ಕರ್ನಾಟಕ
ವಿಸ್ತಾರ TOP 10 NEWS: ಅಕ್ಕಿಗೆ ಕೊನೆ ಪ್ರಯತ್ನವೂ ವಿಫಲದಿಂದ, ಪ್ರತಿಪಕ್ಷ ಸಭೆಯಲ್ಲಿ ಬೈಸಿಕೊಂಡ ಕಾಂಗ್ರೆಸ್‌ವರೆಗಿನ ಪ್ರಮುಖ ಸುದ್ದಿಗಳಿವು
ದೇಶ, ವಿದೇಶ, ರಾಜ್ಯದಲ್ಲಿ ದಿನಪೂರ್ತಿ ನಡೆದ ಘಟನಾವಳಿಗಳಲ್ಲಿ ಆಯ್ದ ಪ್ರಮುಖ ಸುದ್ದಿಗಳು ವಿಸ್ತಾರ TOP 10 NEWS ನಲ್ಲಿ.
1. Anna Bhagya: ಕೇಂದ್ರ ಸರ್ಕಾರ ಅಕ್ಕಿ ಕೋಡೋಲ್ಲ ಎಂದಿದೆ: ಗೋಯೆಲ್ ಭೇಟಿ ಬಳಿಕ ಹತಾಶೆಗೊಂಡ ಮುನಿಯಪ್ಪ
ಕಾಂಗ್ರೆಸ್ ಸರ್ಕಾರದ ಅನ್ನಭಾಗ್ಯ (Anna Bhagya) ಯೋಜನೆಗೆ ಅಕ್ಕಿ ಒದಗಿಸುವ ಟಾಸ್ಕ್‌ನಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ಮತ್ತೊಂದು ಹಿನ್ನಡೆ ಅನುಭವಿಸಿದ್ದಾರೆ. ಕೇಂದ್ರ ಆಹಾರ ಸಚಿವ ಪೀಯೂಷ್ ಗೋಯೆಲ್ ಅವರನ್ನು ಕೊನೆಗೂ ಭೇಟಿಯಾಗಿ ಮಾತುಕತೆ ನಡೆಸಿದರಾದರೂ, ಕೇಂದ್ರ ಸರ್ಕಾರ ಅಕ್ಕಿ ಕೊಡಲು ಆಗುವುದಿಲ್ಲ ಎಂದು ಹೇಳಿದ್ದಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
2. Congress Guarantee: ಗೃಹಜ್ಯೋತಿ ನೋಂದಣಿಗೆ 20 ರೂ. ಮಾತ್ರ: ಯಾರಾದರೂ ಹೆಚ್ಚು ಕೇಳಿದರೆ ಈ ನಂಬರ್‌ಗೆ ಕಾಲ್ ಮಾಡಿ
ಗೃಹ ಜ್ಯೋತಿ ನೋಂದಣಿಗೆ ಗ್ರಾಮ ಒನ್, ಕರ್ನಾಟಕ ಒನ್ ಹಾಗು ಬೆಂಗಳೂರು ಒನ್ ಕೇಂದ್ರಗಳಲ್ಲಿ ಸಾರ್ವಜನಿಕರಿಂದ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ದೂರುಗಳು ಕೇಳಿ ಬಂದಿದ್ದು, ಹಣ ವಸೂಲಿ ಮಾಡುವ ಕೇಂದ್ರಗಳ ವಿರುದ್ಧ ಕಠಿನ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
3. Viral video: ನಾನೊಬ್ಳೇ ಎಷ್ಟೂಂತ ಮಾಡ್ಲಿ, ಆಗಲ್ಲ ನಂಗೆ; ಆಧಾರ್ ಕೇಂದ್ರದ ಒತ್ತಡಕ್ಕೆ ಮಹಿಳಾ ಸಿಬ್ಬಂದಿ ಕಣ್ಣೀರು
ರಾಜ್ಯದ ಕಾಂಗ್ರೆಸ್ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಎಲ್ಲ ಗ್ಯಾರಂಟಿ ಯೋಜನೆಗಳಿಗೆ (Congress Guarantee) ಆಧಾರ್ ಕಾರ್ಡ್ ಕಡ್ಡಾಯವಾಗಿದೆ (Aadhar Updates) ಮತ್ತು ಅದಕ್ಕೆ ಸಂಬಂಧಿಸಿದ ಲಿಂಕ್‌ಗಳನ್ನು ಮಾಡಿಸಿರಬೇಕಾಗುತ್ತದೆ. ಹೀಗಾಗಿ ಪ್ರತಿಯೊಬ್ಬರೂ ಆಧಾರ್ ಕೇಂದ್ರಗಳ (Aadhar centre) ಕಡೆಗೆ ದಾಂಗುಡಿ ಇಡುತ್ತಿದ್ದಾರೆ. ಇದರಿಂದಾಗಿ ಆಧಾರ್ ಕೇಂದ್ರಗಳಲ್ಲಿ ಕೆಲಸದ ಒತ್ತಡ ಹೆಚ್ಚಿದ್ದು, ನಿಭಾಯಿಸಲು ಸಾಧ್ಯವಾಗದೆ ಅಲ್ಲಿನ ಸಿಬ್ಬಂದಿ (woman staff) ಕಣ್ಣೀರು ಹಾಕುವ ಪರಿಸ್ಥಿತಿ ಬಂದಿದೆ. ರಾಯಚೂರು ನಗರದ ಅಂಚೆ ಕಚೇರಿಯಲ್ಲಿ (Raichur post office) ವಸ್ತುಶಃ ಆಧಾರ್ ಕೇಂದ್ರ ಮಹಿಳಾ ಸಿಬ್ಬಂದಿ ಕಣ್ಣೀರು ಹಾಕಿದ್ದಾರೆ. ಈ ದೃಶ್ಯ ವೈರಲ್ ಆಗಿದೆ (viral video) ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
4. PM Modi US Visit: ‘ಭಾರತವು ಪ್ರಜಾಪ್ರಭುತ್ವದ ತಾಯಿ’ ಎಂದ ಮೋದಿ; ಯುಎಸ್ ಜಂಟಿ ಸದನದಲ್ಲಿ 2ನೇ ಬಾರಿ ಐತಿಹಾಸಿಕ ಭಾಷಣ
ಪ್ರಜಾಪ್ರಭುತ್ವವು ನಮ್ಮ ಉಭಯ ದೇಶಗಳ ಪವಿತ್ರ ಬಾಂಧವ್ಯದಲ್ಲಿ ಒಂದಾಗಿದೆ. ಸಮಾನತೆ ಮತ್ತು ಘನತೆಯನ್ನು ಬೆಂಬಲಿಸಲು ಪ್ರಜಾಪ್ರಭುತ್ವವೊಂದೇ ದಾರಿ. ಅನಾದಿ ಕಾಲದಿಂದಲೂ ಭಾರತವು ಪ್ರಜಾಪ್ರಭುತ್ವದ ತಾಯಿಯಾಗಿದೆ ಎಂದು ಅಮೆರಿಕ ಭೇಟಿಯಲ್ಲಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Modi US Visit) ಉದ್ಘೋಷಿಸಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
ಹೆಚ್ಚಿನ ಓದಿಗಾಗಿ: PM Modi US Visit: ʼಸಮೋಸಾ ಕಾಕಸ್…ʼ: ಅಮೆರಿಕದ ಜಂಟಿ ಸದನ ಎದ್ದು ನಿಂತು ಚಪ್ಪಾಳೆ ತಟ್ಟುವಂತೆ ಮಾಡಿದ ಮೋದಿ ಮಾತು!
