Site icon Vistara News

Vistara News Polling Booth: ತುಮಕೂರು ಕ್ಷೇತ್ರದಲ್ಲಿ ಮತ್ತೆ ಬಿಜೆಪಿಗೆ ಜೈ ಎಂದ ಮತದಾರರು!

People support BJP again in Tumkur

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ವಿಸ್ತಾರ ನ್ಯೂಸ್‌ (Vistara News) ಸೋಮವಾರ (ಮಾ.18) ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ನಡೆಸಿದ ಪೋಲಿಂಗ್‌ ಬೂತ್‌ ಸಮೀಕ್ಷೆಯಲ್ಲಿ (Vistara news polling booth) ಮತ್ತೆ ಬಿಜೆಪಿಗೆ ಮತದಾರರು ಜೈ ಎಂದಿದ್ದಾರೆ. ಕ್ಷೇತ್ರದಿಂದ ಸಾವಿರಾರು ಕರೆಗಳು ಬಂದಿದ್ದು, ಅವುಗಳಲ್ಲಿ ಒಟ್ಟು 6557 ಕರೆಗಳನ್ನು ಸ್ವೀಕಾರ ಮಾಡಲಾಗಿದೆ. ಇದರಲ್ಲಿ ಶೇ. 60ರಷ್ಟು ಮಂದಿ ಬಿಜೆಪಿಯನ್ನು ಬೆಂಬಲಿಸಿದ್ದರೆ, ಶೇಕಡಾ 40ರಷ್ಟು ಜನರು ಕಾಂಗ್ರೆಸ್‌ ಪಕ್ಷದ ಪರ ಬೆಂಬಲ ವ್ಯಕ್ತಪಡಿಸಿದ್ದಾರೆ.

ವಿಸ್ತಾರ ಪೋಲಿಂಗ್‌ ಬೂತ್‌ನಲ್ಲಿ ಸಂಗ್ರಹಿಸಿದ ಜನಾಭಿಪ್ರಾಯದ ಪ್ರಕಾರ ತುಮಕೂರು ಕ್ಷೇತ್ರದಲ್ಲಿ ಬಿಜೆಪಿ-ಕಾಂಗ್ರೆಸ್ ನಡುವೆ ಸ್ಪರ್ಧೆ ಏರ್ಪಟ್ಟಿದ್ದು, ಬಿಜೆಪಿಗೆ 3934 ಮತದಾರರು ಮತ ನೀಡಿದ್ದು, ಕಾಂಗ್ರೆಸ್‌ ಪಕ್ಷಕ್ಕೆ 2623 ಮತಗಳು ಬಂದಿವೆ. ಹೀಗಾಗಿ ಮತ್ತೆ ಈ ಕ್ಷೇತ್ರದಲ್ಲಿ ಬಿಜೆಪಿಗೆ ಹೆಚ್ಚಿನ ಜನ ಬೆಂಬಲ ವ್ಯಕ್ತವಾಗಿರುವುದು ಕಂಡು ಬಂದಿದೆ.

ಕರೆಗಳ ಶೇಕಡಾವಾರು ವಿವರ

ಒಟ್ಟು ಕರೆಗಳು: 6557
ಬಿಜೆಪಿ-3934: 60%
ಕಾಂಗ್ರೆಸ್-2623: 40%
ಇತರೆ: 00

ಕ್ಷೇತ್ರದಲ್ಲಿ ಈ ಬಾರಿ ಬಿಜೆಪಿಯಿಂದ ಮಾಜಿ ಸಚಿವ ವಿ. ಸೋಮಣ್ಣ ಕಣಕ್ಕಿಳಿಯುತ್ತಿದ್ದಾರೆ. ಕಾಂಗ್ರೆಸ್‌ನಿಂದ ಮಾಜಿ ಸಂಸದ ಮುದ್ದಹನುಮೇಗೌಡ ಸ್ಪರ್ಧಿಸುತ್ತಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ವರುಣ ಮತ್ತು ಚಾಮರಾಜನಗರ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಕಂಡಿದ್ದ ಲಿಂಗಾಯತ ಸಮುದಾಯದ ವಿ. ಸೋಮಣ್ಣಗೆ ಬಿಜೆಪಿ ಮತ್ತೊಂದು ಅವಕಾಶ ನೀಡಿದೆ. ಇನ್ನು ಕ್ಷೇತ್ರದಲ್ಲಿ ಒಕ್ಕಲಿಗರು, ಲಿಂಗಾಯತರು, ಎಸ್‌ಸಿ-ಎಸ್‌ಟಿ ಮತಗಳು ಸಮಪ್ರಮಾಣದಲ್ಲಿ ಇವೆ. ಹೀಗಾಗಿ ಒಕ್ಕಲಿಗರ ಮತಗಳನ್ನು ಸೆಳೆಯಲು ಕಾಂಗ್ರೆಸ್‌ನಿಂದ ಮುದ್ದಹನುಮೇಗೌಡರಿಗೆ ಟಿಕೆಟ್‌ ನೀಡಲಾಗಿದೆ.

