1. Congress Guarantee : ಎಲ್ಲರಿಗೂ ಫ್ರೀ ಫ್ರೀ ಫ್ರೀ… ಐದು ಗ್ಯಾರಂಟಿ ಯೋಜನೆಗಳ ಕಂಡೀಷನ್, ವೇಳಾಪಟ್ಟಿ ವಿವರ ಇಲ್ಲಿದೆ
ಕಾಂಗ್ರೆಸ್ ಸರ್ಕಾರವು ತನ್ನ ಪ್ರಣಾಳಿಕೆಯ ಪ್ರಮುಖ ಘೋಷಣೆಯಾದ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿದೆ. ವಿಧಾನಸೌಧದಲ್ಲಿ ವಿಶೇಷ ಸಂಪುಟ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಈ ಘೋಷಣೆಗಳನ್ನು ಮಾಡಿದರು. ಎಲ್ಲ ಯೋಜನೆಗಳನ್ನೂ ಜಾರಿ ಮಾಡಲಾಗುತ್ತದೆಯಾದರೂ ಎಲ್ಲವೂ ಈಗಿನಿಂದಲೇ ಜಾರಿ ಆಗುವುದಿಲ್ಲ. ಎಲ್ಲದಕ್ಕೂ ಕೆಲವು ನಿಬಂಧನೆಗಳು ಹಾಗೂ ಜಾರಿಯ ಸಮಯವನ್ನು ನಿಗದಿಪಡಿಸಲಾಗಿದೆ. ಅದರ ವಿವರ ಇಲ್ಲಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
Congress Guarantee : ನಿಮಗೆ ಫ್ರೀ ಕರೆಂಟ್ ಸಿಗುತ್ತದೆಯೋ ಇಲ್ಲವೋ ಎಂದು ತಿಳಿಯುವುದು ಹೇಗೆ? ಇಲ್ಲಿದೆ ಸರಳ ಮಾರ್ಗ
2. Congress Guarantee: ಎಲ್ಲರಿಗೂ 200 ಯೂನಿಟ್ ವಿದ್ಯುತ್ ಉಚಿತ ಇಲ್ಲ: ಸಿದ್ದರಾಮಯ್ಯ ಸಾವಿರಾರು ಕೋಟಿ ರೂ. ಉಳಿಸಿದ್ದು ಹೇಗೆ?
ಚುನಾವಣೆಗೂ ಮುನ್ನ ಕಾಂಗ್ರೆಸ್ ಘೋಷಣೆ ಮಾಡಿದ ಗ್ಯಾರಂಟಿ ಯೋಜನೆಗಳನ್ನು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಎಲ್ಲ ಐದು ಯೋಜನೆಗಳನ್ನು ಜಾರಿ ಮಾಡಲಾಗುತ್ತಿದೆಯಾದರೂ ಅನೇಕ ನಿಬಂಧನೆಗಳನ್ನು ವಿಧಿಸಲಾಗಿದೆ. ಅದರಲ್ಲಿ ಮೊದಲನೆಯದಾಗಿ ಮಾಸಿಕ 200 ಯೂನಿಟ್ ಉಚಿತ ವಿದ್ಯುತ್ ನೀಡುವ ಯೋಜನೆ. ಆದರೆ ಎಲ್ಲರಿಗೂ 200 ಯೂನಿಟ್ ಉಚಿತ ವಿದ್ಯುತ್ ಈ ವರ್ಷದಿಂದಲೇ ಸಿಗುವುದಿಲ್ಲ. ಈ ಕುರಿತ ಮಾಹಿತಿ ಇಲ್ಲಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
3. Congress Guarantee: ಯುವನಿಧಿ ಜಾರಿ: IAS, KAS, ಇತರೆ ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧವಾಗುವವರಿಗೆ ಸುವರ್ಣಾವಕಾಶ?
