vistara top 10 news congress cm selection process to bjp rejig and more newsವಿಸ್ತಾರ TOP 10 NEWS: ರಾಜ್ಯದಲ್ಲಿ ಗೆದ್ದು ದಿಲ್ಲಿಯಲ್ಲಿ ಮಂಕಾದ ಕಾಂಗ್ರೆಸ್‌ನಿಂದ, ಬಿಜೆಪಿಗೆ ಮೇಜರ್‌ ಸರ್ಜರಿವರೆಗಿನ ಪ್ರಮುಖ ಸುದ್ದಿಗಳಿವು - Vistara News

ಕರ್ನಾಟಕ

ವಿಸ್ತಾರ TOP 10 NEWS: ರಾಜ್ಯದಲ್ಲಿ ಗೆದ್ದು ದಿಲ್ಲಿಯಲ್ಲಿ ಮಂಕಾದ ಕಾಂಗ್ರೆಸ್‌ನಿಂದ, ಬಿಜೆಪಿಗೆ ಮೇಜರ್‌ ಸರ್ಜರಿವರೆಗಿನ ಪ್ರಮುಖ ಸುದ್ದಿಗಳಿವು

ದೇಶ, ವಿದೇಶ, ರಾಜ್ಯದಲ್ಲಿ ದಿನಪೂರ್ತಿ ನಡೆದ ಘಟನಾವಳಿಗಳಲ್ಲಿ ಆಯ್ದ ಪ್ರಮುಖ ಸುದ್ದಿಗಳು ವಿಸ್ತಾರ TOP 10 NEWS ನಲ್ಲಿ.

VISTARANEWS.COM


on

vistara top 10 news congress cm selection process to bjp rejig and more news
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

1. Karnataka Election 2023 : ಸಿಎಂ ಪಟ್ಟಕ್ಕಾಗಿ ಇಬ್ಬರ ಗುದ್ದಾಟ, ಮೂರನೇಯವರಿಗೆ ಲಾಭ! ಯಾರು ಆ ಮೂರನೇಯವರು?
ಭರ್ಜರಿ ಬಹುಮತದೊಂದಿಗೆ (Karnataka Election 2023) ಅಧಿಕಾರ ಹಿಡಿದಿರುವ ಕಾಂಗ್ರೆಸ್‌ ಪಕ್ಷದಲ್ಲಿ ಮುಖ್ಯಮಂತ್ರಿ ಹುದ್ದೆಗಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್‌ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ. ಅಪಾರ ಬೆಂಬಲಿಗರನ್ನು ಹೊಂದಿರುವ ಇವರಿಬ್ಬರಲ್ಲಿ ಯಾರೊಬ್ಬರನ್ನು ಆಯ್ಕೆ ಮಾಡಿದರೂ ಮತ್ತೊಬ್ಬರ ಬೆಂಬಲಿಗರನ್ನು, ಅವರ ಪರವಾಗಿ ನಿಂತಿರುವ ಶಾಸಕರನ್ನು ಸಮಾಧಾನಿಸುವುದು ಕಷ್ಟ. ಹೀಗಾಗಿ ʻಇಬ್ಬರ ಜಗಳ ಮೂರನೇಯವರಿಗೆ ಲಾಭʼ ತಂದು ಕೊಟ್ಟಿತೇ ಎಂಬ ಚರ್ಚೆ ಈಗ ಕಾಂಗ್ರೆಸ್‌ ಪಕ್ಷದಲ್ಲಿ ನಡೆಯುತ್ತಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.
ಹೆಚ್ಚಿನ ಓದಿಗಾಗಿ: Karnataka Election 2023 : ಕಾಂಗ್ರೆಸ್‌ ಮುಖ್ಯಮಂತ್ರಿ ಆಯ್ಕೆ ಬಿಕ್ಕಟ್ಟಿಗೆ ಏನು ಕಾರಣ? ಇಲ್ಲಿದೆ ಇನ್‌ಸೈಡ್‌ ಸ್ಟೋರಿ!

2. Karnataka CM: ದಿಢೀರನೆ ಕಾಣಿಸಿಕೊಂಡ ಹೊಟ್ಟೆ ಉರಿ, ದೆಹಲಿಗೆ ತೆರಳದ ಡಿಕೆಶಿ; ಸಿಎಂ ಘೋಷಣೆ ಮತ್ತೆ ವಿಳಂಬ?
ಕರ್ನಾಟಕ ರಾಜ್ಯದ ಮುಖ್ಯಮಂತ್ರಿ (Karnataka CM) ಘೋಷಣೆಗೆ ದೆಹಲಿಯಲ್ಲಿ ವೇದಿಕೆ ಸಿದ್ಧವಾಗಿರುವ, ಮಾಜಿ ಸಿಎಂ ಸಿದ್ದರಾಮಯ್ಯ ಅವರು ತರಾತುರಿಯಲ್ಲಿ ದೆಹಲಿಗೆ ಹಾರಿರುವ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ದೆಹಲಿ ಪ್ರಯಾಣವನ್ನು ರದ್ದುಗೊಳಿಸಿದ್ದಾರೆ. ಶಿವಕುಮಾರ್‌ ಅವರಿಗೆ ಏಕಾಏಕಿ ಹೊಟ್ಟೆನೋವು ಕಾಣಿಸಿಕೊಂಡಿದ್ದು, ವೈದ್ಯರನ್ನು ಕರೆಸಿಕೊಂಡಿದ್ದಾರೆ. ಹಾಗಾಗಿ ಅವರು ದೆಹಲಿ ಪ್ರವಾಸ ರದ್ದಗೊಳಿಸಿದ್ದಾರೆ. ಹಾಗಾಗಿ, ರಾಜ್ಯದ ನೂತನ ಮುಖ್ಯಮಂತ್ರಿಯ ಆಯ್ಕೆ ಯಾವಾಗ ಎಂಬ ಪ್ರಶ್ನೆ ಮೂಡಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

