ವಿಸ್ತಾರ TOP 10 NEWS | ACB ಕಂಪನದಿಂದ ಪ್ರವೀಣ್‌ ಹಂತಕರ ಬಂಧನವರೆಗಿನ ಪ್ರಮುಖ ಸುದ್ದಿಗಳಿವು - Vistara News

ಕರ್ನಾಟಕ

ವಿಸ್ತಾರ TOP 10 NEWS | ACB ಕಂಪನದಿಂದ ಪ್ರವೀಣ್‌ ಹಂತಕರ ಬಂಧನವರೆಗಿನ ಪ್ರಮುಖ ಸುದ್ದಿಗಳಿವು

ದೇಶ, ವಿದೇಶ, ರಾಜ್ಯದಲ್ಲಿ ದಿನಪೂರ್ತಿ ನಡೆದ ಘಟನಾವಳಿಗಳಲ್ಲಿ ಆಯ್ದ ಪ್ರಮುಖ ಸುದ್ದಿಗಳು ವಿಸ್ತಾರ TOP 10 NEWS ನಲ್ಲಿ.

VISTARANEWS.COM


on

Vistara TOP 10
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಭ್ರಷ್ಟ ರಾಜಕಾರಣಿಗಳು ಮತ್ತು ಅಧಿಕಾರಿಗಳಿಗೆ ಸಿಂಹಸ್ವಪ್ನವಾಗಿದ್ದ ಲೋಕಾಯುಕ್ತ ಸಂಸ್ಥೆಯ ಹಲ್ಲು ಕೀಳಲೋ ಎಂಬಂತೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ರೂಪಿಸಿದ್ದ ಭ್ರಷ್ಟಾಚಾರ ನಿಗ್ರಹ ದಳವನ್ನು(ಎಸಿಬಿ) ಹೈಕೋರ್ಟ್‌ ರದ್ದುಪಡಿಸಿದೆ. ತಾವು ಅಧಿಕಾರಕ್ಕೆ ಬಂದರೆ ಎಸಿಬಿ ರದ್ದುಪಡಿಸುತ್ತೇವೆ ಎಂದು ವಾಗ್ದಾನ ಮಾಡಿದ್ದರೂ ಬಿಜೆಪಿ ಸರ್ಕಾರ ಕ್ರಮ ಕೈಗೊಳ್ಳದೆ ವ್ಯಾಪಕ ಟೀಕೆಗೆ ಗುರಿಯಾಗಿತ್ತು. ಇದೀಗ ನ್ಯಾಯಾಲಯದಿಂದಾಗಿ ಲೋಕಾಯುಕ್ತ ಮತ್ತೆ ಬಲಗೊಳ್ಳುವ ಭರವಸೆ ಮೂಡಿದೆ. ಚಾಮರಾಜಪೇಟೆ ಮೈದಾನದಲ್ಲಿ ಸರ್ಕಾರವೇ ಧ್ವಜಾರೋಹಣ ಮಾಡಲಿದೆ, ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಬಂಧಿತ ಮೂವರ ವಿವರ ಲಭ್ಯವಾಗಿದೆ ಎನ್ನುವುದು ಸೇರಿ ದಿನದ ಪ್ರಮುಖ ಸುದ್ದಿಗಳ ಗುಚ್ಛ ವಿಸ್ತಾರ TOP 10 NEWS.

1. ಎಸಿಬಿ ರದ್ದುಗೊಳಿಸಿ ಹೈಕೋರ್ಟ್‌ ಮಹತ್ವದ ತೀರ್ಪು; ಎಲ್ಲ ಕೇಸ್‌ ಲೋಕಾಯುಕ್ತಕ್ಕೆ ಶಿಫ್ಟ್‌
ಲೋಕಾಯುಕ್ತಕ್ಕೆ ಪರ್ಯಾಯವಾಗಿ ರಚಿಸಲಾಗಿದ್ದ ಎಸಿಬಿ ವ್ಯವಸ್ಥೆಯನ್ನು ಹೈಕೋರ್ಟ್‌ ರದ್ದುಗೊಳಿಸಿ ಮಹತ್ವದ ಆದೇಶವನ್ನು ನೀಡಿದ್ದು, ಹಾಲಿ ಇರುವ ಎಲ್ಲ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ವರ್ಗಾವಣೆಗೊಳಿಸುವಂತೆ ಸೂಚನೆ ನೀಡಿದೆ. ನ್ಯಾಯಮೂರ್ತಿಗಳಾದ ಬಿ.ವೀರಪ್ಪ ಮತ್ತು ನ್ಯಾಯಮೂರ್ತಿ ಕೆ.ಎಸ್. ಹೇಮಲೇಖ ಅವರಿದ್ದ ವಿಭಾಗೀಯ ಪೀಠ ಈ ಮಹತ್ವದ ಆದೇಶವನ್ನು ನೀಡಿದೆ. ಈ ಮೂಲಕ ಎಸಿಬಿ ಪೊಲೀಸ್ ಠಾಣೆಗಳೂ ಸಹ ಅಸ್ತಿತ್ವವನ್ನು ಕಳೆದುಕೊಂಡಿದ್ದು, ಲೋಕಾಯುಕ್ತಕ್ಕೆ ಮರುಜೀವ ಬರಲಿದೆ. ಅಲ್ಲದೆ, ಇದುವರೆಗೆ ಎಸಿಬಿ ನಡೆಸುತ್ತಿರುವ ಎಲ್ಲ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ವರ್ಗಾವಣೆಗೊಳಿಸುವಂತೆ ಆದೇಶದಲ್ಲಿ ತಿಳಿಸಲಾಗಿದೆ. ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ರೂಪಿಸಲಾಗಿದ್ದ ಹೊಸ ಸಂಸ್ಥೆಯಿಂದ ಲೋಕಾಯುಕ್ತ ದುರ್ಬಲವಾಯಿತು ಎಂಬ ಆರೋಪ ಕೇಳಿಬಂದಿತ್ತು. ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ.

2. ಜಮೀರ್‌ ಅಹ್ಮದ್‌ಗೆ ಹಿನ್ನಡೆ: ಚಾಮರಾಜಪೇಟೆ ಮೈದಾನದಲ್ಲಿ ರಾಜ್ಯ ಸರ್ಕಾರದಿಂದಲೇ ಧ್ವಜಾರೋಹಣ
ಅನೇಕ ದಿನಗಳಿಂದ ವಿವಾದದ ಕೇಂದ್ರ ಬಿಂದುವಾಗಿರುವ ಚಾಮರಾಜಪೇಟೆ ಮೈದಾನದಲ್ಲಿ ತಾವು ಧ್ವಜಾರೋಹಣ ಮಾಡುತ್ತೇವೆ ಎಂದು ಹೇಳಿದ್ದ ಶಾಸಕ ಜಮೀರ್‌ ಅಹ್ಮದ್‌ ಖಾನ್‌ ಅವರಿಗೆ ರಾಜ್ಯ ಸರ್ಕಾರ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಕಂದಾಯ ಇಲಾಖೆಗೆ ಜಾಗ ಸೇರಿದ್ದು, ಇಲಾಖೆಯಿಂದಲೇ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ನಡೆಸಲಾಗುತ್ತದೆ ಎಂದು ಕಂದಾಯ ಇಲಾಖೆ ಮಹತ್ವದ ತೀರ್ಮಾನ ಪ್ರಕಟಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿದ ಆರ್‌. ಅಶೋಕ್‌, ಚಾಮರಾಜಪೇಟೆ ಮೈದಾನದ ವಿವಾದ ನಡೆದುಕೊಂಡು ಬಂದ ಹಾದಿಯನ್ನು ಒಂದೊಂದಾಗಿ ವಿವರಿಸಿದರು. ಕಂದಾಯ ಇಲಾಖೆಗೆ ಮೈದಾನ ಸೇರುವುದರಿಂದಾಗಿ, ಚಾಮರಾಜಪೇಟೆ ಮೈದಾನದಲ್ಲಿ ಕಂದಾಯ ಇಲಾಖೆಯಡಿ ಅಸಿಸ್ಟೆಂಟ್ ಕಮಿಷನರ್ ಧ್ವಜಾರೋಹಣ ಮಾಡುತ್ತಾರೆ ಎಂದು ಆರ್‌. ಅಶೋಕ್‌ ತಿಳಿಸಿದರು. ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ.

