Vistara News Polling Booth: ಬೆಂಗಳೂರು ಸೆಂಟ್ರಲ್‌ನಲ್ಲಿ ಬಿಜೆಪಿ-ಕಾಂಗ್ರೆಸ್‌ ಮಧ್ಯೆ ನೆಕ್‌ ಟು ನೆಕ್‌ ಫೈಟ್‌! - Vistara News

ಕರ್ನಾಟಕ

Vistara News Polling Booth: ಬೆಂಗಳೂರು ಸೆಂಟ್ರಲ್‌ನಲ್ಲಿ ಬಿಜೆಪಿ-ಕಾಂಗ್ರೆಸ್‌ ಮಧ್ಯೆ ನೆಕ್‌ ಟು ನೆಕ್‌ ಫೈಟ್‌!

Vistara News Polling Booth: 2024ರ ‘ಲೋಕಸಮರ’ ವೇಳೆ ವಿಸ್ತಾರ ನ್ಯೂಸ್‌‌ ಮತಜಾಗೃತಿ ಅಭಿಯಾನಕ್ಕೆ ಭರ್ಜರಿ ಜನಬೆಂಬಲ ವ್ಯಕ್ತವಾಗುತ್ತಿದೆ. ‘ವಿಸ್ತಾರ ನ್ಯೂಸ್‌ ಪೋಲಿಂಗ್‌ ಬೂತ್‌’ಗೆ ಸಾವಿರಾರು ಮತದಾರರು ಕರೆ ಮಾಡಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದು, ತೀವ್ರ ಕುತೂಹಲ ಕೆರಳಿಸಿರುವ ಕ್ಷೇತ್ರದಲ್ಲಿ ಮತ್ತೊಮ್ಮೆ ಬಿಜೆಪಿಯೇ ಜನರ ಆಯ್ಕೆಯಾಗಿರುವುದು ಕಂಡುಬಂದಿದೆ.

VISTARANEWS.COM


on

Bjp-Congress face-to-neck fight in Bengaluru Central
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ದಿನಾಂಕ ಘೋಷಣೆಯಾದ ಹಿನ್ನೆಲೆಯಲ್ಲಿ ರಾಜ್ಯದೆಲ್ಲೆಡೆ ರಾಜಕೀಯ ಚಟುವಟಿಕೆಗಳು ಬಿರುಸು ಪಡೆದಿವೆ. ಈ ನಡುವೆ ಜನರ ನಾಡಿ ಮಿಡಿತ ಅರಿಯಲು ತೆರೆದಿರುವ ವಿಸ್ತಾರ ನ್ಯೂಸ್‌ ಪೋಲಿಂಗ್‌ ಬೂತ್‌ಗೆ ಭರ್ಜರಿ ಪ್ರತಿಕ್ರಿಯೆ ಸಿಗುತ್ತಿದ್ದು, ಬುಧವಾರ (ಮಾ.20) ಬೆಂಗಳೂರು ಸೆಂಟ್ರಲ್‌ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ನಡೆಸಿದ ಪೋಲಿಂಗ್‌ ಬೂತ್‌ ಸಮೀಕ್ಷೆಯಲ್ಲಿ (Vistara news polling booth) ಸಾವಿರಾರು ಮತದಾರರು, ಮುಂದಿನ ಸಂಸದರು ಯಾರಾಗಬೇಕು ಎಂಬ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಕ್ಷೇತ್ರದಿಂದ ಸಾವಿರಾರು ಕರೆಗಳು ಬಂದಿದ್ದು, ಇವುಗಳ ಪೈಕಿ ಒಟ್ಟು 5415 ಕರೆಗಳನ್ನು ಸ್ವೀಕರಿಸಲಾಗಿದೆ. ಇದರಲ್ಲಿ ಶೇ. 52ರಷ್ಟು ಮಂದಿ ಬಿಜೆಪಿಯನ್ನು ಬೆಂಬಲಿಸಿದ್ದರೆ, ಶೇ.48ರಷ್ಟು ಜನರು ಕಾಂಗ್ರೆಸ್‌ ಪರ ಒಲವು ತೋರಿದ್ದಾರೆ.

