಗೂ ವಿವಿಪ್ಯಾಟ್ ಮಶೀನ್‌ಗಳನ್ನು ಗ್ರಾಮಸ್ಥರು ಒಡೆದು ಹಾಕಿದ್ದಾರೆ. ಹಾನಿಗೊಳಗಾದ ಮಷಿನ್‌ಗಳು ಪರ್ಯಾಯವಾಗಿ ಬಳಸಲು ಅಧಿಕಾರಿಗಳು ತಂದಿದ್ದ ಮತಯಂತ್ರಗಳು ಎನ್ನಲಾಗುತ್ತಿದೆ.
ಬಿಸನಾಳ, ಡೋಣುರ ಗ್ರಾಮದಿಂದ ವಿಜಯಪುರಕ್ಕೆ ವಾಪಸ್ ತೆಗೆದುಕೊಂಡು ಬರುತ್ತಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ. ಅರ್ಧಕ್ಕೆ ಮತದಾನ ಕಾರ್ಯ ಸ್ಥಗಿತಗೊಳಿಸಿ ವಾಪಸ್ ಕೊಂಡೊಯ್ಯಲಾಗುತ್ತಿದೆ ಎಂದು ತಪ್ಪಾಗಿ ಭಾವಿಸಿ ಭಾವಿಸಿ ಮತ ಯಂತ್ರಗಳನ್ನು ಗ್ರಾಮಸ್ಥರು ಒಡೆದು ಹಾಕಿದ್ದಾರೆ. ಗ್ರಾಮಸ್ಥರು ಅಧಿಕಾರಿಗಳ ಕಾರನ್ನೂ ಜಖಂಗೊಳಿಸಿದ್ದಾರೆ.
ಇದನ್ನೂ ಓದಿ: ಶ್ರೀನಿವಾಸಪುರದಲ್ಲಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಎದುರೇ ಸ್ವತಂತ್ರ ಅಭ್ಯರ್ಥಿ ಮೇಲೆ ಹಲ್ಲೆ, ಕಲಬುರಗಿಯಲ್ಲೂ ಗಲಾಟೆ
ಗಲಾಟೆ ವೇಳೆ, ಗ್ರಾಮಸ್ಥರು ಚುನಾವಣೆ ಕಾರ್ಯದಲ್ಲಿ ನಿರತರಾಗಿದ್ದ ಸಿಬ್ಬಂದಿಗೂ ಹೊಡೆದಿದ್ದಾರೆ ಎನ್ನಲಾಗಿದೆ. ಹಾಗಾಗಿ, ಮಸಬಿನಾಳ ಗ್ರಾಮದಲ್ಲಿ ಪ್ರಕ್ಷುಬ್ದ ವಾತಾವರಣ ನಿರ್ಮಾಣವಾಗಿದೆ. ಮತಯಂತ್ರ ಕೆಟ್ಟಲ್ಲಿ ಬಳಕೆಗಾಗಿ ಇವಿಎಂ, ವಿವಿಪ್ಯಾಟ್ ಮಶೀನ್‌ಗಳು ರಿಸರ್ವ್ ಇಡಲಾಗಿತ್ತು. ಈ ಮತಯಂತ್ರಗಳನ್ನು ವಾಪಸ್ ತರುತ್ತಿದ್ದಾಗ, ಜನರು ಪ್ರಶ್ನಿಸಿದ್ದಾರೆ. ಸಿಬ್ಬಂದಿ ಸರಿಯಾಗಿ ಉತ್ತರಿಸದೇ ಇದ್ದಾಗ, ತಪ್ಪುಭಾವಿಸಿ ಗ್ರಾಮಸ್ಥರು ಮತಯಂತ್ರಗಳನ್ನು ಒಡೆದು ಹಾಕಿದ್ದಾರೆ ಎನ್ನಲಾಗಿದೆ.