ವಿಸ್ತಾರ TOP 10 NEWS | ಮೋದಿಯಿಂದ ಮೇಕೆದಾಟುವರೆಗೆ ಇಡೀ ದಿನ ಏನೇನಾಯ್ತು? - Vistara News

ಕರ್ನಾಟಕ

ವಿಸ್ತಾರ TOP 10 NEWS | ಮೋದಿಯಿಂದ ಮೇಕೆದಾಟುವರೆಗೆ ಇಡೀ ದಿನ ಏನೇನಾಯ್ತು?

ಮಂಗಳವಾರ ದಿನಪೂರ್ತಿ ದೇಶ ಹಾಗೂ ರಾಜ್ಯದ ಕುರಿತು ಅನೇಕ ಪ್ರಮುಖ ಘಟನಾವಳಿಗಳು ಜರುಗಿದವು. ತೆರಿಗೆ ಕಡಿತದ ಪರಿಣಾಮ ದೇಶದ ಹಣದುಬ್ಬರ ಇಳಿಕೆಯಾಗುವ ಮುನ್ಸೂಚನೆ ಒಂದೆಡೆಯಾದರೆ, ಮುಂದಿನ ಐದು ವರ್ಷದಲ್ಲಿ ಹತ್ತು ಲಕ್ಷ ಉದ್ಯೋಗ ಸೃಜನೆಗೆ ಪ್ರಧಾನಿ ಮೋದಿಯವರ ನಿರ್ಧಾರ ಪ್ರಕಟವಾಯಿತು. ದಿನಪೂರ್ತಿ ನಡೆದ ಪ್ರಮುಖ ಘಟನಾವಳಿಗಳು ಇಲ್ಲಿವೆ.

VISTARANEWS.COM


on

top 10 news vistara june 14 2022
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ರಾಜ್ಯ ಮತ್ತು ದೇಶದಲ್ಲಿ ಮಂಗಳವಾರ ನಡೆದ ಪ್ರಮುಖ 10 ಘಟನಾವಳಿಗಳ ಪಟ್ಟಿ ಇಲ್ಲಿದೆ.

1. Agnipath: ಸೇನೆ ಸೇರಲು ಯುವಕರಿಗೆ ಸುವರ್ಣ ಅವಕಾಶ; ಅಗ್ನಿಪಥ್‌ ಯೋಜನೆಗೆ ಕೇಂದ್ರದ ಅನುಮೋದನೆ
ಕೇಂದ್ರ ಸರ್ಕಾರ ಇಂದಿನಿಂದ (ಜೂ.15) ಸಶಸ್ತ್ರ ಪಡೆಗಳಿಗಾಗಿ ಟೂರ್‌ ಆಫ್‌ ಡ್ಯೂಟಿ ಅಥವಾ ಅಗ್ನಿಪಥ್‌ ನೇಮಕಾತಿ ಯೋಜನೆಯನ್ನು ಪ್ರಾರಂಭಿಸಿದೆ. ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ (CCEA) ಮತ್ತು ಕೇಂದ್ರ ಸಚಿವ ಸಂಪುಟ ಜಂಟಿಯಾಗಿ ಈ ಯೋಜನೆಗೆ ಅನುಮೋದನೆ ನೀಡಿದೆ. ಸೇನೆ ಸೇರಬೇಕೆಂಬ ಮಹದಾಸೆ ಇಟ್ಟುಕೊಂಡ ಯುವಜನರಿಗೆ ಇದೊಂದು ಸುವರ್ಣಾವಕಾಶ. ಅಗ್ನಿಪಥ್‌ ನೇಮಕಾತಿ ಯೋಜನೆಯಡಿ ಯುವಕರನ್ನು ನಾಲ್ಕು ವರ್ಷಗಳ ಅವಧಿಗೆ ಸೇನೆಗೆ ನೇಮಕ ಮಾಡಿಕೊಳ್ಳಲಾಗುವುದು. (ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ)