ಕಾಂಗ್ರೆಸ್ ಸರ್ಕಾರ ಘೋಷಣೆ ಮಾಡಿದಂತೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ. ಪ್ರತಿ ಯೋಜನೆಗೂ ನಿಬಂಧನೆಗಳನ್ನು ವಿಧಿಸಲಾಗಿದ್ದು, ನಿರುದ್ಯೋಗ ಭತ್ಯೆ ವಿಚಾರದಲ್ಲಿ ಅನೇಕ ನಿಬಂಧನೆ ವಿಧಿಸಿಸಿದೆ. ಆದರೆ ಈ ನಿಬಂಧನೆ ಒಳಗೇ, ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧರಾಗುವವರಿಗೆ ಸುವರ್ಣಾವಕಾಶದ ಬಾಗಿಲು ತೆರೆದಿದೆ ಎನ್ನಲಾಗುತ್ತಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
4. Congress Guarantee : ಜನರಿಗೆ ದೋಖಾ ಗ್ಯಾರಂಟಿ, 70 ಯುನಿಟ್ ಬಳಸುವ ಬಡವರಿಗೆ ಶಾಕ್: ಬೊಮ್ಮಾಯಿ ಟೀಕೆ
ಚುನಾವಣೆ ಸಮಯದಲ್ಲಿ ಕಾಂಗ್ರೆಸ್‌ನವರು ಐದು ಗ್ಯಾರಂಟಿಗಳು (Congress Guarantee) ಎಲ್ಲರಿಗೂ ಉಚಿತ ಎಂದು ಹೇಳಿದ್ದರು. ಈಗ ಷರತ್ತುಗಳನ್ನು ಹಾಕಿದ್ದಾರೆ. ಕಂಡೀಷನ್ ಅಪ್ಲೈ ಅಂತ ಮೊದಲೇ ಸ್ಪಷ್ಟವಾಗಿ ಹೇಳಬೇಕಿತ್ತು. ಇವರು ಗ್ಯಾರಂಟಿಗಳ ಮೂಲಕ ಜನರಿಗೆ ದೋಖಾ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
5. Congress Guarantee: ಉಚಿತ ವಿದ್ಯುತ್ ಪಡೆದ ಮೊದಲ ಗ್ರಾಮ ಇದು: ಈ ಊರಲ್ಲಿ 20 ವರ್ಷದಿಂದ ಯಾರೂ ಕರೆಂಟ್ ಬಿಲ್ ಕಟ್ಟಿಲ್ಲ !
ವಿಧಾನಸಭೆ ಚುನಾವಣೆಗೂ ಮುನ್ನ ಘೋಷಣೆ ಮಾಡಿದ ಐದು ಗ್ಯಾರಂಟಿ ಯೋಜನೆಗಳ ಜಾರಿಗೆ ಹಲವು ಕಸರತ್ತು ನಡೆಸುತ್ತಿದೆ. ಇದರಲ್ಲಿ ಮೊದಲ ಘೋಷಣೆ ಎಂದರೆ ರಾಜ್ಯದ ಪ್ರತಿ ಮನೆಗೆ ಮಾಸಿಕ 200 ಯೂನಿಟ್ ಉಚಿತ ವಿದ್ಯುತ್ ನೀಡುವುದು. ಆದರೆ ಈ ಯೋಜನೆ ಜಾರಿಗೂ ಮುನ್ನವೇ ಸುಮಾರು 20 ವರ್ಷದಿಂದ ಕರ್ನಾಟಕದ ಈ ಗ್ರಾಮದ ಯಾವ ಮನೆಯವರೂ ವಿದ್ಯುತ್ ಬಿಲ್ ಪಾವತಿಸುತ್ತಿಲ್ಲ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
6. Bangalore Mysore Expressway: ದಶಪಥ ಹೆದ್ದಾರಿ ಉಳಿಸಿ ಪ್ಲೀಸ್; ಶುರುವಾಗಿದೆ ಕಬ್ಬಿಣ ಕಳ್ಳರ ಕಾಟ!
ಬಹು ಮಹತ್ವಾಕಾಂಕ್ಷೆಯಿಂದ ನಿರ್ಮಾಣವಾಗಿರುವ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಗೆ (Bangalore Mysore Expressway) ಈಗ ಕಬ್ಬಿಣ ಕಳ್ಳರ ಕಾಟ ಶುರುವಾಗಿದೆ. ರಸ್ತೆ ಪಕ್ಕದಲ್ಲಿಡಲಾಗಿರುವ ವಿದ್ಯುತ್ ಕಂಬ, ಗ್ರಿಲ್, ತಡೆಗೋಡೆ ರಾಡ್‌ಗಳನ್ನೂ ಬಿಡದ ಖದೀಮರು, ಎಲ್ಲವನ್ನೂ ಹೊತ್ತೊಯ್ಯುತ್ತಿದ್ದಾರೆ. ಇದು ಹೆದ್ದಾರಿ ಪ್ರಾಧಿಕಾರಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
