ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ವಿಶ್ವದರ್ಶನ ಶಿಕ್ಷಣ ಸಂಸ್ಥೆ ಆವರಣದಲ್ಲಿ ವಿಸ್ತಾರ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಹಯೋಗದಲ್ಲಿ ಜನವರಿ 28ರಂದು ಶನಿವಾರ ಸಂಜೆ 5 ಗಂಟೆಗೆ ʼವಿಶ್ವದರ್ಶನ ಸಂಭ್ರಮ-2023ʼ (Vishwadarshana Sambhrama) ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಸಾಮಾಜಿಕ ಚಿಂತಕರು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ವಿಶ್ವ ದರ್ಶನ ಸೆಂಟ್ರಲ್ ಸ್ಕೂಲ್ (ಸಿಬಿಎಸ್‌ಇ) ನೂತನ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ. ನಂತರ ವಿಶ್ವದರ್ಶನ ಸಂಭ್ರಮ-2023 ವೇದಿಕೆ ಕಾರ್ಯಕ್ರಮವನ್ನು ವಿಧಾನಸಭೆ ಸಭಾಧ್ಯಕ್ಷ, ಶಿರಸಿ-ಸಿದ್ದಾಪುರ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ನೆರವೇರಿಸಲಿದ್ದಾರೆ. ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಅವರು ವಿತರಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ದಿ, ಪಂಚಾಯತ್ ರಾಜ್ ವಿಕೇಂದ್ರೀಕರಣ ಉಪ ಸಮಿತಿ ಉಪಾಧ್ಯಕ್ಷ ಪ್ರಮೋದ ಹೆಗಡೆ, ಯಲ್ಲಾಪುರ ತಹಸೀಲ್ದಾರ್ ಶ್ರೀಕೃಷ್ಣ ಕಾಮಕರ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಎಸ್.ಜಿ.ಹೆಗಡೆ ಭಾಗವಹಿಸಲಿದ್ದಾರೆ.
ಇದನ್ನೂ ಓದಿ | SSLC Exam 2023 | ಎಸ್ಸೆಸ್ಸೆಲ್ಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ; ಗಣಿತ, ಸಮಾಜ ಶಾಸ್ತ್ರ ಪರೀಕ್ಷಾ ದಿನ ಬದಲು
ವಿಶ್ವದರ್ಶನ ಶಿಕ್ಷಣ ಸಂಸ್ಥೆ ಅಧ್ಯಕ್ಷ, ವಿಸ್ತಾರ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಪ್ರಧಾನ ಸಂಪಾದಕ ಹಾಗೂ ಸಿಇಒ ಹರಿಪ್ರಕಾಶ್ ಕೋಣೆಮನೆ ಸಭಾಧ್ಯಕ್ಷತೆ ವಹಿಸಲಿದ್ದಾರೆ. ವಿಶ್ವದರ್ಶನ ಶಿಕ್ಷಣ ಸಂಸ್ಥೆ ನಿರ್ದೇಶಕ, ವಿಸ್ತಾರ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಹಾಗೂ ಬೆಂಗಳೂರಿನ ಮೆಗಾಲೈಟ್ ಇಂಡಸ್ಟ್ರೀಸ್ ಎಂಡಿ ಎಚ್.ವಿ. ಧರ್ಮೇಶ್, ವಿಶ್ವದರ್ಶನ ಶಿಕ್ಷಣ ಸಂಸ್ಥೆ ಉಪಾಧ್ಯಕ್ಷ, ಸುಭದ್ರಾ ಇಂಡಸ್ಟ್ರೀಸ್, ವಿಜಯಲಕ್ಷ್ಮಿ ಸಾರಿಗೆ ಎಂಡಿ ಹಾಗೂ ವಿಸ್ತಾರ ಮೀಡಿಯಾ ಪ್ರೈವೇಟ್ ಲಿಮಿಟೆಡ್ ನಿರ್ದೇಶಕ ಶ್ರೀನಿವಾಸ ಎಸ್. ಹೆಬ್ಬಾರ್ ಉಪಸ್ಥಿತರಿರಲಿದ್ದಾರೆ.
ವಿಶೇಷ ಆಹ್ವಾನಿತರಾಗಿ ಮೈಸೂರು ಮರ್ಕೈಂಟೈಲ್ ಕಂಪನಿ ಲಿಮಿಟೆಡ್‌ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ, 2021-22ನೇ ಸಾಲಿನ ವಿಶ್ವದರ್ಶನ ಪುರಸ್ಕಾರ ಪುರಸ್ಕೃತರಾದ ಎಚ್.ಎಸ್.ಶೆಟ್ಟಿ ಭಾಗವಹಿಸಲಿದ್ದಾರೆ.
ವಿಶ್ವದರ್ಶನ ಪುರಸ್ಕಾರ-2023
ವಿಶ್ವದರ್ಶನ ಶಿಕ್ಷಣ ಸಂಸ್ಥೆಯಿಂದ ನೀಡುವ 2023ನೇ ಸಾಲಿನ ವಿಶ್ವದರ್ಶನ ಪುರಸ್ಕಾರಕ್ಕೆ ಬೆಂಗಳೂರಿನ ವಾಗ್ದೇವಿ ವಿಲಾಸ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಕೆ.ಹರೀಶ್ ಹಾಗೂ ಬೆಂಗಳೂರಿನ ನ್ಯೂ ಬಾಲ್ಡ್‌ವಿನ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಟಿ.ವೇಣುಗೋಪಾಲ್ ಅವರು ಆಯ್ಕೆಯಾಗಿದ್ದಾರೆ. ಇವರಿಗೆ ಕಾರ್ಯಕ್ರಮದಲ್ಲಿ ಗಣ್ಯರು ಪುರಸ್ಕಾರ ಪ್ರದಾನ ಮಾಡಲಿದ್ದಾರೆ.
