ಆನೇಕಲ್: ಬೆಂಗಳೂರು ಹೊರವಲಯದ ಆನೇಕಲ್ ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ (ಹಳೆಯ) ಮುನಿಶಾಮಪ್ಪ ಸ್ಮಾರಕ ಸಭಾಂಗಣದಲ್ಲಿ ʼವಿಸ್ತಾರ ಕನ್ನಡ ಸಂಭ್ರಮʼ (Vistara News Launch) ಸಡಗರ ಸಂಭ್ರಮದಿಂದ ನೆರವೇರಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ರಾಜಾಪುರ ಸಂಸ್ಥಾನ ಮಠದ ಶ್ರೀ ಡಾ.ರಾಜೇಶ್ವರ ಶಿವಾಚಾರ್ಯ ಸ್ವಾಮೀಜಿ ಉದ್ಘಾಟಿಸಿದರು.
ಡಾ.ರಾಜೇಶ್ವರ ಶಿವಾಚಾರ್ಯ ಸ್ವಾಮೀಜಿ ಆಶೀರ್ವಚನ ನೀಡಿ, ರಾಜ್ಯ, ದೇಶ, ವಿದೇಶಗಳ ಸುದ್ದಿಗಳನ್ನು ಜನರಿಗೆ ತಲುಪಿಸುವಲ್ಲಿ ಮುದ್ರಣ ಮಾಧ್ಯಮ ಹಾಗೂ ದೃಶ್ಯ ಮಾಧ್ಯಮಗಳು ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತಿವೆ. ಬಡವರು ಹಾಗೂ ನೊಂದವರ ದನಿಯಾಗಿ ವಿಸ್ತಾರ ನ್ಯೂಸ್ ಚಾನೆಲ್ ಕೆಲಸ ಮಾಡುವಂತಾಗಲಿ. ಸಮಾಜದ ಒಳಿತಿಗಾಗಿ ಹಿರಿಯ ಪತ್ರಕರ್ತ ಹರಿಪ್ರಕಾಶ್ ಕೋಣೆಮನೆ ನೇತೃತ್ವದ ವಿಸ್ತಾರ ನ್ಯೂಸ್ ಕಾರ್ಯನಿರ್ವಹಿಸುವ ಮೂಲಕ ಬಹು ಎತ್ತರಕ್ಕೆ ಬೆಳೆಯಲಿ ಎಂದು ಶುಭ ಹಾರೈಸಿದರು.
ಇದನ್ನೂ ಓದಿ | Vistara News Launch | ನಿಖರ ಸುದ್ದಿಗಳ ಪ್ರಸಾರಕ್ಕೆ ವಿಸ್ತಾರ ಗಮನಹರಿಸಲಿ: ಶಾಸಕ ಎಚ್.ಹಾಲಪ್ಪ ಹರತಾಳು
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಆನೇಕಲ್ ಪುರಸಭಾ ಅಧ್ಯಕ್ಷ ಎನ್.ಎಸ್. ಪದ್ಮನಾಭ ಮಾತನಾಡಿ, ವಿಸ್ತಾರ ನ್ಯೂಸ್ ಚಾನೆಲ್ ಲೋಕಾರ್ಪಣೆಗೊಂಡು ಅತ್ಯುತ್ತಮವಾಗಿ ಮೂಡಿಬರುತ್ತಿದ್ದು, ಸಮಾಜದಲ್ಲಿನ ಸಮಸ್ಯೆಗಳ ಬಗ್ಗೆ ಸುದ್ದಿ ಮಾಡುವುದರ ಜತೆಗೆ ಆ ಸಮಸ್ಯೆಗಳಿಗೆ ಪರಿಹಾರ ಹುಡುಕಿ ಬಗೆಹರಿಸುವ ಜನಪರ ಕೆಲಸವನ್ನು ವಿಸ್ತಾರ ನ್ಯೂಸ್ ಚಾನೆಲ್ ಮಾಡುತ್ತಿರುವುದು ಶ್ಲಾಘನೀಯ ಎಂದರು.
