ವಿಸ್ತಾರ ಸಂಪಾದಕೀಯ: ಜನತಾ ದರ್ಶನ ಪ್ರಶಂಸಾರ್ಹ, ಪರಿಹಾರವೂ ದೊರೆಯಲಿ - Vistara News

ಕರ್ನಾಟಕ

ವಿಸ್ತಾರ ಸಂಪಾದಕೀಯ: ಜನತಾ ದರ್ಶನ ಪ್ರಶಂಸಾರ್ಹ, ಪರಿಹಾರವೂ ದೊರೆಯಲಿ

Vistara Editorial: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನತಾ ದರ್ಶನಕ್ಕೆ ಹೊಸ ಆಯಾಮ ನೀಡುತ್ತಿರುವುದು ಸ್ವಾಗತಾರ್ಹ. ಈ ಹಿಂದಿನ ಜನತಾ ದರ್ಶನಗಳ ಅರ್ಜಿಗಳ ಕತೆ ಏನಾಗಿದೆ ಎಂಬುದನ್ನೂ ಗಮನಿಸಬೇಕಿದೆ. ಜನತಾ ದರ್ಶನಗಳು ಕೇವಲ ತೋರಿಕೆಯ ಕಾರ್ಯಕ್ರಮ ಆಗದೆ ಜನರ ಸಂಕಷ್ಟ ಪರಿಹಾರ ಆಗುವಂತಾಗಲಿ.

VISTARANEWS.COM


on

Vistara Editorial, Janata Darshan by CM must appreciated
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ಸೂಚನೆಯಂತೆ ಇದೇ ಮೊದಲ ಬಾರಿಗೆ ರಾಜ್ಯಾದ್ಯಂತ ಏಕ‌ಕಾಲಕ್ಕೆ ಎಲ್ಲಾ ಜಿಲ್ಲೆಗಳಲ್ಲಿ ಜನತಾ ದರ್ಶನ ಕಾರ್ಯಕ್ರಮ ನಡೆದಿದೆ. ಸಾರ್ವಜನಿಕರಿಂದ ಅತ್ಯುತ್ತಮ ಸ್ಪಂದನೆ ಮತ್ತು ಪ್ರಶಂಸೆ ವ್ಯಕ್ತವಾಗಿದೆ. ಗದಗ ಮತ್ತು ಬೆಳಗಾವಿ ಎರಡು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ಜಿಲ್ಲೆಗಳಲ್ಲೂ ಜನತಾ ದರ್ಶನ ನಡೆದಿದೆ. ರಾಜ್ಯಾದ್ಯಂತ 6684 ಅಹವಾಲು ಮತ್ತು ಮನವಿಗಳು ಸ್ವೀಕೃತಗೊಂಡು 21ಕ್ಕೆ ಸ್ಥಳದಲ್ಲೇ ಪರಿಹಾರ ಒದಗಿಸಲಾಗಿದೆ. ಉಳಿದಂತೆ 6663 ಅರ್ಜಿ, ಅಹವಾಲುಗಳು ದಾಖಲಾಗಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ರವಾನೆಯಾಗಿವೆ ಎಂದು ಸರ್ಕಾರದ ಅಂಕಿ ಅಂಶಗಳು ತಿಳಿಸಿವೆ. ʼʼನಾವು ನಿರೀಕ್ಷಿಸಿದ್ದಕ್ಕಿಂತ ಹೆಚ್ಚಿನ ರೀತಿಯ ಪ್ರತಿಕ್ರಿಯೆ ಸಾರ್ವಜನಿಕರಿಂದ ಸಿಕ್ಕಿದೆ. ಅಧಿಕಾರಿಗಳ‌ ಸ್ಪಂದನೆ ಕೂಡ ಸಮಾಧಾನಕರವಾಗಿದೆ. ಇವತ್ತಿನ ಅನುಭವದ ಹಿನ್ನೆಲೆಯಲ್ಲಿ ಮುಂದಿನ‌ ಜನತಾ ದರ್ಶನದ ಗುಣಮಟ್ಟವನ್ನು ಇನ್ನಷ್ಟು ಹೆಚ್ಚಿಸುವ ಪ್ರಯತ್ನ ಮಾಡುತ್ತೇವೆʼʼ ಎನ್ನುವ ಅಭಿಪ್ರಾಯ ಕಾರ್ಯದರ್ಶಿಗಳ ಮಟ್ಟದ ಅಧಿಕಾರಿಗಳಿಂದ ವ್ಯಕ್ತವಾಗಿದೆ(Vistara Editorial).

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಡಿಪಿ ಸಭೆಗಳನ್ನು ಅತ್ಯಂತ ಗಂಭೀರವಾಗಿ ನಡೆಸುತ್ತಿದ್ದಾರೆ. ಅವರು ಜಿಲ್ಲೆಗಳಿಗೆ ಭೇಟಿ ನೀಡುವಾಗ ಹಲವಾರು ಮಂದಿ ಅವರ ಮುಂದೆ ಅಹವಾಲು ಹೇಳಿಕೊಳ್ಳಲು ಬರುತ್ತಿದ್ದಾರೆ. ಇದನ್ನು ಗಮನಿಸಿದ ಅವರು ಸಿಎಂ ಬಂದಾಗ ಜನರ ದೂರು ನೀಡಲು ಬರುತ್ತಾರೆ ಎಂದರೆ ಅವರಿಗೆ ಹೇಳಿಕೊಳ್ಳಲು ಇದೆ ಎಂದಾಯಿತು. ಹೀಗಾಗಿ ಎಲ್ಲಾ ಜಿಲ್ಲಾಧಿಕಾರಿಗಳು, ಜಿಪಂ ಸಿಇಒಗಳು ಜಿಲ್ಲಾ ಮಟ್ಟದಲ್ಲಿ ಮತ್ತು ತಾಲೂಕು ಮಟ್ಟದಲ್ಲೂ ಜನತಾ ದರ್ಶನ ನಡೆಸಬೇಕು ಎಂಬ ಸೂಚನೆಯನ್ನು ನೀಡಿದ್ದರು. ಇತ್ತೀಚೆಗೆ ನಡೆದ ಜಿಲ್ಲಾಧಿಕಾರಿಗಳು ಮತ್ತು ಜಿಪಂ ಸಿಇಒಗಳ ಮೀಟಿಂಗ್‌ನಲ್ಲಿ ಈ ಸೂಚನೆ ನೀಡಲಾಗಿತ್ತು. ಇದು ಸಫಲವಾಗಿದೆ ಎನ್ನುವುದಕ್ಕೆ ಇವತ್ತಿನ ದೃಶ್ಯವೇ ಸಾಕ್ಷಿ. ಸ್ವೀಕರಿಸಲಾಗಿರುವ ಅಹವಾಲುಗಳಲ್ಲಿ ಕಂದಾಯ ಇಲಾಖೆಯದ್ದೇ ಸಿಂಹಪಾಲು. ನಂತರದ ಸ್ಥಾನದಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಗೆ ಸೇರಿದ ಅಹವಾಲುಗಳಿವೆ. ಮೂರನೇ ಅತಿ ಹೆಚ್ಚು ಅಹವಾಲುಗಳು ನಗರಾಭಿವೃದ್ಧಿ ಇಲಾಖೆಗೆ ಸಂಬಂಧಿಸಿದ್ದಾಗಿವೆ. ಒಟ್ಟು ಅರ್ಜಿ ರೂಪದಲ್ಲಿ ಬಂದ ಅಹವಾಲುಗಳನ್ನು ದಾಖಲಿಸಿಕೊಳ್ಳುವ ಮತ್ತು ಸ್ಥಳದಲ್ಲೇ ಪರಿಹಾರಕ್ಕೆ ಪ್ರಯತ್ನಿಸುವ ಪ್ರಕ್ರಿಯೆ ಒಂದು ಕಡೆ ನಡೆದಿದೆ. ಮತ್ತೊಂದು ಕಡೆ ಅರ್ಜಿ ಇಲ್ಲದೆ ಮೌಖಿಕವಾಗಿ ಬಂದ ಅಹವಾಲುಗಳನ್ನೂ ದಾಖಲಿಸಿಕೊಳ್ಳುವ ಜತೆಗೆ ಸ್ಥಳದಲ್ಲೇ ಪರಿಹಾರ ಒದಗಿಸಲಾಗಿದೆ.

