ಮೈಸೂರು: ಜಿಲ್ಲೆಯ ಪಿರಿಯಾಪಟ್ಟಣ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ವಿಸ್ತಾರ ಕನ್ನಡ ಸಂಭ್ರಮ (Vistara News Launch) ಮಂಗಳವಾರ ಅದ್ಧೂರಿಯಾಗಿ ನೆರವೇರಿತು. ವಿಸ್ತಾರ ನ್ಯೂಸ್ ಚಾನಲ್ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮವನ್ನು ಮೈಸೂರು-ಚಾಮರಾಜನಗರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಪಿ.ಎಂ.ಪ್ರಸನ್ನ ಉದ್ಘಾಟಿಸಿದರು.
ನಂತರ ಪಿ.ಎಂ.ಪ್ರಸನ್ನ ಮಾತನಾಡಿ, ಮಾಧ್ಯಮಗಳು ಸಮಾಜವನ್ನು ಕಾಯುವ ಕೆಲಸ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಸಮಾಜದಲ್ಲಿ ರಾಜಕಾರಣಿ ಸೇರಿ ಯಾವುದೇ ವ್ಯಕ್ತಿಯಾಗಲಿ ತಪ್ಪು ಮಾಡಬೇಕೆಂದರೆ ಹಿಂದೆ ಮುಂದೆ ನೋಡುತ್ತಾರೆ. ಹೀಗಾಗಿ ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಮಾಧ್ಯಮ ರಂಗಕ್ಕೆ ತನ್ನದೇ ಆದ ಮಹತ್ವವಿದೆ. ತಾಲೂಕಿನಲ್ಲಿ ಪತ್ರಕರ್ತರು ಬಹಳ ಬದ್ಧತೆ ಹಾಗೂ ನಿಷ್ಠೆಯಿಂದ ಕೆಲಸ ಮಾಡುತ್ತಿರುವುದು ಕಂಡುಬಂದಿದೆ. ಹೊಸದಾಗಿ ಆರಂಭವಾಗಿರುವ ವಿಸ್ತಾರ ನ್ಯೂಸ್ ಮುಂದಿನ ದಿನಗಳಲ್ಲಿ ಮನೆಮಾತಾಗಲಿ, ಯಶಸ್ಸು ಸಾಧಿಸಲಿ ಎಂದು ಶುಭ ಹಾರೈಸಿದರು.
ಮಾಜಿ ಶಾಸಕ ಎಚ್.ಸಿ.ಬಸವರಾಜಪ್ಪ, ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯ ಕುಮಾರ್, ಬಿಜೆಪಿ ಮುಖಂಡ ಕೌಲನಹಳ್ಳಿ ಸೋಮಶೇಖರ್, ಎಂಡಿಸಿಸಿ ಬ್ಯಾಂಕ್ ನಿರ್ದೇಶಕ ರವಿ, ತಹಸೀಲ್ದಾರ್ ಚಂದ್ರಮೌಳಿ, ಬಿಇಒ ಬಸವರಾಜು, ಜೆಡಿಎಸ್ ತಾಲೂಕು ಅಧ್ಯಕ್ಷ ಅಣ್ಣಯ್ಯಶೆಟ್ಟಿ, ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಅಧ್ಯಕ್ಷ ನವೀನ್, ಮಕ್ಕಳ ಮತ್ತು ಮಹಿಳಾ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ಮಮತಾ, ತಾಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷ ಗುರುನಾಥ್, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸತೀಶ್ ಆರಾಧ್ಯ ಸೇರಿದಂತೆ ಅನೇಕರು ಭಾಗವಹಿಸಿದ್ದರು. ಪಿರಿಯಾಪಟ್ಟಣದ ನಾಗರಿಕರು ಹಾಗೂ ಪತ್ರಕರ್ತರು ವಿಸ್ತಾರ ನ್ಯೂಸ್ಗೆ ಶುಭ ಹಾರೈಸಿದರು.
ಇದನ್ನೂ ಓದಿ | Vistara News Launch | ಮಾಧ್ಯಮಗಳಿಂದ ಸಮಾಜ ತಿದ್ದುವ ಕೆಲಸವಾಗಲಿ: ಬನ್ನಾಡಿ ಸೋಮನಾಥ ಹೆಗ್ಡೆ