2. 18 ತಿಂಗಳಲ್ಲಿ 10 ಲಕ್ಷ ಜಾಬ್‌: ಸರಕಾರಿ ಖಾಲಿ ಹುದ್ದೆ ಭರ್ತಿಗೆ ಮೋದಿ ಆರ್ಡರ್‌
ಮುಂದಿನ ಒಂದೂವರೆ ವರ್ಷದ ಅವಧಿಯಲ್ಲಿ 10 ಲಕ್ಷ ಹುದ್ದೆಗಳನ್ನು ಭರ್ತಿ ಮಾಡಬೇಕು: ಇದು ಪ್ರಧಾನಿ ನರೇಂದ್ರ ಮೋದಿ ಆರ್ಡರ್‌. ಈ ರೀತಿ ಮಿಷನ್‌ ಮೋಡ್‌ನಲ್ಲಿ ನೇಮಕಾತಿ ನಡೆಯಬೇಕು ಎಂದು ಅವರು ಆದೇಶ ಕೊಟ್ಟಿದ್ದು ಕೇಂದ್ರ ಸರಕಾರದ ನಾನಾ ಇಲಾಖೆಗಳು ಮತ್ತು ಸಚಿವಾಲಯಗಳಿಗೆ. (ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ)

3. ಎರಡನೇ ದಿನವೂ ಮುಂದುವರಿದ ರಾಹುಲ್‌ ಇಡಿ ವಿಚಾರಣೆ; ಧರಣಿ ಕುಳಿತ ಕಾಂಗ್ರೆಸಿಗರು
ನ್ಯಾಷನಲ್‌ ಹೆರಾಲ್ಡ್‌ ಹಗರಣದಲ್ಲಿ ಅನುಷ್ಠಾನ ನಿರ್ದೇಶನಾಲಯದ ವಿಚಾರಣೆ ಎದುರಿಸುತ್ತಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಮಂಗಳವಾರ ಎರಡನೇ ದಿನವೂ ಇ.ಡಿ ಅಧಿಕಾರಿಗಳ ಮುಂದೆ ಹಾಜರಾದರು. ಸೋಮವಾರ ಕಾಂಗ್ರೆಸ್‌ ನಾಯಕರ ಭಾರಿ ಹೈಡ್ರಾಮಾದ ಬಳಿಕ ಒಂಬತ್ತು ಗಂಟೆ ಕಾಲ ವಿಚಾರಣೆ ಎದುರಿಸಿದ್ದ ಕಾಂಗ್ರೆಸ್‌ ನಾಯಕ ಮಂಗಳವಾರವೂ ಅದೇ ಮಾದರಿಯಲ್ಲಿ ಗ್ರಿಲ್‌ಗೆ ಒಳಗಾದರು. ಈ ನಡುವೆ ರಾಹುಲ್‌ ಅವರು ಇ.ಡಿ ಪ್ರಶ್ನೆಗಳಿಗೆ ಸರಿಯಾದ ಉತ್ತರ ನೀಡುತ್ತಿಲ್ಲ ಎನ್ನಲಾಗುತ್ತಿದೆ. ರಾಹುಲ್‌ ಹೀಗೆ ಮಾಡಿದರೆ ಅಧಿಕಾರಿಗಳು ಅವರನ್ನು ಬಂಧಿಸಿ ಹೆಚ್ಚಿನ ವಿಚಾರಣೆಗೆ ಒಳಪಡಿಸುವ ಸಾಧ್ಯತೆಗಳೂ ಇವೆ. (ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ)

4. Mekedatu Row | ಮತ್ತೆ ತಮಿಳುನಾಡಿನ ತಗಾದೆ, ವ್ಯಾಪಕ ವಿರೋಧ
ರಾಜ್ಯದ ಮೇಕೆದಾಟು ಯೋಜನೆಗೆ ತಮಿಳುನಾಡು ಮತ್ತೆ ತಗಾದೆ ತೆಗೆದಿರುವುದಕ್ಕೆ ರಾಜ್ಯದಲ್ಲಿ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಕೇಂದ್ರ ಸರ್ಕಾರ ತಮಿಳುನಾಡಿನ ವಿರೋಧ ಪರಿಗಣಿಸದೇ ಈ ಯೋಜನೆಗೆ ಇರುವ ಅಡ್ಡಿಗಳನ್ನು ದೂರ ಮಾಡಬೇಕೆಂದು ಕನ್ನಡ ಪರ ಹೋರಾಟಗಾರರು, ವಿವಿಧ ರಾಜಕೀಯ ಪಕ್ಷಗಳ ನಾಯಕರು ಒತ್ತಾಯಿಸುತ್ತಿದ್ದಾರೆ. (ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ)

