ವಿಸ್ತಾರ TOP 10 NEWS : ಮಾಡಾಳು ಲಂಚಾವತಾರದಲ್ಲಿ ಸಿಎಂ ರಾಜೀನಾಮೆ ಪಟ್ಟಿನಿಂದ, ಭಾರತದ ಬಗ್ಗೆ ಬಿಲ್‌ ಗೇಟ್ಸ್‌ ಖುಷ್‌ವರೆಗೆ ಪ್ರಮುಖ ಸುದ್ದಿಗಳು - Vistara News

ಕರ್ನಾಟಕ

ವಿಸ್ತಾರ TOP 10 NEWS : ಮಾಡಾಳು ಲಂಚಾವತಾರದಲ್ಲಿ ಸಿಎಂ ರಾಜೀನಾಮೆ ಪಟ್ಟಿನಿಂದ, ಭಾರತದ ಬಗ್ಗೆ ಬಿಲ್‌ ಗೇಟ್ಸ್‌ ಖುಷ್‌ವರೆಗೆ ಪ್ರಮುಖ ಸುದ್ದಿಗಳು

ರಾಜ್ಯ, ದೇಶ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಶನಿವಾರ ನಡೆದ ಪ್ರಮುಖ ಬೆಳವಣಿಗೆಗಳ ಸುದ್ದಿ ಸಂಚಯ- ವಿಸ್ತಾರ – TOP 10 News ಇಲ್ಲಿದೆ. ಇದರಲ್ಲಿ ಪ್ರಮುಖವಾಗಿರುವುದು ಮಾಡಾಳು ಲಂಚಾವತಾರದ ಮುಂದಿನ ಪರಿಣಾಮ ಮತ್ತು ಭಾರತವನ್ನು ಹೊಗಳಿದ ಬಿಲ್‌ ಗೇಟ್ಸ್.

VISTARANEWS.COM


on

Top 10 news
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

1. ಮಾಡಾಳ್‌ ಲಂಚಾವತಾರ: ಸಿಎಂ ರಾಜೀನಾಮೆಗೆ ಕೈ ಪಟ್ಟು, ಇನ್ನೇನು ಸಾಕ್ಷ್ಯ ಬೇಕೆಂದು ಕೇಳಿದ ಸಿದ್ದರಾಮಯ್ಯ
ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಲಂಚ ಹಗರಣ ಬಯಲಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿ ಕಾಂಗ್ರೆಸ್‌ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿತು. ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್‌ ನಾಯಕ ಸಿದ್ದರಾಮಯ್ಯ ಅವರು ಸಿಎಂ ಬೊಮ್ಮಾಯಿ ಅವರು ಪ್ರತಿಬಾರಿಯೂ ಸಾಕ್ಷ್ಯ ಸಾಕ್ಷ್ಯ ಕೊಡಿ ಎನ್ನುತ್ತಿದ್ದರು. ಇದಕ್ಕಿಂತ ದೊಡ್ಡ ಸಾಕ್ಷ್ಯ ಇನ್ನೇನು ಬೇಕು ಎಂದು ಕೇಳಿದರು. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ
ಪೂರಕ ವರದಿ : ಮುಖ್ಯಮಂತ್ರಿಯವರೇ, ನಿಮಗೆ ಇದಕ್ಕಿಂತ ಸಾಕ್ಷಿ ಬೇಕೇ? ಎಂದು ಕೇಳಿದ ಸಿದ್ದರಾಮಯ್ಯ

2. ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ, ಭಾರತವನ್ನು ಹೊಗಳಿದ ಬಿಲ್​ ಗೇಟ್ಸ್​
ಭಾರತಕ್ಕೆ ಆಗಮಿಸಿರುವ ಮೈಕ್ರೋಸಾಫ್ಟ್​ ಸಹಸಂಸ್ಥಾಪಕ ಬಿಲ್​ ಗೇಟ್ಸ್​ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ, ವಿವಿಧ ವಿಷಯಗಳ ಕುರಿತು ಚರ್ಚಿಸಿದ್ದಾರೆ. ಭಾರತದ ಅಭೂತಪೂರ್ವ ಪ್ರಗತಿಯನ್ನು ಶ್ಲಾಘಿಸಿದ್ದಾರೆ. ಅಷ್ಟೇ ಅಲ್ಲ, ಭಾರತದ ನೂತನ ಆವಿಷ್ಕಾರಗಳು ಇಡೀ ಜಗತ್ತಿಗೆ ಅನುಕೂಲ ಮಾಡಿಕೊಡುತ್ತಿವೆ ಎಂದು ಹೇಳಿದ್ದಾರೆ. ಕೊರೊನಾ ಲಸಿಕೆ ಬಗ್ಗೆ ಉಲ್ಲೇಖಿಸಿ ಈ ಮಾತುಗಳನ್ನಾಡಿದ್ದಾರೆ. ಪೂರ್ಣ ವರದಿಗೆ ಕ್ಲಿಕ್‌ ಮಾಡಿ

3. ಇಂಗ್ಲೆಂಡ್​​ನಲ್ಲಿ ಚೀನಾ ಹೊಗಳಿದ ರಾಹುಲ್ ; ದೇಣಿಗೆಯ ಋಣ ತೀರಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದ ಬಿಜೆಪಿ
ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿಯವರು ಇಂಗ್ಲೆಂಡ್​​ನ ಕೇಂಬ್ರಿಡ್ಜ್​ ಯೂನಿವರ್ಸಿಟಿಯಲ್ಲಿ ನೀಡಿದ ಉಪನ್ಯಾಸದಿಂದ ತೀವ್ರ ಟೀಕೆಗೆ ಗುರಿಯಾಗಿದ್ದಾರೆ. ಭಾರತದ ವಿರುದ್ಧ ಸದಾ ಕತ್ತಿ ಮಸೆಯುವ, ಕುತಂತ್ರಿ ರಾಷ್ಟ್ರ ಚೀನಾವನ್ನು ಹೊಗಳಿದ್ದು ಇನ್ನಷ್ಟು ವಿವಾದಕ್ಕೆ ಕಾರಣವಾಗಿದೆ. ರಾಹುಲ್‌ ಅವರು ತಾವು ಪಡೆದಿರುವ ದೇಣಿಗೆಯ ಋಣ ತೀರಿಸುತ್ತಿದ್ದಾರೆ ಎಂದು ಬಿಜೆಪಿ ವ್ಯಂಗ್ಯ ಮಾಡಿದೆ. ಪೂರ್ಣ ವರದಿಗೆ ಕ್ಲಿಕ್‌ ಮಾಡಿ