3. Karnataka Election Results : ಕಳಂಕವಿರುವ ಸಿಎಂ ರಾಜ್ಯಕ್ಕೆ ಬೇಡ: ಕನಕ ಗುರುಪೀಠದ ಸ್ವಾಮೀಜಿ ಹೇಳಿಕೆ
ಕಳಂಕವಿರುವ ಮುಖ್ಯಮಂತ್ರಿ (CM) ಈ ರಾಜ್ಯಕ್ಕೆ ಬೇಡ, ಬಹುಮತ ಹೊಂದಿದ ಕಾಂಗ್ರೆಸ್ ಪಕ್ಷಕ್ಕೆ, (Congress party) ಈ ಸಂದರ್ಭದಲ್ಲಿ ರಾಜ್ಯದ ಘನತೆ ಮೇಲೆತ್ತುವ ಮುಖ್ಯಮಂತ್ರಿ ಬೇಕು ಎಂದು ಕಲ್ಬುರ್ಗಿ ವಿಭಾಗದ ಕನಕಗುರು‌ ಪೀಠದ ಶ್ರೀ ಸಿದ್ದರಾಮಾನಂದಪುರಿ ಸ್ವಾಮೀಜಿ ತಿಳಿಸಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.
ಹೆಚ್ಚಿನ ಓದಿಗಾಗಿ: Karnataka Election Results: ಸಿದ್ದರಾಮಯ್ಯ ಪರ ಅಹಿಂದ ಸಂಘಟನೆಗಳ ಲಾಬಿ: ಮತ್ತೊಮ್ಮೆ ಸಿದ್ದರಾಮಯ್ಯ ಎಂದ ನಾಯಕರು

4. Karnataka Election 2023 : ನನ್ನ ಬಳಿ 135 ಶಾಸಕರಿದ್ದಾರೆ ಎಂದು ಡಿಕೆಶಿ ಕುಟುಕಿದ್ದು ಯಾರಿಗೆ?
ಬಹುತೇಕ ಶಾಸಕರು ನನ್ನ ಪರ ಒಲವು ವ್ಯಕ್ತಪಡಿಸಿದ್ದಾರೆ ಎಂಬ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್‌, ನನ್ನ ಬಳಿ 135 ಶಾಸಕರಿದ್ದಾರೆ ಎಂದಿದ್ದಾರೆ. ಅಲ್ಲದೆ, ದೆಹಲಿಗೆ ತೆರಳುವುದಿಲ್ಲ ಎಂಬ ತಮ್ಮ ಪಟ್ಟು ಸಡಿಲಿಸಿ, ಹೈಕಮಾಂಡ್‌ ಭೇಟಿಗೆ ಹೊರಟಿದ್ದಾರೆ. ಇದರಿಂದಾಗಿ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆಯು (Karnataka Election 2023) ತೀವ್ರ ಕುತೂಹಲಕಾರಿ ತಿರುವು ಪಡೆದಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

5. Karnataka Election Results : ಸೋಲಿನ ಹೊಡೆತದಿಂದ ಕಂಗೆಟ್ಟ ಬಿಜೆಪಿಗೆ ಮೇಜರ್‌ ಸರ್ಜರಿ, ಆರ್‌ಎಸ್‌ಎಸ್‌ ಸೂಚನೆ
ಆಡಳಿತಾರೂಢ ಬಿಜೆಪಿ ಹೀನಾಯವಾಗಿ ಸೋಲುಂಡ ನಂತರ ಇದೀಗ ಪಕ್ಷ ಸಂಘಟನೆಗೆ ಮೇಜರ್‌ ಸರ್ಜರಿ ಮಾಡಲು ಆರ್‌ಎಸ್‌ಎಸ್‌ ಸಲಹೆ ನೀಡಿದೆ. ಪಕ್ಷದ ನೇತೃತ್ವ ವಹಿಸಿರುವವರ ವಿರುದ್ಧ ಕಾರ್ಯಕರ್ತರಲ್ಲಿ ತೀವ್ರ ಅಸಮಾಧಾನವಿದ್ದು, ಶೀಘ್ರದಲ್ಲೆ ಬದಲಾವಣೆ ಮಾಡುವಂತೆ ಆರ್‌ಎಸ್‌ಎಸ್‌ ಸೂಚಿಸಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