5. ರಾಷ್ಟ್ರಪತಿ ಚುನಾವಣೆ; ಮಮತಾ ಬ್ಯಾನರ್ಜಿ ಕರೆದ ಸಭೆಯಲ್ಲಿ ಪಾಲ್ಗೊಳ್ಳಲು ಕಾಂಗ್ರೆಸ್‌ ಒಪ್ಪಿಗೆ
ರಾಷ್ಟ್ರಪತಿ ಚುನಾವಣೆಯನ್ನು ಈ ಸಲ ಪ್ರತಿಪಕ್ಷಗಳು ಗಂಭೀರವಾಗಿ ಪರಿಗಣಿಸಿವೆ. ಎನ್‌ಡಿಒ ಒಕ್ಕೂಟದಿಂದ ನಿಲ್ಲುವ ಅಭ್ಯರ್ಥಿಯೇ ಗೆಲ್ಲುವುದು ನಿಶ್ಚಿತ ಎಂಬ ಸನ್ನಿವೇಶ ಈಗಾಗಲೇ ಸೃಷ್ಟಿಯಾಗಿದ್ದರೂ ಪ್ರತಿಪಕ್ಷಗಳು ಒಮ್ಮತದಿಂದ ಒಬ್ಬ ಅಭ್ಯರ್ಥಿಯನ್ನು ರಾಷ್ಟ್ರಪತಿ ಚುನಾವಣೆಗೆ ಕಣಕ್ಕಿಳಿಸಲು ಮುಂದಾಗಿವೆ. ಈ ಬಗ್ಗೆ ಕಾರ್ಯತಂತ್ರ ರೂಪಿಸುವ ಸಲುವಾಗಿ ಮಮತಾ ಬ್ಯಾನರ್ಜಿ (Mamata Banerjee) ದೆಹಲಿಯ ಕಾನ್‌ಸ್ಟಿಟ್ಯೂಶನ್‌ ಕ್ಲಬ್‌ನಲ್ಲಿ ಬುಧವಾರ (ಜೂ.15)ರಂದು ಮಧ್ಯಾಹ್ನ 3 ಗಂಟೆಗೆ ಪ್ರತಿಪಕ್ಷಗಳ ಸಭೆ ಕರೆದಿದ್ದಾರೆ. ಹಾಗೇ, ಈ ಸಭೆಯಲ್ಲಿ ಭಾಗವಹಿಸಲು ಕಾಂಗ್ರೆಸ್‌ ಕೂಡ ಒಪ್ಪಿಕೊಂಡಿದೆ. (ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ)

6. ಗೋವಿಂದ ದೇವಾಲಯ ಲೋಕಾರ್ಪಣೆ ಮಾಡಿದ ರಾಷ್ಟ್ರಪತಿ ಕೋವಿಂದ
ಬೆಂಗಳೂರಿನ ಕನಕಪುರ ರಸ್ತೆ ವಸಂತಪುರದಲ್ಲಿ ಇಸ್ಕಾನ್ ಸಂಸ್ಥೆ ವತಿಯಿಂದ ನಿರ್ಮಾಣ ಮಾಡಲಾಗಿರುವ ತಿರುಮಲ ಮಾದರಿಯ ಶ್ರೀ ರಾಜಾಧಿರಾಜ ಗೋವಿಂದ ದೇವಸ್ಥಾನವನ್ನು ಲೋಕಾರ್ಪಣೆ ಮಾಡಲಾಯಿತು. ಆಗಸ್ಟ್ 1ರಂದು ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ. ಇದರ ಭಾಗವಾಗಿ ಇಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಲೋಕಾರ್ಪಣೆ ಮಾಡಿದರು. (ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ)

