ವಿಸ್ತಾರ TOP 10 NEWS : ಕಾಂಗ್ರೆಸ್‌ನಿಂದ ಮೂರನೇ ʼಭಾಗ್ಯʼ ಘೋಷಣೆಯಿಂದ, ಭಯೋತ್ಪಾದಕ ಚಟುವಟಿಕೆಗೆ ಗೇಮಿಂಗ್‌ ಆ್ಯಪ್ ಬಳಕೆವರೆಗಿನ ಪ್ರಮುಖ ಸುದ್ದಿಗಳಿವು - Vistara News

ಕರ್ನಾಟಕ

ವಿಸ್ತಾರ TOP 10 NEWS : ಕಾಂಗ್ರೆಸ್‌ನಿಂದ ಮೂರನೇ ʼಭಾಗ್ಯʼ ಘೋಷಣೆಯಿಂದ, ಭಯೋತ್ಪಾದಕ ಚಟುವಟಿಕೆಗೆ ಗೇಮಿಂಗ್‌ ಆ್ಯಪ್ ಬಳಕೆವರೆಗಿನ ಪ್ರಮುಖ ಸುದ್ದಿಗಳಿವು

ದೇಶ, ವಿದೇಶ, ರಾಜ್ಯದಲ್ಲಿ ದಿನಪೂರ್ತಿ ನಡೆದ ಘಟನಾವಳಿಗಳಲ್ಲಿ ಆಯ್ದ ಪ್ರಮುಖ ಸುದ್ದಿಗಳು ವಿಸ್ತಾರ TOP 10 NEWS ನಲ್ಲಿ.

VISTARANEWS.COM


on

vistara-top-10-news-congress announces another scheme to gaming app used for terror activities and more news
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

1. Prajadhwani : ಸ್ತ್ರೀ ಶಕ್ತಿ ಸಂಘಗಳ ಸಾಲಮನ್ನಾ; ಅಲ್ಪಸಂಖ್ಯಾತರಿಗೆ ₹10 ಸಾವಿರ ಕೋಟಿ ಅನುದಾನ: ಸಿದ್ದರಾಮಯ್ಯ ಘೋಷಣೆ
ಮುಂದಿನ ಚುನಾವಣೆಯಲ್ಲಿ ಜಯಗಳಿಸಿದರೆ ಪ್ರತಿ ಮನೆಗೆ 200 ಯುನಿಟ್‌ ವಿದ್ಯುತ್‌ ಉಚಿತ ಹಾಗೂ ಮಹಿಳೆಯರಿಗೆ ಮಾಸಿಕ 2,000ರೂ. ನೀಡುವುದಾಗಿ ಘೋಷಿಸಿರುವ ಸರ್ಕಾರ ಇದೀಗ ಸ್ತ್ರೀಶಕ್ತಿ ಸಂಘಗಳ ಸಾಲ ಮನ್ನಾ ಮಾಡುವುದಾಗಿ ಹೇಳಿದೆ. ಕೋಲಾರದಲ್ಲಿ ಆಯೋಜಿಸಿದ್ದ ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಈ ಘೋಷಣೆ ಮಾಡಿದರು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.
ಹೆಚ್ಚಿನ ಓದಿಗಾಗಿ: Congress Protest : ರಸ್ತೆ ಗುಂಡಿಗಳ ರಾಜಧಾನಿ ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಡಿ.ಕೆ. ಶಿವಕುಮಾರ್‌ ವಾಗ್ದಾಳಿ

2. Budget 2023: ಬಜೆಟ್‌ನಲ್ಲಿ ಮಧ್ಯಮ ವರ್ಗದ ಜನತೆಗೆ ಆದಾಯ ತೆರಿಗೆ ವಿನಾಯಿತಿ ಮಿತಿ ಹೆಚ್ಚಳದ ಕೊಡುಗೆ ಸಂಭವ
ಫೆಬ್ರವರಿ ೧ ರಂದು 2023-24 ಸಾಲಿನ ಕೇಂದ್ರ ಬಜೆಟ್‌ ಮಂಡನೆಯಾಗಲಿದ್ದು, (Budget 2023) ಮಧ್ಯಮ ವರ್ಗದ ಜನತೆ ಆದಾಯ ತೆರಿಗೆ ವಿನಾಯಿತಿಯ ಮಿತಿ ಹೆಚ್ಚಳದ ನಿರೀಕ್ಷೆಯಲ್ಲಿದ್ದಾರೆ. 2024ರ ಸಾರ್ವತ್ರಿಕ ಚುನಾವಣೆಗೆ ಮುನ್ನ ನಡೆಯಲಿರುವ ಕೊನೆಯ ಪೂರ್ಣಪ್ರಮಾಣದ ಚುನಾವಣೆ ಇದಾಗಿರುವುದರಿಂದ, ಜನಪ್ರಿಯ ಬಜೆಟ್‌ ಅನ್ನು ಮಧ್ಯಮ ವರ್ಗದ ಜನತೆ ನಿರೀಕ್ಷಿಸುತ್ತಿದ್ದಾರೆ. ಹಾಗೂ ಆದಾಯ ತೆರಿಗೆ ಕಾಯಿದೆಯ ಸೆಕ್ಷನ್‌ 80 ಸಿ, ಸೆಕ್ಷನ್‌ 80ಡಿ ಮತ್ತು ಸೆಕ್ಷನ್‌ 87ಎ ಇತ್ಯಾದಿಗಳ ಅಡಿಯಲ್ಲಿ ಕೆಲವು ತೆರಿಗೆ ವಿನಾಯಿತಿಗಳನ್ನು ನಿರೀಕ್ಷಿಸುತ್ತಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

3. Hijab Row: ಹಿಜಾಬ್ ನಿಷೇಧ ಪ್ರಕರಣ ವಿಚಾರಣೆಗೆ ಶೀಘ್ರ ತ್ರಿಸದಸ್ಯ ಪೀಠ ರಚನೆಗೆ ಸಮ್ಮತಿಸಿದ ಸುಪ್ರೀಂ ಕೋರ್ಟ್
ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧಕ್ಕೆ (Hijab Row) ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ (Supreme Court) ವಿಭಾಗೀಯ ಪೀಠವು ಭಿನ್ನ ತೀರ್ಪು ನೀಡಿದ್ದರಿಂದ ಕರ್ನಾಟಕದಲ್ಲಿ ಈಗಲೂ ನಿಷೇಧ ಮುಂದುವರಿದಿದೆ. ಇದರಿಂದ ವಿದ್ಯಾರ್ಥಿನಿಯರಿಗೆ ತೊಂದರೆಯಾಗುತ್ತಿದ್ದು, ಪ್ರಕರಣವನ್ನು ಶೀಘ್ರವೇ ವಿಚಾರಣೆಗೆ ಕೈಗೆತ್ತಿಕೊಳ್ಳಬೇಕೆಂದು ಮುಸ್ಲಿಮ್ ವಿದ್ಯಾರ್ಥಿನಿಯರ ಮನವಿಯನ್ನು ಸುಪ್ರೀಂ ಕೋರ್ಟ್ ಪುರಸ್ಕರಿಸಿದೆ. ಶೀಘ್ರವೇ ತ್ರಿಸದಸ್ಯ ಪೀಠ ರಚನೆಗೆ ಸಮ್ಮತಿಸಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

4. BBC Documentary On Modi: ಕೇಂದ್ರ ಬ್ಲಾಕ್‌ ಮಾಡಿದರೂ ಪ್ರತಿಪಕ್ಷಗಳಿಂದ ಬಿಬಿಸಿ ಸಾಕ್ಷ್ಯಚಿತ್ರ ಶೇರ್‌, ಬಿಜೆಪಿ ಆಕ್ರೋಶ
ಗೋದ್ರಾ ಹತ್ಯಾಕಾಂಡಕ್ಕೆ ಆಗ ಗುಜರಾತ್‌ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ (Narendra Modi) ಅವರೇ ಕಾರಣ ಎಂಬುದಾಗಿ ಚಿತ್ರಿಸಿರುವ ಬಿಬಿಸಿಯ ಇಂಡಿಯಾ: ದಿ ಮೋದಿ ಕ್ವಶ್ಚನ್‌ (India: The Modi Question) ಡಾಕ್ಯುಮೆಂಟರಿಯು (BBC Documentary On Modi) ದೇಶದಲ್ಲಿ ರಾಜಕೀಯ ಮೇಲಾಟಕ್ಕೆ ಕಾರಣವಾಗಿದೆ. ಡಾಕ್ಯುಮೆಂಟರಿ ಕುರಿತ ವಿಡಿಯೊ, ಪೋಸ್ಟ್‌ ಹಾಗೂ ಲಿಂಕ್‌ಗಳನ್ನು ಡಿಲೀಟ್‌ ಮಾಡಬೇಕು ಎಂದು ಟ್ವಿಟರ್‌ ಹಾಗೂ ಯುಟ್ಯೂಬ್‌ಗೆ ಕೇಂದ್ರ ಸರ್ಕಾರ ಸೂಚಿಸಿದರೂ ಪ್ರತಿಪಕ್ಷಗಳ ನಾಯಕರು ಲಿಂಕ್‌ಗಳನ್ನು ಶೇರ್‌ ಮಾಡಿದ್ದಾರೆ. ಇದಕ್ಕೆ ಬಿಜೆಪಿ ತಿರುಗೇಟು ನೀಡಿದ್ದು, ಬಿಜೆಪಿ ಹಾಗೂ ಪ್ರತಿಪಕ್ಷಗಳ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

