KUWJ Award: ವಿಸ್ತಾರ ನ್ಯೂಸ್‌ನ ಹರೀಶ್ ನಾಗರಾಜುಗೆ ಅತ್ಯುತ್ತಮ ನಿರೂಪಕ ಪ್ರಶಸ್ತಿ ಪ್ರದಾನ - Vistara News

ಕರ್ನಾಟಕ

KUWJ Award: ವಿಸ್ತಾರ ನ್ಯೂಸ್‌ನ ಹರೀಶ್ ನಾಗರಾಜುಗೆ ಅತ್ಯುತ್ತಮ ನಿರೂಪಕ ಪ್ರಶಸ್ತಿ ಪ್ರದಾನ

KUWJ Award: ದಾವಣಗೆರೆಯಲ್ಲಿ ನಡೆದ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನದಲ್ಲಿ ವಿಸ್ತಾರ ನ್ಯೂಸ್‌ನ ಅಸೋಸಿಯೇಟ್‌ ಎಕ್ಸಿಕ್ಯುಟಿವ್‌ ಎಡಿಟರ್‌ ಹರೀಶ್ ನಾಗರಾಜು ಅವರಿಗೆ ವಿದ್ಯುನ್ಮಾನ ಮಾಧ್ಯಮ ವಿಭಾಗದಲ್ಲಿ ಅತ್ಯುತ್ತಮ ನಿರೂಪಕ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

VISTARANEWS.COM


on

Harish Nagaraju
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ದಾವಣಗೆರೆ: ಪತ್ರಿಕಾ ರಂಗದಲ್ಲಿ ಸಾಧನೆ ಮಾಡಿದ ಸಾಧಕರಿಗೆ ನಗರದಲ್ಲಿ ಭಾನುವಾರ ನಡೆದ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನದ ಸಮಾರೋಪ ಸಮಅರಂಭದಲ್ಲಿ ವಿವಿಧ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ವೇಳೆ ಮಾಧ್ಯಮ ಕ್ಷೇತ್ರದಲ್ಲಿ ಸತತ 28 ವರ್ಷಗಳ ಸೇವೆ ಪರಿಗಣಿಸಿ ವಿಸ್ತಾರ ನ್ಯೂಸ್‌ನ ಅಸೋಸಿಯೇಟ್‌ ಎಕ್ಸಿಕ್ಯುಟಿವ್‌ ಎಡಿಟರ್‌ ಹರೀಶ್ ನಾಗರಾಜ್ ಅವರಿಗೆ ವಿದ್ಯುನ್ಮಾನ ಮಾಧ್ಯಮ ವಿಭಾಗದಲ್ಲಿ ಅತ್ಯುತ್ತಮ ನಿರೂಪಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ಅಧ್ಯಕ್ಷ ಶಿವಾನಂದ ತಗಡೂರು ಅವರು ಹರೀಶ್ ನಾಗರಾಜ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಇದೇ ವೇಳೆ ವಿವಿಧ ಪತ್ರಕರ್ತರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಇದನ್ನೂ ಓದಿ | Award Ceremony: ಸಾಧಕರಿಗೆ ಬಸವ ರಾಷ್ಟ್ರೀಯ ಪುರಸ್ಕಾರ ಸೇರಿ ವಿವಿಧ ಪ್ರಶಸ್ತಿ ಪ್ರದಾನ ಮಾಡಿದ ಸಿಎಂ

