ವಿಸ್ತಾರ TOP 10 NEWS| ಮುರುಘಾಶ್ರೀ ಸುತ್ತ ಲೈಂಗಿಕ ಕಳಂಕದ ಸುಳಿಯಿಂದ ಇಂಡೋ-ಪಾಕ್‌ ಕಾಳಗದವರೆಗೆ ಪ್ರಮುಖ ಸುದ್ದಿಗಳು - Vistara News

ಕರ್ನಾಟಕ

ವಿಸ್ತಾರ TOP 10 NEWS| ಮುರುಘಾಶ್ರೀ ಸುತ್ತ ಲೈಂಗಿಕ ಕಳಂಕದ ಸುಳಿಯಿಂದ ಇಂಡೋ-ಪಾಕ್‌ ಕಾಳಗದವರೆಗೆ ಪ್ರಮುಖ ಸುದ್ದಿಗಳು

ವಿಸ್ತಾರ TOP 10 NEWS ರಾಜ್ಯ, ದೇಶ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಂಭವಿಸಿದ ಘಟನಾವಳಿಗಳಲ್ಲಿ ಪ್ರಮುಖವಾದವುಗಳು ಇಲ್ಲಿವೆ.

VISTARANEWS.COM


on

Top 10- 27-08-2022
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ಚಿತ್ರದುರ್ಗ ಬ್ರಹನ್ಮಠದ ಪೀಠಾಧಿಪತಿ ಶ್ರೀ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಕೇಳಿಬಂದ ಲೈಂಗಿಕ ದೌರ್ಜನ್ಯದ ಆರೋಪ ಶನಿವಾರ ರಾಜ್ಯದಲ್ಲಿ ಭಾರಿ ಸದ್ದು ಮಾಡಿತು. ಇದರ ಜತೆಗೆ ಭಾನುವಾರ ನಡೆಯಲಿರುವ ಭಾರತ-ಪಾಕಿಸ್ತಾನ ಕ್ರಿಕೆಟ್‌ ತಂಡಗಳ ನಡುವಿನ ಕದನದ ಚರ್ಚೆ ಹಾಗೂ ೯ ಸೆಕೆಂಡ್‌ನಲ್ಲಿ ಧರಾಶಾಯಿಯಾಗಲಿರುವ ನೋಯ್ಡಾದ ಅವಳಿ ಕಟ್ಟಡದ ಬಗೆಗಿನ ಕುತೂಹಲ ಟಾಪ್‌ ಟ್ರೆಂಡ್‌ನಲ್ಲಿತ್ತು. ಬೆಂಗಳೂರಿನ ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ಪಕ್ಕಾ ಆಗಿದೆ. ಆದರೆ, ಯಾರ ಸಾರಥ್ಯದಲ್ಲಿ ನಡೆಯಲಿದೆ ಎನ್ನುವುದು ನಿರ್ಧಾರವಾಗುವುದು ಗಣೇಶ ಚೌತಿಯ ಮುನ್ನಾದಿನ. ಈ ನಡುವೆ ಗಣೇಶ ಚತುರ್ಥಿಗೆ ಒಳ್ಳೆಯ ತಿಂಡಿ ಮಾಡಿ ತಿನ್ನಲು ಅವಕಾಶವಾಗಲಿ ಎಂಬಂತೆ ಅಡುಗೆ ತೈಲದ ಬೆಲೆ ಇಳಿದಿದೆ. ಹುದ್ದೆ ಕಳೆದುಕೊಳ್ಳುವ ಅಪಾಯದಲ್ಲಿರುವ ಜಾರ್ಖಂಡ್‌ ಸಿಎಂ ಹೇಮಂತ್‌ ಸೊರೇನ್‌ ಶಾಸಕರ ಜತೆ ಗಂಟೆಮೂಟೆ ಕಟ್ಟಿಕೊಂಡು ಔಟಿಂಗ್‌ ಹೋಗಿದ್ದೊಂದು ಕುತೂಹಲಕಾರಿ ಸುದ್ದಿ. ಜತೆಗೆ, ಗೋವಾದಲ್ಲಿ ಪ್ರಾಣ ಕಳೆದುಕೊಂಡ ಕಲರ್‌ಫುಲ್‌ ವ್ಯಕ್ತಿತ್ವದ ಸೋನಾಲಿ ಫೋಗಟ್‌ ಅವರ ಬದುಕಿನ ಸೀಕ್ರೆಟ್‌ಗಳೂ ಸೇರಿದಂತೆ ಇಂಟ್ರೆಸ್ಟಿಂಗ್‌ ಮತ್ತು ಬಹುಮುಖ್ಯ ಸುದ್ದಿಗಳ ಗುಚ್ಛವಿದು. ಅಂದ ಹಾಗೆ, ಎಲ್ಲರೂ ಓದಲೇಬೇಕಾದ ಹರಿಪ್ರಕಾಶ್‌ ಕೋಣೆಮನೆ ಅವರ ಸವಿಸ್ತಾರ ಅಂಕಣದಲ್ಲಿ ಈ ಬಾರಿ ಸಾವರ್ಕರ್‌ ಕುರಿತ ವಿಶೇಷ ಬರಹವಿದೆ.

