ಚಿಕ್ಕಬಳ್ಳಾಪುರ: ಜಿಲ್ಲೆಯ ಗೌರಿಬಿದನೂರು ನಗರದ ವೀರಾಂಡಹಳ್ಳಿಯಲ್ಲಿರುವ ಸಮತಾ ಪ್ರೌಢಶಾಲೆಯಲ್ಲಿ ಭಾನುವಾರ ವಿಸ್ತಾರ ಕನ್ನಡ ಸಂಭ್ರಮ (Vistara News Launch) ಅದ್ಧೂರಿಯಾಗಿ ನೆರವೇರಿತು. ವಿಸ್ತಾರ ನ್ಯೂಸ್ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮವನ್ನು ಶಾಸಕ ಎನ್.ಎಚ್.ಶಿವಶಂಕರರೆಡ್ಡಿ ಉದ್ಘಾಟಿಸಿದರು.
ನಂತರ ಶಾಸಕ ಎನ್.ಎಚ್.ಶಿವಶಂಕರರೆಡ್ಡಿ ಮಾತನಾಡಿ, ಗಡಿ ತಾಲೂಕಿನಲ್ಲಿ ಹಲವು ಸಮಸ್ಯೆಗಳಿದ್ದು, ಅವುಗಳ ಬಗ್ಗೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಗಮನಕ್ಕೆ ತರುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು. ಈ ನಿಟ್ಟಿನಲ್ಲಿ ವಿಸ್ತಾರ ನ್ಯೂಸ್ ಕಾರ್ಯನಿರ್ವಹಿಸುತ್ತದೆ ಎಂಬ ಭರವಸೆ ಇದೆ ಎಂದ ಅವರು, ನೂತನವಾಗಿ ಆರಂಭವಾಗಿರುವ ವಿಸ್ತಾರ ನ್ಯೂಸ್ ಉತ್ತಮವಾಗಿ ಬೆಳೆಯಲಿ ಎಂದು ಶುಭ ಹಾರೈಸಿದರು.
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ನರಸಿಂಹ ಮೂರ್ತಿ, ನಗರಸಭೆ ಅಧ್ಯಕ್ಷ, ಸದಸ್ಯರು, ರೈತಪರ, ಕನ್ನಡಪರ ಹೋರಾಟಗಾರರು ಹಾಗೂ ವಿವಿಧ ಶಿಕ್ಷಕರು ಇದ್ದರು.
ಇದನ್ನೂ ಓದಿ | Vistara News Launch | ಮಾಧ್ಯಮಗಳು ಬದ್ಧತೆಯಿಂದ ಕಾರ್ಯನಿರ್ವಹಿಸಲಿ: ಕೆ.ಬಿ ಕೋಳಿವಾಡ ಕಿವಿಮಾತು