ಜನರಿಗೆ ದೂರುಗಳಿದ್ದೇ ಇರುತ್ತವೆ. ಜನ ಯಾವಾಗ ಮಂತ್ರಿಗಳ ಬಳಿಗೆ ಬರುತ್ತಾರೆ ಎಂಬುದನ್ನೂ ಗಮನಿಸಬೇಕು. ತಾಲೂಕು ಪಂಚಾಯತಿ, ಜಿಲ್ಲಾ ಪಂಚಾಯತಿ, ನೋಂದಣಿ, ಕಂದಾಯ ಹೀಗೆ ವಿಭಾಗವಾರು ಇಲಾಖೆಗಳಲ್ಲಿ ಕೇಸ್‌ ವರ್ಕರ್‌ಗಳು ತಮ್ಮ ಅರ್ಜಿಗಳ ವಿಲೇವಾರಿ ಮಾಡಲು ವಿಫಲರಾದಾಗ, ಮೇಲಧಿಕಾರಿಗಳತ್ತ ಜನ ಎಡತಾಕುವುದು ಸಾಮಾನ್ಯ. ಆದರೆ ಮೇಲಧಿಕಾರಿಗಳು ಇಂಥ ಅರ್ಜಿಗಳನ್ನು ʼಸರಿಯಾದ ರೀತಿಯಲ್ಲಿʼ (through proper channel) ಬರಲಿ ಎಂದು ಮತ್ತೆ ಅದನ್ನು ಕೆಳಗಿನ ಮೇಜುಗಳ ಕಡೆಗೆ ತಳ್ಳುವುದೂ ಸಾಮಾನ್ಯ. ಹೀಗೆ ಪ್ರಭಾವಿಗಳಲ್ಲದ ಜನಸಾಮಾನ್ಯರು ಮೇಜಿನಿಂದ ಮೇಜಿಗೆ ಅಲೆದಾಡುವುದು, ನಾಳೆ ಬಾ ಎಂದು ಹೇಳಿಸಿಕೊಳ್ಳುವುದು ಅತಿ ಸಾಮಾನ್ಯ ದೃಶ್ಯ. ಅನೇಕ ಮಂದಿಯ ಬದುಕು ಹೀಗೆ ಸರ್ಕಾರಿ ಕಚೇರಿಗಳಿಗೆ ಅಲೆದಾಡುತ್ತಲೇ ʼತಬರನ ಕಥೆʼಯಂತೆ ಮುಗಿದುಹೋಗುತ್ತದೆ. ಇದೊಂದು ದಃಸ್ವಪ್ನವೇ ಸರಿ. ಇದರಿಂದ ಪಾರಾಗಲು ಸಣ್ಣ ಸಣ್ಣ ವಿಚಾರಗಳಿಗೂ ಜನ ಪುಢಾರಿಗಳ ಮೊರೆ ಹೋಗುತ್ತಾರೆ; ಅಥವಾ ದಲ್ಲಾಳಿಗಳನ್ನು ಹಿಡಿದುಕೊಳ್ಳುತ್ತಾರೆ. ಇವರ ಮೂಲಕ ಕೆಲಸ ಮಾಡಿಸಿಕೊಳ್ಳುವುದಕ್ಕೆ ಪ್ರಯತ್ನಿಸುತ್ತಾರೆ.

ಹೀಗೆ ಸರ್ಕಾರಿ ಕೆಲಸದ ಕೆಂಪು ಪಟ್ಟಿಯ ವಿಳಂಬ ನರಕದಿಂದ ಬೇಸತ್ತ ಜನಸಾಮಾನ್ಯನಿಗೆ, ಪಾರಾಗುವ ಒಂದು ಕಿಂಡಿಯಂತೆ ಜನತಾ ದರ್ಶನ ಕಾಣಿಸಿದರೆ ಆಶ್ಚರ್ಯವಿಲ್ಲ. ನೇರವಾಗಿ ಜಿಲ್ಲಾಧಿಕಾರಿ ಅಥವಾ ಮಂತ್ರಿಗಳಿಗೆ ಅರ್ಜಿ ಸಲ್ಲಿಸಿದರೆ ತಮ್ಮ ಕೆಲಸ ಕೂಡಲೇ ಆಗಬಹುದು ಎಂಬ ಆಸೆ ಅವರಲ್ಲಿ ಮೂಡುವುದು ಸಹಜ. ಹೀಗಾಗಿಯೇ ಇಂಥ ಕಾರ್ಯಕ್ರಮಗಳಿಗೆ ಜನಸ್ಪಂದನ ದೊಡ್ಡ ಪ್ರಮಾಣದಲ್ಲಿ ವ್ಯಕ್ತವಾಗುತ್ತದೆ. ಜನ ಸರ್ಕಾರಿ ಕಚೇರಿಗಳ ಬಾಗಿಲಿಗೆ ಅಲೆದಾಡುವ ಬದಲು, ಜನತಾ ದರ್ಶನದ ಮೂಲಕ ಸರ್ಕಾರವೇ ಜನರ ಬಳಿ ಹೋಗುವುದು ಆಶಾದಾಯಕ. ಈ ಹಿಂದಿನ ಮುಖ್ಯಮಂತ್ರಿಗಳೂ ಇಂಥದೊಂದು ಪ್ರಯತ್ನ ಮಾಡಿದ್ದುಂಟು. ಆದರೆ ಇಷ್ಟೊಂದು ವ್ಯಾಪಕವಾಗಿ ಎಲ್ಲ ಜಿಲ್ಲೆಗಳಲ್ಲಿ ಏಕಕಾಲಕ್ಕೆ ಮಾಡಿರಲಿಲ್ಲ. ಆ ನಿಟ್ಟಿನಿಂದ ಇದು ಸ್ವಾಗತಾರ್ಹ.

ಈ ಸಂಪಾದಕೀಯವನ್ನೂ ಓದಿ: ವಿಸ್ತಾರ ಸಂಪಾದಕೀಯ: ವಂದೇ ಭಾರತ್‌; ಭಾರತದಲ್ಲಿ ರೈಲು ಕ್ರಾಂತಿ

ಈ ಹಿಂದಿನ ಜನತಾ ದರ್ಶನಗಳ ಅರ್ಜಿಗಳ ಕತೆ ಏನಾಗಿದೆ ಎಂಬುದನ್ನೂ ಗಮನಿಸಬೇಕಿದೆ. ಜನತಾ ದರ್ಶನಗಳು ಕೇವಲ ತೋರಿಕೆಯ ಕಾರ್ಯಕ್ರಮ ಆಗದೆ ಜನರ ಸಂಕಷ್ಟ ಪರಿಹಾರ ಆಗುವಂತಾಗಲಿ. ಸ್ವಲ್ಪ ಆಳವಾಗಿ ವಿಮರ್ಶೆ ಮಾಡಿದರೆ, ಜನತಾ ದರ್ಶನಗಳು ಸರ್ಕಾರಗಳ ವೈಫಲ್ಯವನ್ನು ಕಾಣಿಸುವ ಕಾರ್ಯಕ್ರಮವೇ ಹೊರತು ಸಾಫಲ್ಯವನ್ನಲ್ಲ. ಸರ್ಕಾರಿ ಕಚೇರಿಗಳಲ್ಲಿ ಸಾಮಾನ್ಯ ಸಮಯದಲ್ಲಿ ಕೆಲಸ ಆಗುತ್ತಿಲ್ಲ ಅನ್ನುವ ಕಾರಣಕ್ಕಾಗಿ ತಾನೇ ಜನತಾ ದರ್ಶನದ ಸಮಯದಲ್ಲಿ ಅಷ್ಟೊಂದು ಪ್ರಮಾಣದ ಅಹವಾಲುಗಳು ಬರುವುದು? ಮೊದಲು ಗ್ರಾಮ ಮಟ್ಟದಲ್ಲಿ, ತಾಲೂಕು ಮಟ್ಟದಲ್ಲಿ ಅಧಿಕಾರಿಗಳು ಜನತೆಗೆ ತಮ್ಮ ಕಚೇರಿಯಲ್ಲಿಯೇ ದರ್ಶನ ಕೊಡಬೇಕು. ಕೆಳಹಂತದ ಅಧಿಕಾರಿಗಳ ಜನತಾ ದರ್ಶನ ಮೊದಲಾಗಲಿ. ಅವರ ಮೇಲೆ ಮೇಲಧಿಕಾರಿಗಳು ನಿಗೂ ಇಡುವುದೂ ಆಗಲಿ. ಹಾಗೇ ಜಿಲ್ಲಾ ಮಟ್ಟದಲ್ಲೇ ಜನತಾ ದರ್ಶನ ಪರಿಣಾಮಕಾರಿಯಾಗಿ ನಡೆದಿದ್ದೇ ಆದಲ್ಲಿ ಜನ ದೂರದ ವಿಧಾನ ಸೌಧದವರೆಗೆ ದೂರುದುಮ್ಮಾನ ಹಿಡಿದುಕೊಂಡು ಮುಖ್ಯಮಂತ್ರಿಗಳನ್ನು ಹುಡುಕಿಕೊಂಡು ಬರುವ ಪ್ರಶ್ನೆಯೇ ಬರುವುದಿಲ್ಲ. ಜನತಾ ದರ್ಶನದ ಅರ್ಜಿಗಳನ್ನೇ ಕಾಲಕಾಲಕ್ಕೆ ವಿಲೇವಾರಿ ಮಾಡುವ ಒಂದು ವ್ಯವಸ್ಥೆ ರೂಪುಗೊಳ್ಳಬೇಕು. ಆಗ ಮಾತ್ರ ಜನತಾ ದರ್ಶನದ ಬಗ್ಗೆ ಜನತೆಯಲ್ಲಿ ವಿಶ್ವಾಸ ಮೂಡಬಹುದು. ಇಲ್ಲದಿದ್ದಲ್ಲಿ ಇದೂ ಹತ್ತರಲ್ಲಿ ಇನ್ನೊಂದು ಎಂಬಂತಾಗುತ್ತದೆ.

