Site icon Vistara News

ವಿಸ್ತಾರ TOP 10 NEWS: ದೆಹಲಿಯಲ್ಲಿ ಸಂಪುಟ ಸರ್ಕಸ್ಸಿನಿಂದ, ನೂತನ ಸಂಸತ್ತಿನಲ್ಲಿ ʼಸೆಂಗೋಲ್‌ʼವರೆಗಿನ ಪ್ರಮುಖ ಸುದ್ದಿಗಳಿವು

vistara top 10 news cabinet expansion process shifted to delhi to sengol in parliament and more news

#image_title

1. Karnataka Politics: ಗ್ಯಾರಂಟಿ ಯೋಜನೆಗಳ ಜಾರಿ ಸದ್ಯಕ್ಕಿಲ್ಲ?: ಸುಳಿವು ನೀಡಿದ ಸಚಿವ ಪ್ರಿಯಾಂಕ್‌ ಖರ್ಗೆ
ಮಾಸಿಕ 200 ಯೂನಿಟ್‌ ಉಚಿತ ವಿದ್ಯುತ್‌ ಸೇರಿ ಚುನಾವಣೆಗೂ ಮುನ್ನ ಕಾಂಗ್ರೆಸ್‌ ಘೋಷಣೆ ಮಾಡಿದ್ದ ಐದು ಗ್ಯಾರಂಟಿ ಯೋಜನೆಗಳ ಜಾರಿ ಸದ್ಯಕ್ಕಿಲ್ಲ ಎಂಬ ಸುಳಿವನ್ನು ಸಚಿವ ಪ್ರಿಯಾಂಕ್‌ ಖರ್ಗೆ ನೀಡಿದ್ದಾರೆ. ಗ್ಯಾರಂಟಿ ಯೋಜನೆಗಳ ಕುರಿತು ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಟೀಕೆಗಳ ಕುರಿತು ಪ್ರಿಯಾಂಕ್‌ ಖರ್ಗೆ ಉತ್ತರಿಸಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

2. Textbook Revision: ಸಾವರ್ಕರ್‌, ಹೆಡ್ಗೆವಾರ್‌ ಪಠ್ಯಕ್ಕೆ ಕಾಂಗ್ರೆಸ್‌ ಸರ್ಕಾರ ಕೊಕ್‌?: ಅನೇಕ ಕಾಯ್ದೆಗಳೂ ವಾಪಸ್‌ ಸಾಧ್ಯತೆ
ಬಿಜೆಪಿ ಅವಧಿಯಲ್ಲಿ ಕೈಗೊಂಡ ಅನೇಕ ಕಾರ್ಯಗಳನ್ನು ತಮ್ಮ ಸರ್ಕಾರ ಬಂದ ನಂತರ ಹಿಂಪಡೆಯುವುದಾಗಿ ಚುನಾವಣೆಗೂ ಮುನ್ನ ಅನೇಕ ಕಾಂಗ್ರೆಸ್‌ ನಾಯಕರು ಹೇಳಿದ್ದ ಹಿನ್ನೆಲೆಯಲ್ಲಿ ಈಗ ಚರ್ಚೆ ಗರಿಗೆದರಿದೆ. ಮುಖ್ಯವಾಗಿ ಲೇಖಕ ರೋಹಿತ್‌ ಚಕ್ರತೀರ್ಥ ಅಧ್ಯಕ್ಷತೆಯ ಪಠ್ಯಪುಸ್ತಕ ರಚನಾ ಸಮಿತಿಯು ಹೊಸದಾಗಿ ಸೇರಿಸಿದ್ದ, ಸ್ವಾತಂತ್ರ್ಯ ವೀರ ವಿನಾಯಕ ದಾಮೋದರ ಸಾವರ್ಕರ್‌ ಕುರಿತ ಪಠ್ಯ, ಆರ್‌ಎಸ್‌ಎಸ್‌ ಸಂಸ್ಥಾಪಕ ಡಾ. ಕೇಶವ ಬಲಿರಾಮ್ ಹೆಡ್ಗೆವಾರ್‌ ಕುರಿತ ಪಠ್ಯಗಳನ್ನು ಕೈಬಿಡುವ ಸಾಧ್ಯತೆಯಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

