ಅದ್ಧೂರಿಯಾಗಿ ನಡೆಯಿತು ವಿಶ್ವಕುಂದಾಪ್ರ ಕನ್ನಡ ದಿನಾಚರಣೆ - Vistara News

ಕರ್ನಾಟಕ

ಅದ್ಧೂರಿಯಾಗಿ ನಡೆಯಿತು ವಿಶ್ವಕುಂದಾಪ್ರ ಕನ್ನಡ ದಿನಾಚರಣೆ

ಆಸಾಡಿ ಅಮವಾಸ್ಯೆ ಪ್ರಯುಕ್ತ ಬೆಂಗಳೂರಿನ ವಿಜಯ ನಗರದ ಬಂಟರ ಸಂಘದ ಸಭಾಭವನದಲ್ಲಿ ವಿಶ್ವಕುಂದಾಪ್ರ ಕನ್ನಡ ದಿನಾಚರಣೆ ಅದ್ಧೂರಿಯಾಗಿ ನಡೆಯಿತು. ಹಲವಾರು ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

VISTARANEWS.COM


on

ವಿಶ್ವಕುಂದಾಪ್ರ ಕನ್ನಡ ದಿನಾಚರಣೆ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕುಂದಾಪುರದಲ್ಲಿ ಎಷ್ಟು ಸೊಬಗಿದೆಯೋ ಅಷ್ಟೇ ಸೊಬಗಿನ ಸೊಗಡು ಆ ಭಾಷೆಯಲ್ಲೂ ಇದೆ. ಕುಂದಾಪುರ ಭಾಷೆ ಬದುಕನ್ನು ಪ್ರಚುರಪಡಿಸಲು ವಿಶ್ವಕುಂದಾಪ್ರ ಕನ್ನಡ ದಿನವನ್ನು ಗುರುವಾರ (ಜುಲೈ ೨೮) ಅದ್ಧೂರಿಯಾಗಿ ನಡೆಯಿತು.

ಆಸಾಡಿ ಅಮವಾಸ್ಯೆ ಪ್ರಯುಕ್ತ ಬೆಂಗಳೂರಿನ ವಿಜಯ ನಗರದ ಬಂಟರ ಸಂಘದ ಸಭಾಭವನದಲ್ಲಿ ವಿಶ್ವ ಕುಂದಾಪ್ರ ದಿನವನ್ನು ಆಚರಿಸಲಾಗಿದ್ದು, ಹಲವು ಕಾರ್ಯಕ್ರಮಗಳು, ಕುಂದಾಪುರದ ಸ್ಥಳೀಯತೆಯ ಸೊಬಗನ್ನು ಅನಾವರಣಗೊಳಿಸಿತು.

ಕುಂದಾಪ್ರ ‌ಕನ್ನಡ ಗೀತೆಯನ್ನು ಯುವ ಗಾಯಕಿ ಸಾನ್ವಿ ಶೆಟ್ಟಿ ಹಾಡಿ ಜನರನ್ನು ರಂಜಿಸಿದರು. ಚೇತನ್ ನೈಲಾಡಿ ನೇತೃತ್ವದಲ್ಲಿ “ಹೆಂಗಸರ ಪಂಚಾಯ್ತಿ” ಕಾರ್ಯಕ್ರಮದ ಮೂಲಕ ಸಂಸ್ಕೃತಿ ಬಿಂಬಿಸುತ್ತಾ ಹಾಸ್ಯದ ಮೂಲಕ ಭಾಷಿ, ಬದ್ಕನ್ನು ತೋರಿಸಿಕೊಟ್ಟರು. ಕುಂದಾಪ್ರ ಕನ್ನಡದ ರಾಯಭಾರಿ ‌ಎಂದೇ ಖ್ಯಾತಿಯಾಗಿರುವ ಮನು ಹಂದಾಡಿ ಕುಂದಾಪ್ರ ಭಾಷೆಯಲ್ಲಿ ಹಾಸ್ಯದ ಮೂಲಕವೇ ಭಾಷೆ ಮಹತ್ವ ಸಾರಿದರು. ತಮ್ಮ ಮಾತಿನ ಕೊನೆಯವರೆಗೂ ಪ್ರೇಕ್ಷಕರನ್ನು ನೆಗೆಗಡಲಲ್ಲಿ ತೇಲಿಸಿದರು.

“ಕುಂದಾಪ್ರ ಕಟ್ಕಟ್ಲೆ” ಕಾರ್ಯಕ್ರಮದ ಮೂಲಕ ಈ ಭಾಗದ ಮಹತ್ವದ ಸಂಸ್ಕೃತಿಯನ್ನು ಪರಿಚಯಿಸಲಾಯಿತು. ಬೆಂಗಳೂರಿನ ಹಲವರಿಗೆ ಕುಂದಾಪುರ ವೈಶಿಷ್ಟ್ಯ ವಿಭಿನ್ನ ಹಬ್ಬದ ಬಗೆಗಿನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ನವರಾತ್ರಿಯ ಸಮಯದಲ್ಲಿನ ಕಟ್ಟೆ ಪೂಜೆ, ಹುಲಿ ವೇಷ ಆರ್ಭಟವನ್ನು ಪರಿಚಯಿಸಲಾಯಿತು. ಬಲೀಂದ್ರ ಪೂಜೆಯ ಮೌಲ್ಯವನ್ನು ಕಾರ್ಯಕ್ರಮದ ಮೂಲಕ ತಿಳಿಸಲಾಯಿತು. ಇದೀಗ ವಿರಳವಾಗಿ ಕಾಣಸಿಗುವ ವಸಂತ ಕುಣಿತದ ಹೌದರಾಯನ ವಾಲಗದ ಕುಣಿತವನ್ನು ಬೆಂಗಳೂರಿನಲ್ಲಿ ಪ್ರದರ್ಶಿಸಿದ್ದು ವಿಶೇಷವಾಗಿತ್ತು. ಹಾಗೇ ಭಜನಾ ಕುಣಿತವನ್ನು ಪ್ರದರ್ಶಿಸಿ‌ ಭಕ್ತಿ ಭಾವ ಮೆರೆಯಲಾಯಿತು.

ಯಕ್ಷಗಾನ ಅಂದರೆ ಕರಾವಳಿ ಭಾಗದಲ್ಲಿ ಆರಾಧಿಸಿ ಪೂಜಿಸುವವರಿದ್ದಾರೆ. ವಿಶ್ವಕುಂದಾಪ್ರ‌ ದಿನದ ವಿಶೇಷ ಸಂದರ್ಭದಲ್ಲಿ ವೀರ ಅಭಿಮನ್ಯು ‌ಕಾಳಗದ ಯಕ್ಷಗಾನದಲ್ಲಿ ಅಭಿಮನ್ಯುನನ್ನು ಯುದ್ದಭೂಮಿಗೆ ಸುಭದ್ರೆಯ ನೋವಿನಿಂದಲೇ ಕಳಿಸಿಕೊಡುವ ಸಂದರ್ಭದ ಯಕ್ಷಗಾನ ತುಣುಕನ್ನು ಪ್ರದರ್ಶನ ಮಾಡಲಾಯಿತು.

