Site icon Vistara News

ವಿಸ್ತಾರ TOP 10 NEWS | ಸಂಸತ್‌ನಲ್ಲಿ ʼಮಹಾʼ ಉದ್ಧಟತನದಿಂದ ದಿಲ್ಲಿಯಲ್ಲಿ ಆಪ್‌ ಜಯಭೇರಿವರೆಗಿನ ಪ್ರಮುಖ ಸುದ್ದಿಗಳಿವು

vistara-top-10-news-maharashta drags border dispute to parliament to aap win in MCD and more news

ಬೆಂಗಳೂರು: ಮಹಾರಾಷ್ಟ್ರ ಹಾಗೂ ಕರ್ನಾಟಕ ಗಡಿ ಪ್ರದೇಶದ ಕುರಿತು ಸಂಸತ್ತಿನಲ್ಲಿ ಪ್ರಸ್ತಾಪಿಸಿ ಕರ್ನಾಟಕವನ್ನು ಅವಮಾನಿಸುವ ಉದ್ಧಟತನವನ್ನು ಮಹಾರಾಷ್ಟ್ರ ಸಂಸದೆ ಮಾಡಿದ್ದಾರೆ. ಇತ್ತ ಗಡಿ ಪ್ರದೇಶದಲ್ಲಿ ಕನ್ನಡಿಗರು ಹೋರಾಡುತ್ತಿದ್ದಾರೆ. ದೆಹಲಿ ಚುನಾವಣೆಯಲ್ಲಿ ಆಮ್‌ ಆದ್ಮಿ ಪಕ್ಷ ಜಯಭೇರಿ ಬಾರಿಸಿದೆ, ಗುರುವಾರ ಗುಜರಾತ್‌ ಚುನಾವಣೆ ಫಲಿತಾಂಶ ಹೊರಬೀಳಲಿದೆ ಎನ್ನುವುದೂ ಸೇರಿ ದಿನದ ಪ್ರಮುಖ ಸುದ್ದಿಗಳ ಗುಚ್ಛ ವಿಸ್ತಾರ TOP 10 NEWS.

1. Border Dispute | ಸಂಸತ್ತಿನಲ್ಲಿ ಕರ್ನಾಟಕದ ವಿರುದ್ಧ ಹರಿಹಾಯ್ದ ಸುಳೆ! ಶಾ ಮಧ್ಯಪ್ರವೇಶಕ್ಕೆ ಆಗ್ರಹ
ಚಳಿಗಾಲದ ಸಂಸತ್ ಅಧಿವೇಶನದಲ್ಲಿ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ (Border Dispute) ಸದ್ದು ಮಾಡುತ್ತಿದೆ. ಬುಧವಾರ ಬೆಳಗಾವಿ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಆಡಳಿತ ಮತ್ತು ಪ್ರತಿಪಕ್ಷಗಳ ಮಧ್ಯೆ ಜಟಾಪಟಿ ನಡೆಯಿತು. ರಾಷ್ಟ್ರೀಯವಾದಿ ಕಾಂಗ್ರೆಸ್ ಪಾರ್ಟಿ(ಎನ್‌ಸಿಪಿ) ಸಂಸದೆ ಸುಪ್ರಿಯಾ ಸುಳೆ ಅವರು ವಿಷಯವನ್ನು ಪ್ರಸ್ತಾಪಿಸಿ, ಕರ್ನಾಟಕದ ಗಡಿಯಲ್ಲಿ ಮಹಾರಾಷ್ಟ್ರ ನೋಂದಣಿ ವಾಹನಗಳ ಮೇಲೆ ದಾಳಿ ಮಾಡಲಾಗುತ್ತಿದೆ ಎಂದು ಆರೋಪಿಸಿದರು. ಅಲ್ಲದೇ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಧ್ಯಪ್ರವೇಶಿಸಿ, ಹೇಳಿಕೆ ನೀಡಬೇಕೆಂದು ಒತ್ತಾಯಿಸಿದರು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