3. praveen nettaru | ಪ್ರವೀಣ್ ಕೊಲೆ ಪ್ರಕರಣದಲ್ಲಿ BIG BREAKING: ಬಂಧಿತ ಮೂವರಿಗೆ ಎಸ್‌ಡಿಪಿಐ, ಪಿಎಫ್‌ಐ ನಂಟು
ರಾಜ್ಯಾದ್ಯಂತ ಭಾರಿ ಸದ್ದು ಮಾಡಿದ್ದ, ಬಿಜೆಪಿ ಯುವ ಮೋರ್ಚಾ ಪದಾಧಿಕಾರಿ ಬೆಳ್ಳಾರೆಯ ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮೂವರು ಪ್ರಧಾನ ಆರೋಪಿಗಳು ಪೊಲೀಸರ ಬಲೆಗೆ ಬಿದ್ದಿದ್ದಾರೆ. ಈ ಪ್ರಕರಣದಲ್ಲಿ ಈಗಾಗಲೇ ಏಳು ಆರೋಪಿಗಳನ್ನು ಬಂಧಿಸಲಾಗಿತ್ತು. ಆದರೆ, ಜುಲೈ ೨೬ರಂದು ರಾತ್ರಿ ೮ ಗಂಟೆಯ ಹೊತ್ತಿಗೆ ಬೈಕ್‌ನಲ್ಲಿ ಬಂದು ಪ್ರವೀಣ್‌ ಅವರನ್ನು ಅಟ್ಟಾಡಿಸಿ ಕೊಂದು ಹಾಕಿದ್ದ ಮೂವರು ಪ್ರಧಾನ ಹಂತಕರು ಬಲೆಗೆ ಬಿದ್ದಿರಲಿಲ್ಲ. ಪೊಲೀಸರು ಬಹುಸಾಹಸದಿಂದ ಅವರನ್ನು ಬಂಧಿಸುವಲ್ಲಿ ಈಗ ಯಶಸ್ವಿಯಾಗಿದ್ದಾರೆ.
ಬಂಧಿತರನ್ನು ಶಿಯಾಬುದ್ದೀನ್‌, ರಿಯಾಜ್‌ ಅಂಕತಡ್ಕ ಮತ್ತು ರಶೀದ್‌ ಎಲಿಮಲೆ ಎಂದು ಗುರುತಿಸಲಾಗಿದೆ. ಎಲ್ಲರೂ ಸುಳ್ಯ ತಾಲೂಕಿನವರು. ಆರೋಪಿಗಳ ಸಂಪೂರ್ಣ ವಿವರಕ್ಕಾಗಿ ಇಲ್ಲಿ ಕ್ಲಿಕ್‌ ಮಾಡಿ.

4. ಜನಗಣಮನವನ್ನು ಅವಮಾನಿಸಿದ ಬರಗೂರು ರಾಮಚಂದ್ರಪ್ಪ?: ಕಾದಂಬರಿಯ ಪದ್ಯ ವೈರಲ್‌
ಮೂರು ತಿಂಗಳ ಹಿಂದೆ ರಾಜ್ಯದೆಲ್ಲೆಡೆ, ನಾಡಗೀತೆಗೆ ಅವಮಾನದ ವಿಚಾರ ಚರ್ಚೆಯಾಗಿತ್ತು. ಪ್ರೊ. ಬರಗೂರು ರಾಮಚಂದ್ರಪ್ಪ ಅವರ ನೇತೃತ್ವದ ಪಠ್ಯಪುಸ್ತಕ ರಚನಾ ಸಮಿತಿಯ ಪಠ್ಯವನ್ನು ಪರಿಷ್ಕರಿಸಿದ್ದ ಲೇಖಕ ರೋಹಿತ್‌ ಚಕ್ರತೀರ್ಥ ವಿರುದ್ಧ ಈ ಆರೋಪ ಕೇಳಿಬಂದಿತ್ತು. ರೋಹಿತ್‌ ಚಕ್ರತೀರ್ಥ ಅವರು ಹಿಂದೊಮ್ಮೆ ನಾಡಗೀತೆಯನ್ನು ತಿರುಚಿ ಅವಮಾನ ಮಾಡಿದ್ದಾರೆ ಎಂದು ಹೇಳಲಾಗಿತ್ತು. ಇದೀಗ ಪ್ರೊ. ಬರಗೂರು ರಾಮಚಂದ್ರಪ್ಪ ಅವರೇ ಕಾದಂಬರಿಯೊಂದರಲ್ಲಿ ರಾಷ್ಟ್ರಗೀತೆ ಜನಗಣಮನವನ್ನು ಅವಮಾನಿಸಿದ್ದಾರೆ, ಗಂಗೆಯನ್ನು ಹಾದರಕ್ಕೆ ಹೋಲಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಪ್ರೊ. ಬರಗೂರು ರಾಮಚಂದ್ರಪ್ಪ ಅವರು ತಮ್ಮ ʻಭರತನಗರಿʼ ಕಾದಂಬರಿಯಲ್ಲಿ ಇಂಥ ಪದ್ಯವೊಂದನ್ನು ಬರೆದಿದ್ದಾರೆ. ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ.

5. ವಿಸ್ತಾರ Explainer | ಮೋದಿಯನ್ನು ಎದುರಿಸ ಬಯಸುವ ನಾಯಕರಿವರು! ಏನಿವರ ಶಕ್ತಿ, ದೌರ್ಬಲ್ಯ?
ಮುಂದಿನ ಲೋಕಸಭೆ ಚುನಾವಣೆಗೆ ಇನ್ನೂ ಎರಡು ವರ್ಷವಿದೆ. ಆದರೆ ಎಲ್ಲ ಪಕ್ಷಗಳಲ್ಲೂ ಚುನಾವಣೆಯ ಸಿದ್ಧತೆ ಜೋರಾಗಿಯೇ ನಡೆಯುತ್ತಿದೆ. ಬಿಜೆಪಿ ಮತ್ತೆ ಪ್ರಧಾನ ಮಂತ್ರಿ ಅಭ್ಯರ್ಥಿಯಾಗಿ ನರೇಂದ್ರ ಮೋದಿ ಅವರನ್ನೇ ತೋರಿಸುವುದು ಖಚಿತವಾಗಿದೆ. ಪ್ರತಿಪಕ್ಷಗಳಲ್ಲಿ ನರೇಂದ್ರ ಮೋದಿ ಅವರಿಗೆ ಮುಖಾಮುಖಿಯಾಗಿ ನಿಲ್ಲಬಲ್ಲವರು ಯಾರಿದ್ದಾರೆ ಎಂಬ ಹುಡುಕಾಟ ಆರಂಭವಾಗಿದೆ. ಸದ್ಯ ಐದು ಮಂದಿಯ ಹೆಸರು ಕೇಳಿಸುತ್ತಿದೆ- ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ತೃಣಮೂಲ ಕಾಂಗ್ರೆಸ್‌ ನಾಯಕಿ ಮಮತಾ ಬ್ಯಾನರ್ಜಿ, ಆಮ್‌ ಆದ್ಮಿ ಪಾರ್ಟಿ ಮುಖ್ಯಸ್ಥ ಅರವಿಂದ ಕೇಜ್ರಿವಾಲ್‌, ಸಂಯುಕ್ತ ಜನತಾ ದಳ ನಾಯಕ ನಿತೀಶ್‌ ಕುಮಾರ್‌, ತೆಲಂಗಾಣ ರಾಷ್ಟ್ರ ಸಮಿತಿ ನಾಯಕ ಕೆ.ಚಂದ್ರಶೇಖರ ರಾವ್.‌ ಈ ನಾಯಕರ ಸಾಮರ್ಥ್ಯ, ಬಲಹೀನತೆಗಳು, ಗುಣಗಳನ್ನು ತಿಳಿಯಲು ಇಲ್ಲಿ ಕ್ಲಿಕ್‌ ಮಾಡಿ

6. Heavy Rain | ಉಕ್ಕಿ ಹರಿಯುವ ಸೇತುವೆ ದಾಟಲು ಜೆಸಿಬಿ ಮೊರೆ ಹೋದ ಶಾಲಾ ಮಕ್ಕಳು!
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ವೆಂಕಟಹಳ್ಳಿ- ಜಂಬರಡಿ ಗ್ರಾಮದ ಸಮೀಪದ ಶಾಲಾ ಮಕ್ಕಳು, ಸ್ಥಳೀಯರು ತಮ್ಮ ಜೀವ ಪಣಕ್ಕಿಟ್ಟು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಹಾಸನ ಜಿಲ್ಲೆಯಲ್ಲಿ ಮಳೆಯ ಅಬ್ಬರ (Heavy Rain) ಮುಂದುವರಿದಿದ್ದು, ಕೆರೆಕಟ್ಟೆ – ಹಳ್ಳಕೊಳ್ಳಗಳು ಉಕ್ಕಿ ಹರಿಯುತ್ತಿವೆ. ಪರಿಣಾಮ ಮಲೆನಾಡಿನ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಮಳೆಯಿಂದ ಸೇತುವೆಯ ರಸ್ತೆ ಜಲಾವೃತವಾಗಿದ್ದು, ಒಂದೆಡೆಯಿಂದ ಮತ್ತೊಂದೆಡೆ ಜನರು ಹಾಗೂ ಮಕ್ಕಳ ಓಡಾಟಕ್ಕೆ ತೊಂದರೆ ಆಗಿದೆ. ಸೇತುವೆ ಮೇಲೆ ರಭಸವಾಗಿ ಹರಿಯುತ್ತಿರುವ ನೀರನ್ನು ಲೆಕ್ಕಿಸದೇ ಜೆಸಿಬಿ ಬಕೆಟ್ ಮೇಲೆ ಶಾಲಾ ಮಕ್ಕಳು ನಿಂತು ಸೇತುವೆ ದಾಟುತ್ತಿದ್ದಾರೆ. ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ.