ಇನ್ನಷ್ಟು ಸಂಪಾದಕೀಯಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Sudha Murty: ಡಾ.ಮಂಜುನಾಥ್‌ ಗೆಲುವಿಗಾಗಿ ರಾಯರಿಗೆ ವಿಶೇಷ ಹರಕೆ ಹೊತ್ತ ಸುಧಾಮೂರ್ತಿ; ಏನದು?

Sudha Murty: ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಡಿ.ಕೆ.ಸುರೇಶ್‌ ಅವರ ವಿರುದ್ಧ ಕಣಕ್ಕಿಳಿದಿರುವ ಹೃದಯವಂತ ಡಾ.ಸಿ.ಎನ್.ಮಂಜುನಾಥ್‌ ಅವರ ಗೆಲುವಿಗಾಗಿ ರಾಜ್ಯಸಭೆ ಸದಸ್ಯೆ ಸುಧಾ ಮೂರ್ತಿ ಅವರು ವಿಶೇಷ ಹರಕೆಯೊಂದನ್ನು ಹೊತ್ತುಕೊಂಡಿದ್ದಾರೆ. ಹರಕೆ ಕುರಿತು ಅವರೇ ಮಾತನಾಡಿದ್ದಾರೆ. ಹಾಗಾದರೆ, ಸುಧಾ ಮೂರ್ತಿ ಅವರ ವಿಶೇಷ ಹರಕೆ ಏನು? ಇಲ್ಲಿದೆ ಮಾಹಿತಿ.

VISTARANEWS.COM


on

Sudha Murty
Koo

ಬೆಂಗಳೂರು: ಇನ್ಫೋಸಿಸ್‌ ಪ್ರತಿಷ್ಠಾನದ ಸಂಸ್ಥಾಪಕಿ, ರಾಜ್ಯಸಭೆ ಸದಸ್ಯೆ, ಲೇಖಕಿ ಹಾಗೂ ಸಮಾಜ ಸೇವೆಯಿಂದಲೂ ಗುರುತಿಸಿಕೊಂಡಿರುವ ಸುಧಾ ಮೂರ್ತಿ (Sudha Murty) ಅವರು ವಿಶೇಷ ಹರಕೆ ಹೊತ್ತಿದ್ದಾರೆ. ಹಾಗಂತ, ಸುಧಾ ಮೂರ್ತಿ ಅವರು ತಮಗಾಗಿ, ತಮ್ಮ ಕುಟುಂಬಸ್ಥರ ಏಳಿಗೆಗಾಗಿ ಹರಕೆ ಹೊತ್ತಿಲ್ಲ. ಬದಲಾಗಿ, ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಡಾ.ಸಿ.ಎನ್‌.ಮಂಜುನಾಥ್‌ (Dr C N Manjunath) ಅವರ ಗೆಲುವಿಗಾಗಿ ಮಂತ್ರಾಲಯದ ರಾಯರ ಬಳಿ ಸುಧಾ ಮೂರ್ತಿ ಅವರು ಹರಕೆ ಹೊತ್ತಿದ್ದಾರೆ.

ಡಾ.ಮಂಜುನಾಥ್ ಅವರೇ ಕಾರ್ಯಕ್ರಮವೊಂದರಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ. “ಲೋಕಸಭೆ ಚುನಾವಣೆಯಲ್ಲಿ ಡಾ.ಸಿ.ಎನ್‌. ಮಂಜುನಾಥ್‌ ಅವರು ಗೆಲುವು ಸಾಧಿಸಿದರೆ ಮಂತ್ರಾಲಯದಿಂದ 6 ಕಿಲೋಮೀಟರ್‌ ದೂರದ ಜಾಗದಿಂದ ಕಾಲ್ನಡಿಗೆಯಲ್ಲಿ ತೆರಳಿ ರಾಯರ ಪೂಜೆ ಮಾಡುತ್ತೇನೆ ಎಂಬುದಾಗಿ ಸುಧಾ ಮೂರ್ತಿ ಅವರು ಹೇಳಿದ್ದಾರೆ. ಲೋಕಸಭೆ ಚುನಾವಣೆ ಮುಗಿದ ಬಳಿಕ ನಾನು ಸುಧಾ ಮೂರ್ತಿ ಅವರ ನಿವಾಸಕ್ಕೆ ಭೇಟಿ ನೀಡಿದ್ದೆ. ಇದೇ ವೇಳೆ ಸುಧಾ ಮೂರ್ತಿ ಅವರು ತಮ್ಮ ಹರಕೆ ಕುರಿತು ಹೇಳಿದ್ದಾರೆ” ಎಂದು ಮಂಜುನಾಥ್‌ ಕಾರ್ಯಕ್ರಮವೊಂದರಲ್ಲಿ ತಿಳಿಸಿದ್ದಾರೆ. ಡಾ.ಮಂಜುನಾಥ್‌ ಅವರ ಭಾಷಣದ ವಿಡಿಯೊವನ್ನು ‘ಬೆಂಗಳೂರು ಮೀಡಿಯಾ ವರ್ಲ್ಡ್‌ ಬಿಎಂಡಬ್ಲ್ಯೂ’ ಯುಟ್ಯೂಬ್‌ನಲ್ಲಿ ಹಂಚಿಕೊಂಡಿದೆ.

ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಲೋಕಸಭೆ ಚುನಾವಣೆ ಮುಕ್ತಾಯಗೊಂಡಿದೆ. ಜೂನ್‌ 4ರಂದು ಫಲಿತಾಂಶ ಪ್ರಕಟವಾಗಲಿದ್ದು, ಎಲ್ಲ 28 ಕ್ಷೇತ್ರಗಳ ನೂರಾರು ಅಭ್ಯರ್ಥಿಗಳಲ್ಲಿ ಕುತೂಹಲ ನೂರ್ಮಡಿಯಾಗಿದೆ. ಹಾಗಾಗಿ, ಆಯಾ ಅಭ್ಯರ್ಥಿಗಳ ಕುಟುಂಬಸ್ಥರು ದೇವರಿಗೆ ಹತ್ತಾರು ಹರಕೆ ಹೊತ್ತುಕೊಂಡಿದ್ದಾರೆ. ಆದರೆ, ಸುಧಾ ಮೂರ್ತಿ ಅವರು ಜಯದೇವ ಆಸ್ಪತ್ರೆ ನಿರ್ದೇಶಕರೂ ಆಗಿದ್ದ ಡಾ.ಸಿ.ಎನ್.ಮಂಜುನಾಥ್‌ ಅವರ ಗೆಲುವಿಗಾಗಿ ಹರಕೆ ಹೊತ್ತುಕೊಂಡಿರುವುದು ವಿಶೇಷವಾಗಿದೆ.