5. Bus Service: ಸರ್ಕಾರದ ವಿರುದ್ಧ ಸಿಡಿದೆದ್ದ ಸಾರಿಗೆ ನೌಕರರು; ಮಂಗಳವಾರ ಬಸ್‌ ಸಂಚಾರದಲ್ಲಿಲ್ಲ ವ್ಯತ್ಯಯ
ಸಾರಿಗೆ ನೌಕರರು ಧರಣಿ ಸತ್ಯಾಗ್ರಹಕ್ಕೆ ಮುಂದಾಗುತ್ತಿದ್ದಾರೆ. ಹೀಗಾಗಿ ಮಂಗಳವಾರ ಬಸ್‌ಗಳ ಸಂಚಾರದಲ್ಲಿ ವ್ಯತ್ಯಯ (Bus Service) ಉಂಟಾಗಲಿದೆ ಎಂದು ಹೇಳಲಾಗುತ್ತಿತ್ತು. ಆದರೆ, ಕೆಎಸ್‌ಆರ್‌ಟಿಸಿ ನಿಗಮವು ಬಸ್ಸುಗಳ ಕಾರ್ಯಾಚರಣೆಯಲ್ಲಿ ಯಾವುದೇ ವ್ಯತ್ಯಯ ಇಲ್ಲವೆಂದು ತಿಳಿಸಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

6. Shivamogga terror: ಉಗ್ರ ಚಟುವಟಿಕೆಗೆ PFI ಮುಖಂಡರಿಂದ ಗೇಮಿಂಗ್ ಆ್ಯಪ್ ಬಳಕೆ; ಶಿವಮೊಗ್ಗ ಟ್ರಯಲ್‌ ಬ್ಲಾಸ್ಟ್‌, ಮಂಗ್ಳೂರು ಕುಕ್ಕರ್‌ ಬ್ಲಾಸ್ಟ್‌ಗೂ ಲಿಂಕ್‌!
ರಾಜ್ಯದಲ್ಲಿ ಉಗ್ರ ಚಟುವಟಿಕೆ ಸದ್ದಿಲ್ಲದೆ ನಡೆಯುತ್ತಿದೆ. ಶಿವಮೊಗ್ಗ ಟ್ರಯಲ್‌ ಬ್ಲಾಸ್ಟ್‌ (Shivamogga terror) ಹಾಗೂ ಮಂಗಳೂರು ಕುಕ್ಕರ್‌ ಬ್ಲಾಸ್ಟ್‌ ಬಳಿಕ ಒಂದೊಂದೇ ವಿಚಾರಗಳು ಹೊರಗೆ ಬರುತ್ತಲೇ ಇದೆ. ಈಗ ಉಗ್ರ ಚಟುವಟಿಕೆಗೆ ಗೇಮಿಂಗ್ ಆ್ಯಪ್ ಬಳಕೆ ಮಾಡಲಾಗುತ್ತಿದೆ ಎಂಬ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

7. Parakram Diwas 2023: ಅಂಡಮಾನ್​-ನಿಕೋಬಾರ್​​ನ 21 ದ್ವೀಪಗಳಿಗೆ ಪ್ರಧಾನಿಯಿಂದ ನಾಮಕರಣ; ಯಾರೆಲ್ಲರ ಹೆಸರಿಡಲಾಗಿದೆ?
 ನೇತಾಜಿ ಸುಭಾಷ್​ ಚಂದ್ರ ಬೋಸ್​ ಜನ್ಮದಿನದ ನಿಮಿತ್ತ, ಅವರಿಗೆ ಗೌರವಾರ್ಥವಾಗಿ ಅಂಡಮಾನ್​ ಮತ್ತು ನಿಕೋಬಾರ್​ ದ್ವೀಪಗಳಲ್ಲಿನ 21 ದೊಡ್ಡದೊಡ್ಡ ದ್ವೀಪಗಳಿಗೆ ಪ್ರಧಾನಿ ನರೇಂದ್ರ ಮೋದಿ ನಾಮಕರಣ ಮಾಡಿದರು. ಸುಭಾಷ್​ ಚಂದ್ರ ಬೋಸ್​ ಜನ್ಮದಿನವನ್ನು 2021ರಿಂದ ಪರಾಕ್ರಮ ದಿವಸ್​ ಎಂದು ಆಚರಿಸಿಕೊಂಡು ಬರಲಾಗುತ್ತಿದೆ. ಈ ಸಲದ ಪರಾಕ್ರಮ ದಿವಸ್​ (Parakram Diwas 2023)ನಿಮಿತ್ತ ಅಂಡಮಾನ್​-ನಿಕೋಬಾರ್​ನಲ್ಲಿನ 21 ದ್ವೀಪಗಳಿಗೆ ಪರಮವೀರ ಚಕ್ರ ಪ್ರಶಸ್ತಿ ಪುರಸ್ಕೃತರ ನಾಮಕರಣ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ವರ್ಚ್ಯುವಲ್​ ಆಗಿ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಇದೇ ವೇಳೆ ಅಲ್ಲಿನ ನೇತಾಜಿ ಸುಭಾಷ್ ಚಂದ್ರ ಬೋಸ್​ ದ್ವೀಪ (ಈ ಹಿಂದಿನ ರಾಸ್​ ದ್ವೀಪಗಳು)ದಲ್ಲಿ ನಿರ್ಮಿಸಲಾಗಿರುವ ಸುಭಾಷ್​ ಚಂದ್ರ ಬೋಸ್​ ಅವರ ರಾಷ್ಟ್ರೀಯ ಸ್ಮಾರಕದ ಮಾದರಿ ಪ್ರತಿಮೆಯನ್ನೂ ಅನಾವರಣಗೊಳಿಸಿದರು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

8. Athiya Shetty KL Rahul wedding: ಸಪ್ತಪದಿ ತುಳಿದ ಕೆ.ಎಲ್​. ರಾಹುಲ್​-ಅಥಿಯಾ ಶೆಟ್ಟಿ
ಬಹು ಕಾಲದ ನಿರೀಕ್ಷೆ, ಕುತೂಹಲ, ಊಹಾಪೋಹಗಳಿಗೆ ಕೊನೆಗೂ ತೆರೆ ಎಂಬಂತೆ ಭಾರತೀಯ ಕ್ರಿಕೆಟ್‌ ತಂಡದ ಆಟಗಾರ ಕೆ.ಎಲ್​. ರಾಹುಲ್(Athiya Shetty KL Rahul wedding)​ ಮತ್ತು ಬಾಲಿವುಡ್‌ ತಾರೆ ಅಥಿಯಾ ಶೆಟ್ಟಿ(Athiya kl rahul marriage) ಇಂದು ಸೋಮವಾರ(ಜನವರಿ 23) ಖಾಸಗಿ ಸಮಾರಂಭದಲ್ಲಿ ಸಪ್ತಪದಿ ತುಳಿದಿದ್ದಾರೆ. ಈ ವಿಚಾರವನ್ನು ಅಥಿಯಾ ಶೆಟ್ಟಿ ಅವರ ತಂದೆ ಸುನೀಲ್​ ಶೆಟ್ಟಿ ಅವರು ಮಾಧ್ಯಮದವರಿಗೆ ಖಚಿತಪಡಿಸಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

9. Border Dispute : ಒಂದು ದಿನದ ವಿಚಾರಣೆಗೆ ₹60 ಲಕ್ಷ !: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದಕ್ಕೆ ಲಕ್ಷ ಲಕ್ಷ ಹಣ ವೆಚ್ಚ
ಮಹಾಜನ್‌ ವರದಿ ಸೇರಿ ಎಲ್ಲ ಕಾನೂನಾತ್ಮಕ ರೀತಿಯಿಂದಲೂ ಕರ್ನಾಟಕದ ಪರವಾಗಿದ್ದರೂ ಮಹಾರಾಷ್ಟ್ರ ಸರ್ಕಾರ ರಾಜಕೀಯ ಕಾರಣಕ್ಕೆ ಸೃಷ್ಟಿಸಿರುವ ಗಡಿ ವಿವಾದ ವಿಚಾರಣೆಗೆ ಕರ್ನಾಟಕದ ಬೊಕ್ಕಸದ ಹಣ ನೀರಿನಂತೆ ಹರಿಯುತ್ತಿದೆ. ಸುಪ್ರೀಂಕೋರ್ಟ್‌ನಲ್ಲಿ ಕರ್ನಾಟಕದ ಪರ ವಾದಿಸಲು ರಚಿಸಲಾಗಿರುವ ಹಿರಿಯ ವಕೀಲ ಮುಕುಲ್‌ ರೋಹಟಗಿ ನೇತೃತ್ವದ ವಕೀಲರ ತಂಡಕ್ಕೆ, ಒಂದು ದಿನ ವಿಚಾಣೆಗೆ ಹಾಜರಾಗಲು ಸುಮಾರು 60 ಲಕ್ಷ ರೂ. (59.90 ಲಕ್ಷ ರೂ.) ಪಾವತಿ ಮಾಡಬೇಕಿದೆ. ಈ ಕುರಿತು ರಾಜ್ಯ ಸರ್ಕಾರ ಆದೇಶಿಸಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

