Site icon Vistara News

ವಿಸ್ತಾರ TOP 10 NEWS: ಅಕ್ಕಿಗೆ ಕೊನೆ ಪ್ರಯತ್ನವೂ ವಿಫಲದಿಂದ, ಪ್ರತಿಪಕ್ಷ ಸಭೆಯಲ್ಲಿ ಬೈಸಿಕೊಂಡ ಕಾಂಗ್ರೆಸ್‌ವರೆಗಿನ ಪ್ರಮುಖ ಸುದ್ದಿಗಳಿವು

karnataka govt fails to convince union govt over rice to opposition meet and more news

#image_title

1. Anna Bhagya: ಕೇಂದ್ರ ಸರ್ಕಾರ ಅಕ್ಕಿ ಕೋಡೋಲ್ಲ ಎಂದಿದೆ: ಗೋಯೆಲ್‌ ಭೇಟಿ ಬಳಿಕ ಹತಾಶೆಗೊಂಡ ಮುನಿಯಪ್ಪ
ಕಾಂಗ್ರೆಸ್‌ ಸರ್ಕಾರದ ಅನ್ನಭಾಗ್ಯ (Anna Bhagya) ಯೋಜನೆಗೆ ಅಕ್ಕಿ ಒದಗಿಸುವ ಟಾಸ್ಕ್‌ನಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್‌. ಮುನಿಯಪ್ಪ ಮತ್ತೊಂದು ಹಿನ್ನಡೆ ಅನುಭವಿಸಿದ್ದಾರೆ. ಕೇಂದ್ರ ಆಹಾರ ಸಚಿವ ಪೀಯೂಷ್‌ ಗೋಯೆಲ್‌ ಅವರನ್ನು ಕೊನೆಗೂ ಭೇಟಿಯಾಗಿ ಮಾತುಕತೆ ನಡೆಸಿದರಾದರೂ, ಕೇಂದ್ರ ಸರ್ಕಾರ ಅಕ್ಕಿ ಕೊಡಲು ಆಗುವುದಿಲ್ಲ ಎಂದು ಹೇಳಿದ್ದಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

2. Congress Guarantee: ಗೃಹಜ್ಯೋತಿ ನೋಂದಣಿಗೆ 20 ರೂ. ಮಾತ್ರ: ಯಾರಾದರೂ ಹೆಚ್ಚು ಕೇಳಿದರೆ ಈ ನಂಬರ್‌ಗೆ ಕಾಲ್‌ ಮಾಡಿ
ಗೃಹ ಜ್ಯೋತಿ ನೋಂದಣಿಗೆ ಗ್ರಾಮ ಒನ್‌, ಕರ್ನಾಟಕ ಒನ್‌ ಹಾಗು ಬೆಂಗಳೂರು ಒನ್‌ ಕೇಂದ್ರಗಳಲ್ಲಿ ಸಾರ್ವಜನಿಕರಿಂದ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ದೂರುಗಳು ಕೇಳಿ ಬಂದಿದ್ದು, ಹಣ ವಸೂಲಿ ಮಾಡುವ ಕೇಂದ್ರಗಳ ವಿರುದ್ಧ ಕಠಿನ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

3. Viral video: ನಾನೊಬ್ಳೇ ಎಷ್ಟೂಂತ ಮಾಡ್ಲಿ, ಆಗಲ್ಲ ನಂಗೆ; ಆಧಾರ್‌ ಕೇಂದ್ರದ ಒತ್ತಡಕ್ಕೆ ಮಹಿಳಾ ಸಿಬ್ಬಂದಿ ಕಣ್ಣೀರು
ರಾಜ್ಯದ ಕಾಂಗ್ರೆಸ್‌ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಎಲ್ಲ ಗ್ಯಾರಂಟಿ ಯೋಜನೆಗಳಿಗೆ (Congress Guarantee) ಆಧಾರ್‌ ಕಾರ್ಡ್‌ ಕಡ್ಡಾಯವಾಗಿದೆ (Aadhar Updates) ಮತ್ತು ಅದಕ್ಕೆ ಸಂಬಂಧಿಸಿದ ಲಿಂಕ್‌ಗಳನ್ನು ಮಾಡಿಸಿರಬೇಕಾಗುತ್ತದೆ. ಹೀಗಾಗಿ ಪ್ರತಿಯೊಬ್ಬರೂ ಆಧಾರ್‌ ಕೇಂದ್ರಗಳ (Aadhar centre) ಕಡೆಗೆ ದಾಂಗುಡಿ ಇಡುತ್ತಿದ್ದಾರೆ. ಇದರಿಂದಾಗಿ ಆಧಾರ್‌ ಕೇಂದ್ರಗಳಲ್ಲಿ ಕೆಲಸದ ಒತ್ತಡ ಹೆಚ್ಚಿದ್ದು, ನಿಭಾಯಿಸಲು ಸಾಧ್ಯವಾಗದೆ ಅಲ್ಲಿನ ಸಿಬ್ಬಂದಿ (woman staff) ಕಣ್ಣೀರು ಹಾಕುವ ಪರಿಸ್ಥಿತಿ ಬಂದಿದೆ. ರಾಯಚೂರು ನಗರದ ಅಂಚೆ ಕಚೇರಿಯಲ್ಲಿ (Raichur post office) ವಸ್ತುಶಃ ಆಧಾರ್‌ ಕೇಂದ್ರ ಮಹಿಳಾ ಸಿಬ್ಬಂದಿ ಕಣ್ಣೀರು ಹಾಕಿದ್ದಾರೆ. ಈ ದೃಶ್ಯ ವೈರಲ್‌ ಆಗಿದೆ (viral video) ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

