Vistara News | ವಿಸ್ತಾರ ನ್ಯೂಸ್‌ ಚಾನೆಲ್‌ ಇಂದು ಲೋಕಾರ್ಪಣೆ, ದಿನವಿಡೀ ʼವಿಸ್ತಾರ ಕನ್ನಡ ಸಂಭ್ರಮʼ - Vistara News

ಕರ್ನಾಟಕ

Vistara News | ವಿಸ್ತಾರ ನ್ಯೂಸ್‌ ಚಾನೆಲ್‌ ಇಂದು ಲೋಕಾರ್ಪಣೆ, ದಿನವಿಡೀ ʼವಿಸ್ತಾರ ಕನ್ನಡ ಸಂಭ್ರಮʼ

Vistara news | ಕನ್ನಡ ಮಾಧ್ಯಮ ಲೋಕದ ಬಹು ನಿರೀಕ್ಷೆಯ ವಿಸ್ತಾರ ನ್ಯೂಸ್‌ ಚಾನೆಲ್‌ ಅನಾವರಣ ನ.6ರಂದು ನಡೆಯಲಿದೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿ ದಿನವಿಡೀ ವಿಸ್ತಾರ ಕನ್ನಡ ಸಂಭ್ರಮ ಮೇಳೈಸಲಿದೆ.

VISTARANEWS.COM


on

vistara launch
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕನ್ನಡ ಮಾಧ್ಯಮ ಲೋಕದಲ್ಲಿ ಸದಭಿರುಚಿಯ ಟಿವಿ ಚಾನೆಲ್‌ ಲೋಕಾರ್ಪಣೆಯ ದಿನ ಸನ್ನಿಹಿತವಾಗಿದೆ. ಹಿರಿಯ ಪತ್ರಕರ್ತ ಮತ್ತು ಹರಿತ ವಿಶ್ಲೇಷಣೆಗಳಿಗೆ ಹೆಸರಾದ ಹರಿಪ್ರಕಾಶ್‌ ಕೋಣೆಮನೆ ಅವರ ನೇತೃತ್ವದಲ್ಲಿ ರೂಪುಗೊಂಡಿರುವ ವಿಸ್ತಾರ ನ್ಯೂಸ್‌ ಚಾನೆಲ್‌ ಅನಾವರಣ ಇಂದು (ನ.೬) ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಅದ್ಧೂರಿಯಾಗಿ ನಡೆಯಲಿದೆ. ವಿಸ್ತಾರ ಮೀಡಿಯಾ ಪ್ರೈವೆಟ್‌ ಲಿಮಿಟೆಡ್‌ನ ಈ ಹೆಮ್ಮೆಯ ಕಾಣಿಕೆ ನಾಡಿನ ಹಲವಾರು ಗಣ್ಯ ವ್ಯಕ್ತಿಗಳ ಉಪಸ್ಥಿತಿಯಲ್ಲಿ ವೈಭವೋಪೇತವಾಗಿ ತೆರೆದುಕೊಳ್ಳಲಿದೆ.

ವಿಸ್ತಾರ ನ್ಯೂಸ್‌ ಚಾನೆಲ್‌ ಅನಾವರಣದ ಈ ಸಂಭ್ರಮದ ಕ್ಷಣವನ್ನು ʻವಿಸ್ತಾರ ಕನ್ನಡ ಸಂಭ್ರಮʼವಾಗಿ ಆಚರಿಸಲಾಗುತ್ತಿದೆ. ಅಂದು ಬೆಳಗ್ಗಿನಿಂದ ರಾತ್ರಿಯವರೆಗೆ ನಡೆಯುವ ಈ ಸಂಭ್ರಮದಲ್ಲಿ ನಾಡಿನ ೩೨ ಮಹಾ ಸಾಧಕರಿಗೆ ಕಾಯಕ ಯೋಗಿ ಪುರಸ್ಕಾರ ನೀಡಿ ಗೌರವಿಸಲಾಗುತ್ತದೆ. ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿ ದಿನವಿಡೀ ಹಾಡು, ಮಾತು, ಹಾಸ್ಯ, ಜಾದೂ, ಯಕ್ಷಗಾನಗಳಂಥ ಅತ್ಯುತ್ಕೃಷ್ಟ, ವೈವಿಧ್ಯಮಯ ಸಾಂಸ್ಕೃತಿಕ, ಮನೋರಂಜನಾತ್ಮಕ ಕಾರ್ಯಕ್ರಮಗಳು ಮೇಳೈಸಲಿವೆ. ಸಂಗೀತೋತ್ಸವ, ವಿಶಿಷ್ಟ ಆಹಾರ ಮೇಳ, ಪುಸ್ತಕೋತ್ಸವಗಳು, ಜಾನಪದ ವೈಭವ ಮತ್ತು ಚಿಣ್ಣರ ಕಲರವಗಳೊಂದಿಗೆ ರವೀಂದ್ರ ಕಲಾಕ್ಷೇತ್ರದ ಆವರಣ ರಂಗೇರಲಿದೆ.

ವಿಸ್ತಾರ ಮೀಡಿಯಾ ಪ್ರೈವೇಟ್‌ ಲಿಮಿಟೆಡ್‌ನ ಸಿಇಒ ಮತ್ತು ಪ್ರಧಾನ ಸಂಪಾದಕರಾಗಿರುವ ಹರಿಪ್ರಕಾಶ್‌ ಕೋಣೆಮನೆ, ಚೇರ್ಮನ್‌ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿರುವ ಎಚ್‌.ವಿ. ಧರ್ಮೇಶ್‌ ಹಾಗೂ ನಿರ್ದೇಶಕರಾಗಿರುವ ಶ್ರೀನಿವಾಸ್‌ ಹೆಬ್ಬಾರ್‌ ಅವರ ನೇತೃತ್ವದಲ್ಲಿ ನಾಡಿನ ಜನ ಸಕುಟುಂಬಿಕರಾಗಿ ಬಂದು ಸಂಭ್ರಮಿಸಲು ಅನುಕೂಲವಾಗುವಂತೆ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ.

ಎರಡು ಪ್ರಧಾನ ವೇದಿಕೆ ಕಾರ್ಯಕ್ರಮಗಳು
ಬೆಳಗ್ಗೆ ೧೧.೩೦ಕ್ಕೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ನಾಡಿನ ೩೨ ಸಾಧಕರಿಗೆ ವಿಸ್ತಾರ ಕಾಯಕಯೋಗಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಸಂಜೆ ೬ ಗಂಟೆಗೆ ಆರಂಭವಾಗಲಿರುವ ಮತ್ತೊಂದು ಅದ್ಧೂರಿ ಕಾರ್ಯಕ್ರಮದಲ್ಲಿ ನಾಡಿನ ಜನತೆಯ ಬಹುನಿರೀಕ್ಷೆಯ ವಿಸ್ತಾರ ನ್ಯೂಸ್‌ ಚಾನೆಲ್‌ ಲೋಕಾರ್ಪಣೆಗೊಳ್ಳಲಿದೆ. ಉಳಿದಂತೆ ಹಲವು ವೇದಿಕೆಗಳಲ್ಲಿ ಏಕಕಾಲದಲ್ಲಿ ಸಾಂಸ್ಕೃತಿಕ ವೈಭವಗಳು ಮೇಳೈಸಲಿವೆ.

3೨ ಸಾಧಕರಿಗೆ ವಿಸ್ತಾರ ಕಾಯಕ ಯೋಗಿ ಪ್ರಶಸ್ತಿ ಪ್ರದಾನ
ವಿಸ್ತಾರ ಕಾಯಕ ಯೋಗಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಬೆಳಗ್ಗೆ 1೧.೩೦ಕ್ಕೆ ಆರಂಭವಾಗಲಿದೆ. ಈ ಸಮಾರಂಭದಲ್ಲಿ ಹಿರಿಯ ಸಂತರಾದ ಶ್ರೀ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಶ್ರೀ ಶ್ರೀ ಸಿದ್ದಲಿಂಗ ಸ್ವಾಮೀಜಿ, ಶ್ರೀ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿ, ಶ್ರೀ ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ, ಶ್ರೀ ಶ್ರೀ ರಾಘವೇಶ್ವರ ಭಾರತಿ ಸ್ವಾಮೀಜಿ ಮತ್ತು ಶ್ರೀ ಶ್ರೀ ವಚನಾನಂದ ಸ್ವಾಮೀಜಿ ಉಪಸ್ಥಿತರಿರಲಿದ್ದಾರೆ.

ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡ, ಮಾಜಿ ಮುಖ್ಯಮಂತ್ರಿಗಳಾದ ಎಸ್‌.ಎಂ ಕೃಷ್ಣ, ಬಿ.ಎಸ್‌ ಯಡಿಯೂರಪ್ಪ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಚಿವರಾದ ಡಾ. ಸಿ.ಎನ್‌ ಅಶ್ವತ್ಥನಾರಾಯಣ, ವಿ ಸೋಮಣ್ಣ, ಗೋಪಾಲಯ್ಯ‌, ಶಿವರಾಮ ಹೆಬ್ಬಾರ್‌, ಎಂ.ಟಿ.ಬಿ ನಾಗರಾಜ್‌, ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ಅವರು ಭಾಗವಹಿಸಲಿದ್ದಾರೆ.

ವಿಸ್ತಾರ ನ್ಯೂಸ್‌ ಚಾನೆಲ್‌ಗೆ ಅದ್ಧೂರಿ ಚಾಲನೆ
ರಾಜ್ಯಾದ್ಯಂತ ಭಾರಿ ನಿರೀಕ್ಷೆ ಮೂಡಿಸಿರುವ ವಿಸ್ತಾರ ನ್ಯೂಸ್‌ ಚಾನೆಲ್‌ನ ಲೋಕಾರ್ಪಣೆ ಸಂಜೆ 6 ಗಂಟೆಗೆ ಆರಂಭವಾಗುವ ಕಾರ್ಯಕ್ರಮದಲ್ಲಿ ನಡೆಯಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಸ್ತಾರ ನ್ಯೂಸ್‌ ಚಾನೆಲ್‌ಗೆ ಚಾಲನೆ ನೀಡಲಿದ್ದಾರೆ.
ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಅವರು ವಿಸ್ತಾರ ಪ್ರಕಾಶನವನ್ನು ಲೋಕಾರ್ಪಣೆ ಮಾಡಲಿದ್ದಾರೆ. ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವರಾದ ಎಲ್‌. ಮುರುಗನ್‌ ಅವರು ವಿಸ್ತಾರ ಆ್ಯಪ್‌ ಅನಾವರಣ ಮಾಡಲಿದ್ದಾರೆ.