2. Border Dispute | ಕರ್ನಾಟಕ ಬಸ್‌ಗೆ ಮತ್ತೆ ಮಸಿ; ಮುಂದುವರಿದ ಠಾಕ್ರೆ ಬಣದವರ ಪುಂಡಾಟಿಕೆ
ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ (Border Dispute) ಮಿತಿಮೀರಿದೆ. ಮಹಾರಾಷ್ಟ್ರದಲ್ಲಿ ಶಿವಸೇನೆ ಉದ್ಧವ್ ಠಾಕ್ರೆ ಬಣದ ಪುಂಡರು ಪುಂಡಾಟಿಕೆ ಮುಂದುವರಿಸಿದ್ದು, ಮಹಾರಾಷ್ಟ್ರದ ಭಾರಾಮತಿ ಬಸ್ ನಿಲ್ದಾಣದಲ್ಲಿ ಕರ್ನಾಟಕ ಬಸ್‌ಗೆ ಮಸಿ ಬಳಿದಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

3. Border Dispute | ಶಿವಸೇನೆ ಕಾರ್ಯಕರ್ತರ ಉದ್ಧಟತನ; ಸಿಎಂ ಬೊಮ್ಮಾಯಿ ಭಾವಚಿತ್ರಕ್ಕೆ ಅಪಮಾನ
ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ (Border Dispute) ದಿನೇ ದಿನೆ ತಾರಕಕ್ಕೇರುತ್ತಿದ್ದು, ಪ್ರತಿಭಟನೆಗಳು, ಆಕ್ರೋಶಗಳು ಹೆಚ್ಚತೊಡಗಿವೆ. ಅಲ್ಲದೆ, ಮಹಾರಾಷ್ಟ್ರದಲ್ಲಿ ಶಿವಸೇನೆಯ ಎರಡು ಬಣಗಳು ಸಹ ಅತಿರೇಕದಿಂದ ವರ್ತನೆ ಮಾಡುತ್ತಿವೆ. ಇದೀಗ ಬುಧವಾರ (ಡಿ.೭) ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಬಣದ ಶಿವಸೇನೆಯ ಕಾರ್ಯಕರ್ತರು ಮಹಾರಾಷ್ಟ್ರದ ಮೀರಜ್‌ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಭಾವಚಿತ್ರಕ್ಕೆ ಚಪ್ಪಲಿ ಏಟು ಹಾಕುವ ಮೂಲಕ ಉದ್ದಟತನವನ್ನು ಪ್ರದರ್ಶನ ಮಾಡಿವೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

4. Delhi MCD Election| ದೆಹಲಿ ಮಹಾನಗರ ಪಾಲಿಕೆ ಆಪ್​ ಮಡಿಲಿಗೆ; ಬಿಜೆಪಿಯ 15 ವರ್ಷಗಳ ಆಡಳಿತ ಅಂತ್ಯ
ಹದಿನೈದು ವರ್ಷಗಳಿಂದ ಬಿಜೆಪಿ ಕೈಯಲ್ಲಿದ್ದ ದೆಹಲಿ ಮಹಾನಗರ ಪಾಲಿಕೆ ಆಮ್​ ಆದ್ಮಿ ಪಕ್ಷದ ಮಡಿಲಿಗೆ ಬಿದ್ದಿದೆ. ಡಿಸೆಂಬರ್​ 4ರಂದು ನಡೆದಿದ್ದ ದೆಹಲಿ ಮಹಾನಗರ ಪಾಲಿಕೆ ಚುನಾವಣೆ ಮತ ಎಣಿಕೆ ಇಂದು ಬೆಳಗ್ಗೆ 8ಗಂಟೆಯಿಂದ ಪ್ರಾರಂಭವಾಗಿತ್ತು. ಆರಂಭಿಕ ಟ್ರೆಂಡ್​​ನಲ್ಲಿ ಬಿಜೆಪಿ ಮುನ್ನಡೆ ಸಾಧಿಸಿತ್ತು. ಆದರೆ ಬರುಬರುತ್ತ ಆಪ್​​ ಮತ್ತು ಬಿಜೆಪಿ ನಡುವೆ ಜಿದ್ದಾಜಿದ್ದಿ ಫೈಟ್​ ಉಂಟಾಗಿತ್ತು. ಅಂತಿಮವಾಗಿ ಆಮ್​ ಆದ್ಮಿ ಪಕ್ಷ 126 ವಾರ್ಡ್​ಗಳನ್ನು ಗೆದ್ದು, ಮಹಾನಗರ ಪಾಲಿಕೆ ಆಡಳಿತ ಚುಕ್ಕಾಣಿ ಹಿಡಿದಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