ವಿಸ್ತಾರ ಪೋಲಿಂಗ್‌ ಬೂತ್‌ನಲ್ಲಿ ಸಂಗ್ರಹಿಸಿದ ಜನಾಭಿಪ್ರಾಯದ ಪ್ರಕಾರ ಬೆಂಗಳೂರು ಸೆಂಟ್ರಲ್‌ ಕ್ಷೇತ್ರದಲ್ಲಿ ಬಿಜೆಪಿ-ಕಾಂಗ್ರೆಸ್ ನಡುವೆ ಕಠಿಣ ಬಿಜೆಪಿ-ಕಾಂಗ್ರೆಸ್ ಸ್ಪರ್ಧೆ ಏರ್ಪಟ್ಟಿದೆ. ಬಿಜೆಪಿಗೆ 2814 ಮತದಾರರು ಮತ ನೀಡಿದ್ದು, ಕಾಂಗ್ರೆಸ್‌ ಪಕ್ಷಕ್ಕೆ 2601 ಮತಗಳು ಬಂದಿವೆ. ಆದರೂ ಮತ್ತೊಮ್ಮೆ ಬಿಜೆಪಿ ಪರವೇ ಹೆಚ್ಚಿನ ಜನರು ಒಲವು ತೋರಿದ್ದಾರೆ.

ಇದನ್ನೂ ಓದಿ | Vistara News Polling Booth: ರಾಯಚೂರು ಲೋಕಸಭಾ ಕ್ಷೇತ್ರ ಮತ್ತೊಮ್ಮೆ ಕಮಲ ತೆಕ್ಕೆಗೆ!

ಕರೆಗಳ ಶೇಕಡಾವಾರು ವಿವರ

ಸ್ವೀಕರಿಸಿದ ಕರೆಗಳು: 5415
ಬಿಜೆಪಿ: 2814 (ಶೇ.52)
ಕಾಂಗ್ರೆಸ್: 2601 (ಶೇ.48)
ಇತರೆ: ೦0

ಕ್ಷೇತ್ರದಲ್ಲಿ ಹಾಲಿ ಸಂಸದ ಪಿ.ಸಿ.ಮೋಹನ್‌ ಅವರೇ ಈ ಬಾರಿಯೂ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ. ಇನ್ನು ಕಾಂಗ್ರೆಸ್‌ನಲ್ಲಿ ಎನ್‌.ಎ.ಹ್ಯಾರಿಸ್‌, ಎಸ್‌.ಎ.ಹುಸೇನ್‌, ಮನ್ಸೂರ್‌ ಅಲಿಖಾನ್‌, ನಜೀರ್‌ ಅಹ್ಮದ್‌ ಟಿಕೆಟ್‌ ಆಕಾಂಕ್ಷಿಗಳಾಗಿದ್ದಾರೆ.

2008ರಲ್ಲಿ ಕ್ಷೇತ್ರ ವಿಗಂಡಣೆಯಾದ ಬಳಿಕ ಉದಯವಾದ ಕ್ಷೇತ್ರಗಳಲ್ಲಿ ಬೆಂಗಳೂರು ಸೆಂಟ್ರಲ್‌ ಕೂಡ ಒಂದಾಗಿದೆ. ನಂತರ ನಡೆದ 2009, 2014, 2019 ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯದ್ದೇ ಇಲ್ಲಿ ಪಾರುಪತ್ಯ. ಸತತ ಮೂರು ಬಾರಿ ಪಿ.ಸಿ.ಮೋಹನ್ ಅವರು ವಿಜಯಭೇರಿ ಮೊಳಗಿಸಿದ್ದಾರೆ.

