ಬೆಂಗಳೂರು: ಕರ್ನಾಟಕ ಹಾಗೂ ಮಹಾರಾಷ್ಟ್ರ ಗಡಿ ವಿವಾದದ ಕುರಿತು ಕೇಂದ್ರ ಗೃಹಸಚಿವ ಅಮಿತ್ ಶಾ ಸಮ್ಮುಖದಲ್ಲಿ ಮಹತ್ವದ ಸಭೆ ನಡೆದಿದೆ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ನಮ್ಮ ಕ್ಲಿನಿಕ್ ಯೋಜನೆಗೆ ಚಾಲನೆ ದೊರೆತಿದೆ, ಪೆನ್ನಾರ್ ವಿವಾದದಲ್ಲಿ ಕರ್ನಾಟಕಕ್ಕೆ ಹಿನ್ನಡೆಯಾಗಿದೆ, ಬಿ.ಎಸ್. ಯಡಿಯೂರಪ್ಪ ಅವರ ಅಸಮಾಧಾನಕ್ಕೆ ರಾಜ್ಯ ಬಿಜೆಪಿ ಸಂಧಾನ ನಡೆಸಿದೆ ಎನ್ನುವುದೂ ಸೇರಿ ದಿನದ ಪ್ರಮುಖ ಸುದ್ದಿಗಳ ಗುಚ್ಛ ವಿಸ್ತಾರ TOP 10 NEWS.
ರಾಜ್ಯ, ದೇಶದಲ್ಲಿ ನಡೆಯುವ ಉತ್ತಮ ಸುದ್ದಿಗಳನ್ನು ಓದಲು ವಿಸ್ತಾರ ನ್ಯೂಸ್ WhatsApp ಕಮ್ಯೂನಿಟಿ ಸೇರಿ. ಇಲ್ಲಿ ಕ್ಲಿಕ್ ಮಾಡಿ.
1. Namma Clinic | ರಾಜ್ಯದಲ್ಲಿ 48 ಹೊಸ ಪಿಎಚ್‌ಸಿ, 12 ಕಿಮೋಥೆರಪಿ ಸೆಂಟರ್‌ಗಳ ಸ್ಥಾಪನೆ: ಸಿಎಂ ಬೊಮ್ಮಾಯಿ ಘೋಷಣೆ
ರಾಜ್ಯದಲ್ಲಿ ಹೊಸದಾಗಿ ೪೮ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ತೆರೆಯಲಾಗುವುದು, ಕಿಮೋಥೆರಪಿಗಾಗಿ ೧೨ ಕ್ಯಾನ್ಸರ್ ಸೆಂಟರ್‌ಗಳನ್ನು ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಹುಬ್ಬಳ್ಳಿ ತಾಲೂಕಿನ ಬೈರೀದೇವರಕೊಪ್ಪದಲ್ಲಿ ಬುಧವಾರ ಅವರು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ನಮ್ಮ ಕ್ಲಿನಿಕ್ (Namma clinic) ಚಿಕಿತ್ಸಾಲಯ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
2. Border Dispute | ಗಡಿ ವಿವಾದ ಶಮನಕ್ಕೆ ಸಮನ್ವಯ ಸಮಿತಿ, ತೀರ್ಪು ಬರುವವರೆಗೆ ಶಾಂತಿ ಕಾಪಾಡಲು ಕರ್ನಾಟಕ – ಮಹಾರಾಷ್ಟ್ರ ಸಿಎಂಗಳಿಗೆ ಶಾ ಸೂಚನೆ
ಬೆಳಗಾವಿ ಗಡಿ ವಿವಾದಕ್ಕೆ (Border Dispute) ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಕರ್ನಾಟಕ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿಗಳ ಸಮನ್ವಯ ಸಭೆ ಬುಧವಾರ ಸಂಜೆ ದಿಲ್ಲಿಯಲ್ಲಿ ನಡೆಯಿತು. ಗಡಿ ವಿವಾದ ಪ್ರಕರಣವು ಸುಪ್ರೀಂ ಕೋರ್ಟ್‌ನಲ್ಲಿರುವುದರಿಂದ ಉಭಯ ರಾಜ್ಯಗಳ ಮುಖ್ಯಮಂತ್ರಿಗಳು ತಟಸ್ಥ ನಿಲುವಿಗೆ ಬದ್ಧವಾಗಿರಬೇಕು ಎಂಬ ನಿರ್ಧಾರವನ್ನು ಸಭೆಯಲ್ಲಿ ಕೈಗೊಳ್ಳಲಾಯಿತು. ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಹಾರಾಷ್ಟ್ರದ ಸಿಎಂ ಏಕನಾಥ ಶಿಂಧೆ ಅವರು ಈ ನಿರ್ಧಾರಕ್ಕೆ ತಮ್ಮ ಸಮ್ಮತಿಯನ್ನು ಸೂಚಿಸಿದರು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