5. Interest rate | ಆರ್‌ಬಿಐ ರೆಪೊ ದರ 0.35% ಏರಿಕೆ, ಸಾಲದ ಇಎಂಐನಲ್ಲಿ 23% ತನಕ ಹೆಚ್ಚಳ ನಿರೀಕ್ಷೆ
ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ ಬುಧವಾರ ತನ್ನ ರೆಪೊ ದರವನ್ನು 0.35% ಏರಿಸಿದೆ. ಇದರೊಂದಿಗೆ ರೆಪೊ ದರ 6.25ಕ್ಕೆ ಏರಿಕೆಯಾಗಿದೆ. ಹೀಗಾಗಿ ಸಾಲದ ಇಎಂಐ ಹೆಚ್ಚಳದ ಹೊರೆಗೆ ಸಾಲಗಾರರು ತತ್ತರಿಸುವಂತಾಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.
ಹೆಚ್ಚಿನ ಓದಿಗಾಗಿ: ರೆಪೊ ದರ ಏರಿಕೆ ಎಫೆಕ್ಟ್ | 30 ಲಕ್ಷ ರೂ. ಗೃಹ ಸಾಲದ ಇಎಂಐನಲ್ಲಿ 4,129 ರೂ. ಹೆಚ್ಚಳ, ಪರಿಹಾರ ಏನು?

6. Gujarat Election Result | ನಾಳೆ ಗುಜರಾತ್‌ ಚುನಾವಣೆ ಫಲಿತಾಂಶ, ಯಾರಿಗೆ ಗೆಲುವಿನ ಸಂತೋಷ?
ದೇಶದ ಗಮನ ಸೆಳೆದಿರುವ, ೨೦೨೪ರ ಲೋಕಸಭೆ ಚುನಾವಣೆಗೆ ಮುನ್ನುಡಿ ಎಂದೇ ವಿಶ್ಲೇಷಿಸಲಾಗುತ್ತಿರುವ, ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೂ ಪ್ರತಿಷ್ಠೆಯಾಗಿರುವ ಗುಜರಾತ್‌ ವಿಧಾನಸಭೆ ಚುನಾವಣೆ ಫಲಿತಾಂಶ (Gujarat Election Result) ಗುರುವಾರ (ಡಿಸೆಂಬರ್‌ 8) ಪ್ರಕಟವಾಗಲಿದೆ. ಹಾಗಾಗಿ, ಎಲ್ಲರ ಗಮನವೀಗ ಗುಜರಾತ್‌ ಚುನಾವಣೆ ಫಲಿತಾಂಶದತ್ತ ನೆಟ್ಟಿದೆ. ಅತ್ತ, ಕಾಂಗ್ರೆಸ್‌ ಹಾಗೂ ಆಮ್‌ ಆದ್ಮಿ ಪಕ್ಷಗಳು ಕೂಡ ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸಲು ತೀವ್ರ ಸ್ಪರ್ಧೆಯೊಡ್ಡಿವೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

7. Siddaramaiah | ಸಿದ್ರಾಮುಲ್ಲಾ ಖಾನ್‌ ಹೆಸರಿಟ್ಟಿದ್ದಕ್ಕೆ ಬೇಸರವಿಲ್ಲ, ಜಾತ್ಯತೀತ ನಂಬಿಕೆಗೆ ಸಿಕ್ಕ ಪುರಸ್ಕಾರ ಎಂದು ಭಾವಿಸುವೆ ಎಂದ ಸಿದ್ದರಾಮಯ್ಯ
ʻʻಭಾರತೀಯ ಜನತಾ ಪಕ್ಷ ನನ್ನ ಹೆಸರಿಗೆ ಮುಸ್ಲಿಮ್‌ ಹೆಸರು ಸೇರಿಸಿ ನಡೆಸುತ್ತಿರುವ ಅಪಪ್ರಚಾರದಲ್ಲಿ ಅಚ್ಚರಿಪಡುವಂತದ್ದು ಏನೂ ಇಲ್ಲ. ಹಾಗಂತ ನಾನು ಇದಕ್ಕೆ ಬೇಸರಪಟ್ಟುಕೊಳ್ಳುವುದೂ ಇಲ್ಲ. ಯಾಕೆಂದರೆ, ಇದು ನನ್ನ ಜಾತ್ಯತೀತ ನಂಬಿಕೆಗೆ ಸಿಕ್ಕಿದ ಪುರಸ್ಕಾರ ಎಂದೇ ಭಾವಿಸುವೆʼʼ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