7. ಶಕ್ತಿಕಪೂರ್‌ ಪುತ್ರ ಸಿದ್ಧಾಂತ್‌ ಕೊಕೇನ್‌ ಸೇವಿಸಿದ್ದು ದೃಢ
ಹಲಸೂರಿನ ದಿ ಪಾರ್ಕ್‌ ಹೋಟೆಲ್‌ನಲ್ಲಿ ಡ್ರಗ್ಸ್‌ ಪಾರ್ಟಿ ನಡೆಸಿದ ಪ್ರಕರಣದಲ್ಲಿ ಆರೋಪಿಯಾಗಿ ಪೊಲೀಸ್‌ ವಶದಲ್ಲಿದ್ದ ಬಾಲಿವುಡ್‌ ನಟ ಸಿದ್ಧಾಂತ್‌ ಕಪೂರ್‌ಗೆ ಜಾಮೀನು ಲಭಿಸಿದ್ದು, ಜೈಲಿನಿಂದ ಬಿಡುಗಡೆಯಾಗಿದ್ದಾನೆ. ನಿಷೇಧಿತ ಮಾದಕ ದ್ರವ್ಯ ಕೊಕೇನ್‌ ಅನ್ನು ಸಿದ್ಧಾಂತ್‌ ಕಪೂರ್‌ ಸೇವಿಸಿರುವುದು ದೃಢಪಟ್ಟಿದೆ. (ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ)

8. Assembly 2023 | ಬಾದಾಮಿಯಿಂದ ಕೋಲಾರಕ್ಕೆ ಸಿದ್ದರಾಮಯ್ಯ ಶಿಫ್ಟ್‌?
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಬಾದಾಮಿ ವಿಧಾನಸಭಾ ಕ್ಷೇತ್ರವನ್ನೂ ತೊರೆಯುವ ನಿರ್ಧಾರ ಮಾಡಿದ್ದಾರೆ. 2023ರ ವಿಧಾನಸಭೆ ಚುನಾವಣೆಗೆ ಇನ್ನು ಒಂದು ವರ್ಷಕ್ಕೂ ಕಡಿಮೆ ಸಮಯ ಉಳಿದಿರುವಂತೆ ಸಿದ್ದರಾಮಯ್ಯ ಈ ನಿರ್ಧಾರ ಕೈಗೊಳ್ಳಲು ಮುಂದಾಗಿರುವುದು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಎಡೆ ಮಾಡಿಕೊಟ್ಟಿದೆ. (ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ)

9. ಮಧುಮೇಹಿಗಳಿಗೆ IIScಯಿಂದ ಸ್ಪೆಷಲ್‌ ಪಾದರಕ್ಷೆ, ನೋವಾಗಲ್ಲ, ಕೀವಾಗಲ್ಲ!
ಮಧುಮೇಹ ಸಮಸ್ಯೆ ತೀವ್ರವಾಗಿರುವವರಿಗೆ ಪಾದರಕ್ಷೆ ಧರಿಸುವುದು ಕೂಡ ದೊಡ್ಡ ಸಮಸ್ಯೆಯೇ. ಕಾಲು ಸ್ಪರ್ಶ ಜ್ಞಾನವನ್ನು ಕಳೆದುಕೊಳ್ಳುವುದರಿಂದ ಕೆಲವೊಂದು ಭಾಗದಲ್ಲಿ ಗಾಯವಾಗಿ ಕೀವಾದರೂ ಗೊತ್ತಾಗುವುದಿಲ್ಲ. ಇದೀಗ ಕಾಲುಗಳಿಗೆ ಯಾವುದೇ ಗಾಯವಾಗದಂತೆ, ಯಾವುದೇ ನೋವಾಗದಂಥ ಹೊಸ ಮಾದರಿಯ ಪಾದರಕ್ಷೆಯನ್ನು ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ ಸಿದ್ಧಪಡಿಸಿದೆ. ಇದಕ್ಕೆ ಸ್ನಾಪಿಂಗ್‌ ಫುಟ್‌ವೇರ್‌ ಎಂದು ಹೆಸರಿಡಲಾಗಿದೆ. (ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ)