2009ರಲ್ಲಿ ಕಾಂಗ್ರೆಸ್‌ನಿಂದ ಎಚ್.ಟಿ.ಸಾಂಗ್ಲಿಯಾನ ಮತ್ತು ಜೆಡಿಎಸ್‌ನಿಂದ ಜಮೀರ್ ಅಹ್ಮದ್ ಖಾನ್, 2014ರಲ್ಲಿ ಕಾಂಗ್ರೆಸ್‌ನಿಂದ ರಿಜ್ವಾನ್ ಅರ್ಷದ್, 2019ರಲ್ಲಿ ಕಾಂಗ್ರೆಸ್‌ನಿಂದ ಮತ್ತೆ ರಿಜ್ವಾನ್ ಮತ್ತು ಪಕ್ಷೇತರರಾಗಿ ಚಿತ್ರನಟ ಪ್ರಕಾಶ್ ರಾಜ್ ಸ್ಪರ್ಧಿಸಿ ಸೋತಿದ್ದರು. 2014 ಮತ್ತು 2019ರ ಚುನಾವಣೆಯ ಗೆಲುವಿನ ಅಂತರ ತೀರಾ ಕಮ್ಮಿಯಾಗಿರುವುದು ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಗೆ ಎಚ್ಚರಿಕೆಯ ಗಂಟೆಯಾಗಿದೆ.

ಸದ್ಯ ಕ್ಷೇತ್ರದಲ್ಲಿನ 8 ವಿಧಾನಸಭಾ ಕ್ಷೇತ್ರದಲ್ಲಿ 5 ಕಡೆ ಕಾಂಗ್ರೆಸ್‌, 3 ಕಡೆ ಬಿಜೆಪಿ ಶಾಸಕರು ಇದ್ದಾರೆ. ಕ್ಷೇತ್ರದಲ್ಲಿ ಬಿಜೆಪಿಯ ಪಿ.ಸಿ.ಮೋಹನ್‌ ಅವರು ಮೂರು ಬಾರಿ ಸಂಸದರಾಗಿ ಆಯ್ಕೆಯಾದರೂ ಪೋಲಿಂಗ್‌ನಲ್ಲಿ ಶೇಕಡಾವಾರು ಮತಗಳು ಕಡಿಮೆ ಬಂದಿವೆ. ಕ್ಷೇತ್ರದಲ್ಲಿ 22,04,520 ಮತದಾರರು ಇದ್ದಾರೆ. ಜಾತಿವಾರು ಲೆಕ್ಕಾಚಾರ ನೋಡುವುದಾದರೆ ಎಸ್‌ಸಿ, ಎಸ್‌ಟಿ, ಒಬಿಸಿ ಮತಗಳು 8 ಲಕ್ಷಕ್ಕೂ ಅಧಿಕ ಇದ್ದು, ತಮಿಳರು 5 ಲಕ್ಷ, ಮುಸ್ಲಿಮರು 4.5 ಲಕ್ಷ ಮತದಾರರು ಇದ್ದಾರೆ. ಇನ್ನು ವಿಸ್ತಾರ ನ್ಯೂಸ್‌ ಪೋಲಿಂಗ್‌ ಪ್ರಕಾರ ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ ಈ ಬಾರಿ ಜಿದ್ದಾಜಿದ್ದಿ ಹೋರಾಟಕ್ಕೆ ಕ್ಷೇತ್ರ ಸಾಕ್ಷಿಯಾಗಲಿದೆ. ಆದರೆ ಬಿಜೆಪಿ ಪರವಾಗಿಯೇ ಹೆಚ್ಚಿನ ಜನರು ಒಲವು ತೋರಿರುವುದು ಕಂಡುಬಂದಿದೆ.

ಗುರುವಾರ ಯಾವ ಕ್ಷೇತ್ರ?

ಬೆಳಗ್ಗೆ 9ರಿಂದ ಮಧ್ಯಾಹ್ನ 1ರವರೆಗೆ ದಾವಣಗೆರೆ ಮತ್ತು ಮಧ್ಯಾಹ್ನ 2ರಿಂದ ಸಂಜೆ 6 ಗಂಟೆಯವರೆಗೆ ಬೀದರ್‌ ಕ್ಷೇತ್ರದ ಜನ ಫೋನ್‌ ಮಾಡಿ ಓಟ್‌ ಮಾಡಬಹುದು. ರಾತ್ರಿ 8 ಗಂಟೆಗೆ ಎರಡೂ ಕ್ಷೇತ್ರಗಳ ಫಲಿತಾಂಶ ಹೊರಬೀಳಲಿದೆ.