ಉಪಸ್ಥಿತರಿರುವ ಗಣ್ಯರು: ವಿಧಾನಸಭೆ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ, ಮಾಜಿ ಮುಖ್ಯಮಂತ್ರಿಗಳಾದ ಎಚ್‌.ಡಿ ಕುಮಾರಸ್ವಾಮಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ, ಸಚಿವರಾದ ಆರ್‌. ಅಶೋಕ್‌, ಡಾ. ಕೆ. ಸುಧಾಕರ್‌, ಎಸ್‌.ಟಿ. ಸೋಮಶೇಖರ್‌, ಬೈರತಿ ಬಸವರಾಜ್‌, ಮುನಿರತ್ನ, ಮಾಜಿ ಸಚಿವ ಆರ್‌.ವಿ ದೇಶಪಾಂಡೆ, ಲೋಕಸಭಾ ಸದಸ್ಯ ಪಿ.ಸಿ ಮೋಹನ್‌, ಕಸಾಪ ಅಧ್ಯಕ್ಷರಾದ ನಾಡೋಜ ಮಹೇಶ್‌ ಜೋಶಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾದ ಡಾ ಪಿ.ಎಸ್‌. ಹರ್ಷ, ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್‌. ಧ್ರುವನಾರಾಯಣ, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್‌. ರವಿ ಕುಮಾರ್‌ ಮತ್ತು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸಿ.ಎಸ್‌. ಷಡಾಕ್ಷರಿ ಅವರು ಭಾಗವಹಿಸಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ, ಸದಭಿರುಚಿಯ ಮತ್ತು ನಾಡಿನ ಹೆಮ್ಮೆಯ ಕೊಡುಗೆಯಾದ ವಿಸ್ತಾರ ನ್ಯೂಸ್‌ ಟಿವಿ ಚಾನೆಲ್‌ ಅನ್ನು ಪ್ರೋತ್ಸಾಹಿಸಿ ಶುಭ ಹಾರೈಸಬೇಕು ಎಂದು ವಿಸ್ತಾರ ಮೀಡಿಯಾ ಪ್ರೈ. ಲಿ.ನ ಸಿಇಒ ಮತ್ತು ಪ್ರಧಾನ ಸಂಪಾದಕ ಹರಿಪ್ರಕಾಶ್‌ ಕೋಣೆಮನೆ, ಚೇರ್ಮನ್‌ ಮತ್ತು ವ್ಯವಸ್ಥಾಪಕ ನಿರ್ದೇಶಕ ಎಚ್‌ ವಿ ಧರ್ಮೇಶ್‌ ಹಾಗೂ ನಿರ್ದೇಶಕ ಶ್ರೀನಿವಾಸ್‌ ಹೆಬ್ಬಾರ್‌ ಅವರು ಮನವಿ ಮಾಡಿದ್ದಾರೆ.

ವಿಸ್ತಾರ ಕಾಯಕ ಯೋಗಿ ಪುರಸ್ಕೃತರು ಇವರು

-ಸ್ಫೂರ್ತಿದಾಯಕ ಉದ್ಯಮಿ, ವಿಆರ್‌ಎಲ್‌ ಸಮೂಹ ಸಂಸ್ಥೆಯ ಸಿಎಂಡಿ ಡಾ. ವಿಜಯ ಸಂಕೇಶ್ವರ
– ಖ್ಯಾತ ಚಲನಚಿತ್ರ ಕಲಾವಿದರಾದ ಹ್ಯಾಟ್ರಿಕ್‌ ಹೀರೊ ಶಿವರಾಜ್‌ ಕುಮಾರ್‌
– ಹೆಸರಾಂತ ಸಾಹಿತಿ, ಗೀತ ರಚನೆಕಾರ ಮತ್ತು ನಿರ್ದೇಶಕರಾದ ಡಾ. ಎಚ್.ಎಸ್‌ ವೆಂಕಟೇಶಮೂರ್ತಿ
– ಪ್ರಖ್ಯಾತ ಹಿಂದೂಸ್ತಾನಿ ಗಾಯಕರಾದ ಪದ್ಮಶ್ರೀ ಪಂಡಿತ್‌ ವೆಂಕಟೇಶ್ ಕುಮಾರ್
– ಭಾಲ್ಕಿ ಹಿರೇಮಠ ಸಂಸ್ಥಾನದ ಪೀಠಾಧಿಪತಿ, ಅನುಭವ ಮಂಟಪದ ಅಧ್ಯಕ್ಷರಾದ ಡಾ. ಬಸವಲಿಂಗ ಪಟ್ಟದ್ದೇವರು
– ಅಧ್ಯಾತ್ಮ ಸಾಧಕ, ಕೃಷಿ ಪ್ರಯೋಗ ನಿರತರಾದ ಕೊಲ್ಲಾಪುರ ಕನ್ಹೇರಿ ಮಠದ ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ
_ 200ಕ್ಕೂ ಹೆಚ್ಚು ಬಾಲ್ಯ ವಿವಾಹ ತಡೆದ ಸಾಧಕಿ ಗುರಮ್ಮ ಪಂಪಯ್ಯ ಸಂಕಿನಮಠ
– ಬಿಸಿಯೂಟ ತಯಾರಕಿ, ಮಕ್ಕಳ ಶಿಕ್ಷಣಕ್ಕಾಗಿ ಎರಡು ಎಕರೆ ಭೂಮಿ ದಾನ ಮಾಡಿರುವ ಕೊಪ್ಪಳದ ಹುಚ್ಚಮ್ಮ ಚೌದ್ರಿ
– ಶ್ರೀ ಯೋಗಿ ನಾರೇಯಣ ಮಠ ಟ್ರಸ್ಟ್‌, ಶ್ರೀ ಕ್ಷೇತ್ರ ಕೈವಾರದ ಧರ್ಮಾಧಿಕಾರಿಗಳಾದ ಡಾ. ಎಂ.ಆರ್. ಜಯರಾಂ
– ಕಿರುತೆರೆಯಲ್ಲಿ ವಿಭಿನ್ನ ಪ್ರಯೋಗ ಮಾಡಿರುವ ಹಿರಿಯ ನಿರ್ದೇಶಕರು, ನಾಟಕಕಾರರಾದ ಶ್ರೀ ಟಿ.ಎನ್ ಸೀತಾರಾಂ
– ಖ್ಯಾತ ವರ್ಣಚಿತ್ರ ಕಲಾವಿದರಾದ ಡಾ. ಬಿ.ಕೆ.ಎಸ್. ವರ್ಮ
– ಜಯದೇವ ಹೃದ್ರೋಗ ವಿಜ್ಞಾನ ಸಂಶೋಧನಾ ಸಂಸ್ಥೆಯ ನಿರ್ದೇಶಕರಾದ ಡಾ. ಸಿ.ಎನ್‌. ಮಂಜುನಾಥ್‌
– ಖ್ಯಾತ ಟೆನಿಸ್‌ ಆಟಗಾರ, ಗ್ರ್ಯಾನ್‌ಸ್ಲ್ಯಾಮ್‌ ವಿಜೇತರಾದ ರೋಹನ್ ಬೋಪಣ್ಣ
– ರಾಷ್ಟ್ರೀಯ-ಅಂತಾರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಚಿತ್ರ ನಿರ್ದೇಶಕರಾದ ಗಿರೀಶ್ ಕಾಸರವಳ್ಳಿ
– ಪಿಇಎಸ್‌ ಶಿಕ್ಷಣ ಸಂಸ್ಥೆಯ ಸಂಸ್ಥಾಪಕರು ಹಾಗೂ ಕುಲಾಧಿಪತಿಗಳಾದ ಪ್ರೊ. ಎಂ.ಆರ್. ದೊರೆಸ್ವಾಮಿ
– ಫ್ರೀಡಂ ಆ್ಯಪ್ ಸಂಸ್ಥಾಪಕರು ಮತ್ತು ಸಿಇಒ ಸಿ.ಎಸ್. ಸುಧೀರ್
– ಅತಿ ಹೆಚ್ಚು ರಾಷ್ಟ್ರ ಪ್ರಶಸ್ತಿ ಪಡೆದ ಚಿತ್ರ ನಿರ್ದೇಶಕರಾದ ಪಿ. ಶೇಷಾದ್ರಿ
– ಹಿರಿಯ ಸಹಕಾರಿ ಧುರೀಣ, ರಾಜ್ಯ ಅಪೆಕ್ಸ್‌ ಬ್ಯಾಂಕ್‌ ನಿರ್ದೇಶಕರಾದ ಡಾ. ಎಂ. ಎನ್. ರಾಜೇಂದ್ರ ಕುಮಾರ್
– ಮೈಸೂರು ಮರ್ಕೆಂಟೈಲ್‌ ಕಂಪನಿಯ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಎಚ್.ಎಸ್ ಶೆಟ್ಟಿ
– ಜನಪ್ರಿಯ ಸಮಾಜ ಸೇವಕರಾದ ದಾವಣಗೆರೆಯ ಡಾ. ಆರ್‌.ಎಲ್ ಉಮಾಶಂಕರ್
– ಅಂತಾರಾಷ್ಟ್ರೀಯ ಖ್ಯಾತಿಯ ಶಿಲ್ಪಿ ಅರುಣ್ ಯೋಗಿರಾಜ್
– 4.5 ಲಕ್ಷಕ್ಕೂ ಅಧಿಕ ಯುವ ಕನ್ನಡಿಗರಿಗೆ ಬ್ಯಾಂಕಿಂಗ್‌ ಪರೀಕ್ಷೆ ಉಚಿತ ತರಬೇತಿ ನೀಡಿರುವ ಆರ್.ಕೆ ಬಾಲಚಂದ್ರ
– ಕಲಬುರಗಿಯ ಸಿದ್ದಲಿಂಗೇಶ್ವರ ಬುಕ್‌ ಡಿಪೋದ ಸಂಸ್ಥಾಪಕರಾದ ಬಸರಾಜ ಕೊನೇಕ
– ಖ್ಯಾತ ಸಾವಯವ ಗುರು ಡಾ. ಕೆ. ಆರ್. ಹುಲ್ಲುನಾಚೆಗೌಡರು
– ಸರಕಾರಿ ಶಾಲೆ ಉಳಿಸಿ ಬೆಳೆಸಿ ಆಂದೋಲನದ ರೂವಾರಿ ಕುಮಾರಿ ಅನು ಹೇಮಣ್ಣ
– ಕೆಜಿಎಫ್‌, ಕಾಂತಾರ ಮೊದಲಾದ ಹಿಟ್‌ ಚಿತ್ರಗಳ ನಿರ್ಮಾಪಕರಾದ ಹೊಂಬಾಳೆ ಫಿಲ್ಮ್ಸ್‌ನ ವಿಜಯ್ ಕಿರಗಂದೂರು
– ಕಿಮ್ಮನೆ ಗಾಲ್ಫ್‌ ಕ್ಲಬ್‌ ವ್ಯವಸ್ಥಾಪಕ ನಿರ್ದೇಶಕರಾದ ಜಯರಾಮ ಕಿಮ್ಮನೆ
– ವಿದ್ಯಾಶಿಲ್ಪ ಎಜುಕೇಶನ್‌ ಗ್ರೂಪ್‌ನ ಜಾಯಿಂಟ್‌ ಮ್ಯಾನೇಜಿಂಗ್‌ ಟ್ರಸ್ಟಿ ರವೀಂದ್ರ ಪೈ
– ಅಟ್ರಿಮೆಡ್‌ ಲೈಫ್‌ ವ್ಯವಸ್ಥಾಪಕ ನಿರ್ದೇಶಕರಾದ ಡಾ. ಹೃಷಿಕೇಶ್‌ ದಾಮ್ಲೆ
– ಸೈಕಲ್‌ ಪ್ಯೂರ್‌ ಅಗರಬತ್ತಿಯ ವ್ಯವಸ್ಥಾಪಕ ನಿರ್ದೇಶಕರಾದ ಅರ್ಜುನ್‌ ರಂಗ
– ಸಿಇಒ ಪಿಕ್ಸೆಲ್‌ ಸಂಸ್ಥೆಯ ಸಂಸ್ಥಾಪಕರು, ಶಕುಂತಲಾ ಖಾಸಗಿ ಉಪಗ್ರಹದ ರೂವಾರಿ ಅವೇಜ್ ಅಹಮದ್
– ವಿದ್ಯಾನಿಕೇತನ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ನೆಕ್ಕಂಟಿ ಸೂರಿಬಾಬು.

