ಚಿಕ್ಕಬಳ್ಳಾಪುರ: ಜಿಲ್ಲೆಯ ಬಾಗೇಪಲ್ಲಿ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಶನಿವಾರ ವಿಸ್ತಾರ ಕನ್ನಡ ಸಂಭ್ರಮ (Vistara News Launch) ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರಿತು. ವಿಸ್ತಾರ ನ್ಯೂಸ್ ಚಾನೆಲ್ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮವನ್ನು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಉದ್ಘಾಟಿಸಿದರು.
ನಂತರ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಮಾತನಾಡಿ, ಯಾರನ್ನೂ ವೈಯಕ್ತಿಕವಾಗಿ ಗುರಿಯಾಗಿಸಿಕೊಂಡು ವರದಿ ಮಾಡಬಾರದು. ವಿಷಯದ ಬಗ್ಗೆ ಸತ್ಯಾಂಶ ತಿಳಿಯದೆ ಸುದ್ದಿಗಳನ್ನು ಪ್ರಸಾರ ಮಾಡಬಾರದು. ಗಡಿ ಭಾಗದ ತಾಲೂಕಿನಲ್ಲಿ ಸಾಕಷ್ಟು ಸಮಸ್ಯೆಗಳಿವೆ. ಅವುಗಳನ್ನು ಮಾಧ್ಯಮಗಳು, ಜನಪ್ರತಿನಿಧಿಗಳ ಗಮನಕ್ಕೆ ತಂದು ಚುರುಕು ಮುಟ್ಟಿಸುವ ಕೆಲಸವಾಗಬೇಕು. ಈ ನಿಟ್ಟಿನಲ್ಲಿ ವಿಸ್ತಾರ ನ್ಯೂಸ್ ಬಡವರು, ಶೋಷಿತರ ದನಿಯಾಗಿ ವಸ್ತುನಿಷ್ಠ ಸುದ್ದಿಗಳನ್ನು ಬಿತ್ತರ ಮಾಡುವ ಮೂಲಕ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಗಣ್ಯರನ್ನು ಸನ್ಮಾನಿಸಲಾಯಿತು. ನಗರಸಭೆ ಸದಸ್ಯರು, ತಾಲೂಕು ಮಟ್ಟದ ಅಧಿಕಾರಿಗಳು, ಕನ್ನಡಪರ, ದಲಿತಪರ ಹಾಗೂ ಪ್ರಗತಿಪರ ಹೋರಾಟಗಾರು ಹಾಗೂ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಹಾಜರಿದ್ದರು.
ಇದನ್ನೂ ಓದಿ | Vistara News Launch | ಮಾಧ್ಯಮಗಳು ಬದ್ಧತೆಯಿಂದ ಕಾರ್ಯನಿರ್ವಹಿಸಲಿ: ಕೆ.ಬಿ ಕೋಳಿವಾಡ ಕಿವಿಮಾತು