Site icon Vistara News

VISL Factory: ವಿಐಎಸ್‌ಎಲ್ ಉಳಿಸಲು ಕಾರ್ಮಿಕರು ನಡೆಸುವ ಹೋರಾಟಕ್ಕೆ ಕಾಂಗ್ರೆಸ್‌ ಬೆಂಬಲ

Bhadravathi VISL Factory protest

#image_title

ಭದ್ರಾವತಿ: ಪ್ರತಿಷ್ಠಿತ ಕಾರ್ಖಾನೆ ವಿಐಎಸ್‌ಎಲ್ (VISL Factory) ಉಳಿಸಲು ಆಗ್ರಹಿಸಿ ಕಾರ್ಮಿಕರು ಕಾರ್ಖಾನೆ ಮುಂದೆ ಹೋರಾಟ ನಡೆಸುತ್ತಿದ್ದು, ಜಿಲ್ಲಾ ಕಾಂಗ್ರೆಸ್ ಮುಖಂಡರು ಬೆಂಬಲ ನೀಡಿ ಪ್ರತಿಭಟನೆಯಲ್ಲಿ ಪಾಲ್ಗೊಂಡರು.

“ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ ವಿಐಎಸ್‌ಎಲ್‌ನ್ನು ಯಾವುದೇ ಕಾರಣಕ್ಕೂ ಮುಚ್ಚಲು ಬಿಡುವುದಿಲ್ಲ. ಅದನ್ನು ಪುನಶ್ಚೇತನಗೊಳಿಸುತ್ತೇವೆ. ಈಗಾಗಲೇ ಕಾಂಗ್ರೆಸ್ ಮುಖಂಡರು ಈ ಬಗ್ಗೆ ಭರವಸೆ ನೀಡಿದ್ದಾರೆ. ಪಕ್ಷದ ಪ್ರಣಾಳಿಕೆಯಲ್ಲೂ ಈ ವಿಷಯ ಸೇರಿಸಲಿದ್ದಾರೆ” ಎಂದು ಕಾಂಗ್ರೆಸ್ ಮುಖಂಡರು ತಿಳಿಸಿದರು.

“ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಕಾರ್ಖಾನೆಯ ಪುನಶ್ಚೇತನಕ್ಕಾಗಿ ಶ್ರಮಿಸಿದ್ದಾರೆ. ರಾಜೀವ್‌ ಗಾಂಧಿಯವರು ಇದನ್ನು ಸೇಲ್ ಅಥಾರಿಟಿಗೆ ನೀಡಿದ್ದರೂ ಮಲ್ಲಿಕಾರ್ಜುನ ಖರ್ಗೆ ಹಾಗೂ ವೀರಪ್ಪ ಮೊಯ್ಲಿ ಅವರು ಮುಖ್ಯಮಂತ್ರಿಯಾಗಿದ್ದಾಗ ಈ ಕಾರ್ಖಾನೆಯನ್ನು ಖಾಸಗೀಕರಣ ಮಾಡಲು ಬಿಡಲಿಲ್ಲ. ಈಗಲೂ ನಾವು ನಿಮ್ಮೊಂದಿಗಿದ್ದೇವೆ. ಜಿಲ್ಲೆಯ ಮುಕುಟವಾದ ಕಾರ್ಖಾನೆಯನ್ನು ಮುಚ್ಚಲು ಬಿಡುವುದಿಲ್ಲ. ಕಾರ್ಮಿಕರು ಬೀದಿ ಪಾಲಾಗುವುದನ್ನು ಕಾಂಗ್ರೆಸ್ ಖಂಡಿಸುತ್ತದೆ” ಎಂದು ಕಾಂಗ್ರೆಸ್ ಮುಖಂಡರು ಕಾರ್ಮಿಕರಿಗೆ ಭರವಸೆ ನೀಡಿದರು.

ಇದನ್ನೂ ಓದಿ: Teacher Recruitment : 15 ಸಾವಿರ ಶಿಕ್ಷಕರ ನೇಮಕ; ಉನ್ನತ ಮಟ್ಟದ ಸಭೆ ನಡೆದರೂ ಅಂತಿಮ ತೀರ್ಮಾನವಿಲ್ಲ!

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾದ ಎನ್. ರಮೇಶ್. ವಿಧಾನ ಪರಿಷತ್ ಸದಸ್ಯರಾದ ಆರ್. ಪ್ರಸನ್ನ ಕುಮಾರ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ. ಗಿರೀಶ್, ಪ್ರಚಾರ ಸಮಿತಿಯ ರಾಜ್ಯ ಸಂಯೋಜಕ ಎಸ್.ಪಿ. ದಿನೇಶ್, ಹಿಂದುಳಿದ ವರ್ಗಗಳ ಅಧ್ಯಕ್ಷ ಇಕ್ಕೇರಿ ರಮೇಶ್ , ಭದ್ರಾವತಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರೇಗೌಡ, ಪ್ರಮುಖರಾದ ಶಿವಾನಂದ, ಮಾರ್ಟಿಸ್ ಮಣಿ ಶೇಖರ್, ಭದ್ರಾವತಿ ಕಾಂಗ್ರೆಸ್‌ನ ಅಧ್ಯಕ್ಷರಾದ ಅಫ್ತಾಬ್ ವಿನೋದ್ ಕುಮಾರ್ ಕಾರ್ಮಿಕ ಸಂಘಟನೆಯ ಅಧ್ಯಕ್ಷ ಸುರೇಶ್, ಕಾರ್ಮಿಕ ಮುಖಂಡರಾದ ರಾಕೇಶ್ ಗಂಗಾಧರ್ ಹಾಗೂ ಇನ್ನಿತರರು ಇದ್ದರು.

Exit mobile version