10. ತುಕಡೆ ತುಕಡೆ ಗ್ಯಾಂಗ್‌ ರೀತಿಯಲ್ಲೆ ಬರಗೂರು ಕೆಲಸ: ಸಚಿವ ನಾಗೇಶ್‌
ದೇಶವನ್ನು ತುಂಡರಿಸುವ ಘೋಷಣೆ ಹಾಗೂ ಕೃತ್ಯ ಎಸಗುವ ಜವಾಹರಲಾಲ್‌ ನೆಹರೂ ವಿಶ್ವವಿದ್ಯಾಲಯ ರೀತಿಯಲ್ಲೆ ಪ್ರೊ. ಬರಗೂರು ರಾಮಚಂದ್ರಪ್ಪ ಕೆಲಸ ಮಾಡಿದ್ದಾರೆ ಎಂದು ಶಿಕ್ಷಣ ಸಚಿವ ಬಿ. ಸಿ. ನಾಗೇಶ್‌ ಆರೋಪಿಸಿದ್ದಾರೆ. ರಾಜ್ಯಾದ್ಯಂತ ಪಠ್ಯಪುಸ್ತಕ ವಿವಾದ ಮುಕ್ತಾಯ ಕಾಣುತ್ತಿರುವಂತೆಯೇ ಜವಾಹರಲಾಲ್‌ ನೆಹರೂ ವಿವಿಯ ರೊಮಿಲಾ ಥಾಪರ್‌ ಸೇರಿ ಅನೇಕರು ಬಹಿರಂಗ ಪತ್ರವೊಂದನ್ನು ಸೋಮವಾರ ಬರೆದಿದ್ದರು. ತಿರುಚಿದ ಇತಿಹಾಸ ಮಕ್ಕಳಿಗೆ ಕಲಿಸಿಕೊಡಬೇಡಿ ಎಂದಿದ್ದರು. ಈ ಕುರಿತು ನಾಗೇಶ್‌ ಪ್ರತಿಕ್ರಿಯಿಸಿದ್ದಾರೆ. (ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ)

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪಚುನಾವಣಾ ಫಲಿತಾಂಶಕ್ಕೆ ಕ್ಷಣಗಣನೆ

VISTARANEWS.COM


on

ರಾಜ್ಯದ ಎರಡು ವಿಧಾನಸಭಾ ಕ್ಷೇತಗಳಿಗೆ ನಡೆದ ಉಪಚುನಾವಣಾ ಫಲಿತಾಂಶಕ್ಕೆ ಕ್ಷಣಗಣನೆ ಶುರುವಾಗಿದೆ. ದಾವಣಗೆರೆ ದಕ್ಷಿಣ, ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌, ಬಿಜೆಪಿ ನಡುವಿನ ನೇರ ಹಣಾಹಣಿಯಲ್ಲಿ ಯಾರಿಗೆ ಗೆಲುವು ಸಿಗಲಿದೆ ಎಂಬ ಪ್ರಶ್ನೆಗೆ ನಾಳೆ(ಮೇ.4) ಉತ್ತರ ಸಿಗಲಿದೆ. ಬೆಳಗ್ಗೆ 8 ಗಂಟೆಯಿಂದ ಎರಡೂ ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಾರಂಭವಾಗಲಿದ್ದು, ಬಹುತೇಕ ಮಧ್ಯಾಹ್ನ 2 ಗಂಟೆಯೊಳಗೆ ಫಲಿತಾಂಶದ ಸ್ಪಷ್ಟ ಚಿತ್ರಣ ಸಿಗುವ ಸಾಧ್ಯತೆಯಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಹಾಲಿ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌ರ ಪುತ್ರ ಸಮರ್ಥ್‌ ಶಾಮನೂರು ಕಾಂಗ್ರೆಸ್‌ ಅಭ್ಯರ್ಥಿಯಾದ್ರೆ, ಬಿಜೆಪಿಯಿಂದ ಶ್ರೀನಿವಾಸ ದಾಸ್ ಕರಿಯಪ್ಪ ಕಣದಲ್ಲಿದ್ದಾರೆ.
ಬಾಗಲಕೋಟೆ ಶಾಸಕರಾಗಿದ್ದ ಎಚ್‌.ವೈ.ಮೇಟಿ ಅವರ ನಿಧನದಿಂದ ತೆರವಾಗಿದ್ದ ಕ್ಷೇತ್ರಕ್ಕೆ ಉಪಚುನಾವಣೆ ನಡೆದಿದ್ದು, ಎಚ್‌.ವೈ.ಮೇಟಿ ಅವರ ಪುತ್ರ ಉಮೇಶ ಮೇಟಿ ಕಾಂಗ್ರೆಸ್‌ನಿಂದ ಕಣದಲ್ಲಿದ್ದಾರೆ. ಬಿಜೆಪಿಯಿಂದ ಮಾಜಿ ಶಾಸಕ ವೀರಣ್ಣ ಚರಂತಿಮಠ ಸ್ಪರ್ಧೆಯಲ್ಲಿದ್ದು ಯಾರ ಕೊರಳಿಗೆ ಜಯಮಾಲೆ ಬೀಳಲಿದೆ ಎಂಬುದು ಫಲಿತಾಂಶ ಬಂದ ನಂತರ ಗೊತ್ತಾಗಲಿದೆ. ಈಗಾಗಲೇ ಮತಎಣಿಕಾ ಕೇಂದ್ರಗಳ ಸುತ್ತ ಸೂಕ್ತ ಭದ್ರತಾ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.