ಪ್ರಶಸ್ತಿ ಪುರಸ್ಕೃತರ ವಿವರ ಹೀಗಿದೆ…

  1. 1.ಜಿ. ನಾರಾಯಣಸ್ವಾಮಿ ಪ್ರಶಸ್ತಿ: (ಅತ್ಯುತ್ತಮ ಗ್ರಾಮಾಂತರ ವರದಿಗಾಗಿ) ಸಣ್ಣವಂಡ ಕಿಶೋರ್ ನಾಚಪ್ಪ, ಮಡಿಕೇರಿ ಹಾಗೂ ಸಂಶುದ್ದೀನ್ ಕೆ.ಎಣ್ಣೂರು, ವಾರ್ತಾಭಾರತಿ, ಮಂಗಳೂರು
  2. 2.ಪಟೇಲ್ ಭೈರಹನುಮಯ್ಯ ಪ್ರಶಸ್ತಿ: (ಅತ್ಯುತ್ತಮ ಮಾನವೀಯ ವರದಿಗೆ) ಸಿ.ಎನ್.ಶಿವಶಂಕರ, ದೂರದರ್ಶನ ವರದಿಗಾರ, ಕೋಲಾರ ಹಾಗೂ ಎಂ.ಎನ್.ಯೋಗೇಶ್, ಪ್ರಜಾವಾಣಿ, ಮಂಡ್ಯ
  3. 3.ಗಿರಿಧರ್ ಪ್ರಶಸ್ತಿ: (ಅತ್ಯುತ್ತಮ ತನಿಖಾ ವರದಿಗೆ) ಡಿ.ಉಮೇಶ್ ನಾಯ್ಕ, ವಿಜಯವಾಣಿ, ತರೀಕೆರೆ ಹಾಗೂ ಎಲ್.ದೇವರಾಜ್, ವಿಜಯ ಕರ್ನಾಟಕ
  4. 4.ಬಿ. ಎಸ್. ವೆಂಕಟರಾಂ ಪ್ರಶಸ್ತಿ: (ಅತ್ಯುತ್ತಮ ಸ್ಕೂಪ್ ವರದಿಗೆ) ಚಂದ್ರಹಾಸ ಹಿರೇಮಳಲಿ, ಪ್ರಜಾವಾಣಿ, ಬೆಂಗಳೂರು ಹಾಗೂ ಎಸ್.ಶ್ರೀಧರ, ವಿಜಯ ಕರ್ನಾಟಕ, ರಾಮನಗರ
  5. 5.ಕೆ. ಎ. ನೆಟ್ಟಕಲಪ್ಪ ಪ್ರಶಸ್ತಿ: (ಅತ್ಯುತ್ತಮ ಕ್ರೀಡಾ ವರದಿಗೆ) ಮಂಜುನಾಥ, ಜಾದಗೆರೆ, ವಿಜಯ ಕರ್ನಾಟಕ, ಬೆಂಗಳೂರು ಹಾಗೂ ಇಬ್ರಾಹೀಂ ಖಲೀಲ್ ಬನ್ನೂರು, ವಾರ್ತಾಭಾರತಿ
  6. 6.ಖಾದ್ರಿ ಶಾಮಣ್ಣ ಪ್ರಶಸ್ತಿ: (ಅತ್ಯುತ್ತಮ ರಾಜಕೀಯ ವಿಮರ್ಶೆ) ಶಶಿಧರ ಹೆಗಡೆ, ನಂದಿಕಲ್, ವಿಜಯ ಕರ್ನಾಟಕ ಹಾಗೂ ಡಿ.ಎಚ್.ಸುಖೇಶ್, ಪಬ್ಲಿಕ್ ಟಿವಿ
