ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ವಿಸ್ತಾರ ನ್ಯೂಸ್ (Vistara News) ಮಂಗಳವಾರ (ಮಾ.19) ರಾಯಚೂರು ಲೋಕಸಭಾ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ನಡೆಸಿದ ಪೋಲಿಂಗ್ ಬೂತ್ ಸಮೀಕ್ಷೆಯಲ್ಲಿ (Vistara news polling booth) ಕ್ಷೇತ್ರದಲ್ಲಿ ಮತದಾರರು ಯಾವ ಪಕ್ಷದ ಪರ ಒಲವು ಹೊಂದಿದ್ದಾರೆ ಎಂಬುವುದು ಬಯಲಾಗಿದೆ. ಕ್ಷೇತ್ರದಿಂದ ಸಾವಿರಾರು ಕರೆಗಳು ಬಂದಿದ್ದು, ಅವುಗಳಲ್ಲಿ ಒಟ್ಟು 6719 ಕರೆಗಳನ್ನು ಸ್ವೀಕರಿಸಲಾಗಿದೆ. ಇದರಲ್ಲಿ ಶೇ. 74ರಷ್ಟು ಮಂದಿ ಬಿಜೆಪಿಯನ್ನು ಬೆಂಬಲಿಸಿದ್ದರೆ, ಶೇಕಡಾ 26ರಷ್ಟು ಜನರು ಕಾಂಗ್ರೆಸ್ ಪರ ಒಲವು ತೋರಿದ್ದಾರೆ.
ವಿಸ್ತಾರ ಪೋಲಿಂಗ್ ಬೂತ್‌ನಲ್ಲಿ ಸಂಗ್ರಹಿಸಿದ ಜನಾಭಿಪ್ರಾಯದ ಪ್ರಕಾರ ರಾಯಚೂರು ಕ್ಷೇತ್ರದಲ್ಲಿ ಬಿಜೆಪಿ-ಕಾಂಗ್ರೆಸ್ ನಡುವೆ ಬಿಜೆಪಿ-ಕಾಂಗ್ರೆಸ್ ಸ್ಪರ್ಧೆ ಏರ್ಪಟ್ಟಿದೆ. ಬಿಜೆಪಿಗೆ 4972 ಮತದಾರರು ಮತ ನೀಡಿದ್ದು, ಕಾಂಗ್ರೆಸ್ ಪಕ್ಷಕ್ಕೆ 1747 ಮತಗಳು ಬಂದಿವೆ. ಇದರಿಂದ ಕ್ಷೇತ್ರವು ಮತ್ತೊಮ್ಮೆ ಬಿಜೆಪಿ ತೆಕ್ಕೆಗೆ ಸೇರಲಿದೆ ಎಂಬ ಅಭಿಪ್ರಾಯ ಹೊರಹಾಕಿದ್ದಾರೆ.
ಕರೆಗಳ ಶೇಕಡಾವಾರು ವಿವರ
ಸ್ವೀಕರಿಸಿದ ಕರೆಗಳು: 6719
ಬಿಜೆಪಿ: 4972 (ಶೇ.74)
ಕಾಂಗ್ರೆಸ್: 1747 (ಶೇ.26)
ಇತರೆ: 0
ಪರಿಶಿಷ್ಟ ಪಂಗಡಕ್ಕೆ ಮೀಸಲಾದ ರಾಯಚೂರು ಲೋಕಸಭಾ ಕ್ಷೇತ್ರದಲ್ಲಿ ರಾಜಾ ಅಮರೇಶ್ವರ ನಾಯಕ್, ಬಿ.ವಿ.ನಾಯಕ್ ಬಿಜೆಪಿಯ ಪ್ರಬಲ ಟಿಕೆಟ್ ಆಕಾಂಕ್ಷಿಗಳಾಗಿದ್ದು, ಕಾಂಗ್ರೆಸ್‌ನಲ್ಲಿ ರವಿ ಪಾಟೀಲ್, ಜಿ.ಕುಮಾರ್ ನಾಯಕ್ ಹೆಸರು ಚಾಲ್ತಿಯಲ್ಲಿದೆ.