ಸಾಂಸ್ಕೃತಿಕ, ಮನರಂಜನಾ ಕಾರ್ಯಕ್ರಮಗಳ ಮಹಾಮೇಳ

ವಿಸ್ತಾರ ಕನ್ನಡ ಸಂಭ್ರಮದಲ್ಲಿ ದಿನವಿಡೀ ಸಾಂಸ್ಕೃತಿಕ ಕಾರ್ಯಕ್ರಮಗಳ ಮಹಾಮೇಳವೇ ಇರುತ್ತದೆ.

ಎಂ.ಡಿ. ಪಲ್ಲವಿ ಗಾಯನ
ನವೆಂಬರ್‌ ೬ರಂದು ಬೆಳಗ್ಗೆ 10ರಿಂದ 11 ಗಂಟೆಯವರೆಗೆ ಖ್ಯಾತ ಗಾಯಕಿ ಎಂ.ಡಿ ಪಲ್ಲವಿ ಅವರಿಂದ ಗಾನಸುಧೆ ಹರಿಯಲಿದೆ. ಕನ್ನಡದ ಜನಪ್ರಿಯ ಗೀತೆಗಳು ಮೊಳಗಲಿವೆ.

ಕನ್ನಡತಿ ಜತೆ ಸಂವಾದ
ಮಧ್ಯಾಹ್ನ 2.30ರಿಂದ ಜನಪ್ರಿಯ ಕಿರುತೆರೆ ಧಾರಾವಾಹಿ ʻಕನ್ನಡತಿʼ ತಂಡದೊಂದಿಗೆ ವೀಕ್ಷಕರ ಆಪ್ತ ಸಂವಾದ ಇರಲಿದೆ. ʻಕನ್ನಡತಿʼ ಧಾರಾವಾಹಿ ವೀಕ್ಷಕರು ಕಲಾವಿದರ ಜತೆ ನೇರವಾಗಿ ಮಾತನಾಡಬಹುದು.

ವೆಂಕಟೇಶ್ ಕುಮಾರ್‌ ಅಮೃತಗಾನ
ಸಂಜೆ 4ರಿಂದ 5 ಗಂಟೆಯವರೆಗೆ ಪ್ರಖ್ಯಾತ ಹಿಂದೂಸ್ತಾನಿ ಗಾಯಕ ಪಂ. ವೆಂಕಟೇಶ್‌ ಕುಮಾರ್‌ ಅವರ ಗಾಯನ ನಾದಸುಧೆ ಎಲ್ಲರನ್ನೂ ಸಂಗೀತ ಲೋಕದಲ್ಲಿ ವಿಹರಿಸುವಂತೆ ಮಾಡಲಿದೆ. ಸಂಗೀತಾಸಕ್ತರು ಮುಕ್ತವಾಗಿ ಭಾಗವಹಿಸಬಹುದು.

ಹಾಸ್ಯ ಕಾರಂಜಿ, ಜಾದೂ ಕೈಚಳಕ
ಸಂಜೆ 4ರಿಂದ 5ರವರೆಗೆ ಸಂಸ ಬಯಲು ರಂಗ ಮಂದಿರದಲ್ಲಿ ಪ್ರೊ. ಕೃಷ್ಣೇಗೌಡರ ತಂಡ ಹಾಸ್ಯದ ಚಟಾಕಿ ಹಾರಿಸಲಿದೆ. ಸಂಜೆ 5ರಿಂದ 6ರವರೆಗೆ ಅಂತಾರಾಷ್ಟ್ರೀಯ ಖ್ಯಾತಿಯ ಉದಯ್‌ ಜಾದೂಗಾರ್‌ ಅವರಿಂದ ಚಿಣ್ಣರಿಗಾಗಿ ಜಾದೂ ಪ್ರದರ್ಶನ ಇದೆ.

ವಾಸುಕಿ ಮ್ಯೂಸಿಕಲ್‌ ನೈಟ್‌ ವೈಭವ
ರಾತ್ರಿ 8ರಿಂದ ಖ್ಯಾತ ಸಂಗೀತ ನಿರ್ದೇಶಕ ಮತ್ತು ಗಾಯಕ ವಾಸುಕಿ ವೈಭವ್‌ ಅವರ Live in Concert ಆಯೋಜಿಸಲಾಗಿದೆ. ಮನಸಿಂದ ಕೇಳಿ, ಕಾಗದದ ದೋಣಿಯಲಿ, ಗಿರ ಗಿರ ತಿರುಗಿ, ಇನ್ನೂ ಬೇಕಾಗಿದೆ ಅನ್ನಿ ಇತ್ಯಾದಿ ಒಂದು ಡಜನ್‌ಗೂ ಹೆಚ್ಚು ಸೂಪರ್‌ ಹಿಟ್‌ ಹಾಡುಗಳನ್ನು ಹಾಡಿ ರಂಜಿಸಲಿದ್ದಾರೆ ವಾಸುಕಿ ವೈಭವ್‌ ಮತ್ತು ಟೀಮ್‌.

ತೆರೆದುಕೊಳ್ಳಲಿದೆ ಯಕ್ಷಲೋಕ
ರಾತ್ರಿ 10ರಿಂದ ಹೇರಂಜಾಲು ಯಕ್ಷ ಬಳಗ ಹಾಗೂ ಟೀಮ್‌ ಉತ್ಸಾಹಿ ತಂಡದಿಂದ ʻಶಶಿಪ್ರಭಾ ಪರಿಣಯʼ ಯಕ್ಷಗಾನ ಪ್ರದರ್ಶನವಿದೆ. ಚಂದ್ರಕಾಂತ್‌ ರಾವ್‌ ಮೂಡುಬೆಳ್ಳೆ, ಪಲ್ಲವ ಹೇರಂಜಾಲು ಅವರ ಭಾಗವತಿಕೆ, ಶಶಿಕಾಂತ್‌ ಆಚಾರ್ಯ ಮದ್ದಳೆ, ಶ್ರೀನಿವಾಸ ಪ್ರಭು ಅವರ ಚಂಡೆಯ ಹಿಮ್ಮೇಳವಿದೆ. ಮುಮ್ಮೇಳದಲ್ಲಿ ಶಶಿಕಾಂತ್‌ ಶೆಟ್ಟಿ ಕಾರ್ಕಳ, ರವೀಂದ್ರ ದೇವಾಡಿಗ ಕಮಲಶಿಲೆ, ಪ್ರಕಾಶ್‌ ಕಿರಾಡಿ, ಚಂದ್ರಹಾಸ ಗೌಡ, ಪುನೀತ್‌ ಬೋಳಿಯಾರ್‌, ಪ್ರಶಾಂತ ವರ್ದನ, ನಾಗಶ್ರೀ ಜಿ.ಎಸ್‌ ಮತ್ತು ನಿಹಾರಿಕಾ ಭಟ್‌ ಮೊದಲಾದ ಜನಪ್ರಿಯ ಕಲಾವಿದರು ವಿವಿಧ ಪಾತ್ರಗಳಲ್ಲಿ ಮನರಂಜಿಸಲಿದ್ದಾರೆ. ಯಕ್ಷಗಾನ ಪ್ರಿಯರಿಗೆ ಇದೊಂದು ಅಪರೂಪದ ಅವಕಾಶ.