ಏನಿದು ಪೋಲಿಂಗ್‌ ಬೂತ್‌?

ಬೆಂಗಳೂರಿನಲ್ಲಿರುವ ವಿಸ್ತಾರ ನ್ಯೂಸ್‌ ಮುಖ್ಯ ಕಚೇರಿಯಲ್ಲಿ ತೆರೆಯಲಾಗಿರುವ ಪೋಲಿಂಗ್‌ ಬೂತ್‌ಗೆ ಸಾರ್ವಜನಿಕರು ನಿಗದಿತ ಸಮಯದಲ್ಲಿ ಪೋನ್‌ ಮಾಡುವ ಮೂಲಕ ತಮ್ಮ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಯಾರಾಗಬೇಕು, ಯಾವ ಪಕ್ಷ ಈ ಬಾರಿ ಗೆಲ್ಲಬೇಕು ಎಂದು ತಿಳಿಸಬಹುದು.

ಪೋಲಿಂಗ್‌ ಬೂತ್‌ನಲ್ಲಿ ಮಾಹಿತಿ ಸಂಗ್ರಹ ಹೇಗೆ?

ವಿಸ್ತಾರ ನ್ಯೂಸ್‌ ಪೋಲಿಂಗ್‌ ಬೂತ್‌ಗೆ ಒಂದೇ ದೂರವಾಣಿ ಸಂಖ್ಯೆಯನ್ನು ನೀಡಲಾಗಿದೆ. ಆದರೆ, ಈ ಒಂದೇ ದೂರವಾಣಿ ಸಂಖ್ಯೆ ಸುಮಾರು 20ಕ್ಕೂ ಅಧಿಕ ಫೋನ್‌ಗಳಿಗೆ ಕನೆಕ್ಟ್‌ ಆಗುತ್ತದೆ. ಏಕಕಾಲದಲ್ಲಿ 20ಕ್ಕೂ ಅಧಿಕ ಮಂದಿ ಕರೆಯನ್ನು ಸ್ವೀಕರಿಸಿ ಮಾಹಿತಿಯನ್ನು ಸಂಗ್ರಹ ಮಾಡಲಾಗುತ್ತದೆ. ಯಾರು ಅಭ್ಯರ್ಥಿಯಾಗಬೇಕು? ಯಾರು ಗೆಲ್ಲಬೇಕು? ಯಾರಿಗೆ ಮತ ಎಂಬಿತ್ಯಾದಿ ಮಾಹಿತಿಗಳನ್ನು ಈ ವೇಳೆ ದಾಖಲಿಸಿಕೊಳ್ಳಲಾಗುತ್ತದೆ. ಬಳಿಕ ಅವುಗಳನ್ನು ಸಮೀಕರಿಸಿ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ.

ಇದನ್ನೂ ಓದಿ | Vistara News Polling Booth: ಚಾಮರಾಜನಗರದಲ್ಲಿ ಬಿಜೆಪಿ-ಕಾಂಗ್ರೆಸ್ ನಡುವೆ ಟಫ್‌ ಫೈಟ್; ಯಾರಿಗೆಷ್ಟು ಮತ?

ಈಗಾಗಲೇ ಮಂಡ್ಯ, ಬೆಳಗಾವಿ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಬೆಂಗಳೂರು ಉತ್ತರ, ಬಳ್ಳಾರಿ ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರಗಳ ಸಮೀಕ್ಷೆ ಮುಕ್ತಾಯಗೊಂಡಿವೆ.

ನೀವು ಕರೆ ಮಾಡಬೇಕಾದ ದೂರವಾಣಿ ಸಂಖ್ಯೆ: 080-69554488

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ದುಬಾರೆಯಲ್ಲಿ ಆನೆಗಳ ಕಾದಾಟದ ವೇಳೆ ಮಹಿಳೆ ಸಾವು

VISTARANEWS.COM


on

ದುಬಾರೆ ಶಿಬಿರದಲ್ಲಿ ಆನೆಗಳ ಕಾದಾಟದ ವೇಳೆ ಪ್ರವಾಸಿ ಮಹಿಳೆ ಸಾವನ್ನಪ್ಪಿದ ದುರ್ಘಟನೆ ನಡೆದಿದೆ. ಚೆನ್ನೈ ಮೂಲದ ಜಿನ್ಶು (33) ಮೃತ ಮಹಿಳೆ ಎಂದು ಗುರುತಿಸಲಾಗಿದೆ.