5. Opposition Meet: ಪ್ರತಿಪಕ್ಷಗಳ ಸಭೆಯಲ್ಲಿ ಕಾಂಗ್ರೆಸ್ಗೆ ಬೈದ ದೀದಿ; ಮೂಡದ ಒಮ್ಮತ, ಶೀಘ್ರವೇ ಮತ್ತೆ ಸಭೆ
2024ರ ಲೋಕಸಭೆ ಚುನಾವಣೆ (2024 Lok Sabha Election)ಯಲ್ಲಿ ಬಿಜೆಪಿಯನ್ನು ಸೋಲಿಸಲೇಬೇಕು ಎಂಬ ಹಠತೊಟ್ಟು ದೇಶದ ಪ್ರಮುಖ ವಿಪಕ್ಷಗಳೆಲ್ಲ ಒಂದಾಗಿ ಇಂದು ಪಾಟ್ನಾದಲ್ಲಿ ಸಭೆ (Opposition Meet) ನಡೆಸಿವೆ. ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್, ಆಪ್, ಸಮಾಜವಾದಿ ಪಕ್ಷ, ಎನ್ಸಿಪಿ, ಶಿವಸೇನೆ ಉದ್ಧವಠಾಕ್ರೆ ಬಣ, ಜೆಡಿಯು, ಆರ್ಜೆಡಿ..ಹೀಗೆ ಒಟ್ಟು 15 ಪಕ್ಷಗಳ ಪ್ರಮುಖ ನಾಯಕರು ಇಂದಿನ ಸಭೆಯಲ್ಲಿ ಪಾಲ್ಗೊಂಡರು. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಪಾಟ್ನಾ ನಿವಾಸದಲ್ಲಿ ಈ ಸಭೆ ಆಯೋಜನೆಗೊಂಡಿತ್ತು. ಮಲ್ಲಿಕಾರ್ಜುನ್ ಖರ್ಗೆ, ರಾಹುಲ್ ಗಾಂಧಿ, ಮಮತಾ ಬ್ಯಾನರ್ಜಿ, ಅರವಿಂದ್ ಕೇಜ್ರಿವಾಲ್, ಒಮರ್ ಅಬ್ದುಲ್ಲಾ, ಮೆಹಬೂಬಾ ಮುಫ್ತಿ, ಶರದ್ ಪವಾರ್, ಉದ್ಧವ್ ಠಾಕ್ರೆ ಸೇರಿ ದಿಗ್ಗಜರೆಲ್ಲ ಸಭೆಯಲ್ಲಿ ಪಾಲ್ಗೊಂಡು ಬಿಜೆಪಿ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದರು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
6. Weather report: ನಾಳೆ ಈ 20 ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ; ಉತ್ತರ ಕನ್ನಡ ಜಿಲ್ಲೆಗೆ ಹೈ ಅಲರ್ಟ್
ಕರ್ನಾಟಕದ ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ಮಲೆನಾಡು, ದಕ್ಷಿಣ ಒಳನಾಡಿನಲ್ಲೂ ವ್ಯಾಪಕ ಮಳೆಯಾಗುವ (Rain News) ಸಾಧ್ಯತೆ ಇದೆ. ಮಲೆನಾಡಿನ ಜಿಲ್ಲೆಗಳಾದ ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಕೊಡಗಿನಲ್ಲೂ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲೂ ಅಬ್ಬರ (Weather report) ಮಳೆಯಾಗಲಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
7. ಕಾಶ್ಮೀರದಲ್ಲಿ ಭರ್ಜರಿ ಬೇಟೆ; ಒಳನುಸುಳುತ್ತಿದ್ದ ನಾಲ್ವರು ಭಯೋತ್ಪಾದಕರ ಹತ್ಯೆ
ಜಮ್ಮು-ಕಾಶ್ಮೀರ ಕುಪ್ವಾರಾ ಜಿಲ್ಲೆ (Kupwara Encounter)ಯಲ್ಲಿ ಭಾರತೀಯ ಸೇನೆ ಯೋಧರು ಮತ್ತೊಂದು ಭರ್ಜರಿ ಬೇಟೆಯಾಡಿದ್ದಾರೆ. ಪಾಕ್ ಆಕ್ರಮಿತ ಕಾಶ್ಮೀರ (POK)ದಿಂದ ಭಾರತಕ್ಕೆ ನುಸುಳಲು ಪ್ರಯತ್ನ ಪಟ್ಟ ನಾಲ್ವರು ಭಯೋತ್ಪಾದಕರನ್ನು ಭಾರತೀಯ ಸೇನೆ ಮತ್ತು ಜಮ್ಮು-ಕಾಶ್ಮೀರ ಪೊಲೀಸರು ಹೊಡೆದುರುಳಿಸಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
8. MLA training: ಶಾಸಕರ ತರಬೇತಿಗೆ ಗಣ್ಯರ ಆಹ್ವಾನದ ಬಗ್ಗೆ ಆಕ್ಷೇಪ; ತಿರುಗೇಟು ನೀಡಿದ ಸ್ಪೀಕರ್ ಖಾದರ್
ರಾಜ್ಯ ವಿಧಾನಸಭೆಗೆ (Karnataka Assembly) ಆಯ್ಕೆಯಾದ 70 ಮಂದಿ ನೂತನ ಶಾಸಕರಿಗಾಗಿ ವಿಧಾನಸಭಾ ಸಚಿವಾಲಯದಿಂದ (Assembly secretariat) ಆಯೋಜನೆಯಾಗಿರುವ ಮೂರು ದಿನಗಳ ತರಬೇತಿ ಶಿಬಿರಕ್ಕೆ (MLA training) ಆಹ್ವಾನಿಸಿರುವ ವ್ಯಕ್ತಿಗಳ ವಿಚಾರದಲ್ಲಿ ಎದ್ದಿರುವ ವಿವಾದಕ್ಕೆ ಸಂಬಂಧಿಸಿ ಸ್ಪೀಕರ್ ಯು.ಟಿ. ಖಾದರ್ (U.T Khader) ಅವರು ತಮ್ಮ ಸ್ಪಷ್ಟ ಅಭಿಪ್ರಾಯವನ್ನು ತಿಳಿಸಿದ್ದಾರೆ. ಯಾವುದೇ ವಿಚಾರದ ಬಗ್ಗೆ ಈಗಲೇ ಪೂರ್ವಗ್ರಹಪೀಡಿತ ಚರ್ಚೆ ಸರಿಯಲ್ಲ ಎಂದು ಟೀಕಾಕಾರರಿಗೆ ಉತ್ತರಿಸಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
9. ಮೊಗಸಾಲೆ ಅಂಕಣ: ಆ ಕರಾಳ ದಿನಗಳ ಮರೆತೇನೆಂದರೆ ಮರೆಯಲಿ ಹ್ಯಾಂಗ?