4. ವಿಸ್ತಾರ ಅಂಕಣ: ಸರ್ಕಾರಿ ನೌಕರರ ಕುರಿತು ಸಮಾಜದಲ್ಲಿ ಇಷ್ಟೊಂದು ಆಕ್ರೋಶ ಮಡುಗಟ್ಟಿದೆ ಏಕೆ? ಇದಕ್ಕೆ ಪರಿಹಾರವೇನು?
ಭ್ರಷ್ಟಾಚಾರ ಎನ್ನುವುದು ಸರ್ಕಾರಿ ಕಚೇರಿಯಲ್ಲಿ ತುಂಬಿ ತುಳುಕುತ್ತಿದೆ ಎನ್ನುವುದು ಸಾಮಾನ್ಯವಾಗಿ ಕೇಳಿಬರುವ ಮಾತು. ಹಾಗಿದ್ದರೆ ನಿಜಕ್ಕೂ ಸರ್ಕಾರಿ ನೌಕರರೆಲ್ಲ ಭ್ರಷ್ಟರಾ? ಒಳ್ಳೆಯವರು ಇಲ್ಲವೇ? ಕೆಲವೇ ಶೇಕಡಾ ಜನರ ಭ್ರಷ್ಟತೆಗೆ ಇಡೀ ವ್ಯವಸ್ಥೆಯನ್ನು ದೂಷಿಸಲಾಗುತ್ತಿದೆಯಾ? ಈ ಎಲ್ಲ ಪ್ರಶ್ನೆಗಳನ್ನು ಇಟ್ಟುಕೊಂಡು ಎಲ್ಲ ಆಯಾಮಗಳ ವಿಶ್ಲೇಷಣೆ ನಡೆಸಿದ್ದಾರೆ ವಿಸ್ತಾರ ನ್ಯೂಸ್‌ನ ಪ್ರಧಾನ ಸಂಪಾದಕರಾದ ಹರಿಪ್ರಕಾಶ್‌ ಕೋಣೆಮನೆ ಅವರು. ಪೂರ್ಣ ಲೇಖನಕ್ಕೆ ಈ ಲಿಂಕ್‌ ಕ್ಲಿಕ್‌ ಮಾಡಿ

5. ಬಿಜೆಪಿ ಸೇರಲು ಸುಮಲತಾ ಮೂರು ಕಂಡೀಷನ್;‌ ಕಮಲ ಪಕ್ಷ ಸೇರ್ಪಡೆ ಬಹುತೇಕ ಪಕ್ಕಾ?
ಮಂಡ್ಯ ಲೋಕಸಭಾ ಸದಸ್ಯೆ ಸುಮಲತಾ ಅಂಬರೀಷ್‌ ಬಿಜೆಪಿ ಸೇರುವುದು ಬಹುತೇಕ ಪಕ್ಕಾ ಆಗಿದೆ ಎಂದೇ ಹೇಳಲಾಗುತ್ತಿದೆ. ಇದರ ಭಾಗವಾಗಿ ಪಕ್ಷದ ಹಿರಿಯ ನಾಯಕ, ಮಾಜಿ ಸಿಎಂ ಎಸ್.‌ಎಂ. ಕೃಷ್ಣ ಅವರನ್ನು ಭೇಟಿಯಾಗಿ ಮಾತುಕತೆಯನ್ನೂ ನಡೆಸಿದ್ದಾರೆ. ಅವರು ಬಿಜೆಪಿ ಸೇರಲು ಮೂರು ಷರತ್ತುಗಳನ್ನು ಇಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

6. ರಾಜ್ಯದಲ್ಲಿ ಕೇಜ್ರಿವಾಲ್‌: ಭ್ರಷ್ಟಾಚಾರ ಸಹಿಸಲ್ಲ, ನನ್ನ ಮಗ ಮಾಡಿದರೂ ಜೈಲಿಗೆ ಹಾಕುವೆ ಎಂದ ದೆಹಲಿ ಸಿಎಂ
ಆಮ್‌ ಆದ್ಮಿ ಪಾರ್ಟಿ ಸರ್ಕಾರದಲ್ಲಿ ಯಾರೇ ಭ್ರಷ್ಟಾಚಾರ ಮಾಡಿದರೂ ನಾವು ಸಹಿಸಲ್ಲ. ಪಂಜಾಬ್‌ನಲ್ಲಿ ಒಬ್ಬ ಮಂತ್ರಿ ಗೋಲ್ ಮಾಲ್ ಮಾಡಿ ಸಿಕ್ಕಿಬಿದ್ದ.‌ ಅವರನ್ನು ಅಲ್ಲಿನ ಸಿಎಂ ಭಗವಂತ್ ಮಾನ್ ಅವರು ಜೈಲಿಗೆ ಕಳುಹಿಸಿದರು, ಎಂಎಲ್‌ಎ ಸಿಕ್ಕಿಬಿದ್ದಾಗ ಅವರೂ ಜೈಲಿಗೆ ಹೋಗಿದ್ದಾರೆ. ನನ್ನ ಮಗ ನಾಳೆ ಭ್ರಷ್ಟಾಚಾರದಲ್ಲಿ ತೊಡಗಿದರೂ ಜೈಲಿಗೆ ಹಾಕುತ್ತೇನೆ ಎಂದು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಹೇಳಿದರು. ಅವರು ದಾವಣಗೆರೆಯಲ್ಲಿ ನಡೆದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದರು. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

7. ಆಸ್ಟ್ರೇಲಿಯಾದಲ್ಲಿ ಖಲಿಸ್ತಾನಿ ಉಗ್ರರ ಹಾವಳಿ; ಲಕ್ಷ್ಮೀ ನಾರಾಯಣ ದೇಗುಲ ವಿರೂಪ
ಆಸ್ಟ್ರೇಲಿಯಾದ ಬ್ರಿಸ್ಬೇನ್​​ನಲ್ಲಿರುವ ಹಿಂದು ದೇವಸ್ಥಾನವನ್ನು ವಿರೂಪಗೊಳಿಸಲಾಗಿದ್ದು, ಗೋಡೆಗಳ ಮೇಲೆಲ್ಲ ಗೀಚು ಬರಹ ಬರೆಯಲಾಗಿದೆ. ಕಳೆದ ಎರಡು ತಿಂಗಳಲ್ಲಿ ಆಸ್ಟ್ರೇಲಿಯಾದಲ್ಲಿ ಧ್ವಂಸಗೊಳ್ಳುತ್ತಿರುವ ನಾಲ್ಕನೇ ದೇವಸ್ಥಾನ ಇದಾಗಿದೆ. ಗೋಡೆಯ ಮೇಲೆಲ್ಲ ಹಿಂದೂಸ್ತಾನ್​ ಮುರ್ದಾಬಾದ್​, ಖಲಿಸ್ತಾನ್ ಜಿಂದಾಬಾದ್ ಎಂದು ಬರೆಯಲಾಗಿದ್ದು, ಇದು ಖಲಿಸ್ತಾನಿ ಉಗ್ರರದ್ದೇ ಕೃತ್ಯ ಎನ್ನಲಾಗಿದೆ.‌ ಪೂರ್ಣ ವರದಿಗೆ ಕ್ಲಿಕ್‌ ಮಾಡಿ

8. ವಾರದ ವ್ಯಕ್ತಿಚಿತ್ರ: ಹಿಮಂತ್ ಬಿಸ್ವಾ ಶರ್ಮಾ, ಈಶಾನ್ಯ ಭಾರತದ ಬಿಜೆಪಿ ಕೋಟೆ ಕಾಯುತ್ತಿರುವ ಕೋತ್ವಾಲ್!
ತ್ರಿಪುರಾದಲ್ಲಿ ಸ್ವಂತ ಬಲ ಹಾಗೂ ನಾಗಾಲ್ಯಾಂಡ್ ಮತ್ತು ಮೇಘಾಲಯದಲ್ಲಿ ಮೈತ್ರಿ ಪಕ್ಷಗಳೊಂದಿಗೆ ಬಿಜೆಪಿ ಸರ್ಕಾರ ರಚಿಸುತ್ತಿದೆ. ಪಕ್ಷದ ಈ ಸಾಧನೆಯ ಹಿಂದೆ ಅಸ್ಸಾಮ್ ಸಿಎಂ ಹಿಮಂತ್ ಬಿಸ್ವಾ ಶರ್ಮಾ ಅವರ ಚಾಣಾಕ್ಷತನ, ಸಂಘಟನಾ ಚಾತುರ್ಯ ಕೆಲಸ ಮಾಡಿದೆ. ಅವರ ಕುರಿತ ವ್ಯಕ್ತಿ ಚಿತ್ರ ಓದಲು ಈ ಲಿಂಕ್‌ ಕ್ಲಿಕ್‌ ಮಾಡಿ

9. ಜ್ವರ-ಕೆಮ್ಮು ಬಂದಾಕ್ಷಣ ಆ್ಯಂಟಿಬಯೋಟಿಕ್​ ಸೇವಿಸಬೇಡಿ ಎಂದ ಐಎಂಎ; ವೈದ್ಯರಿಗೂ ಸೂಚನೆ
ನವ ದೆಹಲಿ: ಹವಾಮಾನ ಬದಲಾವಣೆಯಿಂದ ಜ್ವರ, ಶೀತ, ಕೆಮ್ಮು ಹೆಚ್ಚುತ್ತಿದೆ. ಯಾರಿಗೇ ನೋಡಿದರೂ ಜ್ವರ, ನೆಗಡಿ, ಗಂಟಲು ನೋವು, ಜ್ವರವೆಂದು ವೈದ್ಯರ ಬಳಿ ಹೋಗುತ್ತಿದ್ದಾರೆ. ಇದೇ ಹೊತ್ತಲ್ಲಿ ಭಾರತೀಯ ವೈದ್ಯಕೀಯ ಸಂಘ ವೈದ್ಯರಿಗೆ ಒಂದು ನಿರ್ದೇಶನ ನೀಡಿದೆ. ಜ್ವರ-ಶೀತ-ಕೆಮ್ಮಿಗೆ ಆ್ಯಂಟಿಬಯೋಟಿಕ್​ ಮಾತ್ರೆಗಳನ್ನು ತೆಗೆದುಕೊಳ್ಳುವಂತೆ ರೋಗಿಗಳಿಗೆ ಸೂಚಿಸಬೇಡಿ ಎಂದು ಹೇಳಿದೆ. ಪೂರ್ಣ ವರದಿಗೆ ಕ್ಲಿಕ್‌ ಮಾಡಿ

10. Viral News: ರೈಫಲ್​​ ಬದಿಗಿಟ್ಟು ಬ್ಯಾಟ್​ ಹಿಡಿದ ಭಾರತ-ಚೀನಾ ಸೈನಿಕರು; ವಿಡಿಯೊ ವೈರಲ್​
ಇತ್ತೀಚೆಗೆ ಅರುಣಾಚಲ ಪ್ರದೇಶದಲ್ಲಿನ ತವಾಂಗ್‌ ವಲಯದ ವಾಸ್ತವ ನಿಯಂತ್ರಣ ರೇಖೆಯ (ಎಲ್‌ಎಸಿ) ವಿಚಾರವಾಗಿ ಚೀನಾ ಭಾರತದ ಜತೆ ಸಂಘರ್ಷ ನಡೆಸಿತ್ತು. ಆದರೆ ಇದೀಗ ಎಲ್ಲ ಸಂರ್ಘರ್ಷವನ್ನು ಮರೆತಂತೆ ಭಾರತ ಮತ್ತು ಚೀನಾ ಸೈನಿಕರು ಪೂರ್ವ ಲಡಾಖ್‌ನಲ್ಲಿ ಕ್ರಿಕೆಟ್ ಆಡುತ್ತಿರುವ ಫೋಟೊಗಳನ್ನು ಭಾರತೀಯ ಸೇನೆ ಶುಕ್ರವಾರ (ಮಾರ್ಚ್​ 3) ಹಂಚಿಕೊಂಡಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

ಇನ್ನಷ್ಟು ಪ್ರಮುಖ ಸುದ್ದಿಗಳು

1.ಆರ್‌ಆರ್‌ಆರ್ ಸಿನಿಮಾ ಉಲ್ಲೇಖಿಸಿ ಬ್ರಿಟನ್ನರಿಗೆ ತಿವಿದ ವಿದೇಶಾಂಗ ಸಚಿವ ಜೈಶಂಕರ್
‌2. INDvsAUS : ನಾಲ್ಕನೇ ಪಂದ್ಯಕ್ಕೆ ಮೊಹಮ್ಮದ್​ ಶಮಿ ವಾಪಸ್​, ಸಿರಾಜ್​ಗೆ ರೆಸ್ಟ್​​ ?
‌3. 2nd PUC Exam 2023: ಪಿಯು ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿ ಪ್ರಯಾಣ ಉಚಿತ
4. ಶೇನ್​ ವಾರ್ನ್​ ಮೊದಲ ಪುಣ್ಯಸ್ಮರಣೆಗೆ ಭಾವನಾತ್ಮಕ ಪತ್ರ ಬರೆದ ಸಚಿನ್​ ತೆಂಡೂಲ್ಕರ್​
‌5. ಮಕ್ಕಳ ಕಥೆ: ಭೂಮಿಯಲ್ಲಿ ಸಿಕ್ಕಿದ ನಿಧಿ ರಕ್ಷಿಸಿಕೊಂಡ ಬಡವ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Actor Darshan: ಕೊಲೆ ಕೇಸ್‌ನಲ್ಲಿ ನಟ ದರ್ಶನ್‌ ಅರೆಸ್ಟ್‌; ಪೊಲೀಸರು ಹೇಳಿದ್ದೇನು?

Actor Darshan: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ (28) ಎಂಬವರನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಸ್ಯಾಂಡಲ್‌ವುಟ್‌ ನಟ, ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ. ನಟನನ್ನು ಬಂಧಿಸಿರುವ ಪೊಲೀಸರು ಬೆಂಗಳೂರಿಗೆ ಕರೆದುಕೊಂಡು ಬರುತ್ತಿದ್ದಾರೆ. ಈ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದಾರೆ.

VISTARANEWS.COM


on

Actor Darshan
Koo

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ (28) ಎಂಬವರನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಸ್ಯಾಂಡಲ್‌ವುಟ್‌ ನಟ, ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ (Actor Darshan) ಅವರನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರಿನಲ್ಲಿರುವ (Mysore) ದರ್ಶನ್‌ ಅವರ ತೋಟದ ಮನೆಯಲ್ಲಿ ಬೆಂಗಳೂರಿನ ಪೊಲೀಸರು ದರ್ಶನ್‌ ಅವರನ್ನು ಬಂಧಿಸಿದ್ದಾರೆ. ನಟನನ್ನು ಬಂಧಿಸಿರುವ (Actor Darshan Arrested) ಪೊಲೀಸರು ಬೆಂಗಳೂರಿಗೆ ಕರೆದುಕೊಂಡು ಬರುತ್ತಿದ್ದಾರೆ. ಈ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದಾರೆ.