೧. ಚಿತ್ರದುರ್ಗ ಮಠದ ಮುರುಘಾಶರಣರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: ಇದೆಲ್ಲ ಷಡ್ಯಂತ್ರ ಎಂದ ಶ್ರೀಗಳು
ಚಿತ್ರದುರ್ಗದ ಪ್ರತಿಷ್ಠಿತ ಮುರುಘಾಮಠದ ಶ್ರೀ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಅವರು ನಡೆಸುವ ಪ್ರೌಢಶಾಲೆಯೊಂದರ ೧೦ನೇ ತರಗತಿಯ ಇಬ್ಬರು ವಿದ್ಯಾರ್ಥಿನಿಯರು ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದಾರೆ. ಇದು ಪೋಕ್ಸೋ ಕಾಯಿದೆ ವ್ಯಾಪ್ತಿಗೆ ಬರುವ ಪ್ರಕರಣವಾಗಿರುವುದರಿಂದ ಶ್ರೀಗಳ ಬಂಧನವಾಗುವುದೇ ಎನ್ನುವ ಹಂತದವರೆಗೂ ಚರ್ಚೆಗಳು ನಡೆಯುತ್ತಿವೆ. ಹಾಸ್ಟೆಲ್‌ ವಾರ್ಡನ್‌ ಅವರನ್ನೂ ಆರೋಪಿ ಎಂದು ಗುರುತಿಸಿರುವ ಈ ಪ್ರಕರಣ ಮಠದ ವಿರುದ್ಧ ನಡೆದಿರುವ ಷಡ್ಯಂತ್ರ ಎಂದು ಶ್ರೀಗಳು ಹೇಳಿದ್ದು, ಕಾನೂನು ಹೋರಾಟ ಮಾಡುವುದಾಗಿ ಘೋಷಿಸಿದ್ದಾರೆ. ಪೂರ್ಣ ವರದಿಗಾಗಿ ಈ ಲಿಂಕ್‌ಗಳನ್ನು ಕ್ಲಿಕ್‌ ಮಾಡಿ ೧. ಆರೋಪವೇನು? ೨. ಶ್ರೀಗಳು ಹೇಳಿದ್ದೇನು? ೩. ಸಾಧ್ಯಾಸಾಧ್ಯತೆಗಳೇನು?