ದುಬಾರೆ ಶಿಬಿರದಲ್ಲಿ ಆನೆಗಳನ್ನು ಕಾವೇರಿ ನದಿಯಲ್ಲಿ ಸ್ನಾನ ಮಾಡಿಸಲು ಕರೆದೊಯ್ಯಲಾಗಿತು. ಈ ವೇಳೆ ಮಾರ್ತಾಂಡ ಆನೆಗೆ ಕಂಜನ್ ಆನೆ ತಿವಿದ ಪರಿಣಾಮ, ನಿಯಂತ್ರಣ ತಪ್ಪಿದ ಆನೆ ಪ್ರವಾಸಿ ಮಹಿಳೆಯ ಮೇಲೆ ಬಿದ್ದಿದೆ ಎನ್ನಲಾಗಿದೆ.

ಆನೆ ಕೆಳಗೆ ಸಿಲುಕಿದ ಮಹಿಳೆ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಬಳಿಕ ಶಿಬಿರದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

Continue Reading

ಪ್ರಮುಖ ಸುದ್ದಿ

ಕರ್ನಾಟಕ ಸೇರಿ 16 ರಾಜ್ಯ, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌

VISTARANEWS.COM


on


ಕೇಂದ್ರ ಚುನಾವಣಾ ಆಯೋಗ 3 ನೇ ಹಂತದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ( ಎಸ್‌ಐಆರ್‌) ಘೋಷಣೆ ಮಾಡಿದೆ. ಇದರಲ್ಲಿ ಕರ್ನಾಟಕ ಸೇರಿದಂತೆ 16 ರಾಜ್ಯಗಳು ಮತ್ತು 3 ಕೇಂದ್ರಾಡಳಿತ ಪ್ರದೇಶಗಳು ಸೇರಿದ್ದು, ಮೇ 30ರಿಂದ ಎಸ್‌ಐಆರ್‌ ನಡೆಯಲಿದೆ.
ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ, ದೆಹಲಿ, ಹರಿಯಾಣ, ಪಂಜಾಬ್‌, ಚಂಡೀಗಢ, ಒಡಿಶಾ, ಮಿಜೋರಾಂ, ಸಿಕ್ಕಿಂ, ಮಣಿಪುರ, ಉತ್ತರಾಖಂಡ, ಅರುಣಾಚಲ ಪ್ರದೇಶ, ಮೇಘಾಲಯ, ಜಾರ್ಜಂಡ್‌, ನಾಗಾಲ್ಯಾಂಡ್‌, ತ್ರಿಪುರ, ದಾದರ್‌ ಮತ್ತು ನಗರ ಹವೇಲಿ, ದಮನ್‌ ಮತ್ತು ದಿಯುಗಳಲ್ಲಿ 3 ನೇ ಹಂತದಲ್ಲಿ ಎಸ್‌ಐಆರ್‌ ನಡೆಯಲಿದೆ.
3ನೇ ಹಂತದ ಎಸ್‌ಐಆರ್‌ನಲ್ಲಿ 3.94 ಲಕ್ಷಕ್ಕೂ ಅಧಿಕ ಬೂತ್‌ ಮಟ್ಟದ ಅಧಿಕಾರಿಗಳು 36.73ಕೋಟಿ ಮತದಾರರ ಮನೆಗಳಿಗೆ ತೆರಳಿ ಪರಿಶೀಲನೆ ನಡೆಸಲಿದ್ದಾರೆ.
ಈಗಾಗಲೇ ದೇಶದ 10 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌ ನಡೆಸಲಾಗಿದೆ. ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ತಮಿಳುನಾಡು, ರಾಜಸ್ಥಾನ, ಛತ್ತೀಸಗಢ, ಕೇರಳಂ, ಪುದುಚೇರಿ, ಅಂಡಮಾನ್‌ ಮತ್ತು ನಿಕೋಬಾರ್‌, ಲಕ್ಷದ್ವೀಪ, ಗುಜರಾತ್‌, ಮಧ್ಯಪ್ರದೇಶ, ಗೋವಾ ಮತ್ತು ಬಿಹಾರದಲ್ಲಿ ಈಗಾಗಲೇ ಎಸ್‌ಐಆರ್‌ ಕಾರ್ಯ ಮುಗಿದಿದೆ.
ಹಿಮಾಚಲ ಪ್ರದೇಶ, ಜಮ್ಮು ಕಾಶ್ಮೀರ ಹಾಗೂ ಲಡಾಖ್‌ನಲ್ಲಿ ಎಸ್‌ಐಆರ್‌ ಬಾಕಿ ಇದ್ದು, ಸ್ಥಳೀಯ ಹವಾಮಾನ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ವೇಳಾಪಟ್ಟಿ ಘೋಷಿಸುವುದಾಗಿ ಚುನಾವಣಾ ಆಯೋಗ ತಿಳಿಸಿದೆ.