ಪವಿತ್ರಾ ಗೌಡ ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಮಾಡಿದ ಹಿನ್ನೆಲೆಯಲ್ಲಿ ದರ್ಶನ್‌ ಆಪ್ತರು ಜೂನ್‌ 8ರಂದು ರೇಣುಕಾಸ್ವಾಮಿ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ಬೆಂಗಳೂರಿನ ಆರ್‌.ಆರ್‌.ನಗರದ ಸುಮ್ಮನಹಳ್ಳಿಯ ರಾಜಕಾಲುವೆ ಬಳಿ ಜೂನ್‌ 9ರಂದು ಬೀದಿ ನಾಯಿಗಳು ಕಸ ಎಳೆದಾಡುವಾಗ ಶವ ಪತ್ತೆಯಾಗಿತ್ತು. ಇದಾದ ಬಳಿಕ ಅದೇ ದಿನ ರಾಮ್‌ ದೋರ್‌ ಎಂಬ ಸೆಕ್ಯುರಿಟಿ ಗಾರ್ಡ್‌ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ಆಗಮಿಸಿದ ವೇಳೆ ಶವದ ಮುಖ, ತಲೆ, ಕಿವಿಗೆ ರಕ್ತಗಾಯವಾಗಿರುವುದು ಕಂಡು ಬಂದಿತ್ತು. ಯಾರೋ‌ ಕೊಲೆ ಮಾಡಿ ತಂದು ಬಿಸಾಡಿರೋ ಅನುಮಾನದ ಮೇಲೆ ಪೊಲೀಸರು ದೂರು ದಾಖಲಿಸಿ ತನಿಖೆ ಕೈಗೆತ್ತಿಕೊಂಡಿದ್ದರು. ಈ ವೇಳೆ ಇದು ರೇಣುಕಾಸ್ವಾಮಿ ಅವರ ಶವ ಎನ್ನುವುದು ತಿಳಿದು ಬಂದಿತ್ತು.

ಈ ಪ್ರಕರಣದಲ್ಲಿ ಸೋಮವಾರ ಗಿರಿನಗರ ಮೂಲದ ಮೂವರು ಆರೋಪಿಗಳು ಸರೆಂಡರ್ ಆಗಿದ್ದರು. ಹಣಕಾಸು ವಿಚಾರವಾಗಿ ಕೊಲೆ ಮಾಡಿದ್ದಾಗಿ ಹೇಳಿದ್ದರು. ಪೊಲೀಸರಿಗೆ ಅನುಮಾನ ಬಂದು ತೀವ್ರ ವಿಚಾರಣೆ ಮಾಡಿದ್ದರ ಈ ವೇಳೆ ದರ್ಶನ್ ಹೆಸರು ಬಾಯಿ ಬಿಟ್ಟಿದ್ದಾರೆ. ಸದ್ಯ ಈ ಪ್ರಕರಣದಲ್ಲಿ ದರ್ಶನ್‌ ಅವರ ಪಾತ್ರದ ಬಗ್ಗೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹಸಚಿವ ಜಿ.ಪರಮೇಶ್ವರ್‌ ಮಾಹಿತಿ ಕಲೆ ಹಾಕುತ್ತಿದ್ದಾರೆ. ʼʼತನಿಖೆ ನಡೆಸಿದ ಬಳಿಕ ಕೊಲೆಯಲ್ಲಿ ದರ್ಶನ್‌ ಪಾತ್ರದ ಬಗ್ಗೆ ತಿಳಿದು ಬರಲಿದೆ. ಈ ಬಗ್ಗೆ ಪೊಲೀಸರು ವಿಚಾರಣೆ ಕೈಗೆತ್ತಿಕೊಂಡಿದ್ದಾರೆ. ಸದ್ಯ ಏನನ್ನೂ ಹೇಳಲು ಆಗುವುದಿಲ್ಲʼʼ ಎಂದು ಜಿ.ಪರಮೇಶ್ವರ್‌ ತಿಳಿಸಿದ್ದಾರೆ.

ಕೊಲೆಗೆ ಕಾರಣ

ರೇಣುಕಾಸ್ವಾಮಿ ಪವಿತ್ರಗೌಡಗೆ ಮೆಸೇಜ್ ಮಾಡುತ್ತಿದ್ದ. ಈ ವಿಷಯ ತಿಳಿದು ದರ್ಶನ್ ಆಪ್ತರು ನಕಲಿ ಅಕೌಂಟ್ ತೆರೆದಿದ್ದರು. ಬಳಿಕ ರೇಣುಕಾಸ್ವಾಮಿ ಜತೆ ಚಾಟಿಂಗ್ ನಡೆಸಲಾಗಿತ್ತು. ಬಳಿಕ ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಕಿಡ್ನಾಪ್ ಮಾಡಿಕೊಂಡು ಬಂದು ಹಲ್ಲೆ ನಡೆಸಲಾಗಿತ್ತು. ಈ ವೇಳೆ ಆತ ಸಾವನ್ನಪ್ಪಿದ್ದ. ಆತ ಮೃತಪಟ್ಟಿರುವುದು ಗೊತ್ತಾಗುತ್ತಿದ್ದಂತೆ ದರ್ಶನ್‌ ಆಪ್ತರು ಸ್ಕಾರ್ಪಿಯೋ ಕಾರಿನಲ್ಲಿ ಶವವನ್ನು ತಂದು ಬಿಸಾಡಿ ಹೋಗಿದ್ದರು. ಬಳಿಕ ಪೊಲೀಸರಿಗೆ ಕಾಲ್‌ ಮಾಡಿ ತಪ್ಪಾಗಿದೆ ಸರ್ ಅಂದಿದ್ದರು. ಬಳಿಕ ಬಂದು ಮೂವರು ಪೊಲೀಸರ ಮುಂದೆ ಶರಣಾಗಿದ್ದರು ಎನ್ನಲಾಗಿದೆ.

ದರ್ಶನ್‌ ಅವರನ್ನು ಪೊಲೀಸರು ಬಂಧಿಸಿದ ಬೆನ್ನಲ್ಲೇ ನಟ ದರ್ಶನ್‌ ಅವರ ಗೆಳತಿಯೂ ಆದ ನಟಿ (Pavithra Gowda) ಅವರನ್ನೂ ಪೊಲೀಸರು ವಶಪಡಿಸಿಕೊಂಡಿದ್ದಾರೆ. ರೇಣುಕಾಸ್ವಾಮಿ ಹತ್ಯೆಯ ಹಿಂದೆ ಒಳಸಂಚು ರೂಪಿಸಿದ ಆರೋಪದಲ್ಲಿ ಬೆಂಗಳೂರಿನ ಅನ್ನಪೂರ್ಣೇಶ್ವರ ನಗರ ಠಾಣೆಯ ಪೊಲೀಸರು ವಶಪಡಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ರೇಣುಕಾಸ್ವಾಮಿ ಯಾರು?