ಇದನ್ನೂ ಓದಿ | Modi in Nepal: ಬುದ್ಧನ ಜನ್ಮಸ್ಥಾನದಲ್ಲಿ ಮೋದಿ, ಸಂಸ್ಕೃತಿ, ಪರಂಪರೆ ಕೇಂದ್ರಕ್ಕೆ ಶಿಲಾನ್ಯಾಸ

ವಿಶ್ವ ಕುಂದಾಪ್ರ ದಿನ ಪ್ರಯುಕ್ತ ಮಾಜಿ ಮುಖ್ಯಮಂತ್ರಿಯವರಾದ ಸಿದ್ದರಾಮಯ್ಯ ಹಾಗೂ ಎಚ್‌.ಡಿ.ಕುಮಾರಸ್ವಾಮಿ ಟ್ವೀಟ್‌ ಮೂಲಕ ಶುಭ ಹಾರೈಸಿದ್ದಾರೆ. “ವೈಶಿಷ್ಟ್ಯಪೂರ್ಣ ಬದುಕು, ವಿಶಿಷ್ಟ ಭಾಷಾಶೈಲಿ ಹೊಂದಿರುವ ಕುಂದಾಪುರ ಈ ನೆಲದ ಬಹುತ್ವ ಸಂಸ್ಕೃತಿಯ ದ್ಯೋತಕ. ಇಲ್ಲಿನ ಭಾಷೆ ಮತ್ತು ಬದುಕನ್ನು ಜಗತ್ತಿನೆದುರು ತೆರೆದಿಡುವ ಪ್ರಯತ್ನವಾಗಿ ಪ್ರತಿ ವರ್ಷ ಅಸಾಡಿ ಅಮವಾಸ್ಯೆಯ ದಿನವನ್ನು ಕುಂದಾಪ್ರ ಕನ್ನಡ ದಿನವಾಗಿ ಆಚರಿಸಲಾಗುತ್ತಿದೆ. ಸಮಸ್ತ ಕುಂದಾಪುರದ ಜನತೆಗೆ ಕುಂದಾಪ್ರ ಕನ್ನಡ ದಿನದ ಶುಭಾಶಯಗಳು” ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ | ಜುಲೈ 28ರಂದು ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ: ಭಾಷಿ ಅಲ್ಲ ಬದ್ಕ್‌!

“ಕನ್ನಡ ನಾಡಿಗೆ ಕುಂದಾಪುರಿಗರ ಕೊಡುಗೆ ಸಾಕಷ್ಟಿದೆ. ಕೋಟ ಶಿವರಾಮ ಕಾರಂತರು, ಗೋಪಾಲಕೃಷ್ಣ ಅಡಿಗರು ಈ ನೆಲದ ಅನನ್ಯ ಆಸ್ತಿ. ನಾಡಿಗೆ ಹಲವರ ಕೊಡುಗೆ ಅಪಾರ. ತಾಯಿ ಭಾಷೆಯನ್ನು ಮರೆತು‌ ಅನ್ಯಭಾಷೆ ಮೊರೆ ಹೋಗುತ್ತಿರುವ ವೇಳೆಯಲ್ಲಿ ಮಾತೃಭಾಷೆ ಉಳಿವಿಗಾಗಿ ‘ವಿಶ್ವಕುಂದಾಪ್ರ ಕನ್ನಡ ದಿನ’ವನ್ನು ವಿಶ್ವದೆಲ್ಲೆಡೆ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಎಲ್ಲರಿಗೂ ವಿಶ್ವ ಕುಂದಾಪ್ರ ಕನ್ನಡ ದಿನದ ಶುಭಾಶಯಗಳು” ಎಂದು ಎಚ್‌.ಡಿ. ಕುಮಾರಸ್ವಾಮಿ ಟ್ವೀಟ್‌ ಮಾಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Attempt To Murder : ಹಣದಾಸೆಗೆ ವೃದ್ಧ ಚಿಕ್ಕಮ್ಮನ ಕೊಲ್ಲಲು ಮುಂದಾದ ಮಗಳು ಮತ್ತು ಅಳಿಯ

Attempt To Murder : ಹಣದಾಸೆಗೆ ಇದ್ದು ವೃದ್ಧೆಯ ಕೊಲೆಗೆ ಭಾರೀ ಸ್ಕೆಚ್ ಹಾಕಿದ್ದ ಖತರ್ನಾಕ್ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.

VISTARANEWS.COM


on

By

attempt to murder case
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಹಣ ಅಂದರೆ ಹೆಣನೂ ಬಾಯಿಬಿಡುತ್ತೆ. ಹಣ- ಆಸ್ತಿ, ಚಿನ್ನಾಭರಣದ ವ್ಯಾಮೋಹದ ಮುಂದೆ ಯಾವ ಸಂಬಂಧಕ್ಕೂ ಕಿಂಚಿತ್ತು ಬೆಲೆ ಇಲ್ಲ. ಒಮ್ಮೊಮ್ಮೆ ನಾವೆಲ್ಲರೂ ನಾಗರೀಕ ಸಮಾಜದಲ್ಲಿ ಇದ್ದೀವಾ ಎನ್ನುವ ಅನುಮಾನ ಮೂಡುತ್ತದೆ. ಇದಕ್ಕೆ ತಾಜಾ ಉದಾಹರಣೆ ಎಂಬಂತೆ ಕ್ರೂರಿ ಮಗಳೊಬ್ಬಳು ತನ್ನ ಪತಿ ಜತೆ ಸೇರಿ ಹಣಕ್ಕಾಗಿ ಚಿಕ್ಕಮ್ಮನ ಜೀವವನ್ನೇ ತೆಗೆಯಲು (Attempt To Murder) ಮುಂದಾಗಿದ್ದಾಳೆ.

ಇಂತಹದೊಂದು ಅಮಾನವೀಯ ಘಟನೆ ಬೆಂಗಳೂರಲ್ಲಿ ನಡೆದಿದೆ. ಅಣ್ಣಮ್ಮ ಅವರ ಅಕ್ಕನ ಮಗಳು ಸುಚಿತ್ರ ಹಾಗೂ ಅಳಿಯ ಮುನಿರಾಜು ಎಂಬುವವರಿಂದ ಈ ಕೃತ್ಯ ನಡೆದಿದೆ. ಅಣ್ಣಮ್ಮ ಆರ್‌ಎಂಸಿ ಯಾರ್ಡ್ ಠಾಣಾ ವ್ಯಾಪ್ತಿಯಲ್ಲಿ ಮನೆ ಮಾಡಿಕೊಂಡಿದ್ದರು. ಮಕ್ಕಳಿಲ್ಲದಿದ್ದರೂ ಮನೆ ಮಾಡಿಕೊಂಡು ಸೆಟಲ್ ಆಗಿದ್ದರು. ಒಂದಷ್ಟು ಮನೆಗಳನ್ನು ಬಾಡಿಗೆ ಬಿಟ್ಟು ಬಂದ ಹಣದಲ್ಲಿ ಜೀವನ ಸಾಗಿಸುತ್ತಿದ್ದರು. ಬ್ಯಾಂಕ್ ವ್ಯವಹಾರ ತಿಳಿಯದ ಕಾರಣಕ್ಕೆ ಹಣ, ಬಂಗಾರವನ್ನೆಲ್ಲ ಮನೆಯಲ್ಲೇ ಇಡುತ್ತಿದ್ದರು.

ಅಣ್ಣಮ್ಮರ ಅಕ್ಕನ ಮಗಳು ಸುಚಿತ್ರ ಆಗಾಗ ಮನೆಗೆ ಬಂದು ಹೋಗುತ್ತಿದ್ದಳು. ಈ ವೇಳೆ ಚಿಕ್ಕಮ್ಮನ ಮನೆಯಲ್ಲಿದ್ದ ಹಣ ಹಾಗೂ ಚಿನ್ನಾಭರಣದ ಮೇಲೆ ಕಣ್ಣಿಟ್ಟಿದ್ದಳು. ಹೀಗಾಗಿ ಸುಚಿತ್ರ ತನ್ನ ಎರಡನೇ ಗಂಡ ಮುನಿರಾಜು ಜತೆ ಸೇರಿ ಕೊಲೆಗೆ ಪ್ಲಾನ್ ಮಾಡಿದ್ದಳು.

