Site icon Vistara News

ವಿಸ್ತಾರ TOP 10 NEWS: ಬಾಡಿಗೆಯವರಿಗೂ ಫ್ರೀ ಕರೆಂಟ್‌ನಿಂದ, ಅಂತಿಮ ಘಟ್ಟದಲ್ಲಿ ಕುಸ್ತಿ ಕದನದವರೆಗಿನ ಪ್ರಮುಖ ಸುದ್ದಿಗಳಿವು

for tenants also to wrestlers protest and more news

#image_title

1. Congress Guarantee: ಬಾಡಿಗೆಯವರಿಗೂ ಸಿಗುತ್ತೆ ಫ್ರೀ ಕರೆಂಟ್‌ ಎಂದ ಸರ್ಕಾರ: ಏನೇನು ದಾಖಲೆ ಬೇಕು? ಇಲ್ಲಿದೆ ವಿವರ
ರಾಜ್ಯ ಸರ್ಕಾರ ನೀಡಲು ಮುಂದಾಗಿರುವ ಮಾಸಿಕ 200 ಯುನಿಟ್‌ ಉಚಿತ ವಿದ್ಯುತ್‌ ಯೋಜನೆಯು ಬಾಡಿಗೆ ಮನೆಯವರಿಗೂ ಅನ್ವಯ ಆಗುತ್ತದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್‌ ಸ್ಪಷ್ಟಪಡಿಸಿದ್ದಾರೆ. ಬಾಡಿಗೆ ಮನೆಯವರು ತಮ್ಮ ಆಧಾರ್‌ ಸಂಖ್ಯೆ, ಬಾಡಿಗೆ ಕರಾರು ಪತ್ರ, ವೋಟರ್‌ ಐಡಿಯನ್ನು ಆರ್‌ಆರ್‌ ಸಂಖ್ಯೆಯೊಂದಿಗೆ ಲಿಂಕ್‌ ಮಾಡಬೇಕು. ಆಗ ಅವರಿಗೂ ಯೋಜನೆ ಅನ್ವಯ ಆಗುತ್ತದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

2. Congress Guarantee : ತೆರಿಗೆ ಪಾವತಿಸುವವರ ಪತ್ನಿಗೆ ಗೃಹ ಲಕ್ಷ್ಮಿ ಯೋಜನೆಯ 2 ಸಾವಿರ ರೂ. ಸಿಗೋದಿಲ್ಲ!
5 ಪ್ರಮುಖ ಗ್ಯಾರಂಟಿಗಳಲ್ಲಿ ಪ್ರತಿ ಮನೆಯ ಯಜಮಾನಿಗೆ ಮಾಸಿಕ 2000 ರೂಪಾಯಿ ನೀಡುವ ʼಗೃಹಲಕ್ಷ್ಮಿʼ ಯೋಜನೆಗೆ (Congress Guarantee) ಆಡಳಿತಾತ್ಮಕ ಅನುಮೋದನೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಯೋಜನೆ ಅನುಷ್ಠಾನಕ್ಕೆ ಸಂಬಂಧಪಟ್ಟಂತೆ ವಿವರವಾದ ಮಾರ್ಗಸೂಚಿಗಳನ್ನು ಪ್ರಕಟಿಸಲಾಗಿದ್ದು, ತೆರಿಗೆ ಪಾವತಿದಾರನ ಪತ್ನಿ ಹೊರತುಪಡಿಸಿ ಅಂತ್ಯೋದಯ, ಬಿಪಿಎಲ್‌ ಹಾಗೂ ಎಪಿಎಲ್‌ ಪಡಿತರ ಚೀಟಿ ಹೊಂದಿರುವ ಕುಟುಂಬದ ಯಜಮಾನಿಗೆ ಈ ಯೋಜನೆಯ ಪ್ರಯೋಜನ ಸಿಗಲಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

