Site icon Vistara News

ವಿಸ್ತಾರ TOP 10 NEWS: ಮೇ 10ಕ್ಕೆ ಚುನಾವಣೆ ಮುಹೂರ್ತದಿಂದ, ಟೆಕ್ಕಿ ಪ್ರತಿಭಾ ಅತ್ಯಾಚಾರಿಗೆ 30 ವರ್ಷ ಜೈಲುವರೆಗಿನ ಪ್ರಮುಖ ಸುದ್ದಿಗಳಿವು

vistara top 10 news Karnataka elections date announced to punishment to rapist and more news

#image_title

1. Karnataka Election: ಮೇ 10ರಂದು ಕರ್ನಾಟಕ ಚುನಾವಣೆ; ಮೇ 13ಕ್ಕೆ ಫಲಿತಾಂಶ ಎಂದು ಘೋಷಿಸಿದ ಚುನಾವಣಾ ಆಯೋಗ
ಕರ್ನಾಟಕದಲ್ಲಿ 16ನೇ ವಿಧಾನಸಭೆಯನ್ನು ಆಯ್ಕೆ ಮಾಡುವ ಸಲುವಾಗಿ ಮೇ 10 ರ ಬುಧವಾರದಂದು ಒಂದೇ ಹಂತದಲ್ಲಿ ಚುನಾವಣೆ (Karnataka Election) ನಡೆಯಲಿದೆ. ಈ ಕುರಿತು ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಭಾರತೀಯ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌ ಸುದ್ದಿಗೋಷ್ಠಿಯಲ್ಲಿ ಘೋಷಣೆ ಮಾಡಿದರು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

2. Karnataka Elections 2023: ರಾಜ್ಯದಲ್ಲಿ ಯಾವ ಪಕ್ಷಕ್ಕೆ ಅಧಿಕಾರ? ಚುನಾವಣೆ ಪೂರ್ವ ಸಮೀಕ್ಷೆಗಳು ಹೇಳುವುದೇನು?
ಮುಂಬರುವ ಲೋಕಸಭೆ ಚುನಾವಣೆ, ದಕ್ಷಿಣ ಭಾರತದಲ್ಲಿ ಬಿಜೆಪಿ ಪ್ರಾಬಲ್ಯ, ರಾಹುಲ್‌ ಗಾಂಧಿ ಅನರ್ಹತೆ ಬಳಿಕ ನಡೆಯುತ್ತಿರುವ ಮೊದಲ ಚುನಾವಣೆ ಎಂಬುದು ಸೇರಿ ಹಲವು ದೃಷ್ಟಿಯಿಂದ ಪ್ರಾಮುಖ್ಯತೆ ಪಡೆದಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Elections 2023) ದಿನಾಂಕ ನಿಗದಿಯಾಗಿದೆ. ಮೇ 10ರಂದು ಚುನಾವಣೆ ನಡೆಯಲಿದ್ದು, 13ಕ್ಕೆ ಫಲಿತಾಂಶ ಪ್ರಕಟವಾಗಿದೆ. ಇದರ ಬೆನ್ನಲ್ಲೇ, ಕರ್ನಾಟಕ ವಿಧಾನಸಭೆ ಚುನಾವಣೆ ಕುರಿತು ಎಬಿಪಿ-ಸಿವೋಟರ್‌ ಹಾಗೂ ಜೀ ನ್ಯೂಸ್‌-ಮ್ಯಾಟ್ರಿಜ್‌ ಚುನಾವಣೆಪೂರ್ವ ಸಮೀಕ್ಷೆ ನಡೆಸಿವೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

3. Karnataka Elections 2023 : ಕಾಂಗ್ರೆಸ್‌ ಏನೇ ಆರೋಪ ಮಾಡಿದರೂ ಜನರು ನಮ್ಮ ಪರ: ಬೊಮ್ಮಾಯಿ ವಿಶ್ವಾಸ
ಮೇ 10ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯನ್ನು (Karnataka Elections 2023) ಎದುರಿಸಲು ಬಿಜೆಪಿ ಸನ್ನದ್ಧವಾಗಿದೆ. ಕಾಂಗ್ರೆಸ್‌ ಏನೇ ಆರೋಪ ಮಾಡಿದರೂ ಜನತಾ ಜನಾರ್ದನ ನಮ್ಮ ಪರವಾಗಿದ್ದಾನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಚುನಾವಣೆ ಘೋಷಣೆ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಬಿಜೆಪಿ ತಳಮಟ್ಟದಿಂದಲೇ ಗಟ್ಟಿಯಾಗಿದೆ ಎಂದರು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