10. ತನ್ನ ಅಜ್ಜನಿಗಾದ ಸ್ಥಿತಿ ಯಾರಿಗೂ ಆಗಬಾರದು ಎಂದು ರಸ್ತೆ ಗುಂಡಿಗಳನ್ನೆಲ್ಲ ಏಕಾಂಗಿಯಾಗಿ ಮುಚ್ಚಿದ 13ವರ್ಷದ ಬಾಲಕ
ರಸ್ತೆ ಗುಂಡಿ ಎಂಬುದು ಜಾಗತಿಕ ಸಮಸ್ಯೆ. ಭಾರತದಲ್ಲಂತೂ ಪ್ರತಿ ರಾಜ್ಯ, ಪ್ರತಿ ಜಿಲ್ಲೆ, ಪ್ರತಿನಗರಗಳಲ್ಲೂ ಒಂದಲ್ಲ ಒಂದು ಕಡೆ ಗುಂಡಿ ಬಿದ್ದ ರಸ್ತೆ (Pothole)ಯನ್ನು ನೋಡಿಯೇ ನೋಡುತ್ತೇವೆ. ಹೀಗೆ ಪುದುಚೇರಿಯಲ್ಲೂ ಕೂಡ ರಸ್ತೆಯಲ್ಲಿ ಗುಂಡಿ ಬಿದ್ದು, ಆ ಗುಂಡಿಯ ಕಾರಣಕ್ಕೆ ಹಿರಿಯ ನಾಗರಿಕರೊಬ್ಬರು ಬೈಕ್​​ನಿಂದ ಬಿದ್ದು ಏಟು ಮಾಡಿಕೊಂಡಿದ್ದಾರೆ. ಇಷ್ಟೇ ಆದರೆ ಅದು ದೊಡ್ಡ ಸುದ್ದಿ ಎಂದು ಹಲವರಿಗೆ ಅನ್ನಿಸಲಿಕ್ಕಿಲ್ಲ, ಆದರೆ ಆ ವಯಸ್ಸಾದ ನಾಗರಿಕ ರಸ್ತೆ ಗುಂಡಿಯಲ್ಲಿ ಬೈಕ್​​ನಿಂದ ಬಿದ್ದ ನಂತರ ಅವರ ಮೊಮ್ಮಗ ಮಾಡಿದ ಕೆಲಸವೀಗ ಸಖತ್​ ಸುದ್ದಿಯಾಗಿದೆ ಮತ್ತು ಆ ಹುಡುಗ ಮಾದರಿ ಎನ್ನಿಸಿದ್ದಾನೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

ಮತ್ತಷ್ಟು ಪ್ರಮುಖ ಸುದ್ದಿಗಳಿವು

  1. Viral Video: ಲಂಡನ್​ ವಿಶ್ವವಿದ್ಯಾಲಯದಲ್ಲಿ ಕರ್ನಾಟಕದ ಬಾವುಟ ಪ್ರದರ್ಶಿಸಿದ ಬೀದರ್​ ಹುಡುಗ; ಕನ್ನಡಿಗರು ಫುಲ್​ ಖುಷ್​​
  2. JDS Pancharatna: ಸಮ್ಮಿಶ್ರ ಸರ್ಕಾರ ಉರುಳಿಸಿದ ಸಿದ್ದರಾಮಯ್ಯ ಎಲ್ಲೇ ನಿಂತರೂ ಸೋಲು ಖಚಿತ: ಎಚ್‌.ಡಿ. ಕುಮಾರಸ್ವಾಮಿ
  3. Demat account: 10 ನಿಮಿಷದಲ್ಲೇ ಡಿಮ್ಯಾಟ್‌ ಅಕೌಂಟ್‌ ಪಡೆಯುವುದು ಹೇಗೆ?
  4. Bageshwar Dham: ಯಾರು ಈ ಬಾಗೇಶ್ವರ್ ಬಾಬಾ? ಯಾಕೆ ಸುದ್ದಿಯಲ್ಲಿದ್ದಾರೆ ಈ ವ್ಯಕ್ತಿ?
  5. Viral Video: ದ್ರೌಪದಿ ಅಮ್ಮನ ಉತ್ಸವದಲ್ಲಿ ಭಕ್ತರ ಮೇಲೆ ಕ್ರೇನ್​ ಬಿದ್ದು ನಾಲ್ವರ ಸಾವು; ತಮಿಳುನಾಡು ದೇಗುಲದಲ್ಲಿ ದುರಂತ
  6. leopard attack: ತಿ.ನರಸೀಪುರ ತಾಲೂಕಿನಾದ್ಯಂತ 15 ದಿನದಲ್ಲಿ ಕಬ್ಬಿನ ಕಟಾವಿಗೆ ಡಿಸಿ ಸೂಚನೆ; ಚಿರತೆ ಸೆರೆ ಕಾರ್ಯಾಚರಣೆ ಚುರುಕು
  7. Actor Lakshman Death: ಕನ್ನಡ ಚಿತ್ರರಂಗದ ನಟ ಲಕ್ಷ್ಮಣ್ ಇನ್ನು ನೆನಪು ಮಾತ್ರ
  8. Pakistan woman: ಬೆಂಗಳೂರಿನಲ್ಲಿ ಅಕ್ರಮವಾಗಿ ವಾಸವಾಗಿದ್ದ ಪಾಕ್ ಯುವತಿ ಬಂಧನ
  9. Gold rate : ಬಂಗಾರದ ದಾಖಲೆಯ ಬೆಲೆ ಏರಿಕೆಗೆ ಕಾರಣವೇನು?
ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Bengaluru Karaga: ಐತಿಹಾಸಿಕ ಬೆಂಗಳೂರು ಕರಗಕ್ಕೆ ಅದ್ಧೂರಿ ಚಾಲನೆ; ಉತ್ಸವ ವೀಕ್ಷಿಸಲು ಹರಿದು ಬಂದ ಜನಸಾಗರ

Bengaluru Karaga: ಬೆಂಗಳೂರಿನ ನಗರ್ತಪೇಟೆಯಲ್ಲಿ ಧರ್ಮರಾಯಸ್ವಾಮಿ ರಥೋತ್ಸವ ಬಳಿಕ ರಾತ್ರಿ 2ಗಂಟೆಗೆ ಕರಗ ಶಕ್ತ್ಸೋತ್ಸವಕ್ಕೆ ಚಾಲನೆ ನೀಡಲಾಯಿತು.

VISTARANEWS.COM


on

Bengaluru karaga
Koo

ಬೆಂಗಳೂರು: ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವಕ್ಕೆ ಮಂಗಳವಾರ ರಾತ್ರಿ ಅದ್ಧೂರಿಯಾಗಿ ಚಾಲನೆ ದೊರಕಿತು. ನಗರ್ತಪೇಟೆಯಲ್ಲಿ ಧರ್ಮರಾಯಸ್ವಾಮಿ ರಥೋತ್ಸವ ಬಳಿಕ ರಾತ್ರಿ 2ಗಂಟೆಗೆ ಕರಗ ಶಕ್ತ್ಸೋತ್ಸವಕ್ಕೆ (Bengaluru Karaga) ಚಾಲನೆ ನೀಡಲಾಯಿತು. ವೈಭವದ ಕರಗ ಕಣ್ತುಂಬಿಕೊಳ್ಳಲು ವಿವಿಧೆಡೆಯಿಂದ ಸಾವಿರಾರು ಜನರು ಆಗಮಿಸಿದ್ದರು.