೨. ಇಂದು ಭಾರತ- ಪಾಕಿಸ್ತಾನ ಕ್ರಿಕೆಟ್‌ ಕದನ: ಜಿದ್ದಾಜಿದ್ದಿನ ಹೋರಾಟ ನಿರೀಕ್ಷೆ
ಸಾಂಪ್ರದಾಯಿಕ ಪ್ರತಿಸ್ಪರ್ಧಿಗಳಾದ ಭಾರತ ಹಾಗೂ ಪಾಕಿಸ್ತಾನ ಕ್ರಿಕೆಟ್‌ ತಂಡಗಳ ನಡುವೆ ಭಾನುವಾರ (ಆಗಸ್ಟ್ 28ರಂದು) ಏಷ್ಯಾ ಕಪ್‌- 2022ನೇ ಆವೃತ್ತಿಯ ಗುಂಪು ಹಂತದ ಪಂದ್ಯ ನಡೆಯಲಿದೆ. ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್‌ ಸ್ಟೇಡಿಯಮ್‌ನಲ್ಲಿ ಈ ಪಂದ್ಯ ಆಯೋಜನೆಗೊಂಡಿದ್ದು, ಭಾರತೀಯ ಕಾಲಮಾನ ಪ್ರಕಾರ ರಾತ್ರಿ 7.30ಕ್ಕೆ ಆರಂಭವಾಗಲಿದೆ. ಕಳೆದ ವರ್ಷ ಇದೇ ಸ್ಟೇಡಿಯಮ್‌ನಲ್ಲಿ ನಡೆದ ಟಿ20 ವಿಶ್ವ ಕಪ್‌ ಪಂದ್ಯದಲ್ಲಿ ಭಾರತ ತಂಡದ ಪಾಕಿಸ್ತಾನ ವಿರುದ್ಧ 10 ವಿಕೆಟ್‌ಗಳ ಹೀನಾಯ ಸೋಲು ಕಂಡಿತ್ತು. ಹೀಗಾಗಿ ಭಾರತ ತಂಡ ಆ ಸೇಡು ತೀರಿಸಿಕೊಳ್ಳಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
ಈ ಲಿಂಕ್‌ ಕ್ಲಿಕ್‌ ಮಾಡಿ IND vs PAK | ಕೊಹ್ಲಿ v/s ಬಾಬರ್‌, ಟಿ20ಯಲ್ಲಿ ಯಾರು ಬೆಸ್ಟ್‌?

೩. ಚಾಮರಾಜಪೇಟೆ ಮೈದಾನ ಗಣೇಶೋತ್ಸವಕ್ಕೆ ಯಾರು ಉಸ್ತುವಾರಿ?; ಆ. 30ರಂದು ತೀರ್ಮಾನ
ಬೆಂಗಳೂರಿನ ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಸಂಬಂಧಿಸಿ ಸರಕಾರ ದೃಢವಾದ ತೀರ್ಮಾನ ಮಾಡಿದೆ. ಆದರೆ, ಹೇಗೆ ಆಚರಣೆ ಮಾಡಬೇಕು, ಯಾರು ಆಚರಣೆ ಮಾಡಬೇಕು, ಯಾರಿಗೆ ಅನುಮತಿ ಎನ್ನುವ ವಿಚಾರದಲ್ಲಿ ಇನ್ನೂ ಅಂತಿಮ ತೀರ್ಮಾನ ಕೈಗೊಳ್ಳಬೇಕಿದೆ. ಆಗಸ್ಟ್‌ ೩೦ರಂದು ಅಂದರೆ ಗಣೇಶ ಚತುರ್ಥಿಯ ಮುನ್ನಾದಿನ ತನ್ನ ತೀರ್ಮಾನವನ್ನು ಹೇಳುವುದಾಗಿ ತಿಳಿಸಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

೪. ಗಣೇಶ ಚತುರ್ಥಿಗೆ GOOD NEWS: ಅಡುಗೆ ಎಣ್ಣೆ ದರ ಇಳಿಕೆ, ತಿಂಡಿ ಮಾಡಿ ತಿನ್ನಲು ಅನುಕೂಲ!
ಗಣೇಶ ಚತುರ್ಥಿಗೆ ಶುಭ ಸುದ್ದಿ ಬಂದಿದೆ. ಮೋದಕ ಪ್ರಿಯನ ಹಬ್ಬಕ್ಕೆ ನಾಲ್ಕಾರು ಬಗೆಯ ತಿಂಡಿ ಮಾಡಿ, ಮನೆ ಮಂದಿಯೆಲ್ಲ ಹಬ್ಬ ಆಚರಿಸೋಣ ಅಂತಿರೋರಿಗೆ ಇದು ಖುಷಿಯ ನ್ಯೂಸ್‌. ಅದೇನೆಂದರೆ, ಅಡುಗೆ ಎಣ್ಣೆಗಳ (Edible Oil Rate) ದರ ಒಂದು ಲೀಟರ್‌ಗೆ ೩೫ರಿಂದ ೪೫ ರೂ.ನಷ್ಟು ಇಳಿದಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