7. ಅಮೃತಮಹೋತ್ಸವ | ಆ. 15ರಂದು ಬಿಎಂಟಿಸಿಯಲ್ಲಿ ದುಡ್ಡೇ ಕೊಡದೆ ಫ್ರೀ ಆಗಿ ಓಡಾಡೋ ಸ್ವಾತಂತ್ರ್ಯ!
ಸ್ವಾತಂತ್ರ್ಯದ ಅಮೃತ ಮಹೋತ್ಸವ ವರ್ಷಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರು ನಾಗರಿಕರಿಗೆ ಬಿಎಂಟಿಸಿ ವಿಶೇಷ ಕೊಡುಗೆಯನ್ನು ನೀಡಿದೆ. ಅದೇನೆಂದರೆ, ಅವತ್ತು ಯಾರು ಯಾವ ಬಸ್‌ನಲ್ಲಿ ಎಷ್ಟು ಬಾರಿ ಓಡಾಡಿದರೂ ಫುಲ್‌ ಫ್ರೀ, ಒಂದು ಪೈಸೆಯನ್ನೂ ಕೊಡಬೇಕಾಗಿಲ್ಲ!
ಹೌದು. ಬಿಎಂಟಿಸಿ ತನ್ನ ಎಲ್ಲಾ ಬಸ್‌ಗಳಲ್ಲಿ ಇಡೀ ದಿನ ಉಚಿತ ಪ್ರಯಾಣದ ವ್ಯವಸ್ಥೆಯನ್ನು ಮಾಡಿದೆ. ಆಗಸ್ಟ್‌ ೧೫ರಂದು ಇಡೀದಿನ ಬೆಂಗಳೂರಿನಲ್ಲಿ ಯಾರು ಎಲ್ಲಿಗೆ ಬೇಕಾದರೂ ಸಂಚರಿಸಬಹುದು, ಹಣ ಕೊಟ್ಟು ಟಿಕೆಟ್‌ ಪಡೆದುಕೊಳ್ಳಬೇಕಾದ ಅವಶ್ಯಕತೆಯೇ ಇಲ್ಲ ಎಂದು ಬಿಎಂಟಿಸಿ ನಿಗಮ ಅಧ್ಯಕ್ಷ ನಂದೀಶ್ ರೆಡ್ಡಿ ತಿಳಿಸಿದ್ದಾರೆ. ಅದೇ ರೀತಿ ಬೆಂಗಳೂರು ಮೆಟ್ರೋದಲ್ಲೂ ಪ್ರಯಾಣಿಕರಿಗೆ ವಿಶೇಷ ರಿಯಾಯಿತಿ ಘೋಷಿಸಲಾಗಿದೆ. ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ.

8. ಉತ್ತರ ಪ್ರದೇಶದ ಯಮುನಾ ನದಿಯಲ್ಲಿ ಮುಳುಗಿದ ದೋಣಿ; 20 ಮಂದಿ ದುರ್ಮರಣ
ಉತ್ತರ ಪ್ರದೇಶ ಬಾಂದಾದಲ್ಲಿ ಯಮನಾ ನದಿಯಲ್ಲಿ ದೋಣಿಯೊಂದು ಮುಳುಗಿ (Boat Capsizes In Yamuna) ಸುಮಾರು 20 ಮಂದಿ ಮೃತಪಟ್ಟಿದ್ದಾರೆ. ಅದರಲ್ಲಿ ನಾಲ್ಕು ಮೃತದೇಹ ಸಿಕ್ಕಿದೆ. ಈ ಬೋಟ್​​ ಮರ್ಕಾ ಘಾಟ್​​​ನಿಂದ ಫತೇಹ್​ಪುರಕ್ಕೆ ಹೋಗುತ್ತಿತ್ತು. 40ಕ್ಕೂ ಹೆಚ್ಚು ಮಂದಿ ಪ್ರಯಾಣ ಮಾಡುತ್ತಿದ್ದರು. ಅದೆಷ್ಟೋ ಮಹಿಳೆಯರು ತಮ್ಮ ಪತಿಯ ಮನೆಯಿಂದ ತವರು ಮನೆಗೆ, ಸೋದರರಿಗೆ ರಕ್ಷಾ ಬಂಧನ ಕಟ್ಟಲು ಹೋಗುತ್ತಿದ್ದರು. ಆದರೆ ದೋಣಿ ಮಾರ್ಗ ಮಧ್ಯೆ ನದಿಯಲ್ಲಿ ಮುಳುಗಿದೆ. ಮೃತದೇಹಗಳನ್ನು ನದಿಯಿಂದ ಹೊರಗೆ ತೆಗೆಯುವ, ನಾಪತ್ತೆಯಾದವರನ್ನು ಹುಡುಕಿ, ರಕ್ಷಿಸುವ ಕಾರ್ಯಾಚರಣೆ ನಡೆಯುತ್ತಿದೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ. ಈ ಬೋಟ್​​ನ ಸಾಮರ್ಥ್ಯಕ್ಕಿಂತಲೂ ಹೆಚ್ಚು ಜನರನ್ನು ತುಂಬಿದ್ದೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ. ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ.

9. ಕಾಂಗ್ರೆಸ್‌ ಟ್ವೀಟ್‌ ಎಫೆಕ್ಟ್‌: ದಿನಕ್ಕೆ 2 ಗಂಟೆ ಹೆಚ್ಚು ಕೆಲಸ ಮಾಡಲು ಸಿಎಂ ಬೊಮ್ಮಾಯಿ ನಿರ್ಧಾರ!
ಕಾಂಗ್ರೆಸ್‌ ಟ್ವಿಟರ್‌ನಲ್ಲಿ ಆರಂಭಿಸಿದ ಸಿಎಂ ಬದಲಾವಣೆ ಕುರಿತ ಚರ್ಚೆಗೆ ಮೊದಲ ಬಾರಿ ಪ್ರತಿಕ್ರಿಯೆ ನೀಡಿರುವ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯದ ಅಭಿವೃದ್ಧಿ ಕೆಲಸಗಳನ್ನು ಮಾಡಲು ನನಗೆ ಹೆಚ್ಚಿನ ಪ್ರೇರಣೆ ಸಿಕ್ಕಿದೆ ಎಂದಿದ್ದಾರೆ. ಮೈಸೂರು ಪ್ರವಾಸಕ್ಕೆ ಹೊರಡುವ ಮುನ್ನ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದ ಸಿಎಂ ಬೊಮ್ಮಾಯಿ, ಕಾಂಗ್ರೆಸ್‌ನವರು ತಮ್ಮನ್ನು ತಾವು ಏನೋ ಎಂದುಕೊಂಡಿದ್ದಾರೆ. ಅವರ ಮನಸ್ಸಿನಲ್ಲಿ ಅತಂತ್ರ ಇದೆ. ಅದನ್ನು ರಾಜ್ಯದ ತುಂಬಾ ಹರಡಲು ಪ್ರಯತ್ನ ಮಾಡುತ್ತಿದ್ದಾರೆ. ಆದರೆ ಅದನ್ನು ರಾಜ್ಯದ ಜನರು ನಂಬುವುದಿಲ್ಲ. ಇದೆಲ್ಲದರಿಂದ ನನ್ನ ನಿರ್ಣಯಗಳು ಮತ್ತಷ್ಟು ಗಟ್ಟಿಯಾಗಿವೆ. ರಾಜ್ಯದ ಹಿತಾಸಕ್ತಿ ಕಾಯಲು ಮತ್ತಷ್ಟು ಪ್ರೇರಣೆ ಲಭಿಸಿದೆ. ಬರುವ ದಿನಗಳಲ್ಲಿ ರಾಜ್ಯದ ಅಭಿವೃದ್ಧಿ, ಪಕ್ಷದ ಚಟುವಟಿಕೆಗಳ ಕಡೆಗೆ ಇನ್ನೂ ಹೆಚ್ಚಿನ ಗಮನ ನೀಡುತ್ತೇನೆ. ಪ್ರತಿದಿನ ಇನ್ನೂ ಎರಡು ಗಂಟೆ ಹೆಚ್ಚು ಕೆಲಸ ಮಾಡುತ್ತೇನೆ ಎಂದಿದ್ದಾರೆ. ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ.