ಚಿತ್ರದುರ್ಗ ಮೂಲದವನಾದ ರೇಣುಕಾಸ್ವಾಮಿ ಎಂಬ 28 ವರ್ಷದ ಯುವಕನು ಮೆಡಿಕಲ್‌ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದ. ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಈತನು ಪವಿತ್ರಾ ಗೌಡ ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಕಳುಹಿಸಿದ್ದ ಎನ್ನಲಾಗಿದೆ. ಇದೇ ಕಾರಣಕ್ಕೆ ದರ್ಶನ್‌ ಹಾಗೂ ಅವರ ಆಪ್ತರು ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ದರ್ಶನ್‌ ಸೇರಿ 10 ಮಂದಿಯನ್ನು ಪೊಲೀಸರು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ. ರೇಣುಕಾಸ್ವಾಮಿಗೆ ಕಳೆದ ವರ್ಷವೇ ಸಹನಾ ಎಂಬ ಯುವತಿ ಜತೆ ಮದುವೆಯಾಗಿದೆ ಎಂದು ಹೇಳಲಾಗುತ್ತಿದೆ. ರೇಣುಕಾಸ್ವಾಮಿ ಕೂಡ ದರ್ಶನ್‌ ಅಭಿಮಾನಿಯಾಗಿದ್ದ ಎನ್ನಲಾಗಿದೆ.

ಇದನ್ನೂ ಓದಿ: Actor Darshan: ಹತ ರೇಣುಕಾಸ್ವಾಮಿ ಯಾರು? ಕೊಲೆ ಹಿಂದೆ ದರ್ಶನ್‌ ಕೈವಾಡವೇನು? ಇಲ್ಲಿದೆ ಶಾಕಿಂಗ್‌ ಮಾಹಿತಿ

Continue Reading

ಕರ್ನಾಟಕ

Pavithra Gowda: ಕೊಲೆ ಕೇಸ್;‌ ದರ್ಶನ್‌ ಬಂಧನ ಬೆನ್ನಲ್ಲೇ ಗೆಳತಿ ಪವಿತ್ರಾ ಗೌಡ ಕೂಡ ಪೊಲೀಸ್‌ ವಶಕ್ಕೆ!

ಪವಿತ್ರಾ ಗೌಡ ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಮಾಡಿದ ಹಿನ್ನೆಲೆಯಲ್ಲಿ ದರ್ಶನ್‌ ಆಪ್ತರು ಜೂನ್‌ 8ರಂದು ರೇಣುಕಾಸ್ವಾಮಿ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ಸುಮ್ಮನಹಳ್ಳಿಯ ರಾಜಕಾಲುವೆ ಬಳಿ ಅಪರಿಚಿತ ಶವ ಪತ್ತೆಯಾಗಿತ್ತು. ಜೂನ್‌ 9ರ ಭಾನುವಾರ ರಾಜಕಾಲುವೆ ಬಳಿ ಶವ ಪತ್ತೆಯಾಗಿತ್ತು. ಕೊಲೆಯ ಹಿಂದೆ ಪವಿತ್ರಾ ಗೌಡ ಅವರ ಕೈವಾಡ ಇರುವ ಶಂಕೆಯ ಹಿನ್ನೆಲೆಯಲ್ಲಿ ನಟಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

VISTARANEWS.COM


on

Pavithra Gowda
Koo

ಬೆಂಗಳೂರು: ರೇಣುಕಾಸ್ವಾಮಿ ಎಂಬ ಯುವಕನನ್ನು ಕೊಲೆ ಮಾಡಿದ ಆರೋಪದಲ್ಲಿ ಸ್ಯಾಂಡಲ್‌ವುಡ್‌ ಖ್ಯಾತ ನಟ, ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ (Actor Darshan) ಅವರನ್ನು ಪೊಲೀಸರು ಬಂಧಿಸಿದ ಬೆನ್ನಲ್ಲೇ ನಟ ದರ್ಶನ್‌ ಅವರ ಗೆಳತಿಯೂ ಆದ ನಟಿ (Pavithra Gowda) ಅವರನ್ನೂ ಪೊಲೀಸರು ವಶಪಡಿಸಿಕೊಂಡಿದ್ದಾರೆ. ರೇಣುಕಾಸ್ವಾಮಿ ಹತ್ಯೆಯ ಹಿಂದೆ ಒಳಸಂಚು ರೂಪಿಸಿದ ಆರೋಪದಲ್ಲಿ ಬೆಂಗಳೂರಿನ ಅನ್ನಪೂರ್ಣೇಶ್ವರ ನಗರ ಠಾಣೆಯ ಪೊಲೀಸರು ವಶಪಡಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಈಗಾಗಲೇ ನಟ ದರ್ಶನ್‌ ಅವರನ್ನು ಬಂಧಿಸಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ನಟಿ ಪವಿತ್ರಾ ಗೌಡ ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಮಾಡಿದ ಹಿನ್ನೆಲೆಯಲ್ಲಿಯೇ ರೇಣುಕಾಸ್ವಾಮಿ ಎಂಬ ಯುವಕನನ್ನು ಕೊಲೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಹಾಗಾಗಿ, ಕೊಲೆಯ ಹಿಂದೆ ಪವಿತ್ರಾ ಗೌಡ ಅವರ ಕೈವಾಡ ಏನಿದೆ? ಇವರು ಮಾಡಿದ ಒಳಸಂಚು ಏನಿದೆ ಎಂಬುದರ ಕುರಿತು ಹೆಚ್ಚಿನ ತನಿಖೆ ನಡೆಸಲು ಪೊಲೀಸರು ನಟಿಯನ್ನು ವಶಪಡಿಸಿಕೊಂಡಿಸಿದ್ದಾರೆ ಎಂದು ತಿಳಿದುಬಂದಿದೆ.

ಪವಿತ್ರಾ ಗೌಡ ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಮಾಡಿದ ಹಿನ್ನೆಲೆಯಲ್ಲಿ ದರ್ಶನ್‌ ಆಪ್ತರು ಜೂನ್‌ 8ರಂದು ರೇಣುಕಾಸ್ವಾಮಿ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ಸುಮ್ಮನಹಳ್ಳಿಯ ರಾಜಕಾಲುವೆ ಬಳಿ ಅಪರಿಚಿತ ಶವ ಪತ್ತೆಯಾಗಿತ್ತು. ಜೂನ್‌ 9ರ ಭಾನುವಾರ ರಾಜಕಾಲುವೆ ಬಳಿ ಶವ ಪತ್ತೆಯಾಗಿತ್ತು. ಬೀದಿ ನಾಯಿಗಳು ಕಸ ಎಳೆದಾಡುವಾಗ ಶವ ಪತ್ತೆಯಾಗಿತ್ತು. ಇದಾದ ಬಳಿಕ ಅದೇ ದಿನ ರಾಮ್‌ ದೋರ್‌ ಎಂಬ ಸೆಕ್ಯುರಿಟಿ ಗಾರ್ಡ್‌ ಪೊಲೀಸರಿಗೆ ದೂರು ನೀಡಿದ್ದರು. ಇದಾದ ನಂತರ ಪೊಲೀಸರು ತನಿಖೆ ನಡೆಸಿದ್ದರು.

ದರ್ಶನ್‌ ಕೈವಾಡವೇನು?