Continue Reading

ಚಿತ್ರದುರ್ಗ

ಡಿ. ಸುಧಾಕರ್‌ ನಿಧನ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟ: ಸಿಎಂ ಸಿದ್ದರಾಮಯ್ಯ

VISTARANEWS.COM


on

ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಡಿ. ಸುಧಾಕರ್‌ ಅವರ ಅಗಲಿಕೆಯಿಂದ ರಾಜ್ಯ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟ ಉಂಟಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿ. ಸುಧಾಕರ್‌ ಅವರ ನಿವಾಸದಲ್ಲಿ ಅಂತಿಮ ದರ್ಶನ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, “ಸುಧಾಕರ್‌ ಅವರು ಜನಪರ ನಾಯಕನಾಗಿ ಗುರುತಿಸಿಕೊಂಡಿದ್ದರು. ಅವರ ನಿಧನದಿಂದ ರಾಜ್ಯಕ್ಕೆ ಅಪಾರ ನಷ್ಟವಾಗಿದೆ” ಎಂದು ಹೇಳಿದರು.

ಸುಧಾಕರ್‌ ಅವರು ಪತ್ನಿ, ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧುಗಳು ಹಾಗೂ ಅಭಿಮಾನಿಗಳನ್ನು ಅಗಲಿದ್ದಾರೆ. “ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ” ಎಂದು ಸಿಎಂ ಪ್ರಾರ್ಥಿಸಿದರು.

ಡಿ. ಸುಧಾಕರ್‌ ಅವರು ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು. ಅವರ ನಿಧನ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ಮೂರು ದಿನಗಳ ಶೋಕಾಚರಣೆ ಘೋಷಿಸಲಾಗಿದ್ದು, ಸೋಮವಾರ ಸರ್ಕಾರಿ ರಜೆ ಘೋಷಿಸಲಾಗಿದೆ.

ನಾಳೆ ಸಂಜೆ 4 ಗಂಟೆಗೆ ಚಳ್ಳಕೆರೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ.

Continue Reading

ಕರ್ನಾಟಕ

ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್‌, ಮತದಾನ ಯಾವತ್ತು ಗೊತ್ತಾ?

