Vistara Top 10 News: ಚಂದ್ರಯಾನ-3ಕ್ಕೆ ಯಶಸ್ವಿ ನಾಂದಿಯಿಂದ, ಕರಾವಳಿಯಲ್ಲಿ ಮಳೆ ಅಲರ್ಟ್‌ವರೆಗಿನ ಪ್ರಮುಖ ಸುದ್ದಿಗಳಿವು - Vistara News

ಕರ್ನಾಟಕ

Vistara Top 10 News: ಚಂದ್ರಯಾನ-3ಕ್ಕೆ ಯಶಸ್ವಿ ನಾಂದಿಯಿಂದ, ಕರಾವಳಿಯಲ್ಲಿ ಮಳೆ ಅಲರ್ಟ್‌ವರೆಗಿನ ಪ್ರಮುಖ ಸುದ್ದಿಗಳಿವು

ದೇಶ, ವಿದೇಶ, ರಾಜ್ಯದಲ್ಲಿ ದಿನಪೂರ್ತಿ ನಡೆದ ಘಟನಾವಳಿಗಳಲ್ಲಿ ಆಯ್ದ ಪ್ರಮುಖ ಸುದ್ದಿಗಳು ವಿಸ್ತಾರ TOP 10 NEWS ನಲ್ಲಿ.

VISTARANEWS.COM


on

vistara top 10 news
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

1. Chandrayaan 3: ದೇಶದ ಕನಸು ಆಗಸಕ್ಕೆ; ಫ್ರಾನ್ಸ್​ನಿಂದಲೇ ಚಂದ್ರಯಾನಕ್ಕೆ ಶುಭ ಕೋರಿದ ಪ್ರಧಾನಿ ಮೋದಿ
ಭಾರತದ ಮಹತ್ವಾಕಾಂಕ್ಷಿ ಯೋಜನೆ ಚಂದ್ರಯಾನ-3 (Chandrayaan 3)ಗೆ ಕೌಂಟ್​ಡೌನ್ ಶುರುವಾಗಿದೆ. ಒಂದು ಐತಿಹಾಸಿಕ ಕ್ಷಣ ಕಣ್ತುಂಬಿಕೊಳ್ಳಲು ಇಡೀ ದೇಶ ಕಾತರತೆಯಿಂದ ಕಾಯುತ್ತಿದೆ. ಇದೇ ಹೊತ್ತಲ್ಲಿ ಪ್ರಧಾನಿ ನರೇಂದ್ರ ಮೋದಿಯವರು (PM Narendra Modi) ಟ್ವೀಟ್ ಮಾಡಿ, ಇಸ್ರೋದ (ISRO) ಮಹಾನ್ ಮಿಷನ್​ ಚಂದ್ರಯಾನ-3ಕ್ಕೆ ಶುಭ ಹಾರೈಸಿದ್ದಾರೆ. ‘ಭಾರತದ ಬಾಹ್ಯಾಕಾಶ ಕ್ಷೇತ್ರದ ಇತಿಹಾಸದಲ್ಲಿಯೇ ಜುಲೈ 14 ಸುವರ್ಣಾಕ್ಷರಗಳಿಂದ ಬರೆದಿಡಲ್ಪಡುವ ದಿನ ಆಗಲಿದೆ. ನಮ್ಮ ಚಂದ್ರಯಾನ 3ರ ಪ್ರಯಾಣ ಇನ್ನೇನು ಕೆಲವೇ ಹೊತ್ತಲ್ಲಿ ಪ್ರಾರಂಭವಾಗಲಿದೆ. ಈ ಮಹತ್ವಾಕಾಂಕ್ಷಿ ಯೋಜನೆ ನಮ್ಮ ದೇಶದ ಭರವಸೆ ಮತ್ತು ಕನಸುಗಳನ್ನು ಹೊತ್ತು ಸಾಗಲಿದೆ’ ಎಂದು ಹೇಳಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.
ಹೆಚ್ಚಿನ ಓದಿಗಾಗಿ: Chandrayaan 3: ಚಂದ್ರಯಾನ 3 ಉಡಾವಣೆ ಯಶಸ್ವಿ; ಆದರೂ, ಆಗಸ್ಟ್‌ 23ರವರೆಗೆ ನಾವೇಕೆ ಕಾಯಬೇಕು?

2. Chakravarti Sulibele: ಬಿಜೆಪಿ-ಕಾಂಗ್ರೆಸ್‌ ಇಬ್ಬರಿಗೂ ನಾನು ಡೇಂಜರ್‌ ಎನ್ನೋದು ಗೊತ್ತು: ಚಕ್ರವರ್ತಿ ಸೂಲಿಬೆಲೆ ಸಂದರ್ಶನ
ತಮ್ಮನ್ನು ಬಿಜೆಪಿಯವರು ಸಮರ್ಥನೆ ಮಾಡಿಕೊಳ್ಳುತ್ತಾರೆ, ಕಾಂಗ್ರೆಸ್‌ನವರು ಮಾತ್ರ ತೆಗಳುತ್ತಾರೆ ಎಂಬುದನ್ನು ಖ್ಯಾತ ವಾಗ್ಮಿ ಚಕ್ರವರ್ತಿ ಸೂಲಿಬೆಲೆ (Chakravarti Sulibele) ಅಲ್ಲಗಳೆದಿದ್ದಾರೆ. ವಿಸ್ತಾರ ನ್ಯೂಸ್‌ ಸಿಇಒ ಹಾಗೂ ಪ್ರಧಾನ ಸಂಪಾದಕ ಹರಿಪ್ರಕಾಶ ಕೋಣೆಮನೆಯವರೊಂದಿಗೆ ವಿಶೇಷ ಸಂದರ್ಶನದಲ್ಲಿ ಅನೇಕ ವಿಚಾರಗಳ ಕುರಿತು ಚಕ್ರವರ್ತಿ ಸೂಲಿಬೆಲೆ ಮಾತನಾಡಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.
ಹೆಚ್ಚಿನ ಓದಿಗಾಗಿ: Chakravarti Sulibele: ನಾನು ಎಂಟ್ರಿ ಕೊಟ್ಟ ತಕ್ಷಣ ಬಿಜೆಪಿಯಲ್ಲಿ ತಲ್ಲಣ: ರಾಜಕೀಯ ಸೇರ್ಪಡೆ ಕುರಿತು ಚಕ್ರವರ್ತಿ ಸೂಲಿಬೆಲೆ ಮಾತು

3. PM Modi France Visit: ನರೇಂದ್ರ ಮೋದಿಗೆ ದೇಶದ ಅತ್ಯುನ್ನತ ನಾಗರಿಕ ಗೌರವ ನೀಡಿದ ಫ್ರಾನ್ಸ್‌
ಫ್ರಾನ್ಸ್‌ ದೇಶಕ್ಕೆ ಭೇಟಿ ನೀಡಿರುವ (PM Modi France Visit) ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಅಲ್ಲಿನ ಅತ್ಯುನ್ನತ ನಾಗರಿಕ ಮತ್ತು ಸೇನಾ ಗೌರವ ಆಗಿರುವ ʼಗ್ರ್ಯಾಂಡ್ ಕ್ರಾಸ್ ಆಫ್ ದಿ ಲೀಜನ್ ಆಫ್ ಆನರ್ʼ ಅನ್ನು ನೀಡಲಾಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

4. Rashtriya Swayamsevak Sangh: ಆರ್‌ಎಸ್‌ಎಸ್‌ ಸಂಸ್ಥೆಗಳಿಗೆ ಭೂಮಿ ಹಂಚಿಕೆಗೆ ತಡೆ: ಆರ್‌. ಅಶೋಕ್‌, ಬಿ.ವೈ. ವಿಜಯೇಂದ್ರ ಆಕ್ರೋಶ
ಆರ್‌ಎಸ್‌ಎಸ್‌ನ (Rashtriya Swayamsevak Sangh) ಅಂಗಸಂಸ್ಥೆಗಳಿಗೆ ಬಿಜೆಪಿ ಸರ್ಕಾರ ಇದ್ದಾಗ ಭೂಮಿ ಹಂಚಿಕೆ ಮಾಡಿದ್ದನ್ನು ತಡೆ ಹಿಡಿಯುವ ಕಾಂಗ್ರೆಸ್‌ ಸರ್ಕಾರದ ನಿರ್ಧಾರಕ್ಕೆ ಬಿಜೆಪಿ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಚನ್ನೇನಹಳ್ಳಿಯ ಜನಸೇವಾ ಟ್ರಸ್ಟ್‌, ರಾಷ್ಟ್ರೋತ್ಥಾನ ಪರಿಷತ್‌ ಸೇರಿ ಅನೇಕ ಸಂಸ್ಥೆಗಳಿಗೆ ಬಿಜೆಪಿ ಅವಧಿಯಲ್ಲಿ ಭೂಮಿ ಹಂಚಿಕೆ ಮಾಡಲಾಗಿತ್ತು. ಇದಕ್ಕೆ ತಡೆ ನೀಡಲಾಗಿದೆ ಎಂದು ಸದನದಲ್ಲಿ ಕಂದಾಯ ಸಚಿವ ಕೃಷ್ಣ ಭೈರೇಗೌಡ ಉತ್ತರ ನೀಡಿದ್ದರು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

