ಬೆಂಗಳೂರು: ಒಂದೇ ಕುಟುಂಬಕ್ಕೆ ಸೀಮಿತವಾದ ಪಕ್ಷ ಎಂಬ ಹಣೆಪಟ್ಟಿಯನ್ನು ಕಳೆದುಕೊಳ್ಳಲೋ ಎಂಬಂತೆ 22 ವರ್ಷದ ಬಳಿಕ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸೋಮವಾರ ಚುನಾವಣೆ ನಡೆಯುತ್ತಿದ್ದು, ಕರ್ನಾಟಕದ ಮಲ್ಲಿಕಾರ್ಜುನ ಖರ್ಗೆ, ಕೇರಳದ ಶಶಿ ತರೂರ್ ಸ್ಪರ್ಧೆಯಲ್ಲಿದ್ದಾರೆ. ಯಾರೇ ಗೆದ್ದರೂ ದಕ್ಷಿಣ ಭಾರತದ ನಾಯಕರೊಬ್ಬರು ಚುಕ್ಕಾಣಿ ಹಿಡಿಯುವುದು ಖಾತ್ರಿಯಾಗಿದೆ. 75 ಡಿಜಿಟಲ್ ಬ್ಯಾಂಕಿಂಗ್ ಘಟಕಗಳಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ, ಭಾರತ್ ಜೋಡೋ ಯಾತ್ರೆಯ ವೇಳೆ ವಿದ್ಯುತ್ ಅವಘಡ ಸಂಭವಿಸಿದೆ, ಮತಾಂತರವಾದವರಿಗೆ ಎಸ್‌ಸಿಎಸ್‌ಟಿ ಮೀಸಲಾತಿ ಬೇಡವೆಂದು ವಿಹಿಂಪ ಆಗ್ರಹಿಸಿದೆ, ಹಾಸನದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ ಎನ್ನುವುದೂ ಸೇರಿ ದಿನದ ಪ್ರಮುಖ ಸುದ್ದಿಗಳ ಗುಚ್ಛ ವಿಸ್ತಾರ TOP 10 NEWS.
1. 22 ವರ್ಷದ ಬಳಿಕ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಚುನಾವಣೆ, ಹೇಗಿರಲಿದೆ ಪ್ರಕ್ರಿಯೆ?
ಕಾಂಗ್ರೆಸ್ ಅಧ್ಯಕ್ಷರ (Congress President) ಆಯ್ಕೆಗೆ ೨೨ ವರ್ಷದ ಬಳಿಕ ಚುನಾವಣೆ ನಡೆಯುತ್ತಿದೆ. ಸೋಮವಾರ (ಅ.೧೭) ಮತದಾನ ನಡೆಯಲಿದ್ದು, ಅಭ್ಯರ್ಥಿಗಳಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ಶಶಿ ತರೂರ್ ಅವರು ಗೆಲುವಿಗಾಗಿ ಕಸರತ್ತು ನಡೆಸುತ್ತಿದ್ದಾರೆ. ಹಾಗಾದರೆ, ೨೨ ವರ್ಷದ ಬಳಿಕ ನಡೆಯುತ್ತಿರುವ ಚುನಾವಣೆಯ ಪ್ರಕ್ರಿಯೆ ಹೇಗಿರಲಿದೆ? ಯಾರು ಮತ ಚಲಾಯಿಸಬಹುದು? ಮತ ಎಣಿಕೆ ಹೇಗೆ ನಡೆಯುತ್ತದೆ? ಎಷ್ಟು ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ ಎಂಬುದು ಸೇರಿ ಹಲವು ವಿಷಯಗಳ ಕುರಿತು (ವಿಸ್ತಾರ Explainer) ಸಂಕ್ಷಿಪ್ತ ಮಾಹಿತಿ ಇಲ್ಲಿದೆ. ಪʻೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