8. Hunasuru Hanuma Jayanthi | 7 ವರ್ಷಗಳ ನಂತರ ಹಿಂದು-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಹುಣಸೂರು ಹನುಮ ಜಯಂತಿ
ಹುಣಸೂರು ಪಟ್ಟಣದಲ್ಲಿ ಬುಧವಾರ (ಡಿ.7) ಹನುಮ ಜಯಂತಿ (Hunasuru Hanuma Jayanthi) ಅದ್ಧೂರಿಯಾಗಿ ನಡೆಯಿತು. ಧರ್ಮವನ್ನು ಮೀರಿ ಪಕ್ಷಾತೀತ, ಜಾತ್ಯತೀತವಾಗಿ ಎಲ್ಲರೂ ಮೆರವಣಿಗೆಯಲ್ಲಿ ಸಾಗಿದರು. ನಿರ್ಬಂಧಿತ ಜೆಎಲ್‌ಬಿ ರಸ್ತೆ, ಬಜಾರ್ ರಸ್ತೆಯಲ್ಲಿ ಮೆರವಣಿಗೆ ಸಾಗಿದರೂ ಶಾಂತಿಯುತವಾಗಿ ಶೋಭಾ ಯಾತ್ರೆ ಸಂಪನ್ನಗೊಂಡಿತು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

9. B L Santosh | ಟಿಆರ್‌ಎಸ್ ಶಾಸಕರ ಖರೀದಿ ಪ್ರಕರಣದಲ್ಲಿ ಬಿ.ಎಲ್. ಸಂತೋಷ್‌ರನ್ನು ಸೇರಿಸುವಂತಿಲ್ಲ: ಕೋರ್ಟ್‌ ಆದೇಶ, ಎಸ್ಐಟಿಗೆ ಹಿನ್ನಡೆ
ಟಿಆರ್‌ಎಸ್ ಶಾಸಕರ ಖರೀದಿ ಪ್ರಯತ್ನ ಪ್ರಕರಣದ ( B L Santosh ) ತನಿಖೆ ನಡೆಸುತ್ತಿರುವ ತೆಲಂಗಾಣ ವಿಶೇಷ ತನಿಖಾ ತಂಡಕ್ಕೆ(ಎಸ್ಐಟಿ) ಹಿನ್ನಡೆಯಾಗಿದೆ. ಈ ಪ್ರಕರಣದಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರನ್ನು ಹೆಸರಿಸಲು ಹೈದ್ರಾಬಾದ್ ಎಸಿಬಿ ಕೋರ್ಟ್ ನಿರಾಕರಿಸಿದೆ. ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿ ನೀಡಿದ್ದ ನೋಟಿಸ್ ಅನ್ನು ಎಸಿಬಿ ಕೋರ್ಟ್ ರದ್ದು ಮಾಡಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

10. Fasal Bima Yojana | ವಿಮಾ ಕಂಪನಿಗಳ ವಿರುದ್ಧ ತಿರುಗಿಬಿದ್ದ ಮಾವು ಬೆಳೆಗಾರರು; ನಾಳೆ ಶ್ರೀನಿವಾಸಪುರ ಬಂದ್‌ಗೆ ಕರೆ
ವಿಮಾ ಕಂಪನಿಗಳಿಂದ ತೋಟಗಾರಿಕೆ ಬೆಳೆಗಾರರಿಗೆ ಬೆಳೆ ವಿಮೆ ಹಣ ನೀಡುವಲ್ಲಿ ಅನ್ಯಾಯವಾಗುತ್ತಿರುವ ಹಿನ್ನೆಲೆಯಲ್ಲಿ ಡಿಸೆಂಬರ್‌ 8ರಂದು ಶ್ರೀನಿವಾಸಪುರ ತಾಲೂಕು ಬಂದ್‌ಗೆ ಕರೆ ನೀಡಲಾಗಿದೆ. ಶ್ರೀನಿವಾಸಪುರದಲ್ಲಿ ಸಭೆ ಸೇರಿದ ಮಾವು ಬೆಳೆಗಾರರು ಬೃಹತ್ ಪ್ರತಿಭಟನೆಯ (Fasal Bima Yojana) ಮೂಲಕ ಬಂದ್‌ಗೆ ಕರೆ ನೀಡಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

Exit mobile version