Vistara Fact Check regarding statement on chief minister post in NDTV interviewವಿಸ್ತಾರ Fact Check: ಡಿ.ಕೆ. ಶಿವಕುಮಾರ್‌ ಸಿಎಂ ಆಗುವುದಿಲ್ಲ ಎಂದರೇ ಸಿದ್ದರಾಮಯ್ಯ? NDTV ಸಂದರ್ಶನದಲ್ಲಿ ಹೇಳಿದ್ದೇನು? ಇಲ್ಲಿದೆ ಸತ್ಯ - Vistara News

ಕರ್ನಾಟಕ

ವಿಸ್ತಾರ Fact Check: ಡಿ.ಕೆ. ಶಿವಕುಮಾರ್‌ ಸಿಎಂ ಆಗುವುದಿಲ್ಲ ಎಂದರೇ ಸಿದ್ದರಾಮಯ್ಯ? NDTV ಸಂದರ್ಶನದಲ್ಲಿ ಹೇಳಿದ್ದೇನು? ಇಲ್ಲಿದೆ ಸತ್ಯ

ಡಿ.ಕೆ. ಶಿವಕುಮಾರ್‌ ಅವರನ್ನು ಮುಖ್ಯಮಂತ್ರಿ ಮಾಡಲು ಹೈಕಮಾಂಡ್‌ ಒಪ್ಪುವುದಿಲ್ಲ ಎಂದು ಹೇಳಿದ್ದಾಗಿ ಎನ್‌ಡಿಟಿವಿ ವರದಿ ಮಾಡಿತ್ತು. ಈ ಕುರಿತ ಫ್ಯಾಕ್ಟ್‌ ಚೆಕ್‌ ಇಲ್ಲಿದೆ.

VISTARANEWS.COM


on

Vistara Fact Check regarding statement on chief minister post in NDTV interview
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ಕಾಂಗ್ರೆಸ್‌ನಲ್ಲಿ ಸಿಎಂ ಸ್ಥಾನಕ್ಕಾಗಿ ಪೈಪೋಟಿ ನಡೆಯುತ್ತಿದ್ದು, ಮುಖ್ಯವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ನಡುವೆ ಹಗ್ಗಜಗ್ಗಾಟ ನಡೆಯುತ್ತಿರುವುದು ಬಹಿರಂಗ ಸತ್ಯ. ಇದನ್ನು ಸ್ವತಃ ಇಬ್ಬರು ನಾಯಕರೂ ಒಪ್ಪಿಕೊಂಡಿದ್ದಾರೆ. ಆದರೆ, “ಡಿ.ಕೆ. ಶಿವಕುಮಾರ್‌ ಅವರನ್ನು ಸಿಎಂ ಮಾಡಲು ಹೈಕಮಾಂಡ್‌ ಒಪ್ಪುವುದಿಲ್ಲ” ಎಂದು ಹೇಳಿರುವುದಾಗಿ ಎನ್‌ಡಿಟಿವಿ ವರದಿ ಮಾಡಿರುವುದು ಇದೀಗ ಕಾಂಗ್ರೆಸ್‌ನಲ್ಲಿ ಬಿರುಗಾಳಿ ಸೃಷ್ಟಿಸಿದೆ.

ಈ ಬಾರಿಯ ವಿಧಾನಸಭೆ ಚುನಾವಣೆ ಆರಂಭವಾದಾಗಿನಿಂದಲೂ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್‌ ಸಿಎಂ ಗಾದಿಗೆ ಪೈಪೋಟಿ ನಡೆಸಿದ್ದಾರೆ. ಇದು ಹೀಗೆಯೇ ಮುಂದುವರಿದರೆ ಒಬ್ಬರಿಗೊಬ್ಬರು ಕಿತ್ತಾಡಿಕೊಂಡು ಮತ್ತೆ ಬಿಜೆಪಿಯೇ ಬಂದುಬಿಡುತ್ತದೆ ಎಂದು ಹೈಕಮಾಂಡ್‌ ಹುಷಾರಾಗಿತ್ತು. ಇಬ್ಬರನ್ನು ದೆಹಲಿಗೆ ಕರೆಸಿದ್ದ ರಾಹುಲ್‌ ಗಾಂಧಿ ಮೂರು ದಿನ ಸಮಾಲೋಚನೆ ನಡೆಸಿದ್ದರು.

ಮೊದಲು ಸರಳ ಬಹುಮತ ಗಳಿಸೋಕೆ ಎಲ್ಲರೂ ಕೆಲಸ ಮಾಡಿ. ಆಮೇಲೆ ಶಾಸಕಾಂಗ ಪಕ್ಷದ ಸಭೆಯಲ್ಲಿ ತೀರ್ಮಾನ ಮಾಡಿದರಾಯಿತು ಎಂದು ಸಂಧಾನ ಮಾಡಿದ್ದರು. ಅದರಂತೆ ಇಬ್ಬರೂ ನಾಯಕರು, ತಾವು ಸಿಎಂ ಆಗುವ ಬಯಕೆಯನ್ನು ಅನೇಕ ಬಾರಿ ಹೊರಹಾಕಿದ್ದಾರೆ. ಆದರೆ ಇನ್ನೊಬ್ಬರು ಸಿಎಂ ಆಗಬಾರದು ಎಂದು ಹೇಳಿರಲಿಲ್ಲ. ಈ ನಡುವೆ ಎನ್‌ಡಿಟಿವಿ ಸಂದರ್ಶನ ಮಾಡಿದೆ.