ಹೆಚ್ಚಿನ ಓದಿಗಾಗಿ: ಕರ್ನಾಟಕದಲ್ಲಿ ಹಿಂದಿ ಭಾಷೆಯಲ್ಲಿ ಉತ್ತರ ನೀಡುವುದಿಲ್ಲ ಎಂದ ಮಲ್ಲಿಕಾರ್ಜುನ ಖರ್ಗೆ
2. Digital Banking Units | 75 ಡಿಜಿಟಲ್ ಬ್ಯಾಂಕಿಂಗ್ ಘಟಕಗಳಿಗೆ ಪ್ರಧಾನಿ ಮೋದಿ ಚಾಲನೆ
ದೇಶದಲ್ಲಿ ಹಣಕಾಸು ಸೇವೆಗಳನ್ನು ವ್ಯಾಪಕಗೊಳಿಸುವ ಮತ್ತೊಂದು ಕ್ರಮವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 75 ಡಿಜಿಟಲ್ ಬ್ಯಾಂಕಿಂಗ್ ಘಟಕಗಳನ್ನು (Digital Banking Units- ಡಿಬಿಯು) ರಾಷ್ಟ್ರಕ್ಕೆ ಭಾನುವಾರ ಸಮರ್ಪಿಸಿದರು. ಡಿಜಿಟಲ್ ಬ್ಯಾಂಕಿಂಗ್ ಘಟಕಗಳು ಹಣಕಾಸು ಮತ್ತು ಬ್ಯಾಂಕಿಂಗ್ ಸೇವೆಗಳನ್ನು ಜನತೆಗೆ ವ್ಯಾಪಕವಾಗಿ ಒದಗಿಸಲಿದೆ ಎಂದು ಪ್ರಧಾನಿ ಮೋದಿ ಅವರು ವಿಡಿಯೊ ಕಾನ್ಫರೆನ್ಸ್ ಮೂಲಕ ತಿಳಿಸಿದರು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
3. Bharat jodo ಯಾತ್ರೆಯ ವೇಳೆ ವಿದ್ಯುತ್ ಅವಘಡ, ನಾಲ್ವರಿಗೆ ಗಾಯ
ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ಭಾನುವಾರ ಬಳ್ಳಾರಿ ಗ್ರಾಮಾಂತರ ಭಾಗದಲ್ಲಿ ಸಂಚರಿಸುತ್ತಿದೆ. ಈ ನಡುವೆ, ಸೋಮವಾರದ ಯಾತ್ರೆ ಆರಂಭಗೊಂಡು ಸ್ವಲ್ಪ ಹೊತ್ತಿನಲ್ಲೇ ವಿದ್ಯುತ್ ಅವಘಡ ಸಂಭವಿಸಿ ನಾಲ್ವರು ಗಾಯಗೊಂಡಿದ್ದಾರೆ.
ಸಂಗನಕಲ್ಲಿನಿಂದ ಪಾದಯಾತ್ರೆ ಆರಂಭವಾಗಿ ಮೋಕಾ ಗ್ರಾಮದ ದೊಡ್ಡ ಮೋರಿ ಬಳಿ ಬರುತ್ತಿದ್ದಂತೆಯೇ ಯಾತ್ರಿಯೊಬ್ಬರು ಕೈಯಲ್ಲಿ ಹಿಡಿದಿದ್ದ ಕಬ್ಬಿಣದ ರಾಡ್ ಹೊಂದಿದ್ದ ಕಾಂಗ್ರೆಸ್ ಧ್ವಜ ವಿದ್ಯುತ್ ಲೈನ್‌ಗೆ ತಗುಲಿತು. ಈ ವೇಳೆ ಅದನ್ನು ಆಧರಿಸಲು ಮುಂದಾದ ಮೋಕಾ ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಮಣ್ಣ, ದೊಡ್ಡಪ್ಪ, ಸಂತೋಷ್ ಸೇರಿದಂತೆ ನಾಲ್ವರು ಗಾಯಗೊಂಡರು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