ಕಳೆದ ಮಾರ್ಚ್‌ನಲ್ಲಿ ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವ ಸುಧಾ ಮೂರ್ತಿ ಅವರು ಕನ್ನಡದಲ್ಲಿಯೇ ಪ್ರಮಾಣವಚನ ಸ್ವೀಕರಿಸಿ ಮೆಚ್ಚುಗೆಗೆ ಪಾತ್ರರಾಗಿದ್ದರು. ರಾಜ್ಯಸಭೆಯ ಅಧ್ಯಕ್ಷರಾಗಿರುವ ಜಗದೀಪ್‌ ಧನಕರ್‌ ಅವರು ಪ್ರತಿಜ್ಞಾ ವಿಧಿ ಬೋಧಿಸಿದ್ದರು. ರಾಜ್ಯಸಭೆಯಲ್ಲಿ ಬಿಜೆಪಿ ನಾಯಕರಾಗಿರುವ ಪಿಯೂಷ್‌ ಗೋಯಲ್‌ ಅವರು ಉಪಸ್ಥಿತರಿದ್ದರು. ಸುಧಾಮೂರ್ತಿ ಅವರ ಜೀವನ ಸಂಗಾತಿ ಎನ್‌.ಆರ್‌. ನಾರಾಯಣ ಮೂರ್ತಿ ಅವರು ಕೂಡ ಇದ್ದರು.

ಇದನ್ನೂ ಓದಿ: Sudha Murthy : ರಾಜ್ಯಸಭೆ ಸದಸ್ಯರಾಗಿ ಕನ್ನಡದಲ್ಲೇ ಪ್ರತಿಜ್ಞೆ ಸ್ವೀಕರಿಸಿದ ಸುಧಾ ಮೂರ್ತಿ; ನಾರಾಯಣಮೂರ್ತಿ ಸಾಥ್‌

Continue Reading

ಪ್ರವಾಸ

Belagavi Tour: ಬೆಳಗಾವಿಗೆ ಭೇಟಿ ನೀಡಿದಾಗ ಈ ಸ್ಥಳಗಳನ್ನು ನೋಡಲು ಮರೆಯಬೇಡಿ

ಕುಂದಾನಗರಿ ಬೆಳಗಾವಿಯಲ್ಲಿ ಅತ್ಯಾಕರ್ಷಕ ಹಲವು ತಾಣಗಳಿದ್ದು, ಪ್ರವಾಸಿಗರು ಇಲ್ಲಿಗೆ ಭೇಟಿ ನೀಡದೇ ಇದ್ದರೆ ಬೆಳಗಾವಿ ಪ್ರವಾಸ (Belagavi Tour) ಅಪೂರ್ಣವಾಗುವುದು. ನೀವು ಬೆಳಗಾವಿಗೆ ಭೇಟಿ ನೀಡಿದಾಗ ಮರೆಯದೆ ಈ ಸ್ಥಳಗಳನ್ನು ನೋಡಿ ಬನ್ನಿ. ಬೆಳಗಾವಿಯ ಪ್ರಮುಖ ಸ್ಥಳಗಳ ಕಿರು ಪರಿಚಯ ಇಲ್ಲಿದೆ.

VISTARANEWS.COM


on

By

Belagavi Tour
Koo

ಜಲಪಾತಗಳಿಂದ (waterfalls) ಹಿಡಿದು ಪ್ರಾಚೀನ ಕೋಟೆಗಳವರೆಗೆ (ancient forts) ಬೆಳಗಾವಿಯಲ್ಲಿ ಪ್ರವಾಸಿಗರು (Belagavi Tour) ಮಿಸ್ ಮಾಡಿಕೊಳ್ಳಲೇಬಾರದ ಒಂಬತ್ತು ಆಕರ್ಷಕ ಪ್ರವಾಸಿ (Tourist place) ತಾಣಗಳಿವೆ.

ರಜೆಯಲ್ಲಿ ಬೆಳಗಾವಿಯತ್ತ ಹೊರಟರೆ ರಮಣೀಯ ಮತ್ತು ಪಾರಂಪರಿಕ ತಾಣಗಳಿಗೆ ಭೇಟಿ ನೀಡಲು ಮರೆಯದಿರಿ.
ಪ್ರವಾಸಿ ತಾಣಗಳಿಗೆ ಹೋಗಿ ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ, ವಿಡಿಯೋಗಳನ್ನು ಹಂಚಿಕೊಂಡು ಎಲ್ಲರ ಮೆಚ್ಚುಗೆ ಪಡೆಯಬೇಕು ಎನ್ನುವ ಯೋಚನೆ ಇದ್ದರೆ ಕೂಡಲೇ ಬ್ಯಾಗ್ ಪ್ಯಾಕ್ ಮಾಡಿ ಬೆಳಗಾವಿಯತ್ತ ಪ್ರವಾಸ ಹೊರಡಲು ತಯಾರಾಗಿ. ಎಲ್ಲರ ಮನ ಸೆಳೆಯುವ ಹಲವಾರು ಸುಪ್ರಸಿದ್ದ ತಾಣಗಳು ಇಲ್ಲಿವೆ.

ಬೆಳಗಾವಿ ಕೋಟೆ

12ನೇ ಶತಮಾನದ ಬೆಳಗಾವಿ ಕೋಟೆ ಮರಗಳಿಂದ ಸುತ್ತುವರಿದಿದ್ದು, ಕಮಾನಿನ ಗೇಟ್‌ವೇಗಳ ಮೂಲಕ ಹೆಜ್ಜೆ ಹಾಕುತ್ತ ಸಾಗುವಾಗ ಎತ್ತರದ ಗೋಡೆಗಳ ಮೇಲೆ ವಿವಿಧ ಆಡಳಿತಗಾರರು ಹೋರಾಡಿದ ಭೀಕರ ಯುದ್ಧಗಳ ಚಿತ್ರಣ ಮನದಲ್ಲಿ ಮೂಡುವುದು. ಸಂಕೀರ್ಣವಾದ ಕೆತ್ತನೆಗಳೊಂದಿಗೆ ಅರಮನೆ, ಮಸೀದಿ ಮತ್ತು ದೇವಾಲಯಗಳ ಕುಸಿಯುತ್ತಿರುವ ಅವಶೇಷಗಳನ್ನು ಕಿರಿದಾದ ಮಾರ್ಗಗಳನ್ನು ಸುತ್ತಾಡುವಾಗ ಫೋಟೋ, ವಿಡಿಯೋ ಮಾಡಲು ಮರೆಯದಿರಿ. ಇಲ್ಲಿಯೇ ಚಿಕ್ಕ ವಸ್ತುಸಂಗ್ರಹಾಲಯಕ್ಕೂ ಭೇಟಿ ನೀಡಿ ಸುಂದರ ನೆನಪುಗಳನ್ನು ಮನದ ಜೋಳಿಗೆಯಲ್ಲಿ ತುಂಬಿಕೊಳ್ಳಿ.

ಬೆಳಗಾವಿ ನಗರದ ಬಹುಭಾಗವನ್ನು ಈ ಕೋಟೆ ಆವರಿಸಿದೆ ಇಲ್ಲಿ ಪ್ರವೇಶಿಸಲು ಯಾವುದೇ ಪ್ರವೇಶ ಶುಲ್ಕಗಳಿಲ್ಲ.


ಕಮಲ್ ಬಸ್ತಿ

ಕೋಟೆಯ ಗೋಡೆಗಳ ಒಳಗಿರುವ ಕಮಲ್ ಬಸ್ತಿ ಜೈನ ದೇವಾಲಯ 12ನೇ ಶತಮಾನದ ಸೊಗಸಾದ ವಾಸ್ತುಶಿಲ್ಪಗಳಲ್ಲಿ ಒಂದಾಗಿದೆ. ಬೆಳಗಾವಿಯ ಕಿರೀಟದಲ್ಲಿ ವೈಭವದಿಂದ ಮಿನುಗುತ್ತಿರುವ ಈ ಪ್ರತಿಷ್ಠಿತ ದೇವಾಲಯದಲ್ಲಿ ಪ್ರಾಚೀನ ಕಥೆಗಳು ಅನುರಣಿಸುತ್ತಿರುವಂತೆ ಭಾಸವಾಗುವುದು. ಬಹು-ಪದರದ ಅಲಂಕೃತ ಛಾವಣಿಗಳು, ಕಲ್ಲಿನ ಸ್ತಂಭಗಳನ್ನು ಒಳಗೊಂಡಿರುವ ಪೌರಾಣಿಕ ವ್ಯಕ್ತಿಗಳನ್ನು ಇಲ್ಲಿ ಕಾಣಬಹುದು.