ಇದನ್ನೂ ಓದಿ | Vistara News Polling Booth: ಮೈಸೂರಿನಲ್ಲಿ ಕಮಲ ರಾಜ ದರ್ಬಾರ್; ಅಭ್ಯರ್ಥಿ ಬದಲಾದರೂ ಬದಲಾಗದ ಜನರು

2019ರಲ್ಲಿ ಜೆಡಿಎಸ್‌ ಅಭ್ಯರ್ಥಿ ಎಚ್‌.ಡಿ.ದೇವೇಗೌಡ ಅವರ ವಿರುದ್ಧ ಬಿಜೆಪಿ ಅಭ್ಯರ್ಥಿ ಜಿ.ಎಸ್‌.ಬಸವರಾಜು ಜಯ ಗಳಿಸಿದ್ದರು. 2014ರಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಮುದ್ದಹನುಮೇಗೌಡ ಅವರು ಗೆಲುವು ದಾಖಲಿಸಿದ್ದರು. ಇದೀಗ ಕ್ಷೇತ್ರವು ಮತ್ತೊಮ್ಮೆ ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ ಜಿದ್ದಾಜಿದ್ದಿಯ ಹೋರಾಟಕ್ಕೆ ಸಾಕ್ಷಿಯಾಗಲಿದ್ದು, ಒಟ್ಟಾರೆಯಾಗಿ ಕ್ಷೇತ್ರದಲ್ಲಿ ಮತ್ತೆ ಬಿಜೆಪಿಯೇ ಜಯಗಳಿಸಲಿದೆ ಎಂಬುವುದು ವಿಸ್ತಾರ ನ್ಯೂಸ್‌ ಪೋಲಿಂಗ್‌ ಬೂತ್‌ನ ಫಲಿತಾಂಶವಾಗಿದೆ.

ಏನಿದು ಪೋಲಿಂಗ್‌ ಬೂತ್‌?

ಬೆಂಗಳೂರಿನಲ್ಲಿರುವ ವಿಸ್ತಾರ ನ್ಯೂಸ್‌ ಮುಖ್ಯ ಕಚೇರಿಯಲ್ಲಿ ತೆರೆಯಲಾಗಿರುವ ಪೋಲಿಂಗ್‌ ಬೂತ್‌ಗೆ ಸಾರ್ವಜನಿಕರು ನಿಗದಿತ ಸಮಯದಲ್ಲಿ ಪೋನ್‌ ಮಾಡುವ ಮೂಲಕ ತಮ್ಮ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಯಾರಾಗಬೇಕು, ಯಾವ ಪಕ್ಷ ಈ ಬಾರಿ ಗೆಲ್ಲಬೇಕು ಎಂದು ತಿಳಿಸಬಹುದು.

ಇದನ್ನೂ ಓದಿ: Vistara news polling booth: ಕೋಲಾರದಲ್ಲಿ ಮೈತ್ರಿಗೆ ಮಹಾ ಬಲ; ಕಾಂಗ್ರೆಸ್‌ ಆಗಲಿದೆಯೇ ಸಬಲ?

ಪೋಲಿಂಗ್‌ ಬೂತ್‌ನಲ್ಲಿ ಮಾಹಿತಿ ಸಂಗ್ರಹ ಹೇಗೆ?

ವಿಸ್ತಾರ ನ್ಯೂಸ್‌ ಪೋಲಿಂಗ್‌ ಬೂತ್‌ಗೆ ಒಂದೇ ದೂರವಾಣಿ ಸಂಖ್ಯೆಯನ್ನು ನೀಡಲಾಗಿದೆ. ಆದರೆ, ಈ ಒಂದೇ ದೂರವಾಣಿ ಸಂಖ್ಯೆ ಸುಮಾರು 20ಕ್ಕೂ ಅಧಿಕ ಫೋನ್‌ಗಳಿಗೆ ಕನೆಕ್ಟ್‌ ಆಗುತ್ತದೆ. ಏಕಕಾಲದಲ್ಲಿ 20ಕ್ಕೂ ಅಧಿಕ ಮಂದಿ ಕರೆಯನ್ನು ಸ್ವೀಕರಿಸಿ ಮಾಹಿತಿಯನ್ನು ಸಂಗ್ರಹ ಮಾಡಲಾಗುತ್ತದೆ. ಯಾರು ಅಭ್ಯರ್ಥಿಯಾಗಬೇಕು? ಯಾರು ಗೆಲ್ಲಬೇಕು? ಯಾರಿಗೆ ಮತ ಎಂಬಿತ್ಯಾದಿ ಮಾಹಿತಿಗಳನ್ನು ಈ ವೇಳೆ ದಾಖಲಿಸಿಕೊಳ್ಳಲಾಗುತ್ತದೆ. ಬಳಿಕ ಅವುಗಳನ್ನು ಸಮೀಕರಿಸಿ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ.

ಇದನ್ನೂ ಓದಿ | Vistara News Polling Booth: ಹಾವೇರಿ-ಗದಗ ಕ್ಷೇತ್ರದಲ್ಲಿ ಮತ್ತೆ ಬಿಜೆಪಿ ಪಾರುಪತ್ಯ!

ಈಗಾಗಲೇ ಮಂಡ್ಯ, ಬೆಳಗಾವಿ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಬೆಂಗಳೂರು ಉತ್ತರ, ಬಳ್ಳಾರಿ ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರಗಳ ಸಮೀಕ್ಷೆ ಮುಕ್ತಾಯಗೊಂಡಿವೆ.

ನೀವು ಕರೆ ಮಾಡಬೇಕಾದ ದೂರವಾಣಿ ಸಂಖ್ಯೆ: 080-69554488

Exit mobile version