4. Bharat Jodo | ಬಳ್ಳಾರಿ ಸಭೆಗೆ ಬೆವರು ಹರಿಸಿದ್ದು ಡಿಕೆಶಿ, ಚಪ್ಪಾಳೆ-ಶಿಳ್ಳೆ ಗಿಟ್ಟಿಸಿದ್ದು ಸಿದ್ದರಾಮಯ್ಯ !
ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಸಂಘಟನಾತ್ಮಕವಾಗಿ ಬೆವರು ಸುರಿಸುತ್ತ, ನಡೆಯಲಾಗದಿದ್ದರೂ ಕಷ್ಟ ಪಟ್ಟು ನಡೆಯುತ್ತಿರುವವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್. ಆದರೆ ಯಾತ್ರೆ 1,000 ಕಿಲೋಮೀಟರ್ ಸಾಗಿದ ಸಂದರ್ಭದಲ್ಲಿ ಶನಿವಾರ ಬಳ್ಳಾರಿಯಲ್ಲಿ ನಡೆದ ರ‍್ಯಾಲಿಯಲ್ಲಿ ಫುಲ್ ಮೈಲೇಜ್ ಪಡೆದಿದ್ದು ಮಾಜಿ ಸಿಎಂ ಸಿದ್ದರಾಮಯ್ಯ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
5. ಮತಾಂತರವಾದವರಿಗೆ SCST ಮೀಸಲಾತಿ ಬೇಡ: ವಿಶ್ವ ಹಿಂದು ಪರಿಷತ್ ಆಗ್ರಹ
ತಮ್ಮಲ್ಲಿ ಯಾವುದೇ ಜಾತಿ ಭೇದ ಇಲ್ಲ ಎಂದು ಹೇಳಿಕೊಳ್ಳುವ ಅಬ್ರಾಹಮಿಕ್ (ಮುಸ್ಲಿಂ, ಕ್ರೈಸ್ತ) ಮತಗಳಿಗೆ ಮತಾಂತರವಾದವರಿಗೆ ಎಸ್‌ಸಿಎಸ್‌ಟಿ ಮೀಸಲಾತಿ ಸೌಲಭ್ಯವನ್ನು ವಿಸ್ತರಿಸಬಾರದು ಎಂದು ವಿಶ್ವ ಹಿಂದು ಪರಿಷತ್ (ವಿಎಚ್‌ಪಿ) ಆಗ್ರಹಿಸಿದೆ.
ಮತಾಂತರಗೊಂಡ ಎಸ್‌ಸಿಎಸ್‌ಟಿ ಸಮುದಾಯದವರ ಸ್ಥಿತಿಗತಿ ಹೇಗಿದೆ, ಎಸ್‌ಸಿಎಸ್‌ಟಿ ಸಮುದಾಯದ ಮೇಲೆ ಇದರಿಂದಾಗುವ ಪರಿಣಾಮಗಳ ಕುರಿತು ಅಧ್ಯಯನ ನಡೆಸಲು ಸುಪ್ರೀಂಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿ ಕೆ.ಜಿ. ಬಾಲಕೃಷ್ಣನ್ ನೇತೃತ್ವದಲ್ಲಿ ಕೇಂದ್ರ ಸರ್ಕಾರ ಇತ್ತೀಚೆಗೆ ಆಯೋಗವನ್ನು ರಚಿಸಿದೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ವಿಶ್ವ ಹಿಂದು ಪರಿಷದ್ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್ ಮಾತನಾಡಿದರು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
6. Rain News | ರಾಮನಗರ ಸೇರಿ ವಿವಿಧೆಡೆ ಮಳೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ ಕೆರೆಗಳು
ರಾಜ್ಯಾದ್ಯಂತ ಮಳೆಯ (Rain News) ಆರ್ಭಟ ಜೋರಾಗಿದ್ದು, ಮಳೆ ರಗಳೆ ಜನರನ್ನು ಹೈರಾಣಾಗಿಸಿದೆ. ರಾಮನಗರದ ಸುತ್ತ ಮುತ್ತಲಿನ ಕೆರೆಗಳು ಉಕ್ಕಿ ಹರಿಯುತ್ತಿದ್ದು, ಕೆರೆ ಪಕ್ಕದ ಪ್ರದೇಶಗಳ ನಿವಾಸಿಗಳು ಆತಂಕದಲ್ಲಿ ಇರುವಂತಾಗಿದೆ. ಜತೆಗೆ ರೈತ ಜಮೀನುಗಳಿಗೂ ನೀರು ನುಗ್ಗಿದ್ದು ಬೆಳೆ ಎಲ್ಲವೂ ನಾಶವಾಗಿದ್ದು ರೈತರು ಕಂಗಾಲಾಗಿದ್ದಾರೆ. ರಾಮನಗರ ಒಂದರಲ್ಲಿಯೇ ಮಳೆಯ ಅನಾಹುತಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ಚನ್ನಪಟ್ಟಣ ತಾಲೂಕಿನ ಹೊಂಗನೂರು ಕೆರೆ ಬಳಿ ಕೆಲಸ ಮುಗಿಸಿ ಮನೆಗೆ ವಾಪಸ್ ಆಗುವ ವೇಳೆ ನೀರಿನಲ್ಲಿ ಕೊಚ್ಚಿಹೋಗುತ್ತಿದ್ದ ಇಬ್ಬರು ಬೈಕ್ ಸವಾರರನ್ನು ರಕ್ಷಣೆ ಮಾಡಲಾಗಿದೆ. ಮೊಗಳ್ಳಿ ಕೆರೆ ಕೋಡಿ ಒಡೆದ ಪರಿಣಾಮ ಹೊಂಗನೂರು ಗ್ರಾಮದ ಜನರು ಆತಂಕದಲ್ಲಿ ದಿನದೂಡುವಂತಾಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
Weather Report | ಮುಂದಿನ ಮೂರು ದಿನವೂ ಇರಲಿದೆ ಮಳೆ ಅಬ್ಬರ; ಬೆಂಗಳೂರಿನ ಹಲವೆಡೆ ಇರಬೇಕು ಕಟ್ಟೆಚ್ಚರ
7. ಭಾರತವೂ ಪಾಕಿಸ್ತಾನ ಆಗಬಾರದೆಂದರೆ ಈಗಿನ ಪ್ರಭುತ್ವವನ್ನು ಉಳಿಸಬೇಕು: ಡಾ. ಪ್ರೇಮಶೇಖರ್
ಇಡೀ ವಿಶ್ವವೇ ಒಂದು ಕುಟುಂಬ ಎನ್ನುವ ಮೌಲ್ಯವನ್ನು ಭಾರತ ಉಳಿಸಿಕೊಳ್ಳಬೇಕೆಂದರೆ, ಪಾಕಿಸ್ತಾನದಂತೆಯೇ ಭಾರತವೂ ಆಗಬಾರದು ಎಂದರೆ, ಈಗಿರುವ ಪ್ರಭುತ್ವವನ್ನು ಉಳಿಸಿಕೊಳ್ಳಬೇಕಾಗಿರುವುದು ಎಲ್ಲ ರಾಷ್ಟ್ರೀಯವಾದಿ ಸಾಹಿತಿಗಳ ಕಾರ್ಯವಾಗಬೇಕು ಎಂದು ಲೇಖಕ, ಚಿಂತಕ ಡಾ. ಪ್ರೇಮಶೇಖರ ಅಭಿಮತ ವ್ಯಕ್ತಪಡಿಸಿದ್ದಾರೆ.
ತುಮಕೂರಿನ ಸಿದ್ದಗಂಗಾ ಪದವಿ ಕಾಲೇಜಿನಲ್ಲಿ ಅಖಿಲ ಭಾರತೀಯ ಸಾಹಿತ್ಯ ಪರಿಷತ್ ವತಿಯಿಂದ ತುಮಕೂರಿನಲ್ಲಿ ಆಯೋಜಿಸಿದ್ದ, ಆದಿಕವಿ ಹಾಗೂ ವಾಗ್ದೇವಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮಾತನಾಡಿದರು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
8. Accident | ಹಾಸನದಲ್ಲಿ ಭೀಕರ ಅಪಘಾತ, ಐವರು ಮಕ್ಕಳು ಸೇರಿ 9 ಮಂದಿ ದುರ್ಮರಣ
ಧರ್ಮಸ್ಥಳದಿಂದ ಟೆಂಪೊ ಟ್ರಾವೆಲರ್‌ನಲ್ಲಿ (TT) ವಾಪಸಾಗುವಾಗ ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಗಾಂಧಿ ನಗರ ಗ್ರಾಮದ ಬಳಿ ಭೀಕರ ಅಪಘಾತ (Accident) ಸಂಭವಿಸಿದ್ದು, ಟೆಂಪೊ ಟ್ರಾವೆಲರ್‌ನಲ್ಲಿದ್ದ ಐವರು ಮಕ್ಕಳು ಸೇರಿ ಒಂಬತ್ತು ಜನ ಮೃತಪಟ್ಟಿದ್ದಾರೆ. ಲೀಲಾವತಿ (50), ಚೈತ್ರಾ (33), ಸಮರ್ಥ (10), ಡಿಂಪಿ (12), ತನ್ಮಯ್ (10), ಧ್ರುವ (2), ವಂದನಾ (20), ದೊಡ್ಡಯ್ಯ (60), ಭಾರತಿ (50) ಮೃತಪಟ್ಟಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