VISTARANEWS.COM


on

ಬೆಂಗಳೂರು: ಜಿಬಿಎ ಚುನಾವಣೆ ದಿನಾಂಕ ನಿಗದಿಗೆ ದಿನಗಣನೆ ಆರಂಭವಾಗಿದೆ. ಈ ಸಂಬಂಧ ರಾಜ್ಯ ಚುನಾವಣಾ ಆಯೋಗ ಮಹತ್ವದ ಸಭೆ ನಡೆಸಿದೆ. ಸಭೆ ಬಳಿಕ ಮಾತಾಡಿದ ರಾಜ್ಯ ಚುನಾವಣಾ ಆಯೋಗದ ಆಯಕ್ತ ಸಂಗ್ರೇಶಿ, ʼʼಚುನಾವಣೆಯ ಎಲ್ಲಾ ಪ್ರಕ್ರಿಯೆ ಮುಗಿಸಲಾಗಿದೆ. ಕೇವಲ ದಿನಾಂಕ ನಿಗದಿ ಮಾತ್ರ ಬಾಕಿ ಉಳಿದಿದೆ. ಶಾಲೆ, ಕಾಲೇಜು, ವಿಧಾನಸಭಾ ಅಧಿವೇಶನ ಇತ್ಯಾದಿ ಗಮನದಲ್ಲಿಟ್ಟುಕೊಂಡು ಡೇಟ್‌ ಫಿಕ್ಸ್‌ ಮಾಡಬೇಕು. ಜೂನ್‌ ೩೦ರ ಒಳಗಾಗಿ ಚುನಾವಣೆ ಮುಗಿಸುವಂತೆ ಸುಪ್ರೀಂ ಕೋರ್ಟ್‌ ಹೇಳಿದೆ. ಜೂನ್‌ ೧೪ರಿಂದ ಜೂನ್‌ ೨೪ರ ಒಳಗೆ ಒಂದು ಡೇಟ್‌ ಹೇಳಿದ್ದೇವೆ. ಕೆಲವೇ ದಿನಗಳಲ್ಲಿ ಅಂತಿಮ ದಿನಾಂಕ ಘೋಷಣೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಚುನಾವಣೆ ಮುಂದೂಡುವ ಅಧಿಕಾರ ರಾಜ್ಯ ಚುನಾವಣಾ ಆಯೋಗಕ್ಕೆ ಇಲ್ಲ, ಅದು ಸುಪ್ರೀಂ ಕೋರ್ಟ್‌ ಪರಮಾಧಿಕಾರ ಎಂದು ಸಂಗ್ರೇಶಿ ಹೇಳಿದ್ದಾರೆ.

Continue Reading
Advertisement
Latest18 hours ago

ಪತ್ನಿ, ಮಗನ ಪ್ರತ್ಯೇಕ ಭೇಟಿಗೆ ಅವಕಾಶ ಕೋರಿದ ದರ್ಶನ್‌

Latest19 hours ago

ದುಬಾರೆಯಲ್ಲಿ ಆನೆಗಳ ಕಾದಾಟದ ವೇಳೆ ಮಹಿಳೆ ಸಾವು

Latest22 hours ago

ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಭಾವುಕ ಪೋಸ್ಟ್‌

Latest23 hours ago

ಕೇರಳಂ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್‌ ಪ್ರದಗ್ರಹಣ

ಪ್ರಮುಖ ಸುದ್ದಿ2 days ago

ವಿಜಯ್‌ ಸಿಎಂ ಆಗಿದ್ದಕ್ಕೆ ನನಗೆ ಅಸೂಯೆ ಇಲ್ಲ – ರಜನೀಕಾಂತ್‌

Latest2 days ago

ಕೇರಳಂ ಮುಖ್ಯಮಂತ್ರಿಯಾಗಿ ನಾಳೆ ವಿ.ಡಿ. ಸತೀಶನ್ ಪ್ರಮಾಣವಚನ

Latest4 days ago

ಅಬುಧಾಬಿಯಲ್ಲಿ ಮೋದಿ: ಯುಎಇ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ

Latest4 days ago

ವಾಹನ ಸವಾರರಿಗೆ ಶಾಕ್! ಪೆಟ್ರೋಲ್, ಡೀಸೆಲ್ ತಲಾ ₹3 ಏರಿಕೆ.

Latest4 days ago

ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್ ಶಾಕ್‌, ಜಾಮೀನು ಅರ್ಜಿ ವಜಾ

Latest5 days ago

ಚೀನಾದಲ್ಲಿ ಟ್ರಂಪ್‌, ಶಿ ಜಿನ್‌‌ಪಿಂಗ್‌ ಹೈವೋಲ್ಟೇಜ್‌ ಮೀಟಿಂಗ್‌‌

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