ಇಲ್ಲಿ 40 ಸಮಾನ ಅಂತರದಲ್ಲಿ ಕೆತ್ತಿದ ಕಂಬಗಳು, ಗುಮ್ಮಟಗಳು ಆಕರ್ಷಣೀಯವಾಗಿದೆ. ರಟ್ಟ ರಾಜವಂಶದ ಕುಶಲಕರ್ಮಿಗಳು ಇದನ್ನು ನಿರ್ಮಿಸಿದ್ದಾರೆ. ಇಲ್ಲಿಗೆ ಪ್ರವೇಶಿಸಲು ಯಾವುದೇ ಪ್ರವೇಶ ಶುಲ್ಕಗಳಿಲ್ಲ.


ಗೋಕಾಕ್ ಜಲಪಾತ

ಹಸಿರು ಕಾಡುಗಳ ನಡುವೆ ಸುಮಾರು 157 ಮೀಟರ್‌ ಎತ್ತರದಿಂದ ಧುಮುಕುವ ಗೋಕಾಕ್ ಜಲಪಾತ ಬೃಹತ್ ಪ್ರಮಾಣದ ಜಲರಾಶಿಯನ್ನು ಹೊಂದಿದೆ. ನದಿಯಲ್ಲಿ ದೋಣಿ ಸವಾರಿ ಮಾಡಿ ತಂಗಾಳಿಯಲ್ಲಿ ಆನಂದಿಸಬಹದು. ಮಳೆ, ಚಳಿಗಾಲದಲ್ಲಿ ಇಲ್ಲಿಗೆ ಭೇಟಿ ನೀಡಲು ಉತ್ತಮ ಸಮಯ. ಟ್ರೆಕ್ಕಿಂಗ್ ಮಾಡಲು ಅವಕಾಶವಿದೆ. ಯಾವುದೇ ಶುಲ್ಕವಿಲ್ಲ.


ಕಿತ್ತೂರು ಕೋಟೆ

16 ನೇ ಶತಮಾನದಲ್ಲಿ ನಿರ್ಮಿಸಲಾದ ಭವ್ಯವಾದ ಕಿತ್ತೂರು ಕೋಟೆಯ ಅವಶೇಷಗಳನ್ನು ಇಲ್ಲಿ ಕಾಣಬಹುದು. ಹಳ್ಳಿಗಾಡಿನ ದೋಣಿಗಳ ಮೇಲೆ ಸೊಂಪಾದ ಕಾಡುಗಳಿಂದ ರಚಿಸಲಾದ ಶಾಂತವಾದ ಸರೋವರದ ನೀರಿನಲ್ಲಿ ಪೆಡಲ್ ಮಾಡಿ ಹಳೆಯ ಅರಮನೆಯ ಹಾದಿಗಳಲ್ಲಿ ಸುತ್ತಾಡಿ, ಸ್ವಾತಂತ್ರ್ಯ ಹೋರಾಟಗಾರ್ತಿ ರಾಣಿ ಚನ್ನಮ್ಮ ನನ್ನು ನೆನಪಿಸಿಕೊಳ್ಳಬಹುದು. ಚೆನ್ನಮ್ಮ ತನ್ನ ಅಂತಿಮ ದಿನಗಳನ್ನು ಕಳೆದ ಜೈಲು ಕೊಠಡಿಯ ಒಂದು ನೋಟ ಅಥವಾ 1967 ರಲ್ಲಿ ನಿರ್ಮಿಸಲಾದ ಕಿತ್ತೂರಿನ ಸರೋವರದ ಇತಿಹಾವನ್ನು ಇಲ್ಲಿ ಕಾಣಬಹುದು.

ಪ್ರಾದೇಶಿಕ ಆಡಳಿತಗಾರರಾದ ದೇಸಾಯಿ ಕುಟುಂಬ ಇದನ್ನು ನಿರ್ಮಿಸಿದ್ದು, ಇಲ್ಲಿ ಅರಮನೆ, ಮ್ಯೂಸಿಯಂ, ದೇವಸ್ಥಾನ, ಸರೋವರವನ್ನು ವೀಕ್ಷಿಸಬಹುದು. ಕನಿಷ್ಠ ಪ್ರವೇಶ ಶುಲ್ಕವಿದೆ.

ಶಿವಗಿರಿ ಬೆಟ್ಟ

ಒಂದು ಬದಿಯಲ್ಲಿ ಪಶ್ಚಿಮ ಘಟ್ಟದ ಇಳಿಜಾರು ಮತ್ತು ಇನ್ನೊಂದೆಡೆ ಹತ್ತಿ ಉಣ್ಣೆಯ ಮೋಡಗಳು ತೇಲುತ್ತಿರುವ ವಿಸ್ತಾರವಾದ ಬೆಳಗಾವಿ ನಗರವನ್ನು ನೋಡುವಾಗ ಉಸಿರು ಬಿಗಿ ಹಿಡಿದ ಅನುಭವ. ಹಸಿರು ಶಿವಗಿರಿ ಗಿರಿಧಾಮದ ಮೇಲಿನ ವೈಮಾನಿಕ ನೋಟವು ಪ್ರವಾಸಿಗರನ್ನು ವಿಸ್ಮಯಗೊಳಿಸುವುದು. ಜಾಂಬೋಟಿ ಜಲಪಾತ, ಉದ್ಯಾನಗಳು ಇಲ್ಲಿನ ಆಕರ್ಷಣೆ. ಖಾಸಗಿ ಟ್ಯಾಕ್ಸಿ ಮೂಲಕ ಬೆಳಗಾವಿಯಿಂದ 30 ಕಿ.ಮೀ. ದೂರದಲ್ಲಿರುವ ಶಿವಗಿರಿ ಬೆಟ್ಟ ತಲುಪಲು ಯಾವುದೇ ಪ್ರವೇಶ ಶುಲ್ಕಗಳಿಲ್ಲ. ಇಲ್ಲಿ ಸುಂದರವಾದ ಸೂರ್ಯಾಸ್ತದ ದೃಶ್ಯಗಳನ್ನು ಕಣ್ತುಂಬಿಕೊಳ್ಳಿ.

ಸಿದ್ಧೇಶ್ವರ ದೇವಸ್ಥಾನ

12 ನೇ ಶತಮಾನದ ಕಲ್ಲಿನ ಕೆತ್ತನೆಯ ಐತಿಹಾಸಿಕ ಸಿದ್ಧೇಶ್ವರ ದೇವಾಲಯ ಶಿವನಿಗೆ ಸಮರ್ಪಿತವಾಗಿದೆ. ಶ್ರೀಗಂಧದ ಕಮಾನುಗಳು ಪೂಜ್ಯ ಲಿಂಗವನ್ನು ಹೊಂದಿರುವ ಒಳಗಿನ ಗರ್ಭಗುಡಿಯೊಳಗೆ ಸಂಜೆಯ ಆರತಿಗೆ ಹಾಜರಾಗಿ. ದೇವಾಲಯದ ಶಬ್ದಗಳು ಮತ್ತು ಪ್ರಜ್ವಲಿಸುವ ದೀಪಗಳು ಮನಸ್ಸಿಗೆ ಶಾಂತಿ ತುಂಬುವುದು. ಕಪ್ಪು ಕಲ್ಲಿನ ನೆಲದ ಮೇಲೆ ಕುಳಿತು ಧ್ಯಾನ ಮಾಡುವಾಗ ದೇಹದೊಳಗೆ ಶಕ್ತಿ ಸಂಚಾರವಾದ ಅನುಭವ ಕೊಡುವುದು.
ರಟ್ಟ ರಾಜವಂಶದ ದೊರೆ ಸಿದ್ಧರಸ ನಿರ್ಮಿಸಿರುವ ಈ ದೇವಾಲಯ ನಗರ ಕೇಂದ್ರದಿಂದ 5 ಕಿ.ಮೀ. ದೂರದಲ್ಲಿದೆ.

ರೇಷ್ಮೆ ಸೀರೆ ಖರೀದಿಸಿ

ಕಾರ್ಪೊರೇಷನ್ ವೃತ್ತದ ಬಳಿಯಿರುವ ಅಂಗಡಿಗಳಾದ್ಯಂತ ಸಾಂಪ್ರದಾಯಿಕ ನೇಯ್ಗೆ, ಮುದ್ರಣಗಳು ಮತ್ತು ಕರಕುಶಲತೆಯನ್ನು ಕಾಣಬಹುದು. ಕೈಗೆಟುಕುವ ದರದಲ್ಲಿ ರೇಷ್ಮೆ ಸೀರೆಗಳನ್ನು ಖರೀದಿ ಮಾಡಬಹುದು. ಇಲ್ಲಿ ಚಂದೇರಿ ರೇಷ್ಮೆ ಸೀರೆಗಳು, ಕೈಮಗ್ಗದ ಕಾಟನ್ ಕುರ್ತಿಗಳು ಖರೀದಿ ಮಾಡಲು ಮರೆಯದಿರಿ.

