ರಾಯಚೂರು: ಲಿಂಗಸುಗೂರು ತಾಲೂಕು ಆಸ್ಪತ್ರೆಯಲ್ಲಿ ಹಣ ವಸೂಲಿ ಪ್ರಕರಣದಲ್ಲಿ ಇಬ್ಬರು ನರ್ಸ್‌ಗಳನ್ನು ಅಮಾನತು ಮಾಡಿ ಜಿಲ್ಲಾ ಆರೋಗ್ಯಾಧಿಕಾರಿ ಸುರೇಂದ್ರ ಬಾಬು ಆದೇಶ ಹೊರಡಿಸಿದ್ದಾರೆ. ವಿಸ್ತಾರ ನ್ಯೂಸ್ (Vistara Impact) ವರದಿ ಪ್ರಕಟ ಮಾಡುತ್ತಿದ್ದಂತೆ ಎಚ್ಚೆತ್ತಕೊಂಡ ಆರೋಗ್ಯ ಇಲಾಖೆ ಈ ಆದೇಶವನ್ನು ಹೊರಡಿಸಿದೆ. ಹೆರಿಗೆಗಾಗಿ 15 ಸಾವಿರ ರೂಪಾಯಿ ಬೇಡಿಕೆ ಇಟ್ಟಿದ್ದ ಗೀತಾ ಮತ್ತು ಅಂಜನಮ್ಮ ಎಂಬುವವರನ್ನು ಅಮಾನತು ಮಾಡಲಾಗಿದೆ.
ಲಿಂಗಸುಗೂರು ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆಗಾಗಿ ಹಣ ವಸೂಲಿ ಮಾಡಿರುವ ಬಗ್ಗೆ ವಿಸ್ತಾರ ನ್ಯೂಸ್‌ನಲ್ಲಿ ಭಾನುವಾರ (ಡಿ.೧೮) ಸುದ್ದಿ ಪ್ರಸಾರವಾಗಿತ್ತು. ಇದಕ್ಕೆ ಜಿಲ್ಲಾ ಆರೋಗ್ಯಾಧಿಕಾರಿ ಸ್ಪಂದಿಸಿ, ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಕೈಗೊಂಡಿದ್ದಾರೆ. ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಗೆ ಸಹಜ ಹೆರಿಗೆ ಆಗಿದ್ದರೂ ಸಿಬ್ಬಂದಿ 15 ಸಾವಿರ ರೂಪಾಯಿ ಬೇಡಿಕೆ ಇಟ್ಟು, 5 ಸಾವಿರ ರೂಪಾಯಿ ಪಡೆದಿದ್ದರು. ಇದರ ವಿಡಿಯೊ ವೈರಲ್ ಆಗಿದ್ದರಿಂದ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.
ಇದನ್ನೂ ಓದಿ | Indescent behaviour | ಬಾಲಕಿ ಜತೆ ಅಸಭ್ಯವಾಗಿ ವರ್ತಿಸಿದ ಯುವಕನನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ
ರಾಜಾರೋಷವಾಗಿ ಹಣ ವಸೂಲಿ
ಜಿಲ್ಲೆಯ ಲಿಂಗಸುಗೂರು ತಾಲೂಕು ಆಸ್ಪತ್ರೆಯಲ್ಲಿ ರಾಜಾರೋಷವಾಗಿ ರೋಗಿಗಳಿಂದ ಹಣ ವಸೂಲಿ ಮಾಡುವುದು ಸಾಮಾನ್ಯವಾಗಿಬಿಟ್ಟಿದೆ. ಸಹಜ ಹೆರಿಗೆಗೆ ಒಂದು ದರ, ಸಿಜೇರಿಯನ್‌ಗೆ ಒಂದು ದರ ನಿಗದಿ ಮಾಡಲಾಗಿದೆ. ರೋಗಿಗಳು ಮೊದಲು ಹಣ ಕೊಟ್ಟರೆ ಮಾತ್ರ ಆಸ್ಪತ್ರೆಯಲ್ಲಿ ಚಿಕಿತ್ಸೆ ದೊರೆಯುತ್ತದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಗರ್ಭಿಣಿ ಕುಟುಂಬಸ್ಥರಿಂದ ಮೊದಲಿಗೆ 5 ಸಾವಿರ ರೂ.ಗಳನ್ನು ಸಿಬ್ಬಂದಿ ಪಡೆದಿದ್ದು, ಚಿಕಿತ್ಸೆ ಬಳಿಕ ಉಳಿದ ಹಣ ಕೊಡುವಂತೆ ತಾಕೀತು ಮಾಡಿದ್ದರು. ಹಣ ಪಡೆಯುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಹೀಗಾಗಿ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸಾರ್ವಜನಿಕರು ಒತ್ತಾಯಿಸಿದ್ದರು.
ಇದನ್ನೂ ಓದಿ | Highway Robbery | ಹೈವೇ ರಾಬರಿಯಲ್ಲಿ ತೊಡಗಿದ್ದ ನಕಲಿ ಪೊಲೀಸ್ ಇನ್ಫಾರ್ಮರ್ ಬಂಧನ