5. Vanshika Anjani kashyapa : ವಂಶಿಕಾ ಮಾಸ್ಟರ್‌ ಆನಂದ್‌ ಹೆಸ್ರಲ್ಲಿ ಹಣ ಪೀಕಿದ ನಿಶಾಗೆ 14 ದಿನಗಳ ನ್ಯಾಯಾಂಗ ಬಂಧನ
ಸೋಶಿಯಲ್‌ ಮೀಡಿಯಾ ಹಾಗೂ ರಿಯಾಲಿಟಿ ಸ್ಟಾರ್ ಆಗಿರುವ ವಂಶಿಕಾ ಹೆಸರಿನಲ್ಲಿ (Vanshika Anjani kashyapa) ನಿಶಾ ನರಸಪ್ಪ ಎಂಬಾಕೆ ಹಣ ಲೂಟಿ ಮಾಡುತ್ತಿರುವ ಆರೋಪ ಕೇಳಿ ಬಂದಿತ್ತು. ಹೀಗಾಗಿ ಮಾಸ್ಟರ್‌ ಆನಂದ್‌ ಕುಟುಂಬಸ್ಥರು ಠಾಣೆ ಮೆಟ್ಟಿಲೇರಿದ್ದರು. ಇದೀಗ ನಿಶಾ ನರಸಪ್ಪಳನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ 39ನೇ ಎಸಿಎಮ್‌ಎಮ್ ಕೋರ್ಟ್ ಆದೇಶ ಹೊರಡಿಸಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

6. Delhi Flood: ದೆಹಲಿ ಮಳೆ ಮಧ್ಯೆ ಯಮಸ್ವರೂಪಿ ವಿದ್ಯುತ್ ಕಂಬಗಳು, ಪಾದಚಾರಿಗಳಿಗೆ ಶಾಕ್​
ದೆಹಲಿಯಲ್ಲಿ ವಿಪರೀತ ಮಳೆ-ಯಮುನಾ ನದಿಯ ಪ್ರವಾಹದ (Delhi Flood) ಮಧ್ಯೆ ರಸ್ತೆಗಳಲ್ಲಿ ಜನರ ಓಡಾಟ-ವಾಹನ ಸಂಚಾರವೇ ಕಷ್ಟವಾಗಿದೆ. ಅದರ ಮಧ್ಯೆ ಇನ್ನೊಂದು ಸಮಸ್ಯೆ ಶುರುವಾಗಿದೆ. ದೆಹಲಿಯ ಹಲವು ಕಡೆಗಳಲ್ಲಿ ಕೆಟ್ಟು ನಿಂತಿರುವ ವಿದ್ಯುತ್​ ಕಂಬಗಳು ಯಮಸ್ವರೂಪಿಯಾಗಿ ಕಾಡುತ್ತಿವೆ. ಹರಿದು ಬಿದ್ದ ವೈಯರ್​ಗಳಲ್ಲಿ ಪ್ರವಹಿಸುತ್ತಿರುವ ವಿದ್ಯುತ್​​ನಿಂದಾಗಿ ಜನರು ರಸ್ತೆಗೆ ಕಾಲಿಡಲು ಭಯಪಡುವಂತಾಗಿದೆ. ವಿದ್ಯುತ್ ಶಾಕ್​ಗೆ ಒಳಗಾಗುತ್ತಿದ್ದಾರೆ. ಈಗಾಗಲೇ ಒಂದಿಬ್ಬರ ಪ್ರಾಣವೂ ಹೋಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

7. Weather Report : ಕರಾವಳಿಯಲ್ಲಿ ನಾಳೆ ಮಳೆ ವೈಲೆಂಟ್‌; ದಕ್ಷಿಣ ಒಳನಾಡಿನಲ್ಲಿ ಫುಲ್‌ ಸೈಲೆಂಟ್‌!
ರಾಜ್ಯಾದ್ಯಂತ ಮುಂದಿನ 4 ದಿನಗಳಲ್ಲಿ ಭಾರಿ ಮಳೆಯಾಗುವ (Rain news) ಸಾಧ್ಯತೆ ಇದ್ದು, ಹವಾಮಾನ ಇಲಾಖೆ (Weather report) ಯೆಲ್ಲೋ ಅಲರ್ಟ್‌ ನೀಡಿದೆ. ಮಹಾರಾಷ್ಟ್ರ ದಕ್ಷಿಣದಿಂದ ಕರಾವಳಿಯ ಉತ್ತರಕ್ಕೆ ಸಮುದ್ರದ ಮಟ್ಟದಲ್ಲಿ ಟ್ರಫ್‌ ಹಾದುಹೋಗಿದೆ. ಇದರ ಪ್ರಭಾವದಿಂದಾಗಿ ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

8. IND vs WI: ಮೊದಲ ಶತಕ, ಜೈಸ್ವಾಲ್​ ಭಾವುಕ
ಚೊಚ್ಚಲ ಪಂದ್ಯದಲ್ಲೇ ಶತಕ ಬಾರಿಸಿ ಟೆಸ್ಟ್​ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ ಯುವ ಬ್ಯಾಟರ್​ ಯಶಸ್ವಿ ಜೈಸ್ವಾಲ್(Yashasvi Jaiswal)​ ಅವರು ತಮ್ಮ ಶತಕದ ಬಳಿಕ ಭಾವುಕರಾಗಿದ್ದಾರೆ. ತಮ್ಮ ಕಷ್ಟದ ಸಮಯದಲ್ಲಿ ಜತೆಯಾಗಿ ನಿಂತು ಸಹಕರಿಸಿದ ತಂದೆ ತಾಯಿ ಮತ್ತು ಸ್ನೇಹಿತರಿಗೆ ಈ ಶತಕವನ್ನು ಅರ್ಪಿಸಿಸಿದ್ದಾರೆ. ಜೈಸ್ವಾಲ್​ ಅವರು ಭಾವನಾತ್ಮಕವಾಗಿ ಮಾತನಾಡಿದ ವಿಡಿಯೊವನ್ನು ಬಿಸಿಸಿಐ ತನ್ನ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

9. Tomato Price: ಟೊಮ್ಯಾಟೊ ಬೆಳೆದು 30 ಲಕ್ಷ ರೂ. ಸಂಪಾದಿಸಿದ ರೈತನ ಬರ್ಬರ ಹತ್ಯೆ
ದೇಶಾದ್ಯಂತ ಟೊಮ್ಯಾಟೊ ಬೆಲೆ (Tomato Price) ಏರಿಕೆಯಾಗುತ್ತಿದ್ದು, ಬೆಳೆಗಾರರಿಗೆ ಬಂಪರ್​ ಎಂಬಂತಾಗಿದೆ. ಜತೆಜತೆಗೇ ಟೊಮ್ಯಾಟೊ ಕಳವು ಕೇಸ್​ಗಳೂ ಹೆಚ್ಚುತ್ತಿವೆ. ಆದರೆ ಆಂಧ್ರಪ್ರದೇಶದಲ್ಲಿ ಟೊಮ್ಯಾಟೊ ರೈತನೊಬ್ಬನ ಹತ್ಯೆಯಾಗಿದ್ದು ಆತಂಕಕ್ಕೆ ಕಾರಣವಾಗಿದೆ. ಆಂಧ್ರಪ್ರದೇಶದ ಅಣ್ಣಮಯ್ಯ ಜಿಲ್ಲೆಯಲ್ಲಿ ರೈತ ನರೇಮ್​ ರಾಜಶೇಖರ್ ರೆಡ್ಡಿ ಎಂಬುವರು ಇತ್ತೀಚೆಗಷ್ಟೇ ತಾನು ಬೆಳೆದ ಟೊಮ್ಯಾಟೊವನ್ನು ಮಾರಾಟ ಮಾಡಿ, 30 ಲಕ್ಷ ರೂಪಾಯಿ ಆದಾಯ ಗಳಿಸಿದ್ದರು (Tomato Price Rise). ಅದರ ಬೆನ್ನಲ್ಲೇ ಅವರನ್ನು ಹತ್ಯೆ ಮಾಡಿ, ಹಣವನ್ನೆಲ್ಲ ದೋಚಲಾಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