  7. 7.ಮಂಗಳ ಎಂ.ಸಿ.ವರ್ಗಿಸ್ ಪ್ರಶಸ್ತಿ: (ವಾರ ಪತ್ರಿಕೆ ವಿಭಾಗ) ಕಾರಂತ ಪೆರಾಜೆ, ಅಡಿಕೆ ಪತ್ರಿಕೆ, ಪುತ್ತೂರು ರಾಘವೇಂದ್ರ ತೊಗರ್ಸಿ, ಸುಧಾ
  8. 8.ಬಂಡಾಪುರ ಮುನಿರಾಜು ಸ್ಮಾರಕ ಪ್ರಶಸ್ತಿ: (ಅತ್ಯುತ್ತಮ ಸುದ್ದಿ ಛಾಯಾಚಿತ್ರಕ್ಕೆ) ಕೆ.ಆರ್. ಯೋಗೀಶ, ಜನಮಿತ್ರ, ಕಡೂರು ತಾಜುದ್ದೀನ್ ಅಜಾದ್, ಡೆಕ್ಕನ್ ಹೆರಾಲ್ಡ್, ಕಲಬುರುಗಿ
  9. 9.ಅತ್ಯುತ್ತಮ ಪೋಟೋಗ್ರಫಿ: ಪಿ.ಕೆ.ಬಡಿಗೇರ, ಬೆಳಗಾವಿ ಹಾಗೂ ನಟರಾಜ್, ಹಾಸನ ಮತ್ತು ಅನುರಾಗ್ ಬಸವರಾಜು, ಮೈಸೂರು
  10. 10.ಆರ್.ಎಲ್.ವಾಸುದೇವರಾವ್ ಪ್ರಶಸ್ತಿ: (ಅರಣ್ಯ ಕುರಿತ ಅತ್ಯುತ್ತಮ ಲೇಖನಕ್ಕೆ) ಪ್ರಕಾಶ್ ಎಸ್.ಶೇಟ್, ವಿಜಯವಾಣಿ, ಹುಬ್ಬಳ್ಳಿ ಹಾಗೂ ಅಮರೇಶ ದೇವದುರ್ಗ, ರಾಯಚೂರು.
  11. 11.ಆರ್.ಎಲ್.ವಾಸುದೇವರಾವ್ ಪ್ರಶಸ್ತಿ: (ವನ್ಯಪ್ರಾಣಿಗಳ ಕುರಿತ ಅತ್ಯುತ್ತಮ ಲೇಖನಕ್ಕೆ) ಅಖಿಲೇಶ್ ಚಿಪ್ಪಲಿ, ಪ್ರಜಾವಾಣಿ, ಶಿವಮೊಗ್ಗ
  12. 12.ಬಿ.ಜಿ.ತಿಮ್ಮಪ್ಪಯ್ಯ ಪ್ರಶಸ್ತಿ: (ಆರ್ಥಿಕ ದುರ್ಬಲ ವರ್ಗದವರ ಕುರಿತ ಅತ್ಯುತ್ತಮ ವರದಿಗೆ) ಶಶಿಕಾಂತ್ ಎಸ್.ಶಂಬಳ್ಳಿ, ಪ್ರಜಾವಾಣಿ ಹಾಗೂ ಬೀದರ್ ಪ್ರಕಾಶ್ ಬಾಳಕ್ಕನವರ್, ಪ್ರಜಾವಾಣಿ, ಬಾಗಲಕೋಟೆ
  13. 13.ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ: (ಗ್ರಾಮೀಣ ಜನ-ಜೀವನದ ಅತ್ಯುತ್ತಮ ವರದಿಗೆ) ಪಿ.ಶಾಂತಕುಮಾರ್, ಕನ್ನಡ ಪ್ರಭ, ಅರಸೀಕೆರೆ ಹಾಗೂ ಹೆಚ್.ಕೆ.ರಾಘವೇಂದ್ರ, ಕೋಲಾರ ಪತ್ರಿಕೆ, ಕೋಲಾರ