ಆಹಾರೋತ್ಸವ, ಪುಸ್ತಕೋತ್ಸವ, ಜಾನಪದ ಉತ್ಸವ

ಕನ್ನಡ ಸಂಭ್ರಮದಲ್ಲಿ ಮನರಂಜನೆಯ ಜತೆಗೆ ಆಹಾರೋತ್ಸವ, ಪುಸ್ತಕೋತ್ಸವಗಳು ನಡೆಯಲಿವೆ.

ವಿಶಿಷ್ಟ ಆಹಾರ ಮೇಳ: ಉತ್ತರ ಕರ್ನಾಟಕ, ಮಲೆನಾಡು, ಕರಾವಳಿ ಸೇರಿದಂತೆ ರಾಜ್ಯದ ಎಲ್ಲ ಭಾಗಗಳ ವಿಶೇಷ ತಿನಿಸುಗಳಿರುವ ಆಹಾರ ಮಳಿಗೆಗಳು ಇರಲಿವೆ.
ಪುಸ್ತಕ ಮೇಳ: ಸಿರಿಗನ್ನಡ ಪುಸ್ತಕ ಮಳಿಗೆ, ವಿಸ್ತಾರ ಪ್ರಕಾಶನ, ಸ್ನೇಹ ಬುಕ್‌ ಹೌಸ್, ವೀರಲೋಕ ಬುಕ್ಸ್, ರಾಷ್ಟ್ರೋತ್ಥಾನ ಸಾಹಿತ್ಯ, ಸಾವಣ್ಣ ಬುಕ್ಸ್, ಸಮನ್ವಿತ ಪ್ರಕಾಶನ, ವಿಕ್ರಂ ಪ್ರಕಾಶನ ಮುಂತಾದ ಹೆಸರಾಂತ ಪ್ರಕಾಶನ ಸಂಸ್ಥೆಗಳಿಂದ ಪುಸ್ತಕ ಪ್ರದರ್ಶನ ಮತ್ತು ಮಾರಾಟ ನಡೆಯಲಿದೆ.

ಜಾನಪದ ವೈಭವ: ಪ್ರಖ್ಯಾತ ಜಾನಪದ ತಂಡಗಳಿಂದ ಡೊಳ್ಳು ಕುಣಿತ, ವೀರಗಾಸೆ, ಚಂಡೆ ವಾದನ, ಹುಲಿ ವೇಷ ಪ್ರದರ್ಶನದ ವಿಶೇಷ ಆಕರ್ಷಣೆ ಈ ಸಮಾರಂಭಕ್ಕಿದೆ. ಮಕ್ಕಳು ಆಟ ಆಡಿ ನಲಿಯಲು ಸೌಲಭ್ಯ ಕಲ್ಪಿಸಲಾಗಿದೆ. ಜತೆಗೆ ಅಪೋಲೊ ಆಸ್ಪತ್ರೆಯಿಂದ ರಕ್ತದಾನ ಶಿಬಿರ, ಆರೋಗ್ಯ ತಪಾಸಣೆ, ದಯಾನಂದ ಹಾಸ್ಪಿಟಲ್ಸ್‌ನಿಂದ ಉಚಿತ ದಂತ ತಪಾಸಣೆಯ ಉಚಿತ ಕೊಡುಗೆಯೂ ಇರುತ್ತದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Accident News: ಬಿರುಗಾಳಿಗೆ ಕೂಲಿಂಗ್ ಶೀಟ್ ತಲೆ ಮೇಲೆ ಬಿದ್ದು ವ್ಯಕ್ತಿ ಸಾವು; ಬಿಸಿಲಾಘಾತಕ್ಕೆ ಇಬ್ಬರು ಬಲಿ

Accident News: ಪ್ರತ್ಯೇಕ ಕಡೆಗಳಲ್ಲಿ ನಡೆದ ಅವಘಡದಲ್ಲಿ ಮೂವರು ಮೃತಪಟ್ಟಿದ್ದಾರೆ. ಮೈಸೂರಲ್ಲಿ ಮಳೆ ಸಹಿತ ಜೋರಾಗಿ ಬೀಸಿದ ಗಾಳಿಗೆ ಕೂಲಿಂಗ್‌ ಶೀಟ್‌ ತಲೆ ಮೇಲೆ ಬಿದ್ದು ವ್ಯಕ್ತಿಯೊಬ್ಬರು ದಾರುಣ ಅಂತ್ಯ ಕಂಡಿದ್ದಾರೆ. ಇತ್ತ ರಾಯಚೂರಲ್ಲಿ ರಣ ಬಿಸಿಲಿಗೆ ಇಬ್ಬರು ಬಲಿಯಾಗಿದ್ದಾರೆ.

VISTARANEWS.COM


on

By

Accident news
Koo

ಮೈಸೂರು/ರಾಯಚೂರು: ನಿನ್ನೆ ಶುಕ್ರವಾರ ಬೀಸಿದ ಬಿರುಗಾಳಿಗೆ ಕೂಲಿಂಗ್‌ ಶೀಟ್‌ ಕಳಚಿ ವ್ಯಕ್ತಿಯೊಬ್ಬರ ತಲೆ ಮೇಲೆ ಬಿದ್ದಿದೆ. ಬಿದ್ದ ರಭಸಕ್ಕೆ ಕುಸಿದು ಬಿದ್ದ ವ್ಯಕ್ತಿ ಸ್ಥಳದಲ್ಲೇ (Accident News) ಮೃತಪಟ್ಟಿದ್ದಾರೆ. ಮೈಸೂರಿನ ಆಲನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಶಿವಕುಮಾರ್ (34) ಮೃತ ದುರ್ದೈವಿ.

ಮಾರಶೆಟ್ಟಹಳ್ಳಿ ಗ್ರಾಮದ ನಿವಾಸಿಯಾದ ಶಿವಕುಮಾರ್‌ ಕಟ್ಟಡ ಕಾಮಗಾರಿ ಕೆಲಸ ಮಾಡುತ್ತಿದ್ದ. ಈ ವೇಳೆ ಜೋರಾಗಿ ಬಿರುಗಾಳಿ ಬೀಸಿದ್ದು, ಕೂಲಿಂಗ್ ಶೀಟ್ ನೇರವಾಗಿ ಶಿವಕುಮಾರ್‌ ತಲೆ ಮೇಲೆ ಬಿದ್ದಿದೆ. ಪರಿಣಾಮ ಗಂಭೀರ ಗಾಯಗೊಂಡ ಶಿವಕುಮಾರ್‌ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರ ಮಾಡಲಾಗಿದೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇಬ್ಬರನ್ನು ಬಲಿ ಪಡೆದ ರಾಯಚೂರು ರಣ ಬಿಸಿಲು

ಒಂದು ಕಡೆ ಬಿರುಗಾಳಿ ಸಹಿತ ಮಳೆ ಮತ್ತೊಂದು ಕಡೆ ರಣ ಬಿಸಿಲಿಗೆ ಜನರು ತತ್ತರಿಸಿ ಹೋಗಿದ್ದಾರೆ. ರಾಯಚೂರಿನಲ್ಲಿ ಪ್ರತ್ಯೇಕ ಕಡೆಗಳಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಅತಿಯಾದ ಬಿಸಿಲಿನ ತಾಪಮಾನದಿಂದ ಮಲ್ಲಯ್ಯ ಹಾಗೂ ಆಂಜನೇಯ ಎಂಬುವವರು ಮೃತಪಟ್ಟಿದ್ದಾರೆ.

ರಾಯಚೂರಿನ ಮಸ್ಕಿ ಪಟ್ಟಣದಲ್ಲಿ ಬಿಸಿಲಿನ ತಾಪಕ್ಕೆ ಬಿಎಂಟಿಸಿ ಬಸ್ ಕಂಡಕ್ಟರ್ ಮೃತಪಟ್ಟಿದ್ದಾರೆ. ಮಸ್ಕಿ ತಾಲೂಕಿನ ಹಸಮಕಲ್ ಗ್ರಾಮದ ಮಲ್ಲಯ್ಯ (45) ಬಿಸಿಲಿನ ತಾಪ ತಾಳಲಾರದೆ ಕುಸಿದು ಬಿದ್ದಿದ್ದು, ಪ್ರಾಣಪಕ್ಷಿ ಹಾರಿ ಹೋಗಿದೆ.

ಮಲ್ಲಯ್ಯ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಕಂಡಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದರು. ರಜೆ ಮೇಲೆ ಸ್ವಗ್ರಾಮ ಮಸ್ಕಿಯ ಹಸಮಕಲ್‌ಗೆ ಬಂದಿದ್ದರು. ಮಧ್ಯಾಹ್ನ ಮಸ್ಕಿ ಪಟ್ಟಣದಲ್ಲಿ ಕಿರಾಣಿ ಸಾಮಾನು ತರಲು ಬಂದಾಗ ರಸ್ತೆಯಲ್ಲೇ ಕುಸಿದು ಬಿದ್ದಿದ್ದಾರೆ. ಕೂಡಲೇ ಸ್ಥಳೀಯರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯುವಾಗ ಮೃತಪಟ್ಟಿದ್ದಾರೆ. ಆರೋಗ್ಯವಾಗಿದ್ದ ವ್ಯಕ್ತಿ ಬಿಸಿಲತಾಪಕ್ಕೆ ಜೀವಬಿಟ್ಟಿದ್ದಾರೆ.

ಇತ್ತ ರಾಯಚೂರು ತಾಲೂಕಿನ ಜಾಲಿಬೆಂಚಿಯಲ್ಲೂ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಜಾಲಿಬೆಂಚಿಯ ಆಂಜನೇಯ (45) ಮೃತ ದುರ್ದೈವಿ. ಆಂಜನೇಯ ಹೊಲದಿಂದ ಕೆಲಸ ಮುಗಿಸಿ ಮನೆಗೆ ಬರುವಾಗ ಸುಸ್ತಾಗಿ ಬಿದ್ದು ಮೃತಪಟ್ಟಿದ್ದಾರೆ. ನಿತ್ಯ 44-46°C ತಾಪಮಾನ ದಾಖಲಾಗುತ್ತಿದೆ. ಹೀಗಾಗಿ ಅನಾವಶ್ಯಕವಾಗಿ ಹೊರಗೆ ಓಡಾಡದಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ: Drama Artist: ಶಕುನಿಯಾಗಿ ಗರ್ಜಿಸುತ್ತಿರುವಾಗಲೇ ಹೃದಯಾಘಾತ; ಮೊಬೈಲ್‌ನಲ್ಲಿ ಸೆರೆಯಾಯ್ತು ಕಲಾವಿದನ ಕೊನೆಯ ಕ್ಷಣ

ರಾಯಚೂರಲ್ಲಿ ಬಿಸಿಲಾಜ್ಞೆ; ಮಧ್ಯಾಹ್ನ 12-4ರ ವರೆಗೆ ಹೊರಬರದಂತೆ ಡಿಸಿ ಕಟ್ಟಾಜ್ಞೆ!