ಇದನ್ನೂ ಓದಿ: South Indian Monsoon Destinations: ದಕ್ಷಿಣ ಭಾರತದ ಈ 6 ಸ್ಥಳಗಳಲ್ಲಿ ಮಳೆಗಾಲದಲ್ಲಿ ಚಾರಣ ಮಾಡಲೇಬೇಕು!


ಮಿಲಿಟರಿ ಮಹಾದೇವ ದೇವಸ್ಥಾನ

ಶಿವನಿಗೆ ಸಮರ್ಪಿತವಾಗಿರುವ ಇನ್ನೊಂದು ದೇಗುಲ ಮಿಲಿಟರಿ ಮಹಾದೇವ ದೇವಾಲಯ. ಕಲ್ಲಿನ ಮಾರ್ಗದಲ್ಲಿ ದೇವಾಲಯವನ್ನು ತಲುಪಬೇಕಾದರೆ ಅರ್ಧ ದಿನವನ್ನು ಟ್ರೆಕ್ಕಿಂಗ್ ನಲ್ಲಿ ಕಳೆಯಬೇಕು. ಮರಾಠ ದೊರೆ ಸಾರ್ಜೆಂಟ್ ಧೂಳಪ್ಪ ಇದನ್ನು ನಿರ್ಮಿಸಿದ್ದು, ಮುಂಜಾನೆ ಮತ್ತು ಸಂಜೆ ವೇಳೆ ಇಲ್ಲಿಗೆ ಭೇಟಿ ನೀಡಲು ಸೂಕ್ತ ಸಮಯವಾಗಿದೆ.

Continue Reading

ಕರ್ನಾಟಕ

KSET Results 2024:‌ ಕೆ-ಸೆಟ್‌ ಪರೀಕ್ಷೆ ಫಲಿತಾಂಶ; ಅಂಕಪಟ್ಟಿ ಡೌನ್‌ಲೋಡ್‌ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಮಾಹಿತಿ

KSET Results 2024: ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ ರಾಜ್ಯಾದ್ಯಂತ ಒಟ್ಟು 1,17,703 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ರಾಜ್ಯದ 7 ಕೇಂದ್ರಗಳಲ್ಲಿ ಜನವರಿ 13ರಂದು ನಡೆದ ಪರೀಕ್ಷೆಗೆ 95,201 ಜನ ಹಾಜರಾಗಿದ್ದರು. ಆದರೆ, ಪರೀಕ್ಷೆಯಲ್ಲಿ 3,398 ಪುರುಷರು ಹಾಗೂ 3,180 ಮಹಿಳೆಯರು ಸೇರಿ ಒಟ್ಟು 6,675 ತೇರ್ಗಡೆ ಹೊಂದಿದ್ದಾರೆ. ಫಲಿತಾಂಶ ವೀಕ್ಷಣೆ ಹೇಗೆ ಎಂಬುದು ಸೇರಿ ವಿವಿಧ ಮಾಹಿತಿ ಇಲ್ಲಿದೆ.

VISTARANEWS.COM


on

KSET Results 2024
Koo

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯ (KSET Results 2024) ಫಲಿತಾಂಶ ಪ್ರಕಟಿಸಿದೆ. ಕಳೆದ ಜನವರಿ 13ರಂದು ಕಲಾ, ವಿಜ್ಞಾನ ಮತ್ತು ವಾಣಿಜ್ಯ ವಿಭಾಗದ ಒಟ್ಟು 41 ವಿಷಯಗಳಿಗೆ ನಡೆದ ಪರೀಕ್ಷೆಯಲ್ಲಿ ಒಟ್ಟು 6,675 ಅಭ್ಯರ್ಥಿಗಳು ತೇರ್ಗಡೆ ಹೊಂದಿದ್ದು, ಅವರೆಲ್ಲರ ನೋಂದಣಿ ಸಂಖ್ಯೆ, ಅಂಕಪಟ್ಟಿಯನ್ನು ಕೆಇಎ ವೆಬ್‌ಸೈಟ್‌ನಲ್ಲಿ (KEA Website) ಪ್ರಕಟಿಸಲಾಗಿದೆ. ಇನ್ನು, ಫಲಿತಾಂಶ ಪರಿಶೀಲಿಸುವುದು ಹೇಗೆ? ಅಂಕಪಟ್ಟಿಯನ್ನು ಡೌನ್‌ಲೋಡ್‌ ಮಾಡಿಕೊಳ್ಳುವುದು ಹೇಗೆ ಎಂಬುದರ ಮಾಹಿತಿ ಇಲ್ಲಿದೆ.

ಫಲಿತಾಂಶವನ್ನು ಹೀಗೆ ಚೆಕ್‌ ಮಾಡಿ

  1. ಮೊದಲು ಕೆಇಎ ಅಧಿಕೃತ ವೆಬ್‌ಸೈಟ್‌ ಆಗಿರುವ https://cetonline.karnataka.gov.in/KEA ಗೆ ಭೇಟಿ ನೀಡಿ
  2. ಮುಖಪುಟದಲ್ಲಿ ಕಾಣಿಸುವ KSET ಫಲಿತಾಂಶ ಎಂಬ ಆಯ್ಕೆ ಮೇಲೆ ಕ್ಲಿಕ್‌ ಮಾಡಿ
  3. ಕೆ-ಸೆಟ್‌ ನೋಂದಣಿ ಸಂಖ್ಯೆ ಹಾಗೂ ಜನ್ಮದಿನಾಂಕವನ್ನು ನಮೂದಿಸಿ
  4. ಕೆ-ಸೆಟ್ ಫಲಿತಾಂಶವನ್ನು ಪರದೆ ಮೇಲೆ ಪ್ರದರ್ಶಿಸಲಾಗುತ್ತದೆ
  5. ಕೊನೆಯ ಹಂತದಲ್ಲಿ ಫಲಿತಾಂಶವನ್ನು ವೀಕ್ಷಿಸುವ ಜತೆಗೆ ಡೌನ್‌ಲೋಡ್‌, ಪ್ರಿಂಟೌಟ್‌ ತೆಗೆದುಕೊಳ್ಳಬಹುದು

1,17,703 ಅಭ್ಯರ್ಥಿಗಳ ನೋಂದಣಿ

ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ ರಾಜ್ಯಾದ್ಯಂತ ಒಟ್ಟು 1,17,703 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ರಾಜ್ಯದ 7 ಕೇಂದ್ರಗಳಲ್ಲಿ ಜನವರಿ 13ರಂದು ನಡೆದ ಪರೀಕ್ಷೆಗೆ 95,201 ಜನ ಹಾಜರಾಗಿದ್ದರು. ಆದರೆ, ಪರೀಕ್ಷೆಯಲ್ಲಿ 3,398 ಪುರುಷರು ಹಾಗೂ 3,180 ಮಹಿಳೆಯರು ಸೇರಿ ಒಟ್ಟು 6,675 ತೇರ್ಗಡೆ ಹೊಂದಿದ್ದಾರೆ. ಇವರಲ್ಲಿ 97 ತೃತೀಯ ಲಿಂಗಿಗಳು ಹಾಗೂ 350 ಅಭ್ಯರ್ಥಿಗಳು ವಿಶೇಷ ಚೇತನರಾಗಿದ್ದಾರೆ ಎಂಬುದಾಗಿ ಕೆಇಎ ತಿಳಿಸಿದೆ.

ಎಷ್ಟು ಅಂಕ ಪಡೆದರೆ ತೇರ್ಗಡೆ?

ಸಾಮಾನ್ಯ ವರ್ಗದ ಅಭ್ಯರ್ಥಿಗಳು ಪೇಪರ್‌ 1 ಹಾಗೂ 2 ಸೇರಿ ಒಟ್ಟು 200 ಅಂಕಗಳಲ್ಲಿ ಶೇ.40ರಷ್ಟು ಅಂಕ ಪಡೆಯಬೇಕು. Cat-I, IIA, IIB, IIIA, IIIB, ಎಸ್‌ಸಿ, ಎಸ್‌ಟಿ, ವಿಶೇಷ ಚೇತನರು ಎರಡೂ ಪರೀಕ್ಷೆಗಳ ಒಟ್ಟು 200 ಅಂಕಗಳ ಪೈಕಿ ಶೇ.35ರಷ್ಟು ಅಂಕಗಳನ್ನು ಪಡೆಯಬೇಕು. ಆಗ ಅವರು ಕೆ-ಸೆಟ್‌ನಲ್ಲಿ ತೇರ್ಗಡೆ ಹೊಂದಿದಂತಾಗುತ್ತದೆ.