10. ರೆಸ್ಟೋರೆಂಟ್​ಗೇ ದುಬಾರಿಯಾದ ಮಸಾಲೆ ದೋಸೆ; ವಕೀಲನ ‘ಸಾಂಬಾರ್​’ ಹೋರಾಟಕ್ಕೆ ಸಿಕ್ತು ಜಯ
ಬಿಹಾರದ ರೆಸ್ಟೋರೆಂಟ್​ವೊಂದಕ್ಕೆ (Bihar Restaurant) ಸ್ಪೆಶಲ್ ಮಸಾಲಾ ದೋಸೆ ತುಂಬ ದುಬಾರಿಯಾಗಿ ಪರಿಣಮಿಸಿದೆ. ಗ್ರಾಹಕರೊಬ್ಬರು ಆರ್ಡರ್​ ಮಾಡಿದ 140 ರೂಪಾಯಿ ಸ್ಪೆಶಲ್ ಮಸಾಲೆ ದೋಸೆಗೆ ಸಾಂಬಾರ್​ ಕೊಡದ ಕಾರಣ, ಈಗ ಗ್ರಾಹಕ ನ್ಯಾಯಾಲಯ, ರೆಸ್ಟೋರೆಂಟ್​ಗೆ 3500 ರೂಪಾಯಿ ದಂಡ ವಿಧಿಸಿದೆ. ಮಸಾಲೆ ದೋಸೆಯೊಂದಿಗೆ ಚಟ್ನಿ ಮತ್ತು ಸಾಂಬಾರ್ ನೀಡಬೇಕು. ಆದರೆ ರೆಸ್ಟೋರೆಂಟ್​ನಲ್ಲಿ 140 ರೂಪಾಯಿ ಕೊಟ್ಟು ದೋಸೆ ಆರ್ಡರ್ ಮಾಡಿದರೂ, ಬರೀ ಚಟ್ನಿ ಮಾತ್ರ ಕೊಟ್ಟಿದ್ದಾರೆ. ಸಾಂಬಾರ್ ಕೊಟ್ಟಿಲ್ಲ ಎಂದು ಗ್ರಾಹಕರೇ ಕೋರ್ಟ್​ನಲ್ಲಿ ಮೊಕದ್ದಮೆ ಹೂಡಿದ್ದರು. ಆ ಕೇಸ್​​ನಲ್ಲಿ ಈಗ ರೆಸ್ಟೋರೆಂಟ್​ಗೆ ಹಿನ್ನಡೆಯಾಗಿದೆ. ಸುದ್ದಿ ಭರ್ಜರಿ ವೈರಲ್ ಆಗುತ್ತಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವೈರಲ್ ನ್ಯೂಸ್

Viral video: ಅಮೆಜಾನ್‌ ಕಂಪನಿಯ ಪಾರ್ಸೆಲ್‌ನಲ್ಲಿ ಬಂತು ಜೀವಂತ ನಾಗರ! ಗೇಮಿಂಗ್‌ ಬಾಕ್ಸ್‌ ಜೊತೆ ಹಾವು ಫ್ರೀ!

Viral video: ಬೆಂಗಳೂರಿನ ಸರ್ಜಾಪುರದಲ್ಲಿ ವಾಸ ಮಾಡುವ ಯುವತಿ, ಗೇಮಿಂಗ್ ಆಡಲು ಬಳಕೆ ಮಾಡುವ X BOX ಕಂಟ್ರೋಲರ್ ಅನ್ನು ಎರಡು ದಿನದ ಹಿಂದೆ ಅಮೆಜಾನ್‌ನಲ್ಲಿ ಆರ್ಡರ್ ಮಾಡಿದ್ದರು. ಆರ್ಡರ್ ತಲುಪಿದ ಕೆಲ ನಿಮಿಷಗಳಲ್ಲಿ ಬಾಕ್ಸ್ ಓಪನ್ ಮಾಡಿದ್ದರು. ಬಾಕ್ಸ್ ಓಪನ್ ಮಾಡುತ್ತಿದ್ದಂತೆ ಹಾವು ಭುಸ್‌ ಎಂದು ಹೊರಗೆ ತಲೆ ಹಾಕಿತ್ತು!

VISTARANEWS.COM


on

viral video snake in amazon box
Koo

ಬೆಂಗಳೂರು: ಅಮೆಜಾನ್‌ ಇ-ಕಾಮರ್ಸ್‌ (Amazon E commerce) ಮಳಿಗೆಯ ಮೂಲಕ ಗೇಮಿಂಗ್‌ ಬಾಕ್ಸ್‌ (gaming box) ತರಿಸಿದ ಯುವತಿ ಪಾರ್ಸೆಲ್‌ (parcel) ಓಪನ್‌ ಮಾಡುತ್ತಿದ್ದಂತೆ ಬೆಚ್ಚಿ ಬಿದ್ದಿದ್ದಾರೆ. ಕಾರಣ, ಅದರ ಒಳಗೆ ವಿಲವಿಲ ಎನ್ನುತ್ತಿದ್ದ ಜೀವಂತ ನಾಗರ ಹಾವು (snake) ! ಇದನ್ನು ನೋಡಿ ಬೆಚ್ಚಿಬಿದ್ದ ಯುವತಿ, ವಿಡಿಯೋ ಮಾಡಿ Xನಲ್ಲಿ ಅಪ್‌ಲೋಡ್‌ ಮಾಡಿದ್ದಾರೆ. ವಿಡಿಯೋ ಇದೀಗ ವೈರಲ್‌ (viral video) ಆಗುತ್ತಿದೆ.

ಬೆಂಗಳೂರಿನ ಸರ್ಜಾಪುರದಲ್ಲಿ ವಾಸ ಮಾಡುವ ಯುವತಿ, ಗೇಮಿಂಗ್ ಆಡಲು ಬಳಕೆ ಮಾಡುವ X BOX ಕಂಟ್ರೋಲರ್ ಅನ್ನು ಎರಡು ದಿನದ ಹಿಂದೆ ಅಮೆಜಾನ್‌ನಲ್ಲಿ ಆರ್ಡರ್ ಮಾಡಿದ್ದರು. ಆರ್ಡರ್ ತಲುಪಿದ ಕೆಲ ನಿಮಿಷಗಳಲ್ಲಿ ಬಾಕ್ಸ್ ಓಪನ್ ಮಾಡಿದ್ದರು. ಬಾಕ್ಸ್ ಓಪನ್ ಮಾಡುತ್ತಿದ್ದಂತೆ ಹಾವು ಭುಸ್‌ ಎಂದು ಹೊರಗೆ ತಲೆ ಹಾಕಿತ್ತು!

ಬಾಕ್ಸ್ ಓಪನ್ ಮಾಡುತ್ತಿದ್ದ ಹಾಗೇ ತಲೆ ಎತ್ತಿದ ಹಾವನ್ನು ಕಂಡು ಯುವತಿ ಬೆಚ್ಚಿ ಬಿದ್ದಿದ್ದಾರೆ. ಪುಣ್ಯವಶಾತ್‌ ಬಾಕ್ಸ್‌ ಒಳಗೆ ಕೈ ಹಾಕದೆ ಇದ್ದುದರಿಂದ ಹಾವು ಕಡಿತಕ್ಕೊಳಗಾಗುವ ಅಪಾಯದಿಂದ ಯುವತಿ ಪಾರಾಗಿದ್ದಾಳೆ. ಇದು ವಿಷಪೂರಿತ ನಾಗರಹಾವಾಗಿದೆ. ಹಾವು ಬಾಕ್ಸ್‌ನಿಂದ ಹೊರ ಬರಲು ಯತ್ನಿಸಿದರೂ ಸಾಧ್ಯವಾಗಿಲ್ಲ. ಕಾರಣವೆಂದರೆ ಪಾರ್ಸೆಲ್‌ನ್ನು ಪ್ಯಾಕ್‌ ಮಾಡಿದ್ದ ಗಟ್ಟಿ ಗಮ್‌ಟೇಪ್‌ಗೆ ಅದರ ಶರೀರ ಅಂಟಿಕೊಂಡಿತ್ತು. ಆದರೆ ರಾತ್ರಿ ಈ ಘಟನೆ ನಡೆದಿರುವುದರಿಂದ ಕುಟುಂಬ ಇಡೀ ರಾತ್ರಿ ಭಯದಲ್ಲಿಯೇ ಕಳೆದಿದೆ.

ಹಾವು ಕಡಿತದಿಂದ ಏನಾದರೂ ಹೆಚ್ಚು ಕಡಿಮೆಯಾಗಿದ್ದರೆ ಯಾರು ಹೊಣೆ? ಇದು ಅಮೆಜಾನ್ ಕಂಪನಿಯ ನಿರ್ಲಕ್ಷ್ಯ ಎಂದು ಯುವತಿ ಆಕ್ರೋಶ ವ್ಯಕ್ತಪಡಿಸಿ ಪೋಸ್ಟ್‌ ಮಾಡಿದ್ದಾರೆ. ಕೂಡಲೇ ಈ ವಿಚಾರವನ್ನು ಅಮೆಜಾನ್‌ ಕಂಪನಿಗೆ ಮಹಿಳೆ ತಿಳಿಸಿದ್ದಾರೆ. ಅಮೆಜಾನ್‌ ಕಂಪನಿ ಕ್ಷಮೆ ಯಾಚಿಸಿದ್ದು, ಬಾಕ್ಸ್‌ನ ಸಂಪೂರ್ಣ ಹಣ ಮರು ಪಾವತಿ ಮಾಡಿದೆ. ಆದರೆ ಈ ದುಬಾರಿ ನಿರ್ಲಕ್ಷ್ಯದ ವಿರುದ್ಧ ಕಾನೂನು ಸಮರ ಸಾರಲು ಯುವತಿ ತಯಾರಿ ನಡೆಸಿದ್ದಾರೆ.