ಮಾರ್ಚ್‌ 4ರಂದು ತನ್ನ ವೆಬ್‌ಸೈಟ್‌ನಲ್ಲಿ ಈ ಸಂದರ್ಶನದ ಅಕ್ಷರ ರೂಪವನ್ನು ಎನ್‌ಡಿಟಿವಿ ಪ್ರಕಟಿಸಿತ್ತು. ಶೀರ್ಷಿಕೆಯಲ್ಲಿ “ಹೈಕಮಾಂಡ್‌ ಹಾಗೆ ಮಾಡುವುದಿಲ್ಲ…” ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿ ಆಗುವುದಿಲ್ಲ ಎಂದು ಹೇಳಿದ ಸಿದ್ದರಾಮಯ್ಯ” ಎಂದು ಹೇಳಲಾಗಿತ್ತು. ಸುದ್ದಿಯ ಒಳಭಾಗದಲ್ಲಿ, “ಮುಖ್ಯಮಂತ್ರಿಯಾಗಲು ನಾನೂ ಆಕಾಂಕ್ಷಿ, ಶಿವಕುಮಾರ್‌ ಅವರೂ ಆಕಾಂಕ್ಷಿ. ಡಿ.ಕೆ. ಶಿವಕುಮಾರ್‌ ಅವರಿಗೆ ಮುಖ್ಯಮಂತ್ರಿ ಹುದ್ದೆಯನ್ನು ಹೈಕಮಾಂಡ್‌ ನೀಡುವುದಿಲ್ಲ ಎಂದು ಹೇಳಲಾಗಿತ್ತು.

ಮೂಲ ಸುದ್ದಿ.

ಆದರೆ ಈ ವಿಚಾರ ವಿವಾದವಾದ ನಂತರದಲ್ಲಿ ಎನ್‌ಡಿಟಿವಿ ಸಂದರ್ಶನದ ವಿಡಿಯೊ ಲಭ್ಯವಾಗಿದೆ. ಅದರಲ್ಲಿ ಸಂದರ್ಶಕರ ನಡುವೆ ಸಿದ್ದರಾಮಯ್ಯ ಸಂವಾದ ಈ ರೀತಿ ಇದೆ.

ಸಂದರ್ಶಕಿ: ಜನರು ನಿಮ್ಮನ್ನೇ ಮಾಸ್‌ ಲೀಡರ್‌ ಎನ್ನುತ್ತಿದ್ದಾರೆ. ನಿಮ್ಮ ಅಭಿಪ್ರಾಯವೇನು?
ಸಿದ್ದರಾಮಯ್ಯ: ಮುಖ್ಯಮಂತ್ರಿ ಹುದ್ದೆಗೆ ನಾನು ಆಕಾಂಕ್ಷಿ, ಡಿ.ಕೆ. ಶಿವಕುಮಾರ್‌ ಅವರೂ ಆಕಾಂಕ್ಷಿ. ಪ್ರಜಾಪ್ರಭುತ್ವದಲ್ಲಿ ಇಂತಹದ್ದು ನಡೆಯುತ್ತವೆ, ನಡೆಯಬೇಕು. ಇದರಲ್ಲಿ ತಪ್ಪಿಲ್ಲ. ನಾನು, ಡಿ.ಕೆ. ಶಿವಕುಮಾರ್‌ ಅಷ್ಟೆ ಅಲ್ಲದೆ ಮತ್ತೊಬ್ಬರೂ ಆಗಬಹುದು, ಅದೂ ತಪ್ಪಿಲ್ಲ. ಆಯ್ಕೆಯಾದ ಶಾಸಕರು ತಮ್ಮ ನಾಯಕನನ್ನು ಆಯ್ಕೆ ಮಾಡಬೇಕು. ಕೊನೆಯದಾಗಿ ಹೈಕಮಾಂಡ್‌ ನಿರ್ಧಾರ ಮಾಡುತ್ತದೆ, ಇದೇ ಪ್ರಜಾಪ್ರಭುತ್ವದ ಪ್ರಕ್ರಿಯೆ.
ಸಂದರ್ಶಕಿ: ನಿಮ್ಮ ಪಕ್ಷದ ನಾಡಿ ಮಿಡಿತ ಏನಿದೆ?
ಸಿದ್ದರಾಮಯ್ಯ: ಜನರ ನಾಡಿ ಮಿಡಿತವೇ ಪಕ್ಷದ ನಾಡಿಮಿಡಿತ
ಸಂದರ್ಶಕಿ: ಯುವಕರಿಗೆ ಮಾರ್ಗ ಮಾಡಿಕೊಡೋಣ ಎಂದು ಡಿ.ಕೆ. ಶಿವಕುಮಾರ್‌ ಅವರನ್ನು ಆಯ್ಕೆ ಮಾಡಿದರೆ, ಇದರ ಬಗ್ಗೆ ನಿಮ್ಮ ನಿಲುವೇನು?
ಸಿದ್ದರಾಮಯ್ಯ: ಹಾಗೆ ಆಗುವುದಿಲ್ಲ. ಏಕೆಂದರೆ ಪ್ರಜಾಪ್ರಭುತ್ವ ಮಾರ್ಗದಲ್ಲಿ ಸಾಗಬೇಕಿದೆ. ಈ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಹೈಕಮಾಂಡ್‌ ತನ್ನಷ್ಟಕ್ಕೆ ತಾನೇ ನಿರ್ಧಾರ ಮಾಡಲಾಗುವುದಿಲ್ಲ. ಹೊಸದಾಗಿ ಆಯ್ಕೆಯಾದ ಶಾಸಕರ ಅಭಿಪ್ರಾಯದಂತೆ ಹೋಗಬೇಕಾಗುತ್ತದೆ.