6. Mallikarjun Kharge: ನಿಷೇಧಿತ ಪಿಎಫ್ಐ ಜತೆ ಬಜರಂಗದಳ ಹೋಲಿಕೆ; ಖರ್ಗೆಗೆ ನೋಟಿಸ್ ನೀಡಿದ ಪಂಜಾಬ್‌ನ ಸ್ಥಳೀಯ ಕೋರ್ಟ್!
ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್‌ನ ಸ್ಥಳೀಯ ನ್ಯಾಯಾಲಯವು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜನ್ ಖರ್ಗೆ (Mallikarjun Kharge) ಅವರಿಗೆ ನೋಟಿಸ್ ಜಾರಿ ಮಾಡಿದೆ. ಕರ್ನಾಟಕ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷವು ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿತ್ತು. ಇದರಲ್ಲಿ ಬಜರಂಗದಳ ಮತ್ತು ಪಿಎಫ್ಐಗಳಂಥ ಸಮಾಜವಿರೋಧಿ ಸಂಘಟನೆಗಳನ್ನು ನಿಷೇಧಿಸುವ ಭರವಸೆಯನ್ನು ನೀಡಿತ್ತು. ಆದರೆ, ನಿಷೇಧಿತ ದೇಶದ್ರೋಹಿ ಸಂಘಟನೆ ಪಿಎಫ್ಐ ಜತೆಗೆ ಬಜರಂಗಳ ದಳ ಹೋಲಿಕೆ ಮಾಡಲಾಗಿದೆ ಎಂದು ಆರೋಪಿಸಿ ಪಂಜಾಬ್ ಕೋರ್ಟ್‌ನಲ್ಲಿ ಮಾನನಷ್ಟ ಮೊಕದ್ದಮ್ಮೆಯನ್ನು ಹಿಂದೂ ಸಂಘಟನೆಯೊಂದು ದಾಖಲಿಸಿತ್ತು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

7. Chitradurga News: ಕಾಂಗ್ರೆಸ್‌ ಸರ್ಕಾರ ಬಂದಿದೆ, ನಾವು ಕರೆಂಟ್ ಬಿಲ್ ಕಟ್ಟಲ್ಲ ಎಂದ ಜನ; ವಿಡಿಯೊ ವೈರಲ್
ಅಧಿಕಾರಕ್ಕೆ ಬಂದರೆ 200 ಯುನಿಟ್‌ ವಿದ್ಯುತ್‌ ಉಚಿತ ಎಂದು ಕಾಂಗ್ರೆಸ್‌ ಗ್ಯಾರಂಟಿ ನೀಡಿತ್ತು. ಈಗ ಪಕ್ಷಕ್ಕೆ ಬಹುಮತ ಬಂದಿದೆ. ಪಕ್ಷ ನೀಡಿರುವ ಎಲ್ಲ ಗ್ಯಾರಂಟಿಗಳನ್ನು ಈಡೇರಿಸುತ್ತದೋ ಇಲ್ಲವೋ ಎಂಬ ಬಗ್ಗೆ ಎಲ್ಲೆಡೆ ಚರ್ಚೆ ನಡೆಯುತ್ತಿದೆ. ಈ ನಡುವೆ (Chitradurga News) ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಜನರು ವಿದ್ಯುತ್ ಬಿಲ್ ಪಾವತಿಗೆ ನಿರಾಕರಿಸಿ, ಬೆಸ್ಕಾಂ ಮೀಟರ್ ರೀಡರ್‌ಗೆ ಆವಾಜ್‌ ಹಾಕಿರುವ ಘಟನೆ ನಡೆದಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ, ಹೀಗಾಗಿ ನಾವು ಬಿಲ್ ಕಟ್ಟಲ್ಲ ಎಂದು ಗ್ರಾಮಸ್ಥರು ಹೇಳಿದ್ದು, ಸದ್ಯ ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

8. MTB‌ Nagaraj: ಹೊಸಕೋಟೆಯಲ್ಲಿ ಮುಂದುವರಿದ ರಾಜಕೀಯ ವೈಷಮ್ಯ; ವೃತ್ತದಲ್ಲಿ ಅಳವಡಿಸಿದ್ದ ಎಂಟಿಬಿ ಬೋರ್ಡ್‌ ಧ್ವಂಸ
ಜಿದ್ದಾಜಿದ್ದಿನ ಕಣವಾಗಿದ್ದ ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆ (Karnataka Election) ಮುಗಿದ್ದರೂ, ರಾಜಕೀಯ ವೈಷಮ್ಯ ಮುಂದುವರಿದಿದೆ. ಇಲ್ಲಿನ ಪಾರ್ವತಿಪುರ ಸರ್ಕಲ್‌ನಲ್ಲಿ ಅಳವಡಿಸಿದ್ದ ಎಂಟಿಬಿ ವೃತ್ತ (MTB‌ Circle) ಎಂಬ ನಾಮಫಲಕವನ್ನು ಕಿಡಿಗೇಡಿಗಳು ಧ್ವಂಸ ಮಾಡಿದ್ದಾರೆ. ರಾಜಕೀಯ ವೈಷಮ್ಯದಿಂದ ಕೆಲವರು ಹೀಗೆ ಮಾಡುತ್ತಿದ್ದಾರೆ ಎಂದು ಎಂಟಿಬಿ ನಾಗರಾಜ್‌ (MTB‌ Nagaraj) ಅವರ ಬೆಂಬಲಿಗರು ಆಕ್ರೋಶ ಹೊರಹಾಕಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