  14. 14.ನಾಡಪ್ರಭು ಕೆಂಪೇಗೌಡ ಸ್ಮಾರಕ ಪ್ರಶಸ್ತಿ: ನಂಜುಂಡಪ್ಪ, ದೂರದರ್ಶನ ಮತ್ತು ಆಕಾಶವಾಣಿ, ತೃಪ್ತಿ ಕುಂಬ್ರಗೋಡು, ಉದಯವಾಣಿ ಎಚ್.ಆರ್.ಅಶ್ವಿನಿ, ವಿಜಯವಾಣಿ, ಬೆಂಗಳೂರು.
  15. 15. ಯಜಮಾನ್ ಟಿ. ನಾರಾಯಣಪ್ಪ ಸ್ಮಾರಕ ಪ್ರಶಸ್ತಿ: ( ಅತ್ಯುತ್ತಮ ಕೃಷಿ ವರದಿ) ಬರಗೂರು ವಿರೂಪಾಕ್ಷಪ್ಪ, ಪ್ರಜಾಪ್ರಗತಿ, ಶಿರಾ, ತುಮಕೂರು ಜಿಲ್ಲೆ ಮಾಳಿಂಗರಾಯ ಪೂಜಾರ, ಲಕ್ಷ್ಮೀಶ್ವರ, ಗದಗ
  16. 16. ನಾಡಿಗೇರ ಕೃಷ್ಣರಾಯರ ಪ್ರಶಸ್ತಿ: ರಂಜಿತ್ ಅಶ್ವತ್, ವಿಶ್ವವಾಣಿ, ಎನ್. ರಾಘವೇಂದ್ರ, ಸಂಪಾದಕರು, ವಿನೋದ ಪತ್ರಿಕೆ
  17. 17.ಅತ್ಯುತ್ತಮ ಪುಟ ವಿನ್ಯಾಸ (ಡೆಸ್ಕ್) ಜಿ.ಎಂ.ಕೊಟ್ರೇಶ್, ಕನ್ನಡ ಪ್ರಭ ಹೆಚ್.ಕೆ.ರವೀಂದ್ರನಾಥ ಹೊನ್ನೂರು
  18. 18.ನ್ಯಾಯಾಲಯದ (ಕೋರ್ಟ್ ಬೀಟ್) ಅತ್ಯುತ್ತಮ ವರದಿ: ಎಸ್.ಶ್ಯಾಮ್ ಪ್ರಸಾದ್, ಪಿಟಿಐ, ಬೆಂಗಳೂರು
  19. 19.ಸುಣ್ಣವಂಡ ಶ್ರೀನಿವಾಸ ಚಂಗಪ್ಪ ಪ್ರಶಸ್ತಿ: (ಅತ್ಯುತ್ತಮ ಸೇನಾ ವರದಿಗೆ) ಅನುಕಾರ್ಯಪ್ಪ, ರಿಪಬ್ಲಿಕ್ ಕನ್ನಡ ಟಿವಿ, ಕೊಡಗು ಜಿಲ್ಲೆ
  20. 20.ಕೆ.ಎನ್.ಸುಬ್ರಮಣ್ಯ ಪ್ರಶಸ್ತಿ (ಇಂಗ್ಲೀಷ್ ಪತ್ರಿಕೆಯಲ್ಲಿ ಪ್ರಕಟವಾದ ವರದಿ) ಪವನ್ ಕುಮಾರ್ ಹೆಚ್, ಡೆಕ್ಕನ್ ಹೆರಾಲ್ಡ್, ಉತ್ತರ ಕನ್ನಡ ಅಕ್ಷಯ ಪಿ.ವಿ., ಸ್ಟಾರ್ ಆಫ್ ಮೈಸೂರು, ಕೊಡಗು
