Site icon Vistara News

Vistara News Launch | ಸಮಾಜದ ಅಂಕು ಡೊಂಕು ತಿದ್ದುವ ಹೊಣೆ ಮಾಧ್ಯಮಗಳ ಮೇಲಿದೆ: ಮಸಾಲಾ ಜಯರಾಮ್

Vistara News Launch

ತುಮಕೂರು: ಜಿಲ್ಲೆಯ ತುರುವೇಕೆರೆ ಕನ್ನಡ ಭವನದ ಸಭಾಂಗಣದಲ್ಲಿ ವಿಸ್ತಾರ ಕನ್ನಡ ಸಂಭ್ರಮ ಕಾರ್ಯಕ್ರಮ ಸೋಮವಾರ ಅದ್ಧೂರಿಯಾಗಿ ನಡೆಯಿತು. ವಿಸ್ತಾರ ನ್ಯೂಸ್‌ (Vistara News Launch) ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮವನ್ನು ತುರುವೇಕೆರೆ ಶಾಸಕ ಮಸಾಲಾ ಜಯರಾಮ್ ಹಾಗೂ ಗಣ್ಯರು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದರು.

ನಂತರ ಶಾಸಕ ಮಸಾಲಾ ಜಯರಾಮ್ ಮಾತನಾಡಿ, ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಜವಾಬ್ದಾರಿ ಮಾಧ್ಯಮಗಳ ಮೇಲಿದೆ. ಯಾವುದೇ ಪ್ರಕರಣ ಇರಲಿ, ಮಾಧ್ಯಮಗಳು ನಮ್ಮ ಪೊಲೀಸರಿಗಿಂತ ವೇಗವಾಗಿ ಕೆಲಸ ಮಾಡುತ್ತಿವೆ. ಪ್ರಕರಣದ ಜಾಡು ಹಿಡಿದು ತನಿಖೆ ನಡೆಸಿ ಜನರಿಗೆ ಮಾಹಿತಿಯನ್ನು ನೀಡುತ್ತಿವೆ. ಸರ್ಕಾರ ಮತ್ತು ಸರ್ಕಾರದ ಪ್ರತಿನಿಧಿಗಳನ್ನು ಬಡಿದೆಬ್ಬಿಸಿ ಕೆಲಸ ಮಾಡುವಂತೆ ಮಾಡುತ್ತಿವೆ. ವಿಸ್ತಾರ ನ್ಯೂಸ್ ಕೂಡ ಆ ನಿಟ್ಟಿನಲ್ಲಿ ಕೆಲಸ ಶುರು ಮಾಡಿದೆ. ವಿಸ್ತಾರ ವಾಹಿನಿ ನಾಡಿನ ಸಂಸ್ಕೃತಿ ಮತ್ತು ಭಾಷೆಯನ್ನು ಉಳಿಸುವ ನಿಟ್ಟಿನಲ್ಲಿ ಕೆಲಸ ಮಾಡಲಿ. ಹಿರಿಯ ಪತ್ರಕರ್ತರಾದ ಹರಿಪ್ರಕಾಶ್ ಕೋಣೆಮನೆ ಅವರ ನೇತೃತ್ವದಲ್ಲಿ ಆರಂಭವಾಗಿರುವ ನೂತನ ವಿಸ್ತಾರ ವಾಹಿನಿಗೆ ಹೃತ್ಪೂರ್ವಕ ಶುಭಾಶಯಗಳನ್ನು ಕೋರುತ್ತೇನೆ ಎಂದರು.

ಇದನ್ನೂ ಓದಿ | Vistara News Launch | ನಿಖರ ಸುದ್ದಿಗಳ ಪ್ರಸಾರಕ್ಕೆ ವಿಸ್ತಾರ ಗಮನಹರಿಸಲಿ: ಶಾಸಕ ಎಚ್.ಹಾಲಪ್ಪ ಹರತಾಳು