4. Karnataka Election: ಚುನಾವಣೆ ಘೋಷಣೆ ಬೆನ್ನಿಗೇ ಗರ್ಜಿಸಿದ ಕಾಂಗ್ರೆಸ್‌: ʼಮತ್ತೆ ಗರ್ಜಿಸಲಿದೆ ಕರ್ನಾಟಕʼ ಅಭಿಯಾನ ಆರಂಭ
ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾದ ದಿನದಿಂದಲೇ ಕಾಂಗ್ರೆಸ್ ಪಕ್ಷ “ಮತ್ತೆ ಗರ್ಜಿಸಲಿದೆ ಕರ್ನಾಟಕ” ಎಂಬ ಹೊಸ ಅಭಿಯಾನ ಆರಂಭಿಸಿದೆ. ಈ ಅಭಿಯಾನಕ್ಕೆ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ಚಾಲನೆ ನೀಡಿ ಲೋಗೋ ಬಿಡುಗಡೆ ಮಾಡಿದ್ದಾರೆ. ಈ ಅಭಿಯಾನವು ಕರ್ನಾಟಕದ ಜನರಿಗೆ ಪಕ್ಷದ ಬದ್ಧತೆಯನ್ನು ಪ್ರದರ್ಶಿಸುವ ಗುರಿಯನ್ನು ಹೊಂದಿದೆ ಮತ್ತು ಎಲ್ಲರಿಗೂ ಉತ್ತಮ ಭವಿಷ್ಯವನ್ನು ಸೃಷ್ಟಿಸುವ ದೂರದೃಷ್ಟಿಯನ್ನು ಹೊಂದಿದೆ ಎಂದು ಎಂ.ಬಿ. ಪಾಟೀಲ್‌ ಹೇಳಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

ಕರ್ನಾಟಕ ವಿಧಾನಸಭೆ ಚುನಾವಣೆಯ ಎಲ್ಲ ಸುದ್ದಿಗಳನ್ನೂ ಓದಲು ಇಲ್ಲಿ ಕ್ಲಿಕ್‌ ಮಾಡಿ.

5. SC ST Reservation: ಮಾರ್ಚ್‌ 30ಕ್ಕೆ ನಡೆಯಲ್ಲ ಬಂಜಾರ ಸಮುದಾಯದ ಪ್ರತಿಭಟನೆ; ನೀತಿ ಸಂಹಿತೆ ಜಾರಿ ಹಿನ್ನೆಲೆ ಮುಷ್ಕರ ವಾಪಸ್‌
ಚುನಾವಣೆ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಗುರುವಾರ (ಮಾ. 30) ನಡೆಯಬೇಕಿದ್ದ ಬಂಜಾರ ಸಮುದಾಯದವರ ಬೃಹತ್ ಪ್ರತಿಭಟನೆಯನ್ನು ವಾಪಸ್‌ ಪಡೆಯಲಾಗಿದೆ. ಅನಿರ್ದಿಷ್ಟಾವಧಿ ಮುಷ್ಕರ ನಡೆಸುವ ತೀರ್ಮಾನವನ್ನು ಹಿಂತೆಗೆದುಕೊಳ್ಳಲಾಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

6. Amritpal Singh: ವಿಡಿಯೊ ಬಿಟ್ಟ ಅಮೃತ್‌ಪಾಲ್‌, ಬಂಧನದ ಯತ್ನ ಸಿಖ್ಖರ ಮೇಲಿನ ದಾಳಿ ಎಂದ ಖಲಿಸ್ತಾನಿ ನಾಯಕ
ಖಲಿಸ್ತಾನಿಗಳ ನಾಯಕ, ಪಂಜಾಬ್‌ನಲ್ಲಿ ಗಲಭೆಗೆ ಕಾರಣವಾಗಿರುವ ಅಮೃತ್‌ಪಾಲ್‌ ಸಿಂಗ್‌ (Amritpal Singh) ಮಾರ್ಚ್‌ 18ರಿಂದ ನಾಪತ್ತೆಯಾಗಿದ್ದಾನೆ. ಈತನ ಬಂಧನಕ್ಕೆ ರಾಜ್ಯದ ಪೊಲೀಸರು ಸತತ ಕಾರ್ಯಾಚರಣೆ ನಡೆಸಿದರೂ ಇದುವರೆಗೆ ಬಂಧನ ಸಾಧ್ಯವಾಗಿಲ್ಲ. ಇದರ ಬೆನ್ನಲ್ಲೇ, ಅಮೃತ್‌ಪಾಲ್ ಸಿಂಗ್‌ ವಿಡಿಯೊ ಬಿಡುಗಡೆ ಮಾಡಿದ್ದು, “ನನ್ನ ಬಂಧನಕ್ಕೆ ನಡೆಸುತ್ತಿರುವ ಕಾರ್ಯಾಚರಣೆಯು ಇಡೀ ಸಿಖ್‌ ಸಮುದಾಯದ ಮೇಲೆ ನಡೆಸುತ್ತಿರುವ ದಾಳಿ” ಎಂದಿದ್ದಾನೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