savistara

೫. ಇತಿಹಾಸದ ಕಣ್ತೆರೆಸಿ ಸ್ವಾತಂತ್ರ್ಯ ಜ್ಯೋತಿ ಬೆಳಗಿಸಿದವರು ಸಾವರ್ಕರ್
ದೇಶವನ್ನು ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯಕ್ಕೆ ಸಿದ್ಧಪಡಿಸಬೇಕೆಂದರೆ ಮೊದಲು ಭಾರತೀಯರಲ್ಲಿರುವ ಗೊಂದಲಗಳನ್ನು ಬಗೆಹರಿಸಿ, ಮಾನಸಿಕವಾಗಿ ಅವರನ್ನು ಸಜ್ಜುಗೊಳಿಸಬೇಕಿತ್ತು. ಹೋರಾಟಕ್ಕೆ ಧುಮುಕುವ ನಾಯಕನಿಗೆ ಮಾತ್ರವಲ್ಲ, ಆತನನ್ನು ಹಿಂಬಾಲಿಸುವ ಜನ ಸಮುದಾಯಕ್ಕೂ ನಾವೇನು ಮಾಡುತ್ತಿದ್ದೇವೆ ಮತ್ತು ಯಾಕೆ ಮಾಡುತ್ತಿದ್ದೇವೆ ಎಂಬುದರ ಕುರಿತು ಒಂದು ಸ್ಪಷ್ಟತೆ(ಕ್ಲಾರಿಟಿ) ಬೇಕು. ಸಾವರ್ಕರ್ ಅವರಿಗೆ ಈ ಖಚಿತತೆ ಇತ್ತು- ಹೀಗೆ ಸಾವರ್ಕರ್‌ ಅವರು ಸ್ವಾತಂತ್ರ್ಯ ಜ್ಯೋತಿ ಬೆಳಗಿದ ಬಗೆಯನ್ನು ವಿವರಿಸಿದ್ದಾರೆ ವಿಸ್ತಾರ ಮೀಡಿಯಾದ ಸಿಇಒ ಮತ್ತು ಪ್ರಧಾನ ಸಂಪಾದಕರಾಗಿರುವ ಹರಿಪ್ರಕಾಶ್‌ ಕೋಣೆಮನೆ ತಮ್ಮ ಸವಿಸ್ತಾರ ಅಂಕಣದಲ್ಲಿ. ಪೂರ್ಣ ಓದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

‌೬. ಹೇಮಂತ್​ ಸೊರೆನ್​ ಸಿಎಂ ಗಾದಿ ಮೇಲೆ ತೂಗುಗತ್ತಿ: ಜಾರ್ಖಂಡ್ ಬಿಟ್ಟು ಹೊರಟ ಶಾಸಕರು!
ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್​ ಸೊರೆನ್​ ಮುಖ್ಯಮಂತ್ರಿ ಗಾದಿ ಕಳೆದುಕೊಳ್ಳುವ ಲಕ್ಷಣ ದಟ್ಟವಾಗಿದೆ. ಸೊರೆನ್​ ಅವರು ತಮ್ಮ ಒಡೆತನದಲ್ಲಿ ಇದ್ದ ಕಲ್ಲು ಗಣಿ ಗುತ್ತಿಗೆ ಅವಧಿಯನ್ನು ತಾವೇ ವಿಸ್ತರಿಸಿಕೊಂಡ ಅವರ ಕೊರಳಿಗೆ ಸ್ವಾರ್ಥ ರಾಜಕಾರಣದ ಕುಣಿಕೆ ಬಿದ್ದಿದೆ. ಹೀಗೆ ಅಧಿಕಾರ ಬಿಡಲೇಬೇಕಾಗಿರುವ ಅವರು ತಮ್ಮ ಶಾಸಕರನ್ನು ಕಟ್ಟಿಕೊಂಡು ಔಟಿಂಗ್‌ ಹೊರಟಿದ್ದಾರೆ. ಅವರು ಹೋಗಿದ್ದೆಲ್ಲಿಗೆ? ಅವರ ಉದ್ದೇಶವೇನು? ಪೂರ್ಣ ಮಾಹಿತಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