ಅಖಾಡಕ್ಕಿಳಿದ ಸುರ್ಜೆವಾಲ

ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗುತ್ತಿರುವಂತೆ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸರ್ಜೆವಾಲ ಟ್ವೀಟ್‌ ಮಾಡಿದ್ದರು.

“ಬಿಜೆಪಿ ಪ್ರತಿದಿನ ಕರ್ನಾಟಕದಲ್ಲಿ ಕುಸಿಯುತ್ತಿದೆ ಹಾಗೂ ಬಿಜೆಪಿ ಶಾಸಕರು ಮತ್ತು ವಿಧಾನ ಪರಿಷತ್‌ ಸದಸ್ಯರು ರಾಜೀನಾಮೆ ನೀಡುತ್ತಿದ್ದಾರೆ. ಅದಕ್ಕಾಗಿ ಕಾಂಗ್ರೆಸ್‌ ನಾಯಕರ ನಡುವೆ ನಕಲಿ ಜಗಳದ ಸುಳ್ಳು ಸುದ್ದಿಯನ್ನು ಅದಾನಿಯವರ ಎನ್‌ಡಿಟಿವಿ ಮೂಲಕ ಪ್ರಸಾರ ಮಾಡುತ್ತಿದೆ. ಇಂತಹ ಕೆಲಸವನ್ನು ಬಿಟ್ಟು, ಮುಳುಗುತ್ತಿರುವ ಬಿಜೆಪಿ ಹಡಗಿನ ಕುರಿತು ಕಾಳಜಿ ಮಾಡಿ. 40% ಸರ್ಕಾರ ತನ್ನ ಪಾಪಗಳಿಗೆ ಬೆಲೆ ತೆರಲೇಬೇಕಾಗುತ್ತದೆ. ಟಿವಿಯೂ ಬಿಜೆಪಿಯನ್ನು ಕಾಪಾಡಲು ಆಗುವುದಿಲ್ಲ” ಎಂದಿದ್ದರು. ಇದರ ಜತೆಗೆ ಎನ್‌ಡಿಟಿವಿ ಸಂದರ್ಶನದ ವಿಡಿಯೋ ತುಣುಕು ಮತ್ತು ವೆಬ್‌ಸೈಟ್‌ ಸುದ್ದಿಯ ಫೋಟೊವನ್ನೂ ಹಾಕಿದ್ದರು.

ಸಿದ್ದರಾಮಯ್ಯ ಸಹ ಟ್ವೀಟ್‌:
“ಕರ್ನಾಟಕದಲ್ಲಿ ಮುಖ್ಯಮಂತ್ರಿ ಕುರಿತು ಎನ್‌ಡಿಟಿವಿ(ಅದಾನಿ ಟಿವಿ) ಪ್ರಸಾರ ಮಾಡಿದ್ದ ಸುದ್ದಿ ಸತ್ಯಕ್ಕೆ ದೂರವಾದದ್ದು. ನಾನು ಅಂತಹ ಹೇಳಿಕೆ ನೀಡಿಲ್ಲ, ನಾನು ಅಂತಹ ಕೀಳು ರಾಜಕಾರಣ ಮಾಡುವುದಿಲ್ಲ. ಎನ್‌ಡಿಟಿವಿ ಈ ಕುರಿತು ಸ್ಪಷ್ಟನೆ ನೀಡಬೇಕು ಹಾಗೂ ಈ ಸುದ್ದಿಯನ್ನು ತೆಗೆದುಹಾಕಬೇಕು ಎಂದು ಆಗ್ರಹಿಸುತ್ತೇನೆʼ ಎಂದಿದ್ದಾರೆ.