3. Karnataka Politics: ಬೆಂಬಲಿಗರ ಪಟ್ಟಿ ಹಿಡಿದು ದೆಹಲಿಗೆ ಹಾರಿದ ಸಿಎಂ-ಡಿಸಿಎಂ: ಭಾವಿ ಸಚಿವರ ಪಟ್ಟಿಯಲ್ಲಿ ಶೆಟ್ಟರ್‌ ಹೆಸರಿಲ್ಲ?
ಈಗಾಗಲೆ 8 ಸಚಿವರು ಪ್ರಮಾಣವಚನ ಸ್ವೀಕರಿಸಿರುವ ಕಾಂಗ್ರೆಸ್‌ ಸರ್ಕಾರ ಮೊದಲ ಬಾರಿಗೆ ಸಂಪುಟ ವಿಸ್ತರಣೆಗೆ ಕೈಹಾಕಿದ್ದು, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ನವದೆಹಲಿಗೆ ಪ್ರಯಾಣಿಸಿದ್ದಾರೆ. ತಮ್ಮ ತಮ್ಮ ಬೆಂಬಲಿಗರ ಹೆಸರುಗಳನ್ನು ಹಿಡಿದು ದೆಹಲಿಗೆ ಹೊರಟಿರುವ ಇಬ್ಬರೂ ನಾಯಕರ ಪಟ್ಟಿಯಲ್ಲಿ ಮಾಜಿ ಸಿಎಂ ಹಾಗೂ ಚುನಾವಣೆಗೆ ಮುನ್ನ ಕಾಂಗ್ರೆಸ್‌ಗೆ ಆಗಮಿಸಿದ ಜಗದೀಶ್‌ ಶೆಟ್ಟರ್‌ ಹೆಸರು ಇಲ್ಲ ಎನ್ನುವುದು ಈಗ ಚರ್ಚೆಯ ವಿಷಯವಾಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

4. Karnataka Politics: ಮಹಾರಾಷ್ಟ್ರ ರೀತಿ ʼಆಪರೇಷನ್‌ʼ ಸುಳಿವು ನೀಡಿದ ಬಿಜೆಪಿ ನಾಯಕ ಬಸನಗೌಡ ಪಾಟೀಲ್‌ ಯತ್ನಾಳ್‌!
ಪೊಲೀಸ್‌ ಇಲಾಖೆಯು ಕೇಸರೀಕರಣ ಆಗಲು ಬಿಡುವುದಿಲ್ಲ ಎಂಬ ಡಿಸಿಎಂ ಡಿ.ಕೆ. ಶಿವಕುಮಾರ್‌ ಮಾತಿಗೆ ಆಕ್ರೋಶ ವ್ಯಕ್ತಪಡಿಸಿರುವ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ಹಾಗಾದರೆ ಪೊಲೀಸ್‌ ಠಾಣೆಗಳನ್ನು ಹಸಿರೀಕರಣ ಮಾಡುತ್ತಾರ? ಎಂದು ಪ್ರಶ್ನಿಸಿದ್ದಾರೆ. ಇದೇ ವೇಳೆ, ಮಹಾರಾಷ್ಟ್ರ ರೀತಿಯಲ್ಲಿ ಸರ್ಕಾರವನ್ನು ಕೆಡವಿ ತಮ್ಮ ಸರ್ಕಾರ ರಚಿಸಬಹುದು ಎಂಬ ಸುಳಿವನ್ನೂ ನೀಡಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