7. Karnataka Rain: ರಾಜ್ಯದಲ್ಲಿ ಮುಂದಿನ 5 ದಿನ ಗುಡುಗು, ಮಿಂಚು ಸಹಿತ ಮಳೆ ಸಾಧ್ಯತೆ; ಚಾಮರಾಜನಗರ, ಬೆಂಗಳೂರಲ್ಲಿ ತಂಪೆರೆದ ವರುಣ
ಕಳೆದ ಹಲವು ದಿನಗಳಿಂದ ಬಿಡುವು ನೀಡಿದ್ದ ಮಳೆರಾಯ ಮತ್ತೆ ಅಬ್ಬರಿಸಲಿದ್ದಾನೆ. ರಾಜಧಾನಿ ಬೆಂಗಳೂರು ಸೇರಿದಂತೆ ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ ಹಾಗೂ ಚಾಮರಾಜನಗರ, ರಾಮನಗರ, ಕೋಲಾರದಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ (Karnataka Rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

8. UPI transactions : ಯುಪಿಐ ಬಳಕೆ ಗ್ರಾಹಕರಿಗೆ ಸಂಪೂರ್ಣ ಉಚಿತ ಎಂದ ಎನ್‌ಪಿಸಿಐ, ಹಾಗಾದರೆ 1.1% ಶುಲ್ಕ ಯಾರಿಗೆ?
ಬ್ಯಾಂಕ್‌ ಖಾತೆಗೆ ಲಿಂಕ್‌ ಹೊಂದಿರುವ ಯುಪಿಐ ಬಳಕೆಗೆ (UPI transactions) ಸಂಬಂಧಿಸಿ ಗ್ರಾಹಕರು ಮತ್ತು ವ್ಯಾಪಾರಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ. ಇದು ಉಚಿತ ಎಂದು ನ್ಯಾಶನಲ್‌ ಪೇಮೆಂಟ್ಸ್‌ ಕಾರ್ಪೊರೇಷನ್‌ ಆಫ್‌ ಇಂಡಿಯಾ (NPCI) ಬುಧವಾರ ಸ್ಪಷ್ಟೀಕರಣ ನೀಡಿದೆ. ಇದರದೊಂದಿಗೆ ಯುಪಿಐ ಮೂಲಕ ಹಣ ಪಾವತಿಗೆ ಶುಲ್ಕ ( Interchange fee ) ವಿಧಿಸಲಾಗುತ್ತದೆ ಎಂಬ ವದಂತಿಗಳಿಗೆ ತೆರೆ ಎಳೆದಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

9. Rape and murder : ಬೆಂಗಳೂರಿನ ಐಟಿ ಉದ್ಯೋಗಿ ಪ್ರತಿಭಾ ಅತ್ಯಾಚಾರ, ಕೊಲೆ ಪ್ರಕರಣ; ಕ್ಯಾಬ್‌ ಡ್ರೈವರ್‌ಗೆ 30 ವರ್ಷ ಜೈಲು
ಇಡೀ ರಾಜ್ಯವೇ ನಡುಗುವಂತೆ ಮಾಡಿದ, ಐಟಿ ಉದ್ಯೋಗಿಗಳ ವಲಯದಲ್ಲಿ ತಲ್ಲಣವನ್ನು ಸೃಷ್ಟಿಸಿದ್ದ 2005ರ ಐಟಿಯ ಉದ್ಯೋಗಿಯ ಅತ್ಯಾಚಾರ ಮತ್ತು ಕೊಲೆ (Rape and murder) ಪ್ರಕರಣದಲ್ಲಿ ಆರೋಪಿಗೆ 30 ವರ್ಷಗಳ ಜೈಲುವಾಸದ ಶಿಕ್ಷೆಯನ್ನು ನೀಡಲಾಗಿದೆ. ಆರೋಪಿ ಶಿವಕುಮಾರ್‌ ಎಂಬಾತನಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಿದ ಕೋರ್ಟ್‌ 30 ವರ್ಷಗಳ ಕಾಲ ಜೈಲಿನಿಂದ ಹೊರಗೆ ಬಿಡಬಾರದು ಎಂಬ ಷರತ್ತು ವಿಧಿಸಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