ಅಲಹಾಬಾದ್ ಹೈಕೋರ್ಟ್ ನೀಡಿದ ತೀರ್ಪೊಂದು ಅಂತಿಮವಾಗಿ ದೇಶವನ್ನು ಬಯಲು ಬಂದೀಖಾನೆಯನ್ನಾಗಿಸಲು ಅಂದಿನ ಪ್ರಧಾನಿ ಇಂದಿರಾ ಗಾಂಧಿ (Indira Gandhi) ಅವರಿಗೆ ನೆಪವಾಗಿದ್ದು ಕರಾಳ ಅಧ್ಯಾಯದ ಮೊದಲ ಪುಟ. ನಾಳೆ 24ಕ್ಕೆ ತುರ್ತು ಪರಿಸ್ಥಿತಿ (Emergency) ಎಂಬ ಕರಾಳ ಶಾಸನ ಭಾರತದ ಮೇಲೆ ವಕ್ಕರಿಸಿ 49 ವರ್ಷ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
10. INDvsWI 2023 : ವಿಂಡೀಸ್ ಪ್ರವಾಸಕ್ಕೆ ಟೆಸ್ಟ್, ಏಕದಿನ ತಂಡ ಪ್ರಕಟ; ಯಾರಿಗೆಲ್ಲ ಸಿಕ್ತು ಚಾನ್ಸ್?
ವೆಸ್ಟ್ ಇಂಡೀಸ್ (INDvsWI 2023) ಪ್ರವಾಸಕ್ಕಾಗಿ ಭಾರತದ ಟೆಸ್ಟ್ ಮತ್ತು ಏಕದಿನ ತಂಡಗಳನ್ನು ಬಿಸಿಸಿಐ ಶುಕ್ರವಾರ ಪ್ರಕಟಿಸಿದೆ. ಡಬ್ಲ್ಯುಟಿಸಿ ಫೈನಲ್‌ನಲ್ಲಿ ನಿರಾಶಾದಾಯಕ ಪ್ರದರ್ಶನದ ನಂತರ ಚೇತೇಶ್ವರ ಪೂಜಾರ ಮತ್ತು ಉಮೇಶ್ ಯಾದವ್ ಅವರನ್ನು ಟೆಸ್ಟ್ ತಂಡದಿಂದ ಕೈಬಿಡಲಾಗಿದೆ. ಒಂದು ವರ್ಷದ ಹಿಂದೆ ಟೆಸ್ಟ್ ತಂಡಕ್ಕೆ ಮರಳಿದ್ದ ಪೂಜಾರ ಅವಕಾಶವನ್ನು ಉತ್ತಮವಾಗಿ ಬಳಸಿಕೊಂಡಿರಲಿಲ್ಲ. ಕೊಟ್ಟ ಕೊನೇ ಅವಕಾಶ ಎಂಬಂತೆ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್ ಫೈನಲ್‌ನಲ್ಲೂ ನೀರಸ ಪ್ರದರ್ಶನ ನೀಡಿದ್ದರು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
ಕರ್ನಾಟಕ
CM Siddaramaiah: CWRC ಆದೇಶಕ್ಕೆ ಆಕ್ಷೇಪಣೆ ಸಲ್ಲಿಸಲು ನಿರ್ಧಾರ ಎಂದ ಸಿದ್ದರಾಮಯ್ಯ
CM Siddaramaiah: ಮತ್ತೆ 18 ದಿನ 3000 ಕ್ಯುಸೆಕ್ ನೀರು ಬಿಡಬೇಕು ಎಂಬ ಆದೇಶವನ್ನು ಪ್ರಶ್ನೆ ಮಾಡಲಾಗುವುದು ಎಂದಿದ್ದಾರೆ ಸಿಎಂ ಸಿದ್ದರಾಮಯ್ಯ.
ಚಾಮರಾಜನಗರ (ಹನೂರು): ಕಾವೇರಿ ನೀರು ನಿಯಂತ್ರಣ ಸಮಿತಿಯು (Cauvery water regulation Committee) ತಮಿಳುನಾಡಿಗೆ ಪ್ರತಿದಿನ 3000 ಕ್ಯೂಸೆಕ್ ನೀರನ್ನು (3000 Cusec water) ಹರಿಸಲು ಆದೇಶಿಸಿದೆ. ಈ ಬಗ್ಗೆ ಕಾನೂನು ತಂಡದೊಂದಿಗೆ ಚರ್ಚಿಸಿದ್ದು ಇದಕ್ಕೆ ಆಕ್ಷೇಪಣೆ ಸಲ್ಲಿಸಲು ಕಾನೂನು ತಂಡ ಸಲಹೆ ನೀಡಿದೆ. ನೀರು ಬಿಡಲು ನಮ್ಮ ಬಳಿ ನೀರಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದರು. ಅವರು ಶ್ರೀ ಮಲೈ ಮಹದೇಶ್ವರ ಬೆಟ್ಟದ (Male mahadeshwara betta) ಬಳಿ ಮಾಧ್ಯಮದವರಿಗೆ ಬುಧವಾರ ಪ್ರತಿಕ್ರಿಯೆ ನೀಡಿದರು.
ಕಾವೇರಿ ನೀರು ನಿಯಂತ್ರಣ ಸಮಿತಿಯು ಮಂಗಳವಾರ ನೀಡಿದ ಆದೇಶದಲ್ಲಿ ಸೆ. 28ರಿಂದ ಅಕ್ಟೋಬರ್ 15ರವರೆಗೆ ಪ್ರತಿದಿನವೂ 3000 ಕ್ಯೂಸೆಕ್ ನೀರು ಬಿಡಲು ಆದೇಶ ನೀಡಿತ್ತು. ಇದನ್ನು ಪ್ರಾಧಿಕಾರದ ಮುಂದೆ ಪ್ರಶ್ನಿಸುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ. ಆದರೆ, ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನೆ ಮಾಡಬೇಕು ಎಂದು ಪ್ರತಿಪಕ್ಷಗಳು ಆಗ್ರಹಿಸಿವೆ.
ಸಿಎಂ ಮತ್ತು ಡಿಸಿಎಂ ಇಬ್ಬರೂ ನಮ್ಮಲ್ಲಿ ನೀರು ಇಲ್ಲ ಎಂದು ಹೇಳುತ್ತಲೇ ಪ್ರಾಧಿಕಾರ ಹೇಳಿದಷ್ಟು ನೀರು ಬಿಡುಗಡೆ ಮಾಡಿದ್ದೇ ಸಮಿತಿಗೆ ಸರಾಗ ಆದೇಶ ನೀಡಲು ಕಾರಣವಾಗಿದೆ ಎಂದು ಆರೋಪಿಸಲಾಗಿದೆ. ಇದೀಗ ಸೆ. 29ರಂದು ಇದರ ವಿರುದ್ಧ ರಾಜ್ಯವ್ಯಾಪಿ ಬಂದ್‌ಗೆ ಕರೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಹೇಳಿಕೆ ಮಹತ್ವ ಪಡೆದುಕೊಂಡಿದೆ.
ಮಳೆಗಾಗಿ ಮಹದೇಶ್ವರನಲ್ಲಿ ಪ್ರಾರ್ಥನೆ
ಮಳೆ ಕೈಕೊಟ್ಟು 195 ತಾಲ್ಲೂಕು ಗಳನ್ನು ಬರಪೀಡಿತ ಎಂದು ಘೋಷಿಸಿದ್ದು, ಮಹದೇಶ್ವರನಲ್ಲಿ ಮಳೆಗಾಗಿ, ರಾಜ್ಯದ ಜನರಿಗೆ, ರೈತರಿಗೆ ಸೌಖ್ಯವಾಗಲಿ ಎಂದು ಪ್ರಾರ್ಥಿಸಿರುವುದಾಗಿ ಸಿದ್ದರಾಮಯ್ಯ ತಿಳಿಸಿದರು.