೭. ಪ್ರತಿ ಮುಸಲ್ಮಾನರ ಮನೆ ಮುಂದೆ ಮಸೀದಿ ನಿರ್ಮಿಸುತ್ತ ಹೋದರೆ ಆಗುತ್ತಾ ಎಂದು ಕೇಳಿದ ಕೇರಳ ಹೈಕೋರ್ಟ್
ಪ್ರಾರ್ಥನಾ ಮಂದಿರಗಳು, ಧಾರ್ಮಿಕ ಕೇಂದ್ರಗಳ ಬಗ್ಗೆ ಕೇರಳ ಹೈಕೋರ್ಟ್ ಮಹತ್ವದ ಆದೇಶವನ್ನು ಮಾಡಿದೆ. ”ಅಕ್ರಮವಾಗಿ ಕಾರ್ಯ ನಿರ್ವಹಿಸುತ್ತಿರುವ ಮತ್ತು ಸಂಬಂಧಿಸಿದ ಪ್ರಾಧಿಕಾರಗಳಿಂದ ಒಪ್ಪಿಗೆ ಪಡೆಯದ ಪ್ರಾರ್ಥನಾ ಮಂದಿರಗಳು ಮತ್ತು ಧಾರ್ಮಿಕ ಕೇಂದ್ರಗಳನ್ನು ಮುಚ್ಚಬೇಕು” ಎಂದು ಕೇರಳ ಹೈಕೋರ್ಟ್ ಸರ್ಕಾರಕ್ಕೆ ಖಡಕ್ಕಾಗಿ ಸೂಚಿಸಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್ ಮಾಡಿ

೮. 70 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ ನೋಯ್ಡಾದ ಅವಳಿ ಕಟ್ಟಡ ಕೆಡವಲು ಆಗುವ ಖರ್ಚೆಷ್ಟು?
ನೋಯ್ಡಾದಲ್ಲಿರುವ ಅವಳಿ ಗಗನಚುಂಬಿ ಕಟ್ಟಡಗಳು ಭಾನುವಾರ ಧರೆಗುರುಳಲಿದೆ. ಅಪೆಕ್ಸ್‌ ಕಟ್ಟಡವು ೩೨ ಮಹಡಿ ಹೊಂದಿದೆ. ಸಿಯೇನ್‌ ಕಟ್ಟಡವು ೨೯ ಮಹಡಿಗಳನ್ನು ಹೊಂದಿದೆ. ಎರಡೂ ಕಟ್ಟಡಗಳನ್ನು ಭಾರತದ ೧೦ ಹಾಗೂ ವಿದೇಶದ ೭ ಬ್ಲಾಸ್ಟರ್‌ಗಳ ಯೋಜನೆ ಅನ್ವಯ ನೆಲಸಮ ಮಾಡಲಾಗುತ್ತದೆ. ಆದರೆ, ಸುಮಾರು ೭೦ ಕೋಟಿ ರೂ. ವೆಚ್ಚದಲ್ಲಿ ೨೦೦೫ರಲ್ಲಿ ನಿರ್ಮಾಣವಾದ ಕಟ್ಟಡಗಳ ನೆಲಸಮಗೊಳಿಸಲು ಎಷ್ಟು ಹಣ ಖರ್ಚಾಗುತ್ತದೆ ಗೊತ್ತೇ? ತಿಳಿಯಲು ಈ ಲಿಂಕ್‌ ಕ್ಲಿಕ್‌ ಮಾಡಿ