“ಕಂಪನಿ ಸಂಪೂರ್ಣ ಮರುಪಾವತಿಯನ್ನು ಮಾಡಿದ್ದಾರೆ. ಅದನ್ನು ಅವರು ಹೇಗಾದರೂ ಮಾಡಲೇಬೇಕು. ಆದರೆ ಈ ಕುರಿತು ನಾವು ಯಾವುದೇ ಪರಿಹಾರ ನೀಡಿಲ್ಲ ಅಥವಾ ಅಧಿಕೃತ ಕ್ಷಮೆಯಾಚನೆಯನ್ನು ಅವರು ಮಾಡಿಲ್ಲ. ʼನಾವು ನಿಮಗೆ ಉಂಟಾದ ಅನನುಕೂಲತೆಗಾಗಿ ವಿಷಾದಿಸುತ್ತೇವೆʼ ಎಂಬ ಮಾತನ್ನು ನಾನು ನಂಬುವುದಿಲ್ಲ. ಇದು ಎಲ್ಲ ರೀತಿಯಿಂದಲೂ ಅಮೆಜಾನ್ ಗ್ರಾಹಕರಾಗಿ ನಮಗೆ ಮತ್ತು ಅವರ ವಿತರಣಾ ಪಾಲುದಾರರಿಗೆ ಸುರಕ್ಷತೆಯ ಸ್ಪಷ್ಟ ಉಲ್ಲಂಘನೆ” ಎಂದು ಯುವತಿ ಆಕ್ರೋಶಿಸಿದ್ದಾರೆ.

ಇದನ್ನು ನೋಡಿದ ಎಕ್ಸ್‌ ಬಳಕೆದಾರರು, ಅಮೆಜಾನ್ ಕಂಪನಿಯ ದಿವ್ಯ ನಿರ್ಲಕ್ಷ್ಯ ಕಂಡು ದಂಗಾಗಿದ್ದಾರೆ. ಹಲವರು ಅಮೆಜಾನ್‌ ಕಂಪನಿಯ ವಿರುದ್ಧ ಕಿಡಿ ಕಾರಿದ್ದಾರೆ. ಇದು ಉದ್ದೇಶಪೂರ್ವಕ ಮಾಡಿದ ಕೃತ್ಯವೇ ಎಂದು ಕೂಡ ಸಂಶಯಿಸಿದ್ದಾರೆ. ಒಬ್ಬರು ʼಇದು ಅಮೆಜಾನ್‌ ಫಾರೆಸ್ಟ್‌ನಿಂದ ಬಂದ ಪಾರ್ಸೆಲ್‌ʼ ಎಂದು ವಿನೋದವಾಡಿದ್ದಾರೆ.

“ಅಮೆಜಾನ್‌ ಕಂಪನಿಯು ಬಳಕೆದಾರರ ಸುರಕ್ಷತೆಯನ್ನು ಪ್ರಾಥಮಿಕ ಆದ್ಯತೆಯಾಗಿ ಪರಿಗಣಿಸುತ್ತದೆ. ಈ ಪ್ರಕರಣವನ್ನು ಗಂಭೀರ ಆದ್ಯತೆಯಾಗಿ ಪರಿಗಣಿಸಿ ನಾವು ತನಿಖೆ ನಡೆಸಲಿದ್ದೇವೆ” ಎಂದು ಅಮೆಜಾನ್‌ ಕಂಪನಿ ಹೇಳಿಕೊಂಡಿದೆ.

ಇದನ್ನೂ ಓದಿ: Viral Video: ಅಭಿಮಾನಿ ಮೇಲೆ ಹಲ್ಲೆಗೆ ಯತ್ನಿಸಿದ ಪಾಕ್​ ವೇಗಿ; ತಡೆದು ನಿಲ್ಲಿಸಿದ ಪತ್ನಿ

Continue Reading

ಪ್ರಮುಖ ಸುದ್ದಿ

CM Siddaramaiah: ಅವಧಿ ಮೀರಿದ ಆಹಾರ ಪದಾರ್ಥ ಮಾರಿದರೆ ಹುಷಾರ್!‌ ಸಿಎಂ ಎಚ್ಚರಿಕೆ

CM Siddaramaiah: ಬಸ್‌ ನಿಲ್ದಾಣಗಳ ಸ್ಟಾಲ್‌ಗಳಲ್ಲಿ ಮಾರಾಟವಾಗುವ ಆಹಾರ ಪದಾರ್ಥಗಳ ಬಗ್ಗೆ ಹಲವು ಬಳಕೆದಾರರು ಸಾಮಾಜಿಕ ಜಾಲತಾಣಗಳಲ್ಲಿ ದೂರು ತೋಡಿಕೊಂಡಿದ್ದರು. ಲಘು ಪಾನೀಯಗಳು, ತೆರೆದಿಟ್ಟ ಆಹಾರ ಪದಾರ್ಥಗಳ ಸ್ವಚ್ಛತೆ, ನೈರ್ಮಲ್ಯದ ಬಗ್ಗೆ ಹೆಚ್ಚಿನ ಗಮನ ಹರಿಸುವಂತೆ ಕೋರಿದ್ದರು. ಈ ಹಿನ್ನೆಲೆಯಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ.

VISTARANEWS.COM


on

food safety cm siddaramaih
Koo

ಬೆಂಗಳೂರು: ಬಸ್‌ ನಿಲ್ದಾಣಗಳಲ್ಲಿನ ವ್ಯಾಪಾರ ಮಳಿಗೆಗಳು (Food stalls) ಮತ್ತು ಆಹಾರ ಉದ್ದಿಮೆಗಳಲ್ಲಿ ಅವಧಿ ಮೀರಿದ (Expiry date) ಆಹಾರ ಪದಾರ್ಥಗಳ ಮಾರಾಟ ಮಾಡಿದರೆ ನಿರ್ದಾಕ್ಷಿಣ್ಯವಾಗಿ (Food safety) ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿಗಳು (CM Siddaramaiah) ಎಚ್ಚರಿಸಿದ್ದಾರೆ.

ಈ ಬಗ್ಗೆ ಮುಖ್ಯಮಂತ್ರಿಗಳ ಕಚೇರಿಯಿಂದ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ. ಬಸ್‌ ನಿಲ್ದಾಣಗಳಲ್ಲಿನ ವ್ಯಾಪಾರ ಮಳಿಗೆಗಳು ಮತ್ತು ಆಹಾರ ಉದ್ದಿಮೆಗಳಲ್ಲಿ ಅವಧಿ ಮೀರಿದ ಆಹಾರ ಪದಾರ್ಥಗಳ ಮಾರಾಟ, ನೈರ್ಮಲ್ಯದ ಕೊರತೆ ಮುಂತಾದ ವಿಷಯಗಳ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಬಿತ್ತರವಾದ ವರದಿಗಳನ್ನು ಆಧರಿಸಿ ಮುಖ್ಯಮಂತ್ರಿ ಕಚೇರಿಯ ಸಾರ್ವಜನಿಕ ಕುಂದುಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.

ವ್ಯಾಪಾರ ಮಳಿಗೆಗಳು ಹಾಗೂ ಆಹಾರ ಉದ್ದಿಮೆಗಳಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಕಾಯ್ದೆ 2006 ಮತ್ತು ನಿಯಮಗಳು 2011 ಅನ್ನು ಪಾಲಿಸುತ್ತಿರುವ ಬಗ್ಗೆ ಪರಿಶೀಲನೆ ಮಾಡಲು 2024ರ ಜೂನ್‌ ತಿಂಗಳಲ್ಲಿ ವಿಶೇಷ ಅಭಿಯಾನವನ್ನು ಕೈಗೊಳ್ಳಲಾಗಿರುತ್ತದೆ. ಅದರಂತೆ ರಾಜ್ಯಾದ್ಯಂತ 201 ಜಿಲ್ಲಾ ಮತ್ತು ತಾಲೂಕು ಕೇಂದ್ರಗಳ ಕಚೇರಿ ಹಾಗೂ ಖಾಸಗಿ ಬಸ್‌ ನಿಲ್ದಾಣಗಳಲ್ಲಿ ಇರುವ 748 ವ್ಯಾಪಾರ ಮಳಿಗೆಗಳು ಮತ್ತು ಆಹಾರ ಉದ್ದಿಮೆಗಳನ್ನು ಪರಿಶೀಲನೆ ಮಾಡಲಾಗಿದ್ದು, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006 ಮತ್ತು ನಿಯಮಗಳು 2011 ಅನ್ನು ಪಾಲಿಸುವಂತೆ ಅರಿವು ಮೂಡಿಸಲಾಗಿರುತ್ತದೆ. ಮುಂದಿನ ದಿನಗಳಲ್ಲಿ ಪುನರ್‌ ಪರಿಶೀಲನೆ ಸಂದರ್ಭದಲ್ಲಿ ಲೋಪದೋಷಗಳನ್ನು ಸರಿಪಡಿಸಿಕೊಳ್ಳದೇ ಇದ್ದಲ್ಲಿ ನಿಯಾಮಾನುಸಾರ ಕಾನೂನಾತ್ಮಕ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಮಾಲೀಕರಿಗೆ ಎಚ್ಚರಿಕೆ ನೀಡಲಾಗಿದೆ.