7. Rahul Gandhi: ಮುಸ್ಲಿಂ ಲೀಗ್ ಜಾತ್ಯತೀತ ಎಂದ ರಾಹುಲ್ ಗಾಂಧಿ; ಬಿಜೆಪಿ- ಕಾಂಗ್ರೆಸ್ ಮಧ್ಯೆ ವಾಕ್ಸಮರ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪ್ರತಿ ಬಾರಿ ವಿದೇಶಕ್ಕೆ ಹೋಗಿ ನೀಡುವ ಹೇಳಿಕೆಗಳು ದೇಶದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಮಧ್ಯೆ ವಾಕ್ಸಮರಕ್ಕೆ ಕಾರಣವಾಗುತ್ತವೆ. ಇದಕ್ಕೆ ನಿದರ್ಶನ ಎಂಬಂತೆ, “ಇಂಡಿಯನ್ ಯುನಿಯನ್ ಆಫ್ ಮುಸ್ಲಿಂ ಲೀಗ್ ಪಕ್ಷವು ಸಂಪೂರ್ಣವಾಗಿ ಜಾತ್ಯತೀತವಾಗಿದೆ” ಎಂದು ವಾಷಿಂಗ್ಟನ್‌ನಲ್ಲಿ ರಾಹುಲ್ ಗಾಂಧಿ ಹೇಳಿರುವುದು ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ಮಧ್ಯೆ ವಾಗ್ವಾದಕ್ಕೆ ಕಾರಣವಾಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
8. Teacher Transfer : ಶಿಕ್ಷಕರ ವರ್ಗಾವಣೆಗೆ ಮುಹೂರ್ತ ಫಿಕ್ಸ್; ಪರಿಷ್ಕೃತ ವೇಳಾಪಟ್ಟಿ ಪ್ರಕಟ
ರಾಜ್ಯದ ಪ್ರಾಥಮಿಕ ಶಾಲಾ ಮತ್ತು ಪ್ರೌಢ ಶಾಲಾ ಶಿಕ್ಷಕರು ಬಹಳ ದಿನಗಳಿಂದ ನಿರೀಕ್ಷಿಸುತ್ತಿದ್ದ ವರ್ಗಾವಣೆ (Teacher Transfer) ಪ್ರಕ್ರಿಯೆಯನ್ನು ಶಾಲಾ ಶಿಕ್ಷಣ ಇಲಾಖೆಯು ಮತ್ತೆ ಆರಂಭಿಸಿದ್ದು, ಪರಿಷ್ಕೃತ ವರ್ಗಾವಣಾ ವೇಳಾಪಟ್ಟಿ ಪ್ರಕಟಿಸಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
9. IBPS RRB Notification 2023 : ಗ್ರಾಮೀಣ ಬ್ಯಾಂಕಿನ ಎಲ್ಲ ಹುದ್ದೆಗಳಿಗೂ ಕನ್ನಡದಲ್ಲಿ ಏಕಿಲ್ಲ ಪರೀಕ್ಷೆ?
ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ (ಐಬಿಪಿಎಸ್) ದೇಶದ 43 ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳಲ್ಲಿ (ಆರ್‌ಆರ್‌ಬಿ) ಖಾಲಿ ಇರುವ 8,612 ಹುದ್ದೆಗಳ ನೇಮಕಕ್ಕೆ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ (IBPS RRB Notification 2023) ಅರ್ಜಿ ಆಹ್ವಾನಿಸಿದೆ. ರಾಜ್ಯದ ಎರಡು ಗ್ರಾಮೀಣ ಬ್ಯಾಂಕುಗಳಲ್ಲಿನ 806 ಹುದ್ದೆಗಳಿಗೆ ನೇಮಕ ನಡೆಯುತ್ತಿದೆ. ಆದರೆ ಕೆಲವು ಹುದ್ದೆಗಳಿಗೆ ಇಂಗ್ಲಿಷ್ ಅಥವಾ ಹಿಂದಿಯಲ್ಲಿ ಮಾತ್ರ ಪರೀಕ್ಷೆ ಬರೆಯಲು ಅವಕಾಶ ನೀಡಿರುವುದಕ್ಕೆ ಆಕ್ಷೇಪಣೆ ವ್ಯಕ್ತವಾಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
10. Viral Video : ಇದು ರಿಯಲ್ ಕೆಜಿಎಫ್ ಕತೆ; ಸಮುದ್ರಕ್ಕೆ ಜಿಗಿದು 20 ಕೋಟಿ ರೂ. ಮೌಲ್ಯದ ಚಿನ್ನ ತೆಗೆದ ವಿಡಿಯೊ ಇಲ್ಲಿದೆ ನೋಡಿ!
ಕೆಜಿಎಫ್‌ನ ನರಾಚಿಯಲ್ಲಿ ಅಗೆದ ಚಿನ್ನವನ್ನು ಸಮುದ್ರಕ್ಕೆ ಬಿಸಾಡಿದ್ದನ್ನು ಕೆಜಿಎಫ್ ಚಾಪ್ಟರ್ 2 ಸಿನಿಮಾದಲ್ಲಿ ನೋಡಿದ್ದೇವೆ. ಆದರೆ, ಭಾರತೀಯ ಕರಾವಳಿ ಕಾವಲು ಪಡೆಯ ಸಿಬ್ಬಂದಿ ಸಮುದ್ರದಾಳಕ್ಕೆ ನೆಗೆದು 20.2 ಕೋಟಿ ರೂಪಾಯಿ ಮೌಲ್ಯದ 32.689 ಕೆ.ಜಿ ಚಿನ್ನವನ್ನು ಹೊರತೆಗೆಯುವ ಮೂಲಕ ಸಾಹಸ ಮಾಡಿದ್ದಾರೆ. ಈ ವಿಡಿಯೊ ಈಗ ವೈರಲ್ (Viral Video) ಆಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.