5. Electricity Bill: ಕರೆಂಟ್‌ ಬಿಲ್‌ ಕಿರಿಕ್‌; ಬಾಕಿ ಬಿಲ್‌ ಕಟ್ಟು ಎಂದಿದ್ದಕ್ಕೆ ಚಪ್ಪಲಿಯಿಂದಲೇ ಹೊಡೆದವ ಅರೆಸ್ಟ್‌
ಈಗ ರಾಜ್ಯಾದ್ಯಂತ ಕಾಂಗ್ರೆಸ್‌ ಗ್ಯಾರಂಟಿಯದ್ದೇ ಸುದ್ದಿ. 200 ಯುನಿಟ್‌ ಉಚಿತ ವಿದ್ಯುತ್‌, ಮಹಿಳೆಯರಿಗೆ ಉಚಿತ ಪ್ರಯಾಣ ಸೇರಿದಂತೆ ಐದು ಗ್ಯಾರಂಟಿಯನ್ನು ಪ್ರಣಾಳಿಕೆಯಲ್ಲಿ ನೀಡಿದ್ದ ಕಾಂಗ್ರೆಸ್‌ ಈಗ ಅಧಿಕಾರಕ್ಕೆ ಬಂದಿದೆ. ಈ ವೇಳೆ ಜನರೂ ಸಹ ಆ ನಿಟ್ಟಿನಲ್ಲಿ ಬೇಡಿಕೆ ಇಟ್ಟಿದ್ದು, ಕೆಲವು ಕಡೆ ವಿದ್ಯುತ್‌ ಬಿಲ್‌ ಕಟ್ಟಲು ನಿರಾಕರಣೆ ಮಾಡುತ್ತಿದ್ದರೆ, ಇನ್ನು ಕೆಲವು ಕಡೆ ಮಹಿಳೆಯರು ಬಸ್‌ ಟಿಕೆಟ್‌ ಪಡೆಯುವುದಿಲ್ಲ ಎಂದು ತಗಾದೆ ತೆಗೆಯುತ್ತಿದ್ದಾರೆ. ಈ ನಡುವೆ ಕೊಪ್ಪಳ ತಾಲೂಕಿನ ಕೂಕನಪಳ್ಳಿ ಗ್ರಾಮದಲ್ಲಿ ಹಲವು ತಿಂಗಳಿನಿಂದ ಕಟ್ಟದ ಬಾಕಿ ವಿದ್ಯುತ್‌ ಬಿಲ್‌ (Electricity Bill) ಅನ್ನು ಪಾವತಿ ಮಾಡುವಂತೆ ಕೇಳಿದ್ದಕ್ಕೆ ಜೆಸ್ಕಾಂ ಸಿಬ್ಬಂದಿ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ಮಾಡಿದ್ದಲ್ಲದೆ, ಚಪ್ಪಲಿಯಿಂದಲೂ ಹೊಡೆದಿದ್ದಾನೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.
ಹೆಚ್ಚಿನ ಓದಿಗಾಗಿ: H.D. Kumaraswamy: ಕರೆಂಟ್‌ ಬಿಲ್‌ ಕಟ್ಟಬೇಡಿ ಎಂದು ಜನರಿಗೆ ಕರೆ ನೀಡುತ್ತೇನೆ: ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಎಚ್ಚರಿಕೆ

6. Assembly Session: ಯು.ಟಿ. ಖಾದರ್‌ 23ನೇ ಸ್ಪೀಕರ್‌: ಮುಸ್ಲಿಂ ಸಮುದಾಯದಿಂದ ಮೊದಲ ಸಭಾಧ್ಯಕ್ಷ
ಕರ್ನಾಟಕ ವಿಧಾನಸಭೆ ಇತಿಹಾಸದಲ್ಲಿ ಮೊದಲ ಬಾರಿಗೆ ಮುಸ್ಲಿಂ ಸಮುದಾಯದ ಶಾಸಕರೊಬ್ಬರು ಸ್ಪೀಕರ್‌ ಆಗಿ ಆಯ್ಕೆಯಾಗಿದ್ದಾರೆ. ಐದು ಬಾರಿ ಶಾಸಕರಾಗಿ ಆಯ್ಕೆಯಾಗಿರುವ 53 ವರ್ಷದ ಯು.ಟಿ. ಖಾದರ್‌ ಅವರನ್ನು ವಿಧಾನಸಭೆಯ ಸಭಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