ಬಸ್‌ ನಿಲ್ದಾಣಗಳ ಸ್ಟಾಲ್‌ಗಳಲ್ಲಿ ಮಾರಾಟವಾಗುವ ಆಹಾರ ಪದಾರ್ಥಗಳ ಬಗ್ಗೆ ಹಲವು ಬಳಕೆದಾರರು ಸಾಮಾಜಿಕ ಜಾಲತಾಣಗಳಲ್ಲಿ ದೂರು ತೋಡಿಕೊಂಡಿದ್ದರು. ಲಘು ಪಾನೀಯಗಳು, ತೆರೆದಿಟ್ಟ ಆಹಾರ ಪದಾರ್ಥಗಳ ಸ್ವಚ್ಛತೆ, ನೈರ್ಮಲ್ಯದ ಬಗ್ಗೆ ಹೆಚ್ಚಿನ ಗಮನ ಹರಿಸುವಂತೆ ಕೋರಿದ್ದರು. ಈ ಹಿನ್ನೆಲೆಯಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ.

ಅವಧಿ ಮುಗಿದ ವಸ್ತುಗಳಲ್ಲಿ ತಿಂಡಿ ತಯಾರಿ, ರಾಮೇಶ್ವರಂ ಕೆಫೆ ಮೇಲೆ ಅಧಿಕಾರಿಗಳ ದಾಳಿ

ಹೈದರಾಬಾದ್: ಹೈಟೆಕ್​ ರೀತಿಯಲ್ಲಿ ದೋಸೆ ಸೇರಿದಂತೆ ಆಹಾರ ಪದಾರ್ಥಗಳನ್ನು ತಯಾರಿ ಮಾಡುವ ಮತ್ತು ದಕ್ಷಿಣ ಭಾರತದ ಉಪಾಹಾರಕ್ಕೆ ಹೆಸರುವಾಸಿಯಾದ ಬೆಂಗಳೂರು ಮೂಲದ ರಾಮೇಶ್ವರಂ ಕೆಫೆ (Rameshwaram Cafe) ಮೇಲೆ ಹೈದರಾಬಾದ್​​ನ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ತೆಲಂಗಾಣ ಆಹಾರ ಸುರಕ್ಷತಾ ಇಲಾಖೆಯ ಅಧಿಕಾರಿಗಳು ಗುರುವಾರ ರೆಸ್ಟೋರೆಂಟ್ ಅವಧಿ ಮೀರಿದ ಮತ್ತು ಲೇಬಲ್ ಮಾಡದ ಆಹಾರ ಪದಾರ್ಥಗಳನ್ನು ಬಳಸುತ್ತಿರುವುದು ಕಂಡುಬಂದಿದ್ದರಿಂದ ಅನೇಕ ಉಲ್ಲಂಘನೆಗಳನ್ನು ಕಂಡುಕೊಂಡಿದ್ದಾರೆ. ರಾಮೇಶ್ವರಂ ಕೆಫೆ ಕೆಲವು ತಿಂಗಳ ಹಿಂದೆ ರಾಷ್ಟ್ರ ಮಟ್ಟದ ಸುದ್ದಿಗೆ ಗ್ರಾಸವಾಗಿತ್ತು. ಬೆಂಗಳೂರಿನ ವೈಟ್​ಫೀಲ್ಡ್​ ಶಾಖೆಯ ಮೇಲೆ ಬಾಂಬ್​ ದಾಳಿ ನಡೆದ ಬಳಿಕ ಸಂಚಲನ ಮೂಡಿಸಿತ್ತು. ಈ ಪ್ರಕರಣದ ಬಗ್ಗೆ ಈಗಲೂ ತನಿಖೆ ನಡೆಯುತ್ತಿದೆ.

ಆಹಾರ ಸುರಕ್ಷತಾ ಇಲಾಖೆಯ ಪ್ರಕಾರ, 16,000 ರೂ ಮೌಲ್ಯದ 100 ಕೆಜಿ ಉದ್ದಿನ ಬೇಳೆ, 10 ಕೆ.ಜಿ. ನಂದಿನಿ ಮೊಸರು ಮತ್ತು ಎಂಟು ಲೀಟರ್ ಹಾಲು ಅವಧಿ ಮೀರಿ ಅಡುಗೆಮನೆಯಲ್ಲಿ ಪತ್ತೆಯಾಗಿದೆ. ಅಸ್ಪಷ್ಟ ಲೇಬಲ್ ಮಾಡಿದ್ದಕ್ಕಾಗಿ ಅಧಿಕಾರಿಗಳು ಅಡುಗೆಮನೆಯಲ್ಲಿದ್ದ ಇನ್ನೂ ಕೆಲವು ಆಹಾರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. 450 ಕೆ.ಜಿ ಹಸಿ ಅಕ್ಕಿ, 300 ಕೆಜಿ ಲೇಬಲ್ ಮಾಡದ ಬೆಲ್ಲವನ್ನು ಸಹ ವಶಪಡಿಸಿಕೊಳ್ಳಲಾಗಿದೆ ಎಂದು ಆಹಾರ ಸುರಕ್ಷತಾ ಇಲಾಖೆ ತಿಳಿಸಿದೆ. ಏತನ್ಮಧ್ಯೆ, ಆಹಾರ ತಯಾರಿಸುವವರಿಗೆ ವೈದ್ಯಕೀಯ ಫಿಟ್ನೆಸ್ ಪ್ರಮಾಣಪತ್ರವನ್ನು ಸಲ್ಲಿಸಲಾಗಿಲ್ಲ ಮತ್ತು ರಾಮೇಶ್ವರಂ ಕೆಫೆಯಲ್ಲಿ ಕಸದ ಬುಟ್ಟಿಗಳನ್ನು ಮುಚ್ಚಳಗಳಿಂದ ಮುಚ್ಚಲಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅನೇಕ ಕಡೆ ದಾಳಿ

ಆಹಾರ ಸುರಕ್ಷತಾ ಇಲಾಖೆಯ ಅಧಿಕಾರಿಗಳು ಹೈದರಾಬಾದ್​ನ ಅನೇಕ ಸ್ಥಳಗಳಲ್ಲಿ ದಾಳಿ ನಡೆಸುತ್ತಿದ್ದಾರೆ ಮತ್ತು ಅನೇಕ ಜನಪ್ರಿಯ ತಿನಿಸುಗಳ ಅಂಗಡಿಗಳು ನೈರ್ಮಲ್ಯ ಮಾನದಂಡಗಳನ್ನು ಕಾಪಾಡಿಕೊಳ್ಳದಿರುವುದು ಕಂಡುಬಂದಿದೆ. ಅದೇ ದಿನ, ಬಾಹುಬಲಿ ಕಿಚನ್ ಎಂಬ ರೆಸ್ಟೋರೆಂಟ್ ಮೇಲೆ ದಾಳಿ ನಡೆಸಲಾಗಿದೆ. ಸಂಗ್ರಹಿಸಿದ ಆಹಾರ ಪದಾರ್ಥಗಳಲ್ಲಿ ಜಿರಳೆಗಳು ಕಂಡುಬಂದಿದ್ದವು. ರೆಸ್ಟೋರೆಂಟ್​ನ ಅಡುಗೆಮನೆಯ ಆವರಣವು ತುಂಬಾ ಅನೈರ್ಮಲ್ಯ ಸ್ಥಿತಿಯಲ್ಲಿ ಕಂಡುಬಂದಿದ್ದು, ರೆಸ್ಟೋರೆಂಟ್ ಮಾಲೀಕರಿಗೆ ನೋಟಿಸ್ ನೀಡಲಾಗಿದೆ.

ಇದನ್ನೂ ಓದಿ: Food Tips Kannada: ಕಲಬೆರಕೆ ಆಹಾರಗಳಿಂದ ನಮ್ಮ ಆರೋಗ್ಯದ ಮೇಲಾಗುವ ಪರಿಣಾಮಗಳೇನು?

Continue Reading

ಪ್ರಮುಖ ಸುದ್ದಿ

MLC By Election: ಕರ್ನಾಟಕದಲ್ಲಿ ವಿಧಾನ ಪರಿಷತ್‌ ಉಪ ಚುನಾವಣೆ ಜುಲೈ 12ರಂದು

MLC By Election: ವಿಧಾನಸಭೆಯಿಂದ ವಿಧಾನ ಪರಿಷತ್ ಸದಸ್ಯರನ್ನು ಆಯ್ಕೆ ಮಾಡಲು ನಡೆಯುವ ಚುನಾವಣೆಗೆ ವೇಳಾಪಟ್ಟಿ ಘೋಷಣೆ ಮಾಡಲಾಗಿದೆ. ಕರ್ನಾಟಕ, ಬಿಹಾರ, ಉತ್ತರ ಪ್ರದೇಶ ಮತ್ತು ಆಂಧ್ರ ಪ್ರದೇಶದ ತಲಾ ಒಂದೊಂದು ಸ್ಥಾನಗಳಿಗೆ ಜುಲೈ 12ರಂದು ಮತದಾನ ನಡೆಯಲಿದೆ. ಅಂದೇ ಸಂಜೆ 5 ಗಂಟೆಯಿಂದ ಮತ ಎಣಿಕೆ ನಡೆಯಲಿದೆ.