ಮೂಢನಂಬಿಕೆ, ಮೌಢ್ಯ, ಕಂದಾಚಾರದಲ್ಲಿ ನಂಬಿಕೆ ಇಲ್ಲ
ಮೂಢನಂಬಿಕೆ, ಮೌಢ್ಯ, ಕಂದಾಚಾರದಲ್ಲಿ ನಂಬಿಕೆ ಇಲ್ಲ. ಅದಕ್ಕಾಗಿಯೇ ಹಿಂದೆ ಮುಖ್ಯಮಂತ್ರಿ ಯಾದ ಕೂಡಲೇ ಚಾಮರಾಜನಗರಕ್ಕೆ ಭೇಟಿ ನೀಡಿದೆ. ಸುಮಾರು 12 ಬಾರಿ ಭೇಟಿ ನೀಡಿದ್ದು, 5 ವರ್ಷ ಗಟ್ಟಿಯಾಗಿ ಇದ್ದೆ. ಚಾಮರಾಜನಗರ ಕ್ಕೆ ಭೇಟಿ ನೀಡಿದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ಮೌಢ್ಯ ಈಗ ಹೋಗಿದೆ ಎಂದರು.
ಬಂದ್‌ನಿಂದ ಯಾರಿಗೂ ತೊಂದರೆಯಾಗಬಾರದು
ಸೆಪ್ಟೆಂಬರ್ 29 ರಂದು ಕರ್ನಾಟಕ ಬಂದ್ ಗೆ ಕರೆನೀಡಿರುವ ಬಗ್ಗೆ ಮಾತನಾಡಿ, ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ಗೆ ಅವಕಾಶವಿದೆ. ಆದರೆ ಇತರರಿಗೆ ತೊಂದರೆಯಾಗಬಾರದು ಎಂದು ಸುಪ್ರೀಂಕೋರ್ಟ್ ಆದೇಶಿಸಿದೆ. ನಾವು ಈ ಆದೇಶ ಗಮನದಲ್ಲಿಟ್ಟುಕೊಂಡು ಕಾರ್ಯನಿರ್ವಹಿಸುತ್ತೇವೆ ಎಂದರು.
ಇದನ್ನೂ ಓದಿ: CM Siddaramaiah: ಕೃಷಿಗೆ ಸಾಲ ಮಾಡಿ ಮದುವೆ ಛಮಾಡುವುದನ್ನು ನಿಲ್ಲಿಸಿ: ಸಿಎಂ ಸಿದ್ದರಾಮಯ್ಯ ಮನವಿ
ಕರ್ನಾಟಕ
BJP JDS alliance : ವಿಜಯದಶಮಿ ನಂತರ ಜೆಡಿಎಸ್ ಸೀಟು ಹಂಚಿಕೆ ಅಂತಿಮ ಮಾತುಕತೆ!
BJP JDS alliance : ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜತೆಗೆ ಸೀಟು ಹಂಚಿಕೆ ಯಾವಾಗ ಎಂಬ ಬಗ್ಗೆ ಎಚ್.ಡಿ. ಕುಮಾರಸ್ವಾಮಿ ಮಾಹಿತಿ ನೀಡಿದ್ದಾರೆ. ವಿಜಯದಶಮಿ ನಂತರ ಈ ಬಗ್ಗೆ ಬಿಜೆಪಿ ವರಿಷ್ಠರೊಂದಿಗೆ ಚರ್ಚೆ ನಡೆಸುವುದಾಗಿ ಹೇಳಿಕೆ ನೀಡಿದ್ದಾರೆ.
ಬೆಂಗಳೂರು: ಮುಂದಿನ ಲೋಕಸಭಾ ಚುನಾವಣೆ (Lok Sabha Election 2024) ಸಂಬಂಧ ಬಿಜೆಪಿ ಜತೆ ಕೈಜೋಡಿಸಿರುವ ಜೆಡಿಎಸ್ ರಾಜ್ಯದಲ್ಲಿ ಹಲವಾರು ರಾಜಕೀಯ ತಂತ್ರಗಳನ್ನು (Political Strategy) ಹೆಣೆಯುತ್ತಿದೆ. ಈ ಸಂಬಂಧ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ (Former Prime Minister and JDS supremo HD DeveGowda) ಅವರು ಬುಧವಾರ (ಸೆಪ್ಟೆಂಬರ್ 27) ಸುದ್ದಿಗೋಷ್ಠಿ ನಡೆಸಿ ತಾವು ಗೃಹ ಸಚಿವ ಅಮಿತ್ ಶಾ (Home Minister Amit Shah) ಅವರ ಜತೆ ಮೈತ್ರಿ (BJP JDS alliance) ಕುರಿತಾಗಿ ಮೊದಲು ಚರ್ಚೆ ನಡೆಸಿದ್ದಾಗಿ ಹೇಳಿದ್ದಾರೆ. ಆದರೆ, ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ಬಳಿ ಈ ಬಗ್ಗೆ ಮಾತನಾಡಿಲ್ಲ ಎಂದು ಹೇಳಿದ್ದಾರೆ. ಇದೇ ವೇಳೆ ಸೀಟು ಹಂಚಿಕೆ ಬಗ್ಗೆ ಪ್ರಶ್ನೆ ಕೇಳಿದಾಗ ವಿಜಯದಶಮಿ ಹಬ್ಬದ (Vijayadashami Festival) ಬಳಿಕ ಬಿಜೆಪಿಯೊಂದಿಗೆ ಈ ಬಗ್ಗೆ ಮಾತುಕತೆ ನಡೆಸಲಾಗುವುದು ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಸ್ಪಷ್ಟಪಡಿಸಿದ್ದಾರೆ. ಇದರ ಜತೆಗೆ ಆ ಸನ್ನಿವೇಶ ಬಂದಾಗ ಚರ್ಚೆ ಮಾಡುತ್ತೇವೆ ಎಂದು ದೇವೇಗೌಡರು ಹೇಳಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಚ್.ಡಿ. ಕುಮಾರಸ್ವಾಮಿ ಅವರು, ಮೈತ್ರಿ ಸೀಟು ಹಂಚಿಕೆ ಸಂಬಂಧ ವಿಜಯದಶಮಿ ಮುಗಿದ ಬಳಿಕ ಬಿಜೆಪಿ ವರಿಷ್ಠರ ಜತೆ ಮಾತುಕತೆ ನಡೆಸುವುದಾಗಿ ಹೇಳಿದ್ದಾರೆ. ಅದಕ್ಕೆ ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡ ಸಹ ಧನಿಗೂಡಿಸಿದ್ದು, ಆ ಸನ್ನಿವೇಶ ಬರಲಿ, ಆಗ ಚರ್ಚೆ ಮಾಡುತ್ತೇವೆ ಎಂದು ಸೂಚ್ಯವಾಗಿ ಉತ್ತರಿಸಿದ್ದಾರೆ.
ಮೈತ್ರಿಕೂಟ ಸೇರಿದ್ದಷ್ಟೇ
ಈಚೆಗೆ ನವದೆಹಲಿಗೆ ಎಚ್.ಡಿ. ಕುಮಾರಸ್ವಾಮಿ ಅವರು ಭೇಟಿ ನೀಡಿದ್ದಾಗ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಜತೆ ಪ್ರಾಥಮಿಕ ಹಂತದ ಮಾತುಕತೆಯನ್ನು ನಡೆಸಿದ್ದರು. ಇದರ ಭಾಗವಾಗಿ ಅಂದೇ ಬಿಜೆಪಿ – ಜೆಡಿಎಸ್ ಮೈತ್ರಿ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಲಾಗಿತ್ತು. ಎನ್‌ಡಿಎ ಮೈತ್ರಿಕೂಟವನ್ನು ಜೆಡಿಎಸ್ ಸೇರಿದೆ ಎಂದು ಅಧಿಕೃತವಾಗಿ ಪ್ರಕಟಿಸಲಾಗಿತ್ತು. ಆದರೆ, ಇದರ ನಂತರ ಸೀಟು ಹಂಚಿಕೆ ಸಂಬಂಧ ಯಾವುದೇ ರೀತಿಯ ಅಂತಿಮ ಹಂತದ ಚರ್ಚೆ ಆಗಿಲ್ಲ ಎಂದು ಹೇಳಲಾಗಿದೆ.
