Site icon Vistara News

Karnataka Election 2023: ಧಾರವಾಡದಿಂದಲೇ ಸ್ಪರ್ಧಿಸುವಂತೆ ವಿನಯ್‌ ಕುಲಕರ್ಣಿಗೆ ರಕ್ತದ ಪತ್ರ ಬರೆದ ಅಭಿಮಾನಿಗಳು

Vinay Kulkarni fans write blood letter to him asking him to contest from Dharwad Karnataka Election 2023 updates

ಧಾರವಾಡ: ವಿಧಾನಸಭಾ ಚುನಾವಣೆ (Karnataka Election 2023) ಹೊತ್ತಿನಲ್ಲಿ ಮಾಜಿ ಸಚಿವ ವಿನಯ್‌ ಕುಲಕರ್ಣಿ (Vinay Kulkarni) ಅವರು ಹಲವು ರೀತಿಯಲ್ಲಿ ಸುದ್ದಿಯಲ್ಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಶಿಗ್ಗಾಂವಿ ಕ್ಷೇತ್ರದಿಂದ ಅವರಿಗೆ ಪ್ರತಿಸ್ಪರ್ಧಿಯಾಗಿ ಸ್ಪರ್ಧೆ ಮಾಡುತ್ತಾರೆ ಎಂಬ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಈ ಎಲ್ಲ ಚರ್ಚೆಗಳ ಬೆನ್ನಲ್ಲೇ ಅವರ ಅಭಿಮಾನಿ ಬಳಗದವರು ಧಾರವಾಡದಿಂದಲೇ ಸ್ಪರ್ಧೆ ಮಾಡಬೇಕು ಎಂದು ಒತ್ತಾಯಿಸಿದ್ದು, ಈ ಸಂಬಂಧ ರಕ್ತದಿಂದ ಪತ್ರ ಬರೆದಿದ್ದಾರೆ.

ಧಾರವಾಡ ಗ್ರಾಮೀಣ ಕ್ಷೇತ್ರದಿಂದ ಆಯ್ಕೆಯಾಗಿ ಬರುತ್ತಿದ್ದ ವಿನಯ್‌ ಕುಲಕರ್ಣಿಗೆ ಬಿಜೆಪಿ ಜಿಪಂ ಸದಸ್ಯ ಯೋಗೀಶಗೌಡ ಕೊಲೆ ಪ್ರಕರಣದಲ್ಲಿ ಜೈಲಿಗೆ ಹೋಗಿ ಬಂದ ಮೇಲೆ ಧಾರವಾಡಕ್ಕೆ ನಿರ್ಬಂಧ ಹೇರಲಾಗಿತ್ತು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಸಹ ಅವರನ್ನು ಶಿಗ್ಗಾಂವಿ ಕ್ಷೇತ್ರದಲ್ಲಿ ಕಣಕ್ಕೆ ಇಳಿಯುವಂತೆ ಒತ್ತಾಯ ಮಾಡುತ್ತಿದೆ. ಅಲ್ಲದೆ, ಆ ಕ್ಷೇತ್ರದಲ್ಲಿರುವ ಬಂಡಾಯ ಶಮನಕ್ಕೆ ವ್ಯವಸ್ಥೆಯನ್ನೂ ಮಾಡಿದೆ. ಇದರ ಭಾಗವಾಗಿ ವಿನಯ್‌ ಕುಲಕರ್ಣಿ ಅವರೂ ಸಹ ಆ ಕ್ಷೇತ್ರದಲ್ಲಿ ಸಂಚಾರ ಮಾಡಿ ಪ್ರಮುಖರನ್ನು ಭೇಟಿ ಮಾಡುತ್ತಿದ್ದಾರೆ. ಈ ಮಧ್ಯೆ ವಿನಯ ಕುಲಕರ್ಣಿ ಧಾರವಾಡದಲ್ಲೇ ಸ್ಪರ್ಧೆ ಮಾಡುವಂತೆ ಬಸವರಾಜ್‌ ಜಾಧವ ಹಾಗೂ ಅಭಿಮಾನಿಗಳು ರಕ್ತದಲ್ಲಿ ಪತ್ರ ಬರೆದಿದ್ದಾರೆ.