  21. 21.ಟಿ.ಕೆ.ಮಲಗೊಂಡ ಪ್ರಶಸ್ತಿ (ಅತ್ಯುತ್ತಮ ತನಿಖಾ ವರದಿ) ಸಿದ್ದು ಆರ್.ಜಿ.ಹಳ್ಳಿ, ಹಾವೇರಿ, ಪ್ರಜಾವಾಣಿ ಶಶಿಕಾಂತ್ ಮೆಂಡೇಗಾರ, ಬಿಜಾಪುರ.
  22. 22.ಅಪ್ಪಾಜಿಗೌಡ ಸಿನಿಮಾ ಪ್ರಶಸ್ತಿ-ಚಲನಚಿತ್ರ ವರದಿಗೆ) ಅರುಣ್ ಕುಮಾರ, ಬೆಂಗಳೂರು ಬಬಿತಾ ಎಸ್. ವಿಜಯ ಕರ್ನಾಟಕ
  23. 23.ತಗಡೂರು ಕಮಲಮ್ಮ ವೀರೇಗೌಡ ಪ್ರಶಸ್ತಿ: ಬಿ.ಸಿ.ಚನ್ನೇಗೌಡ, ಚನ್ನರಾಯಪಟ್ಟಣ ಗುರುರಾಜ್ ಕುಲಕರ್ಣಿ, ಸಂಯುಕ್ತ ಕರ್ನಾಟಕ, ಬೀದರ್
  24. 24. ಬದರೀನಾಥ್ ಹೊಂಬಾಳೆ ಪ್ರಶಸ್ತಿ: ಕೆ.ಎನ್.ಪುಟ್ಟಲಿಂಗಯ್ಯ, ಸಂಪಾದಕರು, ಉದಯಕಾಲ ವೆಂಕಟೇಶ್ ಬಿ. ಇಮ್ರಾಪುರ, ಹೊಸ ದಿಗಂತ, ಗದಗ
  25. 25. ಅಭಿಮಾನಿ ಪ್ರಕಾಶನ ಪ್ರಶಸ್ತಿ: ವಿರೂಪಾಕ್ಷ ಕೆ. ಕವಟಗಿ, ವಿಜಯ ಕರ್ನಾಟಕ, ಚಿಕ್ಕೋಡಿ ಶಿವರಾಜ್ ಕೆಂಭಾವಿ, ಉದಯವಾಣಿ, ಲಿಂಗಸೂಗೂರು
  26. 26. ಗುಡಿಹಳ್ಳಿ ನಾಗರಾಜ್ ಪ್ರಶಸ್ತಿ: ಎಂ.ಎನ್.ಅಹೋಬಳಪತಿ, ವಿಜಯ ಕರ್ನಾಟಕ, ಚಿತ್ರದುರ್ಗ ಶ್ರೀಧರ್ ನಾಯಕ್, ಹಿರಿಯ ಪತ್ರಕರ್ತರು
  27. 27. ರವಿ ಬೆಳಗೆರೆ ಪ್ರಶಸ್ತಿ: ಟಿ. ಗುರುರಾಜ್, ಸಂಪಾದಕರು, ಹಲೋ ಮೈಸೂರು ಜಗದೀಶ್ ಬೆಳ್ಳಿಯಪ್ಪ, ಟಿವಿ-9
  28. 28.ಅತ್ಯುತ್ತಮ ತನಿಖಾ ವರದಿ: ನ್ಯೂಸ್ ಫಸ್ಟ್, ಬೆಂಗಳೂರು (ಅಂಗನವಾಡಿಗಳಿಗೆ ಮೊಟ್ಟೆ ಸರಬರಾಜು ಹಗರಣ)