ಬಿಜೆಪಿ ಮುಖಂಡ ಹುಲ್ಲಹಳ್ಳಿ ಶ್ರೀನಿವಾಸ್ ಮಾತನಾಡಿ, ವಿಸ್ತಾರ ನ್ಯೂಸ್ ಚಾನೆಲ್ ಹೆಸರಿನಂತೆಯೇ ಅತ್ಯಾಧುನಿಕ ತಂತ್ರಜ್ಞಾನ ಹಾಗೂ ತಂಡದೊಂದಿಗೆ ಲೋಕಾರ್ಪಣೆಗೊಂಡ ಕೆಲ ದಿನಗಳಲ್ಲಿಯೇ ಮನೆ ಮಾತಾಗುತ್ತಿದೆ. ನ್ಯೂಸ್ ಚಾನೆಲ್‌ಗಳನ್ನು ನೋಡುವ ವೀಕ್ಷಕರಿಗೆ ಜನಪರವಾದ ನ್ಯೂಸ್ ಜತೆಗೆ ಸದಭಿರುಚಿಯ ಕಾರ್ಯಕ್ರಮಗಳನ್ನು ನೀಡಲು ಹರಿಪ್ರಕಾಶ್ ಕೋಣೆಮನೆ ಸಾರಥ್ಯದ ವಿಸ್ತಾರ ನ್ಯೂಸ್ ತಂಡ ಮುಂದಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಬಿಜೆಪಿ ಮುಖಂಡ ಟಿ.ವಿ.ಬಾಬು ಮಾತನಾಡಿ, ಹಿರಿಯ ಪತ್ರಕರ್ತ ಹರಿಪ್ರಕಾಶ್ ಕೋಣೆಮನೆ ಅವರ ಸಾರಥ್ಯದಲ್ಲಿ ವಿಸ್ತಾರ ಚಾನೆಲ್ ಮೂಡಿಬರುತ್ತಿದೆ. ಸಮಾಜದ ಶೋಷಿತರ ಹಾಗೂ ತುಳಿತಕ್ಕೆ ಒಳಗಾದವರ ಪರವಾಗಿ ದನಿ ಎತ್ತುವ ಕೆಲಸ ಮಾಧ್ಯಮಗಳು ಮಾಡಬೇಕಿದೆ. ಈ ನಿಟ್ಟಿನಲ್ಲಿ ವಿಸ್ತಾರ ಕೆಲಸವನ್ನು ಮಾಡುತ್ತದೆ ಎನ್ನುವ ಭರವಸೆ ಇದೆ ಎಂದು ಹೇಳಿ ಶುಭ ಹಾರೈಸಿದರು.
ಕಾಪರ್ಧಿನಿ ಕಲಾ ಕೇಂದ್ರದ ವಿದುಷಿ ಮಂಜುಳಾಬಾಯಿ ತಂಡದಿಂದ ಭರತನಾಟ್ಯ ಹಾಗೂ ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ನಿರೂಪಣೆಯನ್ನು ಆನೇಕಲ್ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಆದೂರು ಪ್ರಕಾಶ್ ನಡೆಸಿಕೊಟ್ಟರು.
ಆನೇಕಲ್ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ಚಂದ್ರಪ್ಪ, ತಾಲೂಕು ಆರೋಗ್ಯಾಧಿಕಾರಿ ರವಿ, ಬಿಜೆಪಿ ಮುಖಂಡರಾದ ಆನೇಕಲ್ ಪುರಸಭಾ ಸದಸ್ಯ ರಾಜೇದ್ರ ಪ್ರಸಾದ್ ಬಾಬು, ಕರ್ಪೂರು ಗ್ರಾಮ ಪಂಚಾಯಿತಿ ಸದಸ್ಯ ತಿಮ್ಮರಾಜು, ಮಹಿಳಾ ಹೋರಾಟಗಾರ್ತಿ ಮಮತಾ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ಶಿವಣ್ಣ, ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಚಂದ್ರಶೇಖರ್, ಹಿರಿಯ ಪತ್ರಕರ್ತರಾದ ಸ್ವಾಮಿ, ನವೀನ್ ಚಂದ್ರಶೆಟ್ಟಿ ಸೇರಿ ಹಲವರು ಉಪಸ್ಥಿತರಿದ್ದರು.
ಇದನ್ನೂ ಓದಿ | Vistara News Launch | ಜನರ ಅಗತ್ಯಕ್ಕೆ ತಕ್ಕಂತೆ ವಿಸ್ತಾರ ಕೆಲಸ: ಸಿರುಗುಪ್ಪದ ಬಸವಭೂಷಣ ಸ್ವಾಮೀಜಿ