ಐದು ಕ್ಷೇತ್ರ ಕೇಳಿರುವ ಜೆಡಿಎಸ್
ಮೂಲಗಳ ಪ್ರಕಾರ ಜೆಡಿಎಸ್ ಒಟ್ಟು ಐದು ಲೋಕಸಭಾ ಕ್ಷೇತ್ರಗಳಿಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಉತ್ತರ ಕರ್ನಾಟಕ ಭಾಗದಲ್ಲಿ ರಾಯಚೂರು ಸೇರಿದಂತೆ ಇತ್ತ ಮಂಡ್ಯ, ಹಾಸನ, ಕೋಲಾರ ಹಾಗೂ ಬೆಂಗಳೂರು ಗ್ರಾಮಾಂತರ ಕ್ಷೇತ್ರಗಳನ್ನು ಬಿಟ್ಟುಕೊಡುವಂತೆ ಕೇಳಿತ್ತು. ಆದರೆ, ಈ ಸಂಬಂಧ ಬಿಜೆಪಿ ನಾಯಕರಲ್ಲಿ ಒಮ್ಮತ ಮೂಡಿಲ್ಲ.
ಇದನ್ನೂ ಓದಿ: BJP JDS alliance : ಜೆಡಿಎಸ್‌ಗೆ ಕಾಂಗ್ರೆಸ್ ಮಾಡಿದ ಮೋಸದ ಬಗ್ಗೆ 100 ಕಾರಣ ಹೇಳುವೆ: ಗುಡುಗಿದ ದೇವೇಗೌಡ
ಬಿಜೆಪಿ ನಾಯಕರ ವಿರೋಧ
ಜೆಡಿಎಸ್‌ಗೆ ಯಾವುದೇ ಕಾರಣಕ್ಕೂ ಐದು ಸೀಟನ್ನು ಬಿಟ್ಟುಕೊಡುವುದು ಬೇಡ. ಮೂರು ಕ್ಷೇತ್ರವನ್ನು ಬಿಟ್ಟುಕೊಟ್ಟರೆ ಸಾಕು. ಉಳಿದ ಕಡೆ ಅವರಿಗೆ ಕೊಟ್ಟರೆ ಸೋಲು ನಿಶ್ಚಿತ. ಇದು ಬಿಜೆಪಿಗೆ ನಷ್ಟವನ್ನುಂಟು ಮಾಡುತ್ತದೆ ಎಂದು ರಾಜ್ಯದ ಕೆಲವು ನಾಯಕರು ಈಗಾಗಲೇ ವರದಿ ಒಪ್ಪಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ ವಿಜಯ ದಶಮಿ ನಂತರ ನಡೆಯುವ ಮಾತುಕತೆ ಕುತೂಹಲ ಮೂಡಿಸಿದೆ.
ಕರ್ನಾಟಕ
Murder Case : ಕುಡಿದ ಮತ್ತಿನಲ್ಲಿ ಮೂತ್ರ ಸಿಡಿಸಿದ; ಪ್ರಶ್ನೆ ಮಾಡಿದ ವ್ಯಾಪಾರಿಯ ಮನೆಗೆ ನುಗ್ಗಿ ಕೊಂದ ಕಿರಾತಕ!
Murder Case: ತನ್ನ ಮೇಲೆ ಮೂತ್ರ ಮಾಡಿದ್ದನ್ನು ಪ್ರಶ್ನೆ ಮಾಡಿದ್ದಕ್ಕೆ ಧೂರ್ತನೊಬ್ಬ ಕೊಲೆಯನ್ನೇ ಮಾಡಿದ್ದಾನೆ. ಅದೂ ಆತನ ಮನೆಗೆ ನುಗ್ಗಿ. ಒಬ್ಬ ಸಜ್ಜನನ ಕೊಲೆ ಗೌನಿಪಲ್ಲಿಯ ಜನರ ಮನ ಕಲಕಿದೆ.
ಕೋಲಾರ: ಕುಡಿತದ ಮತ್ತು ಹಾಗೂ ದುರಂಹಕಾರ ಸೇರಿಕೊಂಡರೆ ಒಬ್ಬ ಮನುಷ್ಯ ಅದೆಷ್ಟು ಕ್ರೂರಿಯಾಗಬಲ್ಲ ಎನ್ನುವುದಕ್ಕೆ ಇಲ್ಲೊಂದು ತಾಜಾ ಉದಾಹರಣೆ ಇದೆ. ಕುಡಿತದ ಮತ್ತಿನಲ್ಲಿದ್ದ (Alcoholic) ಆತ ಮೂತ್ರ (Urination) ಮಾಡುವಾಗ ಇನ್ನೊಬ್ಬನ ಮೇಲೆ ಸಿಡಿಸಿದ. ಅದನ್ನು ಪ್ರಶ್ನೆ ಮಾಡಿದ್ದಕ್ಕೆ ಆತನ ಮೇಲೆ ಹಲ್ಲೆ ಮಾಡಿದ್ದು ಮಾತ್ರವಲ್ಲ, ಮನೆಗೇ ನುಗ್ಗಿ ಕೊಲೆ (Murder Case) ಮಾಡಿದ್ದಾನೆ.
ಇಂಥಹುದೊಂದು ಭಯಾನಕ ಘಟನೆ ನಡೆದಿರುವುದು ಕೋಲಾರ ಜಿಲ್ಲೆಯ (Kolara News) ಶ್ರೀನಿವಾಸಪುರ ತಾಲ್ಲೂಕಿನ ಗೌನಿಪಲ್ಲಿ ಗ್ರಾಮದಲ್ಲಿ. ಮಂಗಳವಾರ ಸಂಜೆ ಇಬ್ಬರು ವ್ಯಕ್ತಿಗಳ ನಡುವಿನ ಒಂದು ಕ್ಷುಲ್ಲಕ ಜಗಳ ಸಾವಿನಲ್ಲಿ ಅಂತ್ಯಗೊಂಡಿದೆ.
ಗೌನಿಪಲ್ಲಿ ತರಕಾರಿ ವ್ಯಾಪಾರ ಮಾಡುತ್ತಾ ಎಲ್ಲರ ಜತೆ ಒಳ್ಳೆಯತನದಿಂದ ಬೆರೆಯುತ್ತಾ ಜನಮನ್ನಣೆ ಪಡೆದಿದ್ದ ಸಂಸಾವಂದಿಗ ವೆಂಕಟರಾಯಪ್ಪ ಅವರೇ ಪ್ರಾಣ ಕಳೆದುಕೊಂಡ ದುರ್ದೈವಿ. ಅವರಿಗೆ ವಯಸ್ಸು 55. ಅವರ ಮೇಲೆ ಮೂತ್ರ ಸಿಡಿಸಿದ್ದಲ್ಲದೆ ಪ್ರಶ್ನೆ ಮಾಡಿದ್ದಕ್ಕೆ ಕೊಂದೇ ಹಾಕಿದವನ ಹೆಸರು ಶಂಕರಪ್ಪ. ಸುಮಾರು 45 ವರ್ಷದ ಇವನು ಸದಾ ಕುಡಿದ ಮತ್ತಿನಲ್ಲೇ ಇರುತ್ತಾನೆ, ಸದಾ ಜಗಳ, ಹೊಡೆದಾಟಗಳೇ ಇವನ ಐಡೆಂಟಿಟಿ ಎನ್ನುತ್ತಾರೆ ಗೌನಿಪಲ್ಲಿ ಜನ.