ಪವಿತ್ರಾ ಗೌಡ ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಕಳುಹಿಸಿದ ಹಿನ್ನೆಲೆಯಲ್ಲಿ ದರ್ಶನ್‌ ಆಪ್ತರು ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಮತ್ತೊಂದಿಷ್ಟು ಮೂಲಗಳ ಪ್ರಕಾರ, ರೇಣುಕಾಸ್ವಾಮಿ ಮೇಲೆ ದರ್ಶನ್‌ ಅವರೇ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ರೇಣುಕಾಸ್ವಾಮಿ ಮರ್ಮಾಂಗಕ್ಕೆ ಒದ್ದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಇದಾದ ಬಳಿಕ ಗಂಭೀರವಾಗಿ ಗಾಯಗೊಂಡಿದ್ದ ರೇಣುಕಾಸ್ವಾಮಿ ಮೃತಪಟ್ಟಿದ್ದರು. ನಂತರ ಶವವನ್ನು ಚರಂಡಿ ಬಳಿ ಎಸೆಯಲಾಗಿತ್ತು ಎನ್ನಲಾಗಿದೆ.

ಪ್ರಕರಣ ಭೇದಿಸಿದ್ದು ಹೇಗೆ?

ಅಪರಿಚಿತ ಶವವನ್ನು ಪೊಲೀಸರು ಮರಣೋತ್ತರ ಪರೀಕ್ಷೆಗೆ ಕಳುಹಿಸಿ, ತನಿಖೆ ಆರಂಭಿಸಿದ್ದರು. ಇದರ ಮಧ್ಯೆಯೇ, ಗಿರಿನಗರದ ಮೂವರು ಆರೋಪಿಗಳು ತಾವೇ ಕೊಲೆ ಮಾಡಿದ್ದಾಗಿ ಪೊಲೀಸರಿಗೆ ಶರಣಾಗಿದ್ದರು. ಹಣಕಾಸು ವಿಚಾರವಾಗಿ ಕೊಲೆ ಮಾಡಿರುವುದಾಗಿ ಅವರು ಒಪ್ಪಿಕೊಂಡಿದ್ದರು. ಅನುಮಾನಗೊಂಡ ಪೊಲೀಸರು ಹೆಚ್ಚಿನ ತನಿಖೆ ನಡೆಸಿದಾಗ, ನಟ ದರ್ಶನ್‌ ಕೈವಾಡ ಇರುವುದು ಬಯಲಾಗಿದೆ ಎಂದು ತಿಳಿದುಬಂದಿದೆ. ಆರೋಪಿಗಳೇ ದರ್ಶನ್‌ ಹೆಸರು ಹೇಳಿದ ಕಾರಣ ನಟನನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಇದನ್ನೂ ಓದಿ: Actor Darshan: ಹತ ರೇಣುಕಾಸ್ವಾಮಿ ಯಾರು? ಕೊಲೆ ಹಿಂದೆ ದರ್ಶನ್‌ ಕೈವಾಡವೇನು? ಇಲ್ಲಿದೆ ಶಾಕಿಂಗ್‌ ಮಾಹಿತಿ

Continue Reading

ದಕ್ಷಿಣ ಕನ್ನಡ

Black Magic : 25 ಕುರಿ-ಮೇಕೆಗಳ ರುಂಡ ಕತ್ತರಿಸಿ ವ್ಯಕ್ತಿಗಳ ಫೋಟೊ ಇಟ್ಟು ಭಯಾನಕ ವಾಮಾಚಾರ!

Black Magic : ಬೆಳ್ತಂಗಡಿ ಸಮೀಪದಲ್ಲಿ ಭಯಂಕರವಾಗಿ ವಾಮಾಚಾರ ಪ್ರಯೋಗ ಮಾಡಲಾಗಿದೆ. ಬರೋಬ್ಬರಿ 25 ಆಡುಗಳ ರುಂಡ ಕತ್ತರಿಸಿ ಬಳಿಕ ಮೊಳೆ ಹೊಡೆದು ವ್ಯಕ್ತಿಗಳ ಫೋಟೋ ಹಾಕಿದ್ದಾರೆ.

VISTARANEWS.COM


on

By

black magic
Koo

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಚ್ಚಿ ಬೀಳಿಸುವ ವಾಮಾಚಾರ ಪ್ರಕರಣವೊಂದು (Black Magic ) ನಡೆದಿದೆ. 25 ಸತ್ತ ಆಡಿನ ತಲೆಯೊಂದಿಗೆ ವ್ಯಕ್ತಿಗಳ ಭಾವ ಚಿತ್ರ ಬಳಸಿ ಕೃಷಿ ತೋಟದ ಗೇಟ್ ಮುಂಭಾಗ ವಾಮಾಚಾರ ನಡೆಸಲಾಗಿದೆ.

ದಕ್ಷಿಣ ಕನ್ನಡದ ಬೆಳ್ತಂಗಡಿಯ ಗರ್ಡಾಡಿಯ ಬೋಳಿಯಾರ್‌ನಲ್ಲಿ ವಾಮಾಚಾರ ನಡೆಸಲಾಗಿದೆ. ಜಾಗದ ತಕರಾರು ಹಿನ್ನೆಲೆಯಲ್ಲಿ ವಾಮಾಚಾರ ನಡೆದಿರುವ ಆರೋಪ ಕೇಳಿ ಬಂದಿದೆ. ಕೃಷಿ ತೋಟ ಮುಂಭಾಗ ಸತ್ತ ಆಡಿನ ತಲೆಗಳು ಹಾಗು ವ್ಯಕ್ತಿಗಳ ಭಾವಚಿತ್ರ ಪತ್ತೆಯಾಗಿದೆ.

ಆಡಿನ ತಲೆಗೆ ಹಲವು ಜನರ ಭಾವಚಿತ್ರವನ್ನು ಮೊಳೆ ಹೊಡೆದು ಮಾಟ ಮಂತ್ರ ಮಾಡಲಾಗಿದೆ. ಸಮಾಜದ ಕೆಲ ಗಣ್ಯ ವ್ಯಕ್ತಿಗಳ ಫೋಟೋ ಕೂಡ ಬಳಕೆ ಮಾಡಲಾಗಿದೆ. ಜಾಗದ ಮಾಲೀಕರಾದ ಗೋಪು ಕುಮಾರ್ ಹಾಗು ಸುಮೇಶ್ ವಿರುದ್ಧ ವಾಮಾಚಾರ ನಡೆದಿದೆ. ಮಂಗಳೂರಿನ ರಾಜೇಶ್ ಪ್ರಭು ಎಂಬಾತನೇ ಇದನ್ನಲ್ಲೆ ಮಾಡಿಸಿದ್ದಾನೆ ಎನ್ನಲಾಗಿದೆ.