ಅಜ್ಜಿಯ ಜೀವ ಉಳಿಸಿದ್ದ ಮೊಮ್ಮಗ

ಈ ಹಿಂದೆಯೇ ಖತರ್ನಾಕ್‌ ದಂಪತಿ ಒಮ್ಮೆ ಮನೆಯಲ್ಲಿ ಅಣ್ಣಮ್ಮನ ಕೊಲೆಗೆ ಯತ್ನಿಸಿದ್ದರು. ಕಳೆದ ಕೆಲ ದಿನಗಳ ಹಿಂದೆ ಅಣ್ಣಮ್ಮ ಮಲಗಿದ್ದಾಗಲೇ ದಿಂಬಿನಿಂದ ಉಸಿರುಗಟ್ಟಿಸಿ ಸಾಯಿಸಲು ಮುಂದಾಗಿದ್ದರು. ಇನ್ನೇನು ಕೊಲ್ಲಬೇಕು ಎಂದಾಗ ಸುಚಿತ್ರಾಳ ಮಗ (15) ಅಜ್ಜಿ ಜಿರಳೆ ಬಂತು ಎಂದು ಕೂಗಿ ಎಚ್ಚರಿಸಿದ್ದ. ಹೀಗಾಗಿ ಮೊದಲ ಪ್ಲಾನ್‌ ಫ್ಲಾಪ್‌ ಆಗಿತ್ತು.

ಈ ಘಟನೆ ಬಳಿಕ ಸ್ವಲ್ಪ ಸಮಯ ಸುಮ್ಮನಿದ್ದ ಮುನಿರಾಜು ಹಾಗೂ ಸುಚಿತ್ರಾ, ಕಳೆದ ವಾರ ಮತ್ತೆ ಕೊಲೆಗೆ ಯತ್ನಿಸಿದ್ದರು. ರಾತ್ರಿ ನೆಪವೊಡ್ಡಿ ಗೊರಗುಂಟೆ ಪಾಳ್ಯದ ಸ್ಮಶಾನದ ಬಳಿ ಚಿಕ್ಕಮ್ಮಳನ್ನು ಕರೆಸಿಕೊಂಡಿದ್ದಳು. ಇತ್ತ ದೂರಿದಲ್ಲಿದ್ದ ಮುನಿರಾಜು, ಅಣ್ಣಮ್ಮ ಬರುತ್ತಿದ್ದಂತೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆ ಮಾಡಲು ಮುಂದಾಗಿದ್ದ. ಏಕಾಏಕಿ ದಾಳಿ ಮಾಡಿ ತೀವ್ರವಾಗಿ ಹಲ್ಲೆ ಮಾಡಿದ್ದ. ಅಳಿಯನ ಹಲ್ಲೆಯಿಂದ ಅಣ್ಣಮ್ಮ ಕುಸಿದು ಬಿದ್ದಿದ್ದರು. ಇತ್ತ ಮಗಳು ಸುಮಿತ್ರಾ ಚಿಕ್ಕಮ್ಮನ ಬಳಿ ಇದ್ದ ಚಿನ್ನಾಭರಣ ಹಾಗೂ ಹಣವನ್ನೆಲ್ಲ ಕಿತ್ತುಕೊಂಡು ಪತಿ ಜತೆಗೆ ಪರಾರಿ ಆಗಿದ್ದಳು.

ಚಿಕ್ಕಮ್ಮ ಸತ್ತಿದ್ದಾಳೆಂದು ಎಂದುಕೊಂಡ ಸುಚಿತ್ರಾ ಹಾಗೂ ಮುನಿರಾಜು ನೆಮ್ಮದಿಯಿಂದ ಧರ್ಮಸ್ಥಳಕ್ಕೆ ಹೋಗಿದ್ದರು. ಆದರೆ ಹಲ್ಲೆಗೊಳಾಗಿ ನರಳಾಡುತ್ತಿದ್ದ ಅಣ್ಣಮ್ಮ ಜೋರಾಗಿ ಕಿರುಚಾಡಿದ್ದಾರೆ. ಇದನ್ನೂ ಕಂಡ ಸ್ಥಳೀಯರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದರು. ಅದೃಷ್ಟವಶಾತ್‌ ಅಣ್ಣಮ್ಮ ಪ್ರಾಣಾಪಾಯದಿಂದ ಪಾರಾಗಿದ್ದರು.

ಇತ್ತ ಚಿಕ್ಕಮ್ಮ ಬದುಕಿರುವ ವಿಚಾರ ತಿಳಿದ ಈ ಖತರ್ನಾಕ್‌ ದಂಪತಿ ಮತ್ತೆ ಬೆಂಗಳೂರಿಗೆ ಬಂದಿದ್ದರು. ನಂತರ ಪೊಲೀಸರ ಕಣ್ತಪ್ಪಿಸಿ ಹಾಸನ, ಸಕೇಲಶಪುರದ ಸುತ್ತಮುತ್ತ ಸುತ್ತಾಡುತ್ತಿದ್ದರು. ತಾನೊಂದು ಬಗೆದರೆ ದೈವವೊಂದು ಬಗೆದಂತೆ ಎಂಬ ಮಾತಿನಂತೆ ಖತರ್ನಾಕ್‌ ದಂಪತಿ ಜೈಲುಪಾಲಾಗಿದ್ದಾರೆ. ಆರ್‌ಎಂಸಿ ಯಾರ್ಡ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಿ, ವಿಚಾರಣೆಯನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿ:Heart Attack : ಬಸ್‌ ಏರಿ ಕುಳಿತಾಗಲೇ ಹಠಾತ್ ಹೃದಯಾಘಾತ; ಹಾರಿ ಹೋಯ್ತು ವೃದ್ಧನ ಪ್ರಾಣ ಪಕ್ಷಿ

ಚಿಕ್ಕಬಳ್ಳಾಪುರದಲ್ಲಿ ಅತ್ತೆಯನ್ನು ಎಳೆದೊಯ್ದು ತಿಪ್ಪೆಗೆ ಎಸೆದ ಕ್ರೂರ ಸೊಸೆ; ವೃದ್ಧೆಯ ತಪ್ಪೇನು?

