ಶಿಕ್ಷಣ ಪ್ರೇಮಿ ಹಾಲಾಡಿ ಶ್ರೀನಿವಾಸ ಶೆಟ್ಟಿ (ಶ್ರೀ ಎಚ್.ಎಸ್. ಶೆಟ್ಟಿ) ಅವರು ಉದ್ಯಮಿಯಾಗಿ ಬಹರೇನ್‌ಗೆ ಕಾಲಿಟ್ಟು, ಅಲ್ಲಿ ಕನ್ನಡದ ಡಮರುಗ ಬಾರಿಸಿ, ಕನ್ನಡಿಗರೆಲ್ಲ ಹೆಮ್ಮೆ ಪಡುವಂತೆ ಕನ್ನಡದ ಕೆಲಸ ಮಾಡುತ್ತಿದ್ದಾರೆ.
ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಹಾಲಾಡಿಯಲ್ಲಿ ಜನಿಸಿದ ಇವರು ಹೋಟೆಲ್ ಉದ್ಯಮಿಯಾಗಿ ಹೆಸರು ಮಾಡಿದ್ದಾರೆ. ಜತೆಗೆ ಬಟ್ಟೆ ಮತ್ತು ಖಾದ್ಯ ತೈಲ ವಹಿವಾಟು, ಕೃಷಿ ಸಂಬಂಧಿ ಉತ್ಪನ್ನಗಳ ಮಾರಾಟ, ವಿದ್ಯುತ್ ಉತ್ಪಾದನೆ… ಹೀಗೆ ಹಲವು ಕ್ಷೇತ್ರಗಳಲ್ಲಿ ಯಶಸ್ವೀ ಉದ್ಯಮಿ ಎನಿಸಿಕೊಂಡಿದ್ದಾರೆ. ಬಹರೇನ್ ಮಾತ್ರವಲ್ಲದೆ, ಬೆಂಗಳೂರು, ಮೈಸೂರು, ಮುಂಬಯಿಯನ್ನು ತಮ್ಮ ಕರ್ಮಭೂಮಿಯಾಗಿಸಿಕೊಂಡಿದ್ದಾರೆ.
ಮೈಸೂರು ಮರ್ಕೆಂಟೈಲ್ ಕಂಪನಿ ಲಿಮಿಟೆಡ್ ಸ್ಥಾಪಿಸಿ, ಕೃಷಿ ಉತ್ಪನ್ನಗಳನ್ನು ರಫ್ತು ಮಾಡುತ್ತಾ ರೈತರಿಗೆ ನೆರವಾಗುತ್ತಿರುವ ಇವರಿಗೆ ಆರು ಬಾರಿ ಬೆಸ್ಟ್ ಎಕ್ಸ್‌ಪೋರ್ಟ್ ಅವಾರ್ಡ್ ಲಭಿಸಿದೆ. ವಿದೇಶದಲ್ಲೂ ಕನ್ನಡ ಕಟ್ಟುವ ಕಾಯಕ ಮಾಡುತ್ತಿರುವ ಶ್ರೀ ಶ್ರೀನಿವಾಸ ಶೆಟ್ಟಿ ಅವರು, ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಸ್ಥಾಪಿಸಿ, ಸರ್ಕಾರಿ ಶಾಲೆ ಮತ್ತು ಆಸ್ಪತ್ರೆಗಳ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡುತ್ತಿದ್ದಾರೆ. ತಮ್ಮಲ್ಲಿನ ಸಂಪತ್ತನ್ನು ಸದ್ವಿನಿಯೋಗ ಮಾಡುತ್ತಿರುವ ಇವರಿಗೆ ʻಕಾಯಕ ಯೋಗಿʼ ಪ್ರಶಸ್ತಿ ನೀಡಿ ಗೌರವಿಸಲು ವಿಸ್ತಾರ ನ್ಯೂಸ್ ಹೆಮ್ಮೆಪಡುತ್ತಿದೆ.
ಇದನ್ನೂ ಓದಿ | Vistara News Launch | ಪ್ರಪಂಚ ಮುನ್ನಡೆಸುವ ಹೊಣೆಗಾರಿಕೆ ಮಾಧ್ಯಮ ಕ್ಷೇತ್ರಕ್ಕಿದೆ: ಮಾದಾರ ಚನ್ನಯ್ಯ ಶ್ರೀ