9. Weather Report : ರಾಜ್ಯದಲ್ಲಿ ಇನ್ನೆರಡು ದಿನ ತಲೆ ಬಿಸಿ; ಏರಲಿದೆ ತಾಪಮಾನ, ಅಲ್ಲಲ್ಲಿ ಇರಲಿದೆ ಮಳೆ ಅಬ್ಬರ
ರಾಜ್ಯಾದ್ಯಂತ ಮಳೆ ಅಬ್ಬರ (Karnataka News) ತಗ್ಗಿದ್ದು, ಕರಾವಳಿ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣಹವೆ ಇದೆ. ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ (Weather Report) ನೀಡಿದೆ. ಜತೆಗೆ ರಾಜ್ಯಾದ್ಯಂತ ತಾಪಮಾನ ಏರಿಕೆಯೂ (Temperature) ಆಗಲಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

10. IPL 2023 : ಶುಭ್​ಮನ್​ ಶತಕ, 188 ರನ್​ ಬಾರಿಸಿದ ಗುಜರಾತ್​ ಜೈಂಟ್ಸ್​
ಶುಭ್​ಮನ್​ ಗಿಲ್​ ಬಾರಿಸಿದ ಅಮೋಘ ಶತಕದ ನೆರವಿನಿಂದ ಮಿಂಚಿದ ಗುಜರಾತ್ ಜೈಂಟ್ಸ್​ ತಂಡ ಐಪಿಎಲ್​ 16ನೇ ಆವೃತ್ತಿಯ 62ನೇ ಪಂದ್ಯದಲ್ಲಿ 188 ರನ್​ ಪೇರಿಸಿದೆ. ಇದು ಐಪಿಎಲ್​ನಲ್ಲಿ ಶುಭ್​ಮನ್​ ಗಿಲ್​ ಬಾರಿಸಿದ ಮೊದಲ ಶತಕ. ಈ ಮೂಲಕ ಪ್ರವಾಸಿ ಸನ್​ರೈಸರ್ಸ್​ ತಂಡದ ಗೆಲುವಿಗೆ 189 ರನ್​​ಗಳ ಸ್ಪರ್ಧಾತ್ಮಕ ಮೊತ್ತ ಎದುರಾಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

ಮತ್ತಷ್ಟು ಪ್ರಮುಖ ಸುದ್ದಿಗಳಿವು:

  1. Narendra Modi: ಮೋದಿ ಸರ್ಕಾರಕ್ಕೆ 9 ವರ್ಷ; ಪ್ರಧಾನಿ ರ‍್ಯಾಲಿ ಸೇರಿ ದೇಶಾದ್ಯಂತ 1 ತಿಂಗಳು ನೂರಾರು ಕಾರ್ಯಕ್ರಮ
  2. Adani Group : ಅದಾನಿ ಕಂಪನಿಗಳ ಬಗ್ಗೆ ವರದಿ ಸಲ್ಲಿಕೆಗೆ ಸುಪ್ರೀಂಕೋರ್ಟ್‌ನಿಂದ 6 ತಿಂಗಳ ಕಾಲಾವಕಾಶ ಕೋರಿದ ಸೆಬಿ
  3. Google: ಎಐ ಜನರೇಟೆಡ್ ಫೋಟೋ ಪತ್ತೆ ಹಚ್ಚಲು ಗೂಗಲ್‌ನಿಂದ ಹೊಸ ಫೀಚರ್!
  4. Fact Check: ಕರ್ನಾಟಕದಲ್ಲಿ ಕಾಂಗ್ರೆಸ್‌ ಗೆದ್ದಿದ್ದಕ್ಕೆ ಪಾಕ್‌ ಪ್ರಧಾನಿ ಅಭಿನಂದನೆ ಸಲ್ಲಿಸಿದ್ದು ನಿಜವೇ? ಇಲ್ಲಿದೆ ಮಾಹಿತಿ
  5. WhatsApp New Feature: ಶೀಘ್ರವೇ ಬರಲಿದೆ ಹೊಸ ವಾಟ್ಸ್‌ಆ್ಯಪ್‌ ಫೀಚರ್; ಕಳುಹಿಸಿದ ಮೆಸೇಜ್‌ ಎಡಿಟ್‌ ಮಾಡಬಹುದು
ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಚಿತ್ರದುರ್ಗ

Murder Case : ಕ್ಷುಲ್ಲಕ ಕಾರಣಕ್ಕೆ ಶುರುವಾದ ಅಪ್ಪ-ಮಗನ ಜಗಳ ಕೊಲೆಯಲ್ಲಿ ಅಂತ್ಯ

Murder Case : ಅಪ್ಪ-ಮಗನ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

VISTARANEWS.COM


on

By

Murder Case
Koo

ಚಿತ್ರದುರ್ಗ: ಕ್ಷುಲ್ಲಕ ಕಾರಣಕ್ಕೆ‌ ತಂದೆ-ಮಗನ ನಡುವೆ ಜಗಳವಾಗಿದ್ದು, ತಂದೆ ಮೇಲೆ ಹಲ್ಲೆ ಮಾಡಿ ಕೆಳಗೆ ಬೀಳಿಸಿ ಮಗನೇ ಕೊಲೆ (Murder Case) ಮಾಡಿದ್ದಾನೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕುಂದಲಗುರ ಗ್ರಾಮದಲ್ಲಿ ಘಟನೆ ನಡೆದಿದೆ. ರಂಗಸ್ವಾಮಿ (50) ಮಗನಿಂದಲೇ ಹತ್ಯೆಯಾದವರು. ದೇವರಾಜ್ ಆರೋಪಿ ಆಗಿದ್ದಾನೆ.