೯. ರಾಹುಲ್ ಗಾಂಧಿಯೇ ಕಾಂಗ್ರೆಸ್ ಅಧ್ಯಕ್ಷ, ಅವರನ್ನು ಬಿಟ್ಟರೆ ಇನ್ಯಾರಿದ್ದಾರೆ? ಇದು ಖರ್ಗೆ ಪ್ರಶ್ನೆ
ಹಿರಿಯ ನಾಯಕ ಗುಲಾಂ ನಬಿ ಆಜಾದ್‌ ಅವರು ರಾಹುಲ್‌ ಗಾಂಧಿ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಿ ಕಾಂಗ್ರೆಸ್‌ ಬಿಟ್ಟು ಹೋಗಿದ್ದಾರೆ. ಆದರೆ, ಕಾಂಗ್ರೆಸ್‌ನೊಳಗಿನ ನಾಯಕರಿಗೆ ಇನ್ನೂ ರಾಹುಲ್‌ ಮೇಲಿನ ನಂಬಿಕೆ ಹೋಗಿಲ್ಲ. ಹಿರಿಯ ನಾಯಕ ಹಾಗೂ ರಾಜ್ಯಸಭೆಯಲ್ಲಿ ಪ್ರತಿಪಕ್ಷದ ನಾಯಕರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರಂತೂ ರಾಹುಲ್‌ ಅವರಂತೆ ಇಡೀ ಭಾರತವನ್ನು ತಲುಪಬಲ್ಲ ಬೇರೆ ಯಾವ ನಾಯಕರೂ ಕಾಂಗ್ರೆಸ್‌ನಲ್ಲಿ ಇಲ್ಲ. ಹಾಗಾಗಿ ಅವರೇ ಅಧ್ಯಕ್ಷ ಎಂದಿದ್ದಾರೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

‌೧೦. ಸೋನಾಲಿ ಫೋಗತ್‌ ಎಂಬ ಸುಂದರಿಯ ಬದುಕಿನ ಮತ್ತೊಂದು ಮುಖ!
ಬಿಜೆಪಿ ನಾಯಕಿ, ಟಿಕ್‌ ಟಾಕ್‌ ಸ್ಟಾರ್‌ ಸೋನಾಲಿ ಫೋಗಟ್‌ (Sonali Phogat) ಸಾವಿನ ಬಳಿಕ ಅವರ ಬದುಕಿನ ಮತ್ತೊಂದು ಮುಖ ತೆರೆದುಕೊಳ್ಳುತ್ತಿದೆ. ಬಡತನದ ಹಿನ್ನೆಲೆಯಿಂದ ಬಂದು, ಟಿವಿ ನಿರೂಪಕಿಯಾಗಿ, ನಟಿಯಾಗಿ, ಟಿಕ್‌ಟಾಕ್ ಸ್ಟಾರ್‌ ಆಗಿ, ಬಿಗ್‌ಬಾಸ್ ಸ್ಪರ್ಧಿಯಾಗಿ, ರಾಜಕಾರಣಿಯಾಗಿ ಮಿಂಚುತ್ತಿದ್ದ ಅವರ ಬದುಕು ನಾವೆಣಿಸಿದಷ್ಟು ಸುಂದರವಾಗಿರಲಿಲ್ಲ. ಪೂರ್ಣ ವಿವರಕ್ಕಾಗಿ ವಿಸ್ತಾರ EXPLAINER ಓದಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಜೂನಿಯರ್‌ ಡಾಲಿ ಎಂಟ್ರಿ.. ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ

VISTARANEWS.COM


on

ಸ್ಯಾಂಡಲ್‌ವುಡ್‌ನ ಜನಪ್ರಿಯ ನಟ ‘ಡಾಲಿ’ ಧನಂಜಯ್ ಹಾಗೂ ಧನ್ಯತಾ ದಂಪತಿಗೆ ಗಂಡು ಮಗುವಿನ ಜನನವಾಗಿದೆ. ಗಂಡು ಮಗು ಜನಿಸಿದ ವಿಚಾರವನ್ನು ಧನಂಜಯ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಮಗುವಿನ ಪುಟ್ಟ ಕೈಗಳ ಫೋಟೋ ಶೇರ್‌ ಮಾಡಿದ್ದಾರೆ. ನಟ ಧನಂಜಯ್ ಹಾಗೂ ವೈದ್ಯೆ ಧನ್ಯತಾ 2025ರ ಫೆಬ್ರವರಿ 16ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆಯಾದ ಒಂದು ವರ್ಷದ ಸಂಭ್ರಮದ ಬೆನ್ನಲ್ಲೇ ಈ ಜೋಡಿ ಈಗ ಗಂಡು ಮಗುವನ್ನು ಸ್ವಾಗತಿಸಿದೆ.