ಇದನ್ನೂ ಓದಿ | Raja Marga Column: ಅಡ್ವಾಣಿ ರಥಯಾತ್ರೆ; ರಾಮಜನ್ಮಭೂಮಿ ಹೋರಾಟದ ಮಹತ್ತರ ಮೈಲುಗಲ್ಲು

ವಿದ್ಯುನ್ಮಾನ ಮಾಧ್ಯಮ ವಿಭಾಗ: ಹರೀಶ್ ನಾಗರಾಜು, ವಿಸ್ತಾರ ಟಿವಿ, ನವಿತಾ ಜೈನ್, ನ್ಯೂಸ್ 18, ರಾಚಪ್ಪ ಜೀ ಟಿವಿ ಹಾಗೂ ದಶರಥ, ಟಿವಿ-5, ಮನೋಜ್ ಕುಮಾರ್, ಪವರ್ ಟಿವಿ ಸೇರಿ ಮೋಹನ್ ರಾಜ್, ಕ್ಯಾಮರಾಮೆನ್ ಸುವರ್ಣ ಟಿವಿ ಲಭಿಸಿದೆ.

ಕೆಯುಡಬ್ಲೂಜೆ ವಿಶೇಷ ಪ್ರಶಸ್ತಿ

ನಿರ್ಮಲ ಎಲಿಗಾರ್ ಬೆಂಗಳೂರು ಹಾಗೂ ಪಿ.ಬಿ.ಹರೀಶ್ ರೈ ಮಂಗಳೂರು, ಪ್ರಕಾಶ್ ಮಸ್ಕಿ ರಾಯಚೂರು, ಕೆ.ಎಸ್.ಭಾಸ್ಕರ ಶೆಟ್ಟಿ ಬೆಂಗಳೂರು, ರಾಧಾಕೃಷ್ಣ ಭಟ್ ಭಟ್ಕಳ, ಉತ್ತರ ಕನ್ನಡ, ವೆಂಕಟೇಶ್ ಮೂರ್ತಿ ಕಲಬುರ್ಗಿ ಹಾಗೂ ಅರವಿಂದ ನಾವಡ, ಉಡುಪಿ ರಾಜಶೇಖರ ಜೋಗಿನ್ಮನೆ ರಮೇಶ್ ಪಾಳ್ಯ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

ಚಿತ್ರದುರ್ಗ

ಡಿ. ಸುಧಾಕರ್‌ ನಿಧನ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟ: ಸಿಎಂ ಸಿದ್ದರಾಮಯ್ಯ

VISTARANEWS.COM


on

ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಡಿ. ಸುಧಾಕರ್‌ ಅವರ ಅಗಲಿಕೆಯಿಂದ ರಾಜ್ಯ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟ ಉಂಟಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿ. ಸುಧಾಕರ್‌ ಅವರ ನಿವಾಸದಲ್ಲಿ ಅಂತಿಮ ದರ್ಶನ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, “ಸುಧಾಕರ್‌ ಅವರು ಜನಪರ ನಾಯಕನಾಗಿ ಗುರುತಿಸಿಕೊಂಡಿದ್ದರು. ಅವರ ನಿಧನದಿಂದ ರಾಜ್ಯಕ್ಕೆ ಅಪಾರ ನಷ್ಟವಾಗಿದೆ” ಎಂದು ಹೇಳಿದರು.

ಸುಧಾಕರ್‌ ಅವರು ಪತ್ನಿ, ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧುಗಳು ಹಾಗೂ ಅಭಿಮಾನಿಗಳನ್ನು ಅಗಲಿದ್ದಾರೆ. “ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ” ಎಂದು ಸಿಎಂ ಪ್ರಾರ್ಥಿಸಿದರು.

ಡಿ. ಸುಧಾಕರ್‌ ಅವರು ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು. ಅವರ ನಿಧನ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ಮೂರು ದಿನಗಳ ಶೋಕಾಚರಣೆ ಘೋಷಿಸಲಾಗಿದ್ದು, ಸೋಮವಾರ ಸರ್ಕಾರಿ ರಜೆ ಘೋಷಿಸಲಾಗಿದೆ.

ನಾಳೆ ಸಂಜೆ 4 ಗಂಟೆಗೆ ಚಳ್ಳಕೆರೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ.

Continue Reading

ಕರ್ನಾಟಕ

ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್‌, ಮತದಾನ ಯಾವತ್ತು ಗೊತ್ತಾ?