ಕ್ಷೇತ್ರದಲ್ಲಿ 2004ರಲ್ಲಿ ಕಾಂಗ್ರೆಸ್‌ನ ಎ.ವೆಂಕಟೇಶ್ ನಾಯಕ್, 2009ರಲ್ಲಿ ಬಿಜೆಪಿಯ ಪಕ್ಕೀರಪ್ಪ. ಎಸ್, 2014ರಲ್ಲಿ ಕಾಂಗ್ರೆಸ್‌ನ ಬಿವಿ ನಾಯಕ್ ಹಾಗೂ 2019ರಲ್ಲಿ ಬಿಜೆಪಿಯ ರಾಜಾ ಅಮರೇಶ್ವರ ನಾಯಕ್ ಅವರು ಗೆಲುವು ಕಂಡಿದ್ದರು. ಇದೀಗ ಬಂದಿರುವ ವಿಸ್ತಾರ ಪೋಲಿಂಗ್ ಬೂತ್ ಸಮೀಕ್ಷೆ ಫಲಿತಾಂಶದ ಪ್ರಕಾರ ಕ್ಷೇತ್ರದಲ್ಲಿ ಮತ್ತೊಮ್ಮೆ ಬಿಜೆಪಿ ಪರ ಜನರ ಒಲವು ಇರುವುದು ಕಂಡುಬಂದಿದೆ.
ಏನಿದು ಪೋಲಿಂಗ್ ಬೂತ್?
ಬೆಂಗಳೂರಿನಲ್ಲಿರುವ ವಿಸ್ತಾರ ನ್ಯೂಸ್ ಮುಖ್ಯ ಕಚೇರಿಯಲ್ಲಿ ತೆರೆಯಲಾಗಿರುವ ಪೋಲಿಂಗ್ ಬೂತ್‌ಗೆ ಸಾರ್ವಜನಿಕರು ನಿಗದಿತ ಸಮಯದಲ್ಲಿ ಪೋನ್ ಮಾಡುವ ಮೂಲಕ ತಮ್ಮ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಯಾರಾಗಬೇಕು, ಯಾವ ಪಕ್ಷ ಈ ಬಾರಿ ಗೆಲ್ಲಬೇಕು ಎಂದು ತಿಳಿಸಬಹುದು.
ಪೋಲಿಂಗ್ ಬೂತ್‌ನಲ್ಲಿ ಮಾಹಿತಿ ಸಂಗ್ರಹ ಹೇಗೆ?
ವಿಸ್ತಾರ ನ್ಯೂಸ್ ಪೋಲಿಂಗ್ ಬೂತ್‌ಗೆ ಒಂದೇ ದೂರವಾಣಿ ಸಂಖ್ಯೆಯನ್ನು ನೀಡಲಾಗಿದೆ. ಆದರೆ, ಈ ಒಂದೇ ದೂರವಾಣಿ ಸಂಖ್ಯೆ ಸುಮಾರು 20ಕ್ಕೂ ಅಧಿಕ ಫೋನ್‌ಗಳಿಗೆ ಕನೆಕ್ಟ್ ಆಗುತ್ತದೆ. ಏಕಕಾಲದಲ್ಲಿ 20ಕ್ಕೂ ಅಧಿಕ ಮಂದಿ ಕರೆಯನ್ನು ಸ್ವೀಕರಿಸಿ ಮಾಹಿತಿಯನ್ನು ಸಂಗ್ರಹ ಮಾಡಲಾಗುತ್ತದೆ. ಯಾರು ಅಭ್ಯರ್ಥಿಯಾಗಬೇಕು? ಯಾರು ಗೆಲ್ಲಬೇಕು? ಯಾರಿಗೆ ಮತ ಎಂಬಿತ್ಯಾದಿ ಮಾಹಿತಿಗಳನ್ನು ಈ ವೇಳೆ ದಾಖಲಿಸಿಕೊಳ್ಳಲಾಗುತ್ತದೆ. ಬಳಿಕ ಅವುಗಳನ್ನು ಸಮೀಕರಿಸಿ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ.
ಇದನ್ನೂ ಓದಿ | Vistara News Polling Booth: ತುಮಕೂರು ಕ್ಷೇತ್ರದಲ್ಲಿ ಮತ್ತೆ ಬಿಜೆಪಿಗೆ ಜೈ ಎಂದ ಮತದಾರರು!
ಈಗಾಗಲೇ ಮಂಡ್ಯ, ಬೆಳಗಾವಿ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಬೆಂಗಳೂರು ಉತ್ತರ, ಬಳ್ಳಾರಿ ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರಗಳ ಸಮೀಕ್ಷೆ ಮುಕ್ತಾಯಗೊಂಡಿವೆ.
ನೀವು ಕರೆ ಮಾಡಬೇಕಾದ ದೂರವಾಣಿ ಸಂಖ್ಯೆ: 080-69554488