ಮಂಗಳವಾರ ಸಂಜೆ ಏನಾಯಿತು?
ಮಂಗಳವಾರ ಸಂಜೆಯ ಹೊತ್ತಿಗೆ ವೆಂಕಟರಾಯಪ್ಪ ಅವರು ತಮ್ಮ ವ್ಯಾಪಾರ ನಡುವೆ ಮೂತ್ರ ಬರುತ್ತದೆ ಎಂದು ಸಂತೆ ಮೈದಾನದ ಕೊನೆಗೆ ಹೋದರು. ಆಗ ಅವರ ಹಿಂದೆಯೇ ಶಂಕರಪ್ಪ ಕೂಡಾ ಬಂದಿದ್ದ. ಅವರಿಬ್ಬರೂ ಹತ್ತಿರ ಹತ್ತಿರ ನಿಂತೇ ಮೂತ್ರ ಮಾಡಿದ್ದರು. ಈ ವೇಳೆ ಕುಡಿತದ ಮತ್ತಿನಲ್ಲಿದ್ದ ಮನೋಹರ ಬೇಕು ಎಂತಲೇ ವೆಂಕಟರಾಯಪ್ಪ ಅವರ ಮೇಲೆಯೇ ಮೂತ್ರ ಸಿಡಿಸಿದ್ದ.
ವೆಂಕಟರಾಯಪ್ಪ ಅವರು ಇದನ್ನು ಪ್ರಶ್ನೆ ಮಾಡಿದ್ದಾರೆ. ನೀನು ಮಾಡಿದ್ದು ಸರಿಯಾ ಎಂದು ಕೇಳಿದ್ದಾರೆ. ಆದರೆ, ಶಂಕರಪ್ಪ ತನ್ನ ತಪ್ಪನ್ನು ಒಪ್ಪಿಕೊಳ್ಳುವ ಬದಲು ಅವರ ಮೇಲೆಯೇ ಎಗರಾಡಿದ್ದಾನೆ. ನಾನು, ನನ್ನ ಮೂತ್ರ ಎಲ್ಲಿ ಬೇಕಾದರೂ ಮಾಡುತ್ತೇನೆ, ನೀನು ಯಾರು ಕೇಳುವುದಕ್ಕೆ ಎಂದೆಲ್ಲ ಗಲಾಟೆ ಮಾಡಿದ್ದಾನೆ.
ಇವನ ಬಳಿ ಮಾತನಾಡುವುದು ಬೇಡ ಎಂದು ವೆಂಕಟರಾಯಪ್ಪ ತನ್ನ ಅಂಗಡಿ ಕಡೆಗೆ ಬಂದಿದ್ದಾರೆ. ಆದರೆ, ಮನೋಹರ ಅವರನ್ನು ಬೆನ್ನಟ್ಟಿಕೊಂಡೇ ಬಂದು ನನ್ನನ್ನು ಪ್ರಶ್ನೆ ಮಾಡುತ್ತೀಯಾ ಎಂದು ಕೇಳಿ ಹಲ್ಲೆ ಮಾಡಿದ್ದಾನೆ. ಆಗ ಗೌನಿಪಲ್ಲಿ ಸಂತೆ ಮೈದಾನದಲ್ಲಿದ್ದವರು ಮತ್ತು ವ್ಯಾಪಾರಿಗಳು ಸೇರಿ ಜಗಳ ಬಿಡಿಸಿದ್ದಾರೆ.
ವೆಂಕಟರಾಯಪ್ಪ ಅವರ ಮೇಲೆ ಹಲ್ಲೆ ಮಾಡಿದ್ದರಿಂದ ಸಿಟ್ಟುಕೊಂಡ ವ್ಯಾಪಾರಿಗಳೆಲ್ಲ ಸೇರಿ ಈ ಗುಂಡ್ರುಗೋವಿ ಶಂಕರಪ್ಪನನ್ನು ಚೆನ್ನಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಬುದ್ಧಿ ಮಾತೂ ಹೇಳಿದ್ದಾರೆ. ಅಲ್ಲಿಗೆ ಅದು ಮುಕ್ತಾಯಗೊಂಡಿದೆ.
ಮನೆಗೇ ಬಂದು ಬಾಗಿಲು ಬಡಿದ ಕಿರಾತಕ
ರಾತ್ರಿಯಾಗುತ್ತಿದ್ದಂತೆಯೇ ವೆಂಕಟರಾಯಪ್ಪ ಅವರು ವ್ಯಾಪಾರ ಮುಗಿಸಿ ಮನೆಗೆ ತೆರಳಿದ್ದಾರೆ. ಸ್ವಲ್ಪ ಹೊತ್ತಿಗೆ ಮನೆಯ ಬಾಗಿಲು ಬಡಿಯಿತು. ಯಾರೆಂದು ಬಾಗಿಲು ತೆರೆದು ನೋಡಿದರೆ ಶಂಕರಪ್ಪ ನಿಂತಿದ್ದ. ಏನು ಎಂದು ಕೇಳಲೂ ಅವಕಾಶವಿಲ್ಲದಂತೆ ಶಂಕರಪ್ಪ ಮನೆಯೊಳಗೆ ನುಗ್ಗಿದ್ದ.
ಮನೆಯಲ್ಲಿ ವೆಂಕಟರಾಯಪ್ಪ ಅವರ ಪುತ್ರ ಮನೋಹರ, ಪತ್ನಿ ಮತ್ತು ಇತರರು ಇದ್ದರು. ಅವರೆಲ್ಲ ಏನಾಗುತ್ತಿದೆ ಎಂದು ನೋಡನೋಡುತ್ತಿದ್ದಂತೆಯೇ ಶಂಕರಪ್ಪ ವೆಂಕಟರಾಯಪ್ಪರನ್ನು ನೆಲಕ್ಕೆ ಕೆಡವಿ ಹಾಕಿ ಎದೆಗೆ ಗುದ್ದತೊಡಗಿದ್ದಾನೆ. ಜತೆಗೆ ಮೂತ್ರ ಮಾಡುವ ವಿಷಯದಲ್ಲಿ ಜಗಳ ಮಾಡುತ್ತೀಯಾ ಎಂದು ಮೂತ್ರ ಮಾಡುವ ಜಾಗಕ್ಕೂ ಹೊಡೆದಿದ್ದಾನೆ. 55 ವರ್ಷದ ಸಜ್ಜನ ಹಿರಿಯ ಜೀವ ವೆಂಕಟರಾಯಪ್ಪ ಅವರು ಶಂಕರಪ್ಪನ ಹೊಡೆತಗಳಿಗೆ ತತ್ತರಿಸಿ ಹೋಗಿದ್ದಾರೆ. ಸ್ವಲ್ಪ ಹೊತ್ತು ಹಾಗೆಯೇ ಹೊಡೆದ ಶಂಕರಪ್ಪ ಮನೆಯವರನ್ನು ಹೆದರಿಸಿ ಹೊರಗೆ ಹೋಗಿದ್ದಾನೆ.
ಎದೆಗೆ, ಮರ್ಮಾಂಗಕ್ಕೆ ಗುದ್ದಿದ್ದ ಧೂರ್ತ
ಅದಾದ ಕೂಡಲೇ ಮನೆಯವರು ವೆಂಕಟರಾಯಪ್ಪ ಅವರನ್ನು ಆಸ್ಪತ್ರೆಗೆ ದಾಖಲಿಸಲು ಮುಂದಾದರು. ಆದರೆ, ಎದೆಗೆ, ಮರ್ಮಾಂಗಕ್ಕೆ ಬಿದ್ದ ಹೊಡೆತಗಳಿಂದ ತತ್ತರಿಸಿ ಜರ್ಜರಿತರಾಗಿದ್ದ ವೆಂಕಟರಾಯಪ್ಪ ಅವರು ಶ್ರೀನಿವಾಸಪುರ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆಯೇ ಕೊನೆಯುಸಿರೆಳೆದರು.
