Site icon Vistara News

Vistara News Launch | ಅಂಕೋಲಾದಲ್ಲಿ ಅದ್ಧೂರಿ ವಿಸ್ತಾರ ಕನ್ನಡ ಸಂಭ್ರಮ

tulasi gowda

ಕಾರವಾರ: ಉತ್ತರಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ಮಂಗಳವಾರ (ನ.೮) ವಿಸ್ತಾರ ಕನ್ನಡ ಸಂಭ್ರಮ ಕಾರ್ಯಕ್ರಮವು (Vistara News Launch) ಅದ್ಧೂರಿಯಾಗಿ ನೆರವೇರಿತು.

ಪಟ್ಟಣದ ಕೆಎಲ್ಇ ಸಂಸ್ಥೆಯ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮವನ್ನು ವೃಕ್ಷಮಾತೆ, ಪದ್ಮಶ್ರೀ ಪುರಸ್ಕೃತೆ ತುಳಸಿ ಗೌಡ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.

ಈ ವೇಳೆ ಮಾತನಾಡಿದ ತುಳಸಿ ಗೌಡ, ಪರಿಸರವನ್ನು ಉಳಿಸಿ ಬೆಳೆಸಬೇಕಾದದ್ದು ನಮ್ಮೆಲ್ಲರ ಜವಾಬ್ದಾರಿ. ನಾನೂ ಸಹ ಸಾವಿರಾರು ಗಿಡಗಳನ್ನು ನೆಟ್ಟು ಪೋಷಣೆ ಮಾಡಿದ್ದು, ಎಲ್ಲರೂ ಸಹ ಗಿಡಗಳನ್ನು ನೆಡಿ. ನೂತನ ಮಾಧ್ಯಮವಾಗಿ ಚಾಲನೆ ಪಡೆದುಕೊಂಡಿರುವ ವಿಸ್ತಾರ ನ್ಯೂಸ್‌ಗೆ ಶುಭವಾಗಲಿ ಎಂದು ತುಂಬು ಮನಸ್ಸಿನಿಂದ ಹಾರೈಸಿದರು.

ಮಾಜಿ ಶಾಸಕ ಸತೀಶ್ ಸೈಲ್ ಅಧ್ಯಕ್ಷತೆ ವಹಿಸಿ ಮಾತನಾಡಿ, ನಮ್ಮ ಜಿಲ್ಲೆಯವರೇ ಆದ ಹರಿಪ್ರಕಾಶ್ ಕೋಣೆಮನೆ ಅವರು ಜವಾಬ್ದಾರಿ ವಹಿಸಿಕೊಂಡು ನೂತನ ಚಾನೆಲ್ ಆರಂಭಿಸಿದ್ದು, ಅದು ಮುಂದಿನ ದಿನಗಳಲ್ಲಿ ವಿಸ್ತಾರವಾಗಿ ಬೆಳೆಯಲಿ. ಈಗಾಗಲೇ ವೆಬ್‌ಸೈಟ್, ಫೇಸ್‌ಬುಕ್‌, ಯೂಟ್ಯೂಬ್‌ನಂತಹ ಸಾಮಾಜಿಕ ಜಾಲತಾಣಗಳ ಮೂಲಕ ವಿವಿಧ ವಿಚಾರಗಳನ್ನು ಇಟ್ಟುಕೊಂಡು ಜನರ ಮುಂದೆ ಬಂದಿದ್ದಾರೆ. ಜಿಲ್ಲೆಯ ಪ್ರತಿಯೊಬ್ಬರನ್ನೂ ತಲುಪಬೇಕು ಎನ್ನುವ ಉದ್ದೇಶದಿಂದ ಪ್ರತಿ ತಾಲೂಕುಗಳಲ್ಲೂ ಕಾರ್ಯಕ್ರಮವನ್ನು ಮಾಡುವ ಮೂಲಕ ಜನರೊಂದಿಗೆ ಸಂಭ್ರಮ ಹಂಚಿಕೊಳ್ಳಲು ಮುಂದಾಗಿರುವುದು ಸಂತಸದ ವಿಷಯ ಎಂದು ವಿಸ್ತಾರ ನ್ಯೂಸ್‌ನ ಧ್ಯೇಯೋದ್ದೇಶಗಳ ಕುರಿತು ಶ್ಲಾಘನೆ ವ್ಯಕ್ತಪಡಿಸಿದರು.

ವಿಸ್ತಾರ ಜಿಲ್ಲಾ ವರದಿಗಾರ ಸಂದೀಪ ಸಾಗರ, ಅರೆಕಾಲಿಕ ವರದಿಗಾರ ಅರುಣ್ ಶೆಟ್ಟಿ, ಕಾಲೇಜಿನ ವಿದ್ಯಾರ್ಥಿಗಳು, ವಿದ್ಯಾರ್ಥಿನಿಯರು ಭಾಗಿಯಾಗಿದ್ದರು. ಆಗಮಿಸಿದ್ದ ಗಣ್ಯರಿಗೆ ಶ್ರೀಗಂಧದ ಗಿಡಗಳನ್ನು ನೀಡುವ ಮೂಲಕ ಅರ್ಥಪೂರ್ಣವಾಗಿ ಕಾರ್ಯಕ್ರಮವನ್ನು ಆಚರಿಸಲಾಯಿತು.

ಇದನ್ನೂ ಓದಿ | Vistara News Launch | ಗಣಿನಾಡಿನಲ್ಲಿ ವಿಸ್ತಾರ ನ್ಯೂಸ್‌ ಚಾನೆಲ್‌ ಚಾಲನೆ ಸಂಭ್ರಮ

Exit mobile version