ಧಾರವಾಡದಲ್ಲಿ ವಿನಯ ಕುಲಕರ್ಣಿ ಅಭಿಮಾನಿ ಬಳಗದಿಂದ ರಕ್ತದಿಂದ ಪತ್ರ ಬರೆಯಲಾಗಿದ್ದು, ಧಾರವಾಡ ಗ್ರಾಮೀಣ 71ನೇ ಮತ ಕ್ಷೇತ್ರದಿಂದಲೇ ಸ್ಪರ್ಧಿಸಬೇಕು ಎಂದು ಒತ್ತಾಯಿಸಿದೆ. ಧಾರವಾಡದ ಕಾಂಗ್ರೆಸ್ ಕಾರ್ಯಕರ್ತರಿಂದ ರಕ್ತದ ಪತ್ರದ ಮೂಲಕ ಒತ್ತಡ ಹೇರಲಾಗುತ್ತಿದೆ. ಈ ಪತ್ರವನ್ನು ವಿನಯ್ ಪತ್ನಿ ಶಿವಲೀಲಾ ಕುಲಕರ್ಣಿ ಅವರಿಗೆ ನೀಡಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ: Karnataka Election 2023: ಅರಸೀಕೆರೆ ಜೆಡಿಎಸ್‌ ಶಾಸಕತ್ವಕ್ಕೆ ಶಿವಲಿಂಗೇಗೌಡ ರಾಜೀನಾಮೆ; ಶೀಘ್ರ ಕಾಂಗ್ರೆಸ್‌ ಸೇರ್ಪಡೆ

ಧಾರವಾಡಕ್ಕೆ ಪ್ರವೇಶ ನಿರ್ಬಂಧ; ವಿನಾಯಿತಿ ಕೋರಿ ವಿನಯ್‌ ಕುಲಕರ್ಣಿ ಸಲ್ಲಿಸಿದ್ದ ಅರ್ಜಿ ವಜಾ

ಧಾರವಾಡ: ಚುನಾವಣೆ ಹೊಸ್ತಿಲಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ ಶಾಕ್‌ ನೀಡಿದೆ. ಧಾರವಾಡ ಜಿಲ್ಲೆ ಪ್ರವೇಶ ನಿರ್ಬಂಧಕ್ಕೆ ವಿನಾಯಿತಿ ಕೋರಿ ವಿನಯ್‌ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾ ಮಾಡಿರುವುದರಿಂದ ತೀವ್ರ ಹಿನ್ನಡೆಯಾಗಿದೆ.

ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದ ಯೋಗೀಶಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್‌ ಕುಲಕರ್ಣಿ ಬಂಧನವಾಗಿದ್ದರು. 9 ತಿಂಗಳು ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದು, ಬಿಡುಗಡೆಯಾದ ಬಳಿಕ ಅವರಿಗೆ ಧಾರವಾಡ ಜಿಲ್ಲೆ ಪ್ರವೇಶಕ್ಕೆ ಕೋರ್ಟ್‌ ನಿರ್ಬಂಧ ವಿಧಿಸಿತ್ತು. ಹೀಗಾಗಿ ಧಾರವಾಡ ಜಿಲ್ಲೆ ಪ್ರವೇಶಕ್ಕಿರುವ ನಿರ್ಬಂಧ ತೆರವುಗೊಳಿಸಲು ಕೋರಿ 2 ತಿಂಗಳ ಹಿಂದೆ ಮಾಜಿ ಸಚಿವ ಅರ್ಜಿ ಸಲ್ಲಿಸಿದ್ದರು. ಆದರೆ ಈ ಅರ್ಜಿಯನ್ನು ಸರ್ವೋಚ್ಚ ನ್ಯಾಯಾಲಯ ತಿರಸ್ಕರಿಸಿದೆ.

ಇದನ್ನೂ ಓದಿ | Karnataka Election 2023: ಅರಸೀಕೆರೆ ಜೆಡಿಎಸ್‌ ಶಾಸಕತ್ವಕ್ಕೆ ಶಿವಲಿಂಗೇಗೌಡ ರಾಜೀನಾಮೆ; ಶೀಘ್ರ ಕಾಂಗ್ರೆಸ್‌ ಸೇರ್ಪಡೆ

ಇನ್ನು ಟ್ರಯಲ್ ಕೋರ್ಟ್ (ವಿಚಾರಣಾ ನ್ಯಾಯಾಲಯದಲ್ಲಿ) ನ್ಯಾಯಾಲಯದಲ್ಲಿ ಮತ್ತೊಮ್ಮೆ ಅರ್ಜಿ ಸಲ್ಲಿಸಿ ಇತ್ಯರ್ಥ ಮಾಡಿಕೊಳ್ಳುವಂತೆ ಸುಪ್ರೀಂ ಕೋರ್ಟ್ ವಿನಯ್‌ ಕುಲಕರ್ಣಿಗೆ ಸೂಚನೆ ನೀಡಿದ್ದು, ಯಾವ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದಿದೆಯೋ ಅದೇ ನ್ಯಾಯಾಲಯದಲ್ಲಿ ಅರ್ಜಿ‌ ಸಲ್ಲಿಸಿ ಇತ್ಯರ್ಥ ಮಾಡಿಕೊಳ್ಳುವಂತೆ ನಿರ್ದೇಶನ ನೀಡಿದೆ.