ವಿಶ್ವದರ್ಶನ ಪುರಸ್ಕಾರ-2023 ಪುರಸ್ಕೃತರ ಪರಿಚಯ
ಕೆ.ಹರೀಶ್, ಅಧ್ಯಕ್ಷರು, ವಾಗ್ದೇವಿ ವಿಲಾಸ ಸಮೂಹ ಶಿಕ್ಷಣ ಸಂಸ್ಥೆಗಳು, ಬೆಂಗಳೂರು
18 ವರ್ಷಗಳ ಕಾಲ ಇಸ್ರೋದಲ್ಲಿ ವಿಜ್ಞಾನಿಯಾಗಿ ಕಾರ್ಯನಿರ್ವಹಿಸಿ ಬಳಿಕ ವಾಗ್ದೇವಿ ವಿಲಾಸ ಸಮೂಹ ಶಿಕ್ಷಣ ಸಂಸ್ಥೆಗಳ ಮೂಲಕ ಸಮಾಜಕ್ಕೆ ಕೊಡುಗೆ ನೀಡುತ್ತಿರುವ ಕೆ. ಹರೀಶ್ ಅವರು, ವೈಜ್ಞಾನಿಕ ಅಂಶಗಳ ಅಳವಡಿಕೆ ಜತೆಗೆ ಗುರುಕುಲ ಮಾದರಿಯನ್ನೂ ಅನುಸರಿಸಿ ಗುಣಮಟ್ಟಣ ಶಿಕ್ಷಣ ಒದಗಿಸುತ್ತಿದ್ದಾರೆ.
ಡಾ. ಟಿ. ವೇಣುಗೋಪಾಲ್, ಅಧ್ಯಕ್ಷರು, ನ್ಯೂ ಬಾಲ್ಡ್‌ವಿನ್ ಸಮೂಹ ಶಿಕ್ಷಣ ಸಂಸ್ಥೆಗಳು, ಬೆಂಗಳೂರು
ಬಾಲ್ಡ್‌ವಿನ್ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್ ಅಧ್ಯಕ್ಷರಾಗಿರುವ ಡಾ.ಟಿ.ವೇಣುಗೋಪಾಲ್ ಅವರು, ಶೈಕ್ಷಣಿಕ, ಧಾರ್ಮಿಕ, ಆಧ್ಯಾತ್ಮಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ಹೆಸರಾಗಿದ್ದಾರೆ. ನ್ಯೂ ಬಾಲ್ಡ್‌ವಿನ್ ಸಮೂಹ ಶಿಕ್ಷಣ ಸಂಸ್ಥೆಗಳ ಮೂಲಕ 15 ಸಾವಿರ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ.
ವಿಶ್ವದರ್ಶನ ಸಂಭ್ರಮದ ಕಾರ್ಯಕ್ರಮಗಳು
- ವಿಶ್ವದರ್ಶನ ಸೆಂಟ್ರಲ್ ಸ್ಕೂಲ್ (ಸಿಬಿಎಸ್‌ಇ) ನೂತನ ಕಟ್ಟಡದ ಉದ್ಘಾಟನೆ
- ವಿಶ್ವದರ್ಶನ ಪುರಸ್ಕಾರ ಪ್ರದಾನ
- ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
- ಮಾದರಿಗಳ ಪ್ರದರ್ಶನ
- ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ
ಇದನ್ನೂ ಓದಿ | LAUGHCON 2023 : ಜ.28, 29 ರಂದು ಮಂಗಳೂರಿನಲ್ಲಿ ರಾಜ್ಯ ಮಟ್ಟದ 19ನೇ ‘ನಗೆ ಸಮ್ಮೇಳನ’
ವಿಶ್ವದರ್ಶನ ಸಂಭ್ರಮ-2023 ಕಾರ್ಯಕ್ರಮದಲ್ಲಿ ಎಲ್ಲರೂ ಭಾಗವಹಿಸುವಂತೆ ವಿಶ್ವದರ್ಶನ ಶಿಕ್ಷಣ ಸಂಸ್ಥೆ ಗೌರವ ಕಾರ್ಯದರ್ಶಿ ನರಸಿಂಹ ಕೋಣೆಮನೆ, ಮುಖ್ಯ ಶೈಕ್ಷಣಿಕ ಅಧಿಕಾರಿ ಗುರುರಾಜ್ ಗಂಟಿಹೊಳೆ, ಆಡಳಿತ ಮಂಡಳಿ ಸದಸ್ಯರು, ವ್ಯವಸ್ಥಾಪಕರು, ವಿಭಾಗ ಮುಖ್ಯಸ್ಥರು ಹಾಗೂ ಸಿಬ್ಬಂದಿ ಕೋರಿದ್ದಾರೆ.