ಚಿಕ್ಕಬಳ್ಳಾಪುರ‌: ಹೆತ್ತ ತಂದೆ-ತಾಯಿಯನ್ನೇ ವಯಸ್ಸಾಗುತ್ತಲೇ ವೃದ್ಧಾಶ್ರಮಕ್ಕೆ ಸೇರಿಸುವ ಮಕ್ಕಳಿದ್ದಾರೆ. ಇನ್ನು, ತಾಯಿ ಸಮಾನಳಾದ ಅತ್ತೆ ಮೇಲೆ ಸೊಸೆಯಂದಿರುವ ತೋರುವ ದರ್ಪ, ಹಲ್ಲೆಯ ಸುದ್ದಿಗಳಂತೂ ಆಗಾಗ ಕೇಳಿಸುತ್ತಲೇ ಇರುತ್ತವೆ. ಇದಕ್ಕೆ ನಿದರ್ಶನ ಎಂಬಂತೆ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ (Chikkaballapur District) ಮಹಿಳೆಯೊಬ್ಬರು 80 ವರ್ಷದ ಅತ್ತೆಯನ್ನು (Mother In Law) ಎಳೆದೊಯ್ದು, ತಿಪ್ಪೆಗೆ ಎಸೆಯುವ ಮೂಲಕ ಅಮಾನವೀಯತೆ ತೋರಿದ್ದಾರೆ. ಈ ವಿಡಿಯೊ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಶಿಡ್ಲಘಟ್ಟ ತಾಲೂಕಿನ ಕೊಂಡಪ್ಪಗಾರಿಪಲ್ಲಿ ಗ್ರಾಮದಲ್ಲಿ ಸೊಸೆಯು ಅತ್ತೆಯ ಮೇಲೆ ಮೃಗೀಯ ವರ್ತನೆ ತೋರಿದ್ದಾಳೆ. 80 ವರ್ಷದ ವೆಂಕಟಲಕ್ಷ್ಮಮ್ಮ ಅವರು ಮನೆಯ ಎದುರು ಮಲಗಿದ್ದಾಗ ಲಕ್ಷ್ಮೀದೇವಮ್ಮ ಎಂಬ ಮಹಿಳೆಯು ಅವರನ್ನು ಎಳೆದಿದ್ದಾರೆ. ವೃದ್ಧೆ ಎಂಬುದನ್ನೂ ಲೆಕ್ಕಿಸದ ಸೊಸೆಯು ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಬಿಸಿಲು ಎಂದು ನೆರಳಿನಲ್ಲಿ ಮಲಗಿದ್ದ ಅತ್ತೆಯ ಮೇಲೆ ಸೊಸೆ ತೋರಿದ ಕ್ರೌರ್ಯಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಳಿಯ ವಯಸ್ಸಿನಲ್ಲಿ ಎರಡು ಹೊತ್ತು ಊಟ ಸಿಕ್ಕರೆ ಸಾಕು ಎಂದು ಬಯಸುವ ಜೀವಕ್ಕೆ ಕಿರುಕುಳ ನೀಡಲು ಅವರು ಮಾಡಿದ ತಪ್ಪೇನು ಎಂಬುದು ತಿಳಿದುಬಂದಿಲ್ಲ. ವೆಂಕಟಲಕ್ಷ್ಮಮ್ಮ ಅವರನ್ನು ಎಳೆದು, ತಿಪ್ಪೆಗೆ ಎಸೆಯುವಾಗ ಅವರ ಮನೆಯಲ್ಲಿ ಯಾರೂ ಇರಲಿಲ್ಲ ಎಂದು ಮೂಲಗಳು ತಿಳಿಸಿವೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

HD Deve Gowda: ನಾಲ್ಕು ಕ್ಷೇತ್ರ ಗೆಲ್ಲಲು ಪಣ ತೊಟ್ಟಿರುವ ದೇವೇಗೌಡರು; ಮಾಸ್ಟರ್‌ ಪ್ಲಾನ್‌ ಏನು?

HD Deve Gowda: ಬಿಜೆಪಿ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ನಿಟ್ಟಿನಲ್ಲಿ ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ. ಜೆಡಿಎಸ್‌ ಕಾರ್ಯಕರ್ತರನ್ನೂ ಕರೆಸಿಕೊಂಡು ಸಭೆಗಳನ್ನು ನಡೆಸಿ ಕ್ಷೇತ್ರದ ಹೆಚ್ಚಿನ ಮಾಹಿತಿ ಪಡೆಯುತ್ತ, ಮಾರ್ಗದರ್ಶನ ನೀಡುತ್ತಿದ್ದಾರೆ.

VISTARANEWS.COM


on

Lok Sabha Election 2024 JDS finalised candidates for 3 constituency
Koo

ಬೆಂಗಳೂರು: ದೇಶದಲ್ಲಿಯೇ ಅತ್ಯಂತ ಹಿರಿಯ ಸಕ್ರಿಯ ರಾಜಕಾರಣಿಯಾಗಿರುವ ಜೆಡಿಎಸ್‌ ನಾಯಕ ಎಚ್.ಡಿ ದೇವೇಗೌಡ (HD Deve Gowda), ತಮ್ಮ 91ರ ಹರೆಯದಲ್ಲೂ ಎದುರಾಳಿಗಳನ್ನು ತೊಡೆ ತಟ್ಟಿ ಆಹ್ವಾನಿಸಿದ್ದಾರೆ. ಈ ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ಜೆಡಿಎಸ್‌ (JDS) ಪಡೆದುಕೊಂಡಿರುವ ಮೂರು ಕ್ಷೇತ್ರಗಳು ಹಾಗೂ ಅಳಿಯ ಸ್ಪರ್ಧಿಸಿರುವ ಇನ್ನೊಂದು ಕ್ಷೇತ್ರವನ್ನು ಗೆಲ್ಲಿಸಿಕೊಂಡು ಬರಲು ಸಜ್ಜಾಗಿದ್ದಾರೆ.

ಬಿಜೆಪಿ ಜೊತೆಗಿನ ಮೈತ್ರಿಯಲ್ಲಿ ಮೂರೇ ಕ್ಷೇತ್ರ ಉಳಿಸಿಕೊಂಡಿದ್ದರೂ ಈ ಬಾರಿಯ ಲೋಕಸಭಾ ಚುನಾವಣೆ ʼದಳಪತಿʼಗಳಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ. ಹಾಸನ, ಮಂಡ್ಯ, ಕೋಲಾರ ಹಾಗೂ ಬೆಂಗಳೂರು ಗ್ರಾಮಾಂತರ ಕ್ಷೇತ್ರಗಳನ್ನು ಗೆಲ್ಲಲು ದೊಡ್ಡಗೌಡರು ಕಸರತ್ತು ನಡೆಸಿದ್ದಾರೆ.

ಸದ್ಯ ಹಾಸನ ಲೋಕಸಭಾ ಕ್ಷೇತ್ರದಲ್ಲಿಯೇ ನಿರಂತರವಾಗಿ ಠಿಕಾಣಿ ಹಾಕಿರುವ ದೇವೇಗೌಡರು, ನಿರಂತರವಾಗಿ ಸಭೆ ನಡೆಸುತ್ತ ಮೊಮ್ಮಗ ಪ್ರಜ್ವಲ್‌ ರೇವಣ್ಣ ಅವರನ್ನು ಅಲ್ಲಿ ಗೆಲ್ಲಿಸಿಕೊಂಡು ಬರಲು ಮಾಸ್ಟರ್‌ ಪ್ಲಾನ್‌ ಹೆಣೆಯುತ್ತಿದ್ದಾರೆ. ಮೊಮ್ಮಗನ ರಾಜಕೀಯ ಭವಿಷ್ಯಕ್ಕಾಗಿ ನಿರಂತರ ಶ್ರಮಿಸುತ್ತಿರುವ ದೇವೇಗೌಡರು, ಹಾಸನ ಕ್ಷೇತ್ರದಲ್ಲಿ ಭರ್ಜರಿ ಗೆಲುವು ಸಾಧಿಸಲು ಪ್ರಯತ್ನ ನಡೆಸಿದ್ದಾರೆ.

ಬಿಜೆಪಿ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ನಿಟ್ಟಿನಲ್ಲಿ ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ. ಜೆಡಿಎಸ್‌ ಕಾರ್ಯಕರ್ತರನ್ನೂ ಕರೆಸಿಕೊಂಡು ಸಭೆಗಳನ್ನು ನಡೆಸಿ ಕ್ಷೇತ್ರದ ಹೆಚ್ಚಿನ ಮಾಹಿತಿ ಪಡೆಯುತ್ತ, ಮಾರ್ಗದರ್ಶನ ನೀಡುತ್ತಿದ್ದಾರೆ.

ಹಾಸನ ಕ್ಷೇತ್ರದ ಬಳಿಕ ಗೌಡರ ಮುಂದಿನ ಟಾರ್ಗೆಟ್‌ ಬೆಂಗಳೂರು ಗ್ರಾಮಾಂತರ ಕ್ಷೇತ್ರವಾಗಿದೆ. ಮೊದಲ ಬಾರಿಗೆ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿರುವ ಅಳಿಯ ಮಂಜುನಾಥ್‌ ಅವರ ಗೆಲುವಿಗೆ ಶ್ರಮಿಸಲು ಗೌಡರು ಪಣ ತೊಟ್ಟಿದ್ದಾರೆ. ಮಂಜುನಾಥ್ ಅವರನ್ನು ಗೆಲ್ಲಿಸಲು ಬಿಜೆಪಿ ನಾಯಕರ ಜತೆ ಸೇರಿ ತಂತ್ರ ಹೆಣೆದಿದ್ದಾರೆ.