ಸುದ್ದಿ ಬದಲಾಯಿಸಿದ ಎನ್‌ಡಿಟಿವಿ
ಸುರ್ಜೆವಾಲ ಆಕ್ಷೇಪಣೆ ನಂತರದಲ್ಲಿ ಎನ್‌ಡಿಟಿವಿ ಸುದ್ದಿಯನ್ನು ಬದಲಾವಣೆ ಮಾಡಿದೆ. ಶೀರ್ಷಿಕೆಯನ್ನು ಬದಲಾಯಿಸಿ, “ಪ್ರಜಾಪ್ರಭುತ್ವ ಮಾರ್ಗ… ಕಾಂಗ್ರೆಸ್‌ ಮುಖ್ಯಮಂತ್ರಿ ಆಯ್ಕೆ ಕುರಿತು ಸಿದ್ದರಾಮಯ್ಯ” ಎಂದು ಬದಲಾಯಿಸಿದೆ. ಸುದ್ದಿಯ ಒಳಭಾಗದಲ್ಲೂ, “ಹೈಕಮಾಂಡ್‌ ಹಾಗೆ ಮಾಡುವುದಿಲ್ಲ…” ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿ ಆಗುವುದಿಲ್ಲ ಎಂದು ಹೇಳಿದ ಸಿದ್ದರಾಮಯ್ಯ” ಎನ್ನುವುದನ್ನು ತೆಗೆದು, ವಿಡಿಯೋದಲ್ಲಿರುವಂತೆ ಬರೆದಿದೆ. ಅಲ್ಲಿಗೆ, ಎನ್‌ಡಿಟಿವಿ ವೆಬ್‌ಸೈಟ್‌ನಲ್ಲಿ ಮೊದಲಿಗೆ ಪ್ರಸಾರವಾದ ಸುದ್ದಿ ಸತ್ಯವಲ್ಲ ಎನ್ನುವುದು ಸಾಬೀತಾಗಿದೆ.

ಬದಲಾವಣೆ ಮಾಡಿರುವ ಸುದ್ದಿ.


ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

Latest

ಸಚಿವ ಜಮೀರ್‌ರಿಂದ ಸಾಕಷ್ಟು ಅನುಭವಿಸಿದ್ದೇನೆ, ಅವರನ್ನು ಮತ್ತೆ ಜೆಡಿಎಸ್‌ಗೆ ಸೇರಿಸಿಕೊಳ್ಳಲ್ಲ; ಕುಮಾರಸ್ವಾಮಿ ಸ್ಪಷ್ಟೋಕ್ತಿ

VISTARANEWS.COM


on

HD Revanna

ಹಾಸನ: ದಾವಣಗೆರೆ ದಂಗಲ್‌ ನಿಂದಾಗಿ ಕಾಂಗ್ರೆಸ್‌ ಪಕ್ಷದಿಂದ ಕಠಿಣ ಕ್ರಮದ ಭೀತಿಯಲ್ಲಿರುವ ಸಚಿವ ಜಮೀರ್‌ ಅಹಮದ್‌ ಖಾನ್‌ರನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವ ಅವಶ್ಯಕತೆ ಇಲ್ಲ ಎಂದು ಜೆಡಿಎಸ್‌ ವರಿಷ್ಠ ಹಾಗೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.


ಜಮೀರ್‌ ಅವರಿಂದ ಈಗಾಗಲೇ ಸಾಕಷ್ಟು ಅನುಭವಿಸಿದ್ದೇನೆ. ರಾಜಕೀಯದಲ್ಲಿ ಶಕ್ತಿ ಬರುತ್ತೆ ಎಂದು ಹೇಳಿ ಅವರನ್ನು ಮತ್ತೆ ಪಕ್ಷ ಬರಮಾಡಿಕೊಳ್ಳುವ ಪ್ರೇಮಯವೇ ಇಲ್ಲ, ಬೆಂದ ಮನೆಯಲ್ಲಿ ಗಳ ಹಿರಿಯುವ ಕೆಲಸಕ್ಕೆ ಕೈ ಹಾಕಲ್ಲ ಎಂದು ಅವರು ಸ್ಪಷ್ಟಪಡಿಸಿದರು.


ಹೊಳೆನರಸೀಪುರ ತಾಲೂಕಿನ ಉದ್ದನ ಹೊಸಹಳ್ಳಿ ಗ್ರಾಮದಲ್ಲಿ ಶ್ರೀವೀರಾಂಜನೇಯಸ್ವಾಮಿ ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಕುಮಾರಸ್ವಾಮಿ, ಕಾಂಗ್ರೆಸ್‌ ಪಕ್ಷದ ವಿರುದ್ಧ ತೀವ್ರವಾಗಿ ಹರಿಹಾಯ್ದರು. ಕೇವಲ ₹2೦೦೦ ಗ್ಯಾರಂಟಿ ಹಣದಿಂದ ಅಭಿವೃದ್ಧಿ ಸಾಧ್ಯವಿಲ್ಲ. ಮಹಿಳೆಯರು ಈ ಸಣ್ಣ ಮೊತ್ತಕ್ಕೆ ಮರುಳಾಗಬಾರದು, ಇದರಿಂದ ಅವರ ಉದ್ಧಾರ ಅಸಾಧ್ಯ ಎಂದರು. ಇಂತಹ ಗ್ಯಾರೆಂಟಿಗಳಿಂದ ರಾಜ್ಯ ಸರ್ಕಾರಗಳಿಗೆ ಸಂಬಳ ಕೊಡಲಾಗದಂತ ದುಸ್ಥಿತಿ ಎದುರಾಗಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದರು.