ಬೆಳಗ್ಗೆಯಿಂದಲ್ಲೇ ತಾಯಿಗೆ ಬಳೆ ಶಾಸ್ತ್ರ, ತಾಳಿ ಶಾಸ್ತ್ರ, ಹೂ ಶಾಸ್ತ್ರ ವಿಶೇಷ ಪೂಜೆ ಸಲ್ಲಿಸಲಾಗಿದೆ. ಮಂಗಳವಾರ ರಾತ್ರಿ 10.30ಕ್ಕೆ ಕಲ್ಯಾಣಿಗೆ ಹೋಗಿ ಪೂಜೆ ಸಲ್ಲಿಸಲಾಯಿತು. ಅಲ್ಲಿಂದ ವಾಪಸ್ ಬಂದು ಧರ್ಮರಾಯ ದೇವಸ್ಥಾನದಲ್ಲಿ ಪೂಜೆ ಮಾಡಲಾಯಿತು. ರಥೋತ್ಸವದ ಬಳಿಕ ಭಕ್ತರ ಗೋವಿಂದ… ಗೋವಿಂದ… ಎಂಬ ಘೋಷಣೆಗಳ ನಡುವೆ ಅರ್ಚಕ ಜ್ಞಾನೇಂದ್ರ ಅವರು ಕರಗ ಹೊತ್ತು ಸಾಗಿದರು.

ಮುಖ್ಯ ರಥ ಧರ್ಮರಾಯಸ್ವಾಮಿ ರಥದಲ್ಲಿ ಅರ್ಜುನ‌ ಮತ್ತು ದ್ರೌಪದಿ ದೇವಿ ವಿರಾಜಮಾನರಾಗಿದ್ದರು. ಚಿಕ್ಕ ರಥದಲ್ಲಿ ಗ್ರಾಮದೇವಿ ಮುತ್ಯಾಲಮ್ಮ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿತ್ತು. ಪಾಂಡವರ ಮೂರ್ತಿಗಳು ಸೇರಿ ಒಟ್ಟು ಒಂಬತ್ತು ಮೂರ್ತಿಗಳಿಗೆ ವೀರಕುಮಾರರಿಂದ ಪೂಜೆ ಸಲ್ಲಿಸಿದ ಬಳಿಕ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ರಥಗಳು ಮುಂದೆ ಸಾಗುತ್ತಿದ್ದಂತೆ ದೇಗುಲದಿಂದ ದ್ರೌಪದಿ ದೇವಿ ಕರಗ ಹೊರಬಂದಿತು.

ಕರಗ ಸಾಗುವ ರಾಜಬೀದಿಗಳೆಲ್ಲಾ ಬಣ್ಣ ಬಣ್ಣದ ಲೈಟಿಂಗ್‌ಗಳಿಂದ ಕಂಗೊಳಿಸುತ್ತಿರುವಂತದ್ದವು. ಈ ಬಾರಿಯೂ ಮಸ್ತಾನ್ ಸಾಬ್ ದರ್ಗಾಗೆ ಕರಗ ಭೇಟಿ ನೀಡಲಿದೆ. ನಸುಕಿನ ಜಾವ 4 ಗಂಟೆ ಹೊತ್ತಿಗೆ ದರ್ಗಾಗೆ ಭೇಟಿ ನೀಡಲಿದೆ.

ಕರಗ ಮೆರವಣಿಗೆ ಮಾರ್ಗ

ನಗರ್ತಪೇಟೆಯ ಧರ್ಮರಾಯಸ್ವಾಮಿ ದೇವಸ್ಥಾನದಿಂದ ಕರಗ ಮೆರವಣಿಗೆ ಆರಂಭವಾಗಿ ಕಬ್ಬನ್​ಪೇಟೆ, ಗಾಣಿಗರಪೇಟೆ, ಅವೆನ್ಯೂ ರಸ್ತೆ ಮೂಲಕ ಸಾಗಲಿದೆ. ನಂತರ ಕೆ.ಆರ್. ರಸ್ತೆಯಲ್ಲಿರುವ ಕೋಟೆ ಆಂಜನೇಯ ದೇಗುಲಕ್ಕೆ ತೆರಳಲಿದೆ.

ಬಳಿಕ ಸಿಟಿ ಮಾರ್ಕೆಟ್ ಪೊಲೀಸ್ ಠಾಣೆ ರಸ್ತೆಯ ರಾಣಾಸಿಂಗ್​ಪೇಟೆ, ಅಕ್ಕಿಪೇಟೆ, ಅರಳಿಪೇಟೆ, ಒಟಿಸಿ ರಸ್ತೆ, ಮಸ್ತಾನ್ ಸಾಹೇಬ್ ದರ್ಗಾ, ಬಳೆಪೇಟೆ ಮುಖ್ಯ ರಸ್ತೆ, ಕೆ.ಜಿ.ರಸ್ತೆ, ಎಸ್​ಪಿ ರಸ್ತೆ ಮೂಲಕ ಸಾಗಿ ಅಣ್ಣಮ್ಮ ದೇಗುಲಕ್ಕೆ ಬಂದು ಅದೇ ಮಾರ್ಗದಲ್ಲಿ ವಾಪಸಾಗಲಿದೆ.

ಇದನ್ನೂ ಓದಿ | Bengaluru Karaga 2024: ಬೆಂಗಳೂರು ಕರಗ ಶಕ್ತ್ಸೋತ್ಸವಕ್ಕೆ ಕೌಂಟ್‌ ಡೌನ್‌; 8 ಲಕ್ಷ ಜನ ಭಾಗಿ!

ಕಿಲ್ಲಾರಿ ರಸ್ತೆ, ಮೈಸೂರು ಬ್ಯಾಂಕ್ ವೃತ್ತ, ಅವೆನ್ಯೂ ರಸ್ತೆ ಕ್ರಾಸ್, ಆರ್.ಟಿ.ರಸ್ತೆ, ಕುಂಬಾರಪೇಟೆ, ಗೊಲ್ಲರಪೇಟೆ, ತಿಗಳರಪೇಟೆ, ಸುಣಕಲ್ ಪೇಟೆ ಮೂಲಕ ಬುಧವಾರ ಬೆಳಗ್ಗೆ 7 ಗಂಟೆಗೆ ಧರ್ಮರಾಯಸ್ವಾಮಿ ದೇವಾಲಯ ಸೇರಲಿದೆ. ಬೆಳಗ್ಗೆ 8 ಗಂಟೆಗೆ ತಾಯಿಗೆ ವಿಶೇಷ ಪೂಜೆ ಸಲ್ಲಿಸುವುದರೊಂದಿಗೆ ಕರಗಕ್ಕೆ ತೆರೆ ಬೀಳಲಿದೆ.

Continue Reading

ಬೆಂಗಳೂರು

Voters Pledge: ಸಹಕಾರ ಸಂಘಗಳ ಕಾರ್ಯದರ್ಶಿಗಳು, ಸಿಬ್ಬಂದಿಗೆ ಮತದಾನ ಪ್ರತಿಜ್ಞಾವಿಧಿ ಬೋಧನೆ

Voters Pledge: ಲೋಕಸಭಾ ಚುನಾವಣೆಯಲ್ಲಿ ಕಡ್ಡಾಯ ಮತದಾನ ಮಾಡುವಂತೆ ಕರ್ನಾಟಕ ರಾಜ್ಯ ಸಹಕಾರ ತರಬೇತಿ ಸಂಸ್ಥೆಯಲ್ಲಿ ಸಹಕಾರ ಸಂಘಗಳ ಕಾರ್ಯದರ್ಶಿಗಳು, ಸಿಬ್ಬಂದಿಗೆ ಪ್ರತಿಜ್ಞಾವಿಧಿ ಬೋಧಿಸಲಾಗಿದೆ.

VISTARANEWS.COM


on

Voters' Pledge
Koo

ಬೆಂಗಳೂರು: ಲೋಕಸಭಾ ಚುನಾವಣೆ-2024ರಲ್ಲಿ ಪ್ರತಿಯೊಬ್ಬರೂ ಕಡ್ಡಾಯ ಮತದಾನ ಮಾಡುವಂತೆ, ಮತದಾನದ ಮಹತ್ವ ಮತ್ತು ಅದರ ಬಗ್ಗೆ ವ್ಯಾಪಕ ಪ್ರಚಾರ ಮಾಡುವಂತೆ ಸಹಕಾರ ಸಂಘಗಳ ಕಾರ್ಯದರ್ಶಿಗಳು, ಸಿಬ್ಬಂದಿಗೆ ಕರ್ನಾಟಕ ರಾಜ್ಯ ಸಹಕಾರ ತರಬೇತಿ ಸಂಸ್ಥೆಯಲ್ಲಿ ಸೋಮವಾರ ಪ್ರತಿಜ್ಞಾವಿಧಿ (Voters Pledge) ಬೋಧಿಸಲಾಯಿತು.

ಸಹಕಾರ ಸಂಘಗಳ ವ್ಯಾಪ್ತಿಯಲ್ಲಿ ಸದಸ್ಯರಿಗೆ ಮತದಾನದ ಬಗ್ಗೆ ಜಾಗೃತಿ ಮೂಡಿಸುವಂತೆ ಸಹಕಾರ ಸಂಘಗಳ ಕಾರ್ಯದರ್ಶಿಗಳು, ಸಿಬ್ಬಂದಿಗೆ ಸಹಕಾರ ಸಂಘಗಳ ಜಂಟಿ ನಿಬಂಧಕರಾದ ಲಕ್ಷ್ಮೀಪತಯ್ಯ ಅವರು ತಿಳಿಸಿದರು. ಇದೇ ವೇಳೆ ಕಡ್ಡಾಯವಾಗಿ ಎಲ್ಲರೂ ಮತದಾನ ಮಾಡಬೇಕು ಎಂದು ಪ್ರತಿಜ್ಞಾವಿಧಿ ಬೋಧಿಸಿದರು.