3. Video Viral: ಉಚಿತ ಗ್ಯಾರಂಟಿ ಯೋಜನೆ ಚುನಾವಣೆಯ ಚೀಪ್‌ ಗಿಮಿಕ್‌ ಎಂದ ಕೃಷಿ ಸಚಿವ ಚಲುವರಾಯಸ್ವಾಮಿ!
ಈ ಬಾರಿಯ ಚುನಾವಣೆಯಲ್ಲಿ ಘೋಷಣೆ ಮಾಡಲಾಗಿರುವ ಗ್ಯಾರಂಟಿ (Congress Guarantee) ಯೋಜನೆಗಳು ಚುನಾವಣೆ ಗಿಮಿಕ್‌ ಎಂದು ಕೃಷಿ ಸಚಿವ ಎನ್.‌ ಚಲುವರಾಯಸ್ವಾಮಿ (N Chaluvarayaswamy) ಅವರು ಹೇಳಿರುವ ವಿಡಿಯೊವೊಂದು ವೈರಲ್‌ (Video Viral) ಆಗಿದೆ. ಚುನಾವಣೆ ವೇಳೆ ಅಧಿಕಾರವನ್ನು ಹಿಡಿಯುವುದೇ ಬಹುಮುಖ್ಯ ಆಗಿದ್ದರಿಂದ ನಮಗೆ ಇಷ್ಟ ಇದೆಯೋ ಇಲ್ಲವೋ, ಸಿದ್ದರಾಮಯ್ಯ (CM Siddaramaiah) ಅವರಿಗೆ ಇಷ್ಟ ಆಗುತ್ತದೆಯೋ ಇಲ್ಲವೋ ಇಂಥ ಚೀಪ್‌ ಗಿಮಿಕ್‌ಗಳನ್ನು ಮಾಡಬೇಕಾಗುತ್ತದೆ ಎಂದು ಚಲುವರಾಯಸ್ವಾಮಿ ಹೇಳಿದ್ದಾರೆ. ಇವರ ಈ ಹೇಳಿಕೆಯು ಸರ್ಕಾರಕ್ಕೆ ಮುಜುಗರವನ್ನು ತಂದಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

4. Caste Census: ಮತ್ತೆ ಜಾತಿ ಹುತ್ತಕ್ಕೆ ಕೈಹಾಕಿದ ಸಿದ್ದರಾಮಯ್ಯ?: ಒಕ್ಕಲಿಗ- ವೀರಶೈವ ಲಿಂಗಾಯತರು ವಿರೋಧಿಸಿದ್ದ ವರದಿ ಸ್ವೀಕಾರ?
ಈ ಹಿಂದೆ ಒಮ್ಮೆ ರಾಜ್ಯದಲ್ಲಿ ವಿವಾದಕ್ಕೀಡಾಗಿ ತಣ್ಣಗಾಗಿದ್ದ ವಿಚಾರವನ್ನು ಮತ್ತೆ ಕೈಗೆತ್ತಿಕೊಳ್ಳಲು ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆ. ತಮ್ಮ ಮೊದಲ ಅವಧಿಯಲ್ಲಿ ನಡೆಸಲಾದ ಜಾತಿವಾರು ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ವರದಿಯನ್ನು (ಜಾತಿ ಗಣತಿ) ಸ್ವೀಕರಿಸಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ವರದಿಗೆ ರಾಜ್ಯದ ಎರಡು ಪ್ರಬಲ ಜಾತಿಗಳಾದ ವೀರಶೈವ ಲಿಂಗಾಯತ ಹಾಗೂ ಒಕ್ಕಲಿಗ ಸಮುದಾಯಗಳು ಈ ಹಿಂದೆಯೇ ವಿರೋಧ ವ್ಯಕ್ತಪಡಿಸಿದ್ದವು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