ಮನೆಯಲ್ಲಿ ಊಟದ ವಿಚಾರಕ್ಕೆ ತಂದೆ ಜತೆ ದೇವರಾಜ್‌ ಜಗಳ ಆರಂಭಿಸಿದ್ದ. ಈ ವೇಳೆ ಗಲಾಟೆ ವಿಕೋಪಕ್ಕೆ ತಿರುಗಿದ್ದು, ರಂಗಸ್ವಾಮಿಯನ್ನು ಕೆಳಗೆ ಬೀಳಿಸಿದ್ದಾನೆ. ಬಿದ್ದ ರಭಸಕ್ಕೆ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ಸ್ಥಳಕ್ಕೆ‌ ಸಿಪಿಐ (CPI)ಗುಡ್ಡಪ್ಪ, ಹಾಗೂ ಅಬ್ಬಿನಹೊಳೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಬ್ಬಿನಹೊಳೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಭೀಕರ ರಸ್ತೆ ಅಪಘಾತ ಆರು ಮಂದಿ ದಾರುಣ ಸಾವು

ಅನಂತಪುರ ಜಿಲ್ಲೆಯ ಶಿಂಗನಮಲ ಮಂಡಲದ ನಾಯನಪಲ್ಲಿ ಕ್ರಾಸ್‌ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಾರಿನ ಟಯರ್ ಸ್ಫೋಟಗೊಂಡು ಲಾರಿಗೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರೆಲ್ಲರೂ ಅನಂತಪುರ ಇಸ್ಕಾನ್‌ಗೆ ಸೇರಿದವರು ಎಂದು ವರದಿಯಾಗಿದೆ. ತಾಡಿಪತ್ರಿ ನಗರದಲ್ಲಿ ಇಸ್ಕಾನ್ ನಗರ ಸಂಕೀರ್ತನೆಗೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ತಾಡಿಪತ್ರಿಯಿಂದ ಅನಂತಪುರಕ್ಕೆ ಬರುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಸಂತೋಷ್, ಷಣ್ಮುಕ್, ವೆಂಕಣ್ಣ, ಶ್ರೀಧರ್ ಹಾಗೂ ಪ್ರಸನ್ನ, ವೆಂಕಿ ಮೃತ ದುರ್ದೈವಿಗಳು

Continue Reading

ಬೆಂಗಳೂರು

Kidnap case : ಅಕ್ಕನ ಅಕ್ರಮ ಸಂಬಂಧಕ್ಕೆ ಬೇಸತ್ತು ಅಕ್ಕನ ಮಗುವನ್ನೇ ಅಪಹರಿಸಿದ ತಮ್ಮ!

Kidnap case : ಅಕ್ಕನ ಅಕ್ರಮ ಸಂಬಂಧಕ್ಕೆ ಬೇಸತ್ತು ಅಕ್ಕನ ಮಗುವನ್ನೇ ತಮ್ಮ ಅಪಹರಿಸಿದ್ದು, ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ.

