Site icon Vistara News

Vistara News Polling Booth: ಹಾವೇರಿ-ಗದಗ ಕ್ಷೇತ್ರದಲ್ಲಿ ಮತ್ತೆ ಬಿಜೆಪಿ ಪಾರುಪತ್ಯ!

Voters Support BJP In Haveri-Gadag Constituency

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ವಿಸ್ತಾರ ನ್ಯೂಸ್‌ (Vistara News) ಶನಿವಾರ (ಮಾ. 16) ಹಾವೇರಿ-ಗದಗ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ನಡೆಸಿದ ಪೋಲಿಂಗ್‌ ಬೂತ್‌ನಲ್ಲಿ (Vistara news polling booth) ಮತ್ತೆ ಬಿಜೆಪಿಯನ್ನೇ (BJP Karnataka) ಮತದಾರರು ಬೆಂಬಲಿಸಿದ್ದಾರೆ. ಸಾವಿರಾರು ಕರೆಗಳು ಬಂದಿದ್ದು, ಅವುಗಳಲ್ಲಿ ಒಟ್ಟು 7625 ಕರೆಗಳನ್ನು ಸ್ವೀಕಾರ ಮಾಡಲಾಗಿದೆ. ಇದರಲ್ಲಿ ಶೇ. 58ರಷ್ಟು ಮಂದಿ ಬಿಜೆಪಿಯನ್ನು ಬೆಂಬಲಿಸಿದ್ದರೆ, ಶೇಕಡಾ 42ರಷ್ಟು ಮಂದಿ ಕಾಂಗ್ರೆಸ್‌ (Congress Karnataka) ಪಕ್ಷವನ್ನು ಬೆಂಬಲಿಸಿದ್ದಾರೆ.

ವಿಸ್ತಾರ ಪೋಲಿಂಗ್‌ ಬೂತ್‌ನಲ್ಲಿ ನಡೆಸಿದ ಜನಾಭಿಪ್ರಾಯ ಸಂಗ್ರಹದ ಅನುಸಾರ ಹಾವೇರಿ-ಗದಗ ಕ್ಷೇತ್ರದಲ್ಲಿ ಬಿಜೆಪಿ-ಕಾಂಗ್ರೆಸ್ ನಡುವೆ ಫೈಟ್‌ ಏರ್ಪಟ್ಟಿದೆ. ಬಿಜೆಪಿಗೆ 4375 ಮತದಾರರು ವೋಟ್ ನೀಡಿದ್ದು,
ಕಾಂಗ್ರೆಸ್‌ ಪಕ್ಷಕ್ಕೆ 3250 ಮತ ಬಂದಿವೆ. ಇದರಿಂದ ಮತ್ತೇ ಕ್ಷೇತ್ರದಲ್ಲಿ ಬಿಜೆಪಿಗೆ ಹೆಚ್ಚಿನ ಜನರು ಬೆಂಬಲ ಸೂಚಿಸಿರುವುದು ಕಂಡುಬಂದಿದೆ.

ಕರೆಗಳ ಶೇಕಡಾವಾರು ವಿವರ

ಒಟ್ಟು ಕರೆಗಳು – 7625
ಬಿಜೆಪಿ-4375: 58%
ಕಾಂಗ್ರೆಸ್-3250: 42%
ಇತರೆ: 00

ಈ ಬಾರಿ ಬಿಜೆಪಿಯಿಂದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಕಾಂಗ್ರೆಸ್‌ನಿಂದ ಆನಂದಸ್ವಾಮಿ ಗಡ್ಡದೇವರಮಠ ಸ್ಪರ್ಧಿಸುತ್ತಿದ್ದಾರೆ. ಹಾಲಿ ಬಿಜೆಪಿ ಸಂಸದ ಶಿವಕುಮಾರ್‌ ಉದಾಸಿ ಅವರು ಈ ಬಾರಿ ಚುನಾವಣಾ ಕಣದಿಂದ ಹಿಂದೆ ಸರಿದಿದ್ದರಿಂದ ಬೊಮ್ಮಾಯಿ ಅವರಿಗೆ ಟಿಕೆಟ್‌ ಲಭಿಸಿದೆ. ರಾಜ್ಯದಲ್ಲಿ ಹಲವು ಅಭಿವೃದ್ಧಿ ಕೆಲಸಗಳ ಮೂಲಕ ಗಮನಸೆಳೆದಿದ್ದ ಬೊಮ್ಮಾಯಿ ಅವರು ಇದೀಗ ರಾಷ್ಟ್ರ ರಾಜಕಾರಣಕ್ಕೆ ಕಾಲಿಟ್ಟಿದ್ದಾರೆ. ಕ್ಷೇತ್ರದಲ್ಲಿ ಸತತ ಮೂರು ಬಾರಿ ಗೆಲುವು ಸಾಧಿಸಿದ್ದ ಬಿಜೆಪಿ, ಈ ಬಾರಿಯೂ ವಿಜಯಭೇರಿ ಬಾರಿಸಲು ಸಿದ್ಧತೆ ನಡೆಸುತ್ತಿದೆ.