4. PM Modi US Visit: ‘ಭಾರತವು ಪ್ರಜಾಪ್ರಭುತ್ವದ ತಾಯಿ’ ಎಂದ ಮೋದಿ; ಯುಎಸ್ ಜಂಟಿ ಸದನದಲ್ಲಿ 2ನೇ ಬಾರಿ ಐತಿಹಾಸಿಕ ಭಾಷಣ
ಪ್ರಜಾಪ್ರಭುತ್ವವು ನಮ್ಮ ಉಭಯ ದೇಶಗಳ ಪವಿತ್ರ ಬಾಂಧವ್ಯದಲ್ಲಿ ಒಂದಾಗಿದೆ. ಸಮಾನತೆ ಮತ್ತು ಘನತೆಯನ್ನು ಬೆಂಬಲಿಸಲು ಪ್ರಜಾಪ್ರಭುತ್ವವೊಂದೇ ದಾರಿ. ಅನಾದಿ ಕಾಲದಿಂದಲೂ ಭಾರತವು ಪ್ರಜಾಪ್ರಭುತ್ವದ ತಾಯಿಯಾಗಿದೆ ಎಂದು ಅಮೆರಿಕ ಭೇಟಿಯಲ್ಲಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Modi US Visit) ಉದ್ಘೋಷಿಸಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.
ಹೆಚ್ಚಿನ ಓದಿಗಾಗಿ: PM Modi US Visit: ʼಸಮೋಸಾ ಕಾಕಸ್…‌ʼ: ಅಮೆರಿಕದ ಜಂಟಿ ಸದನ ಎದ್ದು ನಿಂತು ಚಪ್ಪಾಳೆ ತಟ್ಟುವಂತೆ ಮಾಡಿದ ಮೋದಿ ಮಾತು!