VISTARANEWS.COM


on

By

kidnap case
Koo

ದಾವಣಗೆರೆ/ಬೆಂಗಳೂರು: ಅಕ್ಕನ ಅಕ್ರಮ ಸಂಬಂಧಕ್ಕೆ ಬೇಸತ್ತ ತಮ್ಮನೊಬ್ಬ ಅಕ್ಕನ ಮಗುವನ್ನೇ ಅಪಹರಿಸಿದ ಘಟನೆ (Kidnap case) ನಡೆದಿದೆ. ಬೆಂಗಳೂರಿನಿಂದ ಹೊರಟಿದ್ದ ಅಪ್ರಾಪ್ತ ಬಾಲಕನನ್ನು ದಾವಣಗೆರೆಯಲ್ಲಿ ಬಂಧಿಸಲಾಗಿದೆ. 17 ವರ್ಷದ ತರುಣ್ ಎಂಬಾತ ಗೋಯಲ್ (3) ಎಂಬ ಮಗುವನ್ನು ಅಪಹರಿಸಿದ್ದ.
ನಿಜಾಮುದ್ದೀನ್‌ ಎಕ್ಸ್‌ಪ್ರೆಸ್‌ ರೈಲಿನ ಮೂಲಕ ದಾವಣಗೆರೆಗೆ ಬಂದಾಗ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನಲ್ಲಿ ತರುಣ್‌ನ ಅಕ್ಕ ಅಕ್ರಮ ಸಂಬಂಧವಿಟ್ಟುಕೊಂಡು ಬೇರೆ ವ್ಯಕ್ತಿ ಜತೆ ವಾಸಿಸುತ್ತಿದ್ದಳು. ಈ ವೇಳೆ ಅಕ್ರಮ ಸಂಬಂಧ ಬಿಡಲು ಒಪ್ಪದಿದ್ದಕ್ಕೆ ಅಕ್ಕನ ಮಗುವನ್ನು ಅಪಹರಿಸಿಕೊಂಡು ಬರುವಾಗ ದಾವಣಗೆರೆ ಆರ್‌ಪಿಎಫ್‌ (RPF) ವಿಚಾರಣೆ ನಡೆಸಿ ವಶಕ್ಕೆ ಪಡೆದುಕೊಂಡು, ಬಳಿಕ ಬೆಂಗಳೂರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಟ್ರೈನ್ ಬರುತ್ತಿದ್ದಂತೆ ತಪಾಸಣೆ ಮಾಡಿ ವಿಚಾರಿಸಿದಾಗ ಮಗು ಅಪಹರಿಸಿಕೊಂಡು ಹೋಗುತ್ತಿರುವುದು ಬೆಳಕಿಗೆ ಬಂದಿದೆ. ರೈಲ್ವೆ ಇನ್ಸ್‌ಪೆಕ್ಟರ್‌ ಎಕೆ ರೆಡ್ಡಿ, ಸಿಬ್ಬಂದಿಗಳಾದ ಶಿವಾನಂದ, ಅಮಿತ್, ಬಿಂದು ಮಧುರಿ ಅವರು ಇಬ್ಬರನ್ನು ರಕ್ಷಿಸಿದ್ದಾರೆ.

Continue Reading

ಬೆಂಗಳೂರು

Actor Darshan : ನಾಳೆ ಹೈಕೋರ್ಟ್‌ನಲ್ಲಿ ನಟ ದರ್ಶನ್‌ ಜಾಮೀನು ಭವಿಷ್ಯ

Actor Darshan : ಹೈಕೋರ್ಟ್‌ನಲ್ಲಿ ನಟ ದರ್ಶನ್‌ ಜಾಮೀನು ಭವಿಷ್ಯ ನಾಳೆ ನಿರ್ಧಾರವಾಗಲಿದೆ. ಬೆನ್ನು ನೋವಿನಿಂದ ಬಳಲುತ್ತಿರುವ ನಟ ದರ್ಶನ್‌ ಬಳ್ಳಾರಿ ಜೈಲಿನಿಂದ ಬೆಂಗಳೂರಿಗೆ ಶಿಫ್ಟ್‌ ಮಾಡುವಂತೆ ವಕೀಲರು ವಾದ ಮಾಡಿಸಲಿದ್ದಾರೆ.

VISTARANEWS.COM


on

By

Hc to hear Darshans bail plea tomorrow
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಜೈಲು ಕಂಬಿ ಎಣಿಸುತ್ತಿರುವ ನಟ ದರ್ಶನ್ (Actor Darshan) ಜಾಮೀನು ಭವಿಷ್ಯ ನಾಳೆ ಸೋಮವಾರ ನಿರ್ಧಾರವಾಗಲಿದೆ. ಹೈಕೋರ್ಟ್‌ನಲ್ಲಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ನಟ ದರ್ಶನ್‌ರ ಮೆಡಿಕಲ್ ರಿಪೋರ್ಟ್ ಸಲ್ಲಿಕೆ ಮಾಡುವಂತೆ ಬಳ್ಳಾರಿ ಜೈಲಾಧಿಕಾರಿಗಳಿಗೆ ಹೈಕೋರ್ಟ್ ಸೂಚಿಸಿತ್ತು. ಹೀಗಾಗಿ ಜೈಲಾಧಿಕಾರಿಗಳು ನಾಳೆ ಹೈಕೋರ್ಟ್‌ಗೆ ಮೆಡಿಕಲ್ ರಿಪೋರ್ಟ್ ಸಲ್ಲಿಕೆ‌‌ ಮಾಡಲಿದ್ದಾರೆ.

ವೈದ್ಯಾಧಿಕಾರಿಗಳು ಈಗಾಗಲೇ ನಟ ದರ್ಶನ್‌ಗೆ ಎಂಆರ್‌ಐ (MRI) ಸ್ಕ್ಯಾನ್ ಮಾಡಿದ್ದಾರೆ. ಸ್ಕ್ಯಾನಿಂಗ್ ವೇಳೆ ಬೆನ್ನುನೋವು ಇರುವುದರ ಬಗ್ಗೆ ಉಲ್ಲೇಖಿಸಿದ್ದಾರೆ. ಮತ್ತೊಂದು ಕಡೆ ಮೆಡಿಕಲ್ ರಿಪೋರ್ಟ್ ಇಟ್ಟುಕೊಂಡೇ ನಟ ದರ್ಶನ್‌ ಪರ ವಕೀಲರು ಜಾಮೀನು ಕೋರಿ ವಾದ ಮಂಡಿಸಲಿದ್ದಾರೆ. ದರ್ಶನ್ ಪರವಾಗಿ ಹಿರಿಯ ವಕೀಲ ಸಿವಿ ನಾಗೇಶ್ ವಾದ ಮಂಡಿಸಲಿದ್ದಾರೆ. ಮತ್ತೊಂದು ಕಡೆ ಜಾಮೀನು ಕೊಡದಂತೆ ಎಸ್ ಪಿ ಪಿ ಪ್ರಸನ್ನ ಕುಮಾರ್ ಆಕ್ಷೇಪಣೆಗೆ ತಯಾರಿ ಮಾಡಿಕೊಂಡಿದ್ದಾರೆ.