ಇದನ್ನೂ ಓದಿ | Voter ID: ಮತದಾನಕ್ಕೆ ವೋಟರ್ ಐಡಿ ಇಲ್ಲದಿದ್ದರೆ ಚಿಂತೆ ಬೇಡ, ಈ ದಾಖಲೆಗಳು ಸಾಕು

Continue Reading

ರಾಮನಗರ

Lok Sabha Election 2024: ಕೇಂದ್ರ ಸರ್ಕಾರದಿಂದ ರಾಜ್ಯದ ಬಗ್ಗೆ ತಾರತಮ್ಯ ಧೋರಣೆ: ಡಿ.ಕೆ. ಸುರೇಶ್

Lok Sabha Election 2024: ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಸಂಸದ ಡಿ.ಕೆ. ಸುರೇಶ್, ರಾಮನಗರದಲ್ಲಿ ಮಂಗಳವಾರ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಭರ್ಜರಿ ಚುನಾವಣಾ ಪ್ರಚಾರ ಕೈಗೊಂಡು ಮತಯಾಚನೆ ನಡೆಸಿದರು.

VISTARANEWS.COM


on

DCM DK Shivakumar Election campaign for Bangalore Rural Lok Sabha Constituency Congress candidate DK Suresh In Ramanagara
Koo

ರಾಮನಗರ: ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಸಂಸದ ಡಿ.ಕೆ. ಸುರೇಶ್, ರಾಮನಗರದಲ್ಲಿ ಮಂಗಳವಾರ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಭರ್ಜರಿ ಚುನಾವಣಾ ಪ್ರಚಾರ ಕೈಗೊಂಡು ಮತಯಾಚನೆ (Lok Sabha Election 2024) ನಡೆಸಿದರು.

ರಾಮನಗರದಲ್ಲಿ ಮಂಗಳವಾರ ಅಪಾರ ಸಂಖ್ಯೆಯ ಕಾರ್ಯಕರ್ತರು ಹಾಗೂ ಬೆಂಬಲಿಗರೊಂದಿಗೆ ನಡೆದ ಚುನಾವಣಾ ಪ್ರಚಾರ ರ‍್ಯಾಲಿಯಲ್ಲಿ ಸಂಸದ ಡಿ.ಕೆ. ಸುರೇಶ್ ಪರ ಡಿಸಿಎಂ ಡಿ.ಕೆ. ಶಿವಕುಮಾರ್, ಭರ್ಜರಿ ಮತಬೇಟೆ ನಡೆಸಿದರು.

ಇದನ್ನೂ ಓದಿ: Lok Sabha Election 2024: ಬೆಂಗಳೂರಲ್ಲಿ ನಾಳೆಯಿಂದ ಏ.26ರ ಮಧ್ಯರಾತ್ರಿವರೆಗೆ ನಿಷೇಧಾಜ್ಞೆ; ಮದ್ಯ ಮಾರಾಟವೂ ಬಂದ್‌

ಈ ವೇಳೆ ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಸಂಸದ ಡಿ.ಕೆ. ಸುರೇಶ್ ಮಾತನಾಡಿ, ಕೇಂದ್ರ ಸರ್ಕಾರ ರಾಜ್ಯದ ವಿಚಾರದಲ್ಲಿ ಮಲತಾಯಿ ಧೋರಣೆ ತೋರಿದ್ದು, ಎಲ್ಲರಿಗೂ ಅನ್ಯಾಯ ಮಾಡಿದೆ. ಈ ವಿಚಾರವನ್ನು ರಾಜ್ಯ ಹಾಗೂ ದೇಶದ ಜನರ ಗಮನಕ್ಕೆ ತಂದಿದ್ದೇನೆ. ನಮ್ಮ ಮುಂದಿನ ಪೀಳಿಗೆಗಳು ರಾಜ್ಯದಲ್ಲೇ ಸ್ವಾಭಿಮಾನದಿಂದ ಬದುಕಬೇಕಾದರೆ ತೆರಿಗೆ ಹಕ್ಕನ್ನು ಪ್ರತಿಪಾದನೆ ಮಾಡಬೇಕು ಎಂದ ಅವರು, ನಮ್ಮ ಉದ್ಯೋಗಗಳು, ಅಭಿವೃದ್ಧಿ, ಅನುದಾನವು ಉತ್ತರ ಪ್ರದೇಶ, ಗುಜರಾತ್, ಬಿಹಾರದ ಪಾಲಾಗುತ್ತಿವೆ ಎಂದು ಆರೋಪಿಸಿದರು.

ಕ್ಷೇತ್ರದಲ್ಲಿ ಪ್ರಾಮಾಣಿಕವಾಗಿ ನಿಮ್ಮ ಸೇವೆ ಮಾಡಿದ್ದೇನೆ. ಈ ಜಿಲ್ಲೆಯಲ್ಲಿ ಅಭಿವೃದ್ಧಿ ಪ್ರಾರಂಭವಾಗಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರಾಮನಗರ ಪಟ್ಟಣದ ಅಭಿವೃದ್ಧಿಗೆ 800 ಕೋಟಿಗೂ ಹೆಚ್ಚು ಅನುದಾನವನ್ನು ಮಂಜೂರು ಮಾಡಿದ್ದೇವೆ. ಈ ಭಾಗದಲ್ಲಿ ರಸ್ತೆ, ಒಳಚರಂಡಿ ದುಸ್ಥಿತಿಯಲ್ಲಿದ್ದು, ಇದೆಲ್ಲವನ್ನು ಅಭಿವೃದ್ಧಿಪಡಿಸಲಾಗುವುದು ಎಂದು ತಿಳಿಸಿದರು.

ಈ ಬಾರಿಯ ಚುನಾವಣೆಯಲ್ಲಿ ಮತ್ತೊಮ್ಮೆ ತಮಗೆ ಅವಕಾಶ ನೀಡಿ, ಹಸ್ತದ ಗುರುತಿಗೆ ಮತ ನೀಡಿ ಗೆಲ್ಲಿಸುವಂತೆ ಅವರು ಮತದಾರರಲ್ಲಿ ಮನವಿ ಮಾಡಿದರು.

ಇದನ್ನೂ ಓದಿ: Money Guide: ಮನೆ ಪೂರ್ತಿಯಾಗುವ ಮುನ್ನವೇ ಸಾಲದ ಹಣ ಖರ್ಚಾಯ್ತೆ? ಚಿಂತೆ ಬೇಡ; ಟಾಪ್‌ ಅಪ್‌ ಲೋನ್‌ಗೆ ಅಪ್ಲೈ ಮಾಡಿ

ಈ ಸಂದರ್ಭದಲ್ಲಿ ಶಾಸಕ ಇಕ್ಬಾಲ್ ಹುಸೇನ್ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಇತರರು ಉಪಸ್ಥಿತರಿದ್ದರು.

Continue Reading

ಕರ್ನಾಟಕ

Priyanka Gandhi: ನಿರುದ್ಯೋಗಿಗಳಿಗೆ ಉದ್ಯೋಗ ನೀಡಿ ಮಂಗಳಸೂತ್ರ ಉಳಿಸೋದು ಗೊತ್ತಿಲ್ಲವೇ?; ಮೋದಿ ವಿರುದ್ಧ ಪ್ರಿಯಾಂಕ ಗಾಂಧಿ ವಾಗ್ದಾಳಿ

Priyanka Gandhi: ಬಿಜೆಪಿಯವರು ಯಾವ ರೀತಿ ಹೊಲಸು, ಸಣ್ಣತನದ ಮಾತನ್ನಾಡಿ ರಾಜಕಾರಣ ಮಾಡ್ತಿದ್ದಾರೆ ಅಂತ ನೋಡುತ್ತಿದ್ದೀರಿ ಎಂದು ಪ್ರಧಾನಿ ಮೋದಿ ಅವರ ಮಂಗಳಸೂತ್ರದ ಹೇಳಿಕೆಗೆ ಪ್ರಿಯಾಂಕ ಗಾಂಧಿ ತಿರುಗೇಟು ನೀಡಿದ್ದಾರೆ.