ಇನ್ನು ಶಿರಹಟ್ಟಿ ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕ ಗಡ್ಡಯ್ಯ ಎಸ್. ಗಡ್ಡದೇವರಮಠ ಅವರ ಪುತ್ರ ಆನಂದಸ್ವಾಮಿ ಗಡ್ಡದೇವರಮಠ ಅವರು, ಹಾವೇರಿ, ಗದಗ ಕ್ಷೇತ್ರಗಳ ಜನರ ಜತೆ ಸಾಕಷ್ಟು ಒಡನಾಟ ಹೊಂದಿದ್ದಾರೆ. ಎಲ್ಲ ಪಕ್ಷದ ನಾಯಕರ ಜತೆ ಉತ್ತಮ ಬಾಂಧವ್ಯ ಹೊಂದಿರುವ ಇವರು, ಮೂಲತಃ ಲಕ್ಷ್ಮೇಶ್ವರ ಪಟ್ಟಣದವರಾದರೂ ಬೆಳಗಾವಿಯಲ್ಲಿ ರಾಜಕೀಯ ನೆಲೆ ಕಂಡುಕೊಂಡಿದ್ದರು. ಆದರೆ, ವಿಸ್ತಾರ ನ್ಯೂಸ್‌ ಪೋಲಿಂಗ್‌ ಬೂತ್‌ನ ಫಲಿತಾಂಶದ ಪ್ರಕಾರ ಕ್ಷೇತ್ರದ ಜನರು ಮತ್ತೆ ಬಿಜೆಪಿ ಪರ ಬೆಂಬಲ ಸೂಚಿಸಿದ್ದಾರೆ.

ಏನಿದು ಪೋಲಿಂಗ್‌ ಬೂತ್‌?

ಬೆಂಗಳೂರಿನಲ್ಲಿರುವ ವಿಸ್ತಾರ ನ್ಯೂಸ್‌ ಮುಖ್ಯ ಕಚೇರಿಯಲ್ಲಿ ತೆರೆಯಲಾಗಿರುವ ಪೋಲಿಂಗ್‌ ಬೂತ್‌ಗೆ ಸಾರ್ವಜನಿಕರು ನಿಗದಿತ ಸಮಯದಲ್ಲಿ ಪೋನ್‌ ಮಾಡುವ ಮೂಲಕ ತಮ್ಮ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಯಾರಾಗಬೇಕು, ಯಾವ ಪಕ್ಷ ಈ ಬಾರಿ ಗೆಲ್ಲಬೇಕು ಎಂದು ತಿಳಿಸಬಹುದು.

ಇದನ್ನೂ ಓದಿ: Vistara news polling booth: ಕೋಲಾರದಲ್ಲಿ ಮೈತ್ರಿಗೆ ಮಹಾ ಬಲ; ಕಾಂಗ್ರೆಸ್‌ ಆಗಲಿದೆಯೇ ಸಬಲ?

ಪೋಲಿಂಗ್‌ ಬೂತ್‌ನಲ್ಲಿ ಮಾಹಿತಿ ಸಂಗ್ರಹ ಹೇಗೆ?

ವಿಸ್ತಾರ ನ್ಯೂಸ್‌ ಪೋಲಿಂಗ್‌ ಬೂತ್‌ಗೆ ಒಂದೇ ದೂರವಾಣಿ ಸಂಖ್ಯೆಯನ್ನು ನೀಡಲಾಗಿದೆ. ಆದರೆ, ಈ ಒಂದೇ ದೂರವಾಣಿ ಸಂಖ್ಯೆ ಸುಮಾರು 20ಕ್ಕೂ ಅಧಿಕ ಫೋನ್‌ಗಳಿಗೆ ಕನೆಕ್ಟ್‌ ಆಗುತ್ತದೆ. ಏಕಕಾಲದಲ್ಲಿ 20ಕ್ಕೂ ಅಧಿಕ ಮಂದಿ ಕರೆಯನ್ನು ಸ್ವೀಕರಿಸಿ ಮಾಹಿತಿಯನ್ನು ಸಂಗ್ರಹ ಮಾಡಲಾಗುತ್ತದೆ. ಯಾರು ಅಭ್ಯರ್ಥಿಯಾಗಬೇಕು? ಯಾರು ಗೆಲ್ಲಬೇಕು? ಯಾರಿಗೆ ಮತ ಎಂಬಿತ್ಯಾದಿ ಮಾಹಿತಿಗಳನ್ನು ಈ ವೇಳೆ ದಾಖಲಿಸಿಕೊಳ್ಳಲಾಗುತ್ತದೆ. ಬಳಿಕ ಅವುಗಳನ್ನು ಸಮೀಕರಿಸಿ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ.

ಈಗಾಗಲೇ ಮಂಡ್ಯ, ಬೆಳಗಾವಿ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಬೆಂಗಳೂರು ಉತ್ತರ, ಬಳ್ಳಾರಿ ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರಗಳ ಸಮೀಕ್ಷೆ ಮುಕ್ತಾಯಗೊಂಡಿವೆ.

ನೀವು ಕರೆ ಮಾಡಬೇಕಾದ ದೂರವಾಣಿ ಸಂಖ್ಯೆ: 080-69554488

Exit mobile version