ಇದನ್ನೂ ಓದಿ: Instagram fight: ಇನ್‌ಸ್ಟಾಗ್ರಾಂನಲ್ಲಿ ಬೈದ ಎಂದು 16ರ ಬಾಲಕನನ್ನು ತಲ್ವಾರ್‌ನಿಂದ ಕಡಿದು ಕೊಂದ ಸ್ನೇಹಿತರು!
ಗೌನಿಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಕರಣ ದಾಖಲಾಗಿದೆ. ಗೌನಿಪಲ್ಲಿಯ ವ್ಯಾಪಾರಸ್ಥರು, ನಾಗರಿಕರು ವೆಂಕಟರಾಯಪ್ಪ ಅವರ ಸಾವಿಗೆ ಕಂಬನಿ ಮಿಡಿದಿದ್ದಾರೆ.
ಅಂದ ಹಾಗೆ, ವೆಂಕಟರಾಯಪ್ಪ ಅವರಿಗೂ ಶಂಕರಪ್ಪ ಅವರಿಗೂ ಮುಖ ಪರಿಚಯ ಇಲ್ಲವೇ ಇಲ್ಲ. ಅವರಿಬ್ಬರು ಹಿಂದೆಂದು ಮುಖಾಮುಖಿ ಆಗಿರಲೇ ಇಲ್ಲ. ಯಾರೆಂದು ಗೊತ್ತೇ ಇಲ್ಲ. ಕೇವಲ ಒಂದು ಮೂತ್ರದ ಸಿಡಿತದಿಂದ ಒಂದು ಮನೆಯ ಬೆಳಕು ಆರಿತು. ಹೀಗೆ ಕೊಲೆ ಮಾಡಿದ ಧೂರ್ತನಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಜನರು ಒತ್ತಾಯಿಸಿದ್ದಾರೆ.
ಕರ್ನಾಟಕ
BJP JDS alliance : ಜೆಡಿಎಸ್‌ಗೆ ಕಾಂಗ್ರೆಸ್ ಮಾಡಿದ ಮೋಸದ ಬಗ್ಗೆ 100 ಕಾರಣ ಹೇಳುವೆ: ಗುಡುಗಿದ ದೇವೇಗೌಡ
BJP JDS alliance : ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರು ಬಿಜೆಪಿ ಜತೆಗಿನ ಮೈತ್ರಿ ಬಗ್ಗೆ ಮಾತನಾಡಿದ್ದಾರೆ. ಅಲ್ಲದೆ, ಕಾಂಗ್ರೆಸ್‌ನಿಂದ ಪಕ್ಷಕ್ಕಾದ ಅನ್ಯಾಯದ ಬಗ್ಗೆ ಹೇಳಿದ್ದಾರೆ. ಈ ಹಿಂದೆ ಕುಮಾರಸ್ವಾಮಿ ಸರ್ಕಾರವನ್ನು ಬೀಳಿಸಿದ್ದು ಯಾರು ಎಂಬ ಬಗ್ಗೆಯೂ ಚರ್ಚೆ ಮಾಡೋಣ ಎಂದು ಸವಾಲು ಹಾಕಿದ್ದಾರೆ.
ಬೆಂಗಳೂರು: ಮುಂದಿನ ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಬಿಜೆಪಿ – ಜೆಡಿಎಸ್ ಮೈತ್ರಿ (BJP JDS alliance) ಬಗ್ಗೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ (Former Prime Minister and JDS supremo HD DeveGowda) ಅಧಿಕೃತವಾಗಿ ಮಾತನಾಡಿದ್ದಾರೆ. ಮೈತ್ರಿ ಹಿಂದಿನ ಉದ್ದೇಶ ಏನು ಎಂಬುದನ್ನು ಹೇಳಿದ್ದಾರೆ. ಅಲ್ಲದೆ, ಮುಸ್ಲಿಂ ಮುಖಂಡರನ್ನು (Muslim leaders) ಜೆಡಿಎಸ್ ತೊರೆಯುತ್ತಿರುವ ಬಗ್ಗೆ ಪ್ರಸ್ತಾಪ ಮಾಡುತ್ತಾ, ಮುಸ್ಲಿಂ ನಾಯಕರನ್ನು ಕಾಂಗ್ರೆಸ್ ಸೋಲಿಸಿಲ್ಲವೇ? ಎಂದು ಪ್ರಶ್ನೆ ಮಾಡಿದ್ದಾರೆ. ಬಿಜೆಪಿ ಪಕ್ಷದ ಬಿ ಟಿಂ ಜೆಡಿಎಸ್ ಎಂದು ಹೇಳುವವರು ಮೊದಲು ತಾವೇನು ಮಾಡಿದ್ದಾರೆಂಬುದನ್ನು ನೋಡಬೇಕು. ಈ ಹಿಂದೆ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಅವರು ಸರ್ಕಾರವನ್ನು ಕೆಡವಿದ್ದು ಯಾರು ಎಂಬುದನ್ನು ಚರ್ಚೆ ಮಾಡೋಣ ಎಂದು ಪಂಥಾಹ್ವಾನ ನೀಡಿದ್ದಾರೆ. ಜತೆಗೆ ಕಾಂಗ್ರೆಸ್ ಮಾಡಿರುವ ಮೋಸದ ಬಗ್ಗೆ 100 ಕಾರಣಗಳನ್ನು ಹೇಳುವೆ ಎಂದು ದೇವೇಗೌಡರು ಗುಡುಗಿದ್ದಾರೆ. ಇದೆಕ್ಕೆಲ್ಲ ವಿ ಡೋಂಟ್ ಕೇರ್ ಎಂದು ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಪ್ರಧಾನಿ ದೇವೇಗೌಡ, ರಾಜ್ಯಸಭೆಯಲ್ಲಿ ಫಾರೂಕ್ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಿದ್ದೆ, ಯಾರು ಸೋತರು? 8 ಜನ ನಾಯಕರನ್ನು ಕರೆದುಕೊಂಡು ಹೋದಿರಿ. ಅಲ್ಪಸಂಖ್ಯಾತರನ್ನು ಆ ದಿನ ಸೋಲಿಸಿದ್ದು ಯಾರು? ಜೆಡಿಎಸ್‌ಗೆ ಕಾಂಗ್ರೆಸ್ ಮೋಸ ಮಾಡಿರುವ 100 ಉದಾಹರಣೆಗಳನ್ನು ಕೊಡುತ್ತೇನೆ. ಕಾಂಗ್ರೆಸ್ ಹಲವಾರು ಬಾರಿ ಬ್ಲಂಡರ್ ಮಾಡಿದೆ. ನೀವು ಜಾತ್ಯತೀತ ಬಗ್ಗೆ ಮಾತನಾಡುತ್ತಿರಾ? ನಾವು ಯಾವುದಕ್ಕೂ ಕೇರ್ ಮಾಡಲ್ಲ ಎಂದು ಹೇಳಿದರು.