10. ರಾಜೌರಿ ಸೇನಾನೆಲೆಯಲ್ಲಿ ಆತ್ಮಹತ್ಯಾ ದಾಳಿ, ಮೂವರು ಯೋಧರ ಸಾವು, ಇಬ್ಬರು ಉಗ್ರರ ಹತ್ಯೆ
ಜಮ್ಮು ಮತ್ತು ಕಾಶ್ಮೀರ ಕಣಿವೆಯ ರಜೌರಿಯ ಭೂಸೇನಾ ನೆಲೆ ಬಳಿ ಉಗ್ರರು ನಡೆಸಿದ ಆತ್ಮಹತ್ಯಾ ದಾಳಿಯಲ್ಲಿ ಮೂವರು ಯೋಧರು ಹುತಾತ್ಮರಾಗಿದ್ದಾರೆ. ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ. ಇಬ್ಬರು ಯೋಧರು ಗಾಯಗೊಂಡಿದ್ದಾರೆ. ರಜೌರಿಯಿಂದ 25 ಕಿಮೀ ದೂರದ ಪರ್ಗಲ್‌ ಎಂಬಲ್ಲಿರುವ ಸೇನಾ ಶಿಬಿರದ ಬೇಲಿಯನ್ನು ದಾಟಿ ಒಳನುಸುಳಲು ಯತ್ನಿಸುತ್ತಿದ್ದ ಉಗ್ರರನ್ನು ಸೇನಾಯೋಧರು ತಡೆದಾಗ ಗುಂಡಿನ ಚಕಮಕಿ ನಡೆಯಿತು ಎಂದು ಪೊಲೀಸ್‌ ಹೆಚ್ಚುವರಿ ಡೈರೆಕ್ಟರ್‌ ಜನರಲ್‌ ಮುಕೇಶ್‌ ಸಿಂಗ್‌ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಮೂವರು ಯೋಧರು ಬಲಿಯಾದರು. ಇಬ್ಬರು ಭಯೋತ್ಪಾದಕರು ಸತ್ತರು. ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

Lok Sabha Election 2024

Lok Sabha Election 2024 : ವೋಟ್‌ ಮಾಡಲು ಒಂದೂವರೆ ಲಕ್ಷ ರೂ. ಖರ್ಚು; ಲಂಡನ್‌ನಿಂದ ಮಂಡ್ಯಕ್ಕೆ ಬಂದ ಮಹಿಳೆ

Lok Sabha Election 2024 : ಲಂಡನ್‌ನಲ್ಲಿರುವ ಮಹಿಳೆಯೊಬ್ಬರು ಮಂಡ್ಯಕ್ಕೆ ಬಂದು ತಮ್ಮ ಹಕ್ಕು ಚಲಾಯಿಸಿದ್ದಾರೆ. ವೋಟ್‌ ಮಾಡಲೆಂದೇ ಮಂಡ್ಯಕ್ಕೆ ಬಂದ ಮಹಿಳೆಗೆ ವಿಮಾನದ ಖರ್ಚು ಒಂದೂವರೆ ಲಕ್ಷ ರೂ. ಖರ್ಚು ಆಗಿದೆ ಅಂತೆ.

VISTARANEWS.COM


on

By

Lok sabha election 2024
Koo

ಮಂಡ್ಯ: ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಲಂಡನ್‌ನಿಂದ ಮಂಡ್ಯಕ್ಕೆ ಮಹಿಳೆಯೊಬ್ಬರು ಒಂದೂವರೆ ಲಕ್ಷ ರೂಪಾಯಿ ಖರ್ಚು ಮಾಡಿ ವೋಟ್ ಮಾಡಿದ್ದಾರೆ. ಮಂಡ್ಯದ ಕಾಳೇನಹಳ್ಳಿ ಗ್ರಾಮದ ಸೋನಿಕಾ ಎಂಬಾಕೆ ಲಂಡನ್‌ನಿಂದ ಬಂದು ಕಾಳೇನ ಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.

ಇದೇ ವೇಳೆ ಮಾತಾನಾಡಿದ ಸೋನಿಕಾ ಎಲ್ಲೆಡೆ ಬರ ಇದೆ ನಮ್ಮ ರಾಜ್ಯ ಹಾಗೂ ದೇಶಕ್ಕೆ ಒಳ್ಳೆಯದಾಗಬೇಕು. ಮೋದಿ ನಾಯಕತ್ವದಲ್ಲಿ ದೇಶ ಮುನ್ನಡೆಯುತ್ತಿದೆ. ಹಾಗಾಗಿ ಕುಮಾರಸ್ವಾಮಿ ಅವರಿಗೆ ಮತ ಚಲಾಯಿಸಿದ್ದೀನಿ. ನೀವು ಮತದಾನ ಮಾಡಿ, ಮತ ಚಲಾಯಿಸುವುದಕ್ಕಾಗಿಯೇ ನಾನು ಒಂದೂವರೆ ಲಕ್ಷ ರೂ. ಖರ್ಚು ಮಾಡಿಕೊಂಡು ಬಂದಿದ್ದೀನಿ. ಮತದಾನ ನಮ್ಮ ಹಕ್ಕು, ನಿರ್ಲಕ್ಷ್ಯ ಮಾಡದೆ ಉದಾಸೀನತೆ ತೋರದೆ ಮತ ಹಾಕಿ ಎಂದು ಮನವಿ ಮಾಡಿದರು.

ಇದನ್ನೂ ಓದಿ: Lok Sabha Election 2024: 2ನೇ ಬಾರಿಗೆ ಬಂದು ಮತದಾನ ಮಾಡಿದ ಅದಮಾರು ಮಠದ ಶ್ರೀ ವಿಶ್ವಪ್ರಿಯ ತೀರ್ಥರು!

ದುಬೈ, ಫಿಲಿಫೈನ್ಸ್‌ನಿಂದ ಬಂದು ಹಕ್ಕು ಚಲಾಯಿಸಿದ ಮತದಾರರು

ಕೋಲಾರ/ಮಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ (Lok Sabha Election 2024) ಬಿರುಸಿನ ಮತದಾನ ನಡೆಯುತ್ತಿದ್ದು, ದುಬೈನಿಂದ ಬಂದು ಕೋಲಾರದ ನಿವಾಸಿಯೊಬ್ಬರು ಮತದಾನ ಮಾಡಿದ್ದಾರೆ. ಕೋಲಾರ ನಿವಾಸಿ ಅಬ್ದುಲ್ ಸುಬಾನ್ ಎಂಬುವವರು ಬ್ಯುಸಿನೆಸ್‌ಗೆಂದು ದುಬೈಗೆ ತೆರಳಿದ್ದರು. ಆದರೆ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ತಮ್ಮ ಹಕ್ಕು ಚಲಾಯಿಸಲೆಂದು ದುಬೈನಿಂದ ಬಂದಿದ್ದರು. ಕೋಲಾರದ ಸರ್ಕಾರಿ ಕನ್ನಡ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತಗಟ್ಟೆ ಸಂಖ್ಯೆ 117ರಲ್ಲಿ ಮತದಾನ ಮಾಡಿದರು.

ಇತ್ತ ಮಂಗಳೂರಿನ ಉಳಾಯಿಬೆಟ್ಟುವಿನ ಜೀವಿತ ಎಂಬುವವರು ದುಬೈನಿಂದ ಬಂದು ಮತದಾನ ಮಾಡಿದ್ದರು. ನಮ್ಮ ಮತ ನಮ್ಮ ಹಕ್ಕು ಎನ್ನುವ ದೃಷ್ಟಿಯಿಂದ ಮತದಾನ ಮಾಡಲು ಬಂದಿದ್ದಾಗಿ ಜೀವಿತ ತಿಳಿಸಿದರು.

ಚಿತ್ರದುರ್ಗದ ಶಿಕ್ಷಕರ ಕಾಲೋನಿ ನಗರದ ನಿವಾಸಿಯಾಗಿರುವ ಲಿಖಿತ ಅವರು ಫಿಲಿಫೈನ್ಸ್‌ನಿಂದ ಬಂದು ಮತದಾನ ಮಾಡಿದರು. ಫಿಲಿಫೈನ್ಸ್‌ನಲ್ಲಿ ಎಂಬಿಬಿಎಸ್‌ (MBBS) ಓದುತ್ತಿರುವ ಲಿಖಿತ, ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಮಾಡಲು ಬಂದಿದ್ದರು. ಚಿತ್ರದುರ್ಗದ ಜೋಗಿ ಮಟ್ಟಿ ರಸ್ತೆಯಲ್ಲಿರುವ ಮತಗಟ್ಟೆ ಸಂಖ್ಯೆ 230ರಲ್ಲಿ ಮತದಾನ ಮಾಡಿದರು. ಪ್ರತಿ ಬಾರಿ ತಪ್ಪದೆ ಬಂದು ಮತದಾನ ಮಾಡುತ್ತಿರುವುದಾಗಿ ಲಿಖಿತ ತಿಳಿಸಿದರು.