ರಾಜ್ಯದಲ್ಲಿ ಸರ್ಕಾರಿ ನೌಕರರಿಗೆ ಮಾರ್ಚ್ ತಿಂಗಳ ವೇತನವನ್ನು ಇನ್ನು ಕೊಟ್ಟಿಲ್ಲ ಎನ್ನುವ ಮಾಹಿತಿ ಇದೆ. ಹಾಗೆಯೇ ಕಾಂಗ್ರೆಸ್ ಆಡಳಿತ ಇರುವ ಹಿಮಾಚಲ ಪ್ರದೇಶದಲ್ಲಿಯೂ ಸರ್ಕಾರಿ ನೌಕರರ ಸಂಬಳವನ್ನು ನೀಡಲು ಪರದಾಡುತ್ತಿದೆ. ಆ ಸರ್ಕಾರವು ನೌಕರರ ಸಂಬಳವನ್ನು ಕಡಿತ ಮಾಡಿಕೊಂಡಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಹೀಗಾಗಿ ರಾಜ್ಯಗಳ ಅಭಿವೃದ್ಧಿ ಸಂಪೂರ್ಣವಾಗಿ ಹಳಿತಪ್ಪಿದೆ ಇದೆಕ್ಕೆಲ್ಲಾ ಕಾಂಗ್ರೆಸ್ ಪಕ್ಷವೇ ಹೊಣೆ ಎಂದರು.


ಸರಿ ಸುಮಾರು 7.2600 ಲಕ್ಷ ಕೋಟಿಗೂ ಸಾಲವನ್ನು ರಾಜ್ಯ ಸರ್ಕಾರ ಮಾಡಿದೆ. ರಾಜ್ಯದ ಪ್ರತಿಯೊಬ್ಬರ ತಲೆಯ ಮೇಲೆಯೂ ಕನಿಷ್ಠವೆಂದರೂ ಒಂದು ಲಕ್ಷ ರೂಪಾಯಿಗೂ ಅಧಿಕ ಸಾಲವಿದೆ. ಇಷ್ಟು ಸಾಲ ಮಾಡಿದರೆ ರಾಜ್ಯ ಅಭಿವೃದ್ಧಿ ಹೊಂದಲು ಸಾಧ್ಯವೇ ಎಂದು ಸಚಿವ ಕುಮಾರಸ್ವಾಮಿ ಪ್ರಶ್ನಿಸಿದರು.


ಒಂದು ಕೈಯಲ್ಲಿ ಜನರಿಗೆ 2 ಸಾವಿರ ಕೊಡುತ್ತಾರೆ. ಇನ್ನೊಂದು ಕೈಯಲ್ಲಿ ತೆರಿಗೆ ಮೇಲೆ ತೆರಿಗೆ ವಿಧಿಸುತ್ತಾರೆ. ಬೆಲೆ ಏರಿಕೆಗಳ ಬಗ್ಗೆ ಹೇಳುವ ಹಾಗೆಯೇ ಇಲ್ಲ. ಇತ್ತೀಚೆಗೆ ವಿದ್ಯುತ್ ದರವನ್ನು ಹೆಚ್ಚಿಸಿದರು. ಹಾಗೆಯೇ ಮದ್ಯದ ದರವನ್ನು ಏರಿಸಿದರು. ಎಷ್ಟು ಸಾಧ್ಯವೊ ಅಷ್ಟು ಕಡೆ ಜನರನ್ನು ಕಿತ್ತು ತಿನ್ನುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ ಎಂದು ಸಚಿವರು ಕಿಡಿಕಾರಿದರು.


ನನಗೆ ದೊರೆತ ಸಣ್ಣ ಅವಧಿಯಲ್ಲಿ ಇಷ್ಟೆಲ್ಲ ಕೆಲಸಗಳನ್ನು ಮಾಡಿದ್ದೇನೆ. ಸಾವಿರಾರು ಶಿಕ್ಷಕರನ್ನು ನೇರವಾಗಿ ಮತ್ತು ಪಾರದರ್ಶಕವಾಗಿ ನೇಮಕ ಮಾಡಿದ್ದೆ. ಆದರೆ ಈಗಿನ ಸರ್ಕಾರಕ್ಕೆ ಒಂದೇ ಒಂದು ನೇಮಕಾತಿ ಮಾಡುವ ಶಕ್ತಿಯು ಇಲ್ಲವಾಗಿದೆ ಎಂದು ಕೇಂದ್ರ ಸಚಿವರು ದೂರಿದರು.

Continue Reading

Latest

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಬಸವ ಶ್ರೀ, ಗುರುರಾಜ ಕರ್ಜಗಿ ಅವರಿಗೆ ವಚನ ಸಾಹಿತ್ಯಶ್ರೀ ಪ್ರಶಸ್ತಿ

VISTARANEWS.COM


on

HD DeveGowda Wont celebrate 92nd birthday

ಬೆಂಗಳೂರು: ಬಸವ ವೇದಿಕೆವತಿಯಿಂದ ನೀಡಲಾಗುವುದ ಪ್ರಸಕ್ತ ಸಾಲಿನ ಬಸವಶ್ರೀ ಪ್ರಶಸ್ತಿ ಹಾಗೂ ವಚನ ಸಾಹಿತ್ಯ ಪ್ರಶಸ್ತಿಯನ್ನು ಕ್ರಮವಾಗಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹಾಗೂ ಶಿಕ್ಷಣ ತಜ್ಞ ಗುರುರಾಜ ಕರ್ಜಗಿ ಅವರನ್ನು ಆಯ್ಕೆ ಮಾಡಲಾಗಿದೆ.