Continue Reading

Latest

ಜೂನಿಯರ್‌ ಡಾಲಿ ಎಂಟ್ರಿ.. ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ

VISTARANEWS.COM


on

ಸ್ಯಾಂಡಲ್‌ವುಡ್‌ನ ಜನಪ್ರಿಯ ನಟ ‘ಡಾಲಿ’ ಧನಂಜಯ್ ಹಾಗೂ ಧನ್ಯತಾ ದಂಪತಿಗೆ ಗಂಡು ಮಗುವಿನ ಜನನವಾಗಿದೆ. ಗಂಡು ಮಗು ಜನಿಸಿದ ವಿಚಾರವನ್ನು ಧನಂಜಯ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಮಗುವಿನ ಪುಟ್ಟ ಕೈಗಳ ಫೋಟೋ ಶೇರ್‌ ಮಾಡಿದ್ದಾರೆ. ನಟ ಧನಂಜಯ್ ಹಾಗೂ ವೈದ್ಯೆ ಧನ್ಯತಾ 2025ರ ಫೆಬ್ರವರಿ 16ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆಯಾದ ಒಂದು ವರ್ಷದ ಸಂಭ್ರಮದ ಬೆನ್ನಲ್ಲೇ ಈ ಜೋಡಿ ಈಗ ಗಂಡು ಮಗುವನ್ನು ಸ್ವಾಗತಿಸಿದೆ.

Continue Reading

Latest

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಏರಿಕೆ: ಒಂದೇ ದಿನ 993 ರೂ ಹೆಚ್ಚಳ

VISTARANEWS.COM


on

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 993 ರೂಪಾಯಿಯಷ್ಟು ಏರಿಕೆ ಮಾಡಲಾಗಿದೆ. ಇಂದಿನಿಂದ (ಮೇ.1) ರಿಂದ ಹೊಸ ದರ ಅನ್ವಯವಾಗಲಿದ್ದು, ಹೋಟೆಲ್‌, ರೆಸ್ಟೋರೆಂಟ್‌, ವಾಣಿಜ್ಯ ಬಳಕೆಯ 19 ಕೆಜಿ ತೂಕದ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು 993 ರೂಪಾಯಿ ಹೆಚ್ಚಿಸಲಾಗಿದೆ. ಬೆಂಗಳೂರಿನಲ್ಲಿ ಈ ಹಿಂದೆ 2161 ರೂ ಇದ್ದ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ಈಗ 3154 ರೂಪಾಯಿಗೆ ಏರಿದೆ. ಒಂದೇ ಬಾರಿ ಇಷ್ಟೊಂದು ಪ್ರಮಾಣದಲ್ಲಿ ಬೆಲೆ ಹೆಚ್ಚಳವಾಗಿರುವುದು ವ್ಯಾಪಾರ ವಲಯದಲ್ಲಿ ಆತಂಕ ಮೂಡಿಸಿದೆ. ಈ ಬೆಲೆ ಏರಿಕೆಯಿಂದಾಗಿ ಹೋಟೆಲ್‌ ಮತ್ತು ರೆಸ್ಟೋರೆಂಟ್‌ ಉದ್ಯಮಿಗಳಿಗೆ ಹೆಚ್ಚುವರಿ ವೆಚ್ಚದ ಒತ್ತಡ ಎದುರಾಗಲಿದೆ. ಈಗಾಗಲೇ ಹೆಚ್ಚುತ್ತಿರುವ ಇತರೆ ಖರ್ಚುಗಳ ನಡುವೆ ಈ ಏರಿಕೆ ಮತ್ತಷ್ಟು ಭಾರವಾಗಲಿದೆ ಎಂದು ವ್ಯಾಪಾರಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ವಾಣಿಜ್ಯ ಸಿಲಿಂಡರ್‌ ಬೆಲೆ ಏರಿಕೆಯಿಂದ ಆಹಾರ ಪದಾರ್ಥಗಳ ಬೆಲೆಯಲ್ಲಿ ಏರಿಕೆ ಸಂಭವಿಸುವ ಸಾಧ್ಯತೆ ಇದೆ.