ಇದನ್ನೂ ಓದಿ: COMEDK UGET Result 2024: ಕಾಮೆಡ್‌ ಕೆ ಫಲಿತಾಂಶ ಪ್ರಕಟ; ಬೆಂಗಳೂರಿನ ಬಾಲಸತ್ಯ ಸರವಣನ್ ಫಸ್ಟ್‌ ರ‍್ಯಾಂಕ್‌

Continue Reading

ಬಳ್ಳಾರಿ

MLC Election: ಈಶಾನ್ಯ ಪದವೀಧರರ ಕ್ಷೇತ್ರ ಚುನಾವಣೆ; ಬಳ್ಳಾರಿ ಜಿಲ್ಲೆಯಲ್ಲಿ 24,183 ಪದವೀಧರ ಮತದಾರರು

MLC Election: ವಿಧಾನಪರಿಷತ್‌ನ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ಸಂಬಂಧ ಅಂತಿಮ ಮತದಾರರ ಪಟ್ಟಿ ಅನ್ವಯ ಬಳ್ಳಾರಿ ಜಿಲ್ಲೆಯಲ್ಲಿ ಒಟ್ಟು 24,183 ಪದವೀಧರ ಮತದಾರರಿದ್ದಾರೆ ಎಂದು ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ತಿಳಿಸಿದ್ದಾರೆ. 91-ಕಂಪ್ಲಿ, 92-ಸಿರುಗುಪ್ಪ, 93-ಬಳ್ಳಾರಿ ಗ್ರಾಮೀಣ, 94-ಬಳ್ಳಾರಿ ನಗರ, 95-ಸಂಡೂರು ವಿಧಾನಸಭಾ ಕ್ಷೇತ್ರ ಒಳಗೊಂಡಂತೆ 14,981 ಪುರುಷರು, 9,198 ಮಹಿಳೆಯರು ಮತ್ತು 4 ಜನ ಇತರೆ ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 24,183 ಪದವೀಧರ ಮತದಾರರಿದ್ದಾರೆ.

VISTARANEWS.COM


on

MLC Election North East Graduate Constituency Election 2024 total 24 183 graduate voters in the district
Koo

ಬಳ್ಳಾರಿ: ವಿಧಾನಪರಿಷತ್‌ನ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಗೆ (MLC Election) ಸಂಬಂಧ ಅಂತಿಮ ಮತದಾರರ ಪಟ್ಟಿ ಅನ್ವಯ ಬಳ್ಳಾರಿ ಜಿಲ್ಲೆಯಲ್ಲಿ ಒಟ್ಟು 24,183 ಪದವೀಧರ ಮತದಾರರಿದ್ದಾರೆ ಎಂದು ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ತಿಳಿಸಿದ್ದಾರೆ.

ಕ್ಷೇತ್ರವಾರು ಮತದಾರರ ವಿವರ

91-ಕಂಪ್ಲಿ, 92-ಸಿರುಗುಪ್ಪ, 93-ಬಳ್ಳಾರಿ ಗ್ರಾಮೀಣ, 94-ಬಳ್ಳಾರಿ ನಗರ, 95-ಸಂಡೂರು ವಿಧಾನಸಭಾ ಕ್ಷೇತ್ರ ಒಳಗೊಂಡಂತೆ 14,981 ಪುರುಷರು, 9,198 ಮಹಿಳೆಯರು ಮತ್ತು 4 ಜನ ಇತರೆ ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 24,183 ಪದವೀಧರ ಮತದಾರರಿದ್ದಾರೆ.

ಇದನ್ನೂ ಓದಿ: Delhi Temperature: ದೆಹಲಿಯಲ್ಲಿ 52 ಡಿಗ್ರಿ ಸೆಲ್ಸಿಯಸ್‌ ತಾಪಮಾನ; ದೇಶದಲ್ಲೇ ಇದುವರೆಗಿನ ಗರಿಷ್ಠ ಟೆಂಪರೇಚರ್!

ಕಂಪ್ಲಿ ಕ್ಷೇತ್ರದಲ್ಲಿ 2,568 ಪುರುಷರು, 1,170 ಮಹಿಳೆಯರು ಸೇರಿ ಒಟ್ಟು 3,738 ಪದವೀಧರ ಮತದಾರರು. ಸಿರುಗುಪ್ಪ ಕ್ಷೇತ್ರದಲ್ಲಿ 2,522 ಪುರುಷರು, 921 ಮಹಿಳೆಯರು ಸೇರಿ ಒಟ್ಟು 3,443 ಪದವೀಧರ ಮತದಾರರು. ಬಳ್ಳಾರಿ ಗ್ರಾಮೀಣ ಕ್ಷೇತ್ರದಲ್ಲಿ 3,098 ಪುರುಷರು, 2,030 ಮಹಿಳೆಯರು ಮತ್ತು 01 ಇತರೆ ಸೇರಿ ಒಟ್ಟು 5,129 ಪದವೀಧರ ಮತದಾರರಿದ್ದಾರೆ.

ಬಳ್ಳಾರಿ ನಗರ ಕ್ಷೇತ್ರದಲ್ಲಿ 4,552 ಪುರುಷರು, 3,681 ಮಹಿಳೆಯರು ಮತ್ತು 02 ಇತರೆ ಸೇರಿ ಒಟ್ಟು 8,235 ಪದವೀಧರ ಮತದಾರರು. ಸಂಡೂರು ಕ್ಷೇತ್ರದಲ್ಲಿ 2,241 ಪುರುಷರು, 1,396 ಮಹಿಳೆಯರು ಮತ್ತು 01 ಇತರೆ ಸೇರಿ ಒಟ್ಟು 3,638 ಪದವೀಧರ ಮತದಾರರಿದ್ದಾರೆ.

24 ಮತಗಟ್ಟೆ ಕೇಂದ್ರಗಳು

ಈಶಾನ್ಯ ಪದವೀಧರ ಕ್ಷೇತ್ರ ಚುನಾವಣೆ ಸಂಬಂಧಿಸಿದಂತೆ, ಜಿಲ್ಲೆಯಲ್ಲಿ ಒಟ್ಟು 24 ಮತಗಟ್ಟೆ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.

ಕಂಪ್ಲಿ ಕ್ಷೇತ್ರ
ಕಂಪ್ಲಿ ಕ್ಷೇತ್ರ ವ್ಯಾಪ್ತಿಯಲ್ಲಿ ಕಂಪ್ಲಿ ಪಟ್ಟಣದ ಪುರಸಭೆ ಕಚೇರಿಯಲ್ಲಿ 02 ಮತಗಟ್ಟೆ ಕೇಂದ್ರಗಳು, ಕುರುಗೋಡು ಪಟ್ಟಣದ ಅಂಗನವಾಡಿ ಕೇಂದ್ರ ಮತ್ತು ಕೋಳೂರು ಗ್ರಾಮದ ಗ್ರಾಮ ಪಂಚಾಯಿತಿ ಕಚೇರಿ ಸೇರಿ ಒಟ್ಟು 04 ಮತಗಟ್ಟೆ ಕೇಂದ್ರಗಳು.

ಸಿರುಗುಪ್ಪ ಕ್ಷೇತ್ರ
ಸಿರುಗುಪ್ಪ ಕ್ಷೇತ್ರ ವ್ಯಾಪ್ತಿಯಲ್ಲಿ ಹಚ್ಚೋಳ್ಳಿ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆ, ಸಿರುಗುಪ್ಪ ಪಟ್ಟಣದ ಸರ್ಕಾರಿ ಪ್ರೌಢಶಾಲೆ, ತೆಕ್ಕಲಕೋಟೆಯ ಸರ್ಕಾರಿ ಪದವಿಪೂರ್ವ ಕಾಲೇಜು ಮತ್ತು ಕರೂರು ಗ್ರಾಮದ ಸರ್ಕಾರಿ ಪ್ರೌಢಶಾಲೆ ಸೇರಿ 04 ಮತಗಟ್ಟೆ ಕೇಂದ್ರಗಳು.

