ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ದೊರೆಯಬೇಕೆಂದು ಗ್ರಾಮೀಣ ಪ್ರದೇಶವನ್ನೇ ತಮ್ಮ ಕಾರ್ಯಕ್ಷೇತ್ರವನ್ನಾಗಿಸಿಕೊಂಡವರು ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ವಿದ್ಯಾನಿಕೇತನ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ನೆಕ್ಕಂಟಿ ಸೂರಿಬಾಬು.
ವಿದ್ಯಾನಿಕೇತನ ಎಂಬ ಶಿಕ್ಷಣ ಸಂಸ್ಥೆಯನ್ನು ಸ್ಥಾಪಿಸಿ ಅಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಸಿಗುವಂತೆ ಮಾಡಿದವರು. ಶಿಕ್ಷಣದ ವಿಷಯದಲ್ಲಿ ಹಳ್ಳಿಯ ಮಕ್ಕಳೂ ಪೇಟೆಯ ಮಕ್ಕಳಿಗೆ ಸಡ್ಡು ಹೊಡೆಯುವಂತೆ ಮಾಡಿದ್ದಾರೆ. ಪ್ರತಿ ವರ್ಷ ಬಡ ಪ್ರತಿಭಾವಂತ 100 ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ಸೌಲಭ್ಯವನ್ನು ಕಲ್ಪಿಸಿ, ಬಡವರೂ ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳುತ್ತಿದ್ದಾರೆ. ಗ್ರಾಮೀಣ ಭಾಗದಲ್ಲಿ ಶಿಕ್ಷಣದ ಕ್ರಾಂತಿಯ ಜತೆ ಜತೆಗೆ ಅನೇಕ ಸಾಮಾಜಿಕ ಕಾರ್ಯದಲ್ಲಿಯೂ ತಮ್ಮನ್ನು ತೊಡಗಿಸಿಕೊಂಡಿರುವ ಶ್ರೀಯುತರು ಅತಿ ಹಿಂದುಳಿದ ಪ್ರದೇಶ ಎಂದು ನಿರ್ಲಕ್ಷ್ಯಕ್ಕೆ ಒಳಪಟ್ಟ ಈ ಭಾಗದಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಿ ಹೊಸ ಭರವಸೆ ಮೂಡಿಸಿದ್ದಾರೆ.
ಇದನ್ನೂ ಓದಿ | ಸಾಧನೆಗೆ ನಿರಂತರ ಪ್ರಯತ್ನ, ಛಲ ಅಗತ್ಯ: ಶಿಕ್ಷಣ ತಜ್ಞ ಡಾ ಎಚ್ ಎಸ್ ನಾಗರಾಜ
ವ್ಯಾಪಾರ, ರಿಯಲ್ ಎಸ್ಟೇಟ್ ವ್ಯವಹಾರದ ಮೂಲಕ ತಮ್ಮ ಸೇವಾ ವ್ಯಾಪ್ತಿ ಹೆಚ್ಚಿಸಿಕೊಂಡಿದ್ದಾರೆ. ರಾಜ್ಯ ಮಟ್ಟದ ಹಲವಾರು ಪ್ರಶಸ್ತಿಗಳಿಗೆ ಪಾತ್ರರಾಗಿರುವ ನೆಕ್ಕಂಟಿ ಸೂರಿಬಾಬು ಗ್ರಾಮೀಣ ಕರ್ನಾಟಕಕ್ಕೆ ಹೊಸ ಭರವಸೆ. ಇವರಿಗೆ ʻಕಾಯಕ ಯೋಗಿʼ ಪ್ರಶಸ್ತಿ ನೀಡಿ ಗೌರವಿಸಲು ವಿಸ್ತಾರ ನ್ಯೂಸ್ ಹೆಮ್ಮೆಪಡುತ್ತಿದೆ.
ಇದನ್ನೂ ಓದಿ | ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರತಿನಿತ್ಯ ಧ್ಯಾನ ಮಾಡಿಸಲು ಶಿಕ್ಷಣ ಸಚಿವರ ಸೂಚನೆ