ಇದನ್ನೂ ಓದಿ: Lok Sabha Election 2024: ತಾಳಿ ಕಟ್ಟುವ ಹತ್ತು ನಿಮಿಷ ಮುಂಚೆ ಓಡೋಡಿ ಹೋದ ವರ; ವೋಟ್‌ ಹಾಕಿ ನಿರಾಳ

ಉಡುಪಿಯಿಂದ ತುಮಕೂರಿಗೆ ಬಂದು ಮತ ಹಾಕಿದ ನ್ಯಾಯಾಧೀಶ

ನ್ಯಾಯಾಧೀಶ ಜೀತು ಆರ್.ಎಸ್ ಅವರು ಉಡುಪಿಯಿಂದ ತುಮಕೂರಿಗೆ ಬಂದು ಮತ ಹಾಕಿದರು. ತುಮಕೂರು ಗ್ರಾಮಾಂತರದ ಕೆ.ಪಾಲಸಂದ್ರದಲ್ಲಿರುವ ಮತಗಟ್ಟೆ ಸಂಖ್ಯೆ 114ರಲ್ಲಿ ಹಕ್ಕು ಚಲಾಯಿಸಿದರು. ನಂತರ ಮಾತನಾಡಿದ ಅವರು ಎಲ್ಲರೂ ಮತದಾನ ಮಾಡುವಂತೆ ಮನವಿ ಮಾಡಿದರು. ದೇಶಕ್ಕೆ ಸ್ವಾತಂತ್ರ್ಯ ತಂದು ಕೊಡಲು ಸಾಕಷ್ಟು ಜನ ಮಹಾನ್ ಪುರುಷರು ಹೋರಾಡಿದ್ದಾರೆ. ಮತದಾನ ಮಾಡುವ ಮೂಲಕ ನಮಗೆ ಸಿಕ್ಕಿರುವ ಸ್ವಾತಂತ್ರ್ಯವನ್ನ ಸಂಭ್ರಮಿಸಬೇಕು. ಪ್ರತಿಯೊಬ್ಬರೂ ಮತದಾನ ಮಾಡುವ ಮೂಲಕ ಇಂತಹ ಪ್ರಾತಃಸ್ಮರಣೀಯರನ್ನು ಗೌರವಿಸಬೇಕು ಎಂದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Lok Sabha Election 2024: ಕಾಂಗ್ರೆಸಿಗರಿಗೆ ಚೊಂಬು ಹಿಡಿದು ಅಭ್ಯಾಸವಾಗಿದೆ: ಜೋಶಿ ಗೇಲಿ

Lok Sabha Election 2024: ನರೇಂದ್ರ ಮೋದಿ ಅವರು ಪ್ರಧಾನಿಯಾದ ಮೇಲೆ ದೇಶದಲ್ಲಿ 14 ಕೋಟಿಗೂ ಅಧಿಕ ಶೌಚಗೃಹ ನಿರ್ಮಿಸಿ ಜನರು ಕೈಯಲ್ಲಿ ಚೊಂಬು ಹಿಡಿಯುವುದನ್ನು ನಿಲ್ಲಿಸಿದ್ದಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

VISTARANEWS.COM


on

Lok Sabha Election 2024 union minister pralhad joshi latest statement at hubballi
Koo

ಹುಬ್ಬಳ್ಳಿ: ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಜನರ ಕೈಗೆ ಚೊಂಬು ಕೊಡೋದನ್ನು ಕಾಂಗ್ರೆಸ್ (Congress) ನಿಲ್ಲಿಸಲಿಲ್ಲ. ಪರಿಣಾಮ ಜನರೂ ಕಾಂಗ್ರೆಸಿಗರ ಕೈಗೆ ಚೊಂಬು ಕೊಡುತ್ತಾ ಬಂದರು ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಲೇವಡಿ (Lok Sabha Election 2024) ಮಾಡಿದರು.

ಹುಬ್ಬಳ್ಳಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸಿಗರಿಗೆ ಚೊಂಬು ಹಿಡಿದು ಅಡ್ಡಾಡೋದು ಅಭ್ಯಾಸವಾಗಿದೆ ಎಂದು ಟೀಕಿಸಿದರು.

ನರೇಂದ್ರ ಮೋದಿ ಅವರು ಪ್ರಧಾನಿಯಾದ ಮೇಲೆ ದೇಶದಲ್ಲಿ 14 ಕೋಟಿಗೂ ಅಧಿಕ ಶೌಚಗೃಹ ನಿರ್ಮಿಸಿ ಜನರು ಕೈಯಲ್ಲಿ ಚೊಂಬು ಹಿಡಿಯುವುದನ್ನು ನಿಲ್ಲಿಸಿದ್ದಾರೆ ಎಂದು ಸಚಿವ ಜೋಶಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದರು.

ಇದನ್ನೂ ಓದಿ: Lok Sabha Election 2024: ದುಬೈ, ಫಿಲಿಫೈನ್ಸ್‌ನಿಂದ ಬಂದು ಹಕ್ಕು ಚಲಾಯಿಸಿದ ಮತದಾರರು

ಯುಪಿಎ ಅವಧಿಯಲ್ಲಿ 12 ಲಕ್ಷ ಕೋಟಿ ರೂ. ಭ್ರಷ್ಟಾಚಾರ ನಡೆಸಿ ದೇಶದ ಪ್ರತಿಯೊಬ್ಬರ ಕೈಗೂ ಚೊಂಬು ಕೊಟ್ಟಿದ್ದಾರೆ ಎಂದು ಆರೋಪಿಸಿದರು.

ಸಂವಿಧಾನ ಶಿಲ್ಪಿ ಡಾ. ಬಿ.ಆರ್‌. ಅಂಬೇಡ್ಕರ್ ಅವರನ್ನು ಸೋಲಿಸಿದ್ದಲ್ಲದೆ, ಅವರ ವಿರುದ್ಧ ಗೆದ್ದವರಿಗೆ ಪದ್ಮವಿಭೂಷಣ ಕೊಟ್ಟು ಸತ್ಕರಿಸುವ ಮೂಲಕ ದಲಿತರ ಕೈಗೆ ಚೊಂಬು ಕೊಟ್ಟವರು ಕಾಂಗ್ರೆಸ್ಸಿಗರು ಎಂದು ಸಚಿವ ಜೋಶಿ ಹರಿಹಾಯ್ದರು.

ಇದೆಲ್ಲದರ ಪರಿಣಾಮ ಜನರೂ ನಿಮ್ಮ ಕೈಗೆ ಚೊಂಬು ಕೊಟ್ಟು ಕಳಿಸುತ್ತಿದ್ದಾರೆ. ದೇಶದ 20-25 ರಾಜ್ಯಗಳಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ಈಗ ಎರಡೇ ರಾಜ್ಯಗಳಲ್ಲಿ ಅಧಿಕಾರದಲ್ಲಿದೆ ಎಂದು ತಿಳಿಸಿದರು.

ಇದನ್ನೂ ಓದಿ: Lok Sabha Election: ರಾಜ್ಯಾದ್ಯಂತ 1 ಗಂಟೆ ವೇಳೆಗೆ 38.23% ಮತದಾನ; ಎಲ್ಲಿ ಹೆಚ್ಚು? ಎಲ್ಲಿ ಕಡಿಮೆ?

ಚತ್ತಿಸಗಢ, ರಾಜಸ್ಥಾನ, ಮಧ್ಯಪ್ರದೇಶ ಹೀಗೆ ಎಲ್ಲೆಡೆಯೂ ಹೀನಾಯವಾಗಿ ಸೋಲಿಸಿ ವಿರೋಧ ಪಕ್ಷದ ಸ್ಥಾನದಲ್ಲೂ ಕುಳಿತುಕೊಳ್ಳದಂತೆ ಜನ ನಿಮ್ಮ ಕೈಗೆ ಚೊಂಬು ಕೊಟ್ಟಿದ್ದಾರೆ ನೆನಪಿಟ್ಟುಕೊಳ್ಳಿ ಎಂದು ಸಚಿವ ಪ್ರಲ್ಹಾದ್‌ ಜೋಶಿ ಹೇಳಿದರು.

Continue Reading

Lok Sabha Election 2024

Lok Sabha Election 2024: 2ನೇ ಬಾರಿಗೆ ಬಂದು ಮತದಾನ ಮಾಡಿದ ಅದಮಾರು ಮಠದ ಶ್ರೀ ವಿಶ್ವಪ್ರಿಯ ತೀರ್ಥರು!

Lok Sabha Election 2024: ಅದಮಾರು ಶ್ರೀಗಳು ಅಧಿಕಾರಿಗಳ ನಿರ್ಲಕ್ಷ್ಯದಿಂದ ಎರಡು ಬಾರಿ ಮತದಾನ ಮಾಡುವಂತಾಗಿದೆ. ಶುಕ್ರವಾರ ಬೆಳಗ್ಗೆಯೇ ಮತಗಟ್ಟೆ ಮುಂದೆ ಇದ್ದ ಅದಮಾರು ಶ್ರೀಗಳು ಮೊದಲಿಗರಾಗಿ ಮತದಾನ ಮಾಡಿದರು. ನೋಂದಣಿ ಮಾಡಿ, ಕೈಗೆ ಇಂಕ್ ಹಾಕಿಸಿಕೊಂಡು, ಬಟನ್ ಪ್ರೆಸ್ ಮಾಡಿದ್ದರು. ಆದರೆ, ಬೀಪ್‌ ಸೌಂಡ್‌ ಕೇಳಲೇ ಇಲ್ಲ. ಈ ಬಗ್ಗೆ ಮತಗಟ್ಟೆ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಅದಕ್ಕೆ ಅಧಿಕಾರಿಗಳು ಮತದಾನವಾಗಿದೆ ಎಂದು ಉತ್ತರ ಹೇಳಿದ್ದಾರೆ. ಹೀಗಾಗಿ ಅದಮಾರು ಶ್ರೀ ಮತಗಟ್ಟೆಯಿಂದ ವಾಪಾಸ್ ಆಗಿದ್ದರು. ಪುನಃ ಪರಿಶೀಲನೆ ಮಾಡಿದ್ದರಿಂದ ಅವರಿಗೆ ಮತ್ತೊಂದು ಸುತ್ತು ಮತದಾನ ಮಾಡಲು ಅವಕಾಶವನ್ನು ಕಲ್ಪಿಸಲಾಯಿತು.