ಮುಖ್ಯ ಅತಿಥಿ ತುರುವೇಕೆರೆ ತಹಸೀಲ್ದಾರ್ ವೈ.ಎಂ.ರೇಣುಕುಮಾರ್ ಮಾತನಾಡಿ, ಸದ್ಯ ರಾಜ್ಯದಲ್ಲಿ ಸಾಕಷ್ಟು ಚಾನೆಲ್‌ಗಳಿವೆ. ಆದರೆ ಅವುಗಳಲ್ಲಿ ಕೆಲವನ್ನು ಮಾತ್ರ ನಾವು ಕ್ವಾಲಿಟಿ ಚಾನೆಲ್ ಎಂದು ಆಯ್ಕೆ ಮಾಡುತ್ತೇವೆ. ವಿಸ್ತಾರ ನ್ಯೂಸ್ ಈ ರೀತಿಯ ಗುಣಮಟ್ಟದ ಚಾನೆಲ್ ಆಗಿ ಹೊರಹೊಮ್ಮಲಿ ಎಂದು ಆಶಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕದ ಅಧ್ಯಕ್ಷ ಡಿ.ಪಿ.ರಾಜು ಮಾತನಾಡಿ, ವಿಸ್ತಾರ ವಾಹಿನಿ ಜನರಲ್ಲಿ ವೈಚಾರಿಕತೆ ಬೆಳೆಸುವ ಕಾರ್ಯಕ್ರಮಗಳನ್ನು ಹೆಚ್ಚಾಗಿ ಮಾಡಬೇಕು. ಜತೆಗೆ ಭಾರತ ಕೃಷಿ ಪ್ರಧಾನ ರಾಷ್ಟ್ರವಾಗಿರುವುದರಿಂದ ಕೃಷಿ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹೆಚ್ಚು ಪ್ರಸಾರ ಮಾಡಬೇಕು ಎಂದು ಸಲಹೆ ನೀಡಿದರು.

ಇನ್ನು ಕಾರ್ಯಕ್ರಮದಲ್ಲಿ ಕನ್ನಡ ಗೀತೆಗಳ ಗಾಯನ ಮತ್ತು ರಂಗಗೀತೆಗಳ ಗಾಯನದಂತಹ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಜತೆಗೆ ರಂಗ ಕಲಾವಿದರನ್ನು ಗೌರವಿಸಲಾಯಿತು. ತಾಲೂಕು ಪಂಚಾಯಿತಿ ಇಒ ಸತೀಶ್ ಕುಮಾರ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ನಂ.ರಾಜು, ತಾಲೂಕು ಕಲಾವಿದರ ಒಕ್ಕೂಟದ ಅಧ್ಯಕ್ಷ ಟಿ.ಎಸ್.ಬೋರೇಗೌಡ, ಕ.ಸಾ.ಪ ನಗರ ಘಟಕದ ಅಧ್ಯಕ್ಷ ವಿ.ಎನ್.ನಂಜೇಗೌಡ ಉಪಸ್ಥಿತರಿದ್ದರು.

ರಂಗಗೀತೆ ಹಾಡಿ ರಂಜಿಸಿದ ಶಾಸಕ ಮಸಾಲಾ ಜಯರಾಮ್
ಕಾರ್ಯಕ್ರಮದಲ್ಲಿ ಶಾಸಕ ಮಸಾಲಾ ಜಯರಾಮ್ ಹಾಡು ಹಾಡಿ ಚಪ್ಪಾಳೆ ಗಿಟ್ಟಿಸಿದರು. ಉತ್ತಮ ಬ್ಯುಸಿನೆಸ್ ಮ್ಯಾನ್ ಆಗಿ, ಸದ್ಯ ರಾಜಕಾರಣಿಯೂ ಆಗಿ ಸೈ ಎನಿಸಿಕೊಂಡಿರುವ ಮಸಾಲಾ ಜಯರಾಮ್, ಕಲಾವಿದರಾಗಿಯೂ ತಮ್ಮ ಪ್ರತಿಭೆಯನ್ನು ಹೊರಹಾಕಿದರು. ರಂಗಗೀತೆ ಹಾಡಿ ಕಾರ್ಯಕ್ರಮದಲ್ಲಿ ಸೇರಿದ್ದ ಸಾರ್ವಜನಿಕರನ್ನು ರಂಜಿಸಿದರು.

ಇದನ್ನೂ ಓದಿ | Vistara News Launch | ಜನರ ಅಗತ್ಯಕ್ಕೆ ತಕ್ಕಂತೆ ವಿಸ್ತಾರ ಕೆಲಸ: ಸಿರುಗುಪ್ಪದ ಬಸವಭೂಷಣ ಸ್ವಾಮೀಜಿ

Exit mobile version