ಮಂಡ್ಯದಲ್ಲಿ ಪುತ್ರ ಎಚ್.ಡಿ. ಕುಮಾರಸ್ವಾಮಿ ನಿಲ್ಲುವುದು ಖಚಿತವಾಗಿದೆ. ಮಗನನ್ನು ಗೆಲ್ಲಿಸಿ ಮತ್ತೆ ಮಂಡ್ಯ ವಶಕ್ಕೆ ಪಡೆಯಲು ಗೌಡರು ನಿರ್ಧರಿಸಿದ್ದಾರೆ. ಕಳೆದ ಬಾರಿ ಸುಮಲತಾ ಸ್ಪರ್ಧೆ ಹಾಗೂ ಕಾಂಗ್ರೆಸ್‌ನ ಪೈಪೋಟಿಯಿಂದ ಮಂಡ್ಯ ಕೈತಪ್ಪಿತ್ತು. ಈ ಬಾರಿ ಮಂಡ್ಯವನ್ನು ಶತಾಯಗತಾಯ ಗೆಲ್ಲಲು ಸ್ವತಃ ಸಿಎಂ ಸಿದ್ದರಾಮಯ್ಯ ಟೊಂಕ ಕಟ್ಟಿದ್ದಾರೆ. ಇದರ ಜೊತೆಗೆ ಸುಮಲತಾಗೆ ಟಿಕೆಟ್‌ ಕೈತಪ್ಪಿದ ಅಸಮಾಧಾನವೂ ಇದೆ. ಇವೆರಡನ್ನೂ ಎದುರಿಸಲು ಗೌಡರು ಯೋಜನೆ ರೂಪಿಸುತ್ತಿದ್ದಾರೆ.

ಮಂಡ್ಯ, ಕೋಲಾರ ಕ್ಷೇತ್ರಗಳ ಗೆಲುವಿಗಾಗಿ ಸ್ವತಃ ಕುಮಾರಸ್ವಾಮಿ ಫೀಲ್ಡಿಗೆ ಇಳಿದಿದ್ದು, ಈ ನಾಲ್ಕು ಕಡೆಯಲ್ಲೂ ಮಾಜಿ ಪ್ರಧಾನಿ ದೇವೇಗೌಡರಿಂದ ಪ್ರಚಾರ ಮಾಡಿಸಲು ಒತ್ತು ನೀಡಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಗಾಲಿ ಕುರ್ಚಿಯಲ್ಲೇ ದೇವೇಗೌಡರನ್ನು ವೇದಿಕೆಯ ಮೇಲೆ ಕರೆತಂದು ಮಾತನಾಡಿಸಲಾಗಿತ್ತು. ಈ ಬಾರಿ, ಆರೋಗ್ಯ ಸಮಸ್ಯೆಗಳಿಂದ ಗೌಡರು ಹಣ್ಣಾಗಿದ್ದರೂ ಚುನಾವಣೆ ರಾಜಕೀಯದ ಹುಮ್ಮಸ್ಸನ್ನು ಅವರು ಕಳೆದುಕೊಂಡಿಲ್ಲ.

ಇತ್ತೀಚೆಗೆ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ್ದ ಗೌಡರು, “ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲಿ ಜೆಡಿಎಸ್ ಎಲ್ಲಿದೆ ಎಂದು ಲೇವಡಿ ಮಾಡಿದ್ದಾರೆ. ಜೆಡಿಎಸ್ ಎಲ್ಲಿದೆ ಎಂಬುದನ್ನು ತೋರಿಸುವ ಶಕ್ತಿ ಜೆಡಿಎಸ್- ಬಿಜೆಪಿಗಿದೆ. 28 ಲೋಕಸಭಾ ಕ್ಷೇತ್ರಗಳಲ್ಲಿ ಶಕ್ತಿ ಪ್ರದರ್ಶಿಸಿ ಇವರ ಮಾತಿಗೆ ತಕ್ಕ ಉತ್ತರ ನೀಡುವುದಾಗಿ” ಗುಡುಗಿದ್ದರು.

ಇದನ್ನೂ ಓದಿ: HD Deve Gowda: ಮೇಕೆದಾಟು ಯೋಜನೆಗೆ ವಿರೋಧ; ಡಿಎಂಕೆ ನಡೆಗೆ ಎಚ್.ಡಿ.ದೇವೇಗೌಡ ತೀವ್ರ ಖಂಡನೆ

Continue Reading

ಕರ್ನಾಟಕ

ಬರದ ಮಧ್ಯೆಯೂ ಭರ್ಜರಿ ಕಾಣಿಕೆ; ಸವದತ್ತಿ ಯಲ್ಲಮ್ಮ ದೇಗುಲದಲ್ಲಿ 11 ಕೋಟಿ ರೂ. ಸಂಗ್ರಹ!

ಬರಗಾಲದ ಮಧ್ಯೆಯೂ ಬೆಳಗಾವಿ ಜಿಲ್ಲೆ ಸವದತ್ತಿ ಯಲ್ಲಮ್ಮ ದೇವಿ ದೇಗುಲಕ್ಕೆ ಭಾರಿ ಪ್ರಮಾಣದಲ್ಲಿ ಕಾಣಿಕೆ ಹರಿದುಬಂದಿದೆ. ಒಂದೇ ವರ್ಷದಲ್ಲಿ 11 ಕೋಟಿ ರೂ. ಸಂಗ್ರಹವಾಗಿದೆ.

VISTARANEWS.COM


on

Savadatti Yallamma
Koo

ಬೆಳಗಾವಿ: ಕುಂದಾ ನಗರಿ ಬೆಳಗಾವಿ ಸೇರಿ ರಾಜ್ಯದ 200ಕ್ಕೂ ಅಧಿಕ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಕೃಷಿ ಚುಟುವಟಿಕೆ ಬಿಡಿ, ಕುಡಿಯಲು ಕೂಡ ನೀರಿಲ್ಲದ ಪರಿಸ್ಥಿತಿ ಎದುರಾಗಿದೆ. ಇಂತಹ ಪರಿಸ್ಥಿತಿ ಮಧ್ಯೆಯೂ ಬೆಳಗಾವಿ (Belagavi) ಜಿಲ್ಲೆ ಸವದತ್ತಿಯಲ್ಲಿರುವ ಯಲ್ಲಮ್ಮ ದೇವಿ (Savadatti Yallamma Devi Temple) ದೇವಾಲಯಕ್ಕೆ ಭರಪೂರ ಕಾಣಿಕೆ ಹರಿದುಬಂದಿದೆ. ದೇವಾಲಯದ ಹುಂಡಿ ಹಣವನ್ನು (Donation Box) ಎಣಿಕೆ ಮಾಡಲಾಗಿದ್ದು, ಒಂದೇ ವರ್ಷದಲ್ಲಿ 11 ಕೋಟಿ ರೂ. ಕಾಣಿಗೆ ಸಂಗ್ರಹವಾಗಿದೆ.