5. Opposition Meet: ಪ್ರತಿಪಕ್ಷಗಳ ಸಭೆಯಲ್ಲಿ ಕಾಂಗ್ರೆಸ್​ಗೆ ಬೈದ ದೀದಿ; ಮೂಡದ ಒಮ್ಮತ, ಶೀಘ್ರವೇ ಮತ್ತೆ ಸಭೆ
2024ರ ಲೋಕಸಭೆ ಚುನಾವಣೆ (2024 Lok Sabha Election)ಯಲ್ಲಿ ಬಿಜೆಪಿಯನ್ನು ಸೋಲಿಸಲೇಬೇಕು ಎಂಬ ಹಠತೊಟ್ಟು ದೇಶದ ಪ್ರಮುಖ ವಿಪಕ್ಷಗಳೆಲ್ಲ ಒಂದಾಗಿ ಇಂದು ಪಾಟ್ನಾದಲ್ಲಿ ಸಭೆ (Opposition Meet) ನಡೆಸಿವೆ. ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್, ಆಪ್​, ಸಮಾಜವಾದಿ ಪಕ್ಷ, ಎನ್​ಸಿಪಿ, ಶಿವಸೇನೆ ಉದ್ಧವಠಾಕ್ರೆ ಬಣ, ಜೆಡಿಯು, ಆರ್​ಜೆಡಿ..ಹೀಗೆ ಒಟ್ಟು 15 ಪಕ್ಷಗಳ ಪ್ರಮುಖ ನಾಯಕರು ಇಂದಿನ ಸಭೆಯಲ್ಲಿ ಪಾಲ್ಗೊಂಡರು. ಬಿಹಾರ ಮುಖ್ಯಮಂತ್ರಿ ನಿತೀಶ್​ ಕುಮಾರ್​ ಅವರ ಪಾಟ್ನಾ ನಿವಾಸದಲ್ಲಿ ಈ ಸಭೆ ಆಯೋಜನೆಗೊಂಡಿತ್ತು. ಮಲ್ಲಿಕಾರ್ಜುನ್ ಖರ್ಗೆ, ರಾಹುಲ್ ಗಾಂಧಿ, ಮಮತಾ ಬ್ಯಾನರ್ಜಿ, ಅರವಿಂದ್ ಕೇಜ್ರಿವಾಲ್​, ಒಮರ್ ಅಬ್ದುಲ್ಲಾ, ಮೆಹಬೂಬಾ ಮುಫ್ತಿ, ಶರದ್​ ಪವಾರ್, ಉದ್ಧವ್ ಠಾಕ್ರೆ ಸೇರಿ ದಿಗ್ಗಜರೆಲ್ಲ ಸಭೆಯಲ್ಲಿ ಪಾಲ್ಗೊಂಡು ಬಿಜೆಪಿ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದರು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

6. Weather report: ನಾಳೆ ಈ 20 ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ; ಉತ್ತರ ಕನ್ನಡ ಜಿಲ್ಲೆಗೆ ಹೈ ಅಲರ್ಟ್‌
ಕರ್ನಾಟಕದ ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ಮಲೆನಾಡು, ದಕ್ಷಿಣ ಒಳನಾಡಿನಲ್ಲೂ ವ್ಯಾಪಕ ಮಳೆಯಾಗುವ (Rain News) ಸಾಧ್ಯತೆ ಇದೆ. ಮಲೆನಾಡಿನ ಜಿಲ್ಲೆಗಳಾದ ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಕೊಡಗಿನಲ್ಲೂ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲೂ ಅಬ್ಬರ (Weather report) ಮಳೆಯಾಗಲಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

7. ಕಾಶ್ಮೀರದಲ್ಲಿ ಭರ್ಜರಿ ಬೇಟೆ; ಒಳನುಸುಳುತ್ತಿದ್ದ ನಾಲ್ವರು ಭಯೋತ್ಪಾದಕರ ಹತ್ಯೆ
ಜಮ್ಮು-ಕಾಶ್ಮೀರ ಕುಪ್ವಾರಾ ಜಿಲ್ಲೆ (Kupwara Encounter)ಯಲ್ಲಿ ಭಾರತೀಯ ಸೇನೆ ಯೋಧರು ಮತ್ತೊಂದು ಭರ್ಜರಿ ಬೇಟೆಯಾಡಿದ್ದಾರೆ. ಪಾಕ್​ ಆಕ್ರಮಿತ ಕಾಶ್ಮೀರ (POK)ದಿಂದ ಭಾರತಕ್ಕೆ ನುಸುಳಲು ಪ್ರಯತ್ನ ಪಟ್ಟ ನಾಲ್ವರು ಭಯೋತ್ಪಾದಕರನ್ನು ಭಾರತೀಯ ಸೇನೆ ಮತ್ತು ಜಮ್ಮು-ಕಾಶ್ಮೀರ ಪೊಲೀಸರು ಹೊಡೆದುರುಳಿಸಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