2016 ಜೂನ್ 15 ರಂದು ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಸದಸ್ಯ, ಬಿಜೆಪಿ ಮುಖಂಡ ಯೋಗೀಶಗೌಡ ಅವರ ಕೊಲೆಯಾಗಿತ್ತು. ನಂತರ ಆರೋಪಿಗಳು ತಾವೇ ಹತ್ಯೆ ಮಾಡಿರುವುದಾಗಿ ಒಪ್ಪಿಕೊಂಡು ಪೊಲೀಸರುಗೆ ಶರಣಾಗಿದ್ದರು. ಆದರೆ ಯೋಗೇಶಗೌಡ ಗೌಡರ ಕುಟುಂಬಸ್ಥರು ಕೊಲೆ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಪಟ್ಟುಹಿಡಿದಿದ್ದರು. ನಂತರ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗ ಪ್ರಕರಣವನ್ನು ಸಿಬಿಐಗೆ ವಹಿಸಿತು. ತನಿಖೆಯಲ್ಲಿ ಯೋಗಶ್‌ಗೌಡ ಹತ್ಯೆ ಸಂಚಿನಲ್ಲಿ ಕಾಂಗ್ರೆಸ್‌ ಮಾಜಿ ಸಚಿವ ವಿನಯ್‌ ಕುಲಕರ್ಣಿ ಅವರ ಕೈವಾಡವಿದೆ ಇದೆ‌ ಎಂದು ವಿನಯ್‌ ಕುಲಕರ್ಣಿಯನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದರು.

ಪ್ರಕರಣದಲ್ಲಿ ಬಂಧನವಾಗಿ 9 ತಿಂಗಳು ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಕಾಲ ಕಳೆದಿದ್ದ ಮಾಜಿ ಸಚಿವ, ಷರತ್ತು ಬದ್ಧ ಜಾಮೀನಿನ ಮೇಲೆ ಹೊರ ಬಂದಿದ್ದರು. ಆದರೆ ವಿನಯ್‌ ಕುಲಕರ್ಣಿಗೆ ಧಾರವಾಡ ಜಿಲ್ಲೆ ಪ್ರವೇಶಕ್ಕೆ ಕೋರ್ಟ್‌ ನಿರ್ಬಂಧ ವಿಧಿಸಿತ್ತು. ಇದೀಗ ನಿರ್ಬಂಧ ವಿನಾಯಿತಿಗೆ ಸಲ್ಲಿಸಿದ್ದ ಅರ್ಜಿಯನ್ನೂ ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.

ಇದನ್ನೂ ಓದಿ: Karnataka Election 2023: ಗುಬ್ಬಿ ಸಂಭಾವ್ಯ ಕೈ ಅಭ್ಯರ್ಥಿ ಎಸ್.ಆರ್. ಶ್ರೀನಿವಾಸ್‌ಗೆ ಜೆಡಿಎಸ್‌ ಪ.ಪಂ ಸದಸ್ಯರ ಬೆಂಬಲ; ದಳಕ್ಕೆ ಆಘಾತ

ಶಿಗ್ಗಾಂವಿಯಿಂದ ವಿನಯ್‌ ಕುಲಕರ್ಣಿ ಸ್ಪರ್ಧೆ?

ಧಾರವಾಡ ಗ್ರಾಮೀಣ ಕ್ಷೇತ್ರದ ಮಾಜಿ ಶಾಸಕರೂ ಆಗಿರುವ ವಿನಯ್‌ ಕುಲಕರ್ಣಿಗೆ ಜಿಲ್ಲೆಯ ಪ್ರವೇಶಕ್ಕೆ ನಿರ್ಬಂಧ ಇರುವುದರಿಂದ ಕ್ಷೇತ್ರದ ರಾಜಕೀಯದಲ್ಲಿ ಸಕ್ರಿಯವಾಗಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಅವರು ಹಾವೇರಿ ಜಿಲ್ಲೆಯ ಸಿಎಂ ಬಸವರಾಜ ಬೊಮ್ಮಾಯಿ ಅವರ ಕ್ಷೇತ್ರ ಶಿಗ್ಗಾಂವಿಯಲ್ಲಿ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಕಾಂಗ್ರೆಸ್‌ನ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ 124 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಶಿಗ್ಗಾಂವಿ ಕ್ಷೇತ್ರಕ್ಕೆ 2ನೇ ಪಟ್ಟಿಯಲ್ಲಿ ಅಭ್ಯರ್ಥಿ ಘೋಷಣೆಯಾಗಲಿದ್ದು, ಮಾಜಿ ಸಚಿವ ವಿನಯ್‌ ಕುಲಕರ್ಣಿಗೆ ಟಿಕೆಟ್‌ ಸಿಗುವುದೋ, ಇಲ್ಲವೋ ಎಂಬ ಬಗ್ಗೆ ಕುತೂಹಲ ಮೂಡಿದೆ.

Exit mobile version