ರಾಯಚೂರು/ಚಿಕ್ಕಬಳ್ಳಾಪುರ: ರಾಜ್ಯಾದ್ಯಂತ ಉರಿ ಬಿಸಿಲು ಜನರನ್ನು ಸುಸ್ತು (Karnataka Weather Forecast) ಮಾಡಿದೆ. ಅದರಲ್ಲೂ ಉತ್ತರ ಕರ್ನಾಟಕದ ಮಂದಿ ಕುಂತರೂ ನಿಂತರೂ ಬೆವರು ಸುರಿಸುವಂತಾಗಿದೆ. ಬಿಸಿಲಿನ ಆಜ್ಞೆಗೆ ಜನರು ಹೊರಬರಲು ಆಗದೆ ಅಘೋಷಿತ ಬಂದ್‌ ನಿರ್ಮಾಣವಾಗಿದೆ. ಸದ್ಯ ಅತಿಯಾದ ಬಿಸಿಲಿಗೆ ತತ್ತರಿಸಿದ ರಾಯಚೂರು ಜನರು ಮಧ್ಯಾಹ್ನ ಹೊರಗೆ ಬಾರದಂತೆ ರಾಯಚೂರು ಜಿಲ್ಲಾಧಿಕಾರಿ ಸಲಹೆ ನೀಡಿದ್ದಾರೆ.

ಮುಂದಿನ ಒಂದು ವಾರ ಮತ್ತಷ್ಟು ಗರಿಷ್ಠ ತಾಪಮಾನ ಹೆಚ್ಚಾಗುವ ಸಾಧ್ಯತೆ ಇದೆ. ಈಗಾಗಲೇ 44 ರಿಂದ 46 ಡಿ.ಸೆ ನಷ್ಟು ತಾಪಮಾನ ದಾಖಲಾಗುತ್ತಿದೆ. ಇದರಿಂದ ಅನಾರೋಗ್ಯ ಸಮಸ್ಯೆ ಜತೆಗೆ ಬಿಸಿಲಾಘಾತಕ್ಕೆ ಸಾವು ಸಂಭವಿಸಬಹುದು. ಹಾಗಾಗಿ ಮಧ್ಯಾಹ್ನ 12 ರಿಂದ 4 ಗಂಟೆವರೆಗೂ ಹೊರಗೆ ಹೋಗದಿರಿ ಎಂದು ಡಿಸಿ ಎಲ್ ಚಂದ್ರಶೇಖರ ನಾಯಕ್ ಸಲಹೆ ನೀಡಿದ್ದಾರೆ. ಹೊರಗೆ ಹೋಗಲೇಬೇಕಾದ ಅವಶ್ಯಕತೆ ಇದ್ದರೆ ಶುದ್ಧ ಕುಡಿಯುವ ನೀರಿನ ಬಾಟಲ್ ಕೊಂಡೊಯ್ಯಿರಿ. ಟೋಪಿ ಅಥವಾ ಛತ್ರಿ ಬಳಸಿ, ಆದಷ್ಟು ನೆರಳಿನ ಪ್ರದೇಶಗಳಲ್ಲಿ ಓಡಾಡಿ. ಬಾಯಾರಿಕೆ ಆಗದಿದ್ದರೂ ಆಗಾಗ ನೀರು ಕುಡಿಬೇಕು. ಯಾವಾಗಲೂ ನಿಮ್ಮ ಬಳಿ ನೀರು ಇಟ್ಟುಕೊಂಡಿರಿ ಎಂದು ಜಿಲ್ಲಾಧಿಕಾರಿ ಎಲ್‌.ಚಂದ್ರಶೇಖರ ನಾಯಕ್ ಸಲಹೆ ನೀಡಿದ್ದಾರೆ. ಹಾಗೆಯೇ ಮನೆ- ಕಚೇರಿಗಳಲ್ಲಿ ಪಕ್ಷಿಗಳಿಗೂ ನೀರನ್ನು ತುಂಬಿ ಇಡಿ ಎಂದಿದ್ದಾರೆ.

karnataka weather forecast

ತುಮಕೂರಲ್ಲಿ ಬಿಸಿ ಗಾಳಿ; ಹಸುಗಳಿಗೆ ತೇವದ ಗೋಣಿಚೀಲದ ಹೊದಿಕೆ

ತುಮಕೂರು ಜಿಲ್ಲೆಯಲ್ಲೂ ಬಿಸಿ ಗಾಳಿಯು ಆತಂಕವನ್ನು ಹೆಚ್ಚಿಸಿದೆ. ಪಾವಗಡ ತಾಲೂಕಿನಲ್ಲಿ ತಾಪಮಾನ 40 ಡಿಗ್ರಿ ಸೆಲ್ಸಿಯಸ್‌ಗೆ ತಲುಪಿದೆ. ಬಿಸಿಲ ಬೇಗೆಗೆ ಪ್ರಾಣಿ ಪಕ್ಷಿಗಳೂ ಹೈರಾಣಾಗಿವೆ. ಇತ್ತ ರೈತರು ದನ ಕರುಗಳಿಗೆ ಒದ್ದೆ ಮಾಡಿದ ಗೋಣಿಚೀಲ ಹಾಕುತ್ತಿದ್ದಾರೆ. ಪಾವಗಡ ತಾಲೂಕಿನ ವೈ ಎನ್ ಹೊಸಕೋಟೆಯಲ್ಲಿ ಹಸುಗಳಿಗೆ ತೇವದ ಗೋಣಿಚೀಲದ ಹೊದಿಕೆ ಹಾಕಿ, ತಂಪು ಮಾಡುತ್ತಿದ್ದಾರೆ.

ಬಿಸಿಲಿನ ಹೊಡೆತ- ಚಿಕ್ಕಬಳ್ಳಾಪುರ ಪ್ರವಾಸಿತಾಣ ಖಾಲಿ ಖಾಲಿ

ಇತ್ತ ಚಿಕ್ಕಬಳ್ಳಾಪುರದಲ್ಲೂ ಅತಿಯಾದ ತಾಪಮಾನದಿಂದಾಗಿ ಪ್ರವಾಸಿ ತಾಣಗಳು ಪ್ರವಾಸಿಗರು ಇಲ್ಲದೆ ಬಣಗುಡುತ್ತಿದೆ. ನಂದಿ ಬೆಟ್ಟ, ಈಶಾ ಫೌಂಡೇಶನ್ ಜನರಿಲ್ಲದೆ ಖಾಲಿ ಖಾಲಿಯಾಗಿದೆ. ಬಿಸಿಲಿನ ತಾಪಕ್ಕೆ ಜನರು ಮನೆ ಬಿಟ್ಟು‌ ಕದಲದ ಕಾರಣಕ್ಕೆ ಮಧ್ಯಾಹ್ನ 12 ಗಂಟೆ ಬಳಿಕ ಚಿಕ್ಕಬಳ್ಳಾಪುರದಲ್ಲಿ ಆಘೋಷಿತ ಬಂದ್ ವಾತಾವರಣ ನಿರ್ಮಾಣವಾಗಿದೆ. ಪ್ರತಿನಿತ್ಯ ಪ್ರವಾಸಿಗರಿಂದ ಗಿಜುಗುಡುತಿದ್ದ ನಂದಿಬೆಟ್ಟ ಖಾಲಿಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

CM Siddaramaiah: ಸಿಎಂ ಸಿದ್ದರಾಮಯ್ಯ ಬಗ್ಗೆ ಪೋಸ್ಟ್:‌ ಮಹೇಶ್‌ ವಿಕ್ರಂ ಹೆಗ್ಡೆ, ವಸಂತ್‌ ಗಿಳಿಯಾರ್ ಬಂಧನವಿಲ್ಲ

CM Siddaramaiah: ಪ್ರಕರಣ ಸಂಬಂಧ ನಿರೀಕ್ಷಣಾ ಜಾಮೀನು ಕೋರಿ ಮಹೇಶ್‌ ವಿಕ್ರಮ್‌ ಹೆಗ್ಡೆ ಮತ್ತು ವಸಂತ್‌ ಗಿಳಿಯಾರ್‌ ಸಲ್ಲಿಸಿದ್ದ ಕ್ರಿಮಿನಲ್‌ ಅರ್ಜಿ ನ್ಯಾಯಮೂರ್ತಿ ವಿ. ಶ್ರೀಶಾನಂದ ಅವರ ಮುಂದೆ ವಿಚಾರಣೆಗೆ ಬಂದಿತ್ತು. ಪೊಲೀಸರ ಪರ ಹೆಚ್ಚುವರಿ ಸರ್ಕಾರಿ ಅಭಿಯೋಜಕರು ಹಾಜರಾಗಿ, ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಬೇಕು ಎಂದು ಕೋರಿದರು.

VISTARANEWS.COM


on

cm siddaramaiah
Koo

ಬೆಂಗಳೂರು: ಸೋಶಿಯಲ್‌ ಮೀಡಿಯಾದಲ್ಲಿ (Social media) ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ಮಾನಹಾನಿ (derogatory) ಮಾಡುವಂತಹ ಪೋಸ್ಟ್‌ ಹಾಕಿದ ಆರೋಪದಲ್ಲಿ ಬಂಧನ ಭೀತಿ ಎದುರಿಸುತ್ತಿದ್ದ ʼಪೋಸ್ಟ್‌ಕಾರ್ಡ್‌ʼ (Postcard) ಮುಖ್ಯಸ್ಥ ಮಹೇಶ್‌ ವಿಕ್ರಮ್‌ ಹೆಗ್ಡೆ (Mahesh Vikram Hegde) ಮತ್ತು ವಸಂತ್‌ ಗಿಳಿಯಾರ್‌ (Vasant Giliyar) ಅವರನ್ನು ಸದ್ಯಕ್ಕೆ ಬಂಧಿಸದಂತೆ ಪೊಲೀಸರಿಗೆ ಹೈಕೋರ್ಟ್‌ (Highcourt) ನಿರ್ದೇಶಿಸಿದೆ.