Continue Reading

Latest

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಏರಿಕೆ: ಒಂದೇ ದಿನ 993 ರೂ ಹೆಚ್ಚಳ

VISTARANEWS.COM


on

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 993 ರೂಪಾಯಿಯಷ್ಟು ಏರಿಕೆ ಮಾಡಲಾಗಿದೆ. ಇಂದಿನಿಂದ (ಮೇ.1) ರಿಂದ ಹೊಸ ದರ ಅನ್ವಯವಾಗಲಿದ್ದು, ಹೋಟೆಲ್‌, ರೆಸ್ಟೋರೆಂಟ್‌, ವಾಣಿಜ್ಯ ಬಳಕೆಯ 19 ಕೆಜಿ ತೂಕದ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು 993 ರೂಪಾಯಿ ಹೆಚ್ಚಿಸಲಾಗಿದೆ. ಬೆಂಗಳೂರಿನಲ್ಲಿ ಈ ಹಿಂದೆ 2161 ರೂ ಇದ್ದ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ಈಗ 3154 ರೂಪಾಯಿಗೆ ಏರಿದೆ. ಒಂದೇ ಬಾರಿ ಇಷ್ಟೊಂದು ಪ್ರಮಾಣದಲ್ಲಿ ಬೆಲೆ ಹೆಚ್ಚಳವಾಗಿರುವುದು ವ್ಯಾಪಾರ ವಲಯದಲ್ಲಿ ಆತಂಕ ಮೂಡಿಸಿದೆ. ಈ ಬೆಲೆ ಏರಿಕೆಯಿಂದಾಗಿ ಹೋಟೆಲ್‌ ಮತ್ತು ರೆಸ್ಟೋರೆಂಟ್‌ ಉದ್ಯಮಿಗಳಿಗೆ ಹೆಚ್ಚುವರಿ ವೆಚ್ಚದ ಒತ್ತಡ ಎದುರಾಗಲಿದೆ. ಈಗಾಗಲೇ ಹೆಚ್ಚುತ್ತಿರುವ ಇತರೆ ಖರ್ಚುಗಳ ನಡುವೆ ಈ ಏರಿಕೆ ಮತ್ತಷ್ಟು ಭಾರವಾಗಲಿದೆ ಎಂದು ವ್ಯಾಪಾರಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ವಾಣಿಜ್ಯ ಸಿಲಿಂಡರ್‌ ಬೆಲೆ ಏರಿಕೆಯಿಂದ ಆಹಾರ ಪದಾರ್ಥಗಳ ಬೆಲೆಯಲ್ಲಿ ಏರಿಕೆ ಸಂಭವಿಸುವ ಸಾಧ್ಯತೆ ಇದೆ.

Continue Reading

Latest

ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್: ಇಂದು ಮತ್ತು ನಾಳೆ ಆಲಿಕಲ್ಲು ಮಳೆ ಸಾಧ್ಯತೆ

VISTARANEWS.COM


on

ಬೆಂಗಳೂರು ನಗರ ಸೇರಿದಂತೆ 18 ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಬಿರುಗಾಳಿ, ಆಲಿಕಲ್ಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆ ರಾಜ್ಯದ 18 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.

ಇಂದು (ಏಪ್ರಿಲ್ 30) ಹಾಗೂ ನಾಳೆ (ಮೇ 1) ರಾಜಧಾನಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಧಾರವಾಡ, ಗದಗ, ಕೊಪ್ಪಳ, ಹಾವೇರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಚಾಮರಾಜನಗರ, ಮೈಸೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಪ್ರಮಾಣದಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ನಿರೀಕ್ಷೆಯಿದೆ.