VISTARANEWS.COM


on

Lok Sabha Election 2024 Sri Vishwapriya Theertha Swamiji of Adamaru Mutt casts his vote for second time
Koo

ಉಡುಪಿ: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಶುಕ್ರವಾರ (ಏಪ್ರಿಲ್‌ 26) ಮೊದಲ ಹಂತದ ಮತದಾನ (First phase of polling) ನಡೆಯುತ್ತಿದೆ. ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ (Udupi Chikkamagaluru Lok Sabha constituency) ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಆದರೆ, ಉಡುಪಿಯಲ್ಲಿ ಅದಮಾರು ಮಠದ ಶ್ರೀ ವಿಶ್ವಪ್ರಿಯ ತೀರ್ಥರು (Adamaru Mutt Sri Vishwapriya Theertha Swamiji) ಎರಡೆರಡು ಬಾರಿ ಮತ ಚಲಾವಣೆ ಮಾಡಿದ ಪ್ರಸಂಗ ನಡೆದಿದೆ.

ಅದಮಾರು ಶ್ರೀಗಳು ಅಧಿಕಾರಿಗಳ ನಿರ್ಲಕ್ಷ್ಯದಿಂದ ಎರಡು ಬಾರಿ ಮತದಾನ ಮಾಡುವಂತಾಗಿದೆ. ಶುಕ್ರವಾರ ಬೆಳಗ್ಗೆಯೇ ಮತಗಟ್ಟೆ ಮುಂದೆ ಇದ್ದ ಅದಮಾರು ಶ್ರೀಗಳು ಮೊದಲಿಗರಾಗಿ ಮತದಾನ ಮಾಡಿದರು. ನೋಂದಣಿ ಮಾಡಿ, ಕೈಗೆ ಇಂಕ್ ಹಾಕಿಸಿಕೊಂಡು, ಬಟನ್ ಪ್ರೆಸ್ ಮಾಡಿದ್ದರು. ಆದರೆ, ಬೀಪ್‌ ಸೌಂಡ್‌ ಕೇಳಲೇ ಇಲ್ಲ. ಈ ಬಗ್ಗೆ ಮತಗಟ್ಟೆ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಅದಕ್ಕೆ ಅಧಿಕಾರಿಗಳು ಮತದಾನವಾಗಿದೆ ಎಂದು ಉತ್ತರ ಹೇಳಿದ್ದಾರೆ. ಹೀಗಾಗಿ ಅದಮಾರು ಶ್ರೀ ಮತಗಟ್ಟೆಯಿಂದ ವಾಪಾಸ್ ಆಗಿದ್ದಾರೆ.

ಅಧಿಕಾರಿಗಳ ನಿರ್ಲಕ್ಷ್ಯ ಬಗ್ಗೆ ಶ್ರೀಗಳ ಶಿಷ್ಯರ ಬೇಸರ

ಬಳಿಕ ಮಾಧ್ಯಮಗಳ ಬಳಿ ಈ ಬಗ್ಗೆ ಅದಮಾರು ಶ್ರೀಗಳು ಮಾಹಿತಿ ನೀಡುತ್ತಿದ್ದಾಗ ಮತಗಟ್ಟೆ ಅಧಿಕಾರಿಗಳು ಸ್ಥಳಕ್ಕೆ ಬಂದು ಶ್ರೀಗಳನ್ನು ಮತ್ತೆ ಒಳಗೆ ಕರೆದು ಮತದಾನ ಮಾಡುವಂತೆ ಹೇಳಿದರು. ಹೀಗಾಗಿ ಅಧಿಕಾರಿಗಳ ಸೂಚನೆ ಬಳಿಕ ಎರಡನೇ ಬಾರಿ ಬಂದು ಶ್ರೀಗಳು ಮತದಾನ ಮಾಡಿದ್ದಾರೆ. ಆದರೆ, ಅಧಿಕಾರಿಗಳ ನಿರ್ಲಕ್ಷ್ಯದ ಬಗ್ಗೆ ಶ್ರೀಗಳ ಶಿಷ್ಯರು ಬೇಸರ ಹೊರಹಾಕಿದ್ದಾರೆ.

ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿಯಿಂದ ಮತದಾನ

ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿಯವರು ಶುಕ್ರವಾರ ಬೆಳಗ್ಗೆ ಮತಗಟ್ಟೆ ಸಂಖ್ಯೆ 185ರಲ್ಲಿ ಮತದಾನ ಮಾಡಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಶ್ರೀಗಳು, ತಮಗೆ ಬೇಕಾಗಿರುವ ಸರ್ಕಾರ ರೂಪಿಸುವ ದೊಡ್ಡ ಬದ್ಧತೆ ಪ್ರಜೆಗಳ ಮೇಲೆ ಇದೆ. ಎಲ್ಲ ಪ್ರಜೆಗಳು ಅವಶ್ಯವಾಗಿ ಮತದಾನ ಮಾಡಬೇಕು. ಯಾರು ಕೂಡ ಮತದಾನದಿಂದ ದೂರ ಉಳಿಯಬಾರದು. ಮತದಾನ ಮಾಡಲು ತುಂಬಾ ಹೆಮ್ಮೆ ಅನಿಸುತ್ತಿದೆ. ರಾಮದೇವರ ಪ್ರಾಣ ಪ್ರತಿಷ್ಠೆ ಮಾಡಿದಾಗ ಅನುಭವಿಸಿದ ಧನ್ಯತಾಭಾವವನ್ನು ಈಗಲೂ ಅನುಭವಿಸಿದ್ದೇವೆ. ದೇಶದಲ್ಲಿ ಎಲ್ಲ ಬಗೆಯ ಜನ ಎಲ್ಲ ಕಾಲಕ್ಕೂ ಇರುತ್ತಾರೆ. ನೆಲದ ಸಂಸ್ಕೃತಿಯನ್ನು ಗೌರವಿಸುವ ಸರ್ಕಾರವನ್ನು ರೂಪಿಸುವ ಅವಕಾಶ ನಮಗೆ ಇದೆ.‌ ಸಮಾಜದ ಪ್ರಸಕ್ತ ವಾತಾವರಣವನ್ನು ಅರ್ಥ ಮಾಡಿಕೊಂಡು ಮತದಾನ ಮಾಡಬೇಕು. ನಮಗೆ ಬೇಕಾಗಿರುವ ಸರ್ಕಾರವನ್ನು ರೂಪಿಸಬೇಕು. ರಾಜನಾದವ ಸರಿಯಾಗಿದ್ದರೆ ಕಾಲ ಯಾವತ್ತೂ ಹಾಳಾಗುವುದಿಲ್ಲ. ಈಗ ಪ್ರಜೆಗಳೇ ರಾಜರು ಎಂದು ಹೇಳಿದರು.

ಇದನ್ನೂ ಓದಿ: Lok Sabha Election 2024: ಚಾಮರಾಜನಗರದಲ್ಲಿ ಮತ ಯಂತ್ರ ಪೀಸ್‌ ಪೀಸ್‌; ಮತಗಟ್ಟೆ ಧ್ವಂಸ, ಲಾಠಿ ಚಾರ್ಜ್‌!