ಪ್ರಕರಣ ಸಂಬಂಧ ನಿರೀಕ್ಷಣಾ ಜಾಮೀನು ಕೋರಿ ಮಹೇಶ್‌ ವಿಕ್ರಮ್‌ ಹೆಗ್ಡೆ ಮತ್ತು ವಸಂತ್‌ ಗಿಳಿಯಾರ್‌ ಸಲ್ಲಿಸಿದ್ದ ಕ್ರಿಮಿನಲ್‌ ಅರ್ಜಿ ನ್ಯಾಯಮೂರ್ತಿ ವಿ. ಶ್ರೀಶಾನಂದ ಅವರ ಮುಂದೆ ವಿಚಾರಣೆಗೆ ಬಂದಿತ್ತು. ಪೊಲೀಸರ ಪರ ಹೆಚ್ಚುವರಿ ಸರ್ಕಾರಿ ಅಭಿಯೋಜಕರು ಹಾಜರಾಗಿ, ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಬೇಕು ಎಂದು ಕೋರಿದರು. ಅದನ್ನು ಪರಿಗಣಿಸಿದ ನ್ಯಾಯಪೀಠವು ಅರ್ಜಿ ವಿಚಾರಣೆಯನ್ನು ಮೇ 9ಕ್ಕೆ ವಿಚಾರಣೆ ಮುಂದೂಡಿತು. ಅಲ್ಲಿಯವರೆಗೆ ಅರ್ಜಿದಾರರನ್ನು ಬಂಧಿಸಬಾರದು ಎಂದು ಪೊಲೀಸರಿಗೆ ನಿರ್ದೇಶಿಸಿ ಮಧ್ಯಂತರ ಆದೇಶ ಮಾಡಿತು.

ಮಹೇಶ್‌ ವಿಕ್ರಮ್‌ ಹೆಗ್ಡೆ ಅವರು ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್‌, ಟ್ವಿಟರ್‌ ಮತ್ತು ವಾಟ್ಸಾಪ್‌ಗಳ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾನಹಾನಿ ಮಾಡುವಂತಹ ಸುಳ್ಳು ಸುದ್ದಿ ಹರಿಬಿಟ್ಟಿದ್ದಾರೆ. ಜನರನ್ನು ಪ್ರಚೋದಿಸುವ ಉದ್ದೇಶದಿಂದಲೇ ಈ ಕೃತ್ಯ ಎಸಗಿದ್ದಾರೆ. ಸಿದ್ದರಾಮಯ್ಯ ಅವರ ಫೋಟೊ ದುರ್ಬಳಕೆ ಮಾಡಿಕೊಂಡಿದ್ದಾರೆ. ಜತೆಗೆ, ಪೋಟೋವನ್ನು ಕೆಟ್ಟ ಮಾಹಿತಿಯೊಂದಿಗೆ ಬಳಕೆ ಮಾಡುವ ಮೂಲಕ ಸಿಎಂ ವರ್ಚಸ್ಸಿಗೆ ಹಾನಿ ಮಾಡಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಹರೀಶ್‌ ನಾಗರಾಜು 2024ರ ಏ.9ರಂದು ಅರ್ಜಿದಾರರು ಸೇರಿದಂತೆ ಒಟ್ಟು 7 ಮಂದಿ ವಿರುದ್ಧ ಬೆಂಗಳೂರಿನ ಬಸವೇಶ್ವರ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು.

ಅದನ್ನು ಆಧರಿಸಿ ಅರ್ಜಿದಾರರ ವಿರುದ್ಧ ಪಶ್ವಿಮ ವಿಭಾಗದ ಸಿಇಎನ್‌ ಠಾಣಾ ಪೊಲೀಸರು ಎಫ್‌ಐಆರ್‌ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ. ಪ್ರಕರಣದಲ್ಲಿ ಬಂಧನ ಭೀತಿ ಎದುರಾದ ಹಿನ್ನೆಲೆಯಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿದಾರರು ಹೈಕೋರ್ಟ್‌ ಮೊರೆ ಹೋಗಿದ್ದಾರೆ.

ಇದನ್ನೂ ಓದಿ: Prajwal Revanna Case: ವಿಡಿಯೊದಲ್ಲಿ ಪ್ರಜ್ವಲ್‌ ಮುಖ ಕಾಣಲ್ಲ; ಗಂಡಸ್ತನವಿದ್ದರೆ ರಾಹುಲ್‌ ಗಾಂಧಿಗೆ ನೋಟಿಸ್‌ ಕೊಡಿ: ಸಿಎಂಗೆ ಎಚ್‌ಡಿಕೆ ಸವಾಲು

Continue Reading

ಕರ್ನಾಟಕ

Drama Artist: ಶಕುನಿಯಾಗಿ ಗರ್ಜಿಸುತ್ತಿರುವಾಗಲೇ ಹೃದಯಾಘಾತ; ಮೊಬೈಲ್‌ನಲ್ಲಿ ಸೆರೆಯಾಯ್ತು ಕಲಾವಿದನ ಕೊನೆಯ ಕ್ಷಣ

Drama Artist: ನಾಟಕದಲ್ಲಿ ಅಭಿನಯಿಸುತ್ತಿರುವಾಗಲೇ ವೇದಿಕೆಯಲ್ಲೇ ಕುಸಿದು ಬಿದ್ದು ಕಲಾವಿದರೊಬ್ಬರು ಮೃತಪಟ್ಟಿದ್ದಾರೆ. ಎನ್.ಮುನಿಕೆಂಪಣ್ಣ (72) ಅವರು ಯಲಹಂಕದ ಸಾತನೂರು ಗ್ರಾಮದಲ್ಲಿ ʼಕುರುಕ್ಷೇತ್ರʼ ನಾಟಕ ಪ್ರದರ್ಶಿಸುತ್ತಿದ್ದ ವೇಳೆ ನಿಧನ ಹೊಂದಿದ್ದಾರೆ. ʼಕುರುಕ್ಷೇತ್ರʼ ನಾಟಕದಲ್ಲಿ ಮುನಿಕೆಂಪಣ್ಣ ಅವರು ಶಕುನಿ ಪಾತ್ರ ನಿರ್ವಹಿಸುತ್ತಿದ್ದರು. ಮಧ್ಯರಾತ್ರಿಯವರೆಗೂ ಅದ್ಬುತ ಪ್ರದರ್ಶನ ನೀಡಿದ ಅವರು ಒಂದು ಗಂಟೆಯ ವೇಳೆಗೆ ಇದ್ದಕ್ಕಿದ್ದಂತೆ ವೇದಿಕೆ ಮೇಲೆಯೇ ಕುಸಿದು ಬಿದ್ದಿದ್ದಾರೆ. ಸದ್ಯ ಅವರು ಕುಸಿದು ಬೀಳುತ್ತಿರುವ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದ್ದು, ವೈರಲ್‌ ಆಗಿದೆ.

VISTARANEWS.COM


on

Drama Artist
Koo

ಯಲಹಂಕ: ನಾಟಕದಲ್ಲಿ ಅಭಿನಯಿಸುತ್ತಿರುವಾಗಲೇ ವೇದಿಕೆಯಲ್ಲೇ ಕುಸಿದು ಬಿದ್ದು ಕಲಾವಿದರೊಬ್ಬರು ಮೃತಪಟ್ಟಿದ್ದಾರೆ. ಎನ್.ಮುನಿಕೆಂಪಣ್ಣ (72) ಅವರು ಯಲಹಂಕದ ಸಾತನೂರು ಗ್ರಾಮದಲ್ಲಿ ʼಕುರುಕ್ಷೇತ್ರʼ ನಾಟಕ ಪ್ರದರ್ಶಿಸುತ್ತಿದ್ದ ವೇಳೆ ನಿಧನ ಹೊಂದಿದ್ದಾರೆ.

ʼಕುರುಕ್ಷೇತ್ರʼ ನಾಟಕದಲ್ಲಿ ಮುನಿಕೆಂಪಣ್ಣ ಅವರು ಶಕುನಿ ಪಾತ್ರ ನಿರ್ವಹಿಸುತ್ತಿದ್ದರು. ಮಧ್ಯರಾತ್ರಿಯವರೆಗೂ ಅದ್ಬುತ ಪ್ರದರ್ಶನ ನೀಡಿದ ಅವರು ಒಂದು ಗಂಟೆಯ ವೇಳೆಗೆ ಇದ್ದಕ್ಕಿದ್ದಂತೆ ವೇದಿಕೆ ಮೇಲೆಯೇ ಕುಸಿದು ಬಿದ್ದಿದ್ದಾರೆ. ಸದ್ಯ ಅವರು ಕುಸಿದು ಬೀಳುತ್ತಿರುವ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದ್ದು, ವೈರಲ್‌ ಆಗಿದೆ.

ಹಿಂದೆ ಉಪನ್ಯಾಸಕರಾಗಿದ್ದ ಮುನಿಕೆಂಪಣ್ಣ ಅವರು ನಾಟಕದಲ್ಲಿ ಅಪಾರ ಆಸಕ್ತಿ ಹೊಂದಿದ್ದು, ಆಗಾಗ ವೇಷ ಹಚ್ಚುತ್ತಿರುತ್ತಾರೆ. ದೇವನಹಳ್ಳಿಯಲ್ಲಿ ನಡೆದ 28ನೇ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ಹೃದಯಾಘಾತದಿಂದ ಮೃತಪಟ್ಟ ಮುನಿಕೆಂಪಣ್ಣ ಅವರ ಅಂತ್ಯ ಸಂಸ್ಕಾರ ಅವರ ಹುಟ್ಟೂರು ಅರದೇಶನಹಳ್ಳಿಯಲ್ಲಿ ನಡೆಯಲಿದೆ. ಇದಕ್ಕಾಗಿ ಸಿದ್ಧತೆ ಕೈಗೊಳ್ಳಲಾಗಿದೆ.

