Site icon Vistara News

ವಿಸ್ತಾರ TOP 10 NEWS: ಬೊಮ್ಮಾಯಿ 3 ಲಕ್ಷ ಕೋಟಿ ರೂ. ಬಜೆಟ್‌ ಮಂಡನೆಯಿಂದ, ಏಕನಾಥ ಶಿಂಧೆ ಕೈಗೆ ಶಿವಸೇನೆವರೆಗಿನ ಪ್ರಮುಖ ಸುದ್ದಿಗಳಿವು

vistara-top-10-news-cm-basavaraja-bommai-budget

#image_title

1. Karnataka Budget 2023: ʼಸಬ್‌ ಕಾ ಸಾಥ್‌ʼ ಬಜೆಟ್‌ಗೆ ಸಿಎಂ ಬೊಮ್ಮಾಯಿ ಪ್ರಯತ್ನ; ಚುನಾವಣೆ ಹೊಸ್ತಿಲಲ್ಲಿ ಜಾರಿಯೇ ಅನುಮಾನ
ಚುನಾವಣೆಗೂ ಮುನ್ನ ಸಿಎಂ ಬಸವರಾಜ ಬೊಮ್ಮಾಯಿ ಬಜೆಟ್‌ ( Karnataka Budget 2023) ಘೋಷಣೆ ಮಾಡಿದ್ದಾರೆ. ಇದೇ ಮೊದಲ ಬಾರಿಗೆ ಕರ್ನಾಟಕದ ಬಜೆಟ್‌ ಗಾತ್ರವು 3 ಲಕ್ಷ ಕೋಟಿ ರೂ. ಗಡಿ ದಾಟಿದೆ. ಸುಮಾರು ಎರಡೂವರೆ ಗಂಟೆ ಮಾಡಿದ ಭಾಷಣದಲ್ಲಿ ಅನೇಕ ಹೊಸ ವಿಚಾರಗಳನ್ನು ಪ್ರಸ್ತಾಪಿಸಲಾಗಿದೆ. ಒಂದಿಡೀ ವರ್ಷ ಸಮಯ ಸಿಕ್ಕಾಗಲೇ ಪೂರ್ಣ ಬಜೆಟ್‌ ಅನುಷ್ಠಾನ ಆಗದೆ ಇರುವಾಗ, ಚುನಾವಣೆ ಹೊಸ್ತಿಲಲ್ಲಿ ಅದರ ಕಥೆ ಏನು ಎನ್ನುವುದು ಪ್ರಶ್ನೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

2. Karnataka Budget 2023 : ಬಡ್ಡಿ ರಹಿತ ಸಾಲ 3 ರಿಂದ 5 ಲಕ್ಷಕ್ಕೆ ಹೆಚ್ಚಳ; ಬಜೆಟ್‌ನಲ್ಲಿ ಘೋಷಣೆ
ರಾಜ್ಯ ಸರ್ಕಾರವು ರೈತರ ಬಡ್ಡಿ ರಹಿತ ಸಾಲವನ್ನು 3 ರಿಂದ 5 ಲಕ್ಷಕ್ಕೆ ಹೆಚ್ಚಳ ಮಾಡಿದೆ. ಈ ಯೋಜನೆ ಮೂಲಕ 30 ಲಕ್ಷಕ್ಕಿಂತ ಹೆಚ್ಚಿನ ರೈತರಿಗೆ ಸಾಲ ನೀಡಲಾಗುತ್ತದೆ. ಒಟ್ಟು 25 ಸಾವಿರ ಕೋಟಿ ರೂ. ಸಾಲ ವಿತರಿಸಲಾಗುತ್ತದೆ ಎಂದು ಬಜೆಟ್‌ನಲ್ಲಿ (Karnataka Budget 2023) ಘೋಷಿಸಲಾಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.
ಹೆಚ್ಚಿನ ಓದಿಗಾಗಿ: Karnataka Budget 2023 : ಮಹಿಳಾ ಕೃಷಿ ಕಾರ್ಮಿಕರಿಗೆ ತಿಂಗಳಿಗೆ 500 ರೂ., ಸ್ವಸಹಾಯ ಸಂಘಗಳಿಗೆ ಬಡ್ಡಿರಹಿತ ಸಾಲ