ಪ್ರಧಾನಿ ನರೇಂದ್ರ ಮೋದಿ ಸರ್ವಾಧಿಕಾರಿ ಆಡಳಿತ ನಡೆಸುತ್ತಿರುವ ಬಗ್ಗೆ ಪ್ರತಿಪಕ್ಷಗಳ ಆರೋಪದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಪೇಜಾವರ ಶ್ರೀಗಳು, ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಪ್ರಧಾನಿ ಇದ್ದಾರೆ ಎಂದಾದರೆ ಅವರು ಸರ್ವಾಧಿಕಾರಿ ಆಗುವುದು ಹೇಗೆ? ಪ್ರಜೆಗಳು ತಮಗೆ ಬೇಕಾದ ಸರ್ಕಾರವನ್ನು ರೂಪಿಸುತ್ತಿದ್ದಾರೆ. ಅದನ್ನು ಆಕ್ಷೇಪಿಸಿದರೆ ಸಾರ್ವಕಾಲಿಕ ಆಕ್ಷೇಪವಾಗುತ್ತದೆ. ಮತದಾನ ಪ್ರಮಾಣ ಕಡಿಮೆ ಆಗಬಾರದು. ವ್ಯವಸ್ಥೆ ನಮಗೆ ಅನುಕೂಲವಾಗಿಲ್ಲ ಅಂತ ದೂರುತ್ತೇವೆ. ಹಾಗಾದರೆ ವ್ಯವಸ್ಥೆಯನ್ನು ಸರಿ ಮಾಡುವುದು ಯಾರು? ಮತದಾನದಿಂದ ದೂರ ಉಳಿದವರು ಈ ದೇಶದ ನಾಗರಿಕರೇ ಅಲ್ಲ. ಅವರಿಗೆ ಸಿಟಿಜನ್‌ಶಿಪ್ ಕೊಡಬಾರದು. ಅದು ಕಠೋರ ನಿಲುವು ಆಗುತ್ತದೆ. ಆದರೆ, ಅವಶ್ಯವಾಗಿ ಬೇಕು. ಸರ್ಕಾರ ನೀಡುವ ಸವಲತ್ತುಗಳನ್ನು ಬಂದ್ ಮಾಡಬೇಕು. ಅವರನ್ನು ದ್ವಿತೀಯ, ತೃತೀಯ ದರ್ಜೆಯ ನಾಗರಿಕರನ್ನಾಗಿ ಪರಿಗಣಿಸಬೇಕು. ಆಗ ಪರಿಸ್ಥಿತಿ ಸುಧಾರಿಸಬಹುದು ಎಂದು ಹೇಳಿದರು.

Continue Reading

Lok Sabha Election 2024

Lok Sabha Election 2024 : ಟೇಬಲ್ ಕಿತ್ತೆಸೆದು ಬಿಜೆಪಿ ಕಾರ್ಯಕರ್ತನ ಎದೆಗೆ ಒದ್ದ ರೌಡಿಶೀಟರ್‌ ಕಟ್ಟಿಂಗ್ ಸೀನ

Lok Sabha Election 2024 : ಬಿಜೆಪಿ ಕಾರ್ಯಕರ್ತರು ಮತಗಟ್ಟೆ ಬಳಿ ಟೇಬಲ್‌ ಹಾಕಿದ್ದಕ್ಕೆ ರೌಡಿಶೀಟರ್‌ ಹಾಗೂ ಕಾಂಗ್ರೆಸ್‌ ಮುಖಂಡ ತನ್ನ ಸಹಚರರೊಂದಿಗೆ ದಾಂಧಲೆ ನಡೆಸಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಬಿಜೆಪಿ ಹಾಗೂ ಕಾಂಗ್ರೆಸ್‌ ಕಾರ್ಯಕರ್ತರ ಮಾರಾಮಾರಿಯಲ್ಲಿ ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡಿದ್ದಾರೆ.

VISTARANEWS.COM


on

By

Lok sabha election 2024
Koo

ಆನೇಕಲ್: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ (Lok Sabha Election 2024) ಸರ್ಜಾಪುರದ ಮತಗಟ್ಟೆ79, 80, 81ಹಾಗೂ 82ರ ವ್ಯಾಪ್ತಿಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ. ಬಿಜೆಪಿ ಕಾರ್ಯಕರ್ತರು ಮತಗಟ್ಟೆ ದಾರಿಯಲ್ಲಿ ಟೇಬಲ್ ಹಾಕಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಟೇಬಲ್ ಕಿತ್ತೆಸೆದು ದಾಂಧಲೆ ನಡೆಸಿರುವ ಆರೋಪ ಕೇಳಿಬಂದಿದೆ.

ಈ ವೇಳೆ ಮಾತಿಗೆ ಮಾತು ಬೆಳೆದು ಎರಡು ಪಕ್ಷಗಳ ಕಾರ್ಯಕರ್ತರು ಹೊಡೆದಾಡಿಕೊಂಡಿದ್ದಾರೆ. ಬಿಜೆಪಿ ಕಾರ್ಯಕರ್ತರು ಹಾಕಿದ್ದ ಟೇಬಲ್‌ಗಳು ಮತ್ತು ಚೇರ್‌ಗಳನ್ನು ಎಸೆದು ಹಾಕಿ ಗಲಾಟೆ ಮಾಡಿದ್ದಾರೆ. ಈ ವೇಳೆ ಬಿಜೆಪಿ ಕಾರ್ಯಕರ್ತ ಪ್ರಕಾಶ್ ಎಂಬಾತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ರೌಡಿ ಶೀಟರ್ ಹಾಗೂ ಕಾಂಗ್ರೆಸ್ ಮುಖಂಡ ಶ್ರೀನಿವಾಸ್ ಎಂಬಾತ ಪ್ರಕಾಶ್‌ರ ಎದೆಗೆ ಕಾಲಿನಿಂದ ಒದ್ದು ಹಲ್ಲೆ ಮಾಡಿದ್ದಾನೆ.

ಪ್ರಕಾಶ್ ಕಳೆದ ಮೂರು ತಿಂಗಳ ಹಿಂದಷ್ಟೇ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ರೌಡಿಶೀಟರ್ ಶ್ರೀನಿವಾಸ್ ಅಲಿಯಾಸ್ ಕಟ್ಟಿಂಗ್ ಸೀನ ತನ್ನ ಸಹಚರರೊಂದಿಗೆ ಬಂದು ಪ್ರಕಾಶರ ಎದೆಗೆ ಕಾಲಿನಿಂದ ಒದ್ದಿದ್ದಾರೆ. ತೀವ್ರ ಅಸ್ವಸ್ಥರಾಗಿರುವ ಪ್ರಕಾಶ್ ಅವರನ್ನು ವಂದನಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

lok sabha election 2024

ಕಾರ್ಯಕರ್ತರ ಕಿರಿಕ್‌ನಿಂದ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ ಎನ್ನಲಾಗಿದೆ. ಸರ್ಜಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Lok Sabha Election 2024 ಮುಸ್ಲಿಮರಿಗೆ ಒಬಿಸಿ ಮೀಸಲಾತಿ ಸತ್ಯ; ನಮ್ಮ ಬಳಿ ದಾಖಲೆ ಇದೆ ಎಂದ ಪ್ರಲ್ಹಾದ್‌ ಜೋಶಿ

ಚಾಮರಾಜನಗರದಲ್ಲಿ ಮತ ಯಂತ್ರ ಪೀಸ್‌ ಪೀಸ್‌; ಮತಗಟ್ಟೆ ಧ್ವಂಸ, ಲಾಠಿ ಚಾರ್ಜ್‌!

ಚಾಮರಾಜನಗರ: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಶುಕ್ರವಾರ (ಏಪ್ರಿಲ್‌ 26) ಮೊದಲ ಹಂತದ ಮತದಾನ (First phase of polling) ನಡೆಯುತ್ತಿದ್ದು, ಎಲ್ಲರೂ ಉತ್ಸಾಹದಿಂದ ಪಾಲ್ಗೊಳ್ಳುತ್ತಿದ್ದರೆ, ಚಾಮರಾಜನಗರ ಲೋಕಸಭಾ ಕ್ಷೇತ್ರದ (Chamarajanagar Lok Sabha constituency) ಮಹದೇಶ್ವರಬೆಟ್ಟ ವ್ಯಾಪ್ತಿಯ ಐದು ಗ್ರಾಮಗಳಲ್ಲಿ ಮತದಾನವನ್ನು ಬಹಿಷ್ಕರಿಸಲಾಗಿದೆ. ಇದೇ ವೇಳೆ ಇಂಡಿಗನತ್ತ ಗ್ರಾಮದಲ್ಲಿ ಮತಗಟ್ಟೆಯನ್ನೇ ಧ್ವಂಸ ಮಾಡಲಾಗಿದೆ.

ಎಷ್ಟೇ ಬಾರಿ ಮನವಿ ಮಾಡಿದರೂ ಈ ಗ್ರಾಮಗಳಲ್ಲಿ ಮೂಲ ಸೌಕರ್ಯವನ್ನು ಕಲ್ಪಿಸಲಾಗಿಲ್ಲ. ಚುನಾವಣೆ ಬಂದಾಗ ಮಾತ್ರ ಈ ರಾಜಕಾರಣಿಗಳಿಗೆ ನಮ್ಮ ನೆನಪಾಗುತ್ತದೆ. ಅದಾದ ಬಳಿಕ ನಮ್ಮನ್ನು ಕೇಳುವವರೇ ಇಲ್ಲ ಎಂದು ಆರೋಪಿಸಿ ಮಹದೇಶ್ವರಬೆಟ್ಟ ವ್ಯಾಪ್ತಿಯ ಐದು ಗ್ರಾಮಗಳ ಗ್ರಾಮಸ್ಥರು ಮತದಾನವನ್ನು ಬಹಿಷ್ಕಾರ ಮಾಡಿದ್ದಾರೆ.

Lok Sabha Election 2024 Villagers vandalise polling booth in Chamarajanagar

85 ಮಂದಿಯಲ್ಲಿ ಮತ ಚಲಾಯಿಸಿದ್ದು ಇಬ್ಬರೇ!