Continue Reading

ಬೆಂಗಳೂರು

Belekeri Port Scam : ಬೇಲಿಕೇರಿ ಅದಿರು ನಾಪತ್ತೆ ಪ್ರಕರಣ; ಕಾಂಗ್ರೆಸ್‌ ಶಾಸಕ ಸತೀಶ್‌ಗೆ 7 ವರ್ಷ ಜೈಲು

Belekeri Port Scam : ಬೇಲಿಕೇರಿ ಅದಿರು ನಾಪತ್ತೆ ಪ್ರಕರಣ ಸಂಬಂಧ ಕಾಂಗ್ರೆಸ್‌ ಶಾಸಕ ಸತೀಶ್‌ಗೆ 7 ವರ್ಷ ಜೈಲು ಶಿಕ್ಷೆ ಪ್ರಕಟಗೊಂಡಿದೆ.

VISTARANEWS.COM


on

By

Belekeri Port Scam Congress MLA Satish sentenced to 7 years in jail
Koo

ಬೆಂಗಳೂರು: ಬೇಲೆಕೇರಿ ಬಂದರು ಮೂಲಕ ಅಕ್ರಮ ಅದಿರು ನಾಪತ್ತೆ (Belekeri Port Scam) ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಐದು ವರ್ಷ ಜೈಲು ಶಿಕ್ಷೆ ಪ್ರಕಟಗೊಂಡಿದೆ. ಶಾಸಕ ಸತೀಶ್ ಸೈಲ್‌ಗೆ 7 ವರ್ಷಗಳ ಜೈಲು ಶಿಕ್ಷೆ ಪ್ರಕಟಿಸಿ ಕೋರ್ಟ್‌ ಆದೇಶಿಸಿದೆ. ವಂಚನೆ ಪ್ರಕರಣದಲ್ಲಿ 7 ವರ್ಷ, ಕಳ್ಳತನ ಪ್ರಕರಣದಲ್ಲಿ ಮೂರು ವರ್ಷ ಹಾಗೂ ಒಂಬತ್ತು ಕೋಟಿ 60 ಲಕ್ಷ ರೂ. ದಂಡ ವಿಧಿಸಲಾಗಿದೆ. ಮೊದಲ ಕೇಸ್‌ನಲ್ಲಿ 6 ಕೋಟಿ ರೂ. ದಂಡ, 2ನೇ ಕೇಸ್‌ನಲ್ಲಿ 9.6 ಕೋಟಿ ರೂ., 3ನೇ ಕೇಸ್‌ನಲ್ಲಿ 9.36 ಕೋಟಿ ರೂ. 4 ಕೇಸ್‌ನಲ್ಲಿ 9.54 ಕೋಟಿ, 5ನೇ ಕೇಸ್‌ನಲ್ಲಿ 9.25 ಕೋಟಿ, 6ನೇ ಕೇಸ್‌ನಲ್ಲಿ 90 ಲಕ್ಷ ರೂ. ದಂಡವನ್ನು ಕೋರ್ಟ್‌ ವಿಧಿಸಿದೆ.

ಸಿಬಿಐ ಪರ ಪಬ್ಲಿಕ್ ಪ್ರಾಸಿಕ್ಯೂಟರ್ ಕೆ.ಎಸ್.ಹೇಮಾ ವಾದ ಮಂಡಿಸಿದ್ದರು. 3100 ಮೆಟ್ರಿಕ್ ಟನ್ ಅದಿರು ಕಳ್ಳಸಾಗಣಿಕೆ ಮಾಡಿದ್ದಾರೆ. ಆರೋಪಿಗಳಿಗೆ ಜೈಲು ಶಿಕ್ಷೆಯ ಜತೆಗೆ ದಂಡ ವಿಧಿಸುವಂತೆ ಮನವಿ ಮಾಡಿದ್ದರು. ಶಾಸಕ ಸತೀಶ್ ಸೈಲ್ ಪರವಾಗಿ ಹಿರಿಯ ವಕೀಲ ಡಿ ಮೂರ್ತಿ ವಾದಿಸಿದ್ದರು. ಮೆಡಿಕಲ್ ರೆಕಾರ್ಡ್‌ಗಳನ್ನು ಕೋರ್ಟ್‌ಗೆ ಸಲ್ಲಿಸಿ, ಕನಿಷ್ಠ ಶಿಕ್ಷೆ ನೀಡುವಂತೆ ವಿನಂತಿಸಿದ್ದರು. ಸುದೀರ್ಘ ವಾದ-ವಿವಾದ ಆಲಿಸಿದ್ದ ನ್ಯಾಯಾಲಯವು ತೀರ್ಪು ಪ್ರಕಟಿಸಿದೆ.