ಇದನ್ನೂ ಓದಿ: Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

ರಾಜೇಶ್ ಪ್ರಭು ಹಾಗು ಗೋಪು ಕುಮಾರ್ ನಡುವೆ ಜಾಗದ ತಕರಾರು ಇತ್ತು. ರಾಜೇಶ್ ಪ್ರಭು ವಿರುದ್ಧ ಕಾನೂನು ಹೋರಾಟಕ್ಕೆ ಗೋಪು ಕುಮಾರ್ ಹಾಗು ಸಂಗಡಿಗರು ಮುಂದಾಗಿದ್ದರು. ಇದೆ ಕಾರಣಕ್ಕೆ ಗೋಪು ಕುಮಾರ್ ಸಹಿತ ಬೆಂಬಲಿಸಿದವರ ವಿರುದ್ಧವು ವಾಮಾಚಾರ ಪ್ರಯೋಗ ಮಾಡಲಾಗಿದೆ.

ಸ್ಥಳದಲ್ಲಿ 25 ಆಡಿನ ತಲೆಗಳು, ಮೊಟ್ಟೆ, ಮರದ ಪ್ರತಿಕೃತಿ, ಭಾವಚಿತ್ರ, ಹೂವು ಪತ್ತೆಯಾಗಿದೆ. ತೋಟದ ಬಳಿ ಆಗಮಿಸುವ ಸಾರ್ವಜನಿಕರಲ್ಲಿ ಆತಂಕ ಹೆಚ್ಚಾಗಿದೆ. ಕೃತ್ಯ ನಡೆಸಿದವರ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Actor Darshan: ಹತ ರೇಣುಕಾಸ್ವಾಮಿ ಯಾರು? ಕೊಲೆ ಹಿಂದೆ ದರ್ಶನ್‌ ಕೈವಾಡವೇನು? ಇಲ್ಲಿದೆ ಶಾಕಿಂಗ್‌ ಮಾಹಿತಿ

Actor Darshan: ನಟಿ ಪವಿತ್ರಾ ಗೌಡ ಅವರಿಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ ಹಿನ್ನೆಲೆಯಲ್ಲಿ ರೇಣುಕಾಸ್ವಾಮಿ ಎಂಬುವರ ಮೇಲೆ ಎರಡು ತಿಂಗಳ ಹಿಂದೆ ದರ್ಶನ್‌ ಸೇರಿ ಹಲವರು ಹಲ್ಲೆ ನಡೆಸಿದ್ದು, ಇದಾದ ಬಳಿಕ ರೇಣುಕಾಸ್ವಾಮಿ ಮೃತಪಟ್ಟಿದ್ದರು. ನಟ ದರ್ಶನ್‌ ಸೇರಿ ಹಲವರು ರೇಣುಕಾಸ್ವಾಮಿ ಅವರ ಮರ್ಮಾಂಗಕ್ಕೆ ಹೊಡೆದು, ಒದ್ದು ಹಲ್ಲೆ ನಡೆಸಿದ್ದರು. ಕೊಲೆ ಮಾಡಿದ ಆರೋಪಿಗಳ ಜತೆ ದರ್ಶನ್‌ ನಿರಂತರವಾಗಿ ಸಂಪರ್ಕದಲ್ಲಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಪ್ರಕರಣದಲ್ಲಿ ಈಗ ಪೊಲೀಸರು ದರ್ಶನ್‌ ಅವರನ್ನು ಬಂಧಿಸಿದ್ದಾರೆ.

VISTARANEWS.COM


on

Actor Darshan
ಹತ ರೇಣುಕಾಸ್ವಾಮಿ ಹಾಗೂ ದರ್ಶನ್.
Koo

ಬೆಂಗಳೂರು: ಸ್ಯಾಂಡಲ್‌ವುಡ್‌ ಖ್ಯಾತ ನಟ, ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ‌ಮೆಡಿಕಲ್‌ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಅವರು ನಟಿ ಪವಿತ್ರಾ ಗೌಡ ಅವರಿಗೆ ಮೆಸೇಜ್‌ ಮಾಡಿದ್ದರು) ಅವರ ಗೆಳತಿ ಪವಿತ್ರಾ ಗೌಡ ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಮಾಡಿದ ಆರೋಪದಲ್ಲಿ ರೇಣುಕಾಸ್ವಾಮಿ (28) ಎಂಬ ಯುವಕನನ್ನು ಹತ್ಯೆಗೈದ ಆರೋಪದಲ್ಲಿ ದರ್ಶನ್‌ (Actor Darshan Arrested) ಅವರನ್ನು ಬಂಧಿಸಲಾಗಿದೆ. ಮೈಸೂರಿನಲ್ಲಿರುವ ನಟನ ಫಾರ್ಮ್‌ಹೌಸ್‌ನಲ್ಲಿ ದರ್ಶನ್‌ ಅವರನ್ನು ಬಂಧಿಸಿರುವ ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸರು ವಿಚಾರಣೆ ನಡೆಸಿದ್ದಾರೆ. ದರ್ಶನ್‌ ಅವರನ್ನು ವಶಪಡಿಸಿಕೊಂಡಿರುವ ಕುರಿತು ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಬಿ. ದಯಾನಂದ್‌ ಅವರು ಮಾಹಿತಿ ನೀಡಿದ್ದಾರೆ.

ಪವಿತ್ರಾ ಗೌಡ ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಮಾಡಿದ ಹಿನ್ನೆಲೆಯಲ್ಲಿ ದರ್ಶನ್‌ ಆಪ್ತರು ಜೂನ್‌ 8ರಂದು ರೇಣುಕಾಸ್ವಾಮಿ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ಸುಮ್ಮನಹಳ್ಳಿಯ ರಾಜಕಾಲುವೆ ಬಳಿ ಅಪರಿಚಿತ ಶವ ಪತ್ತೆಯಾಗಿತ್ತು. ಜೂನ್‌ 9ರ ಭಾನುವಾರ ರಾಜಕಾಲುವೆ ಬಳಿ ಶವ ಪತ್ತೆಯಾಗಿತ್ತು. ಬೀದಿ ನಾಯಿಗಳು ಕಸ ಎಳೆದಾಡುವಾಗ ಶವ ಪತ್ತೆಯಾಗಿತ್ತು. ಇದಾದ ಬಳಿಕ ಅದೇ ದಿನ ರಾಮ್‌ ದೋರ್‌ ಎಂಬ ಸೆಕ್ಯುರಿಟಿ ಗಾರ್ಡ್‌ ಪೊಲೀಸರಿಗೆ ದೂರು ನೀಡಿದ್ದರು. ಇದಾದ ನಂತರ ಪೊಲೀಸರು ತನಿಖೆ ನಡೆಸಿದ್ದರು.

ದರ್ಶನ್‌ ಕೈವಾಡವೇನು?

ಪವಿತ್ರಾ ಗೌಡ ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಕಳುಹಿಸಿದ ಹಿನ್ನೆಲೆಯಲ್ಲಿ ದರ್ಶನ್‌ ಆಪ್ತರು ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಮತ್ತೊಂದಿಷ್ಟು ಮೂಲಗಳ ಪ್ರಕಾರ, ರೇಣುಕಾಸ್ವಾಮಿ ಮೇಲೆ ದರ್ಶನ್‌ ಅವರೇ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ರೇಣುಕಾಸ್ವಾಮಿ ಮರ್ಮಾಂಗಕ್ಕೆ ಒದ್ದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಇದಾದ ಬಳಿಕ ಗಂಭೀರವಾಗಿ ಗಾಯಗೊಂಡಿದ್ದ ರೇಣುಕಾಸ್ವಾಮಿ ಮೃತಪಟ್ಟಿದ್ದರು. ನಂತರ ಶವವನ್ನು ಚರಂಡಿ ಬಳಿ ಎಸೆಯಲಾಗಿತ್ತು ಎನ್ನಲಾಗಿದೆ.