3. Karnataka Budget 2023 : ಮಹಿಳಾ ಕೃಷಿ ಕಾರ್ಮಿಕರಿಗೆ ತಿಂಗಳಿಗೆ 500 ರೂ., ಸ್ವಸಹಾಯ ಸಂಘಗಳಿಗೆ ಬಡ್ಡಿರಹಿತ ಸಾಲ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಮಂಡಿಸಿದ ಬಜೆಟ್‌ನಲ್ಲಿ ಮಹಿಳಾ ಸಬಲೀಕರಣಕ್ಕೆ ಹಲವು ಯೋಜನೆಗಳನ್ನು ಪ್ರಕಟಿಸಲಾಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.
ಹೆಚ್ಚಿನ ಓದಿಗಾಗಿ: Karnataka Budget 2023 : ಒಂದು ಲಕ್ಷ ಸರ್ಕಾರಿ ಹುದ್ದೆಗಳಿಗೆ ನೇಮಕ; ಬಜೆಟ್‌ನಲ್ಲಿ ಬೊಮ್ಮಾಯಿ ಘೋಷಣೆ

4. Karnataka Budget 2023: ಮಠ ಮಾನ್ಯಗಳಿಗೆ ಭರ್ಜರಿ ಕೊಡುಗೆ, ಅರ್ಚಕರ: ಸಮಗ್ರ ಅಭಿವೃದ್ಧಿಗೆ 1 ಸಾವಿರ ಕೋಟಿ ರೂ. ಘೋಷಣೆ
 ಚುನಾವಣೆ ಸಮೀಪಿಸುತ್ತಿರುವಂತೆ ರಾಜ್ಯದ ದೇವಸ್ಥಾನಗಳು ಹಾಗೂ ಮಠ ಮಾನ್ಯಗಳಿಗೆ ಭರ್ಜರಿ ಕೊಡುಗೆ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಕುರಿತು ಆಯವ್ಯಯದಲ್ಲಿ (Karnataka Budget 2023) ಸಿಎಂ ಬಸವರಾಜ ಬೊಮ್ಮಾಯಿ ಘೊಷಣೆ ಮಾಡಿದ್ದಾರೆ. ಮುಂದಿನ 2 ವರ್ಷಗಳಲ್ಲಿ ರಾಜ್ಯದಲ್ಲಿನ ವಿವಿಧ ದೇವಸ್ಥಾನ ಮತ್ತು ಮಠಗಳ ಜೀರ್ಣೋದ್ಧಾರಕ್ಕಾಗಿ ನಮ್ಮ ಸರ್ಕಾರ 1,000 ಕೋಟಿ ರೂ. ವೆಚ್ಚದ ಕಾಮಗಾರಿಗಳನ್ನು ಕೈಗೆತ್ತಿಕೊಂಡು ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದು ಎಂದಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.
ಹೆಚ್ಚಿನ ಓದಿಗಾಗಿ: Karnataka Budget 2023 : ಒಂದು ಲಕ್ಷ ಸರ್ಕಾರಿ ಹುದ್ದೆಗಳಿಗೆ ನೇಮಕ; ಬಜೆಟ್‌ನಲ್ಲಿ ಬೊಮ್ಮಾಯಿ ಘೋಷಣೆ

5. Karnataka Budget 2023 : ಕಿವಿಗೆ ಹೂವಿಟ್ಟುಕೊಂಡು ಸದನಕ್ಕೆ ಬಂದ ಸಿದ್ದರಾಮಯ್ಯ, ಬಜೆಟ್‌ ಮಂಡನೆಗೆ ಅಡ್ಡಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಜೆಟ್‌ ಮಂಡನೆ ಆರಂಭಿಸಿದ್ದು, ಆರಂಭದಲ್ಲೇ ವಿರೋಧ ಪಕ್ಷಗಳಿಂದ ಅಡ್ಡಿ ಉಂಟಾಯಿತು. ಬೆಳಗ್ಗೆ ೧೦.೧೫ಕ್ಕೆ ಬಜೆಟ್‌ ಮಂಡನೆ ಆರಂಭಿಸಿದ ಬೊಮ್ಮಾಯಿ ಅವರು ಕುವೆಂಪು ಅವರ ಕವನವನ್ನು ಉಲ್ಲೇಖಿಸಿದರು. ಈ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರ ಕಡೆಗೆ ನೋಡಿದರು. ಸಿದ್ದರಾಮಯ್ಯ ಅವರು ಕಿವಿಗೆ ಹೂವಿಟ್ಟುಕೊಂಡಿರುವುದು ಕಂಡಿತು. ಅವರು, ʻʻಕಿವಿ ಮೇಲೆ ಹೂವು ಇಟ್ಟುಕೊಳ್ಳುವುದು ಬೇಡʼ ಎಂದು ಸಿದ್ದರಾಮಯ್ಯನವರನ್ನು ಬೊಮ್ಮಾಯಿ ಕೆಣಕಿದರು. ಮುಂದಿನ ಸಲವೂ ಸಿದ್ದರಾಮಯ್ಯ ಹೂವು ಇಟ್ಟುಕೊಳ್ಳುತ್ತಾರೆ ಎಂದು ಕೆಣಕಿದರು. ಆಗ ಸಿದ್ದರಾಮಯ್ಯ ಅವರು ನೀವು ರಾಜ್ಯದ ಜನರ ಕಿವಿಗೆ ಹೂವು ಇಡುವುದು ತಾನೇ ಎಂದು ಉತ್ತರಿಸಿದರು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

ಬಜೆಟ್‌ ಕುರಿತ ಎಲ್ಲ ಸುದ್ದಿಗಳನ್ನೂ ಓದಲು ಈ ಲಿಂಕ್‌ ಮೇಲೆ ಕ್ಲಿಕ್‌ ಮಾಡಿ.