ಭಾರಿ ಮಳೆಯಾಗುವ ಸಾಧ್ಯತೆಯ ಹಿನ್ನೆಲೆ ಜನರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಹವಾಮಾನ ಇಲಾಖೆ ಸೂಚಿಸಿದೆ.

Continue Reading

Latest

ಜಾಮೀನು ಪಡೆಯಲು ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌.

VISTARANEWS.COM


on

ಜಾಮೀನು ಪಡೆಯಲು ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಗೆ ಅರ್ಜಿ ಸಲ್ಲಿಸಿದ್ದಾರೆ. ಏಪ್ರಿಲ್‌ 27 ರಂದು ದರ್ಶನ್ ಪರ ವಕೀಲ ರಂಜಿತ್ ರೋಹಟಗಿ ಅವರು ಸುಪ್ರೀಂ ಕೋರ್ಟ್‌ನಲ್ಲಿ ಮಧ್ಯಂತರ ಜಾಮೀನು ನೀಡುವಂತೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಈ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮೇ 4ಕ್ಕೆ ನಿಗದಿಪಡಿಸಿದೆ.

Continue Reading
Advertisement
Latest45 minutes ago

‘ಟಾಕ್ಸಿಕ್’ ಸಿನಿಮಾದಲ್ಲಿ ಬೋಲ್ಡ್ ದೃಶ್ಯಕ್ಕೆ ಕತ್ತರಿ ಹಾಕಿ ಕಿಯಾರಾ ಅಡ್ವಾಣಿ ಮನವಿ?

Latest24 hours ago

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ, ಬಾಂಗ್ಲಾದೇಶಕ್ಕೆ ಏಕೆ ಟೆನ್ಶನ್‌?

Latest1 day ago

ಜೂನಿಯರ್‌ ಡಾಲಿ ಎಂಟ್ರಿ.. ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ

Latest2 days ago

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಏರಿಕೆ: ಒಂದೇ ದಿನ 993 ರೂ ಹೆಚ್ಚಳ

Latest3 days ago

ಜನಪ್ರಿಯತೆಯಲ್ಲಿ ಪ್ರಧಾನಿ ಮೋದಿ ಈಗಲೂ ನಂ.1

Latest3 days ago

ಕುರ್ಚಿ ಕದನಕ್ಕೆ ಹೊಸ ಟ್ವಿಸ್ಟ್ : ದಲಿತ ಸಿಎಂ ಕೂಗು ಜೋರು

Latest3 days ago

ಟಿವಿಕೆ-ಎನ್‌ಡಿಎ ಮೈತ್ರಿ?, ತಮಿಳುನಾಡಿನಲ್ಲಿ ಸಂಚಲನ, ಸ್ಟಾಲಿನ್‌ ಸಭೆ

Latest3 days ago

ಎಕ್ಸಿಟ್‌ ಪೋಲ್‌: ಅಸ್ಸಾಂ, ಪುದುಚೇರಿ ಪ.ಬಂಗಾಳದಲ್ಲಿ ಬಿಜೆಪಿ, ತ.ನಾಡಲ್ಲಿ ಡಿಎಂಕೆ, ಕೇರಳಂನಲ್ಲಿ ಯುಡಿಎಫ್‌

Latest3 days ago

ತಮಿಳುನಾಡಿನಲ್ಲಿ ದಳಪತಿಯೇ ಅಧಿಪತಿ? ಎಂಜಿಆರ್‌ ಆಗ್ತಾರಾ ವಿಜಯ್‌?

Latest3 days ago

ಪಂಚರಾಜ್ಯ ಚುನಾವಣಾ ಫಲಿತಾಂಶ: “ಎಕ್ಸಿಟ್ ಪೋಲ್‌ಗಿಂತ ಉತ್ತಮ ಪ್ರದರ್ಶನ ನಿರೀಕ್ಷೆ” – ಖರ್ಗೆ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