5. Monsoon Season: ಮಂಗಳೂರು ವಿವಿ ಕಾಲೇಜಲ್ಲಿ ಕೈ ತೊಳೆಯೋಕೂ ನೀರಿಲ್ಲ; ರಜೆ ಕೊಟ್ಟ ಆಡಳಿತ ಮಂಡಳಿ!
ರಾಜ್ಯದಲ್ಲಿ ಮುಂಗಾರು (Monsoon Season) ಇನ್ನೂ ವಿಳಂಬ ಆಗುವ ಸೂಚನೆ ಕಂಡುಬಂದಿದೆ. ಆದರೆ, ರಾಜ್ಯದ ಹಲವು ಕಡೆ ಹಿಂಗಾರು ಮಳೆ ಭರ್ಜರಿಯಾಗಿಯೇ ಸುರಿಯುತ್ತಿದೆ. ಅಲ್ಲದೆ, ಈಗ ಬಿಪರ್‌ಜಾಯ್‌ ಚಂಡಮಾರುತದಿಂದಾಗಿ (Cyclone Biparjoy) ಇನ್ನೂ ಮೂರು ದಿನ (ಜೂನ್‌ 7, 8, 9) ರಾಜ್ಯದ ಹಲವು ಕಡೆ ಮಳೆಯಾಗಲಿದೆ. ಇನ್ನು ಈ ಬಾರಿ ಕರಾವಳಿ ಭಾಗವಾದ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಅಷ್ಟಾಗಿ ಮಳೆ ಆಗದೇ ಇರುವುದು ತೀವ್ರ ನೀರಿನ ಅಭಾವಕ್ಕೆ ಕಾರಣವಾಗಿದೆ. ಈ ಕಾರಣಕ್ಕೆ ಮಂಗಳೂರು ವಿಶ್ವವಿದ್ಯಾಲಯವು (Mangalore University) ತನ್ನ ಕಾಲೇಜಿಗೆ ರಜೆಯನ್ನೇ ಘೋಷಿಸಿದೆ! ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

6. Weather Report: ಬಿಪರ್‌ಜಾಯ್‌ ಸೈಕ್ಲೋನ್ ಎಫೆಕ್ಟ್‌; ರಾಜ್ಯಾದ್ಯಂತ ಇನ್ನೂ 4 ದಿನ ಜಡಿ ಮಳೆ
ಬಿಪರ್‌ಜಾಯ್‌ ಸೈಕ್ಲೋನ್‌ (Cyclone Biporjoy) ಎಫೆಕ್ಟ್‌ನಿಂದಾಗಿ ರಾಜ್ಯಾದ್ಯಂತ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ. ಕರಾವಳಿ ಸೇರಿ ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ಮುಂದಿನ 4 ದಿನ ಮಳೆಯ ಅಬ್ಬರ (Weather Report) ಇರಲಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

7. Wrestlers Protest: ಅನುರಾಗ್​ ಠಾಕೂರ್​ ಮನೆಗೆ ಭೇಟಿ ನೀಡಿದ ಕುಸ್ತಿಪಟುಗಳು
ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಬ್ರಿಜ್​ಭೂಷನ್​ ಸಿಂಗ್ ಶರಣ್​ ವಿರುದ್ಧ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳಾದ ಬಜರಂಗ್​ ಪೂನಿಯಾ, ವಿನೇಶ್​ ಫೋಗಟ್​ ಮತ್ತು ಸಾಕ್ಷಿ ಮಲಿಕ್​ ಅವರನ್ನು ಕೇಂದ್ರ ಸರ್ಕಾರ ಮತ್ತೊಮ್ಮೆ ಚರ್ಚೆಗೆ ಆಹ್ವಾನಿಸಿದೆ. ಇದರ ಬೆನ್ನಲ್ಲೇ ಕುಸ್ತಿಪಟುಗಳು ಸಚಿವ ಅನುರಾಗ್​ ಠಾಕೂರ್​ ಅವರ ನಿವಾಸಕ್ಕೆ ತೆರಳಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