6. Eknath Shinde: ಏಕನಾಥ್‌ ಶಿಂಧೆಗೆ ಜಯ, ಶಿವಸೇನೆಯ ಬಿಲ್ಲು-ಬಾಣ ಗುರುತು ಶಿಂಧೆ ಬಣಕ್ಕೆ, ಉದ್ಧವ್‌ ಠಾಕ್ರೆಗೆ ಮುಖಭಂಗ
ಶಿವಸೇನೆಯ ಬಹುತೇಕ ಶಾಸಕರನ್ನು ಸೆಳೆದು, ಹೊಸದೊಂದು ಬಣ ರಚಿಸಿ, ಬಿಜೆಪಿ ಜತೆಗೂಡಿ ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಿರುವ ಏಕನಾಥ್‌ ಶಿಂಧೆ (Eknath Shinde) ಅವರಿಗೆ ಭಾರಿ ಮುನ್ನಡೆ ಸಿಕ್ಕಿದೆ. ಶಿವಸೇನೆ ಹೆಸರು ಹಾಗೂ ಪಕ್ಷದ ಚಿಹ್ನೆಯಾದ ಬಿಲ್ಲು ಮತ್ತು ಬಾಣ ಚಿಹ್ನೆಯನ್ನು ಚುನಾವಣೆ ಆಯೋಗವು ಏಕನಾಥ್‌ ಶಿಂಧೆ ಬಣಕ್ಕೆ ನೀಡಿದೆ. ಇದರಿಂದ ಉದ್ಧವ್‌ ಠಾಕ್ರೆ ನೇತೃತ್ವದ ಶಿವಸೇನೆಯ ಮತ್ತೊಂದು ಬಣಕ್ಕೆ ಭಾರಿ ಹಿನ್ನಡೆಯಾಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

7. Adani Hindenburg Row: ಅದಾನಿ ಗ್ರೂಪ್‌ ಬಗ್ಗೆ ಹಿಂಡನ್‌ಬರ್ಗ್‌ ವರದಿ, ತನಿಖೆಗೆ ಸುಪ್ರೀಂ ನೇತೃತ್ವದಲ್ಲಿಯೇ ಸಮಿತಿ ರಚನೆ
 ಗೌತಮ್‌ ಅದಾನಿ ನೇತೃತ್ವದ ಅದಾನಿ ಗ್ರೂಪ್‌ ಕುರಿತು ಹಿಂಡನ್‌ಬರ್ಗ್‌ ವರದಿಯ (Adani Hindenburg Row) ಉಲ್ಲೇಖಗಳ ಬಗ್ಗೆ ತನಿಖೆ ನಡೆಸಲು ಸಮಿತಿ ರಚನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮುಚ್ಚಿದ ಲಕೋಟೆಯಲ್ಲಿ ನೀಡಿದ ವರದಿಯನ್ನು ತಿರಸ್ಕರಿಸಿದ ಸುಪ್ರೀಂ ಕೋರ್ಟ್‌, ತಾನೇ ಸಮಿತಿ ರಚಿಸುವುದಾಗಿ ತಿಳಿಸಿದೆ. ಇದರಿಂದ ಕೇಂದ್ರ ಸರ್ಕಾರಕ್ಕೆ ಮುಜುಗರ ಉಂಟಾದಂತಾಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

8. Chetan Sharma resign: ಭಾರತೀಯ ಕ್ರಿಕೆಟ್ ಆಯ್ಕೆ ಸಮಿತಿಯ ಮುಖ್ಯಸ್ಥನ ಸ್ಥಾನಕ್ಕೆ ಚೇತನ್ ಶರ್ಮಾ ರಾಜೀನಾಮೆ
ಭಾರತೀಯ ಕ್ರಿಕೆಟ್ ತಂಡದ ಅನೇಕ ಒಳ ಸಂಗತಿಗಳನ್ನು ಖಾಸಗಿ ಟಿವಿಯ ರಹಸ್ಯ ಕಾರ್ಯಾಚರಣೆಯಲ್ಲಿ ಬಾಯಿಬಿಟ್ಟಿದ್ದ ತಂಡದ ಆಯ್ಕೆ ಸಮಿತಿಯ ಮುಖ್ಯಸ್ಥ ಚೇತನ್ ಶರ್ಮಾ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಭಾರತೀಯ ಕ್ರಿಕೆಟ್ ಮಂಡಳಿ (BCCI) ಕಾರ್ಯದರ್ಶಿ ಜಯ್ ಶಾ (Jay Shah) ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ರವಾನಿಸಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