VISTARANEWS.COM


on

Priyanka Gandhi
Koo

ಬೆಂಗಳೂರು: ಕಳೆದ ಎರಡು ದಿನಗಳಿಂದ ಪ್ರಧಾನಿ ಮೋದಿ ಬಾಯಲ್ಲಿ ಎಂತೆಂಥ ಮಾತುಗಳು ಬರುತ್ತಿವೆಯೋ ನೋಡುತ್ತಿದ್ದೇವೆ. ಕಾಂಗ್ರೆಸ್‌ ಮಂಗಳಸೂತ್ರವನ್ನೇ ಕಿತ್ತುಕೊಳ್ಳುತ್ತದೆ ಎಂಬ ಮಾತುಗಳನ್ನಾಡಿದ್ದಾರೆ. ನನ್ನ ತಾಯಿಯ ಮಂಗಳಸೂತ್ರ ದೇಶಕ್ಕಾಗಿ ಬಲಿಯಾಗಿದೆ. ಮಹಿಳೆಯರ ಮನಸ್ಸಲ್ಲಿ ಇರುವ ಸೇವೆಯ ಭಾವನೆ ಬಿಜೆಪಿಗೆ ಅರ್ಥವಾಗುವುದಿಲ್ಲ. ಮಂಗಳಸೂತ್ರದ ಬಗ್ಗೆ ಮಾತನಾಡುವ ಮೋದಿ ಅವರಿಗೆ ನಿರುದ್ಯೋಗಿಗಳಿಗೆ ಉದ್ಯೋಗ ನೀಡಿ ಮಂಗಳಸೂತ್ರ ಉಳಿಸುವುದು ಗೊತ್ತಿಲ್ಲವೇ? ಅವರಿಗೆ ನಾಚಿಕೆ ಆಗಬೇಕು ಎಂದು ಎಐಸಿಸಿ ಪ್ರಧಾನ ಕಾರ್ಯಾದರ್ಶಿ ಪ್ರಿಯಾಂಕ ಗಾಂಧಿ (Priyanka Gandhi) ಆಕ್ರೋಶ ಹೊರಹಾಕಿದ್ದಾರೆ.

ಬೆಂಗಳೂರು ದಕ್ಷಿಣದ ಕ್ಷೇತ್ರದ ಬೊಮ್ಮನಹಳ್ಳಿಯಲ್ಲಿ‌ ಆಯೋಜಿಸಿದ್ದ ಕಾಂಗ್ರೆಸ್‌ ಅಭ್ಯರ್ಥಿ ಸೌಮ್ಯ ರೆಡ್ಡಿ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ನಮ್ಮ ಸ್ವಂತ ಅಜ್ಜಿ ಅವರು ಒಡವೆ ಅಡವಿಟ್ಟು ಸೈನಿಕರಿಗೆ ನೆರವಾದರು. ನಮ್ಮದು ಸ್ವಾತಂತ್ರ್ಯ ತಂದು ಕೊಡುವಲ್ಲಿ ತ್ಯಾಗ ಬಲಿದಾನ ಮಾಡಿದ ಪಕ್ಷ. ಅದೇ ನಮ್ಮ ಕುಟುಂಬದ ಇತಿಹಾಸ ಎಂದು ತಿಳಸಿದರು.

ಬಿಜೆಪಿ ಪಕ್ಷಕ್ಕೆ ಹೆಣ್ಣು ಮಕ್ಕಳ ಕಷ್ಟ ಅರ್ಥವಾಗಲ್ಲ. ಪ್ರಧಾನಿ ಮೋದಿ ಅವರಿಗೆ ಮಾಂಗಲ್ಯ ಬೆಲೆ ಗೊತ್ತಿಲ್ಲ. ರೈತರ ಸಾಲ ಹೆಚ್ಚಾದಾಗ ಆ ಮಹಿಳೆ ಮಾಂಗಲ್ಯ ಅಡಮಾನ ಇಡುತ್ತಾರೆ. ಮನೆಯಲ್ಲಿ ಯಾರಿಗಾದರೂ ಕಷ್ಟ ಎದುರಾದರೆ ಮಾಂಗಲ್ಯ ಇಡುತ್ತಾಳೆ. ದೇಶದಲ್ಲಿ ಲಾಕ್‌ಡೌನ್‌ ಆದಾಗ ಬಡವರಿಗೆ ಊಟ ಇಲ್ಲ. ಎಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ರೈತರು ಪ್ರತಿಭಟನೆ ಮಾಡಿದರ 609 ರೈತರು ಸತ್ತರು. ಆಗ ಮೋದಿ ಅವರಿಗೆ ಮಾಂಗಲ್ಯ ನೆನಪಾಗಲಿಲ್ವಾ? ಮಣಿಪುರದಲ್ಲಿ ಒಂದು ಹೆಣ್ಣನ್ನು ಬೆತ್ತಲೆ ಮಾಡಿದಾಗ ಮೋದಿ ಎಲ್ಲಿದ್ದರು? ಆ ಮಹಿಳೆ ಮಂಗಳಸೂತ್ರದ ಬಗ್ಗೆ ಗೌರವ ಯಾಕೆ ಇರಲಿಲ್ಲ. ನಿರುದ್ಯೋಗಿಗಳಿಗೆ ಉದ್ಯೋಗ ನೀಡಿ ಮಂಗಳಸೂತ್ರ ಉಳಿಸೋದು ಗೊತ್ತಿಲ್ಲವೇ? ದೇಶದ ಬಗ್ಗೆ ಇವರಿಗೆ ಒಂದು ಚೂರು ಕಾಳಜಿ ಇಲ್ವಾ? ಮೋದಿ ಅವರಿಗೆ ನಾಚಿಕೆ ಆಗಬೇಕು ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ | Lok Sabha Election 2024: ಸಂವಿಧಾನ ತಿದ್ದುಪಡಿ ಮಾಡುವುದಾಗಿ ಘೋಷಿಸಿದ ಪ್ರಿಯಾಂಕಾ ಗಾಂಧಿ!

ಕಾಂಗ್ರೆಸ್‌ ಗ್ಯಾರಂಟಿಗಳಿಂದ ರಾಜ್ಯದ ಕೋಟ್ಯಂತರ ಜನರಿಗೆ ಅನುಕೂಲವಾಗುತ್ತಿದೆ. ದೇಶಾದ್ಯಂತ ನುಡಿದಂತೆ ನಡೆಯುವ ಸರ್ಕಾರ ಇದ್ದರೆ ಅದು ಕಾಂಗ್ರೆಸ್ ಸರ್ಕಾರ ಮಾತ್ರ. ಕರ್ನಾಟದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲಾಗಿದೆ. ಇನ್ನು ಪ್ರತಿಯೊಬ್ಬರಿಗೂ ನ್ಯಾಯ ಒದಗಿಸುತ್ತೇವೆ ಎಂದು ನಿಮ್ಮ ಮುಂದೆ ಬಂದಿದ್ದೇವೆ. ಹೆಣ್ಣು ಮಕ್ಕಳಿಗೆ ಒಂದು ಲಕ್ಷ ಕೊಡುವ ನಿರ್ಧಾರ ಕಾಂಗ್ರೆಸ್ ಮಾಡಿದೆ. ಯುವಕರಿಗೆ ಉದ್ಯೋಗ ನೀಡೊದಕ್ಕೆ ಅಪ್ರೆಂಟಿಷಿಪ್ ಕಾರ್ಯಕ್ರಮ ಶುರು ಮಾಡ್ತಿದ್ದೇವೆ. ಶ್ರಮಿಕ್ ನ್ಯಾಯ್ ಕೂಲಿ ಕೆಲಸ ಮಾಡುವವರಿಗೆ ಇನ್ಶೂರೆನ್ಸ್ ಕೊಡುತ್ತೇವೆ ಎಂದು ಭರವಸೆ ನೀಡಿದರು.

ದೇಶದಲ್ಲಿ ಬೆಲೆ ಏರಿಕೆಯಿಂದ ಸಾಮಾನ್ಯರಿಗೆ ಕಷ್ಟ ಆಗುತ್ತಿದೆ. ಬೆಲೆ ಏರಿಕೆ, ನಿರುದ್ಯೋಗ ಎರಡು ಕಷ್ಟಗಳು ನಿಮ್ಮ ಮುಂದಿವೆ. ಮಹಿಳೆಯರಿಗೆ ಮನೆ ನಡೆಸುವ ಕಷ್ಟ ಗೊತ್ತಿದೆ. ಪೆಟ್ರೋಲ್, ಡೀಸೆಲ್, ಅಡುಗೆ ಎಣ್ಣೆ, ಚಿನ್ನ, ಬೆಳ್ಳಿ ಎಲ್ಲ ಬೆಲೆ ಏರಿದೆ. ಸಮಾಜದಲ್ಲಿ ಎಲ್ಲಾ ವರ್ಗದವರೂ ಬೆಲೆ ಏರಿಕೆ ಹೊರೆ ಎದುರಿಸುತ್ತಿದ್ದಾರೆ. ನಿರುದ್ಯೋಗ ಸಮಸ್ಯೆ ಎಲ್ಲರನ್ನೂ ಕಾಡುತ್ತಿದೆ. ಪ್ರಧಾನಿ ಮೋದಿಯವರ 10 ವರ್ಷ ಆಡಳಿತ ನೋಡಿದ್ದೀರಾ? ನಿಮ್ಮ ಜೀವನದಲ್ಲಿ ಬದಲಾವಣೆ ಆಗಿದ್ಯಾ? ಅನ್ನೋ ಪ್ರಶ್ನೆ ಮಾಡಬೇಕಿದೆ. ನಿಮ್ಮೆಲ್ಲರ ಮುಂದೆ ಸೂಪರ್ ಮ್ಯಾನ್ ತರ ಬಂದು ನಿಂತಿದ್ರು. ಅಚ್ಚೇ ದಿನ್ ಬಂತಾ ಎಂದು ಪ್ರಶ್ನಿಸಿದರು.