ಸವದತ್ತಿ ಯಲ್ಲಮ್ಮ ದೇವಿ ದೇವಾಲಯವು ಉತ್ತರ ಕರ್ನಾಟಕದ ಪ್ರಸಿದ್ಧ ಯಾತ್ರಾ ಸ್ಥಳವಾಗಿದ್ದು, ದೇಶದ ನಾನಾ ಭಾಗಗಳಿಂದ ಲಕ್ಷಾಂತರ ಜನ ಭೇಟಿ ನೀಡುತ್ತಾರೆ. ಹಾಗಾಗಿ, ಬರಗಾಲದ ಮಧ್ಯೆಯೂ ದೇವಾಲಯದ ಹುಂಡಿಯಲ್ಲಿ 2023-24ನೇ ಸಾಲಿನಲ್ಲಿ 11.23 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ. ಭಕ್ತರು ನಗದು, ಚಿನ್ನ, ಬೆಳ್ಳಿಯ ಆಭರಣಗಳನ್ನು ಹುಂಡಿಗೆ ಹಾಕಿ ಭಕ್ತಿ ಮೆರೆಯುತ್ತಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ 2.4 ಕೋಟಿ ರೂ. ಹೆಚ್ಚಿನ ಕಾಣಿಕೆ ಸಂಗ್ರಹವಾಗಿದೆ.

ದೇವಾಲಯದ ಹುಂಡಿಯಲ್ಲಿ 2022–23ರಲ್ಲಿ 8.01 ಕೋಟಿ ರೂ. ನಗದು, 66.28 ಲಕ್ಷ ರೂ. ಮೌಲ್ಯದ ಚಿನ್ನ ಮತ್ತು 15.43 ಲಕ್ಷ ರೂ. ಮೌಲ್ಯದ ಬೆಳ್ಳಿ ಆಭರಣ ಸೇರಿ ಒಟ್ಟು 8.83 ಕೋಟಿಯ ಕಾಣಿಕೆ ಸಂಗ್ರಹವಾಗಿತ್ತು. ಇನ್ನು 2023–24ರಲ್ಲಿ ತೀವ್ರ ಬರಗಾಲದ ಮಧ್ಯೆಯೂ 10.22 ಕೋಟಿ ರೂ. ನಗದು, 84.14 ಲಕ್ಷ ರೂ. ಮೌಲ್ಯದ ಚಿನ್ನ ಮತ್ತು 16.65 ಲಕ್ಷ ರೂ. ಮೌಲ್ಯದ ಬೆಳ್ಳಿ ಆಭರಣಗಳು ಸೇರಿ 11.23 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ. ಜತೆಗೆ ಕೆನಡಾ ದೇಶದ ಎರಡು ಕರೆನ್ಸಿ ನೋಟುಗಳು ಕೂಡ ಪತ್ತೆಯಾಗಿವೆ.

ಇದನ್ನೂ ಓದಿ: Koppala News: ಅಂಜನಾದ್ರಿ ಆಂಜನೇಯ ಸ್ವಾಮಿ ದೇಗುಲದ ಹುಂಡಿ ಹಣ ಎಣಿಕೆ; 9.29 ಲಕ್ಷ ರೂ. ಸಂಗ್ರಹ

ಶಿವಮೊಗ್ಗ ಜಿಲ್ಲೆ ಚಂದ್ರಗುತ್ತಿಯ ಐತಿಹಾಸಿಕ ಹಾಗೂ ಪುರಾಣ ಪ್ರಸಿದ್ಧ ಶ್ರೀ ರೇಣುಕಾಂಬ ದೇವಸ್ಥಾನದ ಕಳೆದ ಡಿಸೆಂಬರ್ ತಿಂಗಳಲ್ಲಿ ಕಾಣಿಕೆ ಹುಂಡಿ ಎಣಿಸಿದಾಗ 31,35,360 ರೂ. ಸಂಗ್ರಹವಾಗಿತ್ತು. ಈ ಬಾರಿ ದೇವಸ್ಥಾನದ ಹುಂಡಿಯಲ್ಲಿ 22,52,700 ರೂ. ಕಾಣಿಕೆ ಸಂಗ್ರಹವಾಗಿದೆ, ಎಣಿಕೆ ಕಾರ್ಯ ನಡೆಯುವ ಕೊಠಡಿ ಸುತ್ತ ಸಿಸಿ ಕ್ಯಾಮೆರಾ ಅಳವಡಿಸಲಾಗಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Heart Attack : ಬಸ್‌ ಏರಿ ಕುಳಿತಾಗಲೇ ಹಠಾತ್ ಹೃದಯಾಘಾತ; ಹಾರಿ ಹೋಯ್ತು ವೃದ್ಧನ ಪ್ರಾಣ ಪಕ್ಷಿ

BMTC Bus: ಬಿಎಂಟಿಸಿ ಬಸ್‌ ಏರಿದ ವೃದ್ಧರೊಬ್ಬರು ಟಿಕೆಟ್ ಪಡೆದು ಸೀಟ್‌ನಲ್ಲಿ ಕುಳಿತುಕೊಂಡಾಗ ಹಠಾತ್‌ ಹೃದಯಾಘಾತ (Heart Attack) ಸಂಭವಿಸಿದೆ. ಬಸ್‌ ಹತ್ತಿದ ಹತ್ತೇ ನಿಮಿಷದಲ್ಲಿ ಪ್ರಾಣ ಪಕ್ಷಿ ಹಾರಿ ಹೋಗಿದೆ.

VISTARANEWS.COM


on

By

Heart Attack
Koo

ಬೆಂಗಳೂರು: ಹೃದಯಾಘಾತ (Heart Attack) ವೃದ್ಧರೊಬ್ಬರ ಪ್ರಾಣವನ್ನು ಬಲಿ ಪಡೆದಿದೆ. ಈಗೀಗ ಹೃದಯಾಘಾತ (Heart attack) ಯಾವುದೇ ಕ್ಷಣದಲ್ಲಿ ಆಗಿಬಿಡಬಹುದು ಎನ್ನುವಷ್ಟು ಭಯಾನಕವಾಗಿದೆ. ಕುಳಿತಲ್ಲೇ, ಕುಸಿದುಬಿದ್ದು ಪ್ರಾಣ ಕಳೆದುಕೊಳ್ಳುವ, ನಿಂತಲ್ಲೇ ಉಸಿರು ನಿಲ್ಲುವ, ಮಲಗಿದ್ದಲ್ಲೇ ಉಸಿರು ಚೆಲ್ಲುವ ವಿದ್ಯಮಾನಗಳು ಏಕಾಏಕಿ ಹೆಚ್ಚಾಗಿದೆ.

ಇಂಥಹುದೇ ಒಂದು ಆತಂಕ ಮೂಡಿಸುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣ ಮಾಡುತ್ತಿದ್ದ ವೃದ್ಧರೊಬ್ಬರು ಕುಳಿತಲ್ಲೇ ಕುಸಿದಿದ್ದು, ಕ್ಷಣಾರ್ಧದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಹಠಾತ್ ಹೃದಯಾಘಾತದಿಂದ ವೃದ್ಧ ಪ್ರಾಣ ಕಳೆದುಕೊಂಡಿದ್ದಾರೆ.

ಕೃಷ್ಣ (60) ಮೃತ ದುರ್ದೈವಿ. 11 ಗಂಟೆ ಸುಮಾರಿಗೆ ಮೆಜೆಸ್ಟಿಕ್‌ ನಿಲ್ದಾಣದಿಂದ ಬಸ್ ಹತ್ತಿದ್ದ ಕೃಷ್ಣ ಅವರು ಟಿಕೆಟ್ ಪಡೆದು ಸೀಟ್‌ನಲ್ಲಿ ಕುಳಿತುಕೊಂಡಿದ್ದರು. ನವರಂಗ್ ಬಳಿ ಬರುತ್ತಿದ್ದಂತೆ ಹದಿನೈದು ನಿಮಿಷದಲ್ಲೇ ಹೃದಯಾಘಾತವಾಗಿದೆ. ನೋಡನೋಡುತ್ತಿದ್ದಂತೆ ಬಸ್ಸಿನಲ್ಲೇ ಉಸಿರು ಚೆಲ್ಲಿದ್ದಾರೆ.