VISTARANEWS.COM


on

ಬೆಂಗಳೂರು: ಜಿಬಿಎ ಚುನಾವಣೆ ದಿನಾಂಕ ನಿಗದಿಗೆ ದಿನಗಣನೆ ಆರಂಭವಾಗಿದೆ. ಈ ಸಂಬಂಧ ರಾಜ್ಯ ಚುನಾವಣಾ ಆಯೋಗ ಮಹತ್ವದ ಸಭೆ ನಡೆಸಿದೆ. ಸಭೆ ಬಳಿಕ ಮಾತಾಡಿದ ರಾಜ್ಯ ಚುನಾವಣಾ ಆಯೋಗದ ಆಯಕ್ತ ಸಂಗ್ರೇಶಿ, ʼʼಚುನಾವಣೆಯ ಎಲ್ಲಾ ಪ್ರಕ್ರಿಯೆ ಮುಗಿಸಲಾಗಿದೆ. ಕೇವಲ ದಿನಾಂಕ ನಿಗದಿ ಮಾತ್ರ ಬಾಕಿ ಉಳಿದಿದೆ. ಶಾಲೆ, ಕಾಲೇಜು, ವಿಧಾನಸಭಾ ಅಧಿವೇಶನ ಇತ್ಯಾದಿ ಗಮನದಲ್ಲಿಟ್ಟುಕೊಂಡು ಡೇಟ್‌ ಫಿಕ್ಸ್‌ ಮಾಡಬೇಕು. ಜೂನ್‌ ೩೦ರ ಒಳಗಾಗಿ ಚುನಾವಣೆ ಮುಗಿಸುವಂತೆ ಸುಪ್ರೀಂ ಕೋರ್ಟ್‌ ಹೇಳಿದೆ. ಜೂನ್‌ ೧೪ರಿಂದ ಜೂನ್‌ ೨೪ರ ಒಳಗೆ ಒಂದು ಡೇಟ್‌ ಹೇಳಿದ್ದೇವೆ. ಕೆಲವೇ ದಿನಗಳಲ್ಲಿ ಅಂತಿಮ ದಿನಾಂಕ ಘೋಷಣೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಚುನಾವಣೆ ಮುಂದೂಡುವ ಅಧಿಕಾರ ರಾಜ್ಯ ಚುನಾವಣಾ ಆಯೋಗಕ್ಕೆ ಇಲ್ಲ, ಅದು ಸುಪ್ರೀಂ ಕೋರ್ಟ್‌ ಪರಮಾಧಿಕಾರ ಎಂದು ಸಂಗ್ರೇಶಿ ಹೇಳಿದ್ದಾರೆ.

Continue Reading

Latest

ದಾವಣಗೆರೆ ದಕ್ಷಿಣ ʼಕೈʼ ವಶ, ಸಮರ್ಥ್‌ಗೆ ವಿಜಯಮಾಲೆ

VISTARANEWS.COM


on

ಕಾಂಗ್ರೆಸ್‌ ಪಕ್ಷಕ್ಕೆ ಪ್ರತಿಷ್ಠೆಯ ಕಣವಾಗಿದ್ದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌‌‌ ಅಭ್ಯರ್ಥಿ ಸಮರ್ಥ್​ ಮಲ್ಲಿಕಾರ್ಜುನ್‌‌‌‌‌‌ ವಿಜಯ ಪತಾಕೆ ಹಾರಿಸಿದ್ದಾರೆ. ದಿವಂಗತ ಶಾಮನೂರು ಶಿವಶಂಕರಪ್ಪ ಮೊಮ್ಮಗ ಹಾಗೂ ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ್‌, ಸಂಸದೆ ಪ್ರಭಾ ಮಲ್ಲಿಕಾರ್ಜುನ್‌ ಅವರ ಪುತ್ರ ಸಮರ್ಥ್‌ ಉಪಸಮರದಲ್ಲಿ ಗೆದ್ದು ಬೀಗಿದ್ದಾರೆ. ಇವರಿಗೆ ಪ್ರಬಲ ಪೈಪೋಟಿ ನೀಡಿದ್ದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸ ಕರಿಯಪ್ಪ ಸೋಲನುಭವಿಸಿದ್ದಾರೆ. ಕಾಂಗ್ರೆಸ್‌ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಕ್ಷೇತ್ರಕ್ಕೆ ಏ.9ರಂದು ಉಪಚುನಾವಣೆ ನಡೆದಿತ್ತು.