9. Nayanthara | ನಯನತಾರಾ ದಂಪತಿ ಸರೋಗಸಿ ಕೇಸ್‌ಗೆ ಟ್ವಿಸ್ಟ್, 6 ವರ್ಷದ ಹಿಂದೆಯೇ ಮದುವೆ?
ಕಾಲಿವುಡ್ ನಟಿ ನಯನತಾರಾ (Nayanthara) ಹಾಗೂ ವಿಘ್ನೇಶ್ ಶಿವನ್ ಬಾಡಿಗೆ ತಾಯ್ತನದ ಪ್ರಕರಣದಲ್ಲಿ ಸುದ್ದಿಯಾಗಿದ್ದರು. ಕಳೆದ ಜೂನ್ 2ರಂದು ಮದುವೆಯಾದ ಈ ಜೋಡಿಗೆ 4 ತಿಂಗಳಲ್ಲಿ ಮಗು ಹೇಗೆ ಸಾಧ್ಯ ಎಂದು ಅಭಿಮಾನಿಗಳ ವಲಯದಲ್ಲಿ ದೊಡ್ಡ ಮಟ್ಟದಲ್ಲಿ ಚರ್ಚೆ ಆಗಿತ್ತು. ಇದೀಗ ಈ ವಿವಾದಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಮೂಲಗಳ ಪ್ರಕಾರ ದಂಪತಿ ಕಾನೂನು ಬದ್ಧವಾಗಿ ದಾಖಲೆಗಳನ್ನು ಸಲ್ಲಿಸಿದ್ದಾರೆಂದು ತಿಳಿದು ಬಂದಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
10. T20 World Cup | ಟಿ20 ವಿಶ್ವ ಕಪ್ ಇತಿಹಾಸದ ಸ್ವಾರಸ್ಯಕರ ಸಂಗತಿಗಳು ಇಲ್ಲಿವೆ
ಇದುವರೆಗಿನ ಏಳು ಟಿ20 ವಿಶ್ವ ಕಪ್ ಹಲವು ದಾಖಲೆಗಳಿಗೆ ಸಾಕ್ಷಿಯಾಗಿದೆ. ಎಂಟನೇ ಆವೃತ್ತಿಯ ವಿಶ್ವ ಕಪ್ ಆಸ್ಟ್ರೇಲಿಯಾದಲ್ಲಿ ಅರಂಭಗೊಂಡಿದ್ದು, ೧೬ ತಂಡಗಳು ಪ್ರಶಸ್ತಿಗಾಗಿ ಸೆಣಸಾಡಲಿವೆ. ಅಂತೆಯೇ ಈ ಹಿಂದಿನ ಆವೃತ್ತಿಗಳಲ್ಲಿ ದಾಖಲಾದ ಕೆಲವು ಸ್ವಾರಸ್ಯಕರ ಸಂಗತಿಗಳು ಇಲ್ಲಿವೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
ಮತ್ತಷ್ಟು ಸುದ್ದಿಗಳು
⭕Rupee | ಡಾಲರ್ ವಿರುದ್ಧ ರೂಪಾಯಿ ಸಶಕ್ತ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್
⭕Kumbha Mela | ಇನ್ನು ಮುಂದೆ ರಾಜ್ಯದಲ್ಲಿ 12 ವರ್ಷಕ್ಕೊಮ್ಮೆ ಮಹಾಕುಂಭ ಮೇಳ: ಸಿಎಂ ಬೊಮ್ಮಾಯಿ
⭕ನನ್ನ ದೇಶ ನನ್ನ ದನಿ ಅಂಕಣ | ದ್ರಷ್ಟಾರ, ಚಿಂತಕ ಸೀತಾರಾಮ ಗೋಯಲ್
⭕PM Kisan | ನಾಳೆ ರೈತರ ಖಾತೆಗೆ ಸಂದಾಯವಾಗಲಿದೆ ಪಿಎಂ ಕಿಸಾನ್ ನಗದು