10. IPL 2023: ಐಪಿಎಲ್​ನಲ್ಲಿ ಹಲವು ದಾಖಲೆ ಮೇಲೆ ಕಣ್ಣಿಟ್ಟ ವಿರಾಟ್​ ಕೊಹ್ಲಿ
ಬಹುನಿರೀಕ್ಷಿತ 16ನೇ ಆವೃತ್ತಿಯ ಐಪಿಎಲ್​ ಕ್ರಿಕೆಟ್​ ಟೂರ್ನಿ(IPL 2023) ಆರಂಭಕ್ಕೆ ಇನ್ನು ಒಂದು ದಿನ ಮಾತ್ರ ಬಾಕಿ ಉಳಿದಿದೆ. ಈಗಾಗಲೇ ಈ ಬಾರಿ ಯಾವ ತಂಡ ಕಪ್​ ಗೆಲ್ಲಬಹುದು ಎಂಬ ಲೆಕ್ಕಾಚಾರಗಳು ಆರಂಭವಾಗಿದೆ. ಅದರಲ್ಲೂ ಆರ್​ಸಿಬಿ ಅಭಿಮಾನಿಗಳು ಈ ಬಾರಿ ಪಕ್ಕಾ ಕಪ್ ನಮ್ದೇ ಎಂದು ಭವಿಷ್ಯ ನುಡಿಯಲಾರಂಭಿಸಿದ್ದಾರೆ. ಆರ್​ಸಿಬಿ(RCB) ತನ್ನ ಮೊದಲ ಪಂದ್ಯವನ್ನು ಏಪ್ರಿಲ್​ 2 ರಂದು ಮುಂಬೈ ಇಂಡಿಯನ್ಸ್​ ವಿರುದ್ಧ ಆಡುವ ಮೂಲಕ ಅಭಿಯಾನ ಆರಂಭಿಸಲಿದೆ. ಈ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯಲಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

ಮತ್ತಷ್ಟು ಪ್ರಮುಖ ಸುದ್ದಿಗಳಿವು

  1. SC ST Scholarship: ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಶೀಘ್ರವೇ ಬಂಪರ್‌, ಏರಿಕೆ ಆಗಲಿದೆ ವಿದ್ಯಾರ್ಥಿ ವೇತನ
  2. Google: ಗೂಗಲ್‌ಗೆ 1337 ಕೋಟಿ ರೂ. ದಂಡ, 30 ದಿನದಲ್ಲಿ ಪಾವತಿಸಲು ನ್ಯಾಯಮಂಡಳಿ ಆದೇಶ!
  3. Ballary young Mayor : ಬಳ್ಳಾರಿ ಪಾಲಿಕೆಗೆ 21 ವರ್ಷದ ಯುವತಿ ಮೇಯರ್‌, ರಾಜ್ಯದಲ್ಲೇ ಅತಿಕಿರಿಯ ವಯಸ್ಸಿನ ಮಹಾಪೌರರು!
  4. Priyanka Chopra: ಫೇರ್‌ನೆಸ್ ಆ್ಯಡ್‌ಗಳಲ್ಲಿ ನಟಿಸುವುದು ಹಾನಿಕರ ಎಂದು ಪ್ರಿಯಾಂಕಾ ಚೋಪ್ರಾ ಹೇಳಿದ್ದೇಕೆ?
  5. Kabzaa Movie: ಕಬ್ಜ ಒಟಿಟಿ ರಿಲೀಸ್‌ ಯಾವಾಗ? ಕಬ್ಜ 2ಗೆ ತಯಾರಿ ನಡೆದಿದ್ಯಾ?
Exit mobile version