8. MLA training: ಶಾಸಕರ ತರಬೇತಿಗೆ ಗಣ್ಯರ ಆಹ್ವಾನದ ಬಗ್ಗೆ ಆಕ್ಷೇಪ; ತಿರುಗೇಟು ನೀಡಿದ ಸ್ಪೀಕರ್‌ ಖಾದರ್
ರಾಜ್ಯ ವಿಧಾನಸಭೆಗೆ (Karnataka Assembly) ಆಯ್ಕೆಯಾದ 70 ಮಂದಿ ನೂತನ ಶಾಸಕರಿಗಾಗಿ ವಿಧಾನಸಭಾ ಸಚಿವಾಲಯದಿಂದ (Assembly secretariat) ಆಯೋಜನೆಯಾಗಿರುವ ಮೂರು ದಿನಗಳ ತರಬೇತಿ ಶಿಬಿರಕ್ಕೆ (MLA training) ಆಹ್ವಾನಿಸಿರುವ ವ್ಯಕ್ತಿಗಳ ವಿಚಾರದಲ್ಲಿ ಎದ್ದಿರುವ ವಿವಾದಕ್ಕೆ ಸಂಬಂಧಿಸಿ ಸ್ಪೀಕರ್‌ ಯು.ಟಿ. ಖಾದರ್‌ (U.T Khader) ಅವರು ತಮ್ಮ ಸ್ಪಷ್ಟ ಅಭಿಪ್ರಾಯವನ್ನು ತಿಳಿಸಿದ್ದಾರೆ. ಯಾವುದೇ ವಿಚಾರದ ಬಗ್ಗೆ ಈಗಲೇ ಪೂರ್ವಗ್ರಹಪೀಡಿತ ಚರ್ಚೆ ಸರಿಯಲ್ಲ ಎಂದು ಟೀಕಾಕಾರರಿಗೆ ಉತ್ತರಿಸಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

9. ಮೊಗಸಾಲೆ ಅಂಕಣ: ಆ ಕರಾಳ ದಿನಗಳ ಮರೆತೇನೆಂದರೆ ಮರೆಯಲಿ ಹ್ಯಾಂಗ?
ಅಲಹಾಬಾದ್ ಹೈಕೋರ್ಟ್ ನೀಡಿದ ತೀರ್ಪೊಂದು ಅಂತಿಮವಾಗಿ ದೇಶವನ್ನು ಬಯಲು ಬಂದೀಖಾನೆಯನ್ನಾಗಿಸಲು ಅಂದಿನ ಪ್ರಧಾನಿ ಇಂದಿರಾ ಗಾಂಧಿ (Indira Gandhi) ಅವರಿಗೆ ನೆಪವಾಗಿದ್ದು ಕರಾಳ ಅಧ್ಯಾಯದ ಮೊದಲ ಪುಟ. ನಾಳೆ 24ಕ್ಕೆ ತುರ್ತು ಪರಿಸ್ಥಿತಿ (Emergency) ಎಂಬ ಕರಾಳ ಶಾಸನ ಭಾರತದ ಮೇಲೆ ವಕ್ಕರಿಸಿ 49 ವರ್ಷ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

10. INDvsWI 2023 : ವಿಂಡೀಸ್ ಪ್ರವಾಸಕ್ಕೆ ಟೆಸ್ಟ್, ಏಕದಿನ ತಂಡ ಪ್ರಕಟ; ಯಾರಿಗೆಲ್ಲ ಸಿಕ್ತು ಚಾನ್ಸ್‌?
ವೆಸ್ಟ್ ಇಂಡೀಸ್ (INDvsWI 2023) ಪ್ರವಾಸಕ್ಕಾಗಿ ಭಾರತದ ಟೆಸ್ಟ್ ಮತ್ತು ಏಕದಿನ ತಂಡಗಳನ್ನು ಬಿಸಿಸಿಐ ಶುಕ್ರವಾರ ಪ್ರಕಟಿಸಿದೆ. ಡಬ್ಲ್ಯುಟಿಸಿ ಫೈನಲ್‌ನಲ್ಲಿ ನಿರಾಶಾದಾಯಕ ಪ್ರದರ್ಶನದ ನಂತರ ಚೇತೇಶ್ವರ ಪೂಜಾರ ಮತ್ತು ಉಮೇಶ್ ಯಾದವ್ ಅವರನ್ನು ಟೆಸ್ಟ್ ತಂಡದಿಂದ ಕೈಬಿಡಲಾಗಿದೆ. ಒಂದು ವರ್ಷದ ಹಿಂದೆ ಟೆಸ್ಟ್ ತಂಡಕ್ಕೆ ಮರಳಿದ್ದ ಪೂಜಾರ ಅವಕಾಶವನ್ನು ಉತ್ತಮವಾಗಿ ಬಳಸಿಕೊಂಡಿರಲಿಲ್ಲ. ಕೊಟ್ಟ ಕೊನೇ ಅವಕಾಶ ಎಂಬಂತೆ ವಿಶ್ವ ಟೆಸ್ಟ್‌ ಚಾಂಪಿಯನ್‌ಷಿಪ್‌ ಫೈನಲ್‌ನಲ್ಲೂ ನೀರಸ ಪ್ರದರ್ಶನ ನೀಡಿದ್ದರು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

Exit mobile version