9. Congress Protest: ಸಿದ್ದರಾಮಯ್ಯರನ್ನು ಹೊಡೆದುಹಾಕಿ ಹೇಳಿಕೆ ಖಂಡಿಸಿ ರಾಜ್ಯದ ವಿವಿಧೆಡೆ ಕಾಂಗ್ರೆಸ್‌ ಪ್ರತಿಭಟನೆ
ಟಿಪ್ಪುವನ್ನು ಉರಿಗೌಡ ಮತ್ತು ನಂಜೇಗೌಡ ಹೊಡೆದ ಹಾಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹೊಡೆದುಹಾಕಬೇಕು ಎಂಬ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ವಿವಿಧೆಡೆ ಕಾಂಗ್ರೆಸ್‌ನಿಂದ ಪ್ರತಿಭಟನೆ ನಡೆಸಲಾಯಿತು. ಅಶ್ವತ್ಥನಾರಾಯಣ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

10. Delhi Mayor Polls: ನಾಮನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕಿಲ್ಲ ಎಂದ ಸುಪ್ರೀಂ, ಆಪ್‌ಗೆ ಭಾರಿ ಮುನ್ನಡೆ
ಮಹಾನಗರ ಪಾಲಿಕೆಯ ಮೇಯರ್‌ ಆಯ್ಕೆಯ ಕಗ್ಗಂಟಿನ (Delhi Mayor Polls) ವಿಚಾರದಲ್ಲಿ ಬಿಜೆಪಿ ವಿರುದ್ಧ ಆಪ್‌ಗೆ ಭಾರಿ ಮುನ್ನಡೆ ದೊರೆತಿದೆ. “ಮೇಯರ್‌ ಆಯ್ಕೆಗೆ ಸಂಬಂಧಿಸಿದಂತೆ ಲೆಫ್ಟಿನೆಂಟ್‌ ಗವರ್ನರ್‌ ವಿ.ಕೆ. ಸಕ್ಸೇನಾ ಅವರು ಪ್ರಸ್ತಾಪಿಸಿದ ನಾಮನಿರ್ದೇಶಿತ ಸದಸ್ಯರಿಗೆ ಮತದಾನ ಮಾಡುವ ಹಕ್ಕಿಲ್ಲ” ಎಂದು ಸುಪ್ರೀಂ ಕೋರ್ಟ್‌ ಸ್ಪಷ್ಟಪಡಿಸಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

ಮತ್ತಷ್ಟು ಪ್ರಮುಖ ಸುದ್ದಿಗಳಿವು

  1. Insulin Injection: ವಾರಕ್ಕೊಮ್ಮೆ ತೆಗೆದುಕೊಳ್ಳುವ ಇನ್ಸುಲಿನ್‌ ಇನ್ನೆರಡು ವರ್ಷಗಳಲ್ಲಿ ಮಾರುಕಟ್ಟೆಗೆ
  2. IND VS AUS: ಚಿರತೆ ವೇಗದಲ್ಲಿ ಜಿಗಿದು ಅದ್ಭುತ ಕ್ಯಾಚ್​ ಹಿಡಿದ ಕೆ. ಎಲ್​. ರಾಹುಲ್; ವಿಡಿಯೊ ವೈರಲ್​
  3. Narendra Modi: ಸಂತಾಪ ಸೂಚಿಸಿ, ಪ್ರಧಾನಿಗೆ ಪತ್ರ ಬರೆದ ಬೆಂಗಳೂರಿನ 2ನೇ ತರಗತಿಯ ಬಾಲಕ! ಮೋದಿಯ ಉತ್ತರ ಏನು?
  4. IND VS AUS: ಟೆಸ್ಟ್​ ಕ್ರಿಕೆಟ್​ನಲ್ಲಿ ನೂತನ ದಾಖಲೆ ಬರೆದ ಆರ್​. ಅಶ್ವಿನ್​
  5. ಮೊಗಸಾಲೆ ಅಂಕಣ: ಹೊಸ ವರ್ಷದಲ್ಲಿ ಹಳೆ ಬಜೆಟ್, ಎಡವಟ್ಟು ಮಾಡಿದ ಗೆಹ್ಲೋಟ್
Exit mobile version