Continue Reading

Latest

ಬಾಗಲಕೋಟೆಯಲ್ಲಿ ಕಾಂಗ್ರೆಸ್‌‌‌ನ ಉಮೇಶ್‌ ಮೇಟಿ ಭರ್ಜರಿ ಗೆಲುವು

VISTARANEWS.COM


on

ಬಾಗಲಕೋಟೆ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಉಮೇಶ್‌‌ ಮೇಟಿ ಗೆಲುವು ಸಾಧಿಸಿದ್ದಾರೆ. 21,866 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಮಠ ವಿರುದ್ಧ ಕಾಂಗ್ರೆಸ್‌‌ನ ಉಮೇಶ್‌ ಮೇಟಿ ಗೆಲುವು ಪಡೆದಿದ್ದಾರೆ. ಉಮೇಶ್‌ ಮೇಟಿ 97,941 ಮತಗಳನ್ನು ಪಡೆದಿದ್ರೆ, ವೀರಣ್ಣ ಚರಂತಿಮಠ 76,075 ಮತಗಳನ್ನು ಪಡೆದುಕೊಂಡಿದ್ದರು. ಬಾಗಲಕೋಟೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದೆ. ಉಮೇಶ್‌‌ ಮೇಟಿಯವರ ತಂದೆ ಹೆಚ್‌.ವೈ.ಮೇಟಿ ಯವರ ನಿಧನದಿಂದ ತೆರವಾಗಿದ್ದ ಕ್ಷೇತ್ರವನ್ನು ತನ್ನಲ್ಲೇ ಉಳಿಸಿಕೊಳ್ಳುವಲ್ಲಿ ಕಾಂಗ್ರೆಸ್‌ ಪಕ್ಷ ಯಶಸ್ವಿಯಾಗಿದೆ.

Continue Reading
Advertisement
Latest1 hour ago

ಸಿಎಂ ಆದ ಮರುದಿನವೇ ಮಾಜಿ ಸಿಎಂ ಸ್ಟಾಲಿನ್‌ ಭೇಟಿಯಾದ ವಿಜಯ್‌

Latest1 day ago

ಪ್ರಧಾನಿ ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್‌ ಕಡ್ಡಿ ಪತ್ತೆ

ಚಿತ್ರದುರ್ಗ1 day ago

ಡಿ. ಸುಧಾಕರ್‌ ನಿಧನ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟ: ಸಿಎಂ ಸಿದ್ದರಾಮಯ್ಯ

Latest1 day ago

ಸಿಎಂ ವಿಜಯ್‌ ಮೊದಲ ಭಾಷಣ : “8 ಕೋಟಿ ಜನರೂ ನನ್ನವರೇ” ಎಂದ ವಿಜಯ್‌

Latest1 day ago

ತಮಿಳುನಾಡು ಸಿಎಂ ಆಗಿ ವಿಜಯ್‌ ಪದಗ್ರಹಣ

ಪ್ರಮುಖ ಸುದ್ದಿ2 days ago

ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ವಿಜಯ್‌ : ನಾಳೆಯೇ ಪ್ರಮಾಣವಚನ ಸಾಧ್ಯತೆ

Latest2 days ago

ರಾಜ್ಯಪಾಲರ ಭೇಟಿಗೆ ವಿಜಯ್‌ :ವಿಸಿಕೆ ಬೆಂಬಲ ಬಹುತೇಕ ಫೈನಲ್‌?

Latest2 days ago

ಪಶ್ಚಿಮ ಬಂಗಾಳ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪದಗ್ರಹಣ

Rakshit Shetty Richard Anthony Produce By Hombale
ದೇಶ3 days ago

ಸುವೇಂದು ಅಧಿಕಾರಿ ಪ.ಬಂಗಾಳದ ಹೊಸ ಸಿಎಂ, ಶನಿವಾರ ಪ್ರಮಾಣವಚನ

ಪ್ರಮುಖ ಸುದ್ದಿ3 days ago

ಹಡಗಿನಲ್ಲಿ ಹ್ಯಾಂಟವೈರಸ್‌ ದಾಂಗುಡಿ, ಕೊರೋನಾವನ್ನೂ ಮೀರಿಸುತ್ತಾ ಈ ಪಿಡುಗು?

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