ಏಕಾಏಕಿ ವ್ಯಕ್ತಿ ಮೃತಪಟ್ಟಿದ್ದು ಕಂಡ ಸಹಪ್ರಯಾಣಿಕರು ಆತಂಕಗೊಂಡು ಕಿರುಚಾಡಿದ್ದಾರೆ. ಕೂಡಲೇ ಚಾಲಕ ಹಾಗು ನಿರ್ವಾಹಕರು ಬಿಎಂಟಿಸಿ ಬಸ್‌ನಲ್ಲೇ ಖಾಸಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ ಆಸ್ಪತ್ರೆಯಲ್ಲಿ ವ್ಯಕ್ತಿ ಮೃತಪಟ್ಟಿದ್ದಾಗಿ ಘೋಷಿಸಿದ್ದಾರೆ. ಬಳಿಕ ಮೃತ ಕುಟುಂಬಸ್ಥರಿಗೆ ಮಾಹಿತಿ ರವಾನಿಸಿದ್ದಾರೆ. ಬಸವೇಶ್ವರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಹಾಸನದಲ್ಲಿ ಅಕ್ರಮ ಗೋಮಾಂಸ ಜಾಲ; 60 ಗೋವುಗಳನ್ನು ಕೊಂದ ರಾಕ್ಷಸರು!

ಚಿಕ್ಕಬಳ್ಳಾಪುರದಲ್ಲಿ ಅತ್ತೆಯನ್ನು ಎಳೆದೊಯ್ದು ತಿಪ್ಪೆಗೆ ಎಸೆದ ಕ್ರೂರ ಸೊಸೆ; ವೃದ್ಧೆಯ ತಪ್ಪೇನು?

ಚಿಕ್ಕಬಳ್ಳಾಪುರ‌: ಹೆತ್ತ ತಂದೆ-ತಾಯಿಯನ್ನೇ ವಯಸ್ಸಾಗುತ್ತಲೇ ವೃದ್ಧಾಶ್ರಮಕ್ಕೆ ಸೇರಿಸುವ ಮಕ್ಕಳಿದ್ದಾರೆ. ಇನ್ನು, ತಾಯಿ ಸಮಾನಳಾದ ಅತ್ತೆ ಮೇಲೆ ಸೊಸೆಯಂದಿರುವ ತೋರುವ ದರ್ಪ, ಹಲ್ಲೆಯ ಸುದ್ದಿಗಳಂತೂ ಆಗಾಗ ಕೇಳಿಸುತ್ತಲೇ ಇರುತ್ತವೆ. ಇದಕ್ಕೆ ನಿದರ್ಶನ ಎಂಬಂತೆ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ (Chikkaballapur District) ಮಹಿಳೆಯೊಬ್ಬರು 80 ವರ್ಷದ ಅತ್ತೆಯನ್ನು (Mother In Law) ಎಳೆದೊಯ್ದು, ತಿಪ್ಪೆಗೆ ಎಸೆಯುವ ಮೂಲಕ ಅಮಾನವೀಯತೆ ತೋರಿದ್ದಾರೆ. ಈ ವಿಡಿಯೊ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಶಿಡ್ಲಘಟ್ಟ ತಾಲೂಕಿನ ಕೊಂಡಪ್ಪಗಾರಿಪಲ್ಲಿ ಗ್ರಾಮದಲ್ಲಿ ಸೊಸೆಯು ಅತ್ತೆಯ ಮೇಲೆ ಮೃಗೀಯ ವರ್ತನೆ ತೋರಿದ್ದಾಳೆ. 80 ವರ್ಷದ ವೆಂಕಟಲಕ್ಷ್ಮಮ್ಮ ಅವರು ಮನೆಯ ಎದುರು ಮಲಗಿದ್ದಾಗ ಲಕ್ಷ್ಮೀದೇವಮ್ಮ ಎಂಬ ಮಹಿಳೆಯು ಅವರನ್ನು ಎಳೆದಿದ್ದಾರೆ. ವೃದ್ಧೆ ಎಂಬುದನ್ನೂ ಲೆಕ್ಕಿಸದ ಸೊಸೆಯು ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಬಿಸಿಲು ಎಂದು ನೆರಳಿನಲ್ಲಿ ಮಲಗಿದ್ದ ಅತ್ತೆಯ ಮೇಲೆ ಸೊಸೆ ತೋರಿದ ಕ್ರೌರ್ಯಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಳಿಯ ವಯಸ್ಸಿನಲ್ಲಿ ಎರಡು ಹೊತ್ತು ಊಟ ಸಿಕ್ಕರೆ ಸಾಕು ಎಂದು ಬಯಸುವ ಜೀವಕ್ಕೆ ಕಿರುಕುಳ ನೀಡಲು ಅವರು ಮಾಡಿದ ತಪ್ಪೇನು ಎಂಬುದು ತಿಳಿದುಬಂದಿಲ್ಲ. ವೆಂಕಟಲಕ್ಷ್ಮಮ್ಮ ಅವರನ್ನು ಎಳೆದು, ತಿಪ್ಪೆಗೆ ಎಸೆಯುವಾಗ ಅವರ ಮನೆಯಲ್ಲಿ ಯಾರೂ ಇರಲಿಲ್ಲ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಮರೆಯಾದ ಮಾನವೀಯತೆ: ಮಹಿಳೆ ಮೇಲೆ ಹಲ್ಲೆ ನಡೆಸಿ ವಿವಸ್ತ್ರಗೊಳಿಸಿ ಮೆರವಣಿಗೆ; ನಾಲ್ವರು ಮಹಿಳೆಯರ ಬಂಧನ

ನನಗೇಕೆ ಕುಕ್ಕರ್‌ ನೀಡಿಲ್ಲ ಎಂದ ವೃದ್ಧೆ ಮೇಲೆ ಹಲ್ಲೆ

ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ಹೋಬಳಿಯ ಉಜ್ಜನಿ ಗ್ರಾಮದಲ್ಲಿ ಮತದಾರರಿಗೆ ಕಾಂಗ್ರೆಸ್‌ನಿಂದ ಮತದಾರರಿಗೆ ಕುಕ್ಕರ್ ಹಂಚಿಕೆ ಆರೋಪ ಕೇಳಿಬಂದಿದೆ. ಇನ್ನು, ಗ್ರಾಮದಲ್ಲಿ ಕುಕ್ಕರ್ ವಿತರಣೆಯಲ್ಲಿ ತಾರತಮ್ಯ ಮಾಡಿದ್ದಾರೆ, ನನಗ್ಯಾಕೆ ಕುಕ್ಕರ್‌ ನೀಡಿಲ್ಲ ಎಂದು ಕೇಳಿದ ವೃದ್ಧೆ ಮೇಲೆ ಹಲ್ಲೆ ಮಾಡಿರುವುದು ಕಂಡುಬಂದಿದೆ.

ಉಜ್ಜನಿ ಗ್ರಾಮದ ಗಂಗಮ್ಮ (75) ಹಲ್ಲೆಗೊಳಗಾದ ವೃದ್ಧೆ. ಕಾಂಗ್ರೆಸ್ ಕಾರ್ಯಕರ್ತ ನಾರಾಯಣ್ ಎಂಬಾತನ ವಿರುದ್ಧ ಹಲ್ಲೆ ಆರೋಪ ಕೇಳಿಬಂದಿದೆ. ಹಲ್ಲೆಯಿಂದ ಗಾಯಗೊಂಡ ವೃದ್ಧೆಗೆ ಹುಲಿಯೂರುದುರ್ಗ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
attempt to murder case
ಬೆಂಗಳೂರು1 min ago

Attempt To Murder : ಹಣದಾಸೆಗೆ ವೃದ್ಧ ಚಿಕ್ಕಮ್ಮನ ಕೊಲ್ಲಲು ಮುಂದಾದ ಮಗಳು ಮತ್ತು ಅಳಿಯ

Alia Bhatt hosts Hope Gala
ಬಾಲಿವುಡ್4 mins ago

Alia Bhatt: ಲಂಡನ್‌ನಲ್ಲಿ `ಹೋಪ್ ಗಾಲಾ’ ಹೋಸ್ಟ್‌ ಮಾಡಿದ ಆಲಿಯಾ; ಏನಿದರ ಉದ್ದೇಶ?