VISTARANEWS.COM


on

MLC by Election
Koo

ಬೆಂಗಳೂರು: ಜಗದೀಶ್ ಶೆಟ್ಟರ್ (jagadish shettar) ರಾಜೀನಾಮೆಯಿಂದ ತೆರವಾಗಿರುವ ಕರ್ನಾಟಕದ ಒಂದು ಸ್ಥಾನ ಸೇರಿದಂತೆ ನಾಲ್ಕು ರಾಜ್ಯಗಳ ವಿಧಾನ ಪರಿಷತ್‌ (Legislative council) ಸ್ಥಾನಗಳಿಗೆ ಜುಲೈ 12ರಂದು ಬೈ ಎಲೆಕ್ಷನ್‌ (By Election) ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ (Election commission) ಘೋಷಿಸಿದೆ.

ವಿಧಾನಸಭೆಯಿಂದ ವಿಧಾನ ಪರಿಷತ್ ಸದಸ್ಯರನ್ನು ಆಯ್ಕೆ ಮಾಡಲು ನಡೆಯುವ ಚುನಾವಣೆಗೆ ವೇಳಾಪಟ್ಟಿ ಘೋಷಣೆ ಮಾಡಲಾಗಿದೆ. ಕರ್ನಾಟಕ, ಬಿಹಾರ, ಉತ್ತರ ಪ್ರದೇಶ ಮತ್ತು ಆಂಧ್ರ ಪ್ರದೇಶದ ತಲಾ ಒಂದೊಂದು ಸ್ಥಾನಗಳಿಗೆ ಜುಲೈ 12ರಂದು ಮತದಾನ ನಡೆಯಲಿದೆ. ಅಂದೇ ಸಂಜೆ 5 ಗಂಟೆಯಿಂದ ಮತ ಎಣಿಕೆ ನಡೆಯಲಿದೆ.

ಕರ್ನಾಟಕದಲ್ಲಿ ಜಗದೀಶ್ ಶೆಟ್ಟರ್ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಉಪ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಪಕ್ಷದಲ್ಲಿದ್ದ ಜಗದೀಶ್ ಶೆಟ್ಟರ್ ವಿಧಾನ ಪರಿಷತ್ ಸದಸ್ಯರಾಗಿದ್ದರು. ಅವರ ಅವಧಿ 14 ಜೂನ್ 2028ರ ತನಕ ಇತ್ತು. ಅವರು 25 ಜನವರಿ 2024ರಂದು ಕಾಂಗ್ರೆಸ್ ಪಕ್ಷವನ್ನು ತೊರೆದು ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಇವರಿಂದ ತೆರವಾದ ಒಂದು ಸ್ಥಾನ ಭರ್ತಿ ಮಾಡಲು ಚುನಾವಣಾ ಆಯೋಗ ಉಪ ಚುನಾವಣೆ ವೇಳಾಪಟ್ಟಿ ಘೋಷಣೆ ಮಾಡಿದೆ.

ಉಪ ಚುನಾವಣೆಗೆ 25 ಜೂನ್, ಮಂಗಳವಾರ ಚುನಾವಣಾ ಅಧಿಸೂಚನೆ ಪ್ರಕಟವಾಗಲಿದೆ. 2 ಜುಲೈ ನಾಮಪತ್ರಗಳನ್ನು ಸಲ್ಲಿಕೆ ಮಾಡಲು ಕೊನೆಯ ದಿನವಾಗಿದೆ. ಜುಲೈ 3ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ವಾಪಸ್ ಪಡೆಯಲು ಜುಲೈ 5 ಕೊನೆಯ ದಿನ. ಜುಲೈ 12, ಶುಕ್ರವಾರ ಬೆಳಗ್ಗೆ 9ರಿಂದ ಸಂಜೆ 4 ಗಂಟೆಯ ತನಕ ಮತದಾನ ನಡೆಯಲಿದೆ. ಸಂಜೆ 5 ಗಂಟೆಯ ಬಳಿಕ ಮತ ಎಣಿಕೆ ಆರಂಭವಾಗಲಿದೆ. 16 ಜುಲೈ ಒಳಗೆ ಚುನಾವಣಾ ಪ್ರಕ್ರಿಯೆಗಳು ಪೂರ್ಣಗೊಳ್ಳಬೇಕಿದೆ.

ಕರ್ನಾಟಕ ವಿಧಾನಸಭೆಯ ಶಾಸಕರು ಈ ಚುನಾವಣೆಯಲ್ಲಿ ಮತದಾನ ಮಾಡಲಿದ್ದು, ವಿಧಾನಸೌಧದಲ್ಲಿ ಮತದಾನ ನಡೆಯಲಿದೆ. ವಿಧಾನ ಪರಿಷತ್ ಉಪ ಚುನಾವಣೆಗೆ ಆಡಳಿತ ಪಕ್ಷ ಕಾಂಗ್ರೆಸ್ ಈಗಾಗಲೇ ಬಸನಗೌಡ ಬಾದರ್ಲಿ ಅಭ್ಯರ್ಥಿ ಎಂದು ಘೋಷಣೆ ಮಾಡಿದೆ. ಬಿಜೆಪಿ-ಜೆಡಿಎಸ್ ಸೀಟು ಹಂಚಿಕೆ ಮಾಡಿಕೊಳ್ಳಲಿದ್ದು, ಯಾರು ಮೈತ್ರಿ ಅಭ್ಯರ್ಥಿ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ಶೆಟ್ಟರ್‌ ರಾಜಕೀಯ ಸರ್ಕಸ್

2023ರ ವಿಧಾನಸಭೆ ಚುನಾವಣೆಯಲ್ಲಿ ಹುಬ್ಬಳ್ಳಿ-ಧಾರವಾಡ ಕೇಂದ್ರದ ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನಲೆಯಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅಸಮಾಧಾನಗೊಂಡು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದರು. ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದು 60,775 ಮತಗಳನ್ನು ಪಡೆದು ಚುನಾವಣೆಯಲ್ಲಿ ಬಿಜೆಪಿಯ ಮಹೇಶ್ ಟೆಂಗಿನಕಾಯಿ ವಿರುದ್ಧ ಸೋಲು ಕಂಡರು. ವಿಧಾನಸಭೆ ಚುನಾವಣೆಯಲ್ಲಿ ಸೋತರೂ ಕಾಂಗ್ರೆಸ್ ಪಕ್ಷ ಜಗದೀಶ್ ಶೆಟ್ಟರ್‌ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಿತು. ಆದರೆ ಅವರು 2024ರ ಲೋಕಸಭೆ ಚುನಾವಣೆಯ ಸಮಯದಲ್ಲಿ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಮತ್ತೆ ಬಿಜೆಪಿಗೆ ಮರಳಿದರು. 2024ರ ಲೋಕಸಭೆ ಚುನಾವಣೆಯಲ್ಲಿ ಜಗದೀಶ್ ಶೆಟ್ಟರ್ ಬೆಳಗಾವಿಯಿಂದ ಬಿಜೆಪಿ ಅಭ್ಯರ್ಥಿಯಾಗಿ ನಿಂತು 7,62,029 ಮತಗಳನ್ನು ಪಡೆದು, ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ಅವರನ್ನು 1,78,437 ಮತಗಳ ಅಂತರದಿಂದ ಸೋಲಿಸಿ ಸಂಸತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ 2024 ಮುಗಿದ ಬಳಿಕ ಒಟ್ಟು 17 ವಿಧಾನ ಪರಿಷತ್ ಸ್ಥಾನಗಳ ಚುನಾವಣೆ ನಡೆಯಿತು. ಆಡಳಿತ ಪಕ್ಷವಾದ ಕಾಂಗ್ರೆಸ್ 10 ಸ್ಥಾನಗಳಲ್ಲಿ, ಪ್ರತಿಪಕ್ಷ ಬಿಜೆಪಿ 4 ಮತ್ತು ಜೆಡಿಎಸ್‌ 3 ಸ್ಥಾನಗಳಲ್ಲಿ ಜಯ ಗಳಿಸಿವೆ. ವಿಧಾನ ಪರಿಷತ್‌ನ 3 ಶಿಕ್ಷಕ, 3 ಪದವೀಧರ ಕ್ಷೇತ್ರಕ್ಕೆ ಜೂನ್‌ 3ರಂದು ನಡೆದು, ಫಲಿತಾಂಶ ಜೂನ್ 6ರಂದು ಪ್ರಕಟವಾಗಿದೆ. ವಿಧಾನಸಭೆಯಿಂದ 11 ವಿಧಾನ ಪರಿಷತ್ ಸದಸ್ಯರನ್ನು ಆಯ್ಕೆ ಮಾಡಲು ಘೋಷಣೆಯಾಗಿದ್ದ ಚುನಾವಣೆಯಲ್ಲಿ 11 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇದನ್ನೂ ಓದಿ: Mallikarjun Kharge: ಶೀಘ್ರವೇ ಮೋದಿ ಸರ್ಕಾರ ಪತನ; ಭವಿಷ್ಯ ನುಡಿದ ಮಲ್ಲಿಕಾರ್ಜುನ ಖರ್ಗೆ

Continue Reading

ಪ್ರಮುಖ ಸುದ್ದಿ

Actor Darshan: ʼದರ್ಶನ್‌ ನನ್ನ ಸ್ವಂತ ಮಗʼ ಎಂದಿದ್ದ ಸುಮಲತಾ ಅಂಬರೀಶ್‌ ಏಕೀ ಗಾಢ ಮೌನ?