ವೇಷ ಕಳಚುತ್ತಿರುವಾಗಲೇ ಹೃದಯ ಸ್ತಬ್ಧ; ಯಕ್ಷಗಾನ ಕಲಾವಿದ ಇನ್ನಿಲ್ಲ

ಮಂಗಳೂರು: ವೇಷ ಕಳಚುತ್ತಿರುವಾಗಲೇ ಹೃದಯಾಘಾತದಿಂದ ಧರ್ಮಸ್ಥಳ ಯಕ್ಷಗಾನ ಮೇಳದ ಸವ್ಯಸಾಚಿ ಕಲಾವಿದ ಗಂಗಾಧರ ಪುತ್ತೂರು(60) ಅವರು ಇಹಲೋಕ ತ್ಯಜಿಸಿದ್ದಾರೆ. ಮೇ 1ರಂದು ರಾತ್ರಿ ಕೋಟ ಗಾಂಧಿಮೈದಾನದ ಬಳಿ ಶ್ರೀ ಧರ್ಮಸ್ಥಳ ಕ್ಷೇತ್ರ ಮಹಾತ್ಮೆ ಯಕ್ಷಗಾನದಲ್ಲಿ ಅವರು ಕುಕ್ಕಿಂತ್ತಾಯ ದೈವದ ವೇಷವನ್ನು ನಿರ್ವಹಿಸಿದ್ದರು. ಬಳಿಕ ಚೌಕಿಗೆ ಆಗಮಿಸಿ ಕಿರೀಟ, ಯಕ್ಷಗಾನದ ಆಭರಣ ತೆಗೆದಿಟ್ಟು, ಮುಖದ ಬಣ್ಣವನ್ನು ಅಳಿಸುತ್ತಿರುವಾಗ ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಪುತ್ತೂರಿನ ಸೇಡಿಯಾಪು ನಿವಾಸಿಯಾಗಿರುವ ಇವರು ಏಳನೇ ತರಗತಿಯವರೆಗೆ ವಿದ್ಯಾಭ್ಯಾಸ ಹೊಂದಿದ್ದರು. ತಮ್ಮ 18ನೇ ವಯಸ್ಸಿಗೆ ಯಕ್ಷಗಾನ ತಿರುಗಾಟ ಆರಂಭಿಸಿದ ಗಂಗಾಧರ ಪುತ್ತೂರು ಸುದೀರ್ಘ 40 ವರ್ಷಗಳಷ್ಟು ಕಾಲ ಯಕ್ಷಗಾನ ರಂಗದಲ್ಲಿ ವ್ಯವಸಾಯ ಮಾಡಿದ್ದರು. ಕರ್ಗಲ್ಲು ವಿಶ್ವೇಶ್ವರ ಭಟ್ ಹಾಗೂ ಕೆ.ಗೋವಿಂದ ಭಟ್ ಅವರಿಂದ ನಾಟ್ಯಾಭ್ಯಾಸ ಮಾಡಿದರು.

ಯಕ್ಷಗಾನ ರಂಗದ ಸವ್ಯಸಾಚಿ ಕಲಾವಿದರಾದ ಇವರು ಸ್ತ್ರೀವೇಷದಿಂದ ಹಿಡಿದು ಪುಂಡುವೇಷ, ರಾಜವೇಷ, ಹೆಣ್ಣುಬಣ್ಣ ಸಮರ್ಥವಾಗಿ ನಿರ್ವಹಿಸುತ್ತಿದ್ದರು. 30 ವರ್ಷಗಳಿಗಿಂತಲೂ ಅಧಿಕ ಕಾಲದಿಂದ ಗಂಗಾಧರ ಪುತ್ತೂರು ಧರ್ಮಸ್ಥಳ ಮೇಳದಲ್ಲಿಯೇ ಕಲಾವಿದರಾಗಿ ತಿರುಗಾಟ ಮಾಡಿದ್ದರು.

ಇದನ್ನೂ ಓದಿ: Srinivas Prasad: ತೀವ್ರ ಹೃದಯಾಘಾತದಿಂದ ಹಿರಿಯ ಸಂಸದ ಶ್ರೀನಿವಾಸ್‌ ಪ್ರಸಾದ್‌ ವಿಧಿವಶ

Continue Reading

ಪ್ರಮುಖ ಸುದ್ದಿ

Prajwal Revanna Case: ಕಾಣದಂತೆ ಮಾಯವಾದ ಎಚ್‌ಡಿ ರೇವಣ್ಣ ! ಇಂದು ಜಾಮೀನು ಸಿಗದೇ ಹೋದರೆ….

Prajwal Revanna Case: ರೇವಣ್ಣಗೆ ಎಸ್ಐಟಿ ಮುಂದೆ ಹಾಜರಾಗಲು ನೋಟೀಸ್ ನೀಡಲಾಗಿದೆ. ಆದರೆ ಕಳೆದ ಎರಡು ದಿನಗಳಿಂದ ರೇವಣ್ಣ ನಾಪತ್ತೆಯಾಗಿದ್ದಾರೆ. ಅವರು ಅತ್ತ ಎಚ್.ಡಿ ದೇವೇಗೌಡರ ನಿವಾಸದಲ್ಲಿಯಾಗಲೀ, ಈತ್ತ ಬಸವನಗುಡಿಯ ತಮ್ಮ ನಿವಾಸದಲ್ಲಿಯಾಗಲೀ, ಹಾಸನದ ಎರಡು ನಿವಾಸಗಳಲ್ಲಾಗಲೀ ಇಲ್ಲ.

VISTARANEWS.COM


on

hd revanna prajwal revanna case
Koo

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್‌ ರೇವಣ್ಣ (Prajwal Revanna Case) ಲೈಂಗಿಕ ಹಗರಣದಲ್ಲಿ (Physical Abuse) ಎಸ್‌ಐಟಿ (SIT) ಮುಂದೆ ವಿಚಾರಣೆಗೆ ಬೇಕಾಗಿರುವ ಮಾಜಿ ಸಚಿವ, ಜೆಡಿಎಸ್‌ ನಾಯಕ ಎಚ್‌.ಡಿ ರೇವಣ್ಣ (HD Revanna) ಅವರು ವಿಶೇಷ ತನಿಖಾ ತಂಡ ಹಾಗು ಪೊಲೀಸರ ಯಾವ ನೋಟಕ್ಕೂ ಸಿಗದೇ ಗುಪ್ತ ಸ್ಥಳಕ್ಕೆ ತೆರಳಿದ್ದು, ಎರಡು ದಿನಗಳಿಂದ ಎಲ್ಲೂ ಕಾಣಿಸಿಕೊಂಡಿಲ್ಲ. ಇಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನಲ್ಲಿ ಅವರ ಜಾಮೀನು ಅರ್ಜಿ (Bail plea) ವಿಚಾರಣೆಗೆ ಬರಲಿದೆ.

ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ (Pen Drive Case) ಪ್ರಕರಣದಲ್ಲಿ ರೇವಣ್ಣಗೆ ಎಸ್ಐಟಿ ಮೂರನೇ ನೋಟೀಸ್ ಹಾಗೂ ಕೊನೆಗೆ ಲುಕೌಟ್ ನೋಟೀಸ್ (Lookout notice) ಜಾರಿಯಿಂದಾಗಿ ಮತ್ತಷ್ಟು ಸಂಕಷ್ಟ ಎದುರಾಗಿದೆ. ರೇವಣ್ಣ ಅವru ವಿದೇಶಕ್ಕೆ ಹಾರಬಹುದು ಎಂಬ ಮುಂದಾಲೋಚನೆಯಿಂದ ಲುಕೌಟ್‌ ನೋಟೀಸ್‌ ಜಾರಿ ಮಾಡಲಾಗಿದ್ದು, ಈಗ ಅವರು ಯಾವುದೇ ಏರ್‌ಪೋರ್ಟ್‌ ಮೂಲಕ ಹಾದು ಹೋಗಲು ಸಾಧ್ಯವಿಲ್ಲದಾಗಿದೆ.

ವಿದೇಶದಲ್ಲಿದ್ದುಕೊಂಡು ಲೈಂಗಿಕ ಹಗರಣ (Pen drive case) ವಿಚಾರಣೆಯಿಂದ ತಪ್ಪಿಸಿಕೊಳ್ಳುತ್ತಿರುವ ಪ್ರಜ್ವಲ್ ರೇವಣ್ಣ (Prajwal Revanna Case) ವಿರುದ್ಧ ರೆಡ್ ಕಾರ್ನರ್ ನೊಟೀಸ್ (Red Corner Notice) ಜಾರಿ ಮಾಡಲು ಎಸ್‌ಐಟಿ (SIT) ಸಿದ್ಧತೆ ನಡೆಸಿದೆ ಎನ್ನಲಾಗಿದ್ದು, ಇನ್ನೊಂದೆಡೆ ಭವಾನಿ ರೇವಣ್ಣ ಅವರಿಗೂ ವಿಚಾರಣೆಗೆ ಎಸ್‌ಐಟಿ ಬುಲಾವ್‌ ಮಾಡಿದೆ.

ಸದ್ಯ ರೇವಣ್ಣ ವಿರುದ್ಧ ತನಿಖೆಗೆ ಒಳಗಾಗಬೇಕಾದ ಗಂಭೀರ ಆರೋಪವಿದೆ. ಮೈಸೂರಿನಲ್ಲಿ ಸಂತ್ರಸ್ತೆಯ ಪುತ್ರ ರೇವಣ್ಣ ವಿರುದ್ಧ ಕಿಡ್ನಾಪ್ ಪ್ರಕರಣ ದಾಖಲು ಮಾಡಿದ್ದಾರೆ. ಹೀಗಾಗಿ ರೇವಣ್ಣಗೆ ಎಸ್ಐಟಿ ಮುಂದೆ ಹಾಜರಾಗಲು ನೋಟೀಸ್ ನೀಡಲಾಗಿದೆ. ಆದರೆ ಕಳೆದ ಎರಡು ದಿನಗಳಿಂದ ರೇವಣ್ಣ ನಾಪತ್ತೆಯಾಗಿದ್ದಾರೆ. ಅವರು ಅತ್ತ ಎಚ್.ಡಿ ದೇವೇಗೌಡರ ನಿವಾಸದಲ್ಲಿಯಾಗಲೀ, ಈತ್ತ ಬಸವನಗುಡಿಯ ತಮ್ಮ ನಿವಾಸದಲ್ಲಿಯಾಗಲೀ, ಹಾಸನದ ಎರಡು ನಿವಾಸಗಳಲ್ಲಾಗಲೀ ಇಲ್ಲ.