8. ಮಹಾರಾಷ್ಟ್ರದಲ್ಲೂ ಟಿಪ್ಪು ವಿವಾದ;‌ ಕೊಲ್ಹಾಪುರದಲ್ಲಿ ಹಿಂದು ಸಂಘಟನೆಗಳ ಪ್ರತಿಭಟನೆ, ಪರಿಸ್ಥಿತಿ ಉದ್ವಿಗ್ನ
ಕರ್ನಾಟಕದಲ್ಲಿ ಮೈಸೂರು ಅರಸ ಟಿಪ್ಪು ಸುಲ್ತಾನ್‌ ವಿಷಯದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ ಮಧ್ಯೆ ಆಗಾಗ ವಾಗ್ವಾದ, ಆಕ್ರೋಶ, ಟೀಕೆ, ವ್ಯಂಗ್ಯ, ಪ್ರತ್ಯುತ್ತರಗಳು ನಡೆಯುತ್ತಲೇ ಇರುತ್ತವೆ. ಟಿಪ್ಪು ಜಯಂತಿ ವಿಚಾರದಲ್ಲೂ ವಾಗ್ಯುದ್ಧವೇ ನಡೆಯುತ್ತದೆ. ಆದರೆ, ಟಿಪ್ಪು ಸುಲ್ತಾನ್‌ ವಿವಾದವೀಗ ಮಹಾರಾಷ್ಟ್ರಕ್ಕೂ ಕಾಲಿಟ್ಟಿದೆ. ಟಿಪ್ಪು ಸುಲ್ತಾನ್‌ ಹಾಗೂ ಔರಂಗಜೇಬ್‌ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಹಾಕಿದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಹಿಂದು ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಇನ್ನು ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್‌ ಮಾಡಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

9. WTC Final 2023: ಆಡುವ ಬಳಗದಿಂದ ಅಶ್ವಿನ್​ ಕೈ ಬಿಡಲು ಕಾರಣ ಇದಂತೆ
ಆಸ್ಟ್ರೇಲಿಯಾ ವಿರುದ್ಧ ಆರಂಭಗೊಂಡ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ ಫೈನಲ್​ ಪಂದ್ಯದಲ್ಲಿ ಆರ್​. ಅಶ್ವಿನ್​ಗೆ ಆಡುವ ಬಳಗದಲ್ಲಿ ಅವಕಾಶ ಸಿಗಲಿಲ್ಲ. ಇದೇ ವಿಚಾರವಾಗಿ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದು, ಭಾರತ ತಂಡ ಮಾಡಿದ ದೊಡ್ಡ ತಪ್ಪು ಇದಾಗಿದೆ ಎಂದು ಹೇಳಿದ್ದಾರೆ. ಆದರೆ ತಂಡದ ನಾಯಕ ರೋಹಿತ್​ ಶರ್ಮ ಅವರು ಅಶ್ವಿನ್​ ಅವರನ್ನು ಕೈಬಿಟ್ಟ ಕುರಿತು ಸ್ಪಷ್ಟ ಮಾಹಿತಿ ನೀಡಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

10. The Kerala Story: ʼದಿ ಕೇರಳ ಸ್ಟೋರಿʼ ನೋಡಲು ಸಾಧ್ವಿ ಪ್ರಜ್ಞಾ ಕರೆದೊಯ್ದು ಯುವತಿ ಮುಸ್ಲಿಂ ಲವರ್‌ ಜತೆ ಪರಾರಿ!
ಭೋಪಾಲ್‌ನ 19 ವರ್ಷದ ನರ್ಸಿಂಗ್‌ ವಿದ್ಯಾರ್ಥಿನಿಯೊಬ್ಬಳು ತನ್ನ ಮುಸ್ಲಿಂ ಪ್ರಿಯಕರನ ಜತೆ ಪರಾರಿಯಾಗಿದ್ದಾಳೆ. ಆದರೆ ಸ್ವಾರಸ್ಯಕರ ಸಂಗತಿ ಬೇರೊಂದಿದೆ. ಈಕೆಯನ್ನು ಬಿಜೆಪಿಯ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್‌ ಠಾಕೂರ್‌ ʼದಿ ಕೇರಳ ಸ್ಟೋರಿʼ (The Kerala Story) ಫಿಲಂ ನೋಡಲು ಕರೆದೊಯ್ದಿದ್ದಳು ಹಾಗೂ ಮುಸ್ಲಿಂ ಬಾಯ್‌ಫ್ರೆಂಡ್‌ನಿಂದ ದೂರವಿರುವಂತೆ ತಾಕೀತು ಮಾಡಿದ್ದಳು ಎಂಬುದೇ ಅದು! ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

Exit mobile version