Actor Darshan: ಕೊಲೆ ಪ್ರಕರಣದಲ್ಲಿ ದರ್ಶನ್‌ ಜೈಲುಪಾಲಾದ ಮೇಲೆ ಸುಮಲತಾ ಫುಲ್ ಸೈಲೆಂಟ್ ಆಗಿದ್ದಾರೆ. ಅತ್ತ ಮಾಧ್ಯಮಗಳಿಗೂ ಯಾವ ಹೇಳಿಕೆಯನ್ನೂ ಕೊಟ್ಟಿಲ್ಲ. ಇತ್ತ ಸೋಷಿಯಲ್ ಮೀಡಿಯಾದಲ್ಲೂ ಗಾಢ ಮೌನಕ್ಕೆ ಜಾರಿದ್ದಾರೆ. ಅಭಿಷೇಕ್ ಅಂಬರೀಶ್ ಕೂಡ ದರ್ಶನ್‌ ವಿಚಾರದಲ್ಲಿ ಅಂತರ ಕಾಪಾಡಿಕೊಂಡಿದ್ದಾರೆ.

VISTARANEWS.COM


on

actor Darshan and Sumalatha Ambareesh
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ (Renuka Swamy Murder Case) ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಸೇರಿರುವ ನಟ ದರ್ಶನ್‌ (Actor Darshan) ಕುರಿತು ರಮ್ಯ, ರಚಿತಾ, ಸುದೀಪ್‌, ಉಪೇಂದ್ರ ಸೇರಿದಂತೆ ಚಿತ್ರರಂಗದ ಹಲವಾರು ಸ್ಟಾರ್‌ಗಳು ಹಾಗೂ ರಾಜಕಾರಣಿಗಳು ಹೇಳಿಕೆ ನೀಡಿದ್ದಾರೆ. ಆದರೆ ಮಾಜಿ ಸಂಸದೆ, ನಟಿ ಸುಮಲತಾ ಅಂಬರೀಶ್‌ (Sumalatha Ambareesh) ಮಾತ್ರ ತುಟಿ ಪಿಟಕ್‌ ಎಂದಿಲ್ಲ. ಒಂದು ಕಾಲದಲ್ಲಿ ʼದರ್ಶನ್‌ ನನ್ನ ಸ್ವಂತ ಮಗʼ ಎಂದಿದ್ದ ಸುಮಲತಾ, ಈ ಪ್ರಕರಣದಲ್ಲಿ ಮೌನ ಕಾಪಾಡಿಕೊಂಡಿರುವುದು ಕುತೂಹಲ ಮೂಡಿಸಿದೆ.

ನಟ ಅಂಬರೀಶ್ ಇದ್ದ ಕಾಲದಿಂದಲೂ, ʼದರ್ಶನ್‌ ನಮ್ಮ ದೊಡ್ಡ ಮಗʼ ಅನ್ನುತ್ತಿದ್ದ ಸುಮಲತಾ, 2019ರಲ್ಲಿ ಮಂಡ್ಯದಲ್ಲಿ ಲೋಕಸಭಾ ಚುನಾವಣೆಗೆ ನಿಂತಾಗ ಪ್ರಚಾರಕ್ಕೆ ದರ್ಶನ್‌ ಬೆಂಬಲ ಪಡೆದಿದ್ದರು. ಇಪ್ಪತ್ತು ದಿನಗಳ ಕಾಲ ಸುಮಲತಾ ಜತೆ ಪ್ರಚಾರ ಮಾಡಿ ಅವರನ್ನು ಗೆಲ್ಲಿಸುವಲ್ಲಿ ದರ್ಶನ್ ಪ್ರಮುಖ ಪಾತ್ರ ವಹಿಸಿದ್ದ.

ಬಳಿಕ 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್‌ ಮೈತ್ರಿಯ ಕಾರಣದಿಂದಾಗಿ ಸುಮಲತಾ ಹಿಂದೆ ಸರಿದಾಗಲೂ ತಾಯಿಯ ಜತೆ ಇರ್ತೀನಿ ಎಂದು ದರ್ಶನ್ ಹೇಳಿದ್ದ. ಮಂಡ್ಯದಲ್ಲಿ ಸಭೆ ನಡೆಸಿ ತೆಗೆದುಕೊಂಡ ನಿರ್ಧಾರಕ್ಕೆ ಬದ್ಧ ಎಂದಿದ್ದ ದರ್ಶನ್‌. ಅಮ್ಮನ ನಿರ್ಧಾರವೇ ನನ್ನ ನಿರ್ಧಾರ ಎಂದಿದ್ದ.

ʼಇವನು ನಮ್ಮ ದತ್ತು ಮಗ ಅಲ್ಲ ಸ್ವಂತ ಮಗ. ಮಗನ ಜತೆ ಸದಾ ಇರ್ತೀನಿʼ ಎಂದಿದ್ದ ಸುಮಲತಾ, ಇದೀಗ ಕೊಲೆ ಪ್ರಕರಣದಲ್ಲಿ ಆತ ಜೈಲುಪಾಲಾದ ಮೇಲೆ ಫುಲ್ ಸೈಲೆಂಟ್ ಆಗಿದ್ದಾರೆ. ಅವರು ಅತ್ತ ಮಾಧ್ಯಮಗಳಿಗೂ ಯಾವ ಹೇಳಿಕೆಯನ್ನೂ ಕೊಟ್ಟಿಲ್ಲ. ಇತ್ತ ಸೋಷಿಯಲ್ ಮೀಡಿಯಾದಲ್ಲೂ ಗಾಢ ಮೌನಕ್ಕೆ ಜಾರಿದ್ದಾರೆ. ಅಭಿಷೇಕ್ ಅಂಬರೀಶ್ ಕೂಡ ದರ್ಶನ್‌ ವಿಚಾರದಲ್ಲಿ ಅಂತರ ಕಾಪಾಡಿಕೊಂಡಿದ್ದಾರೆ. ಯಾವುದಕ್ಕೂ ಅಭಿಷೇಕ್‌ ಪ್ರತಿಕ್ರಿಯೆ ನೀಡಿಲ್ಲ.

ಸುಮಲತಾ ಮೌನದ ಹಿಂದೆ ಹಲವು ಕಾರಣಗಳನ್ನು ಊಹಿಸಲಾಗಿದೆ. ದರ್ಶನ್‌ ಅಪರಾಧಿ ಅಥವಾ ನಿರಪರಾಧಿ ಎಂದು ಸಾಬೀತಾಗುವವರೆಗೆ ಏನೇ ಆಡಿದರೂ ಆಮೇಲೆ ನಾಲಿಗೆ ಕಚ್ಚಿಕೊಳ್ಳಬೇಕಾಗಬಹುದು ಎಂಬ ಎಚ್ಚರಿಕೆ ಇದರ ಹಿಂದಿದೆ. ಈ ಸಮಯದಲ್ಲಿ ಆರೋಪಿಯನ್ನು ಬೆಂಬಲಿಸಿದರೆ ಅದು ತಮ್ಮ ತಲೆಗೂ ಬರಬಹುದು ಎಂದು ಆತಂಕವೂ ಇದೆ. ಮಂಡ್ಯದಲ್ಲೂ ಕೂಡ ದರ್ಶನ್‌ ರೌಡಿಸಂ ಚಾಳಿಯ ಬಗ್ಗೆ ಜನರಲ್ಲಿ ಸಿಟ್ಟೂ ಇದೆ.

ದರ್ಶನ್‌ ಈ ಪ್ರಕರಣದಿಂದ ತನ್ನನ್ನು ಪಾರು ಮಾಡುವಂತೆ ಹಲವು ಪ್ರಭಾವಿ ರಾಜಕಾರಣಿಗಳ ಬೆನ್ನಿಗೆ ಬಿದ್ದಿದ್ದರು ಎನ್ನಲಾಗಿದೆ. ಆದರೆ ಪ್ರಕರಣದ ಗಂಭೀರತೆ ಅರಿತ ಅವರ್ಯಾರೂ ದರ್ಶನ್‌ ಸಪೋರ್ಟ್‌ಗೆ ಬಂದಿಲ್ಲ. ಸಿಎಂ ಕೂಡ ಈ ಪ್ರಕರಣದಲ್ಲಿ ಎಷ್ಟೇ ಪ್ರಭಾವ ಬಳಸಿದರೂ ಅದಕ್ಕೆ ಒಳಗಾಗಬೇಡಿ, ಯಾರನ್ನೂ ಬಿಡಬೇಡಿ ಎಂದು ಪೊಲೀಸ್‌ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ, ಈಗ ದರ್ಶನ್‌ ಕುರಿತ ಆಪ್ತತೆ ಪ್ರದರ್ಶನ ಮಾಡುವುದು ಸರಿಯಲ್ಲ. ಇದು ರಾಜಕೀಯವಾಗಿಯೂ ತಮಗೆ ಮುಳುವಾಗಬಹುದು ಎಂದು ಸುಮಲತಾಗೆ ಅನಿಸಿದ್ದು, ಇದೇ ಅಮ್ಮ- ಮಗನ ಬಾಂಧವ್ಯದಲ್ಲಿ ಬಿರುಕು ಮೂಡಲು ಕಾರಣವಾಗಿದೆ ಎನ್ನಲಾಗಿದೆ.