ಸುದ್ದಿಗೋಷ್ಠಿಯಲ್ಲಿ ಗುರುವಾರ ಈ ವಿಷಯ ತಿಳಿಸಿದ ವೇದಿಕೆಯ ಅಧ್ಯಕ್ಷ ಸಿ.ಸೋಮಶೇಖರ್‌, ಬಸವ ಶ್ರೀ ಪ್ರಶಸ್ತಿ ಬಸವಣ್ಣನವರ ಪುತ್ಥಳಿ, ಸ್ಮರಣಿಕೆಯನ್ನೊಳಗೊಂಡಿದೆ. ವಚನ ಸಾಹಿತ್ಯ ಪ್ರಶಸ್ತಿ ಹತ್ತು ಸಾವಿರ ನಗದು ಹಾಗೂ ಸ್ಮರಣಿಕೆಯನ್ನೊಳಗೊಂಡಿದೆ ಎಂದು ತಿಳಿಸಿದರು.


ಬರುವ ಏ.27 ರ ಸಂಜೆ 5:30ಕ್ಕೆ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮಿಜಿ ಸಾನಿಧ್ಯ ವಹಿಸುವರು. ಕೇಂದ್ರ ಸಚಿವ ವಿ.ಸೋಮಣ್ಣ ಸಮಾರಂಭ ಉದ್ಘಾಟಿಸಲಿದ್ದೂ, ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕಾನೂನು ಸಚಿವ ಹೆಚ್.ಕೆ.ಪಾಟೀಲ್‌ ಪ್ರಶಸ್ತಿ ಪ್ರದಾನ ಮಾಡುವರು. ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ವಿಶೇಷ ಸಂಚಿಕೆ ಬಿಡುಗಡೆ ಮಾಡುವರು ಎಂದು ಮಾಹಿತಿ ನೀಡಿದರು.

Continue Reading

Latest

ಪಂಚರಾಜ್ಯ ಚುನಾವಣೆ ನಂತರ,ಪೆಟ್ರೋಲ್‌,ಡೀಸೆಲ್‌ ದರ ಏರಿಕೆ ಇಲ್ಲ : ಕೇಂದ್ರದ ಸ್ಪಷ್ಟನೆ

VISTARANEWS.COM


on

ನವದೆಹಲಿ: ತಮಿಳುನಾಡು, ಪಶ್ಚಿಮ ಬಂಗಾಳ ಸೇರಿದಂತೆ ಐದು ರಾಜ್ಯಗಳ ಚುನಾವಣೆ ನಂತರ ದೇಶಾದ್ಯಂತ ಪೆಟ್ರೋಲ್‌ ಮತ್ತು ಡೀಸಲ್‌ ಬೆಲೆ ಹೇಚ್ಚಾಗಬಹುದು ಎಂಬ ಮಾಧ್ಯಮಗಳ ವರದಿಗಳನ್ನು ಕೇಂದ್ರ ಸರ್ಕಾರ ನಿರಾಕರಿಸಿದೆ.


ಈ ಸಂಬಂಧ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ X ನಲ್ಲಿ ಮಾಡಿರುವ ಪೋಸ್ಟ್‌ ನಲ್ಲಿ ಸ್ಪಷ್ಟೀಕರಣ ನೀಡಿದೆ.


ಡೀಸೆಲ್‌ ಮತ್ತು ಪೆಟ್ರೋಲ್‌ ಬೆಲೆಗಳನ್ನು ಹೆಚ್ಚಿಸುವ ಯಾವುದೇ ಪ್ರಸ್ತಾಪ ಸರ್ಕಾರದ ಪರಿಗಣನೆಯಲ್ಲಿ ಇಲ್ಲ ಎಂದು ಅದು ಸ್ಪಷ್ಟಪಡಿಸಿದೆ.


ಐದು ರಾಜ್ಯಗಳ ಪೈಕಿ ಪಶ್ಚಿಮ ಬಂಗಾಳ ಹಾಗೂ ತಮಿಳುನಾಡು ರಾಜ್ಯಗಳಲ್ಲಿ ಮತದಾನ ನಡೆಯುತ್ತಿದ್ದು, ಏಪ್ರಿಲ್‌ 29 ರಂದು ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನ ನಡೆಯಲಿದೆ. ಏಪ್ರಿಲ್‌ 4 ರಂದು ಫಲಿತಾಂಶ ಪ್ರಕಟವಾಗಲಿದೆ. ನಂತರ ಡೀಸೆಲ್‌ ಮತ್ತು ಪೆಟ್ರೋಲ್‌ ಬೆಲೆ ಏರಿಕೆಯಾಗಲಿದೆ ಎಂದು ಮಾಧ್ಯಮಗಳು ವರದಿ ಮಾಡಿದ್ದವು.