3. ಪೆನ್ನಾರ್ ನದಿ ನೀರು ವಿವಾದ: ನ್ಯಾಯಾಧಿಕರಣ ರಚಿಸಲು ಕೇಂದ್ರಕ್ಕೆ ಸುಪ್ರೀಂ ನಿರ್ದೇಶನ, ಕರ್ನಾಟಕಕ್ಕೆ ಹಿನ್ನಡೆ
ಕರ್ನಾಟಕ ಹಾಗೂ ತಮಿಳುನಾಡು ನಡುವಿನ ಪೆನ್ನಾರ್ ನದಿ (ದಕ್ಷಿಣ ಪಿನಾಕಿನಿ) ನೀರು ಬಳಕೆ ವಿವಾದ ಬಗೆಹರಿಸಲು ಮೂರು ತಿಂಗಳೊಳಗೆ ನ್ಯಾಯಾಧಿಕರಣ ರಚಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಬುಧವಾರ ನಿರ್ದೇಶನ ನೀಡಿದೆ. ಇದರಿಂದಾಗಿ, ಮಾತುಕತೆ ಮೂಲಕ ಜಲವಿವಾದ ಬಗೆಹರಿಸಿಕೊಳ್ಳುವ ಉದ್ದೇಶ ಹೊಂದಿದ್ದ ಕರ್ನಾಟಕಕ್ಕೆ ಹಿನ್ನಡೆಯಾದಂತಾಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
4. Halal Certification | ಮತ್ತೆ ಮುನ್ನೆಲೆಗೆ ಬಂದ ಹಲಾಲ್ ಪ್ರಮಾಣ ಪತ್ರ ವಿಚಾರ: ಅಧಿವೇಶನದಲ್ಲಿ ವಿಧೇಯಕ ಮಂಡನೆಗೆ ಸಿದ್ಧತೆ
ಕರ್ನಾಟಕದಲ್ಲಿ ಕಳೆದ ಕೆಲ ತಿಂಗಳ ಹಿಂದೆ ಸದ್ದು ಮಾಡಿ ತಣ್ಣಗಾಗಿದ್ದ ಹಲಾಲ್ ವಿಚಾರ ಇದೀಗ ಮತ್ತೆ ಮುನ್ನೆಲೆಗೆ ಬಂದಿದೆ. ಈ ಬಾರಿ ಯಾವುದೇ ಹಿಂದು ಸಂಘಟನೆಗಳಿಂದಾಗಲಿ, ಸಾರ್ವಜನಿಕರಿಂದಾಗಲಿ ಅಲ್ಲದೇ, ಬಿಜೆಪಿ ವಿಧಾನ ಪರಿಷತ್ ಸದಸ್ಯರೇ ಈ ವಿಚಾರವನ್ನು ಮುಂದೆ ತಂದಿದ್ದಾರೆ. ಈ ಕುರಿತು ಬೆಳಗಾವಿಯ ವಿಧಾನಮಂಡಲ ಅಧಿವೇಶನದಲ್ಲಿ ಖಾಸಗಿ ವಿಧೇಯಕ ಮಂಡನೆ ಮಾಡಲು ಎನ್. ರವಿ ಕುಮಾರ್ ಮುಂದಾಗಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
5. Bernard Arnault | ಈಗ ವಿಶ್ವದ ಅತ್ಯಂತ ಶ್ರೀಮಂತ ಎಲಾನ್ ಮಸ್ಕ್ ಅಲ್ಲ, ಬರ್ನಾರ್ಡ್ ಅರ್ನಾಲ್ಟ್! ಅದಾನಿ ನಂ.3
ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದ ಎಲಾನ್ ಮಸ್ಕ್ ಈಗ ಎರಡನೇ ಸ್ಥಾನಕ್ಕೆ ಇಳಿದಿದ್ದಾರೆ. ಬ್ಲೂಮ್ ಬರ್ಗ್ ಪಟ್ಟಿಯ ಪ್ರಕಾರ ಫ್ರೆಂಚ್ ಉದ್ಯಮಿ ಬರ್ನಾರ್ಡ್ ಅರ್ನಾಲ್ಟ್ (73) (Bernard Arnault) ಅವರು ಎಲಾನ್ ಮಸ್ಕ್ ಅವರನ್ನು ಹಿಂದಿಕ್ಕಿ ಅಗ್ರ ಸ್ಥಾನಕ್ಕೆ ಏರಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
6. ಬಿ.ಎಸ್. ಯಡಿಯೂರಪ್ಪ ಕೋಪ ಶಮನಗೊಳಿಸಿದ ಬಿಜೆಪಿ; ಕೊಪ್ಪಳಕ್ಕೆ ಆಗಮಿಸಲು ಕೊನೆಗೂ ಒಪ್ಪಿಗೆ
ರಾಜ್ಯದ 10 ಜಿಲ್ಲೆಗಳಲ್ಲಿ ಬಿಜೆಪಿ ಕಾರ್ಯಾಲಯಗಳನ್ನು ಉದ್ಘಾಟನೆ ಮಾಡಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಆಗಮಿಸುತ್ತಿರುವ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನು ಆಹ್ವಾನಿಸದೆ ರಾಜ್ಯ ಬಿಜೆಪಿ ಯಡವಟ್ಟು ಮಾಡಿಕೊಂಡಿದೆ. ಈ ವಿಚಾರ ವಿವಾದ ಆಗುತ್ತಿರುವಂತೆಯೇ ಮನವೊಲಿಸಲು ಕೊನೆಗೂ ಸಫಲವಾಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