ನೀವೆಲ್ಲರೂ ಮೋದಿ ಅವರ 10 ವರ್ಷ ನೋಡಿದ್ದೀರಿ, ಹೀಗಾಗಿ ಮೋದಿ ಅವರನ್ನ ಪ್ರಶ್ನೆ ಮಾಡಬೇಕು. ನಾವೇನು ಕಷ್ಟ ಪಡುತ್ತಿದ್ದೇವೆಯೋ ಅದೇ ನಿಜಾಂಶ. ಪ್ರಧಾನಿ ಅವರಿಗೆ ಮುಖ್ಯವಾದ ಸ್ನೇಹಿತರಿದ್ದಾರೆ. ಅವರಿಗೋಸ್ಕರ ನೀತಿ ನಿಯಮವನ್ನೇ ಬದಲಾಯಿಸುತ್ತಿದ್ದಾರೆ. ದೇಶದ ವಿಮಾನ ನಿಲ್ದಾಣ ಸೇರಿದಂತೆ ಪ್ರತಿಯೊಂದು ಯೋಜನೆ ಅವರಿಗೆ ಮೀಸಲಿಡುತ್ತಿದ್ದಾರೆ. ಸಣ್ಣಪುಟ್ಟ ಉದ್ಯಮಿಗಳಿಗೆ ಏನು ಸಹಾಯ ಆಗ್ತಾ ಇಲ್ಲ. ರೈತರಿಗೆ ಬಡವರಿಗೆ ಯಾರಿಗೂ ಏನು ಸಹಾಯ ಇಲ್ಲ. ಸಹಾಯ ಮಾಡಿದರೆ 5 ಕೆಜಿ ಅಕ್ಕಿ ಕೊಟ್ಟು ತೃಪ್ತಿ ಪಡಿಸುತ್ತಿದ್ದಾರೆ. ಇವತ್ತು ಪ್ರಜಾಪ್ರಭುತ್ವವನ್ನು ದುರ್ಬಲ ಮಾಡಲು ಅವರು ಹೊರಟಿದ್ದು, ಸಂವಿಧಾನ ಬದಲಾಯಿಸಲು ಹೊರಟ್ಡಿದ್ದಾರೆ ಎಂದು ತಿಳಿಸಿದರು.

ಚುನಾವಣಾ ಬಾಂಡ್ ಅಂತ ದೊಡ್ಡ ಸ್ಕ್ಯಾಂ ನಡೆದಿತ್ತು. ಅದಕ್ಕೆ ಯಾರು ಫಂಡ್ ಕೊಟ್ಟಿದ್ದಾರೋ ಗೊತ್ತಾಗುವುದಿಲ್ಲ. ಸುಪ್ರೀಂಕೋರ್ಟ್ ಮಧ್ಯ ಪ್ರವೇಶ ಆದಾಗ ಗೊತ್ತಾಯಿತು. ಇವರೇನು ಮಾಡಿದರೂ ನಮಗೆ ಗೊತ್ತಾಗುವುದಿಲ್ಲ ಅಂತ ಬಿಜೆಪಿಯವರು ವಾಷಿಂಗ್ ಮಷಿನ್ ತೆರೆದಿಟಿದ್ದಾರೆ. ಕಪ್ಪು ಹಣ ಹಾಕಿ ಬಿಳಿ ಹಣ ಬರುತ್ತೆ ಎಂದು ಹೇಳುತ್ತಿದ್ದಾರೆ. ಭ್ರಷ್ಟಾಚಾರ ಮಾಡಿದವರನ್ನು ವಾಷಿಂಗ್‌ ಮಷಿನ್‌ನೊಳಗೆ ಹಾಕಿದರೆ ಹೊರಗೆ ಕ್ಲೀನ್ ಆಗಿ ಬರುತ್ತಾರೆ ಎಂದು ವ್ಯಂಗ್ಯವಾಡಿದರು.

ಚುನಾವಣೆ ಸಮಯದಲ್ಲಿ ಯಾರೊಬ್ಬರೂ ಅಭಿವೃದ್ಧಿ ಬಗ್ಗೆ ಮಾತನಾಡುತ್ತಿಲ್ಲ. ಪ್ರಧಾನಿ ಅವರ ಫೋಟೊ ಇಟ್ಡುಕೊಂಟು ಮತ ಕೇಳುತ್ತಿದ್ದಾರೆ. ಬೆಂಗಳೂರಿನಂತಹ ನಗರಕ್ಕೆ ನಿಜವಾದ ನಾಯಕ ಬೇಕು. ಇವರು ಭಾವನಾತ್ಮಕ ರಾಜಕೀಯ ಮಾಡುತ್ತಿದ್ದಾರೆ.

ಇವತ್ತು ಪ್ರಗತಿಪರ ವಿಷಯಗಳ ಬಗ್ಗೆ ಚುನಾವಣೆ ಮಾಡುತ್ತಿಲ್ಲ. ಪ್ರಧಾನಿ ಮಂತ್ರಿ ಫೋಟೊ ಹಾಕಿ ಚುನಾವಣೆ ಎದುರಿಸುತ್ತಿದ್ದಾರೆ. ಸಂವಿಧಾನ ಬದಲಾವಣೆ ಮಾಡುತ್ತೀವಿ ಎಂದು ಚುನಾವಣೆ ಮಾಡುತ್ತಿದ್ದಾರೆ. ಬೆಂಗಳೂರು ಅಂತ ಸಿಟಿಗೆ ಪ್ರಗತಿ, ಉನ್ನತಿ ಬಗೆಗಿನ‌ ನಾಯಕರು ಬೇಕು. ಆದರೆ ಇವರು ಭಾವನಾತ್ಮಕ ವಿಚಾರಗಳಲ್ಲಿ ಚುನಾವಣೆ ಮಾಡುತ್ತಿದ್ದಾರೆ. ಈ ರೀತಿಯ ನಾಯಕರು ಕರ್ನಾಟಕಕ್ಕೆ ಬೇಕಿಲ್ಲ ಎಂದರು.

ಬಿಜೆಪಿ ಪಕ್ಷಕ್ಕೆ ಹೆಣ್ಮಕ್ಕಳ ಕಷ್ಟ ಅರ್ಥವಾಗಲ್ಲ, ಹೆಣ್ಮಕ್ಕಳ ಸೇವಾ ಮನೋಭಾವ ಕುಟುಂಬ ನಿರ್ವಹಣೆಗೆ ಮಂಗಳಸೂತ್ರ ಅಡವಿಟ್ಟು ಜೀವನ ಮಾಡುತ್ತಾರೆ. ಮಂಗಳ ಸೂತ್ರದ ಬಗ್ಗೆ ಮಾತನಾಡುವ ಮೋದಿ ನೋಟ್ ಬ್ಯಾನ್ ಆದಾಗ ಹೆಣ್ಮಕ್ಕಳು ಪಟ್ಟ ಕಷ್ಟ ಎಲ್ಲಿ ಹೋಗಿದ್ದರು. ರಾತ್ರೋರಾತ್ರಿ ಲಾಕ್‌ಡೌನ್ ಮಾಡಿದಾಗ ಅದೆಷ್ಟೋ ಮಂದಿ ಸಾವನ್ನಪ್ಪಿದರು. ಆ ಹೆಣ್ಣು ಮಕ್ಕಳು ಕಷ್ಟಪಟ್ಟಾಗ ಎಲ್ಲಿಹೋಗಿದ್ದರು. ರೈತರು ಅನೇಕ ಪ್ರತಿಭಟನೆ ಮಾಡಿದರು, 600 ರೈತರು ಪ್ರಾಣ ಬಿಟ್ಟರು, ಆ ರೈತ ಕುಟುಂಬದ ಮಹಿಳೆಯರ ಮಂಗಳಸೂತ್ರ ನೆನಪಾಗಲಿಲ್ಲವೇ? ಮಣಿಪುರ ಮಹಿಳೆಯ ವಸ್ತ್ರಾಪಹರಣ ಮಾಡಿದಾಗ ಮಂಗಳಸೂತ್ರ ನೆನಪಾಗಲಿಲ್ಲವೇ? ಮತದಾರರನ್ನು ಹೆದರಿಸಿ ಮತಹಾಕಿಸಿಕೊಳ್ಳಲು ಮುಂದಾಗಿರುವ ಪ್ರಧಾನಿಗೆ ನಾಚಿಕೆಯಾಗಬೇಕು‌.