ಇಂಡಿಗನತ್ತ, ತೇಕಣೆ, ಮೆಂದಾರೆ ಹಾಗೂ ತುಳಸಿಕೆರೆ ಗ್ರಾಮಗಳಲ್ಲಿ ಮತದಾನವನ್ನು ಬಹಿಷ್ಕಾರ ಮಾಡಲಾಗಿದೆ. ಪಡಸಲನತ್ತ ಗ್ರಾಮದಲ್ಲಿ 85 ಮತದಾರರ ಪೈಕಿ ಕೇವಲ ಇಬ್ಬರು ಮತದಾನ ಮಾಡಿದ್ದಾರೆ. ಉಳಿದಂತೆ ಮತಗಟ್ಟೆಗಳತ್ತ ಯಾರೊಬ್ಬರೂ ಸುಳಿದಿಲ್ಲ.

Lok Sabha Election 2024 Villagers vandalise polling booth in Chamarajanagar

ನೀರು, ರಸ್ತೆ, ವಿದ್ಯುತ್‌ ಏನೂ ಇಲ್ಲ!

ಕನಿಷ್ಠ ಮೂಲಭೂತ ಸೌಕರ್ಯವನ್ನೂ ನೀಡಲಾಗಿಲ್ಲ. ಕುಡಿಯುವ ನೀರು, ರಸ್ತೆ, ವಿದ್ಯುತ್, ಆರೋಗ್ಯ, ಶಿಕ್ಷಣ ಎಲ್ಲವೂ ಇಲ್ಲಿ ಮರೀಚಿಕೆಯಾಗಿದೆ. ಕೆಲವು ದಿನಗಳ ಹಿಂದೆಯೇ ಮತದಾನ ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಲಾಗಿತ್ತು. ಆದರೂ, ಯಾವೊಂದು ಭರವಸೆ ಸಿಗದೇ ಇರುವ ಹಿನ್ನೆಲೆಯಲ್ಲಿ ಮತದಾನವನ್ನು ಬಹಿಷ್ಕಾರ ಮಾಡುತ್ತಿರುವುದಾಗಿ ಗ್ರಾಮಸ್ಥರು ಹೇಳಿದ್ದಾರೆ.

ಮತಯಂತ್ರ ಧ್ವಂಸ ಮಾಡಿದ ಗ್ರಾಮಸ್ಥರು

ಇನ್ನು ಇಂಡಿಗನತ್ತ ಗ್ರಾಮದಲ್ಲಿ ರೊಚ್ಚಿಗೆದ್ದ ಗ್ರಾಮಸ್ಥರು ಮತಗಟ್ಟೆಯನ್ನು ಧ್ವಂಸ ಮಾಡಿದ್ದಾರೆ. ಮತದಾನದಿಂದ ದೂರ ಉಳಿದ ಗ್ರಾಮಸ್ಥರಿಂದ ಈ ಕೃತ್ಯ ನಡೆದಿದೆ. ಈ ವೇಳೆ ಗ್ರಾಮಸ್ಥರ ಮನವೊಲಿಕೆಗೆ ತೆರಳಿದ್ದ ಅಧಿಕಾರಿಗಳ ಮೇಲೆಯೂ ಹಲ್ಲೆ ನಡೆಸಲಾಗಿದೆ. ಆಕ್ರೋಶಗೊಂಡ ಹಲವರು ಇವಿಎಂ, ಮೇಜು ಕುರ್ಚಿ ಮತಗಟ್ಟೆ ಸಾಮಗ್ರಿಗಳನ್ನು ಧ್ವಂಸ ಮಾಡಿದ್ದಾರೆ.

ಲಾಠಿ ಚಾರ್ಚ್‌; ಹಲವರಿಗೆ ಗಾಯ

ಸ್ಥಳದಲ್ಲಿ ಜನರನ್ನು ಚದುರಿಸಲು ಪೊಲೀಸರಿಂದ ಲಾಠಿ ಚಾರ್ಜ್ ನಡೆಸಲಾಗಿದೆ. ಇದೇ ವೇಳೆ ತಿರುಗಿಬಿದ್ದ ಜನರು ಸಹ ಪೊಲೀಸರ ಮೇಲೆ ಕಲ್ಲು ತೂರಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತವರಣ ನಿರ್ಮಾಣವಾಗಿದೆ. ಸಾರ್ವಜನಿಕರು ಸೇರಿ ಅಧಿಕಾರಿಗಳಿಗೂ ಗಾಯಗಳಾಗಿವೆ. ಪುರುಷರು, ಮಹಿಳೆಯರು ಎನ್ನದೆ ಪೊಲೀಸರು ಲಾಠಿ ಚಾರ್ಚ್ ಮಾಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Lok sabha election 2024
Lok Sabha Election 20248 mins ago

Lok Sabha Election 2024 : ವೋಟ್‌ ಮಾಡಲು ಒಂದೂವರೆ ಲಕ್ಷ ರೂ. ಖರ್ಚು; ಲಂಡನ್‌ನಿಂದ ಮಂಡ್ಯಕ್ಕೆ ಬಂದ ಮಹಿಳೆ

IPL 2024
ಪ್ರಮುಖ ಸುದ್ದಿ13 mins ago

IPL 2024 : ಡೆಲ್ಲಿ ಕ್ಯಾಪಿಟಲ್ಸ್​ ತಂಡ ಸೇರಿದ ಅಫಘಾನಿಸ್ತಾನ ತಂಡದ ಆಟಗಾರ

Lok Sabha Election 2024 union minister pralhad joshi latest statement at hubballi
ಕರ್ನಾಟಕ13 mins ago

Lok Sabha Election 2024: ಕಾಂಗ್ರೆಸಿಗರಿಗೆ ಚೊಂಬು ಹಿಡಿದು ಅಭ್ಯಾಸವಾಗಿದೆ: ಜೋಶಿ ಗೇಲಿ

X Server Down
ದೇಶ14 mins ago

X Server Down: ದೇಶಾದ್ಯಂತ ಎಕ್ಸ್‌ ಜಾಲತಾಣದ ಸರ್ವರ್‌ ಡೌನ್;‌ ನಿಮ್ಮ ಖಾತೆ ಚೆಕ್‌ ಮಾಡಿಕೊಳ್ಳಿ

Lok Sabha Election 2024 Sri Vishwapriya Theertha Swamiji of Adamaru Mutt casts his vote for second time
Lok Sabha Election 202414 mins ago

Lok Sabha Election 2024: 2ನೇ ಬಾರಿಗೆ ಬಂದು ಮತದಾನ ಮಾಡಿದ ಅದಮಾರು ಮಠದ ಶ್ರೀ ವಿಶ್ವಪ್ರಿಯ ತೀರ್ಥರು!

Rekha kisses Richa Chadha baby bump at Heeramandi event
ಬಾಲಿವುಡ್20 mins ago

Richa Chadda:  ರಿಚಾ ಚಡ್ಡಾ ಬೇಬಿ ಬಂಪ್‌ಗೆ ಮುತ್ತಿಟ್ಟ ನಟಿ ರೇಖಾ!

Lok sabha election 2024
Lok Sabha Election 202426 mins ago

Lok Sabha Election 2024 : ಟೇಬಲ್ ಕಿತ್ತೆಸೆದು ಬಿಜೆಪಿ ಕಾರ್ಯಕರ್ತನ ಎದೆಗೆ ಒದ್ದ ರೌಡಿಶೀಟರ್‌ ಕಟ್ಟಿಂಗ್ ಸೀನ

Lok Sabha Election 2024
ಕರ್ನಾಟಕ30 mins ago

Lok Sabha Election 2024: ಮೂರು ಗಂಟೆವರೆಗೆ ಶೇ.50.93 ವೋಟಿಂಗ್‌; ರಾಜ್ಯದಲ್ಲಿ ಈ ಬಾರಿ ದಾಖಲೆಯ ಮತದಾನವಾಗುತ್ತಾ?

IPL 2024
ಪ್ರಮುಖ ಸುದ್ದಿ43 mins ago

IPL 2024 : ಐಪಿಎಲ್ ವಿಕ್ಷಣೆಯಲ್ಲಿ ಹೊಸ ದಾಖಲೆ ಬರೆದ ಡಿಸ್ನಿ ಹಾಟ್​​ಸ್ಟಾರ್​

Mangoes for Health
ಆರೋಗ್ಯ51 mins ago

Mangoes for Health: ದಿನಕ್ಕೆ ಎಷ್ಟು ಮಾವಿನ ಹಣ್ಣು ತಿಂದರೆ ಆರೋಗ್ಯಕ್ಕೆ ಒಳ್ಳೆಯದು?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ5 hours ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20246 hours ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20246 hours ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ12 hours ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ1 day ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ1 day ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ1 day ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 20241 day ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

Dina Bhavishya
ಭವಿಷ್ಯ3 days ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

ಟ್ರೆಂಡಿಂಗ್‌