ಕೇಂದ್ರದ ಈ ಸ್ಪಷ್ಟನೆ ವಾಹನ ಸವಾರರೂ ಸೇರಿದಂತೆ ದೇಶದ ಜನತೆ ನಿಟ್ಟುಸಿರು ಬಿಡುವಂತಾಗಿದೆ.

Continue Reading

Fact Check

ವಾಹನ ಸವಾರರಿಗೆ ಬಿಗ್ ರಿಲೀಫ್: ಪೆಟ್ರೋಲ್-ಡೀಸೆಲ್ ದರ ಏರಿಕೆ ವದಂತಿಗೆ ಕೇಂದ್ರ ಸರ್ಕಾರ ಬ್ರೇಕ್!

VISTARANEWS.COM


on

ಕಳೆದ ಕೆಲವು ದಿನಗಳಿಂದ ಸಾರ್ವಜನಿಕ ವಲಯದಲ್ಲಿ ತೀವ್ರ ಆತಂಕ ಮೂಡಿಸಿದ್ದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವದಂತಿಗಳಿಗೆ ಕೇಂದ್ರ ಸರ್ಕಾರ ಅಧಿಕೃತವಾಗಿ ತೆರೆ ಎಳೆದಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಏರಿಕೆಯಾಗಲಿದೆ ಎಂಬ ವರದಿಗಳನ್ನು ಸರ್ಕಾರ ಸಂಪೂರ್ಣವಾಗಿ ತಳ್ಳಿಹಾಕಿದೆ. ಈ ಕುರಿತು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಸ್ಪಷ್ಟನೆ ನೀಡಿದ್ದು, ಅಂತಹ ಯಾವುದೇ ದರ ಏರಿಕೆಯ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ದೃಢಪಡಿಸಿದೆ. ಇಂತಹ ಸುದ್ದಿಗಳು ಕೇವಲ ಜನರಲ್ಲಿ ಭಯ ಹುಟ್ಟಿಸುವ ದುರುದ್ದೇಶದಿಂದ ಕೂಡಿದ್ದು, ಸಾರ್ವಜನಿಕರು ಇವುಗಳಿಗೆ ಕಿವಿಗೊಡಬಾರದು ಎಂದು ವಿನಂತಿಸಿದೆ.

ವಿಧಾನಸಭಾ ಚುನಾವಣೆಗಳು ಏಪ್ರಿಲ್ 29ಕ್ಕೆ ಕೊನೆಗೊಳ್ಳುತ್ತಿದ್ದಂತೆ ಇಂಧನ ದರ ಗಗನಕ್ಕೇರಲಿದೆ ಮತ್ತು ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಬ್ಯಾರೆಲ್‌ಗೆ 120 ಡಾಲರ್ ತಲುಪಿರುವುದು ಇದಕ್ಕೆ ಕಾರಣ ಎಂಬ ವರದಿಗಳು ಹರಿದಾಡುತ್ತಿದ್ದವು. ಈ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ಸರ್ಕಾರ, ಕಳೆದ ನಾಲ್ಕು ವರ್ಷಗಳಲ್ಲಿ ಜಾಗತಿಕವಾಗಿ ತೈಲ ಬೆಲೆ ಏರಿಕೆಯಾಗಿದ್ದರೂ ಭಾರತದಲ್ಲಿ ಬೆಲೆಗಳನ್ನು ನಿಯಂತ್ರಣದಲ್ಲಿಟ್ಟಿರುವ ಏಕೈಕ ದೇಶ ನಮ್ಮದಾಗಿದೆ ಎಂದು ಪುನರುಚ್ಚರಿಸಿದೆ. ಮಧ್ಯಪ್ರಾಚ್ಯದ ಸಂಘರ್ಷದಂತಹ ಕಠಿಣ ಪರಿಸ್ಥಿತಿಯಲ್ಲೂ ನಾಗರಿಕರನ್ನು ರಕ್ಷಿಸಲು ಸರ್ಕಾರ ಅಬಕಾರಿ ಸುಂಕವನ್ನು ಈಗಾಗಲೇ ಲೀಟರ್‌ಗೆ 10 ರೂಪಾಯಿಗಳಷ್ಟು ಕಡಿತಗೊಳಿಸಿರುವುದನ್ನು ನೆನಪಿಸಿದೆ.