ಬಳ್ಳಾರಿ ಗ್ರಾಮೀಣ ಕ್ಷೇತ್ರ
ಬಳ್ಳಾರಿ ಗ್ರಾಮೀಣ ಕ್ಷೇತ್ರ ವ್ಯಾಪ್ತಿಯಲ್ಲಿ ಮೋಕಾದ ಗ್ರಾಮ ಪಂಚಾಯಿತಿ ಕಚೇರಿ, ಬಳ್ಳಾರಿಯ ಕೌಲ್‍ಬಜಾರ್‌ನ ಸೆಂಟ್ ಜೋಸೆಫ್ ಪ್ರೌಢಶಾಲೆಯ 4ನೇ ತರಗತಿ ಕೊಠಡಿ, 5 ನೇ ತರಗತಿ ಕೊಠಡಿ ಹಾಗೂ 6ನೇ ತರಗತಿ ಕೊಠಡಿ ಮತ್ತು ರೂಪನಗುಡಿ ಗ್ರಾಮ ಪಂಚಾಯಿತಿ ಕಚೇರಿ ಸೇರಿ 05 ಮತಗಟ್ಟೆ ಕೇಂದ್ರಗಳು.

ಬಳ್ಳಾರಿ ನಗರ ಕ್ಷೇತ್ರ
ಬಳ್ಳಾರಿ ನಗರ ಕ್ಷೇತ್ರದಲ್ಲಿ ಬಳ್ಳಾರಿ ನಗರದ ಅಂಬಲಿಬಾಗ್‍ನ ಅಂಚೆ ಕಚೇರಿ ಹತ್ತಿರದ ಸರ್ಕಾರಿ ಬಾಲಕೀಯರ ಕಾಲೇಜಿನ ಕೊಠಡಿ ಸಂಖ್ಯೆ 42, ಕೊಠಡಿ ಸಂಖ್ಯೆ 43, ಕೊಠಡಿ ಸಂಖ್ಯೆ 44, ಎಸ್.ಎನ್.ಪೇಟೆ ಮುಖ್ಯ ರಸ್ತೆಯ ಎಸ್‍ಎಸ್‍ಎ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕೊಠಡಿ ಸಂಖ್ಯೆ 01, ಕೊಠಡಿ ಸಂಖ್ಯೆ 02, ಗಾಂಧಿನಗರದ ಬಾಲಭಾರತಿ ಇಂಗ್ಲೀಷ್ ಮಾಧ್ಯಮ ಶಾಲೆಯ ಕೊಠಡಿ ಸಂಖ್ಯೆ 01, ಕೊಠಡಿ ಸಂಖ್ಯೆ 02 ಸೇರಿ ಒಟ್ಟು 07 ಮತಗಟ್ಟೆ ಕೇಂದ್ರಗಳು.

ಸಂಡೂರು ಕ್ಷೇತ್ರ
ಸಂಡೂರು ಕ್ಷೇತ್ರ ವ್ಯಾಪ್ತಿಯಲ್ಲಿ ತೋರಣಗಲ್ಲು ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಕೊಠಡಿ ಸಂಖ್ಯೆ 01, ಕೊಠಡಿ ಸಂಖ್ಯೆ 02, ಸಂಡೂರು ಪಟ್ಟಣದ ತಾಲ್ಲೂಕು ಕಚೇರಿ ಮತ್ತು ಚೋರನೂರು ಹೋಬಳಿಯ ನಾಡಕಚೇರಿ ಕಾರ್ಯಾಲಯ ಸೇರಿ ಒಟ್ಟು 04 ಮತಗಟ್ಟೆ ಕೇಂದ್ರಗಳು.‌

ಇದನ್ನೂ ಓದಿ:Tamarind Fruit Benefits: ಜೀರ್ಣಶಕ್ತಿ ಹೆಚ್ಚಿಸಿ ತೂಕ ಇಳಿಸಲು ಹುಣಸೇ ಹಣ್ಣು ಸುಲಭದ ಉಪಾಯ!

ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರ ಚುನಾವಣೆಗೆ ಜೂನ್ 03 ರಂದು ಮತದಾನ ನಡೆಯಲಿದ್ದು, ಈಗಾಗಲೇ ನೋಂದಾಯಿಸಿಕೊಂಡಿರುವ ಎಲ್ಲಾ ಅರ್ಹ ಮತದಾರರು ಅಂದು ತಪ್ಪದೇ ಮತಗಟ್ಟೆ ಕೇಂದ್ರಗಳಿಗೆ ತೆರಳಿ ಮತದಾನ ಮಾಡಬೇಕು ಎಂದು ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading
Advertisement
PM Kisan Samman
ಕೃಷಿ17 mins ago

PM Kisan Samman: ಪಿಎಂ ಕಿಸಾನ್ ಸಮ್ಮಾನ್ 17ನೇ ಕಂತಿನ ಹಣ ಬಿಡುಗಡೆ ಯಾವಾಗ? ಪರಿಶೀಲಿಸುವುದು ಹೇಗೆ?

Nita Ambani
ವಾಣಿಜ್ಯ22 mins ago

Nita Ambani: ನೀತಾ ಅಂಬಾನಿ ಕುಡಿಯುವ ನೀರಿನ ಬಾಟಲಿಯ ಬೆಲೆ 49 ಲಕ್ಷ ರೂಪಾಯಿ!

Team India Coach
ಕ್ರೀಡೆ30 mins ago

Team India Coach: ಅಭಿಮಾನಿಗಳು ಬಯಸಿದರೂ ಕೋಚ್​ ಹುದ್ದೆಗೆ ಧೋನಿ ಅನರ್ಹ; ಕಾರಣವೇನು?

Sudha Murty
ಕರ್ನಾಟಕ34 mins ago

Sudha Murty: ಡಾ.ಮಂಜುನಾಥ್‌ ಗೆಲುವಿಗಾಗಿ ರಾಯರಿಗೆ ವಿಶೇಷ ಹರಕೆ ಹೊತ್ತ ಸುಧಾಮೂರ್ತಿ; ಏನದು?

Headless Chicken
ವಿಜ್ಞಾನ45 mins ago

Headless Chicken: ತಲೆ ಕತ್ತರಿಸಿದರೂ ಈ ಕೋಳಿ 18 ತಿಂಗಳು ಬದುಕಿತ್ತು! ಸಾಯುವ ಮೊದಲು ಮಾಲೀಕನನ್ನು ಶ್ರೀಮಂತಗೊಳಿಸಿತು!

Monsoon 2024
ದೇಶ1 hour ago

Monsoon 2024: ಮುಂದಿನ 24 ಗಂಟೆಗಳಲ್ಲೇ ಮುಂಗಾರು ಪ್ರವೇಶ; ಕರ್ನಾಟಕ ಸೇರಿ ಎಲ್ಲೆಲ್ಲಿ ಮಳೆ?

Belagavi Tour
ಪ್ರವಾಸ2 hours ago

Belagavi Tour: ಬೆಳಗಾವಿಗೆ ಭೇಟಿ ನೀಡಿದಾಗ ಈ ಸ್ಥಳಗಳನ್ನು ನೋಡಲು ಮರೆಯಬೇಡಿ

AUS vs NAM
ಕ್ರೀಡೆ2 hours ago

AUS vs NAM: ನಮೀಬಿಯಾ ವಿರುದ್ಧ ಅಭ್ಯಾಸ ಪಂದ್ಯವಾಡಿದ ಆಸೀಸ್​ ತಂಡದ ಕೋಚಿಂಗ್​ ಸಿಬ್ಬಂದಿ

Dream Of Retired Couple
ಪ್ರವಾಸ2 hours ago

Dream Of Retired Couple: ನಿರಂತರ ಮೂರೂವರೆ ವರ್ಷಗಳ ನೌಕಾಯಾನಕ್ಕಾಗಿ ತಮ್ಮದೆಲ್ಲವನ್ನೂ ಮಾರಿದ ದಂಪತಿ!

KSET Results 2024
ಕರ್ನಾಟಕ2 hours ago

KSET Results 2024:‌ ಕೆ-ಸೆಟ್‌ ಪರೀಕ್ಷೆ ಫಲಿತಾಂಶ; ಅಂಕಪಟ್ಟಿ ಡೌನ್‌ಲೋಡ್‌ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಮಾಹಿತಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ1 day ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 day ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ2 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ3 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು3 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ7 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಟ್ರೆಂಡಿಂಗ್‌