7. New Parliament Building: ನೂತನ ಸಂಸತ್‌ ಭವನದ ಉದ್ಘಾಟನೆ ಕಾರ್ಯಕ್ರಮ ಬಹಿಷ್ಕರಿಸಿದ ಟಿಎಂಸಿ, ಆಪ್‌; ಕೊಟ್ಟ ಕಾರಣ ಹೀಗಿದೆ
ದೇಶದ ಶಕ್ತಿಕೇಂದ್ರವಾಗಿ ರೂಪುಗೊಂಡಿರುವ ನೂತನ ಸಂಸತ್‌ ಭವನದ ಉದ್ಘಾಟನೆಗೆ (New Parliament Building) ದಿನಾಂಕ ನಿಗದಿಯಾಗಿದೆ. ಮೇ 28ರಂದು ಮಧ್ಯಾಹ್ನ 12 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರ ಉಪಸ್ಥಿತಿಯಲ್ಲಿ ಸಂಸತ್‌ ಭವನವನ್ನು ಉದ್ಘಾಟಿಸಲಿದ್ದಾರೆ. ಇದರ ಮಧ್ಯೆಯೇ, ಪ್ರತಿಭಟನೆಯ ರೂಪವಾಗಿ ತೃಣಮೂಲ ಕಾಂಗ್ರೆಸ್‌ ಹಾಗೂ ಆಮ್‌ ಆದ್ಮಿ ಪಕ್ಷವು ಸಂಸತ್‌ ಭವನದ ಉದ್ಘಾಟನೆ ಕಾರ್ಯಕ್ರಮದಿಂದ ದೂರ ಉಳಿಯಲು ತೀರ್ಮಾನಿಸಿವೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.
ಹೆಚ್ಚಿನ ಓದಿಗಾಗಿ: ವಿಸ್ತಾರ Explainer: ಹೊಸ ಸಂಸತ್​ ಭವನದಲ್ಲಿ ಕಂಗೊಳಿಸಲಿದೆ ತಮಿಳುನಾಡಿನ ಚಿನ್ನದ ಸೆಂಗೋಲ್; ಏನಿದು ರಾಜದಂಡ?

8. ದೇಗುಲ ಧ್ವಂಸ ಸಹಿಸಲ್ಲ; ಆಸ್ಟ್ರೇಲಿಯಾದಲ್ಲಿ ನಡೆದ ಕೃತ್ಯ ಖಂಡಿಸಿದ ಪ್ರಧಾನಿ ಮೋದಿ, ಅಲ್ಲಿನ ಪ್ರಧಾನಿ ಹೇಳಿದ್ದೇನು?
ಪ್ರಧಾನಿ ನರೇಂದ್ರ ಮೋದಿ (PM Modi) ಸದ್ಯ ಆಸ್ಟ್ರೇಲಿಯಾ ಪ್ರವಾಸದಲ್ಲಿ (PM Modi Australia Visit)ಇದ್ದಾರೆ. ಅಲ್ಲಿ ಅವರಿಗೆ ಅದ್ಧೂರಿ ಸ್ವಾಗತ, ಅಪಾರ ಪ್ರೀತಿ ಸಿಕ್ಕಿದೆ. ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸ್​ (PM Anthony Albanese )ಅವರು ಪ್ರಧಾನಿ ಮೋದಿಯವರನ್ನು ‘ಬಾಸ್​’ ಎಂದು ಕರೆದಿದ್ದಾರೆ. ಆಸ್ಟ್ರೇಲಿಯಾದಲ್ಲಿರುವ ಹಿಂದು ದೇವಸ್ಥಾನಗಳ ಮೇಲೆ ಇತ್ತೀಚಿನ ದಿನಗಳಲ್ಲಿ ಖಲಿಸ್ತಾನಿಗಳು ದಾಳಿ ಮಾಡುತ್ತಿರುವ ಬಗ್ಗೆಯೂ ಈ ವೇಳೆ ಚರ್ಚೆಯಾಯಿತು. ಬಳಿಕ ಜಂಟಿ ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ಮಾತನಾಡಿದ ಪ್ರಧಾನಿ ಮೋದಿ ‘ಭಾರತ ಮತ್ತು ಆಸ್ಟ್ರೇಲಿಯಾದ ಸೌಹಾರ್ದ ಸಂಬಂಧಕ್ಕೆ ಧಕ್ಕೆ ತರುವ ಕೆಲಸಗಳು, ಆಲೋಚನೆಗಳನ್ನು ಸಹಿಸಲು ಸಾಧ್ಯವಿಲ್ಲ’ ಎಂದು ಹೇಳಿದರು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