RCB
ಕ್ರೀಡೆ8 mins ago

RCB vs KKR: ಕೆಕೆಆರ್​ ಸವಾಲು ಸುಲಭದ್ದಲ್ಲ; ಚಿನ್ನಸ್ವಾಮಿಯಲ್ಲಿ ಆರ್​ಸಿಬಿ ದಾಖಲೆ ಹೇಗಿದೆ?

Thalaivar 171 Rajinikanth first look
ಕಾಲಿವುಡ್9 mins ago

Thalaivar 171: ರಜನಿಕಾಂತ್‌ 171ನೇ ಸಿನಿಮಾ ಪೋಸ್ಟರ್‌ ಔಟ್‌; ʻರೋಲೆಕ್ಸ್‌ʼ ಸೂರ್ಯ ಎಂಟ್ರಿ ಆಗ್ತಾರಾ?

Narendra Modi And Bill Gates
ದೇಶ19 mins ago

Narendra Modi: ಮೋದಿ ಜತೆ ಚಾಟ್; ಭಾರತದ ಡಿಜಿಟಲ್ ಕ್ರಾಂತಿಗೆ ಬಿಲ್ ಗೇಟ್ಸ್ ಶ್ಲಾಘನೆ

Lok Sabha Election 2024 JDS finalised candidates for 3 constituency
ಪ್ರಮುಖ ಸುದ್ದಿ20 mins ago

HD Deve Gowda: ನಾಲ್ಕು ಕ್ಷೇತ್ರ ಗೆಲ್ಲಲು ಪಣ ತೊಟ್ಟಿರುವ ದೇವೇಗೌಡರು; ಮಾಸ್ಟರ್‌ ಪ್ಲಾನ್‌ ಏನು?

Sania Mirza
ಕ್ರೀಡೆ54 mins ago

Sania Mirza: ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರಾ ಸಾನಿಯಾ ಮಿರ್ಜಾ?; ಈ ಪಕ್ಷದಿಂದ ಆಫರ್​

Savadatti Yallamma
ಕರ್ನಾಟಕ56 mins ago

ಬರದ ಮಧ್ಯೆಯೂ ಭರ್ಜರಿ ಕಾಣಿಕೆ; ಸವದತ್ತಿ ಯಲ್ಲಮ್ಮ ದೇಗುಲದಲ್ಲಿ 11 ಕೋಟಿ ರೂ. ಸಂಗ್ರಹ!

Heart Attack
ಬೆಂಗಳೂರು1 hour ago

Heart Attack : ಬಸ್‌ ಏರಿ ಕುಳಿತಾಗಲೇ ಹಠಾತ್ ಹೃದಯಾಘಾತ; ಹಾರಿ ಹೋಯ್ತು ವೃದ್ಧನ ಪ್ರಾಣ ಪಕ್ಷಿ

Ranbir Kapoor Raha Kapoor
ಬಾಲಿವುಡ್1 hour ago

Ranbir Kapoor: ಅತ್ಯಂತ ಕಿರಿಯ ಮತ್ತು ಶ್ರೀಮಂತ ಸ್ಟಾರ್‌ ಕಿಡ್‌ ಆಗಲಿದ್ದಾರಂತೆ ರಣಬೀರ್- ಆಲಿಯಾ ಮಗಳು!

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ6 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ7 hours ago

Dina Bhavishya : ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ; ಈ ರಾಶಿಯವರು ಎಚ್ಚರಿಕೆ ವಹಿಸಿ

Lok Sabha Election 2024 DK Brothers hold roadshow in Ramanagara and DK Suresh file nomination
Lok Sabha Election 202422 hours ago

Lok Sabha Election 2024: ರಾಮನಗರದಲ್ಲಿ ಡಿಕೆ ಬ್ರದರ್ಸ್‌ ಶಕ್ತಿ ಪ್ರದರ್ಶನ, ರೋಡ್‌ ಶೋ ಮಾಡಿ ನಾಮಪತ್ರ ಸಲ್ಲಿಸಿದ ಡಿಕೆಸು

Lok Sabha Election 2024 personal prestige will not be allowed DK Shivakumar warns Kolar leaders
Lok Sabha Election 202423 hours ago

Lok Sabha Election 2024: ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡಲ್ಲ; ಕೋಲಾರ ನಾಯಕರಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

dina bhavishya read your daily horoscope predictions for March 28 2024
ಭವಿಷ್ಯ1 day ago

Dina Bhavishya : ಇಂದು ಈ ರಾಶಿಯವರಿಗೆ ಒತ್ತಡ ಹೆಚ್ಚು; ಜಾಗ್ರತೆ ವಹಿಸುವುದು ಉತ್ತಮ!

R Ashok Pressmeet and attack on CM Siddaramaiah Congress Government
Lok Sabha Election 20242 days ago

Lok Sabha Election 2024: ಬೈ ಬೈ ಬೆಂಗಳೂರು ಎನ್ನುತ್ತಿರುವ ಜನ; ಸರ್ಕಾರದ ವಿರುದ್ಧ ಹರಿಹಾಯ್ದ ಆರ್.‌ ಅಶೋಕ್

Tejaswini Gowda resigns from BJP Council Impact on BJP
Lok Sabha Election 20242 days ago

Tejaswini Gowda: ಬಿಜೆಪಿ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ತೇಜಸ್ವಿನಿ ಗೌಡ! ಬಿಜೆಪಿಗೆ ಎಫೆಕ್ಟ್?

Lok Sabha Election 2024 Gokarna priest shalls to make DK Shivakumar CM Whats wrong says Shivakumar
Lok Sabha Election 20242 days ago

Lok Sabha Election 2024: ಡಿಕೆಶಿ ಸಿಎಂ ಆಗಲಿ ಎಂದು ಗೋಕರ್ಣ ಅರ್ಚಕರಿಂದ ಸಂಕಲ್ಪ; ತಪ್ಪೇನು ಎಂದ ಶಿವಕುಮಾರ್

Dina Bhavishya
ಭವಿಷ್ಯ2 days ago

Dina Bhavishya : ಉತ್ಸಾಹದಲ್ಲಿ ಆಶ್ವಾಸನೆ ಕೊಟ್ಟು ಅಪಾಯದ ಸುಳಿಗೆ ಸಿಲುಕಬೇಡಿ

BBMP marshals harass street vendors in Jayanagar
ಬೆಂಗಳೂರು3 days ago

BBMP Marshals : ಜಯನಗರದ ಬೀದಿಯಲ್ಲಿ ಬ್ಯಾಗ್‌ ಮಾರುತ್ತಿದ್ದ ವೃದ್ಧನ ಮೇಲೆ ದರ್ಪ ಮೆರೆದ ಮಾರ್ಷಲ್ಸ್‌

Dina Bhavishya
ಭವಿಷ್ಯ3 days ago

Dina Bhavishya : ಆಪ್ತರ ವರ್ತನೆಯು ಈ ರಾಶಿಯವರ ಮನಸ್ಸಿಗೆ ನೋವು ತರಲಿದೆ

ಟ್ರೆಂಡಿಂಗ್‌