`ನಾನೇ 30 ಲಕ್ಷ ರೂ. ಕೊಟ್ಟೆ….’ ಕೊಲೆ ಬಗ್ಗೆ ಸ್ವ ಇಚ್ಛೆ ಹೇಳಿಕೆ ನೀಡಿದ ದರ್ಶನ್‌

ರೇಣುಕಾ ಸ್ವಾಮಿ ಹತ್ಯೆ (Renuka Swamy murder case) ಕೇಸ್‌ನ ಆರೋಪಿ, ನಟ ದರ್ಶನ್‌ (Actor Darshan) ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸ್ವ ಇಚ್ಛೆ ಹೇಳಿಕೆ ನೀಡಿದ್ದಾನೆ. ಪ್ರಕರಣ ಮುಚ್ಚಿಹಾಕಲು 30 ಲಕ್ಷ ರೂ. ನೀಡಿರುವುದಾಗಿ ತಿಳಿಸಿದ್ದಾನೆ.

ಪೊಲೀಸ್ ವಿಚಾರಣೆಯಲ್ಲಿ ನಟ ದರ್ಶನ್ ಅಲಿಯಾಸ್‌ ಡಿ ಬಾಸ್ ಸ್ವ- ಇಚ್ಛೆಯ ಹೇಳಿಕೆ ನೀಡಿದ್ದು, ಅದನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ. ಕೊಲೆಯಾದ ವ್ಯಕ್ತಿಯ ಶವವನ್ನು ವಿಲೇವಾರಿ ಮಾಡಿ, ಈ ಪ್ರಕರಣದಲ್ಲಿ ತನ್ನ ಹೆಸರು ಎಲ್ಲಿಯೂ ಬರದಂತೆ ಮಾಡಬೇಕು. ಪೊಲೀಸರು, ಲಾಯರ್ ಮತ್ತು ಶವ ಸಾಗಿಸುವ ವ್ಯಕ್ತಿಗಳಿಗೆ ತಗಲುವ ವೆಚ್ಚವನ್ನು ಬರಿಸಲು ಪ್ರದೂಶ್‌ಗೆ 30 ಲಕ್ಷ ಹಣ ನೀಡಿರುವುದಾಗಿ ದರ್ಶನ್‌ ಸ್ವ ಇಚ್ಛೆ ಹೇಳಿಕೆ ನೀಡಿದ್ದಾನೆ.

ಆದರೆ ಪಟ್ಟಣಗೆರೆಯ ಶೆಡ್‌ನಲ್ಲಿ ನಡೆದ ಹಲ್ಲೆಯಲ್ಲಿ ತಾನು ಭಾಗಿಯಾಗಿದ್ದೇನೆ ಎಂದು ದರ್ಶನ್‌ ಒಪ್ಪಿಕೊಂಡಿಲ್ಲ. ಶೆಡ್‌ ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾಗಳು, ಜೂನ್‌ 8ರಂದು ರಾತ್ರಿ ದರ್ಶನ್‌ ತನ್ನ ಜೀಪಿನಲ್ಲಿ ಶೆಡ್‌ ಕಡೆಗೆ ಆಗಮಿಸಿದ್ದನ್ನು ತೋರಿಸಿವೆ. ಹತ್ಯೆಯ ನಂತರ ದರ್ಶನ್‌ ಆರೋಪಿಗಳ ಜೊತೆಗೆ ಪಾರ್ಟಿ ಮಾಡಿದ್ದು ಕೂಡ ಪ್ರತ್ಯಕ್ಷದರ್ಶಿಗಳ ಸಾಕ್ಷಿಯಿಂದ ಗೊತ್ತಾಗಿದೆ. ಆದರೆ ಪಟ್ಟಣಗೆರೆಯ ಶೆಡ್‌ನಲ್ಲಿ ಯಾವುದೇ ಸಿಸಿಟಿವಿ ಸಾಕ್ಷಿಗಳನ್ನು ಆರೋಪಿಗಳು ಉಳಿಸಿಲ್ಲ.

ಇದನ್ನೂ ಓದಿ: Actor Darshan: ನಮ್ಮ ಚಟ, ಚಟ್ಟ ಹತ್ತಿಸುವರೆಗೂ ಇರಬಾರದು ಎಂದು ದರ್ಶನ್‌ಗೆ ತಿರುಗೇಟು ಕೊಟ್ಟ ಉಮಾಪತಿ!

Continue Reading
Advertisement
Actor Darshan case reaction by umapathy d boss Fans violent
ಸ್ಯಾಂಡಲ್ ವುಡ್1 min ago

Actor Darshan: ʻಡಿ ಬಾಸ್ʼ ಹೊರ ಬಂದ್ಮೇಲೆ ಉತ್ತರ ಸಿಗೋ ರೀತಿಯಲ್ಲೇ ಸಿಗುತ್ತೆ; ಉಮಾಪತಿ ವಿರುದ್ಧ ದಚ್ಚು ಫ್ಯಾನ್ಸ್‌ ಕಿಡಿ!

viral video snake in amazon box
ವೈರಲ್ ನ್ಯೂಸ್11 mins ago

Viral video: ಅಮೆಜಾನ್‌ ಕಂಪನಿಯ ಪಾರ್ಸೆಲ್‌ನಲ್ಲಿ ಬಂತು ಜೀವಂತ ನಾಗರ! ಗೇಮಿಂಗ್‌ ಬಾಕ್ಸ್‌ ಜೊತೆ ಹಾವು ಫ್ರೀ!

Hardeep Singh Nijjar
ವಿದೇಶ25 mins ago

Hardeep Singh Nijjar: ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜಾರ್‌ ಹತ್ಯೆಯಾಗಿ ಒಂದು ವರ್ಷ; ಮೌನ ಆಚರಿಸಿ ಗೌರವ ಸಲ್ಲಿಸಿದ ಕೆನಡಾ ಸಂಸತ್ತು

Virat Kohli
ಕ್ರೀಡೆ46 mins ago

Virat Kohli: ಶಾರುಖ್, ಸಲ್ಮಾನ್ ಹಿಂದಿಕ್ಕಿ ಮೌಲ್ಯಯುತ ಸೆಲೆಬ್ರಿಟಿಯಾಗಿ ಹೊರಹೊಮ್ಮಿದ ಕಿಂಗ್​ ಕೊಹ್ಲಿ

Actor Darshan BP health update but pavithra Gowda In normal Condition
ಸ್ಯಾಂಡಲ್ ವುಡ್50 mins ago

Actor Darshan: ಕಸ್ಟಡಿಯಲ್ಲಿರೋ ದರ್ಶನ್‌ಗೆ ಹೆಚ್ಚಾಯ್ತು ಬಿಪಿ; ಪವಿತ್ರಾಗೌಡ ಮಾತ್ರ ಕೂಲ್‌ ಕೂಲ್‌..!

food safety cm siddaramaih
ಪ್ರಮುಖ ಸುದ್ದಿ50 mins ago

CM Siddaramaiah: ಅವಧಿ ಮೀರಿದ ಆಹಾರ ಪದಾರ್ಥ ಮಾರಿದರೆ ಹುಷಾರ್!‌ ಸಿಎಂ ಎಚ್ಚರಿಕೆ

Job News
ಉದ್ಯೋಗ1 hour ago

Job News: ಗ್ರಾಮೀಣ ಬ್ಯಾಂಕ್‌ಗಳಲ್ಲಿ 586 ಹುದ್ದೆ; ಆಯ್ಕೆ ಹೇಗಿರುತ್ತದೆ? ಪರೀಕ್ಷೆ ಸ್ವರೂಪವೇನು? Complete Details

Vaishnavi Gowda deep fake Photo viral
ಕಿರುತೆರೆ1 hour ago

Vaishnavi Gowda: ಸೀತಮ್ಮಗೆ ಕಿಡಿಗೇಡಿಗಳ ಕಾಟ; ವೈರಲ್ ಆಗ್ತಿದೆ ಡೀಪ್ ಫೇಕ್ ಫೋಟೊ!

Narendra Modi
ದೇಶ1 hour ago

Narendra Modi: ಯೋಗ ದಿನಾಚರಣೆಯಲ್ಲಿ ಭಾಗವಹಿಸಲು ಮೋದಿ ನಾಳೆ ಕಾಶ್ಮೀರಕ್ಕೆ; ವ್ಯಾಪಕ ಕಟ್ಟೆಚ್ಚರ, ಡ್ರೋನ್ ಹಾರಾಟ ನಿಷೇಧ

Actor Darshan A master stroke by the police and rowdi sheeter open
ಸ್ಯಾಂಡಲ್ ವುಡ್2 hours ago

Actor Darshan: ದರ್ಶನ್ ಬಾಲ ಬಿಚ್ಚದಂತೆ ಪೊಲೀಸರಿಂದ ಮಾಸ್ಟರ್ ಸ್ಟ್ರೋಕ್!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು2 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು2 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ3 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ3 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ3 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ4 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ5 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು5 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು5 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ5 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