9. IPL 2023 : ಜಿಯೋಸಿನಿಮಾದಲ್ಲಿ 2.5 ಕೋಟಿ ವೀಕ್ಷಕರ ಹೊಸ ದಾಖಲೆ
ಗುಜರಾತ್ ಟೈಟನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಟಾಟಾ ಐಪಿಎಲ್ 2023ರ ಕ್ವಾಲಿಫೈಯರ್-1 ಪಂದ್ಯವನ್ನು ಜಿಯೋಸಿನಿಮಾದಲ್ಲಿ ದಾಖಲೆಯ 2.5 ಕೋಟಿ ಜನರು ವೀಕ್ಷಿಸಿದ್ದಾರೆ. ಈ ಮೂಲಕ ಜಿಯೋಸಿನಿಮಾ ಹೊಸ ಮೈಲುಗಲ್ಲು ಸೃಷ್ಟಿಸುವುದನ್ನು ಮುಂದುವರಿಸಿದೆ. ಜಿಯೋಸಿನಿಮಾ ಹಾಲಿ ಐಪಿಎಲ್ ಆವೃತ್ತಿಯಲ್ಲಿ ಮೂರನೇ ಬಾರಿಗೆ ತನ್ನದೇ ಆದ ಏಕಕಾಲಿಕ (ಕನ್ಕರೆನ್ಸಿ) ವೀಕ್ಷಕರ ದಾಖಲೆಯನ್ನು ಮುರಿದಿದೆ. 2019ರ ಐಸಿಸಿ ಏಕದಿನ ವಿಶ್ವಕಪ್ ವೇಳೆ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಸೆಮಿಫೈನಲ್ ಪಂದ್ಯದ ವೇಳೆ ನಿರ್ಮಾಣವಾಗಿದ್ದ ವಿಶ್ವದಾಖಲೆಯನ್ನೂ ಸರಿಗಟ್ಟಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

10. Viral News : ಅಮ್ಮನಿಗೆ ಬುದ್ಧಿ ಕಲಿಸಲು ಊರಿಗೇ ಬೆಂಕಿ ಇಟ್ಟ ಮಗಳು! ಇದರ ಹಿಂದಿದೆ ಅಕ್ರಮ ಸಂಬಂಧದ ಕತೆ
ಮಕ್ಕಳು ತಪ್ಪು ಮಾಡದಂತೆ ತಂದೆ, ತಾಯಿ ಬುದ್ಧಿ ಹೇಳುವುದು ಸಾಮಾನ್ಯ. ಆದರೆ ತಂದೆ ತಾಯಿಯೇ ತಪ್ಪು ಮಾಡಿಬಿಟ್ಟರೆ ಮಕ್ಕಳು ಅಸಹಾಯಕರಾಗಿಬಿಡುತ್ತಾರೆ. ಅದೇ ರೀತಿಯಲ್ಲಿ ತಾಯಿಯ ತಪ್ಪನ್ನು ಹೇಗಾದರೂ ಸರಿ ಮಾಡಬೇಕು ಎಂದುಕೊಂಡಿದ್ದ ಮಗಳು ಊರಿಗೇ ಬೆಂಕಿ ಇಟ್ಟ ವಿಚಿತ್ರ ಘಟನೆ (Viral News) ಆಂಧ್ರಪ್ರದೇಶದ ತಿರುಪತಿ ಜಿಲ್ಲೆಯಲ್ಲಿ ನಡೆದಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

Exit mobile version