Continue Reading

Latest

ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್: ಇಂದು ಮತ್ತು ನಾಳೆ ಆಲಿಕಲ್ಲು ಮಳೆ ಸಾಧ್ಯತೆ

VISTARANEWS.COM


on

ಬೆಂಗಳೂರು ನಗರ ಸೇರಿದಂತೆ 18 ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಬಿರುಗಾಳಿ, ಆಲಿಕಲ್ಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆ ರಾಜ್ಯದ 18 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.

ಇಂದು (ಏಪ್ರಿಲ್ 30) ಹಾಗೂ ನಾಳೆ (ಮೇ 1) ರಾಜಧಾನಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಧಾರವಾಡ, ಗದಗ, ಕೊಪ್ಪಳ, ಹಾವೇರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಚಾಮರಾಜನಗರ, ಮೈಸೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಪ್ರಮಾಣದಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ನಿರೀಕ್ಷೆಯಿದೆ.

ಭಾರಿ ಮಳೆಯಾಗುವ ಸಾಧ್ಯತೆಯ ಹಿನ್ನೆಲೆ ಜನರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಹವಾಮಾನ ಇಲಾಖೆ ಸೂಚಿಸಿದೆ.

Continue Reading
Advertisement
Latest9 hours ago

ದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪಚುನಾವಣಾ ಫಲಿತಾಂಶಕ್ಕೆ ಕ್ಷಣಗಣನೆ

Latest9 hours ago

ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶಕ್ಕೆ ಕ್ಷಣಗಣನೆ

Latest10 hours ago

‘ಟಾಕ್ಸಿಕ್’ ಸಿನಿಮಾದಲ್ಲಿ ಬೋಲ್ಡ್ ದೃಶ್ಯಕ್ಕೆ ಕತ್ತರಿ ಹಾಕಿ ಕಿಯಾರಾ ಅಡ್ವಾಣಿ ಮನವಿ?

Latest1 day ago

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ, ಬಾಂಗ್ಲಾದೇಶಕ್ಕೆ ಏಕೆ ಟೆನ್ಶನ್‌?

Latest1 day ago

ಜೂನಿಯರ್‌ ಡಾಲಿ ಎಂಟ್ರಿ.. ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ

Latest3 days ago

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಏರಿಕೆ: ಒಂದೇ ದಿನ 993 ರೂ ಹೆಚ್ಚಳ

Latest3 days ago

ಜನಪ್ರಿಯತೆಯಲ್ಲಿ ಪ್ರಧಾನಿ ಮೋದಿ ಈಗಲೂ ನಂ.1

Latest3 days ago

ಕುರ್ಚಿ ಕದನಕ್ಕೆ ಹೊಸ ಟ್ವಿಸ್ಟ್ : ದಲಿತ ಸಿಎಂ ಕೂಗು ಜೋರು

Latest3 days ago

ಟಿವಿಕೆ-ಎನ್‌ಡಿಎ ಮೈತ್ರಿ?, ತಮಿಳುನಾಡಿನಲ್ಲಿ ಸಂಚಲನ, ಸ್ಟಾಲಿನ್‌ ಸಭೆ

Latest3 days ago

ಎಕ್ಸಿಟ್‌ ಪೋಲ್‌: ಅಸ್ಸಾಂ, ಪುದುಚೇರಿ ಪ.ಬಂಗಾಳದಲ್ಲಿ ಬಿಜೆಪಿ, ತ.ನಾಡಲ್ಲಿ ಡಿಎಂಕೆ, ಕೇರಳಂನಲ್ಲಿ ಯುಡಿಎಫ್‌

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