ದೇಶದ ಇಂಧನ ಭದ್ರತೆಯ ಬಗ್ಗೆಯೂ ಭರವಸೆ ನೀಡಿರುವ ಸರ್ಕಾರ, ಸದ್ಯ ಎಲ್ಲಾ ರಿಫೈನರಿಗಳು ಪೂರ್ಣ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸುತ್ತಿವೆ ಮತ್ತು ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಲಭ್ಯತೆಗೆ ಯಾವುದೇ ಕೊರತೆಯಿಲ್ಲ ಎಂದು ತಿಳಿಸಿದೆ. ಕಚ್ಚಾ ತೈಲ ಪೂರೈಕೆಯ ಮೇಲೆ ಸರ್ಕಾರ ನಿರಂತರ ನಿಗಾ ವಹಿಸಿದ್ದು, ಜನಸಾಮಾನ್ಯರ ಮೇಲೆ ಆರ್ಥಿಕ ಹೊರೆಯಾಗದಂತೆ ಕ್ರಮ ವಹಿಸುತ್ತಿದೆ. ಇದರಿಂದಾಗಿ ಪೆಟ್ರೋಲ್ ಬೆಲೆ ಏರಿಕೆಯ ಭೀತಿಯಲ್ಲಿದ್ದ ವಾಹನ ಸವಾರರು ಮತ್ತು ಸಾರ್ವಜನಿಕರು ಸದ್ಯಕ್ಕೆ ನಿಟ್ಟುಸಿರು ಬಿಡುವಂತಾಗಿದೆ.

Continue Reading
Advertisement
HD Revanna
Latest6 hours ago

ಸಚಿವ ಜಮೀರ್‌ರಿಂದ ಸಾಕಷ್ಟು ಅನುಭವಿಸಿದ್ದೇನೆ, ಅವರನ್ನು ಮತ್ತೆ ಜೆಡಿಎಸ್‌ಗೆ ಸೇರಿಸಿಕೊಳ್ಳಲ್ಲ; ಕುಮಾರಸ್ವಾಮಿ ಸ್ಪಷ್ಟೋಕ್ತಿ

Latest7 hours ago

ಮತದಾನಕ್ಕೆ ಕ್ಯೂನಲ್ಲಿ ನಿಂತರೂ ಕಷ್ಟ; ನಿಲ್ಲದಿದ್ದರೂ ಕಷ್ಟ: ಹಾಗಾದ್ರೆ ನಟ ಕಮಲ್‌ ಹಾಸನ್‌ ಏನು ಮಾಡಬೇಕಿತ್ತು?

Latest7 hours ago

ವಿಜಯ್ ಪಕ್ಷಕ್ಕೆ ಮತ ಚಲಾಯಿಸಲು ಸಾಧ್ಯವಾಗದೆ ಬಿಕ್ಕಿ ಬಿಕ್ಕಿ ಅತ್ತ ಯುವತಿ! ವಿಡಿಯೋ ವೈರಲ್

Latest7 hours ago

ಸಮಂತಾ ಕೇಳಿದ ಪ್ರಶ್ನೆಗೆ ದಿಗಂತ್ ಶಾಕ್! ‘ದೂದ್ ಪೇಡ’ ಅಂದ್ರೆ ಯಾರು ಎಂದಿದ್ದಕ್ಕೆ ‘ಚಾಕೊಲೇಟ್ ಹೀರೊ’ ನೀಡಿದ ರಿಯಾಕ್ಷನ್ ಹೇಗಿತ್ತು?

Latest7 hours ago

ಮಹಿಳಾ ಮೀಸಲಾತಿ: ಡಿಎಂಕೆ ಹುನ್ನಾರಕ್ಕೆ ರಾಜ್ಯ ಬಲಿ ಕೊಡುತ್ತಿರುವ ಸಿಎಂ ಸಿದ್ದರಾಮಯ್ಯ: ಬಸವರಾಜ ಬೊಮ್ಮಾಯಿ ಆರೋಪ

Latest8 hours ago

ಬೆಸ್ಕಾಂ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಚಾಲನೆ; ಹೆಚ್‌ಟಿ ಗ್ರಾಹಕರಿಗೆ ಅನುಕೂಲ

Latest8 hours ago

ಟ್ರಂಪ್ ಸೋಷಿಯಲ್ ಮೀಡಿಯಾದಲ್ಲಿ ಭಾರತಕ್ಕೆ ಅವಮಾನ: ಭಾರತ-ಚೀನಾ ‘ನರಕ’ ಎಂದ ಮೈಕೆಲ್ ಸ್ಯಾವೇಜ್ ಪೋಸ್ಟ್ ಹಂಚಿಕೊಂಡ ಅಧ್ಯಕ್ಷ

HD DeveGowda Wont celebrate 92nd birthday
Latest8 hours ago

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಬಸವ ಶ್ರೀ, ಗುರುರಾಜ ಕರ್ಜಗಿ ಅವರಿಗೆ ವಚನ ಸಾಹಿತ್ಯಶ್ರೀ ಪ್ರಶಸ್ತಿ

Latest8 hours ago

ಪಶ್ಚಿಮ ಬಂಗಾಳ: ಬಿಜೆಪಿ ಅಭ್ಯರ್ಥಿ ಮೇಲೆ ಹಲ್ಲೆ; ಥಳಿಸಿದ ಗ್ರಾಮಸ್ಥರು

Latest8 hours ago

ಪಂಚರಾಜ್ಯ ಚುನಾವಣೆ ನಂತರ,ಪೆಟ್ರೋಲ್‌,ಡೀಸೆಲ್‌ ದರ ಏರಿಕೆ ಇಲ್ಲ : ಕೇಂದ್ರದ ಸ್ಪಷ್ಟನೆ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ2 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