ಅಮಿತ್ ಶಾ ಜತೆ ಮೈತ್ರಿ ಚರ್ಚೆ ಮಾಡಿದ್ದೇನೆ
ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಭಾರತೀಯ ಜನತಾ ಪಾರ್ಟಿಯ ಜತೆ ಹೋಗಬೇಕಾದರೆ, ನಾನು ಮೊದಲು ಗೃಹ ಸಚಿವ ಅಮಿತ್ ಶಾ (Home Minister Amit Shah) ಅವರ ಜತೆ ಚರ್ಚೆ ಮಾಡಿದ್ದೆ. ನಾವು ಕಳೆದ 60 ವರ್ಷದಿಂದ ಯಾವುದೇ ಸಮಯಕ್ಕೆ ಅನ್ಯಾಯವಾಗಲು ಬಿಟ್ಟಿಲ್ಲ. ಕರ್ನಾಟಕದಲ್ಲಿ ಕುಮಾರಸ್ವಾಮಿಯವರ ಸರ್ಕಾರದಲ್ಲಿದ್ದ 17 ಜನರು ಶಾಸಕರನ್ನು ಮುಂಬೈಗೆ ಕರೆಸಿಕೊಂಡವರು ಯಾರು? ಇದೆಲ್ಲವೂ ಚರ್ಚೆಯಾಗಲಿ, ಚರ್ಚೆ ಮಾಡೋಣ. ಕರ್ನಾಟಕದಲ್ಲಿ ಕುಮಾರಸ್ವಾಮಿ ಅವನ ಸರ್ಕಾರನ್ನ ತೆಗೆದಿದ್ದು ಯಾರು? ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರೋದಕ್ಕೆ ಅವಕಾಶ ಮಾಡಿದ ಬಗ್ಗೆ ಚರ್ಚೆ ಮಾಡೋಣ. ಯಾರು ಇದಕ್ಕೆ ಜವಾಬ್ದಾರಿ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ದೇವೇಗೌಡ ಪ್ರಶ್ನಿಸಿದರು.
ಎಚ್‌ಡಿಕೆಯನ್ನು ಸಿಎಂ ಮಾಡುವಂತೆ ಒತ್ತಾಯ ಮಾಡಿದ್ದು ಯಾರು?
ಎಚ್.ಡಿ. ಕುಮಾರಸ್ವಾಮಿ ಅವರನ್ನು ಸಿಎಂ ಮಾಡಬೇಕೆಂದು ಯಾರು ಬಂದಿದ್ದು? ನನಗೆ ಅವರನ್ನೇ ಸಿಎಂ ಮಾಡುವಂತೆ ಒತ್ತಾಯ ಮಾಡಿದರು. ಯಾವ ಕಾರಣಕ್ಕೂ ನಿಮ್ಮ ಸಹವಾಸ ಬೇಡ ಅಂತಾ ಹೇಳಿದ್ದೆ. ರಾತ್ರಿ 12 ಗಂಟೆಗೆ ಸುಪ್ರೀಂ ಕೋರ್ಟ್‌ಗೆ ಹೋಗಿದ್ದಾರೆ. ಇವತ್ತು ಬಿಜೆಪಿ ಜತೆ ಸಂಬಂಧ ಯಾಕೆ ಬೆಳೆಸಿದ್ದೀರಿ ಎಂದು ಮಾಧ್ಯಮಗಳಲ್ಲಿ ಕೇಳುತ್ತಿದ್ದೀರಾ ಎಂದು ಪ್ರಶ್ನೆ ಮಾಡಿದರು.
ಇದನ್ನೂ ಓದಿ: Weather report : ಇನ್ನೆರಡು ದಿನ ಉತ್ತರ ಕರ್ನಾಟಕದ 7 ಜಿಲ್ಲೆ ಸೇರಿ ಕರಾವಳಿಯಲ್ಲಿ ಭಾರಿ ಮಳೆ
ದೇಶದಲ್ಲಿ ಒಂದೇ ಕುಟುಂಬ ಆಡಳಿತ ಮಾಡಬೇಕಾ?
ನಾನು ಯಾವುದೇ ಕಾರಣಕ್ಕೂ ಅಧಿಕಾರಕ್ಕಾಗಿ ರಾಜಕೀಯ ಮಾಡಿಲ್ಲ. ರಾಹುಲ್ ಗಾಂಧಿ ಕೈಯಲ್ಲಿ ಜೆಡಿಎಸ್ ಬಿಜೆಪಿ ಬಿ ಟೀಮ್ ಅಂತ ಹೇಳಿಸಿದರು. ಕಾಂಗ್ರೆಸ್ ಜತೆ ಮೈತ್ರಿ ಮಾಡಿಕೊಂಡಾಗ ಏನ್ ಮಾಡಿದ್ರು ಅಂತ ನಾನು ನೋಡಲಿಲ್ವಾ? ಈಗ ಮೈತ್ರಿ ಬಗ್ಗೆ ಚರ್ಚೆ ಮಾಡ್ತಿದ್ದಾರೆ. ದೇಶದಲ್ಲಿ ಒಂದೇ ಕುಟುಂಬ ಆಡಳಿತ ಮಾಡಬೇಕಾ? ನಾನು 10 ವರ್ಷದಲ್ಲಿ ಮೊದಲ ಬಾರಿ ಮೈತ್ರಿ ಬಗ್ಗೆ ಮಾತನಾಡಿದ್ದೇನೆ ಎಂದು ಎಚ್.ಡಿ. ದೇವೇಗೌಡ ಹೇಳಿದರು.
-
ದೇಶ13 hours ago
UNGA Speech: ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸಿ, ವಿಶ್ವ ಸಂಸ್ಥೆಯಲ್ಲಿ ಭಾರತೀಯ ವಿದೇಶಾಂಗ ಸಚಿವ ಜೈಶಂಕರ್ ಪಾಠ!
-
ವಿದೇಶ21 hours ago
Great auction: ಅಮೆರಿಕದ ಅಪರೂಪದ ನೋಟು 3.9 ಕೋಟಿ ರೂ.ಗೆ ಮಾರಾಟ!
-
South Cinema24 hours ago
Heart attack : ಹಿರಿಯ ನಟ ಬ್ಯಾಂಕ್ ಜನಾರ್ದನ್ಗೆ ಹೃದಯಾಘಾತ?
-
ಸುವಚನ8 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ದೇಶ14 hours ago
Manipur Horror: ಅಪಹರಿಸಿ ಕೊಂದ್ರಲ್ಲಾ… ನಮ್ಮ ಮಕ್ಕಳು ಮಾಡಿದ ತಪ್ಪಾದ್ರೂ ಏನು? ಹತ್ಯೆಗೀಡಾದ ವಿದ್ಯಾರ್ಥಿಗಳ ಪೋಷಕರ ಪ್ರಶ್ನೆ
-
ದೇಶ14 hours ago
GST Evasion: ಜಿಎಸ್ಟಿ ವಂಚಿಸಿದ ಬಿಜೆಪಿ ನಾಯಕಿಯ ಸಕ್ಕರೆ ಕಾರ್ಖಾನೆಯ 19 ಕೋಟಿ ರೂ. ಮೌಲ್ಯದ ಸೊತ್ತು ಜಪ್ತಿ!
-
ಆಟೋಮೊಬೈಲ್20 hours ago
Viral News : ಅಮ್ಮನ ಕಾರಿನಲ್ಲಿಯೇ ಮನೆ ಬಿಟ್ಟು ಹೋದ ಪುಟಾಣಿ ಮಕ್ಕಳು, 300 ಕಿ. ಮೀ ದೂರ ಹೋಗಿ ಸಿಕ್ಕಿಬಿದ್ದರು
-
ಕರ್ನಾಟಕ21 hours ago
Assault Case : ರಸ್ತೆ ವಿಚಾರಕ್ಕೆ ವಕೀಲನಿಗೆ ಹಿಗ್ಗಾಮುಗ್ಗಾ ಥಳಿಸಿದ ಗ್ರಾಮಸ್ಥರು!