ಪ್ರಕರಣ ಭೇದಿಸಿದ್ದು ಹೇಗೆ?

ಅಪರಿಚಿತ ಶವವನ್ನು ಪೊಲೀಸರು ಮರಣೋತ್ತರ ಪರೀಕ್ಷೆಗೆ ಕಳುಹಿಸಿ, ತನಿಖೆ ಆರಂಭಿಸಿದ್ದರು. ಇದರ ಮಧ್ಯೆಯೇ, ಗಿರಿನಗರದ ಮೂವರು ಆರೋಪಿಗಳು ತಾವೇ ಕೊಲೆ ಮಾಡಿದ್ದಾಗಿ ಪೊಲೀಸರಿಗೆ ಶರಣಾಗಿದ್ದರು. ಹಣಕಾಸು ವಿಚಾರವಾಗಿ ಕೊಲೆ ಮಾಡಿರುವುದಾಗಿ ಅವರು ಒಪ್ಪಿಕೊಂಡಿದ್ದರು. ಅನುಮಾನಗೊಂಡ ಪೊಲೀಸರು ಹೆಚ್ಚಿನ ತನಿಖೆ ನಡೆಸಿದಾಗ, ನಟ ದರ್ಶನ್‌ ಕೈವಾಡ ಇರುವುದು ಬಯಲಾಗಿದೆ ಎಂದು ತಿಳಿದುಬಂದಿದೆ. ಆರೋಪಿಗಳೇ ದರ್ಶನ್‌ ಹೆಸರು ಹೇಳಿದ ಕಾರಣ ನಟನನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ರೇಣುಕಾಸ್ವಾಮಿ ಯಾರು?

ಚಿತ್ರದುರ್ಗ ಮೂಲದವನಾದ ರೇಣುಕಾಸ್ವಾಮಿ ಎಂಬ 28 ವರ್ಷದ ಯುವಕನು ಮೆಡಿಕಲ್‌ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದ. ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಈತನು ಪವಿತ್ರಾ ಗೌಡ ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಕಳುಹಿಸಿದ್ದ ಎನ್ನಲಾಗಿದೆ. ಇದೇ ಕಾರಣಕ್ಕೆ ದರ್ಶನ್‌ ಹಾಗೂ ಅವರ ಆಪ್ತರು ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ದರ್ಶನ್‌ ಸೇರಿ 10 ಮಂದಿಯನ್ನು ಪೊಲೀಸರು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ. ರೇಣುಕಾಸ್ವಾಮಿಗೆ ಕಳೆದ ವರ್ಷವೇ ಸಹನಾ ಎಂಬ ಯುವತಿ ಜತೆ ಮದುವೆಯಾಗಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: Actor Darshan: ಕೊಲೆ ಕೇಸ್‌ನಲ್ಲಿ ಚಾಲೆಂಜಿಂಗ್‌ ಸ್ಟಾರ್ ದರ್ಶನ್‌ ಬಂಧನ; ಏನಿದು ಪ್ರಕರಣ?

Continue Reading
Advertisement
Actor Darshan
ಕರ್ನಾಟಕ5 mins ago

Actor Darshan: ಕೊಲೆ ಕೇಸ್‌ನಲ್ಲಿ ನಟ ದರ್ಶನ್‌ ಅರೆಸ್ಟ್‌; ಪೊಲೀಸರು ಹೇಳಿದ್ದೇನು?

Pavithra Gowda
ಕರ್ನಾಟಕ21 mins ago

Pavithra Gowda: ಕೊಲೆ ಕೇಸ್;‌ ದರ್ಶನ್‌ ಬಂಧನ ಬೆನ್ನಲ್ಲೇ ಗೆಳತಿ ಪವಿತ್ರಾ ಗೌಡ ಕೂಡ ಪೊಲೀಸ್‌ ವಶಕ್ಕೆ!

black magic
ದಕ್ಷಿಣ ಕನ್ನಡ31 mins ago

Black Magic : 25 ಕುರಿ-ಮೇಕೆಗಳ ರುಂಡ ಕತ್ತರಿಸಿ ವ್ಯಕ್ತಿಗಳ ಫೋಟೊ ಇಟ್ಟು ಭಯಾನಕ ವಾಮಾಚಾರ!

Kamran Akmal
ಕ್ರಿಕೆಟ್38 mins ago

Kamran Akmal: ಜನಾಂಗೀಯ ನಿಂದನೆಗೆ ಜಾಡಿಸಿದ ಹರ್ಭಜನ್​ ಸಿಂಗ್​: ಕ್ಷಮೆಯಾಚಿಸಿದ ಕಮ್ರಾನ್ ಅಕ್ಮಲ್

Actor Darshan
ಕರ್ನಾಟಕ43 mins ago

Actor Darshan: ಹತ ರೇಣುಕಾಸ್ವಾಮಿ ಯಾರು? ಕೊಲೆ ಹಿಂದೆ ದರ್ಶನ್‌ ಕೈವಾಡವೇನು? ಇಲ್ಲಿದೆ ಶಾಕಿಂಗ್‌ ಮಾಹಿತಿ

Saptami Gowda
ಸಿನಿಮಾ59 mins ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Actor Darshan
ಸಿನಿಮಾ1 hour ago

Actor Darshan: ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಮಾಡಿದ್ದವನ ಕೊಲೆ ಕೇಸ್‌ನಲ್ಲಿ ದರ್ಶನ್‌ ಬಂಧನ; ಯಾರು ಈ ಪವಿತ್ರಾ?

Actor Darshan
ಪ್ರಮುಖ ಸುದ್ದಿ2 hours ago

Actor Darshan: ಕೊಲೆ ಕೇಸ್‌ನಲ್ಲಿ ಚಾಲೆಂಜಿಂಗ್‌ ಸ್ಟಾರ್ ದರ್ಶನ್‌ ಬಂಧನ; ಏನಿದು ಪ್ರಕರಣ?

All Eyes on Raesi
ದೇಶ2 hours ago

All Eyes on Raesi: ಹಿಂದೂ ಯಾತ್ರಿಕರ ಹತ್ಯೆ: ಆಲ್ ಐಸ್ ಆನ್ ರಿಯಾಸಿ; ರಫಾ ರಫಾ ಅನ್ನುತ್ತಿದ್ದ ಸೆಲೆಬ್ರಿಟಿಗಳು ಈಗೆಲ್ಲಿ?

IND vs PAK
ಕ್ರೀಡೆ2 hours ago

IND vs PAK: ಟ್ರ್ಯಾಕ್ಟರ್ ಮಾರಿ ಭಾರತ-ಪಾಕ್​ ಪಂದ್ಯ ವೀಕ್ಷಿಸಿ ಕಣ್ಣೀರು ಹಾಕಿದ ಅಭಿಮಾನಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Saptami Gowda
ಸಿನಿಮಾ60 mins ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ20 hours ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ4 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ4 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ1 week ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ1 week ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

ಟ್ರೆಂಡಿಂಗ್‌