ಹೀಗಾಗಿ ಅವರು ಬಂಧನದ ಭೀತಿಯಿಂದ ಅಜ್ಞಾತ ಸ್ಥಳಕ್ಕೆ ಎಸ್ಕೇಪ್ ಆಗಿರಬಹುದು ಎಂದು ಶಂಕೆಯನ್ನು ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ. ಸದ್ಯ ರೇವಣ್ಣ ಅವರಿಗೆ ಬಂಧನದ ಭಯ ಕಾಡುತ್ತಿದೆ. ಕಿಡ್ನಾಪ್ ಪ್ರಕರಣದಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ತೀರ್ಪು ನೋಡಿಕೊಂಡು ನಿರ್ಧಾರ ಮಾಡಲಿದ್ದಾರೆ. ಜಾಮೀನು ಸಿಕ್ಕರೆ ಎಸ್ಐಟಿ ಮುಂದೆ ಬರುವುದು, ಇಲ್ಲವೇ ಮೇಲಿನ ಕೋರ್ಟ್ ಮೊರೆ ಹೋಗೋಣ ಎಂದು ರೇವಣ್ಣ ಪರ ವಕೀಲರು ಹೇಳಿದ್ದಾರೆ.

ಇಂದು ಜಾಮೀನು ಅರ್ಜಿ ವಿಚಾರಣೆ

ಮಹಿಳೆಯೊಬ್ಬರನ್ನು ಅಪಹರಣ ಮಾಡಿ ಅಕ್ರಮ ಬಂಧನದಲ್ಲಿಟ್ಟಿದ್ದ ಆರೋಪದ ಮೇಲೆ ಮೈಸೂರಿನ ಕೆ.ಆರ್.‌ ನಗರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಚ್.ಡಿ. ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಇಂದು (ಶನಿವಾರ) ನಡೆಸಲಿದೆ. ಇದೇ ವೇಳೆ ರೇವಣ್ಣ ಶನಿವಾರ ಎಸ್‌ಐಟಿ ಮುಂದೆ ಹಾಜರಾಗಲು ಸಿದ್ಧರಿದ್ದಾರೆ ಎಂದು ಅವರ ಪರ ವಕೀಲರು ಕೋರ್ಟ್‌ಗೆ ತಿಳಿಸಿದ್ದಾರೆ. ಎರಡನೇ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಚ್.ಡಿ. ರೇವಣ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಿಶೇಷ ಸಾರ್ವಜನಿಕ ಅಭಿಯೋಜಕರಿಗೆ ನೋಟಿಸ್‌ ನೀಡಿದೆ. ಬಳಿಕ ವಿಚಾರಣೆಯನ್ನು ಶನಿವಾರಕ್ಕೆ (ಮೇ 4) ಮುಂದೂಡಿದೆ.

ಈ ವೇಳೆ ಎಚ್.ಡಿ. ರೇವಣ್ಣ ಪರ ವಕೀಲರಾದ ಮೂರ್ತಿ ಡಿ ನಾಯ್ಕ್ ವಾದ ಮಂಡಿಸಿದ್ದು, ಕೆ.ಆರ್. ನಗರ ಠಾಣೆಯ ಎಫ್ಐಆರ್‌ನಲ್ಲಿ ಜಾಮೀನು ರಹಿತ ಸೆಕ್ಷನ್‌ಗಳಿವೆ. 364 A, ಅಪಹರಣ, 364 ಅಕ್ರಮ ಬಂಧನದಡಿ ಕೇಸ್‌ ದಾಖಲು ಮಾಡಲಾಗಿದೆ. ಇವುಗಳು ಜಾಮೀನು ರಹಿತವಾಗಿವೆ ಎಂದು ದೂರಿನ ಸಾರಾಂಶವನ್ನು ಓದಿ ತಿಳಿಸಿದರು. ಅಲ್ಲದೆ, ಈ ದೂರಿನಲ್ಲಿ ಮಹಿಳೆಯ ಹೆಸರನ್ನೇ ಉಲ್ಲೇಖಿಸಿಲ್ಲ. ಇನ್ನು ನಾಳೆ ಎಸ್ಐಟಿ ಮುಂದೆ ಎಚ್.ಡಿ. ರೇವಣ್ಣ ಹಾಜರಾಗಲು ಸಿದ್ಧರಿದ್ದಾರೆ. ಹೀಗಾಗಿ ಈ ಪ್ರಕರಣದಲ್ಲಿ ಮಧ್ಯಂತರ ಜಾಮೀನು ನೀಡಬೇಕು ಎಂದು ಮನವಿ ಮಾಡಿದರು. ವಾದ ಆಲಿಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಡ್ಜ್ ಸಂತೋಷ್ ಗಜಾನನ ಭಟ್, ಶನಿವಾರ ಬೆಳಗ್ಗೆ 11 ಗಂಟೆಗೆ ವಿಚಾರಣೆಯನ್ನು ಮುಂದೂಡಿದ್ದು, ಎಸ್ಐಟಿ ಪರ ಎಸ್‌ಪಿಪಿಗೆ ಕೋರ್ಟ್ ನೋಟಿಸ್ ನೀಡಿದ್ದಾರೆ.

ಇದನ್ನೂ ಓದಿ: Prajwal Revanna Case: ಹಾಸನ ಸಂಸದರ ನಿವಾಸದ ಗೇಟಿಗೆ ಬೀಗ; ನಿವಾಸದ ಕೀ ನಾಪತ್ತೆ! ಎಚ್‌ಡಿ ರೇವಣ್ಣ ಕೂಡ ಗಾಯಬ್!‌

Continue Reading
Advertisement
Vettaiyan Movie Rajinikanth And Amitabh Bachchan Poses Together
ಸಿನಿಮಾ2 mins ago

Vettaiyan Movie: ಸೂಟು ಬೂಟು ಹಾಕಿಕೊಂಡು ಸ್ಟೈಲಿಶ್‌ ಆಗಿ ಪೋಸ್‌ ಕೊಟ್ಟ ರಜನಿ!

Accident news
ಮಳೆ6 mins ago

Accident News: ಬಿರುಗಾಳಿಗೆ ಕೂಲಿಂಗ್ ಶೀಟ್ ತಲೆ ಮೇಲೆ ಬಿದ್ದು ವ್ಯಕ್ತಿ ಸಾವು; ಬಿಸಿಲಾಘಾತಕ್ಕೆ ಇಬ್ಬರು ಬಲಿ

cm siddaramaiah
ಕ್ರೈಂ19 mins ago

CM Siddaramaiah: ಸಿಎಂ ಸಿದ್ದರಾಮಯ್ಯ ಬಗ್ಗೆ ಪೋಸ್ಟ್:‌ ಮಹೇಶ್‌ ವಿಕ್ರಂ ಹೆಗ್ಡೆ, ವಸಂತ್‌ ಗಿಳಿಯಾರ್ ಬಂಧನವಿಲ್ಲ

Urfi Javed magical butterflies dress Samantha reacts
ಬಾಲಿವುಡ್21 mins ago

Urfi Javed: ಉರ್ಫಿ ʻಮ್ಯಾಜಿಕ್ʼ ಡ್ರೆಸ್‌ಗೆ ಸಮಂತಾ ಮೆಚ್ಚುಗೆ; ಗೌನ್‌ನಿಂದ ಹಾರಿತು ಬಣ್ಣದ ಚಿಟ್ಟೆ!

IPL 2024
ಕ್ರೀಡೆ31 mins ago

IPL 2024: ಬರೋಬ್ಬರಿ 12 ವರ್ಷಗಳ ಬಳಿಕ ವಾಂಖೆಡೆಯಲ್ಲಿ ಗೆಲುವು ಸಾಧಿಸಿದ ಕೆಕೆಆರ್​

Drama Artist
ಕರ್ನಾಟಕ32 mins ago

Drama Artist: ಶಕುನಿಯಾಗಿ ಗರ್ಜಿಸುತ್ತಿರುವಾಗಲೇ ಹೃದಯಾಘಾತ; ಮೊಬೈಲ್‌ನಲ್ಲಿ ಸೆರೆಯಾಯ್ತು ಕಲಾವಿದನ ಕೊನೆಯ ಕ್ಷಣ

Amith Shah
ದೇಶ42 mins ago

Amit Shah: ತೆಲಂಗಾಣದಲ್ಲಿ ಗೃಹಸಚಿವ ಅಮಿತ್ ಶಾ ವಿರುದ್ಧ FIR ದಾಖಲು

Porbandar Tour
ಪ್ರವಾಸ47 mins ago

Porbandar Tour: ಪೋರ್ ಬಂದರಿನಲ್ಲಿ ನೋಡಲೇಬೇಕಾದ ಅದ್ಭುತ ಸ್ಥಳಗಳಿವು

hd revanna prajwal revanna case
ಪ್ರಮುಖ ಸುದ್ದಿ1 hour ago

Prajwal Revanna Case: ಕಾಣದಂತೆ ಮಾಯವಾದ ಎಚ್‌ಡಿ ರೇವಣ್ಣ ! ಇಂದು ಜಾಮೀನು ಸಿಗದೇ ಹೋದರೆ….

Cocoa Price
ಕೃಷಿ1 hour ago

Cocoa Price: ಅಡಿಕೆ ಮರದೆತ್ತರಕ್ಕೆ ಕೋಕೋ ಬೆಳೆಯ ಧಾರಣೆ! 800% ಏರಿಕೆ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ6 hours ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ19 hours ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ1 day ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ2 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ2 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ4 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20245 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20245 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ5 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20246 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

ಟ್ರೆಂಡಿಂಗ್‌