7. Midday Meal | ಇನ್ನು ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ವಿಶೇಷ ಭೋಜನ; ಇದಕ್ಕಿದೆ ಸಾರ್ವಜನಿಕ ಸಹಭಾಗಿತ್ವ
ರಾಜ್ಯದ ಎಲ್ಲ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ (Midday Meal) ಮಕ್ಕಳಿಗೆ ವಿಶೇಷ ಭೋಜನ ಮತ್ತು ಶಾಲೆಗಾಗಿ ನಾವು ನೀವು’ ಕಾರ್ಯಕ್ರಮ ಆಯೋಜಿಸಲು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
8. India China Clash | ಅರುಣಾಚಲ ಗಡಿಯಲ್ಲಿ ಸಂಘರ್ಷ, ಭಾರತಕ್ಕೆ ನಮ್ಮ ಬೆಂಬಲ ಎಂದ ಅಮೆರಿಕ
ಅರುಣಾಚಲ ಪ್ರದೇಶದ ಗಡಿಯಲ್ಲಿ ಡಿಸೆಂಬರ್ 9ರಂದು ಕೆಣಕಲು ಬಂದ ಚೀನಾ ಸೈನಿಕರಿಗೆ ಭಾರತದ ಯೋಧರು (India China Clash) ಸರಿಯಾಗಿಯೇ ತಿರುಗೇಟು ನೀಡಿದ್ದಾರೆ. ಭಾರತದ ಯೋಧರು ಚೀನಾ ಸೈನಿಕರಿಗೆ ಪೆಟ್ಟು ನೀಡಿದ ವಿಡಿಯೊ ಕೂಡ ಲಭ್ಯವಾಗಿದೆ. ಇದೇ ಕಾರಣಕ್ಕಾಗಿ ಗಡಿಯಲ್ಲಿ ಚೀನಾ ತೆಪ್ಪಗಾಗಿದೆ. ಇದರ ಬೆನ್ನಲ್ಲೇ, “ಗಡಿ ನಿಯಂತ್ರಣ ವಿಚಾರದಲ್ಲಿ ನಾವು ಭಾರತದ ಪರ” ಎಂದು ಅಮೆರಿಕ ಹೇಳಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
9. Shahrukh Khan | ದೀಪಿಕಾ ಪಡುಕೋಣೆ ವೇಷಭೂಷಣ ಆಕ್ಷೇಪಾರ್ಹ: ಮಧ್ಯಪ್ರದೇಶ ಗೃಹ ಸಚಿವ ನರೋತ್ತಮ್ ಮಿಶ್ರಾ
ಶಾರುಖ್ ಖಾನ್ (Shahrukh Khan) ಮತ್ತು ದೀಪಿಕಾ ಪಡುಕೋಣೆ ನಟನೆಯ ಪಠಾಣ್ ಚಿತ್ರದ ‘ಬೇಷರಮ್ ರಂಗ್’ ಹಾಡು ಬಿಡುಗಡೆಯಾದಾಗಿನಿಂದ, ವಿವಾದವನ್ನು ಹುಟ್ಟುಹಾಕಿದೆ. ಸಿನಿಮಾದ ‘ಬೇಷರಮ್ ರಂಗ್’ ಹಾಡು ಹಿಂದುಗಳ ಭಾವನೆಗೆ ಧಕ್ಕೆ ತಂದ ಆರೋಪದ ಮೇರೆಗೆ ಹಾಡಿನ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಇದರ ಬೆನ್ನಲ್ಲೇ ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಅವರು ದೀಪಿಕಾ ಪಡುಕೋಣೆ ಅವರು ಧರಿಸಿರುವ ವೇಷಭೂಷಣಗಳ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
10. Arjun Tendulkar | ಅಪ್ಪನಂತೆ ಚೊಚ್ಚಲ ರಣಜಿ ಪಂದ್ಯದಲ್ಲೇ ಶತಕ ಸಿಡಿಸಿದ ಅರ್ಜುನ್ ತೆಂಡೂಲ್ಕರ್!
ಟೀಮ್ ಇಂಡಿಯಾದ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ತಮ್ಮ ಚೊಚ್ಚಲ ರಣಜಿ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಚೊಚ್ಚಲ ಇನಿಂಗ್ಸ್‌ನಲ್ಲಿಯೇ ಶತಕ ಬಾರಿಸಿ ಮಿಂಚಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
ಮತ್ತಷ್ಟು ಪ್ರಮುಖ ಸುದ್ದಿಗಳಿವು