ಬಂಧಿತ ಆರೋಪಿಗಳು

1) ಸತೀಶ್ ಸೈಲ್‌ ಕಾರವಾರ ಕಾಂಗ್ರೆಸ್‌ ಶಾಸಕ
2) ಮಹೇಶ್ ಬಿಳಿಯ ಡೆಪ್ಯೂಟಿ ಪೋರ್ಟ್ ಕನ್ಸರ್ವೇಟರ್ ಅಧಿಕಾರಿ
3) ಪ್ರೇಮಚಂದ್ ಗರ್ಗ್ ಲಾಲ್ವುಹಲ್ ಕಂಪೆನಿಯ ಮಾಲೀಕ
4) ಖಾರದಪುಡಿ ಮಹೇಶ್ ಶ್ರೀಲಕ್ಷ್ಮಿ ವೆಂಕಟೇಶ್ವರ ಟ್ರೇಡರ್ಸ್ ಮಾಲೀಕ
5) ಕೆ ವಿ ನಾಗರಾಜ್ ಮತ್ತು ಗೋವಿಂದರಾಜು – ಸ್ವಸ್ತಿಕ್ ಕಂಪೆನಿಯ ಮಾಲೀಕ
6) ಚೇತನ್ ಆಶಾಪುರ ಕಂಪೆನಿಯ ಮಾಲೀಕ

Continue Reading
Advertisement
Murder Case
ಚಿತ್ರದುರ್ಗ12 ನಿಮಿಷಗಳು ago

Murder Case : ಕ್ಷುಲ್ಲಕ ಕಾರಣಕ್ಕೆ ಶುರುವಾದ ಅಪ್ಪ-ಮಗನ ಜಗಳ ಕೊಲೆಯಲ್ಲಿ ಅಂತ್ಯ

kidnap case
ಬೆಂಗಳೂರು36 ನಿಮಿಷಗಳು ago

Kidnap case : ಅಕ್ಕನ ಅಕ್ರಮ ಸಂಬಂಧಕ್ಕೆ ಬೇಸತ್ತು ಅಕ್ಕನ ಮಗುವನ್ನೇ ಅಪಹರಿಸಿದ ತಮ್ಮ!

Hc to hear Darshans bail plea tomorrow
ಬೆಂಗಳೂರು4 ಗಂಟೆಗಳು ago

Actor Darshan : ನಾಳೆ ಹೈಕೋರ್ಟ್‌ನಲ್ಲಿ ನಟ ದರ್ಶನ್‌ ಜಾಮೀನು ಭವಿಷ್ಯ

Dina Bhavishya
ಭವಿಷ್ಯ11 ಗಂಟೆಗಳು ago

Dina Bhavishya : ಅತ್ಯಂತ ಪ್ರೀತಿಯ ಕನಸು ನನಸಾಗುವ ದಿನವಿದು

Belekeri Port Scam Congress MLA Satish sentenced to 7 years in jail
ಬೆಂಗಳೂರು21 ಗಂಟೆಗಳು ago

Belekeri Port Scam : ಬೇಲಿಕೇರಿ ಅದಿರು ನಾಪತ್ತೆ ಪ್ರಕರಣ; ಕಾಂಗ್ರೆಸ್‌ ಶಾಸಕ ಸತೀಶ್‌ಗೆ 7 ವರ್ಷ ಜೈಲು

Murder Case
ಕೊಡಗು1 ದಿನ ago

Murder case : ಆಸ್ತಿಗಾಗಿ ಪ್ರಿಯಕರನ ಜತೆ ಸೇರಿ ಗಂಡನನ್ನೇ ಕೊಂದು ಬಿಟ್ಟಳು ಪಾಪಿ

Rajakaluve Encroachment
ಬೆಂಗಳೂರು1 ದಿನ ago

Rajakaluve Encroachment : ರಾಜಕಾಲುವೆ ಒತ್ತುವರಿ ತೆರವಿಗೆ ಮುಹೂರ್ತ ಫಿಕ್ಸ್; ಮತ್ತೆ ಗರ್ಜಿಸಲಿದೆ ಬುಲ್ಡೋಜರ್

karnataka Weather Forecast
ಮಳೆ1 ದಿನ ago

Karnataka Weather : ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ

dina bhavishya
ಭವಿಷ್ಯ1 ದಿನ ago

Dina Bhavishya: ಆತುರದಲ್ಲಿ ಯಾರೊಂದಿಗೂ ಅತಿರೇಕದ ಮಾತುಗಳನ್ನಾಡಿ ಅಪಾಯ ತಂದುಕೊಳ್ಳಬೇಡಿ

kea
ಬೆಂಗಳೂರು2 ದಿನಗಳು ago

KEA: ನಾಳೆ ಕನ್ನಡ ಕಡ್ಡಾಯ ಪರೀಕ್ಷೆ; ಅ.27ಕ್ಕೆ ಬಿಗಿ ಬಂದೋಬಸ್ತ್ ನಡೆಯಲಿದೆ ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ

galipata neetu
ಕಿರುತೆರೆ11 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ1 ವರ್ಷ ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ1 ವರ್ಷ ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ11 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ11 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ3 ವಾರಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 ತಿಂಗಳುಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 ತಿಂಗಳುಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 ತಿಂಗಳುಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ3 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ3 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