ಬೆಂಗಳೂರು: ಸಿವಿಲ್ ಸೇವಾ ನಿಯಮಾವಳಿ ಉಲ್ಲಂಘನೆ, ಭ್ರಷ್ಟಾಚಾರ ಹಾಗೂ ವೈಯಕ್ತಿಕ ವಿಚಾರಗಳಲ್ಲಿ ಆರೋಪ, ಪ್ರತ್ಯಾರೋಪ ಹಿನ್ನೆಲೆಯಲ್ಲಿ ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ (Sindhuri vs Roopa) ಅವರ ವಿರುದ್ಧ ತನಿಖೆ ನಡೆಸಲು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರು ಅದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ | Sindhuri Vs Roopa : ಸಿಂಧೂರಿಗೆ ಬಿಗ್ ರಿಲೀಫ್, ಮಾನಹಾನಿಕರ ಹೇಳಿಕೆ ನೀಡದಂತೆ ರೂಪಾಗೆ ಕೋರ್ಟ್ ಆದೇಶ
ಸಾಮಾಜಿಕ ಜಾಲತಾಣಗಳಲ್ಲಿ ರೋಹಿಣಿ ಸಿಂಧೂರಿ ಅವರ ಪೋಟೊಗಳನ್ನು ಪ್ರಕಟಿಸಿ ಭ್ರಷ್ಟಾಚಾರದ ಆರೋಪವನ್ನು ಡಿ.ರೂಪಾ ಮಾಡಿದ್ದರು. ಮೈಸೂರು ಡಿಸಿ ನಿವಾಸದಲ್ಲಿ ಈಜುಕೊಳ ನಿರ್ಮಾಣ, ಪಾರಂಪರಿಕ ಕಟ್ಟಡ ನಿಯಮಾವಳಿ ಉಲ್ಲಂಘನೆ, ಬ್ಯಾಗ್ ಖರೀದಿ ಪ್ರಕರಣಗಳಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದ್ದರು. ಈ ಬಗ್ಗೆಯೂ ತನಿಖೆ ನಡೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ಮೇರೆಗೆ ಮುಖ್ಯ ಕಾರ್ಯದರ್ಶಿ ತನಿಖೆಗೆ ಆದೇಶ ಹೊರಡಿಸಿದ್ದಾರೆ.