ಬಿಜೆಪಿಯವರು ಹಿಂದು-ಮುಸ್ಲಿಮರ ನಡುವೆ ಒಡಕು ಮೂಡಿಸಿ ರಾಜಕೀಯ ಲಾಭ ಪಡೆಯುತ್ತಿದ್ದಾರೆ. ನಿಮಗೆ ನೈತಿಕತೆಯ ರಾಜಕಾರಣ ಬೇಕೋ, ನಾಟಕ ಮಾಡುವ ಪಕ್ಷ ಬೇಕೋ? ರಾಮ ಎನ್ನುವುದು ನೈತಿಕತೆ, ಸತ್ಯದ ಹಾದಿಯಲ್ಲಿ ನಡೆದವರು. ಮಹಾತ್ಮಗಾಂಧಿ ಕೂಡ ನಡೆದಿದ್ದು ಸತ್ಯದ ದಾರಿ. ಆದರೆ, ಅವರ ಮೇಲೆ ಗುಂಡು ಹಾರಿಸಿದಾಗಲೂ ಹೇ ರಾಮ್ ಅಂದ್ರು. ಸತ್ಯದ ಹಾದಿಯಲ್ಲಿ ನಡೆದು ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ ನಾವು. ಆದರೆ, ಬಿಜೆಪಿಯವರು ಪ್ರತಿದಿನ ನಾಟಕ ಮಾಡಿ ರಾಜಕೀಯ ಮಾಡುತ್ತಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯಾದರ್ಶಿ ಪ್ರಿಯಾಂಕ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ | Lok Sabha Election 2024: ಬಿಜೆಪಿ, ಕಾಂಗ್ರೆಸ್‌ ಜತೆ ಇರುವ ಮಿತ್ರ ಪಕ್ಷಗಳ ಯಾವವು? ಇಲ್ಲಿದೆ ಅಂತಿಮ ಚಿತ್ರಣ

ದೇಶದ ಮಾಧ್ಯಮಗಳಲ್ಲಿ ಎಲ್ಲವೂ ಚೆನ್ನಾಗಿದೆ ಅಂತ ತೋರಿಸುತ್ತಾರೆ, ವಿಪಕ್ಷಗಳ ಮೇಲಷ್ಟೇ ಅಲ್ಲ ಮಾದ್ಯಮಗಳ ಮೇಲೂ ಹಿಡಿತ ಸಾಧಿಸಿ ದುರಾಡಳಿತ ನಡೆಸುತ್ತಿದ್ದಾರೆ. ನಿಮ್ಮ ಹೋರಾಟ ಈಗ ಶುರು ಮಾಡಬೇಕು. ನಮಗೆ ಕಾಡುತ್ತಿರುವ ಸಮಸ್ಯೆಗಳ ಮೇಲೆ‌ ಚುನಾವಣೆ ನಡೆಯಬೇಕು. ಹೀಗಾಗಿ ಬಿಜೆಪಿಗೆ ತಕ್ಕಪಾಠ ಕಲಿಸಬೇಕು. ಇವತ್ತು ಬೆಲೆ ಏರಿಕೆ, ನಿರುದ್ಯೋಗ, ಶಿಕ್ಷಣ, ಆರೋಗ್ಯ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಚರ್ಚೆಯ ಮೂಲಕ‌ ಚುನಾವಣೆ ಎದುರಿಸಿ. ನಾನು ಪ್ರಧಾನಿ ಮೋದಿಗೆ ಸವಾಲು ಹಾಕ್ತೇನೆ, ಇದು ನಿಮ್ಮ ಹೋರಾಟ, ದೇಶದ ಸಮಸ್ಯೆಗಳ ಮೇಲೆ ಚುನಾವಣೆ ನಡೆಯಬೇಕು ಎಂದು ಆಗ್ರಹಿಸಿದರು.

Continue Reading
Advertisement
Bengaluru karaga
ಕರ್ನಾಟಕ2 hours ago

Bengaluru Karaga: ಐತಿಹಾಸಿಕ ಬೆಂಗಳೂರು ಕರಗಕ್ಕೆ ಅದ್ಧೂರಿ ಚಾಲನೆ; ಉತ್ಸವ ವೀಕ್ಷಿಸಲು ಹರಿದು ಬಂದ ಜನಸಾಗರ

vistara Editorial ವಿಸ್ತಾರ ಸಂಪಾದಕೀಯ
ದೇಶ4 hours ago

ವಿಸ್ತಾರ ಸಂಪಾದಕೀಯ: ರಕ್ಷಣಾ ರಫ್ತು ಕ್ಷೇತ್ರದಲ್ಲಿ ಬೆಳವಣಿಗೆ ನಮ್ಮ ಹೆಗ್ಗಳಿಕೆ

IPL 2024
ಪ್ರಮುಖ ಸುದ್ದಿ4 hours ago

IPL 2024 : ಸ್ಟೊಯ್ನಿಸ್​​ ಶತಕ, ಚೆನ್ನೈ ವಿರುದ್ಧ 6 ವಿಕೆಟ್​ ಗೆಲವು ಸಾಧಿಸಿದ ಲಕ್ನೊ

Voters' Pledge
ಬೆಂಗಳೂರು4 hours ago

Voters Pledge: ಸಹಕಾರ ಸಂಘಗಳ ಕಾರ್ಯದರ್ಶಿಗಳು, ಸಿಬ್ಬಂದಿಗೆ ಮತದಾನ ಪ್ರತಿಜ್ಞಾವಿಧಿ ಬೋಧನೆ

Lok Sabha Election 2024
Lok Sabha Election 20245 hours ago

Lok Sabha Election 2024: ರಾಹುಲ್‌ ಗಾಂಧಿಯ ಡಿಎನ್‌ಎ ಪರೀಕ್ಷಿಸಬೇಕು; ವಿವಾದ ಹುಟ್ಟುಹಾಕಿದ ಶಾಸಕ ಅನ್ವರ್ ಹೇಳಿಕೆ

DCM DK Shivakumar Election campaign for Bangalore Rural Lok Sabha Constituency Congress candidate DK Suresh In Ramanagara
ರಾಮನಗರ5 hours ago

Lok Sabha Election 2024: ಕೇಂದ್ರ ಸರ್ಕಾರದಿಂದ ರಾಜ್ಯದ ಬಗ್ಗೆ ತಾರತಮ್ಯ ಧೋರಣೆ: ಡಿ.ಕೆ. ಸುರೇಶ್

Priyanka Gandhi
ಕರ್ನಾಟಕ5 hours ago

Priyanka Gandhi: ನಿರುದ್ಯೋಗಿಗಳಿಗೆ ಉದ್ಯೋಗ ನೀಡಿ ಮಂಗಳಸೂತ್ರ ಉಳಿಸೋದು ಗೊತ್ತಿಲ್ಲವೇ?; ಮೋದಿ ವಿರುದ್ಧ ಪ್ರಿಯಾಂಕ ಗಾಂಧಿ ವಾಗ್ದಾಳಿ

Lok Sabha Election 2024
Lok Sabha Election 20245 hours ago

Lok Sabha Election 2024: ಕಾಂಗ್ರೆಸ್‌ ಅಧಿಕಾರಕ್ಕೆ ಬಂದೆ ದೇಶದಲ್ಲಿ ಶರಿಯಾ ಕಾನೂನು ಜಾರಿ; ಯೋಗಿ ಆದಿತ್ಯನಾಥ್ ವಾಗ್ದಾಳಿ

Amit Shah
ಕರ್ನಾಟಕ5 hours ago

Amit Shah: ಬೆಂಗಳೂರಲ್ಲಿ ಅಮಿತ್‌ ಶಾ ಹವಾ; ತೇಜಸ್ವಿ ಸೂರ್ಯ ಪರ ಭರ್ಜರಿ ರೋಡ್‌ ಶೋ

Public Sector Banks
ಪ್ರಮುಖ ಸುದ್ದಿ6 hours ago

Public Sector Banks : ಸಾರ್ವಜನಿಕ ಬ್ಯಾಂಕ್​ಗಳು ಸಾಲ ಕಟ್ಟದವರಿಗೆ ಲುಕ್ ಔಟ್ ನೋಟಿಸ್​ ನೀಡುವಂತಿಲ್ಲ, ಕೋರ್ಟ್​​ ಆದೇಶ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ23 hours ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು1 day ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ1 day ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು2 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು2 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ2 days ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ3 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ3 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20243 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

Modi in Karnataka Here live video of Modi rally in Chikkaballapur
Lok Sabha Election 20244 days ago

Modi in Karnataka: ಚಿಕ್ಕಬಳ್ಳಾಪುರದಲ್ಲಿ ಮೋದಿ ಮೇನಿಯಾ; ಇಲ್ಲಿದೆ LIVE ವಿಡಿಯೊ

ಟ್ರೆಂಡಿಂಗ್‌